ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ : ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ಚಾಮರಾಜನಗರ, ಅ. :- ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಭಿವೃದ್ಧಿ ಕಾಮಗಾರಿಗಳ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿ ಹಾಗೂ ಆರಂಭಿಸಬೇಕಿರುವ ಕಾಮಗಾರಿ ಕುರಿತು ವಿವರ ಪಡೆದ ಉಸ್ತುವಾರಿ ಸಚಿವರು ನಗರದ ಬಿ. ರಾಚಯ್ಯ ಜೋಡಿರಸ್ತೆ ಕಾಮಗಾರಿ ವಿಳಂಬ ಮಾಡಬಾರದು. ಶೀಘÀ್ರವಾಗಿ ಕಾಮಗಾರಿ ಮುಗಿಸಬೇಕು. ಯಾವುದೇ ದೂರುಗಳು ಬರದಂತೆ ಕೆಲಸ ನಿರ್ವಹಣೆ ಮಾಡಬೇಕು ಎಂದರು.
ವಿವಿಧ ಭಾಗಗಳಲ್ಲಿ ನಿರ್ಮಾಣ ಹಂತದಲ್ಲಿರುವ ಹಾಸ್ಟಲ್, ಶಾಲಾ ಕೊಠಡಿಗಳು, ಸಮುದಾಯ ಭವನಗಳು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಕಾಮಗಾರಿ ನಿರ್ವಹಿಸಬೇಕು. ಅಧಿಕಾರಿಗಳು ಪರಿಶೀಲಿಸಿ ಕಾಮಗಾರಿ ಸುಸೂತ್ರವಾಗಿ ಸಾಗುತ್ತಿದೆಯೆ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ಸಚಿವರು ತಿಳಿಸಿದರು.
ನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ನೂತನವಾಗಿ ನಿರ್ಮಿಸಬೇಕಿದೆ. ನಿವೇಶನ ಹಸ್ತಾಂತರ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳಬೇಕು. ಇತರೆ ಇಲಾಖೆಗಳು ಅಭಿವೃದ್ಧಿ ಕಾಮಗಾರಿ ಸಂಬಂಧ ನಿವೇಶನಗಳು ಅಗತ್ಯವಿದ್ದರೆ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಿ ಮುಂದಿನ ಕ್ರಮ ವಹಿಸಬೇಕು ಎಂದರು.
ಈಗಾಗಲೇ ಅಭಿವೃದ್ಧಿ ಯೋಜನೆ, ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದಲ್ಲಿ ಸದರಿ ಕಾಮಗಾರಿ ಆರಂಭಿಸಲು ಅವಶ್ಯವಿರುವ ಆಡಳಿತಾತ್ಮಕ ಮಂಜೂರಾತಿ, ಅನುಮೋದನೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಇಲಾಖಾ ಅಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ಬರುವ ಅಭಿವೃದ್ಧಿ ಕೆಲಸಗಳ ಬಗ್ಗೆ ನಿಗಾ ವಹಿಸಬೇಕು. ಪ್ರತಿ ಕಾರ್ಯಕ್ರಮದ ಬಗ್ಗೆಯೂ ಸೂಕ್ತ ಮಾಹಿತಿ ಹೊಂದಿರಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಕೊಳ್ಳೇಗಾಲ ನಗರಸಭೆ, ತೆರಕಣಾಂಬಿ ತಾ.ಪಂ. ಚುನಾವಣೆ ಫಲಿತಾಂಶ ಪ್ರಕಟ
ಚಾಮರಾಜನಗರ, ಅ. 31 - ಕೊಳ್ಳೇಗಾಲ ನಗರಸಭೆಯ 9ನೇ ವಾರ್ಡಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಎಲ್. ನಾಗೇಂದ್ರ (ನಾಗಣ್ಣ) ಅವರು ಗೆಲುವು ಸಾಧಿಸಿದ್ದಾರೆ.
ಅಭ್ಯರ್ಥಿಗಳು ಪಡೆದ ಮತಗಳ ವಿವರ ಇಂತಿದೆ: ಎಲ್.ನಾಗೇಂದ್ರ (ನಾಗಣ್ಣ) ವಿಜೇತ ಅಭ್ಯರ್ಥಿ, ಭಾರತೀಯ ಜನತಾ ಪಾರ್ಟಿ 577, ಎಂ.ಮಹಾದೇವ (ಮಾದಪ್ಪ) ಇಂಡಿಯನ್ ನ್ಯಾಷನಲ್ ಕಾಂಗ್ರೇಸ್ 506, ಎಂ.ಗಿರೀಶ್, ಪಕ್ಷೇತರ 5, ನೋಟಾ-5,
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ತಾ.ಪಂ. ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಆರ್.ಮಹೇಶ ಅವರು ಜಯಶೀಲರಾಗಿದ್ದಾರೆ.
ಅಭ್ಯರ್ಥಿಗಳು ಪಡೆದ ಮತಗಳ ವಿವರ ಇಂತಿದೆ: ಆರ್. ಮಹೇಶ, ವಿಜೇತ ಅಭ್ಯರ್ಥಿ, ಭಾರತೀಯ ಜನತಾ ಪಾರ್ಟಿ 3020, ನಾರಾಯಣನಾಯ್ಕ, ಇಂಡಿಯನ್ ನ್ಯಾಷನಲ್ ಕಾಂಗ್ರೇಸ್ 2714.
ಇ-ಸ್ವತ್ತು ಅಭಿಯಾನ ಸದುಪಯೋಗಕ್ಕೆ ಜಿಲ್ಲಾ ನ್ಯಾಯಾಧೀಶರ ಸಲಹೆ
ಚಾಮರಾಜನಗರ, ಅ. 31- ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಆರಂಭಿಸಲಾಗುತ್ತಿರುವ ಇ-ಸ್ವತ್ತು ಖಾತಾ ಅಭಿಯಾನವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಸಲಹೆ ಮಾಡಿದರು.
ತಾಲೂಕಿನ ಹಂಚಿತಾಳಪುರದಲ್ಲಿ ಇಂದು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಆರಂಭಿಸಲಾಗಿರುವ ಇ-ಸ್ವತ್ತು ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನಿಗೆ ಹೆಸರು ಹೇಗೆ ಮುಖ್ಯವೋ ಹಾಗೆ ಅವರ ಸ್ವತ್ತುಗಳಿಗೆ ಸೂಕ್ತ ದಾಖಲೆಗಳು ಇರಬೇಕಾಗುತ್ತದೆ. ಗ್ರಾಮೀಣ ಭಾಗಗಳಲ್ಲಿ ಸ್ವತ್ತುಗಳಿಗೆ ಸರಿಯಾದ ದಾಖಲೆಗಳಿಲ್ಲದೆ ಜನರಲ್ಲಿ ವೈಷಮ್ಯಕ್ಕೂ ಕಾರಣವಾಗುತ್ತಿತ್ತು. ಗ್ರಾಮೀಣ ಜನರು ಸಹ ಸಮರ್ಪಕ ದಾಖಲೆಗಳನ್ನು ಪಡೆಯಲು ತೀವ್ರ ಅನಾನುಕೂಲವಾಗುತ್ತಿತ್ತು. ಈ ಎಲ್ಲ ಹಿನ್ನಲೆಯಲ್ಲಿ ಜನರ ಬಳಿಗೆ ಹೋಗಿ ಇ-ಸ್ವತ್ತು ಸಂಬಂಧ ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡುವ ಅಭಿಯಾನವನ್ನು ಪಂಚಾಯತ್ ವತಿಯಿಂದ ಆರಂಭಿಸಲಾಗಿದೆ ಎಂದರು.
ಇ-ಸ್ವತ್ತು ಖಾತಾ ಮಾಡಿಸುವುದರಿಂದ ಸರ್ಕಾರದ ಇತರೆ ಯೋಜನೆಗಳನ್ನು ಪಡೆಯಲು ಸಹ ಅನುಕೂಲವಾಗುತ್ತದೆ. ದಾಖಲೆಗಳಿದ್ದರೆ ಸಾಲ ಸೌಲಭ್ಯ ಪಡೆಯಲು ಸಹ ನೆರವಾಗಲಿದೆ. ಹೀಗಾಗಿ ಮಹತ್ವದ ಅಭಿಯಾನವನ್ನು ಜನರು ಪೂರ್ಣ ಪ್ರಮಾಣದಲ್ಲಿ ಪ್ರಯೋಜನ ಪಡೆಯಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಸಿ.ಜೆ. ವಿಶಾಲಾಕ್ಷಿ ಅವರು ಮಾತನಾಡಿ ಇ-ಸ್ವತ್ತು ಅಭಿಯಾನವು ಎಲ್ಲರಿಗೂ ಅನುಕೂಲವಾಗಲಿದೆ. ಆಸ್ತಿ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡುವುದರಿಂದ ಯಾರನ್ನು ಮೋಸಗೊಳಿಸಲು ಸಾಧ್ಯವಾಗುವುದಿಲ್ಲ. ಕಂದಾಯ ಸಂಗ್ರಹಣೆಗೂ ನಿಖರ ಮಾಹಿತಿ ಲಭ್ಯವಾಗಲಿದೆ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್. ಬಾಲರಾಜು ಮಾತನಾಡಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ದಾಖಲೆಗಳು ಸಹ ಅವಶ್ಯವಾಗಿರುತ್ತದೆ. ನಿವೇಶನ, ಮನೆ ಇತರೆ ಉದ್ದೇಶಗಳಿಗೆ ಇ-ಸ್ವತ್ತು ಸೌಲಭ್ಯವನ್ನು ಪಡೆದುಕೊಳ್ಳಲು ಅಭಿಯಾನವು ಅವಕಾಶ ಮಾಡಿಕೊಟ್ಟಿದೆ. ಗ್ರಾಮೀಣ ಭಾಗದ ಜನರು ಈ ಅಭಿಯಾನದ ನೆರವು ಪಡೆಯಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಮಾತನಾಡಿ ಗ್ರಾಮೀಣ ಭಾಗದಲ್ಲಿ ಖಾತಾ ಇನ್ನಿತರ ಅರ್ಜಿಗಳನ್ನು ವಿಲೇವಾರಿ ಮಾಡಲು ಅಲೆದಾಡಿಸಲಾಗುತ್ತಿದೆ ಎಂಬ ವ್ಯಾಪಕ ದೂರುಗಳು ವ್ಯಕ್ತವಾಗಿದ್ದವು. ಜಿಲ್ಲಾ ನ್ಯಾಯಾಧೀಶರು ಸಹ ಇಂತಹ ಅರ್ಜಿಗಳಿಗೆ ಶೀಘ್ರ ಪರಿಹಾರ ಸಿಗಲು ಅಗತ್ಯ ವ್ಯವಸ್ಥೆ ಮಾಡಬೇಕೆಂದು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಇ-ಸ್ವತ್ತು ಅಭಿಯಾನವನ್ನು ನವೆಂಬರ್ ತಿಂಗಳ ಪೂರ್ತಿ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.
ಜನರ ಬಳಿಗೆ ಹೋಗಿ ಅರ್ಜಿಗಳನ್ನು ಪಡೆಯಲಿದ್ದೇವೆ. ಸ್ವೀಕರಿಸಿದ ಅರ್ಜಿಗಳನ್ನು ತ್ವರಿತವಾಗಿ ನಿಯಮಾನುಸಾರ ವಿಲೇವಾರಿ ಮಾಡಲಿದ್ದೆವೆ. ಮಾಡಲು ಸಾಧ್ಯವಾಗದೇ ಇದ್ದಲ್ಲಿ ಸೂಕ್ತ ಹಿಂಬರಹ ನೀಡಲಾಗುತ್ತದೆ. ಆಯಾ ತಿಂಗಳಿನಲ್ಲೇ ಸ್ವೀಕರಿಸಿದ ಅರ್ಜಿಗಳಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹರೀಶ್‍ಕುಮಾರ್ ಅವರು ತಿಳಿಸಿದರು.
ತಾಲೂಕು ಪಂಚಾಯತ್ ಕಾರ್ಯನಿವಾಹಕ ಅಧಿಕಾರಿ ಎಂ.ಎಸ್. ರಮೇಶ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಿದ್ದಪ್ಪಾಜಿ, ಉಪಾಧ್ಯಕ್ಷರಾದ ನಾಗನಾಯ್ಕ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನ. 5ರಂದು ನಗರದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ, ಧನ್ವಂತರಿ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ಅ. 31 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆಎಸ್‍ಎಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಜಿಲ್ಲಾ ಪಂಚಾಯತ್‍ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ. ಮರುಗದಮಣಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರದ ಜೆಎಸ್‍ಎಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜಿ. ವಿನಯ್‍ಕುಮಾರ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 1ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವ
ಚಾಮರಾಜನಗರ, ಅ. 31 - ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನÀದ ಮುಂಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5 ರಿಂದ 6.30 ಗಂಟೆಯವರೆಗೆ ನಗರದ ಎಸ್.ಜಿ. ಮಹಾಲಿಂಗಸ್ವಾಮಿ ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ. 6.30 ರಿಂದ 7.30 ಗಂಟೆಯವರೆಗೆ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 7.30 ರಿಂದ 8.30 ಗಂಟೆಯವರೆಗೆ ಕೊಳ್ಳೇಗಾಲದ ರಂಗಲಕ್ಷ್ಮಣಂ ಫೌಂಡೇಶನ್‍ನ ವಿದುಷಿ ಚಿತ್ರ ಬಿಳಿಗಿರಿ ಮತ್ತು ತಂಡದವರಿಂದ ನೃತ್ಯ ರೂಪಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಗರದಲ್ಲಿಂದು ಅರ್ಥಪೂರ್ಣವಾಗಿ ನಡೆದ ಏಕತಾ ದಿವಸ ಆಚರಣೆ
ಚಾಮರಾಜನಗರ, ಅ. 31- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಪುಷ್ಪಾರ್ಚನೆ ಮಾಡಿದರು.
ಇದೇ ವೇಳೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ. ನನ್ನ ದೇಶ ಬಾಂಧವರಲ್ಲಿ ಈ ಸಂದೇಶ ಸಾರಲು ಶ್ರಮಿಸುತ್ತೇನೆ ಎಂದು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ ಎಂಬ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಸರ್ದಾರ್ ವಲ್ಲಭಬಾಯ್ ಪಟೇಲರ ದೂರದೃಷ್ಠಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ರಾಷ್ಟ್ರದ ಅಂತರಿಕ ಭದ್ರತೆಯನ್ನು ಖಾತರಿ ಪಡಿಸಲು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಒಮ್ಮನಸ್ಸಿನಿಂದ ಪ್ರತಿಜ್ಞೆ ಮಾಡುತ್ತಿದ್ದೇನೆ ಎಂಬ ಅಂಶಗಳನ್ನು ಪ್ರತಿಜ್ಞಾ ವಿಧಿಯಲ್ಲಿ ಭೋದಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು ದೇಶವನ್ನು ಒಗ್ಗೂಡಿಸಲು ಹಾಗೂ ಐಕ್ಯತೆ, ಏಕೀಕರಣಕ್ಕೆ ವಲ್ಲಭಬಾಯ್ ಪಟೇಲ್ ಅವರು ಅಪಾರವಾಗಿ ಶ್ರಮಿಸಿದ್ದಾರೆ. ಇಂತಹ ಮಹಾನ್ ನಾಯಕರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿವಸವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ,ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ನವೆಂಬರ್ 3 ರಂದು ಆಲಂಬಾಡಿಯಲ್ಲಿ ಜಿ.ಪಂ. ಸಿ.ಇ.ಒ. ಗ್ರಾಮವಾಸ್ತವ್ಯ
ಚಾಮರಾಜನಗರ, ಅ. 31:- ಜನರ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಕೆ. ಹರೀಶ್‍ಕುಮಾರ್ ಅವರು ನವೆಂಬರ್ 3ರಂದು ಕೊಳ್ಳೇಗಾಲ ತಾಲೂಕಿನ ಆಲಂಬಾಡಿ ಬುಡಕಟ್ಟು ಕಾಲೋನಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವರೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 31ರಂದು ನಗರದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಮತ್ತು ಸಂಕಲ್ಪ ದಿವಸ್ ಕಾರ್ಯಕ್ರಮ
ಚಾಮರಾಜನಗರ, ಅ. 30 ನೆಹರು ಯುವ ಕೇಂದ್ರ, ಎಂಸಿಎಸ್ ಪಬ್ಲಿಕ್ ಶಾಲೆ ಹಾಗೂ ಸಾಧನಾ ಸಂಸ್ಥೆ ಇವರ ಸಹಯೋಗದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ್ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯತಿಥಿ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿವಸ್ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಂ.ಸಿ.ಎಸ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಉದ್ಘಾಟನೆ ನೆರವೇರಿಸುವರು. ಎಂಸಿಎಸ್ ಪಬ್ಲಿಕ್ ಶಾಲೆ ಪ್ರಾಂಶುಪಾಲರಾದ ಆರ್.ಎಂ. ಮಂಜುನಾಥ್ ಅಧ್ಯಕ್ಷತೆ ವಹಿಸುವರು.
ವಕೀ¯ರಾದ ಡಿ.ಎಂ. ಶ್ರೀಕಂಠಮೂರ್ತಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್‍ಕುಮಾರ್, ಸಾಧನಾ ಸಂಸ್ಥೆ ನಿರ್ದೇಶಕರಾದ ಟಿ. ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಉಪನ್ಯಾಸಕರು ಹಾಗೂ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತರಾದ ಸುರೇಶ್ ಋಗ್ವೇದಿ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಅ. 30 ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನವೆಂಬರ್ 2 ರಿಂದ 20ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ನವೆಂಬರ್ 2ರಂದು ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, 9ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ, 13ರಂದು ಯಳಂದೂರು, 16ರಂದು ಕೊಳ್ಳೇಗಾಲ ಹಾಗೂ 20ರಂದು ಹನೂರಿನ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು, ನಾಗರಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳದ ಉಪ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಅ. 31ರಂದು ರಾಷ್ಟ್ರೀಯ ಏಕತಾ ದಿವಸ್: ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ
ಚಾಮರಾಜನಗರ, ಅ. 30 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಪ್ರತಿಜ್ಞಾ ವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆÉ.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿ, ಸಿಬ್ಬಂದಿ, ಸಂಘಸಂಸ್ಥೆಗಳು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೆಳಿಗ್ಗೆ 10.30 ಗಂಟೆಗೆ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-224932 ಅಥವಾ ಮೊ. 9611172984 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 31ರಂದು ಹಂಚಿತಾಳಪುರದಲ್ಲಿ ಇ-ಸ್ವತ್ತು ಖಾತಾ ಅಭಿಯಾನ
ಚಾಮರಾಜನಗರ, ಅ. 30 ತಾಲೂಕಿನ ಚಂದಕವಾಡಿ ಗ್ರಾಮ ಪಂಚಾಯಿತಿಯ ಹಂಚಿತಾಳಪುರ ಗ್ರಾಮದಲ್ಲಿ ಇ-ಸ್ವತ್ತು ಖಾತಾ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 9 ಗಂಟೆಗೆ ಏರ್ಪಡಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 3ರಂದು ಚಾ.ನಗರ ತಾಲೂಕು ಪ.ಜಾ, ಪ.ವರ್ಗದ ಹಿತರಕ್ಷಣಾ ಸಮಿತಿ ಸಭೆ
ಚಾಮರಾಜನಗರ, ಅ. 30 - ಚಾಮರಾಜನಗರ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿ ಸಭೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 3ರಂದು ಬೆಳಿಗ್ಗೆ 11.30 ಗಂಟೆಗೆ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಇದೆ.
ಸಭೆಯಲ್ಲಿ ಎಲ್ಲ ತಾಲೂಕುಮಟ್ಟದ ಅಧಿಕಾರಿಗಳು, ಸಮಿತಿ ಸದಸ್ಯರು ಹಾಜರಾಗುವಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ಪಾದನಾ ಕ್ಷೇತ್ರಗಳ ಉದ್ದಿಮೆದಾರರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಅ. 3- ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಸೂಕ್ಷ್ಮ, ಸಣ್ಣ, ಮಧ್ಯಮ, ಹಾಗೂ ಬೃಹತ್ ಕೈಗಾರಿಕೆಗಳು ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿನ ಅರಂಭಿಕ ಉದ್ದಿಮೆಗಳನ್ನು ಗುರುತಿಸಿ ಉತ್ತೇಜಿಸುವ ಸಲುವಾಗಿ ಸರ್. ಎಂ. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಸರ್ಕಾರವು ನಿರ್ಧರಿಸಿದ್ದು, ಉದಯೋನ್ಮುಖ ಉತ್ಪಾದನಾ ಕ್ಷೇತ್ರಗಳ ಅರ್ಹ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಮತ್ತು ತೋಟಗಾರಿಕೆ ಮತ್ತು ಕಾಫಿ, ಗೋಡಂಬಿ, ಮತ್ತು ಸಾಂಬಾರ ಪದಾರ್ಥಗಳನ್ನೊಳಗೊಂಡ ಆಹಾರ ಸಂಸ್ಕರಣೆ ಘಟಕ, ವಿದ್ಯುಚ್ಛಕ್ತಿ ಸಲಕರಣೆಗಳು, ಇಂಜಿನಿಯರಿಂಗ್ (ಮಶೀನ್ ಟೂಲ್ಸ್), ಆಟೋಮೊಬೈಲ್ ಕಾಂಪೊನೆಂಟ್ಸ್, ಏರೋಸ್ಪೇಸ್, ರಕ್ಷಣಾ ಘಟಕಗಳು, ಕರಕುಶಲ ವಸ್ತುಗಳು, ಕೈಮಗ್ಗ ಪದಾರ್ಥಗಳು, ಖನಿಜಗಳು, ಜವಳಿ ಹಾಗೂ ಸಿದ್ದ ಉಡುಪುಗಳು, ರತ್ನಾಭರಣಗಳು, ಔಷಧ, ಸಾಗರೋತ್ಪನ್ನಗಳು, ಚರ್ಮ, ಉಕ್ಕು ಹಾಗೂ ಮರದ ಉತ್ಪನ್ನಗಳು, ಯಂತ್ರೋಪಕರಣ, ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಉದ್ದಿಮೆದಾರರು ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 9 ಕಡೆಯ ದಿನ. ಅರ್ಜಿ ನಮೂನೆಯನ್ನು ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯ ಕೊಠಡಿ ಸಂಖ್ಯೆ 323ರಲ್ಲಿ ಪಡೆಯಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08226-224915, 224916ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
No comments:
Post a Comment