ಸೆ. 29ರಂದು ಕೃಷಿ ವಿಸ್ತರಣಾ ಸೇವಾ ಪದವಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
ಚಾಮರಾಜನಗರ, ಸೆ. 28 :- ಕೃಷಿ ಇಲಾಖೆ ವತಿಯಿಂದ ಜಿಲ್ಲೆಯ ರೈತರಿಗೆ ನಿಖರವಾದ ಕೃಷಿ ಪರಿಕರಗಳನ್ನು ವಿತರಿಸಿ ಗುಣಮಟ್ಟದ ತಾಂತ್ರಿಕ ಮಾಹಿತಿ ಮತ್ತು ಸೇವೆ ಒದಗಿಸುವ ನಿಟ್ಟಿನಲ್ಲಿ ಕೃಷಿ ವಿಸ್ತರಣಾ ಸೇವಾ ಪದವಿ ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಸೆಪ್ಟೆಂಬರ್ 29ರಂದು ಮಧ್ಯಾಹ್ನ 3 ಗಂಟೆಗೆ ನಗರದ ವರ್ತಕರ ಭವನದಲ್ಲಿ ಅಯೋಜಿಸಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸಂಸದರಾದ ಆರ್. ಧ್ರುವನಾರಾಯಣ ಅವರು ಪದವಿ ಪ್ರಮಾಣ ಪತ್ರ ವಿತರಿಸುವರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್, ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚನ್ನಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಬೆಂಗಳೂರು ಕೃಷಿ ವಿ.ವಿ ದೇಸಿ ಕಾರ್ಯಕ್ರಮದ ರಾಜ್ಯ ನೋಡೆಲ್ ಅಧಿಕಾರಿ ಡಾ. ಜಿ.ಆರ್. ಪೆನ್ನೋಬಳಿಸ್ವಾಮಿ, ವಿಸ್ತರಣಾ ನಿರ್ದೇಶಕರಾದ ಎಂ. ಎಸ್. ನಟರಾಜು, ಮೈಸೂರು ಜೆ.ಎಸ್.ಎಸ್. ಮಹಾವಿದ್ಯಾಪೀಠದ ಜಂಟಿನಿರ್ದೇಶಕರಾದ ಬಿ.ಆರ್. ಉಮಾಕಾಂತ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಚಿಕ್ಕಸ್ವಾಮಿ, ಜಿಲ್ಲಾ ಕೃಷಿ ಮಾರಾಟಗಾರ ಪ್ರತಿನಿಧಿ ಆರ್. ಯೋಗರಾಜು, ಹರದನಹಳ್ಳಿ ಕೆ.ವಿ.ಕೆ ಮುಖ್ಯಸ್ಥರು ಹಾಗೂ ಹಿರಿಯ ವಿಜ್ಞಾನಿ ಡಾ. ಚಂದ್ರಕಲಾ ಹಣಗಿ, ಜೆ.ಎಸ್.ಎಸ್. ರುಡ್‍ಸೆಟ್ ಯೋಜನಾಧಿಕಾರಿ ಬಿ.ಎಂ. ಚಂದ್ರಶೇಖರ್, ಸಂಯೋಜಕರಾದ ಬಿ. ಚಿನ್ನಸ್ವಾಮಿ, ಕಾಮಗೆರೆ ಮೈರಾಡ ಡೇವಿನ್‍ಸನ್ ತರಬೇತಿ ಕೇಂದ್ರದ ಮುಖ್ಯಸ್ಥರಾದ ಎಲ್. ವಿಜಯಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಉತ್ತಮ ಸಾಧನೆಗೈದ ಶಿಬಿರಾರ್ಥಿ, ಕೋರ್ಸ್ ಫೆಸಿಲಿಟೇಟರ್ ಮತ್ತು ನೋಡೆಲ್ ತರಬೇತಿ ಕೇಂದ್ರಗಳ ಮುಖ್ಯಸ್ಥರನ್ನು ಸನ್ಮಾನಿಸಲಾಗುವುದು ಎಂದು ಕೃಷಿ ಇಲಾಖೆ ಜಂಟಿನಿರ್ದೇಶಕರಾದ ಡಾ. ಎಂ. ತಿರುಮಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 29ರಂದು ನಗರದಲ್ಲಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ
ಚಾಮರಾಜನಗರ, ಸೆ. 28 ( ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಪ್ರಗತಿಪರ ಸಾಧನೆಗಳ ನೇತಾರ, ಸಾಮಾಜಿಕ ಪರಿವರ್ತನೆ ಹರಿಕಾರರಾದ ಡಿ. ದೇವರಾಜ ಅರಸು ಅವರ 103ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 29ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯು ಕಲಾತಂಡಗಳೊಂದಿಗೆ ಚಾಮರಾಜೇಶ್ವರ ದೇವಸ್ಥಾನದಿಂದ ಹೊರಡಿಲಿದೆ.
ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸಂಸದರಾದ ಆರ್. ಧ್ರುವನಾರಾಯಣ ಅವರು ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ ಘನ ಉಪಸ್ಥಿತಿ ವಹಿಸÀುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಸಂದೇಶ್ ನಾಗರಾಜು, ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅತಿಥಿಗಳಾಗಿ ಭಾಗವಹಿಸುವರು.
ಮುಖ್ಯ ಭಾಷಣಕಾರರಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕಾನಾಥ್ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಸೆಪ್ಟೆಂಬರ್ 29ರಂದು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
ಚಾಮರಾಜನಗರ, ಸೆ. 28 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕೂಡ್ಲೂರು ಗ್ರಾಮ ಪಂಚಾಯತ್ ಹಾಗೂ ಸಾಧನಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 29ರಂದು ಬೆಳಿಗ್ಗೆ 10.15 ಗಂಟೆಗೆ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ದೊಡ್ಡರಾಯಪೇಟೆ ಸರ್ಕಾರಿ ಪ್ರೌಢಶಾಲೆಯ ಅವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕೂಡ್ಲೂರು ಗ್ರಾಮಪಂಚಾಯಿತಿ ಅಧ್ಯಕ್ಷರಾದ ಶಿವಕುಮಾರ್ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯ ಅರಕ್ಷಕ ಉಪನಿರೀಕ್ಷಕರಾದ ಪುಟ್ಟಸ್ವಾಮಿ, ತಾ.ಪಂ. ಸದಸ್ಯರಾದ ನಾಗಸುಂದ್ರಮ್ಮ, ದೊಡ್ಡರಾಯಪೇಟರ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಲಿಂಗರಾಜು, ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಟಿ.ಜೆ. ಸುರೇಶ್ ವಿಶೇಷ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪೊಲೀಸ್ ದೂರು ಪ್ರಾಧಿಕಾರದ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 28- ನಗರದಲ್ಲಿರುವ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ನಾಗರಿಕ ಸೇವಾ ಸಮಾಜದಿಂದ ಹೊಸದಾಗಿ ಸದಸ್ಯರನ್ನು ನೇಮಕ ಮಾಡುವ ಪ್ರಕ್ರಿಯೆ ಜಾರಿಯಲ್ಲಿದ್ದು, ಸದಸ್ಯತ್ವಕ್ಕಾಗಿ ಅಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿದ್ದು, ಯಾವುದೇ ರಾಜಕೀಯ ಪಕ್ಷ ಅಥವಾ ಸೈದ್ದಾಂತಿಕ ಗುಂಪುಗಳ್ಲಿ ಗುರುತಿಸಿಕೊಂಡಿರಬಾರದು. ಸಮಾಜ ವಿರೋಧಿ ಅಥವಾ ರಾಷ್ಟ್ರೀಯ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬಾರದು. ಯಾವುದೇ ಸಂಜ್ಞೆ ಅಥವಾ ಅಸಂಜ್ಞೆಯ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿರಬಾರದು. ಶಿಕ್ಷಣ, ಆರೋಗ್ಯ ಹಾಗೂ ಹಿಂದುಳಿದ ವರ್ಗಗಳ ಉನ್ನತೀಕರಣ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವವರಾಗಿಬೇಕು. ಅಭ್ಯರ್ಥಿಯ ಸದಸ್ಯತ್ವದ ಅವಧಿ 3 ವರ್ಷಗಳಾಗಿದ್ದು, ಮುಂದಿನ ಅವಧಿಗೆ ಮುಂದುವರೆಸುವವರೆಗೆ ನಿಗದಿಪಡಿಸಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 1 ರಂದು ಪರಿಸರ ಜಾಗೃತಿ ಜಾಥಾ
ಚಾಮರಾಜನಗರ, ಸೆ. 28 - ನಗರದ ಸಕರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ರಾಷ್ಟ್ರೀಯ ಹಸಿರುಪಡೆ ವತಿಯಿಂದ ಪರಿಸರ ಜಾಗೃತಿ ಕುರಿತು ಸರಣಿ ಕಾರ್ಯಕ್ರಮಗಳನ್ನು ನಡೆಸುವ ಸಲುವಾಗಿ ಅಕ್ಟೋಬರ್ 1 ರಂದು ಬೆಳಿಗ್ಗೆ10 ಗಂಟೆಗೆ ಕಾಲೇಜಿನ ಅವರಣದಿಂದ ಪಚ್ಚಪ್ಪ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪರಿಸರ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಕ್ಟೋಬರ್ 4ರಂದು ಮಧ್ಯಾಹ್ನ 2.30 ಗಂಟೆಗೆ ನಡೆಯಲಿರುವ ಪರಿಸರ ಅರಿವು ಬಗ್ಗೆ ಉಪನ್ಯಾಸ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಚಿಂತಕರು ಹಾಗೂ ಕೃಷಿಕರಾದ ಚಿನ್ನಸ್ವಾಮಿ ವಡ್ಡಗೆರೆ ಭಾಗವಹಿಸಲಿದ್ದಾರೆ ಎಂದು ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
x
No comments:
Post a Comment