ಮಕ್ಕಳ ಕಲಿಕಾ ಸಾಮಥ್ರ್ಯಕ್ಕೆ ಅನುಗುಣವಾಗಿ ಗುಣಾತ್ಮಕ ಶಿಕ್ಷಣ ನೀಡಲು ಸಿ.ಇ.ಒ ಸಲಹೆ
ಚಾಮರಾಜನಗರ, ಜ. 03 :- ಮಕ್ಕಳ ಕಲಿಕಾ ಸಾಮಥ್ರ್ಯಕ್ಕೆ ಅನುಗುಣವಾಗಿ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಸುಸ್ಥಿರ ಫಲಿತಾಂಶ ಹೊರಹೊಮ್ಮಲು ಶಿಕ್ಷಕರು ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಸಲಹೆ ಮಾಡಿದರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಫ್ರೌಢಶಾಲೆಯ ಸಮಾಜವಿಜ್ಞಾನ ವಿಷಯದ ಸಹ ಶಿಕ್ಷಕರಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರವನ್ನು ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕ ವೃತ್ತಿ ಇತರೆ ವೃತ್ತಿಗಳಿಗಿಂತ ಪವಿತ್ರವಾದದ್ದು. ಮಕ್ಕಳ ಜ್ಞಾನಾರ್ಜನೆಗೆ ಸೂಕ್ತ ಕಲಿಕಾ ಅವಕಾಶಗಳನ್ನು ನೀಡಿ ಅವರ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರು ವಹಿಸುವ ಪಾತ್ರ ಪ್ರಮುಖವಾಗಿದೆ. ಶಿಕ್ಷಕರ ನಡೆ. ನುಡಿ, ಶಿಸ್ತು ಹಾಗೂ ಬದ್ಧತೆ ಮಕ್ಕಳನ್ನು ಸಕ್ರಿಯವಾಗಿ ತಲುಪಬೇಕು. ಆ ಮೂಲಕ ಮಕ್ಕಳಲ್ಲಿ ಗುಣಮಟ್ಟದ ಕಲಿಕಾ ಪ್ರವೃತ್ತಿಗೆ ಪರಿಣಾಮಕಾರಿ ಒತ್ತು ನೀಡಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆ ಕೆಲವೇ ತಿಂಗಳುಗಳ ಹತ್ತಿರವಿದೆ. ಇದನ್ನು ಗಮನದಲ್ಲಿಟುಕೊಂಡು ಶಿಕ್ಷಕರು ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ ವೃದ್ದಿಸಲು ಕಾಯೋನ್ಮುಖರಾಗಬೇಕು ಎಂದರು.
ಪ್ರತಿವರ್ಷದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಸಮಾಜವಿಜ್ಞಾನ ವಿಷಯದಲ್ಲಿ ಎರುಪೇರು ಕಂಡುಬರುತ್ತಿದೆ. ಸಮಾಜ ವಿಜ್ಞಾನ ವಿಷಯ ಮಕ್ಕಳ ದೈನಂದಿನ ಘಟನೆಗೆ ಸಂಬಂದಿಸಿದೆ. ವಿಷಯದ ಕಲಿಕಾ ಸಾಮಥ್ರ್ಯಕ್ಕೆ ಅನುಸಾರವಾಗಿ ಮಕ್ಕಳನ್ನು ವಿಂಗಡಿಸಿ ನಿಧಾನಗತಿಯ ಕಲಿಕಾರ್ಥಿಗಳಿಗೆ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು. ಅ ಮೂಲಕ ಎಸ್.ಎಸ್.ಎಲ್.ಸಿ ಸುಸ್ಥಿರ ಫಲಿತಾಂಶಕ್ಕೆ ಎಲ್ಲಾ ಶಿಕ್ಷಕರು ಶ್ರಮಿಸಬೇಕು ಎಂದು ತಿಳಿಸಿದರು.
ಮಕ್ಕಳು ಗುರುಗಳನ್ನು ಮಾದರಿ ವ್ಯಕ್ತಿಯನ್ನಾಗಿ ಕಾಣುವುದರಿಂದ ಶಿಕ್ಷಕರು ಹೊಂದಿರುವ ಜ್ಞಾನ, ಮಕ್ಕಳ ಮೇಲೆ ತೋರುವ ಪ್ರೀತಿ, ವಿಷಯ ಸಂಪತ್ತು ಮಕ್ಕಳನ್ನು ಪ್ರಭಾವಿಸುವಂತಿರಬೇಕು. ಸಮಾಜವಿಜ್ಞಾನವಷ್ಟೆ ಅಲ್ಲ. ಇತರೆ ವಿಷಯಗಳನ್ನು ಮಕ್ಕಳಿಗೆ ಅಪ್ಯಾಯಮಾನ ರೀತಿಯಲ್ಲಿ ಕಲಿಸಿದಾಗ ಮಾತ್ರ ಗುಣಮಟ್ಟದ ಕಲಿಕೆ ಸಾಧ್ಯವಾಗುತ್ತದೆ ಎಂದು ಹರೀಶ್‍ಕುಮಾರ್ ಅವರು ಶಿಕ್ಷಕರಿಗೆ ತಿಳಿಸಿದರು.
ಕಾರ್ಯಾಗಾರದಲ್ಲಿ ನಂಜನಗೂಡಿನ ಹದಿನಾರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಬಸವರಾಜು ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಫ್ರೌಢಶಾಲೆಯ ಸಮಾಜವಿಜ್ಞಾನ ಶಿಕ್ಷಕರು ಕಾರ್ಯಾಗಾರದಲ್ಲಿ ಹಾಜರಿದ್ದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಹನುಮನರಸಯ್ಯ ಅಧಿಕಾರ ಸ್ವೀಕಾರ
ಚಾಮರಾಜನಗರ, ಜ. 03 - ಚಾಮರಾಜನಗರ ಜಿಲ್ಲಾ ಪಂಚಾಯಿತಿಯ ನೂತನ ಉಪಕಾರ್ಯದರ್ಶಿಯಾಗಿ ಎ. ಹನುಮನರಸಯ್ಯ ಅವರು ಇಂದು ಅಧಿಕಾರ ಸ್ವೀಕರಿಸಿದರು.ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ಯೋಜನಾ ನಿರ್ದೇಶಕರಾಗಿಯು ಕಾರ್ಯ ನಿರ್ವಹಿಸಿದ ಅನುಭವ ಇವರಿಗಿದೆ. ಶಿವಮೊಗ್ಗ, ತುಮಕೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿಯೂ ಸೇವೆ ಸಲ್ಲಿಸಿದ್ದ ಎ. ಹನುಮನರಸಯ್ಯ ಅವರು ಪ್ರಸ್ತುತ ಚಾಮರಾಜನಗರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಅಧಿಕಾರಿ ಸ್ವೀಕರಿಸಿದ್ದಾರೆ
ರೈತರ ಸಾಲ ಮನ್ನಾ: ನಾಡಕಚೇರಿಗಳಲ್ಲೂ ನೊಂದಾಯಿಸಿಕೊಳ್ಳಲು ಅವಕಾಶ
ಚಾಮರಾಜನಗರ, ಜ. 03:- ರಾಜ್ಯ ಸರ್ಕಾರ ವಾಣಿಜ್ಯ ಬ್ಯಾಂಕುಗಳಲ್ಲಿ ಬೆಳೆ ಸಾಲ ಮಾಡಿರುವ ರೈತರಿಗೆ ಸಾಲ ಮನ್ನಾ ಮಾಡುವ ಸಲುವಾಗಿ ತಂತ್ರಾಂಶವನ್ನು ಜಾರಿಗೆ ತಂದಿದ್ದು, ಬ್ಯಾಂಕುಗಳಲ್ಲಿ ಸಾಲಪಡೆದ ಎಲ್ಲ ರೈತರು ಅಗತ್ಯ ದಾಖಲಾತಿಗಳೊಂದಿಗೆ ಜನವರಿ 10ರೊಳಗೆ ಸಂಬಂಧಪಟ್ಟ ಬ್ಯಾಂಕಿಗೆ ಹಾಜರಾಗಿ ಸ್ವಯಂ ಘೋಷಣಾ ಪತ್ರಕ್ಕೆ ಸಹಿ ಮಾಡುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಬ್ಯಾಂಕುಗಳಲ್ಲಿ ಸಾಲ ಪಡೆದ ರೈತರು ಆಧಾರ್, ರೇಷನ್ ಕಾರ್ಡ್, ಪಹಣಿ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಬ್ಯಾಂಕಿಗೆ ಖುದ್ದು ಹಾಜರಾಗಿ ಸ್ವಯಂ ಘೋಷಣಾ ಪತ್ರಕ್ಕೆ ಸಹಿ ಮಾಡಬೇಕು. ಸದರಿ ದಾಖಲೆಗಳನ್ನು ಹತ್ತಿರದ ನಾಡ ಕಚೇರಿಯಲ್ಲೂ ಕೂಡ ಸಲ್ಲಿಸಿ ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಸದಾವಕಾಶವನ್ನು ರೈತಬಾಂಧವರು ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಮನ್ವಯ, ವಿಶೇಷ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 03 :- ಸಮನ್ವಯ ಶಿಕ್ಷಣ ಸಂಪನ್ಮೂಲ ಅಭಿವೃದ್ಧಿಗಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಸಮನ್ವಯ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುದ್ದಿ ಮಾಂಧ್ಯತ್ವ(ಎಂ.ಆರ್), ದೃಷ್ಠಿ ದೋಷ(ವಿ,ಐ), ಶ್ರವಣದೋಷ(ಎಚ್.ಐ) ಮತ್ತು ಸರ್ಕಾರಿ ಪ್ರೌಢಶಾಲಾ ವಿಭಾಗದಲ್ಲಿ ಬುದ್ದಿ ಮಾಂಧ್ಯತ್ವ(ಎಂ.ಆರ್), ದೃಷ್ಠಿ ದೋಷ(ವಿ,ಐ), ದೈಹಿಕ ನ್ಯೂನತೆ(ಎಲ್.ಡಿ) ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಆರ್.ಸಿ.ಐ ಸೂಕ್ತ ವಿದ್ಯಾರ್ಹತೆ ಇರಬೇಕು. ಪ್ರಾಥಮಿಕ ಶಾಲಾ ವಿಭಾಗಕ್ಕೆ ವಿಶೇಷ ಶಿಕ್ಷಣದಲ್ಲಿ ಡಿ.ಇಡಿ ಮತ್ತು ಪ್ರೌಢಶಾಲಾ ವಿಭಾಗಕ್ಕೆ ವಿಶೇಷ ಶಿಕ್ಷಣದಲ್ಲಿ ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಅಭಿಯಾನ ಇಲ್ಲಿಗೆ ಜನವರಿ 10ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜನವರಿ 4ರಂದು ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ
ಚಾಮರಾಜನಗರ, ಜ. 03 - ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ಜನವರಿ 4 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನವರಿ 4ರಂದು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ, ಜ. 03 :- ಪೊಲೀಸ್ ಇಲಾಖೆವತಿಯಿಂದ ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಜನವರಿ 4, 5 ಮತ್ತು 6ರಂದು ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜನವರಿ 4ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಮಾರಂಭವನ್ನು ಉದ್ಘಾಟಿಸುವರು. ಕೊಳ್ಳೇಗಾಲ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಡುಕೊಂಡಲು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕ್ರೀಡಾಕೂಟದ ಸಮಾರೋಪ ಸಮಾರಂಭವು ಜನವರಿ 6ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಕೆ.ವಿ. ಶರತ್‍ಚಂದ್ರ ಸಮಾರೋಪ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment