Wednesday, 30 November 2022

30-11-2022 ಚಾಮರಾಜನಗರ ಸುದ್ದಿ...ಐವರು ಅಮಾನತು

ಪೋಲೀಸ್ ವಶದಲ್ಲಿನ ವ್ಯಕ್ತಿ ಸಾವು: ಐವರು ಅಮಾನತು

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಯತ್ನಿಸಿ ಯುವಕ ಪ್ರಾಣವನ್ನೇ ಕಳೆದುಕೊಂಡ ಪ್ರಕರಣಕ್ಕೆ ಸಂಬಂದಿಸಿದಂತೆ ಇಲಾಖಾ ಐವರು ಸಿಬ್ಬಂದಿಗಳನ್ನ ಅಮಾನತು ಮಾಡಿದ್ದಾರೆ.

ಯಳಂದೂರು ಠಾಣೆಯ ವೃತ್ತ ಆರಕ್ಷಕ ಶಿವಮಾದಯ್ಯ.ಮಾಂಬಳ್ಳಿ ಸಬ್ ಇನ್ಸ್ ಪೆಕ್ಟರ್ ಮಾದೇಗೌಡ,ಎಎಸ್ಐ ಚಲುವರಾಜು ಮಹಿಳಾ ಮುಖ್ಯ  ಪೇದೆ ಭದ್ರಮ್ಮ, ಪೇದೆ ಸೋಮಣ್ಣ ಅಮಾನತ್ತಾದ ಸಿಬ್ಬಂದಿಗಳಾಗಿದ್ದಾರೆ.

ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದ 23 ರಂದು ಪ್ರಕರಣ ದಾಖಲಾಗಿತ್ತು..೨೯ ರಂದು  ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ಲಿಂಗರಾಜು ಎಂಬಾತ ಕರೆತರುವಾಗ ಯರಿಯೂರು ಸಮೀಪ  ಜೀಪಿನಿಂದ ಹಾರಲು ಯತ್ನಿಸಿ  ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಎನ್ನಲಾಗಿದೆ‌.ಈ ಸಂಬಂದ ಯಳಂದೂರು ಠಾಣೆ ಮುಂಭಾಗ ಮೃತರ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಮೃತನ ಕಡೆಯವರು ನೀಡಿದ ದೂರಿನ ಮೇರೆಗೆ ಹಿರಿಯ ಅದಿಕಾರಿಗಳ ಸೂಚನೆ ಮೇರೆಗೆ ಯಳಂದೂರು ಠಾಣೆಯ ವೃತ್ತ ಆಕರ್ಷಕ ಶಿವಮಾದಯ್ಯ ,ಮಾಂಬಳ್ಳಿ ಸಬ್ ಇನ್ಸ್ ಪೆಕ್ಟರ್, ಸೋಮಣ್ಣ ಎಂಬುವವರ ಮೇಲೆ ಎಪ್ ಐ ಆರ್ ದಾಖಲಿಸಲಾಗಿದೆ.  ಈಗಾಗಲೇ ಪೊಲೀಸ್ ವಶದಲ್ಲಿದ್ದ ಆರೋಪಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ಐವರು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ ಎಂದು ದಕ್ಷಿಣ ವಲಯ ಪೊಲೀಸ್ ಮಹಾನಿರ್ದೆಶಕ ಮಧುಕರ್ ಪವಾರ್ ತಿಳಿಸಿದ್ದಾರೆ.

30-11-2022 ಚಾಮರಾಜನಗರ ಸುದ್ದಿ

 ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಆತ್ಮೀಯ ಬೀಳ್ಕೊಡುಗೆ, ನೂತನ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಗೆ ಸ್ವಾಗತ ಸಮಾರಂಭ 

      ಚಾಮರಾಜನಗರ, ನವೆಂಬರ್ 30  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ಹಾಗೂ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಎಸ್. ರಮೇಶ್ ಅವರಿಗೆ ಸ್ವಾಗತ ಸಮಾರಂಭ ಇಂದು ನಡೆಯಿತು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಸಹಾಯಕ ರೆಸಿಡೆಂಟ್ ಕಮಿಷನರ್ ಆಗಿ ವರ್ಗಾವಣೆಯಾಗಿರುವ ಚಾರುಲತಾ ಸೋಮಲ್ ಹಾಗೂ ನೂತನ ಜಿಲ್ಲಾಧಿಕಾರಿಯಾಗಿರುವ ಡಿ.ಎಸ್. ರಮೇಶ್ ಅವರನ್ನು ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ, ರೈತ ಸಂಘದ ಮುಖಂಡರು, ಕಲಾವಿದರು, ಸೇರಿದಂತೆ ಹಲವಾರು ಸಂಘಟನೆಗಳ ಪ್ರತಿನಿಧಿಗಳು ಗೌರವಿಸಿದರು. 

ಎಲ್ಲರ ಸನ್ಮಾನ ಗೌರವ ಸ್ವೀಕರಿಸಿ ಮಾತನಾಡಿದ ಚಾರುಲತಾ ಸೋಮಲ್ ಅವರು ಚಾಮರಾಜನಗರ ಜಿಲ್ಲೆಯಲ್ಲಿ 11 ತಿಂಗಳ ಅವಧಿಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ನನಗೆ ದೊರೆತ ಅದೃಷ್ಟ ಅವಕಾಶವೆಂದೆ ಭಾವಿಸಿದ್ದೇನೆ. ನನ್ನ ಇಲ್ಲಿಯ ಸೇವಾ ಅವಧಿಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಮುಖಂಡರು, ರೈತರ ಸಂಘಟನೆಯ ಪ್ರತಿನಿಧಿಗಳು ಸೇರಿದಂತೆ ಎಲ್ಲರಿಂದಲೂ ಸಹಕಾರ ಸಿಕ್ಕಿದೆ. ನನಗೆ ತೋರಿದ ಪ್ರೀತಿ ಬೆಂಬಲಕ್ಕೆ ಚಿರಋಣಿಯಾಗಿದ್ದೇನೆ ಎಂದರು. 

ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಚಾರುಲತಾ ಸೋಮಲ್ ಅವರ ಬಗ್ಗೆ ಅಪಾರವಾದ ಪ್ರೀತಿ ಸಹಕಾರ ವ್ಯಕ್ತವಾಗಿರುವುದನ್ನು ನೋಡಿದ್ದೇನೆ. ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿ ಹಾಗೂ ಅಭಿವೃದ್ದಿಗೆ ತಾವೂ ಸಹ ಬದ್ದರಾಗಿದ್ದು ಎಲ್ಲರ ಸಹಕಾರ ಬೆಂಬಲ ಮುಂದುವರೆಯಲಿ ಎಂದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ಚಾರುಲತಾ ಸೋಮಲ್ ಅವರು ಅಧಿಕಾರಾವಧಿಯಲ್ಲಿ ಜಿಲ್ಲಾ ಪಂಚಾಯತ್ ಅಭಿವೃದ್ದಿ ಕಾರ್ಯಗಳಿಗೆ ಸಹಕಾರ ನೀಡಿದ್ದಾರೆ. ಇದರಿಂದ ಹಲವು ಪ್ರಗತಿಪರ ಕೆಲಸಗಳು ಸಾಧ್ಯವಾಗಿವೆ. ಪ್ರಸ್ತುತ ಜಿಲ್ಲಾಧಿಕಾರಿಯಾಗಿರುವ ಡಿ.ಎಸ್. ರಮೇಶ್ ಅವರು ಸಹ ದಾವಣಗೆರೆ ಜಿಲ್ಲಾಧಿಕಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಅವಧಿಯಲ್ಲಿಯೂ ಜಿಲ್ಲೆಯ ಅಭಿವೃದ್ದಿಗೆ ಸಹಕಾರ ಮುಂದುವರೆಯಲಿದೆ ಎಂದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಮಾತನಾಡಿ ಚಾರುಲತಾ ಸೋಮಲ್ ಅವರು ಆಡಳಿತ ವಿಷಯದಲ್ಲಿ ಸ್ಪಷ್ಟ  ನಿರ್ಧಾರವನ್ನು ಕೈಗೊಳ್ಳುತ್ತಿದ್ದರು. ನೂತನ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಗೂ ಸಹ ಆಡಳಿತ ವಿಚಾರದಲ್ಲಿ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದೇವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ಮಾತನಾಡಿ ಪೊಲೀಸ್ ಇಲಾಖೆಗೆ ಚಾರುಲತಾ ಸೋಮಲ್ ಅವರು ಸಾಕಷ್ಟು ಬೆಂಬಲ ನೀಡಿದ್ದಾರೆ. ಜನಪರವಾಗಿ ಕೆಲಸ ಮಾಡಿದ್ದಾರೆ. ಈಗಿನ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸಹ ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದಾರೆ. ಎಲ್ಲರಿಗೂ ಅಭಿನಂದನೆಗಳು ಎಂದರು. 

  ರೈತ ಮುಖಂಡರಾದ ಭಾಗ್ಯರಾಜ್ ಮಾತನಾಡಿ ಚಾರುಲತಾ ಸೋಮಲ್ ಅವರು ಭ್ರಷ್ಟಾಚಾರ ರಹಿತ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದಾರೆ. ರೈತರ ಸಮಸ್ಯೆಗಳಿಗೆ ಗಮನಹರಿಸಿದ್ದರು. ಈಗಿನ ಜಿಲ್ಲಾಧಿಕಾರಿಯವರು ಸಹ ರೈತರಿಗೆ ಸ್ಪಂದಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಕಂದಾಯ ಇಲಾಖೆ ನೌಕರರ ಸಂಘದ ಉಲ್ಲಾಸ್ ಅವರು ಮಾತನಾಡಿ ಕಂದಾಯ ಇಲಾಖೆ ದಿನ ಆಚರಣೆಯಂದು ಚಾರುಲತಾ ಸೋಮಲ್ ಅವರು ಸ್ವತಹ ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮ ನಡೆಸಿಕೊಟ್ಟರು. ಮಾತೃ ಹೃದಯಿಯಾಗಿದ್ದ ಅವರ ಸೇವಾ ಅವಧಿ ಸ್ಮರಣೀಯವಾಗಿದೆ. ಪ್ರಸ್ತುತ ಜಿಲ್ಲಾಧಿಕಾರಿಯವರ ಮಾರ್ಗದರ್ಶನದಲ್ಲಿ ನಾವೆಲ್ಲಾ ಕರ್ತವ್ಯ ನಿರ್ವಹಿಸುತ್ತೇವೆ ಎಂದರು. 

ಜಿಲ್ಲೆಯ ರೈತ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ವಿಶೇಷ ಚೇತನರು, ಪೌರಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು, ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ಹಿರಿಯ ಅರಣ್ಯ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿ, ಕಲಾವಿದರು, ಸಾರ್ವಜನಿಕರು ಭಾಗವಹಿಸಿದ್ದರು. 

Tuesday, 29 November 2022

29-11-2022 ಚಾಮರಾಜನಗರ ಸುದ್ದಿ

 ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರ್ಪಕ ನಿರ್ವಹಣೆಗೆ ಮತದಾರರ ಪಟ್ಟಿ ವೀಕ್ಷಕರಾದ ಬಿ.ಬಿ. ಕಾವೇರಿ ಸೂಚನೆ 

ಚಾಮರಾಜನಗರ, ನವೆಂಬರ್ 29 - ಜಿಲ್ಲಾ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿರುವ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಮತದಾರರ ಪಟ್ಟಿ ವೀಕ್ಷಕರು ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು. 

ದಿನಾಂಕ 1-01-2023ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಇದೇ ನವೆಂಬರ್ 9ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಹಕ್ಕು ಆಕ್ಷೇಪಣೆಗಳನ್ನು ಆಯಾ ತಾಲೂಕಿನ ಮತಗಟ್ಟೆಗಳಲ್ಲಿ ಹಾಗೂ ತಾಲೂಕು ಕಚೇರಿಯಲ್ಲಿ ಡಿಸೆಂಬರ್ 8 ರವರೆಗೂ ಸ್ವೀಕರಿಸಲಾಗುತ್ತಿದೆ. ಈ ಕಾರ್ಯವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಬಿ.ಬಿ. ಕಾವೇರಿ ಅವರು ತಿಳಿಸಿದರು. 

ಹಕ್ಕು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಅತ್ಯಂತ ಜಾಗರೂಕತೆಯಿಂದ ದಾಖಲೆಗಳನ್ನು ಸ್ವೀಕರಿಸಿ ಪರಿಶೀಲಿಸಬೇಕು. ಎಲ್ಲಿಯೂ ಯಾವುದೇ ಲೋಪಕ್ಕೆ ಅವಕಾಶವಾಗದ ಹಾಗೇ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅರ್ಹ ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು ಎಂದರು. 

18ರಿಂದ 19 ವರ್ಷ ವಯಸ್ಸಿನವರು, ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಸಂಬಂಧ ಹೆಚ್ಚು ಕೇಂದ್ರೀಕರಿಸಬೇಕು. ನೊಂದಣಿಗೆ ವಿಶೇಷ ಗಮನ ಹರಿಸಬೇಕು. ಈ ಬಗ್ಗೆ ಹೆಚ್ಚು ಪ್ರಚುರ ಪಡಿಸಬೇಕು. ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ವಹಿಸಬೇಕಿರುವ ಕ್ರಮಗಳ ಬಗ್ಗೆ ನಿಯಮ ಅನುಸಾರ ಎಲ್ಲವನ್ನೂ ಪಾಲನೆ ಮಾಡಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ ಅತ್ಯಂತ ಮಹತ್ತರ ಜವಾಬ್ದಾರಿಯಾಗಿದೆ. ಈ ಕಾರ್ಯಕ್ಕೆ ಇತರೆ ಇಲಾಖೆಗಳೂ ಸಹ ಅಗತ್ಯ ಸಹಕಾರ ನೀಡಬೇಕು. ಸಾಂವಿಧಾನಿಕ ಹೊಣೆಗಾರಿಕೆಯನ್ನು ಅಧಿಕಾರಿಗಳು ಎಚ್ಚರಿಕೆಯಿಂದ ನಿರ್ವಹಿಸಬೇಕು. ಮತದಾರ ಮಟ್ಟದ ಅಧಿಕಾರಿಗಳು ಸಹ ಪರಿಷ್ಕರಣಾ ಕರ್ತವ್ಯವನ್ನು ಗಂಭೀರವಾಗಿ ಪರಿಗಣಿಸಿ ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಪೂರಕವಾಗಿ ಕ್ರಮ ವಹಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಅವರು ನಿರ್ದೇಶನ ನೀಡಿದರು.

 ಇದೇ ವೇಳೆ ಮತಗಟ್ಟೆಯ ಮಟ್ಟದ ಅಧಿಕಾರಿ (ಬಿಎಲ್‍ಒ) ಗಳೊಂದಿಗೆ ಸಂವಾದ ನಡೆಸಿದ ಬಿ.ಬಿ. ಕಾವೇರಿ ಅವರು ಕಾರ್ಯನಿರ್ವಹಣೆ ಸಂಬಂಧ ವಿವರ ಪಡೆದುಕೊಂಡರು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪೋಸ್ಟರ್ ರಚನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಬಿ.ಬಿ. ಕಾವೇರಿ ಅವರು ಅಭಿನಂದಿಸಿದರು.  

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಜಿಲ್ಲೆಯಲ್ಲಿ ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದ ಕುರಿತು ವಿವರ ಒದಗಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮತದಾರರ ಜಾಗೃತಿ ಸಂಬಂಧ ಕೈಗೊಂಡಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಉಪವಿಭಾಗಾಧಿಕಾರಿ ಗೀತಾ ಹುಡೇದ, ತಹಶೀಲ್ದಾರರಾದ ಬಸವರಾಜು, ರವಿಶಂಕರ್, ಮಂಜುಳಾ, ಆನಂದಯ್ಯ, ಗ್ರೇಡ್-2 ತಹಶೀಲ್ದಾರ್ ಶಿವರಾಜು, ಚುನಾವಣಾ ತಹಶೀಲ್ದಾರ್ ಜಯಪ್ರಕಾಶ್, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. 

ಇಲಾಖಾ ಯೋಜನೆ ಕಾರ್ಯಕ್ರಮಗಳ ತ್ವರಿತ ಪ್ರಗತಿಗೆ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಬಿ.ಬಿ. ಕಾವೇರಿ ತಾಕೀತು

ಚಾಮರಾಜನಗರ, ನವೆಂಬರ್ 29 -- ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯವಹಿಸದೇ ತ್ವರಿತವಾಗಿ ಪ್ರಗತಿ ಸಾಧಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯು ಆಗಿರುವ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ.ಕಾವೇರಿ ಅವರು ತಾಕೀತು ಮಾಡಿದರು. 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರು, ಮೂಲಸೌಕರ್ಯ, ಕಟ್ಟಡ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ದಿ ಕಾಮಗಾರಿಗಳಿರಲಿ ಆ ಸಂಬಂಧ ಅಂದಾಜು ಪಟ್ಟಿ ಅಂತಿಮಗೊಳಿಸಿ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಳ್ಳಬೇಕು. ಕಾರ್ಯಾದೇಶ ನೀಡಲು ವಿಳಂಬ ಮಾಡಬಾರದು. ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಗುಣಮಟ್ಟದ ಕೆಲಸ ಆಗುತ್ತಿದೆಯೇ ಎಂಬ ಬಗ್ಗೆ ಇಲಾಖೆ ಮುಖ್ಯಸ್ಥರೇ ಖುದ್ದಾಗಿ ಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಆಡಳಿತ ಅಧಿಕಾರಿ ಕಾವೇರಿ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. 

ಅಮೃತ ಮಹೋತ್ಸವದ ಅಂಗವಾಗಿ ಅನುಷ್ಠಾನವಾಗಬೇಕಿರುವ ಯೋಜನೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಮೃತ ಸರೋವರ ಇತರೆ ಕಾಮಗಾರಿಗಳಿಗೆ ವಿಶೇಷ ಗಮನ ನೀಡಿ ನಿಗದಿತ ಅವಧಿಯೊಳಗೆ ಪೂರ್ಣವಾಗುವಂತೆ ನೋಡಿಕೊಳ್ಳಬೇಕು. ಇಲಾಖೆ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂದರು. 

ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚಿನ ಪ್ರಗತಿಯಾಗಬೇಕು. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಸಹ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಕೆಲಸಗಳನ್ನು ನಿರ್ವಹಿಸಬೇಕು. ಕೆಲವೇ ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಕೇಂದ್ರೀಕೃತಗೊಳಿಸಬಾರದು. ಕಡಿಮೆ ಸಾಧನೆ ಇರುವ ಇಲಾಖೆಗಳು ಚುರುಕಾಗಿ ತೊಡಗಿಕೊಂಡು ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಳಿಸಬೇಕೆಂದು ಕಾವೇರಿ ಅವರು ತಿಳಿಸಿದರು. 

ವಸತಿ ಯೋಜನೆಯು ಅತ್ಯಂತ ಮಹತ್ವದಾಗಿದೆ. ಮನೆ ಸೌಲಭ್ಯ ತಲುಪಿಸುವ ಯೋಜನೆಯಲ್ಲಿ ಬಾಕಿ ಇರುವ ಕೆಲಸಗಳನ್ನು ವಿಳಂಬ ಮಾಡದೇ ಆಸಕ್ತಿಯಿಂದ ಮಾಡಿ. ಹೊಸದಾಗಿ 2457 ಮನೆಗಳಿಗೆ ಮಂಜೂರಾತಿ ನೀಡಿದ್ದು ಇದಕ್ಕಾಗಿ ಗ್ರಾಮ ಸಭೆ ನಡಾವಳಿ, ಫಲಾನುಭವಿಗಳ ಆದ್ಯತಾ ಪಟ್ಟಿ ಇನ್ನಿತರ ದಾಖಲೆಗಳನ್ನು ಸೂಚಿತ ಅವಧಿಯೊಳಗೆ ಕಳುಹಿಸಿ. ಈ ಕಾರ್ಯದಲ್ಲಿ ನೋಡಲ್ ಅಧಿಕಾರಿಗಳ ಸಹಕಾರ ಪಡೆದು ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಫಲಾನುಭವಿಗಳಿಗೆ ಸವಲತ್ತು ತಲುಪಿಸಿ ಎಂದರು.

ಹಾಸ್ಟೆಲ್‍ಗಳ ನಿರ್ವಹಣೆ ಉತ್ತಮವಾಗಿರಲಿ. ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ, ದುರಸ್ತಿ ನಿಧಾನಗತಿಯಲ್ಲಿ ಆಗುವುದ ಬೇಡ. ಕಟ್ಟಡಕ್ಕಾಗಿ ನಿಗದಿಯಾಗಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಲಿ. ಶಾಲೆಗಳಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಎಲ್ಲಿಯೂ ಶಿಕ್ಷಣ ಮೊಟಕುಗೊಳಿಸದಂತೆ ಮಕ್ಕಳನ್ನು ನೋಡಿಕೊಳ್ಳಿ. ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ಘನತ್ಯಾಜ್ಯ ಘಟಕ ನಿರ್ವಹಣೆ, ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ, ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಆಗುತ್ತಿರುವ ಗಿಡಗಳ ನೆಡುವಿಕೆ ಕಾರ್ಯ ಸಮರ್ಪಕವಾಗಿ ಆಗಬೇಕೆಂದು ತಿಳಿಸಿದರು.

ಕೃಷಿ, ಆರೋಗ್ಯ, ತೋಟಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೀನುಗಾರಿಕೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಅಲ್ಪಸಂಖ್ಯಾತರ ಕಲ್ಯಾಣ, ರೇಷ್ಮೆ, ವಿವಿಧ ನಿಗಮಗಳು ಸೇರಿದಂತೆ ಇತರೆ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.  

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗುಡೂರು ಭೀಮಸೇನ, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. 

ಡಿ. 1ರಂದು ನಗರದಲ್ಲಿ ವಿಶ್ವ ಏಡ್ಸ್ ದಿನ ಆಚರಣೆ : ಜಾಥಾ, ವೇದಿಕೆ ಕಾರ್ಯಕ್ರಮ ಆಯೋಜನೆ

ಚಾಮರಾಜನಗರ, ನವೆಂಬರ್ 29 - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ವತಿಯಿಂದ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನ ಆಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 1 ರಂದು ನಗರದಲ್ಲಿ ಏರ್ಪಡಿಸಲಾಗಿದೆ.

ವಿಶ್ವ ಏಡ್ಸ್ ದಿನ ಅಂಗವಾಗಿ ಡಿಸೆಂಬರ್ 1 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಿಲ್ಲಾಡಳಿತ ಭವನದವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಯವರು ಜಾಥಾ ಉದ್ಘಾಟಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ರವಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಹಿಂಗಾರು ಹಂಗಾಮಿಗೆ ಫಸಲ್ ಬಿಮಾ ಯೋಜನೆ : ವಿಮಾ ಕಂತು ಪಾವತಿಗೆ ನವೆಂಬರ್ 30 ಕಡೆಯ ದಿನ 

ಚಾಮರಾಜನಗರ, ನವೆಂಬರ್ 29 - ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2022-23ರ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ.  

ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ಮಳೆ ಆಶ್ರಿತ ಹುರುಳಿ ಬೆಳೆಯನ್ನು ವಿಮೆಗೆ ಒಳಪಡಿಸಿ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹಾಗೂ ಇತರೇ ಬೆಳೆಗಳಾದ ಮುಸುಕಿನ ಜೋಳ, ಈರುಳ್ಳಿ, ಟೊಮೆಟೊ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ. 

     ನೀರಾವರಿ ಆಶ್ರಿತ ಮುಸುಕಿನ ಜೋಳಕ್ಕೆ ಪ್ರತಿ ಎಕರೆಗೆ 358 ರೂ., ಮಳೆ ಆಶ್ರಿತ ಮುಸುಕಿನಜೋಳ ಬೆಳೆಗೆ ಪ್ರತಿ ಎಕರೆಗೆ 304 ರೂ., ನೀರಾವರಿ ಆಶ್ರಿತ ಈರುಳ್ಳಿ ಬೆಳೆಗೆ ಪ್ರತಿ ಎಕರೆಗೆ 1518 ರೂ., ಮಳೆ ಆಶ್ರಿತ ಹುರುಳಿ ಬೆಳೆಗೆ ಪ್ರತಿ ಎಕರೆಗೆ 109 ರೂ., ಟೊಮೆಟೊ ಬೆಳೆಗೆ ಪ್ರತಿ ಎಕರೆಗೆ 2388 ರೂ., ವಿಮಾ ಕಂತು ಪಾವತಿಸಬೇಕಿದೆ. ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಈ ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ನವೆಂಬರ್ 30 ಅಂತಿಮ ದಿನವಾಗಿರುತ್ತದೆ.

ರೈತರು ವಿಮಾ ಕಂತನ್ನು ಪಾವತಿಸಿ ನೋಂದಾಯಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರಾದ ಮಧುಸೂದನ್ ಅವರು  ಪ್ರಕಟಣೆಯಲ್ಲಿ ಕೋರಿದ್ದಾರೆ. 

Thursday, 24 November 2022

24-11-2022 ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರ ಸೂಚನೆ

ಮಕ್ಕಳ ರಕ್ಷಣೆ, ಆರೋಗ್ಯ, ಶಿಕ್ಷಣ ಪ್ರಗತಿಗೆ ವಿಶೇಷ ಕಾಳಜಿ ವಹಿಸಿ : ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರ ಸೂಚನೆ 

     ಚಾಮರಾಜನಗರ, ನವೆಂಬರ್ 24 (ಕರ್ನಾಟಕ ವಾರ್ತೆ):- ಮಕ್ಕಳ ರಕ್ಷಣೆ, ಆರೋಗ್ಯ, ಶಿಕ್ಷಣ, ಸುರಕ್ಷತೆ ಸೇರಿದಂತೆ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿರುವ ಎಲ್ಲಾ ಕ್ರಮಗಳಿಗೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರು ಸೂಚನೆ ನೀಡಿದರು.

     ನಗರದ ಜಿಲ್ಲಾಡಳಿತÀ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿಂದು ಮಕ್ಕಳ ರಕ್ಷಣೆ, ಪೋಷಣೆ, ಆರೋಗ್ಯ, ಶೈಕ್ಷಣಿಕ, ಪೋಕ್ಸೋ ಕಾಯ್ದೆ, ಬಾಲನ್ಯಾಯ ತಿದ್ದುಪಡಿ ಕಾಯ್ದೆ ಅನುಷ್ಠಾನ ಸೇರಿದಂತೆ ಮಕ್ಕಳ ವಿಷಯಗಳ ಸಂಬಂಧ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಹಭಾಗಿದಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಮಕ್ಕಳ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಯಾಗಬೇಕು. ಮಕ್ಕಳ ಬೆಳವಣಿಗೆ, ವಿಕಾಸ, ಭಾವನೆಗಳ ಹಂಚಿಕೊಳ್ಳುವ ಹಕ್ಕುಗಳನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಮೇಲೆ ಶೋಷಣೆ, ದೌರ್ಜನ್ಯ ನಡೆಯದಂತೆ ಅವರ ಸುರಕ್ಷತೆಗೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಅಧ್ಯಕ್ಷರು ತಿಳಿಸಿದರು.

     ಅಂಗನವಾಡಿ, ಶಾಲೆ, ಕಾಲೇಜು, ವಿದ್ಯಾರ್ಥಿನಿಲಯಗಳು ಎಲ್ಲೇ ಇರಲಿ ಮಕ್ಕಳ ರಕ್ಷಣೆ ಮುಖ್ಯವಾಗಿದೆ. ಅಧಿಕಾರಿಗಳು ವ್ಯಾಪಕವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ, ಆಹಾರ, ಸುರಕ್ಷತೆ ಮತ್ತಿತ್ತರ ಅಂಶಗಳ ಬಗ್ಗೆ ಪರಿಶೀಲಿಸಬೇಕು.  ಶಾಲೆಗಳಲ್ಲಿ ಶಿಕ್ಷಕರು ಆಪ್ತ ಸಮಾಲೋಚನೆ ಮೂಲಕ ಮಕ್ಕಳ ಮನಸ್ಸನ್ನು ತಿಳಿಯುವ ಕೆಲಸ ಮಾಡಬೇಕು. ಎಲ್ಲಿಯೂ ದೌರ್ಜನ್ಯಗಳು ಆಗದಂತೆ ಮುಂಜಾಗ್ರತೆ ವಹಿಸಬೇಕು ಎಂದರು. 

     ಹಾಸ್ಟೆಲ್‍ಗಳಲ್ಲಿಯೂ ಸಹ ಮಕ್ಕಳ ಬೆಳವಣಿಗೆ ಮೇಲೆ ನಿಗಾ ಇರಬೇಕು. ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್‍ಗಳಲ್ಲಿ ಮಹಿಳಾ ವಾರ್ಡನ್‍ಗಳು ಇರಬೇಕು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜನೆ ಮಾಡಬೇಕು. ಕಾರ್ಯಕ್ರಮಗಳು ವಾಸ್ತವವಾಗಿ ವಿದ್ಯಾರ್ಥಿಗಳಲ್ಲಿ ಬದಲಾವಣೆ ತರುವಂತಾದರೆ ಮಾತ್ರ ಉದ್ದೇಶ ಸಫಲವಾಗುತ್ತದೆ ಎಂದು ಅಧ್ಯಕ್ಷರು ತಿಳಿಸಿದರು. 

      ಮಕ್ಕಳ ಗ್ರಾಮಸಭೆಗಳನ್ನು ಆಯೋಜನೆ ಮಾಡಿ ಮಕ್ಕಳು ಹೇಳಿಕೊಳ್ಳುವ ಸಮಸ್ಯೆಗಳು ವಿಷಯಗಳನ್ನು ದಾಖಲಿಸಿ ನಡಾವಳಿ ಮಾಡಬೇಕು. ಬಳಿಕ ಇದರ ಅನುಷ್ಠಾನ ಮಾಡುವುದರಿಂದ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ಮಕ್ಕಳಿಗೆ ಶಾಲೆಗಳಲ್ಲಿ ಪೌಷ್ಠಿಕ ಆಹಾರದ ಮಹತ್ವ, ಗಿಡಮೂಲಿಕೆಗಳ ಪರಿಚಯ ಮಾಡಿಕೊಡಬೇಕು. ಪಠ್ಯ ಬೋಧನೆ ಜೊತೆಗೆ ಕ್ರೀಡೆ ಇತರೆ ಉತ್ತಮ ಹವ್ಯಾಸಗಳಿಗೆ ಉತ್ತೇಜಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರು ತಿಳಿಸಿದರು.

     ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಅವರು ಮಾತನಾಡಿ ಶಾಲೆಗಳಲ್ಲಿ ಕೊಠಡಿಗಳು, ಶೌಚಾಲಯಗಳ ಅಗತ್ಯತೆ ಬಗ್ಗೆ ಅಧಿಕಾರಿಗಳು ವರದಿ ಮಾಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಆಯಾ ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಹೊಣೆಗಾರರಾಗುತ್ತಾರೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಿರುವ ಎಲ್ಲಾ ಕ್ರಮಗಳಿಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದರು. 

     ಇದೇ ವೇಳೆ ದತ್ತು ಕಾರ್ಯಕ್ರಮ ಹಾಗೂ ಪೋಕ್ಸೊ ಕಾಯ್ದೆಯ ಜಾಗೃತಿ ಕುರಿತ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು. 

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸರಸ್ವತಿ, ಮಕ್ಕಳ ರಕ್ಷಣಾಧಿಕಾರಿ ಗೋವಿಂದ, ಬಾಲನ್ಯಾಯ ಮಂಡಳಿಯ ಸದಸ್ಯರಾದ ಟಿ.ಜೆ. ಸುರೇಶ್, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಮಕ್ಕಳ ಕ್ಷೇತ್ರದ  ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Monday, 21 November 2022

21-11-2022 ಚಾಮರಾಜನಗರ ಸುದ್ದಿ

 ನಗರದಲ್ಲಿ ಸ್ವಚ್ಚತಾ ಓಟ, ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

      ಚಾಮರಾಜನಗರ, ನವೆಂಬರ್ 21 - ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಸ್ವಚ್ಚತಾ ಓಟ ಹಾಗೂ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕುರಿತ ಜಾಗೃತಿ ಕಾರ್ಯಕ್ರಮಗಳಿಗೆ ನಗರದಲ್ಲಿ ಇಂದು ಚಾಲನೆ ದೊರೆಯಿತು. 

     ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ಹಸಿರು ನಿಶಾನೆ ತೋರಿದರು.

     ಗ್ರಾಮೀಣ ಜನರಲ್ಲಿ ನೈರ್ಮಲ್ಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಪ್ರವಾಸಿ ಮಂದಿರದಲ್ಲಿ ಅಂತ್ಯಗೊಂಡಿತು. ಸ್ವಚ್ಚತಾ ಓಟದಲ್ಲಿ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು, ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳು, ಸಾರ್ವಜನಿಕರು, ಇನ್ನಿತರರು ಪಾಲ್ಗೊಂಡಿದ್ದರು.

     ಇದೇ ವೇಳೆ ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮದ ಕುರಿತು ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಅವರು ಜಿಲ್ಲೆಯ ಎಲ್ಲಾ ಗ್ರಾಮೀಣ ಭಾಗದಲ್ಲಿ ಸ್ವಚ್ಚತೆ, ಶೌಚಾಲಯಗಳ ಸದ್ಭಳಕೆ, ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತ ಪರಿಕಲ್ಪನೆಯಡಿ ಸಾಂಕೇತಿಕವಾಗಿ ಇಂದು ಸ್ವಚ್ಚತಾ ಓಟ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಮುಕ್ತ ಮತದಾನ ಮಾಡಲು ಅನುಕೂಲವಾಗುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕುರಿತು ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

     ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‍ರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಇನ್ನಿತರರು ಸ್ವಚ್ಚತಾ ಓಟದಲ್ಲಿ ಪಾಲ್ಗೊಂಡಿದ್ದರು.  

18 ವರ್ಷ ತುಂಬಿದ ಪ್ರತಿಯೊಬ್ಬರನ್ನು ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯ ಕ್ರಮ : ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ

       ಚಾಮರಾಜನಗರ, ನವೆಂಬರ್ 21 - ಮುಂಬರುವ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಗಾಗಿ ಶೇ. 100ರಷ್ಟು ಮತದಾರರನ್ನು ನೊಂದಣಿ ಮಾಡುವ ಸಂಬಂಧ ಜಿಲ್ಲೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚನೆ ನೀಡಿದರು. 

      ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ರಾಷ್ಟ್ರೀಯ ಮತದಾರರ ಪಟ್ಟಿ ನೋಂದಣಿ ಮತ್ತು ಪರಿಷ್ಕರಣೆ-2023 ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಗಾಗಿ ಶೇ.100ರಷ್ಟು ಮತದಾರರನ್ನು ನೊಂದಣಿ ಮಾಡುವ ಸಂಬಂಧ ಈಗಾಗಲೇ ಆಯೋಗವು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯತೆ ಸಾಧಿಸಿ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ನೊಂದಣಿಯಾಗಿರುವ ಬಗ್ಗೆ ಪರಿಶೀಲಿಸಬೇಕು ಎಂದರು. 

ನೊಂದಣಿಯಾಗದೆ ಇರುವ ಮತದಾರರನ್ನು ಮತದಾರರ ಪಟ್ಟಿಗೆ ನೊಂದಣಿ ಮಾಡಿಸಲು ಹಾಗೂ ತಿದ್ದುಪಡಿ, ಬದಲಾವಣೆಗಳಿದ್ದಲ್ಲಿ ಪರಿಷ್ಕರಣೆ ಮಾಡಿಕೊಳ್ಳುವ ಸಂಬಂಧ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಮಟ್ಟಗಳಲ್ಲಿ ವಿವಿಧ ಸ್ವೀಪ್ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಇರುವ ವಿದ್ಯಾರ್ಥಿನಿಲಯಗಳು, ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಮತದಾರರÀ ಪಟ್ಟಿಯಲ್ಲಿ ನೊಂದಣಿಯಾಗಿರುವ ಬಗ್ಗೆ ಪರಿಶೀಲಿಸಬೇಕು. ನೊಂದಣಿಯಾಗಿಲ್ಲದಿದ್ದಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸಮನ್ವಯದಿಂದ ನೊಂದಣಿಗೆ ಕ್ರಮವಹಿಸಬೇಕು. ಮತದಾನದ ಬಗ್ಗೆ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ತಿಳಿಸಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ವಿಕಲಚೇತನರು, ಸಾಂತ್ವನ ಮತ್ತು ಸ್ವಾಧಾರ ಕೇಂದ್ರ ಹಾಗೂ ವೃದ್ಧಾಶ್ರಮಗಳಲ್ಲಿರುವ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ನೊಂದಣಿಯಾಗಿರುವ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದ ಎಂಬಿಕೆಗಳಿಂದ ಪರಿಶೀಲಿಸಬೇಕು. ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂಬಂಧ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಕಾರ್ಯಕ್ರಮವನ್ನು ಆಯೋಜಿಸಿ ಮತದಾರರ ಪಟ್ಟಿಯಲ್ಲಿ ನೊಂದಣಿ ಮತ್ತು ಪರಿಷ್ಕರಣೆ ಮಾಡುವ ಬಗ್ಗೆ ಹಾಗೂ ಮತದಾನದ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಸೋಲಿಗ, ಬುಡಕಟ್ಟು ಜನಾಂಗದವರು ವಾಸಿಸುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಲು ಹಾಗೂ ಮತದಾದನದ ಬಗ್ಗೆ ಅರಿವು ಮೂಡಿಸಲು ಸಮುದಾಯದ ಮುಖಂಡರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಸ್ವೀಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಸೂಚನೆ ನೀಡಿದರು. 

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಬರುವ ಕಾಲೇಜು, ವಿದ್ಯಾರ್ಥಿನಿಲಯಗಳು, ಸ್ವ ಸಹಾಯ ಸಂಘಗಳು ಮತ್ತು ಸಂಘಟನೆಗಳ ಮೂಲಕ ಮತದಾರರ ಪಟ್ಟಿಯಲ್ಲಿ 18 ವರ್ಷ ಮೇಲ್ಪಟ್ಟವರ ಹೆಸರುಗಳನ್ನು ನೊಂದಣಿ ಮತ್ತು ಪರಿಷ್ಕರಣೆ ಮಾಡುವ ಬಗ್ಗೆ ಹಾಗೂ ಮತದಾನದ ಕುರಿತು ಅರಿವು, ಜಾಗೃತಿ ಮೂಡಿಸುವ ಸಂಬಂಧ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚಿಸಿದರು. 
      ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. 

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

      ಚಾಮರಾಜನಗರ, ನವೆಂಬರ್ 21- ತಾಲೂಕಿನ ನವಿಲೂರು, ಚಂದಕವಾಡಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. 

      ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿದ್ದು, ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಸೇರಿದವರಾಗಿರಬೇಕು ಹಾಗೂ ಅದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಯಲ್ಲಿ ಯಾರೂ ಅರ್ಜಿ ಸಲ್ಲಿಸದಿದ್ದಲ್ಲಿ ಬೇರೆ ಗ್ರಾಮ ಪಂಚಾಯಿತಿಯ ವಿಕಲಚೇತನರಿಗೆ ಅವಕಾಶ ಕಲ್ಪಿಸಲಾಗುವುದು. ಅರ್ಜಿದಾರರು 18ರಿಂದ 45ರ ವಯೋಮಿತಿಯ ಆರೋಗ್ಯವಂತರಾಗಿರಬೇಕು. ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಂಗವಿಕಲರಾಗಿರಬೇಕು, ಅಂಧರಿಗೆ ಭಾಗಶಃ ಶ್ರವಣದೋಷವುಳ್ಳವರಿಗೆ (ಮೈಲ್ ಮತ್ತು ಮಾಡರೇಟ್) ಮತ್ತು ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸಲಾಗುವುದು.

      ಮೂರು ರೀತಿಯ ಅಂಗವಿಕಲರಿಗೆ ಸಮನಾಗಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಆಯ್ಕೆ ಮಾಡಬೇಕು. ಒಂದು ವರ್ಗದ ಅಂಗವಿಕಲರು ಆಯ್ಕೆಗೆ ಲಭ್ಯವಿಲ್ಲದಿದ್ದಲ್ಲಿ ಇನ್ನೊಂದು ವರ್ಗದಲ್ಲಿರುವ ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಅಂಗವಿಕಲತೆಯು ಶೇ.40 ಕ್ಕಿಂತ ಹೆಚ್ಚು ಹಾಗೂ ಶೇ. 75 ಕ್ಕಿಂತ ಕಡಿಮೆ ಇದ್ದು, ವೈದ್ಯಕೀಯ ಪ್ರಮಾಣ ಪತ್ರ, ಗುರುತಿನ ಚೀಟಿಯ ದಾಖಲೆ ಹೊಂದಿರಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ ಅಥವಾ ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು. 

      ಗೌರವಧನ ನೇಮಕಾತಿಯು ಒಂದು ವರ್ಷದ ನಂತರ ಪುನರ್ ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಪ್ರಗತಿ, ವಿಕಲಚೇತನರೊಂದಿಗೆ ಸಂಬಂಧ, ವಿವಿಧ ಇಲಾಖೆಗಳೊಂದಿಗೆ, ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಸರ್ಕಾರ ನಿಗದಿಪಡಿಸಿರುವ ಕರ್ತವ್ಯಗಳನ್ನು ನಿರ್ವಹಿಸಲು ಸಮರ್ಥರೆಂಬ ಬಗ್ಗೆ ಪರಿಶೀಲಿಸಿ ಆಯ್ಕೆ ಮಾಡಲಾಗುವುದು. ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಸೇವೆ ಅಗತ್ಯವಿಲ್ಲವೆಂದು ಕಂಡು ಬಂದಲ್ಲಿ ಕರ್ತವ್ಯದಿಂದ ಬಿಡುಗಡೆ ಮಾಡಬಹುದಾಗಿದೆ. ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುವುದನ್ನು ಖಾಯಂಗೊಳಿಸುವಂತೆ ಕೋರಲು ಅವಕಾಶವಿರುವುದಿಲ್ಲ.

    ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಡಿಸೆಂಬರ್ 5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ತಾ.ಪಂ ಕಾರ್ಯಾಲಯದ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನ. 29ರಂದು ಯಳಂದೂರು ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿ ಸಭೆ

       ಚಾಮರಾಜನಗರ, ನವೆಂಬರ್ 21 - ಯಳಂದೂರು ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿ ಸಭೆಯು ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 29ರಂದು ಬೆಳಿಗ್ಗೆ 11 ಗಂಟೆಗೆ ಯಳಂದೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. 

     ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಗೆ ಆಗಮಿಸಿ ಸೂಕ್ತ ಸಲಹೆಗಳನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಯಳಂದೂರಿನ ಕುಂಬಾರಗುಂಡಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2), ಕಚೇರಿ ದೂ.ಸಂ 08226-240309 ಸಂಪರ್ಕಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ತಹಶೀಲ್ದಾರ್ ಪ್ರಕಟಣೆಯಲ್ಲಿ ಕೊರಿದ್ದಾರೆ. 

ನ. 22ರಂದು ನಗರದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ 

     ಚಾಮರಾಜನಗರ, ನವೆಂಬರ್ 21 - ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ 2022-23ನೇ ಸಾಲಿನ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ನವೆಂಬರ್ 22ರಂದು ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ. 

     ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವಿಜ್ಞಾನ ವಸ್ತು ಪ್ರದರ್ಶನದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು (ಅಭಿವೃದ್ದಿ) ಹಾಗೂ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನ. 24ರಂದು ಗುಂಡ್ಲುಪೇಟೆ, ಬೇಗೂರು ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ 

       ಚಾಮರಾಜನಗರ, ನವೆಂಬರ್ 21 :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಗುಂಡ್ಲುಪೇಟೆ ಮತ್ತು ಬೇಗೂರು ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನವೆಂಬರ್ 24 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

     ಗುಂಡ್ಲುಪೇಟೆ, ಭರಗಿ, ಕೋಡಿಹಳ್ಳಿ, ಬೇರಂಬಾಡಿ, ನೆನೆಕಟ್ಟೆ, ವೀರನಪುರ ಮತ್ತು ಬೊಮ್ಮಲಾಪುರ, ಬೆಳವಾಡಿ, ಬಾಚಳ್ಳಿ, ದಾರಿಬೇಗೂರು, ಕೊಡಸೋಗೆ, ಹೆಗ್ಗವಾಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

      ಹಂಗಳ, ಶಿವಪುರ, ಕಲ್ಲಿಗೌಡನಹಳ್ಳಿ ಎನ್.ಜೆ.ವೈ, ಎಲಚಟ್ಟಿ, ಗೋಪಾಲ್‍ಪುರ ಎನ್.ಜೆ.ವೈ, ದೇವರಹಳ್ಳಿ, ಹೊನ್ನೇಗೌಡನಹಳ್ಳಿ, ಮಲ್ಲಯ್ಯನಪುರ ಮತ್ತು ಬರಗಿ, ಹೊಂಗಹಳ್ಳಿ ಐಪಿ, ಮುಂಟಿಪುರ ಐಪಿ, ಹೆಚ್.ಎಸ್.ಹುಂಡಿ ಎನ್.ಜೆ.ವೈ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 
      
      ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್ಸ್‍ಗೆ ಸಹಾಯಧನ

     ಚಾಮರಾಜನಗರ, ನವೆಂಬರ್ 21 - ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‍ಕೆವಿವೈ) ಯಡಿ ಪ್ಲಾಸ್ಟಿಕ್ ಕ್ರೇಟ್ಸ್‍ಗೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುμÁ್ಠನಗೊಳಿಸಲಾಗುತ್ತಿದೆ. 

     ಯೋಜನೆಯಡಿ ತೋಟಗಾರಿಕೆ ಬೆಳೆಗಳ ಫಸಲಿನಲ್ಲಿ ಹಣ್ಣು, ತರಕಾರಿ ಬೆಳೆ ಕೊಯ್ಲೂತ್ತರ ನಷ್ಟವನ್ನು ತಡೆಗಟ್ಟಲು ಹಾಗೂ ಸಮರ್ಪಕ ಕೊಯ್ಲೂತ್ತರ ನಿರ್ವಹಣೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಪ್ಲಾಸ್ಟಿಕ್ ಕ್ರೇಟ್ಸ್ ಬಳಕೆ ಪ್ರಮುಖ ಪಾತ್ರವಹಿಸುತ್ತದೆ. ಇಲಾಖೆ ಅನುಮೋದಿತ ಕಂಪನಿ, ಸಂಸ್ಥೆಗಳಿಂದ ಮಾತ್ರ ಖರೀದಿಸುವ ಪ್ಲಾಸ್ಟಿಕ್ ಕ್ರೇಟ್ಸ್‍ಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ. 50ರ ಸಹಾಯಧನ (ಆರ್‍ಕೆವಿವೈ ಯೋಜನೆಯಡಿ- ಶೇ. 25, ಹೊಂದಾಣಿಕೆ ವೆಚ್ಚ ಸಿಎಚ್‍ಡಿ ಯೋಜನೆಯಡಿ- ಶೇ.25)  ರಂತೆ ಎರಡು ಕಂತುಗಳಲ್ಲಿ ಒಟ್ಟು 7500 ರೂ. ಗಳನ್ನು ಪ್ರತಿ ಹೆಕ್ಟೇರ್ ಗೆ (ಗರಿಷ್ಟ ಎರಡು ಹೆಕ್ಟೇರ್ ಮೀರದಂತೆ) ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

     ಸೌಲಭ್ಯಕ್ಕಾಗಿ ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಗಣಕಿಕೃತ ಬೆಳೆ ದೃಡೀಕರಣ, ತೋಟಗಾರಿಕೆ ಬೆಳೆಯಿರುವ ತಾಕಿನ ಪೋಟೊ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಅಗತ್ಯ ದಾಖಲೆಗಳನ್ನು ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಅನುಮೋದಿತ ಕಂಪನಿ, ಸಂಸ್ಥೆ ವಿವರವನ್ನು ಪಡೆದು ಪ್ಲಾಸ್ಟಿಕ್ ಕ್ರೇಟ್ಸ್‍ಗಳನ್ನು ಖರೀದಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವಾಣಿಜ್ಯ ಹಣ್ಣಿನ ಬೆಳೆಗಳ ನಿರ್ವಹಣೆಗೆ ತೋಟಗಾರಿಕೆ ಇಲಾಖೆಯಿಂದ ಸಲಹೆ

      ಚಾಮರಾಜನಗರ, ನವೆಂಬರ್ 21 :- ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‍ಕೆವಿವೈ) ಯಡಿ 2022-23ನೇ ಸಾಲಿನಲ್ಲಿ ಜಿಲ್ಲೆಯ ವಾಣಿಜ್ಯ ಹಣ್ಣಿನ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಸಪೋಟ, ದಾಳಿಂಬೆ, ನಿಂಬೆ, ಗೋಡಂಬಿ ಇತ್ಯಾದಿ ಬೆಳೆಗಳ ಮೇಲಾವರಣ ನಿರ್ವಹಣೆಗೆ ತೋಟಗಾರಿಕೆ ಇಲಾಖೆ ಸಲಹೆ ಮಾಡಿದೆ. 
     ಮಾವು, ಸೀತಾಫಲ, ಸೀಬೆ, ಸಪೋಟ, ದಾಳಿಂಬೆ, ನಿಂಬೆ, ಗೋಡಂಬಿ ಇತ್ಯಾದಿ ಬೆಳೆಗಳನ್ನು ಅಧಿಕ ಸಾಂದ್ರತೆ ನಾಟಿ ಪದ್ದತಿಯಲ್ಲಿ ಬೆಳೆಯಾಲಾಗುತ್ತಿದ್ದು, ಸದರಿ ಪದ್ದತಿಯಲ್ಲಿ ಗಿಡಗಳ ಅಂತರ ಅತಿ ಕಡಿಮೆ ಇರುವುದರಿಂದ ಗಿಡಗಳ ಮೇಲಾವರಣ ನಿರ್ವಹಣೆ ಅತ್ಯಾವಶ್ಯಕವಾಗಿರುತ್ತದೆ. ಇದರಿಂದ ಗುಣಮಟ್ಟದ ಹಣ್ಣುಗಳನ್ನು ಪಡೆಯುವುದಲ್ಲದೆ ತೋಟದ ನಿರ್ವಹಣೆ ಸುಲಭವಾಗಿರುತ್ತದೆ.

     ಮೇಲಾವರಣ ನಿರ್ವಹಣೆಗಳಾದ ಕೀಟರೋಗ ಬಾದಿತ, ನೆಲಕ್ಕೆ ತಾಗುವ ಅನಗತ್ಯ ರೆಂಬೆ, ಕೊಂಬೆಗಳನ್ನು ಕತ್ತರಿಸಬೇಕು, ಸೂರ್ಯನ ಕಿರಣ ಎಲ್ಲಾ ಭಾಗಗಳಿಗೂ ಬೀಳುವಂತೆ ಮಾಡಬೇಕು, ಗಿಡ ಬೆಳೆಯಲು ಆಕಾರ ಕೊಡುವುದು ಪುನಶ್ಚೇತನ ಕೈಗೊಳ್ಳಲು ಇತ್ಯಾದಿ ಚಟುವಟಿಕೆಯನ್ನು ಕೈಗೊಳ್ಳಲು ಸದರಿ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ಶೇ. 25 ರಂತೆ 10000 ರೂ. ಗಳನ್ನು ಪ್ರತಿ ಹೆಕ್ಟೇರ್ ಗೆ (ಗರಿಷ್ಟ 2 ಹೆಕ್ಟೇರ್ ಗೆ ಮೀರದಂತೆ) ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. 

     ಅಧಿಕ ಸಾಂದ್ರತೆ ಪದ್ದತಿಯಲ್ಲಿ ಹಣ್ಣಿನ ಬೆಳೆ ನಾಟಿಮಾಡಿರುವ ಆಸಕ್ತ ರೈತರು ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ತಾಕಿನಲ್ಲಿ ಹಣ್ಣಿನ ಬೆಳೆಯೊಂದಿಗೆ ಛಾಯಚಿತ್ರ, ಗಣಕೀಕೃತ ಬೆಳೆ ದೃಡೀಕರಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರ ಇತ್ಯಾದಿ ದಾಖಲೆಗಳನ್ನು ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಮಾಹಿತಿ ಪಡೆದು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Sunday, 20 November 2022

20-11-2022 ನ್ಯಾಯಾಧೀಶರಿಂದ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಸಮಾರಂಭ ಉದ್ಘಾಟನೆ :

 ಜಿಲ್ಲಾ ನ್ಯಾಯಾಧೀಶರಿಂದ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಸಮಾರಂಭ ಉದ್ಘಾಟನೆ 

      ಚಾಮರಾಜನಗರ, ನವೆಂಬರ್ 20 :- ಮೂರು ದಿನಗಳ ಕಾಲ ನಡೆಯಲಿರುವ ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ನಗರದಲ್ಲಿ ಇಂದು ಚಾಲನೆ ದೊರೆಯಿತು. 

     ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 25ನೇ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಪಾರಿವಾಳ ಹಾಗೂ ಬಲೂನ್‍ಗಳನ್ನು ಆಕಾಶಕ್ಕೆ ಹಾರಿಬಿಡುವ ಮೂಲಕ ಉದ್ಘಾಟಿಸಿ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು. 

     ಇದೇ ವೇಳೆ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಪೊಲೀಸ್ ಇಲಾಖೆಯಲ್ಲಿ ಪ್ರತಿನಿತ್ಯ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಪೊಲೀಸರ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯ ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಲಿದೆ ಎಂದರು.

     ಬಳಿಕ ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಪುರುಷರ ಹಾಗೂ ಮಹಿಳೆಯರ 200 ಮೀ. ಓಟ ಸ್ಪರ್ಧೆಗಳಿಗೆ ಗನ್‍ಶೂಟ್ (ಸಿಡಿಮದ್ದು ಸಿಡಿಸಿ) ಮಾಡುವ ಮೂಲಕ ಚಾಲನೆ ನೀಡಿದರು.

     ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ, ತೃತೀಯ ಸ್ಥಾನ ಪಡೆದ ವೀಜೇತರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲಾ ಕ್ರೀಡಾಳುಗಳು ಕ್ರೀಡಾಸ್ಪೂರ್ತಿ ಮೆರೆಯಬೇಕು. ವಿಜೇತ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು. 

     ಜಿಲ್ಲಾ ಪೊಲೀಸ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಭಾಗವಹಿಸಿ  ಕ್ರೀಡಾಪಟುಗಳನ್ನು ಆತ್ಮೀಯವಾಗಿ ಮಾತನಾಡಿಸಿ ಉತ್ಸಾಹ ತುಂಬಿ ವಿಜೇತರಿಗೆ ಬಹುಮಾನ ವಿತರಿಸಿದ್ದು ಕ್ರೀಡಾಕೂಟದ ವಿಶೇಷವಾಗಿತ್ತು.

     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ಮಾತನಾಡಿ ಕೌಟುಂಬಿಕ ನೆಮ್ಮದಿಯನ್ನು ಕಡೆಗಣಿಸಿ ಕರ್ತವ್ಯದಲ್ಲಿ ತೊಡಗಬೇಕಾಗಿರುವ ಪೊಲೀಸರು ಮಾನಸಿಕ, ದೈಹಿಕ ಸದೃಢತೆ ಕಾಪಾಡಿಕೊಂಡು ಸ್ಪರ್ಧಾತ್ಮಕ ಮನೋಭಾವ ಮೈಗೂಡಿಸಿಕೊಳ್ಳಲು ಕ್ರೀಡಾಕೂಟ ನೆರವಾಗಲಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮಹತ್ವದ್ದಾಗಿದೆ ಎಂದು ತಿಳಿಸಿದರು. 

     ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ನಾಗರಾಜು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

     ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ : ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ - ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ 

      ಚಾಮರಾಜನಗರ, ನವೆಂಬರ್ 20 :- ಮುಖ್ಯಮಂತ್ರಿಯವರು ಜಿಲ್ಲೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆಗಾಗಿ ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ನಗರದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

     ನಗರದ ಮೆಡಿಕಲ್ ಕಾಲೇಜು ಬಳಿ ಇರುವ ಜೆ.ಎಸ್.ಎಸ್. ಗೆ ಸೇರಿದ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು. ತದನಂತರ ನಗರದ ಪ್ರಮುಖ ಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮುಖ್ಯಮಂತ್ರಿಯವರ ಕಾರ್ಯಕ್ರಮಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣವೇ ಸೂಕ್ತವೆಂದು ಇಲ್ಲಿಯೇ ಕಾರ್ಯಕ್ರಮ ಏರ್ಪಾಡು ಮಾಡಲು ನಿರ್ಧರಿಸಲಾಯಿತು.

     ಅಧಿಕಾರಿಗಳೊಂದಿಗೆ ಕ್ರೀಡಾಂಗಣವನ್ನು ವ್ಯಾಪಕವಾಗಿ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಪ್ರಸ್ತುತ ಇರುವ ತೇವಾಂಶ ಹೋಗಲಾಡಿಸುವ ಹಾಗೂ ನೀರು ಹರಿದಿರುವುದನ್ನು ತಡೆಯುವ ಕೆಲಸವನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

     ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ಎಲ್ಲಾ ರೀತಿಯಲ್ಲಿಯೂ ಕಾರ್ಯಕ್ರಮಕ್ಕೆ ಸೂಕ್ತವಾಗಿದೆ. ಹೀಗಾಗಿ ಕ್ರೀಡಾಂಗಣವನ್ನು ಅಚ್ಚುಕಟ್ಟಾಗಿ ಸಜ್ಜುಗೊಳಿಸಬೇಕು. ಕಾರ್ಯಕ್ರಮದ ಸಿದ್ದತೆಗಾಗಿ ಕೈಗೊಳ್ಳಬೇಕಿರುವ ಕಾರ್ಯವನ್ನು ತುರ್ತಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

     ಕಾರ್ಯಕ್ರಮದಲ್ಲಿ ಹೆಚ್ಚು ಜನರು ಕುಳಿತುಕೊಳ್ಳಲು ಅನುಕೂಲವಾಗುವ ಶಾಮಿಯಾನ, ಅಸನಗಳು ಸಮಾರಂಭಕ್ಕೆ ಎತ್ತರದ ವೇದಿಕೆ ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಏರ್ಪಾಡು ಮಾಡಲು ಸಚಿವರು ತಿಳಿಸಿದರು.

     ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿಯವರು ಜಿಲ್ಲೆಗೆ ಇದೇ ನವೆಂಬರ್ ಇಲ್ಲವೇ ಡಿಸೆಂಬರ್‍ನಲ್ಲಿ ಭೇಟಿ ನೀಡಲಿರುವುದು ನಿಶ್ಚಿತವಾಗಿದೆ. ಭೇಟಿಯ ದಿನಾಂಕವನ್ನು ಇಂದು ಅಥವಾ ನಾಳೆಯೊಳಗೆ ಪ್ರಕಟಿಸಲಾಗುತ್ತದೆ. ಚಾಮರಾಜನಗರ ಪಟ್ಟಣಕ್ಕೂ ಮುಖ್ಯಮಂತ್ರಿಯವರು ಬರಲಿದ್ದಾರೆ. ಬಳಿಕ ಹನೂರು, ಮಲೆ ಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಲಿದ್ದಾರೆ. ಚಾಮರಾಜನಗರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲೇ ಮುಖ್ಯಮಂತ್ರಿಯವರ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದರು.

     ಕ್ರೀಡಾಂಗಣದಲ್ಲಿ ನೀರು ನಿಂತಿದ್ದು, ತೇವಾಂಶವಿದೆ. ಇದನ್ನು ಸರಿಪಡಿಸಬೇಕಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಕಾರ್ಯಕ್ರಮ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲೆ ಮಾಡುವುದರಿಂದ ಯೋಜನೆಯ ಫಲಾನುಭವಿಗಳು, ಜನರು ಬರಲು ಅನುಕೂಲವಾಗಲಿದೆ. ಹೀಗಾಗಿ ಕಾರ್ಯಕ್ರಮ ಆಯೋಜನೆಗೆ ಕ್ರೀಡಾಂಗಣವನ್ನು ಸಜ್ಜುಗೊಳಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.

     ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಸ್. ಸುಂದರರಾಜು, ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರ್ ಬಸವರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರಾದ ವಿನಯ್‍ಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರಾದ ಆರ್.ಸಿ. ಕೆಂಪರಾಜು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಬ್ರಾಯಿಂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯಪಾಲಕ ಎಂಜಿನಿಯರ್ ವಸಂತ್‍ಕುಮಾರ್, ನಗರಸಭೆ ಆಯುಕ್ತರಾದ ರಾಮದಾಸ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು. 

Saturday, 19 November 2022

19-11-2022 ಪ್ರತಿಯೊಬ್ಬರಿಗೂ ಮತದಾನದ ಅರಿವು ಅಗತ್ಯ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ

 ಪ್ರತಿಯೊಬ್ಬರಿಗೂ ಮತದಾನದ ಅರಿವು ಅಗತ್ಯ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ 

 ಚಾಮರಾಜನಗರ, ನವೆಂಬರ್ 19 - ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸ್ವೀಪ್ ಕಾರ್ಯಕ್ರಮಗಳ ಮುಖಾಂತರ ಪ್ರತಿಯೊಬ್ಬರಿಗೂ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.

ನಗರದ ಸಂತಪೌಲರ ಪ್ರೌಢಶಾಲೆಯಲ್ಲಿಂದು ಜಿಲ್ಲಾ ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮತದಾರರ ಸಾಕ್ಷರತಾ ಸಂಘ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಚಟುವಟಿಕೆಗಳಾದ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಮತದಾನದ ಮೂಲಕ ಅರ್ಹ ನಾಯಕರನ್ನು ಆಯ್ಕೆ ಮಾಡಬೇಕಾಗಿರುವ ನಿಟ್ಟಿನಲ್ಲಿ ಅನೇಕ ವರ್ಷಗಳಿಂದ ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿವೆ. ಚುನಾವಣೆಯಲ್ಲಿ ಪಾರದರ್ಶಕತೆ ಇರಬೇಕೆಂಬ ಉದ್ದೇಶದಿಂದ ಒಂದೊಂದು ಮತವೂ ಪ್ರಾಮುಖ್ಯತೆ ಪಡೆದಿದೆ. ಮತದಾನದ ಹಕ್ಕನ್ನು ಚಲಾಯಿಸುವ ಬಗ್ಗೆ ಅರಿವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜಕನಿಕರಿಗೆ ಮೂಡಿಸಬೇಕಾಗಿದೆ. ಮತದಾನದ ಮೂಲಕ ಸೂಕ್ತ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮದಾಗಿರುತ್ತದೆ ಎಂದು ತಿಳಿಸಿದರು.

ಪ್ರತಿ ವರ್ಷದಂತೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 25ರಂದು ಆಚರಿಸಲಾಗುತ್ತಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕಾಗಿರುವುದರಿಂದ ಈಗಾಗಲೇ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಚುನಾವಣಾ ಆಯೋಗದಿಂದ ಹೊರಡಿಸಲಾಗಿರುವ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ತಿದ್ದುಪಡಿ, ಬದಲಾವಣೆಗಳಿದ್ದಲ್ಲಿ ಪರಿಶೀಲಿಸಿ ವೈಯಕ್ತಿಕ ಮಾಹಿತಿಗಳನ್ನು ಪರಿಷ್ಕರಣೆ ಮಾಡಿಕೊಳ್ಳುವಂತೆ ತಿಳಿಸಿದರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಯನ್ನು ತಿಳಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದು ಅತ್ಯಂತ ಮಹತ್ವದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಗುರಿಯನ್ನು ಹೊಂದಬೇಕು ಎಂದರು. 

ವಿದ್ಯಾರ್ಥಿಗಳು ಮನೆಯಲ್ಲಿರುವ 18 ವರ್ಷ ತುಂಬಿದ ಕುಟುಂಬದ ಇತರೆ ಸದಸ್ಯರುಗಳು ಹಾಗೂ ಸಾರ್ವಜನಿಕರನ್ನು ಸಹ ಮತದಾನಕ್ಕೆ ನೋಂದಣಿ ಮಾಡಿಸಲು ಮತ್ತು ಮತದಾನದಲ್ಲಿ ಪಾಲ್ಗೊಳ್ಳಲು ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.

ತಾಲ್ಲೂಕು ಮಟ್ಟದ ವಿವಿಧ ಶಾಲೆಗಳಿಂದ ಆಯ್ಕೆಯಾಗಿರುವ ಒಟ್ಟು 55 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

      ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯೋಜನಾ ಉಪ ಸಮನ್ವಾಯಾಧಿಕಾರಿ ಲಕ್ಷ್ಮಿಪತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. 

--------

ಮತದಾನದ ಮೂಲಕ ರಾಷ್ಟ್ರ ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. : ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ

    ಚಾಮರಾಜನಗರ, ನವೆಂಬರ್ 19 :- ಮತದಾನದ ಕಾರ್ಯದಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತ ಚಲಾವಣೆಯ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಷ್ಟ್ರವನ್ನು ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.

  ಜಿಲ್ಲಾ ಸ್ವೀಪ್ ಸಮಿತಿ, ಕಾಲೇಜು ಶಿಕ್ಷಣ ಇಲಾಖೆ, ಚುನಾವಣಾ ಸಾಕ್ಷರತಾ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಮತದಾನದಲ್ಲಿ ಭಾಗವಹಿಸುವಂತೆ ಹಾಗೂ ಮತದಾನದ ಪ್ರಾಮುಖ್ಯತೆ ಮತ್ತು ಮತದಾನದ ಸಾಕ್ಷರತೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಒಟ್ಟು 309 ಮತದಾರರ ಸಂಘಗಳನ್ನು ರಚಿಸಲಾಗಿದ್ದು, ಈ ಮೂಲಕ ಮತದಾನದ ಶಿಕ್ಷಣ, ಅರಿವು ಮತ್ತು ಮತದಾನದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿವಿಧ ಚಟುವಟಿಕೆಗಳ ಮೂಲಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.

  ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಅರಿವು ಹಾಗೂ ಮಹತ್ವವನ್ನು ತಿಳಿಯಬೇಕಾಗಿದೆ. 18 ವರ್ಷ ತುಂಬಿದ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು. ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಚುನಾವಣಾ ಆಯೋಗ ಹೊರಡಿಸಿರುವÀ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ತಿದ್ದುಪಡಿ, ಇತರೆ ಬದಲಾವಣೆಗಳಿದ್ದಲ್ಲಿ ಖಾತರಿಪಡಿಸಿಕೊಳ್ಳುವಂತೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. 

-----

ನ. 20ರಿಂದ 22ರವರೆಗೆ ನಗರದಲ್ಲಿ ವಾರ್ಷಿಕ ಪೊಲೀಸ್ ಕ್ರೀಡಾಕೂಟ  

 ಚಾಮರಾಜನಗರ, ನವೆಂಬರ್ 19 :- ಚಾಮರಾಜನಗರ ಜಿಲ್ಲಾ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ನವೆಂಬರ್ 20 ರಿಂದ 22ರವರೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ. 

 ನವೆಂಬರ್ 20ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ನವೆಂಬರ್ 22ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಪ್ರವೀಣ್ ಮಧುಕರ್ ಪವಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಹುಮಾನ ವಿತರಣೆ ಮಾಡುವರು. ಬಂಡೀಪುರದ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಡಾ. ಪಿ. ರಮೇಶ್‍ಕುಮಾರ್, ಕೊಳ್ಳೇಗಾಲ ಮಲೈಮಹದೇಶ್ವರ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋμïಕುಮಾರ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರಾದ ದೀಪ ಜೆ ಕಂಟ್ರಾಕ್ಟರ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಅಣಬೆ ಬೇಸಾಯ ತೆರಬೇತಿಗೆ ಅರ್ಜಿ ಆಹ್ವಾನ 

 ಚಾಮರಾಜನಗರ, ನವೆಂಬರ್ 19 - ಎಸ್.ಬಿ.ಐ ಗ್ರಾಮೀಣ ತರಬೇತಿ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಅಣಬೆ ಬೇಸಾಯ ಕುರಿತು 10 ದಿನಗಳ ಉಚಿತ ತರಬೇತಿ ನೀಡಲು ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅಭ್ಯರ್ಥಿಗಳು 18ರಿಂದ 45ರ ವಯೋಮಿತಿಯಲ್ಲಿರಬೇಕು. ಗ್ರಾಮೀಣ ಬಿಪಿಎಲ್ ಕಾರ್ಡ್ ಅಥವಾ ಉದ್ಯೋಗ ಖಾತರಿ ಕಾರ್ಡ್, ಆಧಾರ್ ಕಾರ್ಡ್ ಹೊಂದಿರಬೇಕು. ತರಬೇತಿಯು ನವೆಂಬರ್ 22ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯಿಂದ ಅರ್ಜಿ ಪಡೆದು ಸಲ್ಲಿಸಬಹುದು. 

  ಹೆಚ್ಚಿನ ಮಾಹಿತಿಗಾಗಿ ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಎಸ್‍ಬಿಐ ಮಾರ್ಗದರ್ಶಿ ಬ್ಯಾಂಕ್ ಅಥವಾ 9606098878, 9739067155, 8722483393, 08226-200214 ಸಂಪರ್ಕಿಸುವಂತೆ ಎಸ್‍ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Friday, 18 November 2022

18-11-2022 ಜಿಲ್ಲೆಗೆ ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಸೂಚನೆ

ಜಿಲ್ಲೆಗೆ ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಸೂಚನೆ 

 ರೈತರ, ಜನಸಾಮಾನ್ಯರ ಸಮಸ್ಯೆ ಆಶೋತ್ತರಗಳಿಗೆ ಸ್ಪಂದಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ 

      ಚಾಮರಾಜನಗರ, ನವೆಂಬರ್ 18 - ಜಿಲ್ಲೆಯ ರೈತರು ಹಾಗೂ ಜನ ಸಾಮಾನ್ಯರ ಸಮಸ್ಯೆ ಆಶೋತ್ತರಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ನಿರ್ಲಕ್ಷ್ಯ ಧೋರಣೆ ತೋರಿದರೆ ಸಹಿಸುವುದಿಲ್ಲ ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

    ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ರೈತರಿಗೆ ಸಂಬಂಧಿಸಿದ ವಿಷಯಗಳು ಹಾಗೂ ಕೆರೆಗಳಿಗೆ ನೀರು ತುಂಬಿಸುವ ಸಂಬಂಧ ರೈತ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ರೈತರು, ಜನಸಾಮಾನ್ಯರ ಹಿತ ಕಾಯುವುದಕ್ಕಾಗಿ ನಾವೆಲ್ಲಾ ಇದ್ದೇವೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು. ಅವರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಬೇಕು. ರೈತರ ಅನುಕೂಲಕ್ಕಾಗಿ ಇರುವ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಲೋಪವಾದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಕರ ನಿರಾಕರಣೆ ಸಂಬಂಧ ವಿದ್ಯುತ್ ಬಾಕಿ ಮನ್ನಾ ಮಾಡುವ ಸಂಬಂಧ  ಸಚಿವ ಸಂಪುಟದ ಮುಂದೆ ತರುವ ನಿಟ್ಟಿನಲ್ಲಿ ಸೋಮವಾರ ಇಲ್ಲವೇ ಮಂಗಳವಾರವೇ ಅಧಿಕಾರಿಗಳು ಬೆಂಗಳೂರಿಗೆ ಬಂದು ಅಗತ್ಯ ಪ್ರಕ್ರಿಯೆ ವಹಿಸಬೇಕು ಎಂದು ಸಚಿವರು ಸೂಚಿಸಿದರು.

ರೈತ ಮುಖಂಡರು ಮಾತನಾಡಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಪರಿಶೀಲನೆಗೆ ಚೆಕ್‍ಪೋಸ್ಟ್‍ಗಳನ್ನು ತೆರೆಯಬೇಕು. ಬ್ಯಾಂಕ್‍ಗಳಲ್ಲಿ ರೈತರಿಗೆ ಸಾಲ ನೀಡುತ್ತಿಲ್ಲ. ಈ ಬಗ್ಗೆ ನಿರ್ದೇಶನ ನೀಡಬೇಕು. ಹಾವು ಕಚ್ಚಿದರೆ ನೀಡಲಾಗುವ ಪರಿಹಾರ ಹೆಚ್ಚಳವಾಗಬೇಕು. ಪರಿಹಾರ ಪಡೆಯಲು ಹಾಲಿ ಇರುವ ನಿಯಮಗಳನ್ನು ಸಡಲಿಕೆ ಮಾಡಬೇಕು. ಪ್ರತಿ ಟನ್ ಕಬ್ಬಿಗೆ ಹೆಚ್ಚಿನ ಬೆಲೆ ನಿಗದಿ ಮಾಡಬೇಕು. ರಾಗಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನಬೆಟ್ಟ ಪೋಡುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಹೊರ ಜಿಲ್ಲೆಗಳ ಕಬ್ಬನ್ನು ಇಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಅರೆಯಬಾರದು. ಕಬ್ಬಿಗೆ ಎಫ್.ಆರ್.ಪಿ 500 ರೂ. ಕೊಡಿಸಬೇಕು. ಆನೆ ಮಡುವಿನ ಕೆರೆಗೆ ನೀರು ಹರಿಸಬೇಕು. ಎಪಿಎಂಸಿಗಳಲ್ಲಿ ಪಡೆಯುತ್ತಿರುವ ಕಮಿಷನ್ ನಿಲ್ಲಬೇಕು ಎಂಬುದು ಸೇರಿದಂತೆ ಹಲವಾರು ವಿಷಯಗಳನ್ನು ಸಭೆಯಲ್ಲಿ ವಿವರವಾಗಿ ಪ್ರಸ್ತಾಪಿಸಿದರು. 

ಎಲ್ಲಾ ಅಹವಾಲು, ಸಮಸ್ಯೆಗಳನ್ನು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಮಾತನಾಡಿ ಇಲಾಖೆಗಳು ರೈತರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ಕಮಿಷನ್ ಪಡೆಯಬಾರದು. ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಬೇಕು. ವಾರಕ್ಕೆ ಒಂದು ದಿನ ರೈತರ ಸಭೆ ಕರೆದು ಅವರ ಸಮಸ್ಯೆಗಳನ್ನು ಪರಿಹರಿಸಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಹಾಡಿ ಪೋಡುಗಳ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ವಿದ್ಯುತ್ ಸಂಪರ್ಕ ಕಡಿತ ಮಾಡಬಾರದು ಎಂದರು. 

ಜಿಲ್ಲೆಯ ಪ್ರಕೃತಿ ಸಂಪತ್ತು ಲೂಟಿಯಾಗುವುದನ್ನು ತಡೆಯಬೇಕು. ಅಕ್ರಮ ಗಣಿಗಾರಿಕೆಗೆ ಅವಕಾಶವಾಗಬಾರದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಬೇಕು. ನಿರ್ದಾಕ್ಷಿಣ್ಯವಾಗಿ ಅಕ್ರಮವಾಗಿ ಗಣಿಗಾರಿಕೆ ಮಾಡುವವರ ವಿರುದ್ದ ಕ್ರಮ ಜರುಗಿಸಿ ಎಂದು ಸಚಿವರು ತಿಳಿಸಿದರು.  

ಆನೆಮಡುವಿನ ಕೆರೆಗೆ ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನೀರು ಹರಿಸಲಾಗುತ್ತದೆ. ಕಬ್ಬು ಬೆಳೆಗಾರರ ಸಮಸ್ಯೆ ತಮಗೆ ಅರಿವಿದೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಗಮನಕ್ಕೆ ತರಲಾಗುವುದು. ರೈತರಿಗೆ ಸಾಗುವಳಿ ಪತ್ರ, ದುರಸ್ತಿ, ಪೋಡು ಇನ್ನಿತರ ಕಂದಾಯ ಇಲಾಖೆಯಿಂದ ಆಗಬೇಕಿರುವ ಕೆಲಸಗಳಿಗೆ ತ್ವರಿತವಾಗಿ ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. 

     ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎನ್. ಮಹೇಶ್, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕುಲಕರ್ಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಂಕರೇಗೌಡ, ಹಿರಿಯ ಅರಣ್ಯ ಅಧಿಕಾರಿಗಳಾದ ಡಾ. ಸಂತೋಷ್ ಕುಮಾರ್, ರಮೇಶ್ ಕುಮಾರ್, ದೀಪಾ, ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಮಹೇಶ್ ಪ್ರಭು, ಡಾ. ಗುರುಪ್ರಸಾದ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಹೆಗ್ಗವಾಡಿಪುರ ಮಹೇಶ್‍ಕುಮಾರ್, ಕಡಬೂರು ಮಂಜುನಾಥ್, ಶಾಂತಮಲ್ಲಪ್ಪ, ಶೈಲೇಂದ್ರ, ಮಹದೇವಪ್ಪ, ಸೇರಿದಂತೆ ಇತರೆ ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಗೂ ಮೊದಲು ಸಚಿವರು ಕೆರೆಗಳಿಗೆ ನೀರು ತುಂಬಿಸುವ ಸಂಬಂಧ ತಮ್ಮಡಹಳ್ಳಿ ಕೆರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
------

ಜಿಲ್ಲೆಗೆ ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಸೂಚನೆ

 ಚಾಮರಾಜನಗರ, ನವೆಂಬರ್ 18 :- ಮುಖ್ಯಮಂತ್ರಿಯವರು ಜಿಲ್ಲೆಗೆ ಡಿಸೆಂಬರ್ ಮೊದಲ ವಾರದಲ್ಲಿ ಆಗಮಿಸಿ ನೆರವೇರಿಸಲಿರುವ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಕ್ಕೆ ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.  ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮುಖ್ಯಮಂತ್ರಿಯವರ ಜಿಲ್ಲೆಯ ಭೇಟಿ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಯವರು ಜಿಲ್ಲೆಗೆ ಡಿಸೆಂಬರ್ 2 ಇಲ್ಲವೇ 4 ರಿಂದ 5ರೊಳಗೆ ಒಂದು ದಿನ ಭೇಟಿ ನೀಡಲಿದ್ದಾರೆ. ಚಾಮರಾಜನಗರ ಪಟ್ಟಣ ಹಾಗೂ ಹನೂರಿನಲ್ಲಿ ಕಾರ್ಯಕ್ರಮ ಏರ್ಪಾಡಾಗಿದ್ದು, ಬಳಿಕ ಮುಖ್ಯಮಂತ್ರಿಯವರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ಮಲೆ ಮಹದೇಶ್ವರ ಅಭಿವೃದ್ದಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ದತಾ ಕ್ರಮಗಳನ್ನು ವಹಿಸುವಂತೆ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. 

ಒಂದು ಸಾವಿರ ಕೋಟಿ ರೂ. ಗಳ ಅಭಿವೃದ್ದಿ ಕಾರ್ಯಗಳ ಉದ್ಘಾಟನೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಯವರು ನೆರವೇರಿಸುವರು. ವಿವಿಧ ಇಲಾಖೆಗಳ ವ್ಯಾಪ್ತಿಯ ಫಲಾನುಭವಿಗಳಿಗೆÀ ಸವಲತ್ತುಗಳನ್ನು ವಿತರಿಸುವರು. ಈ ಬಹುದೊಡ್ಡ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಯೋಜನಾ ಬದ್ದವಾಗಿ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು. 

  ಪ್ರತಿ ಇಲಾಖೆಗಳು ತಮ್ಮ ವ್ಯಾಪ್ತಿಯ ಅಭಿವೃದ್ದಿ ಕಾರ್ಯಗಳ ಕುರಿತು ಸಂಪೂರ್ಣ ಮಾಹಿತಿ ಒದಗಿಸಬೇಕು. ಫಲಾನುಭವಿಗಳ ಆಧಾರಿತ ಕಾರ್ಯಕ್ರಮಗಳಿಗೆ ಅನುಗುಣವಾಗಿ ಕಾರ್ಯಕ್ರಮದಲ್ಲಿ ಸೌಲಭ್ಯಗಳನ್ನು ವಿತರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು. 

ಕೊಳ್ಳೇಗಾಲದಿಂದ ಹನೂರುವರೆಗೆ ಕೆಶಿಪ್ ಯೋಜನೆಯಡಿ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು., ಕಾಮಗಾರಿ ವೇಗ ನೀಡಿ ಎಲ್ಲಿಯೂ ಅಡಚಣೆಯಾಗದಂತೆ ರಸ್ತೆ ಕಾಮಗಾರಿ ನಿರ್ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು. 

ಜಿಲ್ಲೆಯ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು 1400 ಕೋಟಿ ರೂ. ವೆಚ್ಚದಲ್ಲಿ ವಿಸೃತ ಯೋಜನಾ ವರದಿ ಸಿದ್ದವಾಗಿದೆ. ಎರಡು ಹಂತಗಳಲ್ಲಿ ಯೋಜನೆ ಕೈಗೊಳ್ಳುವÀ ಸಂಬಂಧ ಅಗತ್ಯ ಪ್ರಕ್ರಿಯೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಿರುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಮುಂದಾಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು. 

ಶಾಸಕರಾದ ಎನ್. ಮಹೇಶ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಹಿರಿಯ ಅರಣ್ಯ ಅಧಿಕಾರಿಗಳಾದ ಡಾ. ಸಂತೋಷ್ ಕುಮಾರ್, ದೀಪಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. 

 ------

ನ. 21ರಂದು ಎಸ್.ಸಿ, ಎಸ್.ಟಿ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ 

      ಚಾಮರಾಜನಗರ, ನವೆಂಬರ್ 18 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ಕಾರ್ಯಕ್ರಮವನ್ನು ನವೆಂಬರ್ 21ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕಿನ ಸಂತೇಮರಹಳ್ಳಿಯ ಅರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ಶಾಲೆ ಆವರಣದಲ್ಲಿ ಆಯೋಜಿಸಲಾಗಿದೆ. 

     ಶಾಸಕರಾದ ಎನ್. ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಪಿ. ಶಂಕರಪ್ಪ, ಉಪಾಧ್ಯಕ್ಷರಾದ ಜ್ಯೋತಿ, ಕರ್ನಾಟಕ ಜಾನಪದ ಅಕಾಡಮಿ ಮಾಜಿ ಸದಸ್ಯರಾದ ಸಿ.ಎಂ. ನರಸಿಂಹಮೂರ್ತಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್ಸ್‍ಗೆ ಸಹಾಯಧನ

     ಚಾಮರಾಜನಗರ, ನವೆಂಬರ್ 18 :- ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‍ಕೆವಿವೈ) ಯಡಿ ಪ್ಲಾಸ್ಟಿಕ್ ಕ್ರೇಟ್ಸ್‍ಗೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುμÁ್ಠನಗೊಳಿಸಲಾಗುತ್ತಿದೆ. 

     ಯೋಜನೆಯಡಿ ತೋಟಗಾರಿಕೆ ಬೆಳೆಗಳ ಫಸಲಿನಲ್ಲಿ ಹಣ್ಣು, ತರಕಾರಿ ಬೆಳೆ ಕೊಯ್ಲೂತ್ತರ ನಷ್ಟವನ್ನು ತಡೆಗಟ್ಟಲು ಹಾಗೂ ಸಮರ್ಪಕ ಕೊಯ್ಲೂತ್ತರ ನಿರ್ವಹಣೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಪ್ಲಾಸ್ಟಿಕ್ ಕ್ರೇಟ್ಸ್ ಬಳಕೆ ಪ್ರಮುಖ ಪಾತ್ರವಹಿಸುತ್ತದೆ. ಇಲಾಖೆ ಅನುಮೋದಿತ ಕಂಪನಿ, ಸಂಸ್ಥೆಗಳಿಂದ ಮಾತ್ರ ಖರೀದಿಸುವ ಪ್ಲಾಸ್ಟಿಕ್ ಕ್ರೇಟ್ಸ್‍ಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ. 50ರ ಸಹಾಯಧನ (ಆರ್‍ಕೆವಿವೈ ಯೋಜನೆಯಡಿ- ಶೇ. 25, ಹೊಂದಾಣಿಕೆ ವೆಚ್ಚ ಸಿಎಚ್‍ಡಿ ಯೋಜನೆಯಡಿ- ಶೇ.25)  ರಂತೆ ಎರಡು ಕಂತುಗಳಲ್ಲಿ ಒಟ್ಟು 7500 ರೂ. ಗಳನ್ನು ಪ್ರತಿ ಹೆಕ್ಟೇರ್ ಗೆ (ಗರಿಷ್ಟ ಎರಡು ಹೆಕ್ಟೇರ್ ಮೀರದಂತೆ) ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

     ಸೌಲಭ್ಯಕ್ಕಾಗಿ ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಗಣಕಿಕೃತ ಬೆಳೆ ದೃಡೀಕರಣ, ತೋಟಗಾರಿಕೆ ಬೆಳೆಯಿರುವ ತಾಕಿನ ಪೋಟೊ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಅಗತ್ಯ ದಾಖಲೆಗಳನ್ನು ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಅನುಮೋದಿತ ಕಂಪನಿ, ಸಂಸ್ಥೆ ವಿವರವನ್ನು ಪಡೆದು ಪ್ಲಾಸ್ಟಿಕ್ ಕ್ರೇಟ್ಸ್‍ಗಳನ್ನು ಖರೀದಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವಾಣಿಜ್ಯ ಹಣ್ಣಿನ ಬೆಳೆಗಳ ನಿರ್ವಹಣೆಗೆ ತೋಟಗಾರಿಕೆ ಇಲಾಖೆಯಿಂದ ಸಲಹೆ

      ಚಾಮರಾಜನಗರ, ನವೆಂಬರ್ 18 :- ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‍ಕೆವಿವೈ) ಯಡಿ 2022-23ನೇ ಸಾಲಿನಲ್ಲಿ ಜಿಲ್ಲೆಯ ವಾಣಿಜ್ಯ ಹಣ್ಣಿನ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಸಪೋಟ, ದಾಳಿಂಬೆ, ನಿಂಬೆ, ಗೋಡಂಬಿ ಇತ್ಯಾದಿ ಬೆಳೆಗಳ ಮೇಲಾವರಣ ನಿರ್ವಹಣೆಗೆ ತೋಟಗಾರಿಕೆ ಇಲಾಖೆ ಸಲಹೆ ಮಾಡಿದೆ. 

     ಮಾವು, ಸೀತಾಫಲ, ಸೀಬೆ, ಸಪೋಟ, ದಾಳಿಂಬೆ, ನಿಂಬೆ, ಗೋಡಂಬಿ ಇತ್ಯಾದಿ ಬೆಳೆಗಳನ್ನು ಅಧಿಕ ಸಾಂದ್ರತೆ ನಾಟಿ ಪದ್ದತಿಯಲ್ಲಿ ಬೆಳೆಯಾಲಾಗುತ್ತಿದ್ದು, ಸದರಿ ಪದ್ದತಿಯಲ್ಲಿ ಗಿಡಗಳ ಅಂತರ ಅತಿ ಕಡಿಮೆ ಇರುವುದರಿಂದ ಗಿಡಗಳ ಮೇಲಾವರಣ ನಿರ್ವಹಣೆ ಅತ್ಯಾವಶ್ಯಕವಾಗಿರುತ್ತದೆ. ಇದರಿಂದ ಗುಣಮಟ್ಟದ ಹಣ್ಣುಗಳನ್ನು ಪಡೆಯುವುದಲ್ಲದೆ ತೋಟದ ನಿರ್ವಹಣೆ ಸುಲಭವಾಗಿರುತ್ತದೆ.

     ಮೇಲಾವರಣ ನಿರ್ವಹಣೆಗಳಾದ ಕೀಟರೋಗ ಬಾದಿತ, ನೆಲಕ್ಕೆ ತಾಗುವ ಅನಗತ್ಯ ರೆಂಬೆ, ಕೊಂಬೆಗಳನ್ನು ಕತ್ತರಿಸಬೇಕು, ಸೂರ್ಯನ ಕಿರಣ ಎಲ್ಲಾ ಭಾಗಗಳಿಗೂ ಬೀಳುವಂತೆ ಮಾಡಬೇಕು, ಗಿಡ ಬೆಳೆಯಲು ಆಕಾರ ಕೊಡುವುದು ಪುನಶ್ಚೇತನ ಕೈಗೊಳ್ಳಲು ಇತ್ಯಾದಿ ಚಟುವಟಿಕೆಯನ್ನು ಕೈಗೊಳ್ಳಲು ಸದರಿ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ಶೇ. 25 ರಂತೆ 10000 ರೂ. ಗಳನ್ನು ಪ್ರತಿ ಹೆಕ್ಟೇರ್ ಗೆ (ಗರಿಷ್ಟ 2 ಹೆಕ್ಟೇರ್ ಗೆ ಮೀರದಂತೆ) ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. 

     ಅಧಿಕ ಸಾಂದ್ರತೆ ಪದ್ದತಿಯಲ್ಲಿ ಹಣ್ಣಿನ ಬೆಳೆ ನಾಟಿಮಾಡಿರುವ ಆಸಕ್ತ ರೈತರು ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ತಾಕಿನಲ್ಲಿ ಹಣ್ಣಿನ ಬೆಳೆಯೊಂದಿಗೆ ಛಾಯಚಿತ್ರ, ಗಣಕೀಕೃತ ಬೆಳೆ ದೃಡೀಕರಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರ ಇತ್ಯಾದಿ ದಾಖಲೆಗಳನ್ನು ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಮಾಹಿತಿ ಪಡೆದು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

---

ಕೇಂದ್ರ ಸರ್ಕಾರದ ಸೇವೆ, ಪ್ರಧಾನಿಯವರ ದೂರದರ್ಶಿತ್ವ 2047 ವಿಷಯ, ಬುಡಕಟ್ಟು ಜನತೆ ಅಭಿವೃದ್ದಿಯ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ 

     ಚಾಮರಾಜನಗರ, ನವೆಂಬರ್ 18 - ಭಾರತ ಸರ್ಕಾರದ 8 ವರ್ಷಗಳ ಸೇವೆ ಹಾಗೂ ಪ್ರಧಾನ ಮಂತ್ರಿಯವರ ದೂರದರ್ಶಿತ್ವ - 2047 ಹಾಗೂ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ ಹಾಗೂ ಮೈಸೂರು ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಸಂಯುಕ್ತಾಶ್ರಯದಲ್ಲಿ ಕೊಳ್ಳೇಗಾಲದ ಜೆ.ಎಸ್‍ಎಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಉದ್ಘಾಟಿಸಿದರು.

     ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಮುಂಡಾ ಎನ್ನುವ ಬುಡಕಟ್ಟು ತಾಂಡಾದಲ್ಲಿ ಜನಿಸಿದ ಬಿರ್ಸಾ ರವರು ತಮ್ಮ 24ನೇ ವಯಸ್ಸಿನಲ್ಲಿ ಬ್ರಿಟೀಷರ ವಿರುದ್ಧ ಬುಡಕಟ್ಟು ಜನರ ಉದ್ದಾರಕ್ಕಾಗಿ, ಅವರ ಹಕ್ಕುಗಳಿಗಾಗಿ, ದಾಸ್ಯ ಮುಕ್ತಿಗಾಗಿ ಮಾಡಿದ ಹೋರಾಟದ ಫಲವಾಗಿ ಅವರನ್ನು ಬುಡಕಟ್ಟು ಜನಸಮುದಾಯ ಭಗವಾನ್ ಎನ್ನುವ ಪಟ್ಟವನ್ನು ಕೊಟ್ಟಿತು ಎಂದರು. 

     ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಮುಖ್ಯವಾಗಿ ಸರ್ವರಿಗೂ ಸೂರು, ಆಯುμÁ್ಮನ್ ಭಾರತ, ಆರೋಗ್ಯ ರಕ್ಷಣೆ ಮತ್ತು ಸಾಂಕ್ರಾಮಿಕ ನಿರ್ವಹಣೆ, ಸಶಕ್ತ ರೈತ ಸಮೃದ್ಧ ಭಾರತ, ಆದಿವಾಸಿಗಳ ಸರ್ವತೋಮುಖ ಅಭಿವೃದ್ದಿಯ ಖಾತ್ರಿ, ಹರ್ ಘರ್ ಜಲ್, ರಾಷ್ಟ್ರೀಯ ಶಿಕ್ಷಣ ನೀತಿ 2020, ದಿವ್ಯಾಂಗರ ಸಬಲೀಕರಣ ಮತ್ತು ಸಂಪರ್ಕಿತ ಭಾರತ ನಿರ್ಮಾಣ ಇವುಗಳ ಮೂಲಕ ದೇಶವನ್ನು ಅಭಿವೃದ್ಧಿಯ ಮಾರ್ಗದಲ್ಲಿ ಪ್ರಧಾನ ಮಂತ್ರಿಯವರು ಮುನ್ನಡೆಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. 

      ಕಾರ್ಯಕ್ರಮದಲ್ಲಿ ಶಾಸಕರಾದ ಎನ್. ಮಹೇಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಟಿ.ಪಿ ಶಿವಕುಮಾರ್, ಕೇಂದ್ರ ಸಂವಹನ ಇಲಾಖೆಯ ಉಪನಿರ್ದೇಶಕರಾದ ಡಾ. ಟಿ.ಸಿ. ಪೂರ್ಣಿಮಾ, ಮೈಸೂರು ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ರಾಜೇಶ್ ಗೌಡ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Thursday, 17 November 2022

17-11-2022 ಬುಡಕಟ್ಟು ಜನತೆ ಅಭಿವೃದ್ದಿಯ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

ನ. 18ರಂದು ಕೊಳ್ಳೇಗಾಲದಲ್ಲಿ ಕೇಂದ್ರ ಸರ್ಕಾರದ ಸೇವೆ, ಪ್ರಧಾನಿಯವರ ದೂರದರ್ಶಿತ್ವ 2047 ವಿಷಯ, ಬುಡಕಟ್ಟು ಜನತೆ ಅಭಿವೃದ್ದಿಯ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ 
       ಚಾಮರಾಜನಗರ, ನವೆಂಬರ್ 17 - ಭಾರತ ಸಾತ್ವಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟ, ಕೇಂದ್ರ ಸರ್ಕಾರದ 8 ವರ್ಷಗಳ ಸೇವೆ ಹಾಗೂ ಪ್ರಧಾನ ಮಂತ್ರಿಯವರ ದೂರದರ್ಶಿತ್ವ 2047 ವಿಷಯವನ್ನೊಳಗೊಂಡ ಛಾಯಾಚಿತ್ರ ಪ್ರದರ್ಶನವನ್ನು ನವೆಂಬರ್ 18 ಮತ್ತು 19ರಂದು  ಕೊಳ್ಳೆಗಾಲದ ಜೆಎಸ್‍ಎಸ್ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ಆದಿವಾಸಿಗಳ ವೀರೋಚಿತ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿ ಅಂಗವಾಗಿ ಆಚರಿಸುವ ಜನಜಾತೀಯ ಗೌರವದ ಸಪ್ತಾಹವಾಗಿಯೂ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಬುಡಕಟ್ಟು ಜನತೆಯ ಅಭಿವೃದ್ಧಿಯ ಬಗ್ಗೆಯೂ ಛಾಯಾಚಿತ್ರ ಪ್ರದರ್ಶನವಿರಲಿದೆ. 
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮೈಸೂರಿನ ಕೇಂದ್ರ ಸಂವಹನ ಇಲಾಖೆ ಆಯೋಜಿಸುತ್ತಿರುವ ಈ ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನ ಸಂಸ್ಥೆ ಇವರ ಸಹಯೋಗದಲ್ಲಿ ಸರ್ಕಾರದ ವಿವಿಧ ಇಲಾಖೆಗಳು ಮತ್ತು ವಿದ್ಯಾಸಂಸ್ಥೆಗಳ ನೆರವಿನೊಂದಿಗೆ ಆಯೋಜಿಸಲಾಗಿದೆ. 
ಕೊಳ್ಳೆಗಾಲದ ಜೆಎಸ್‍ಎಸ್ ಕಾಲೇಜಿನ ಆವರಣದಲ್ಲಿ ನವೆಂಬರ್ 18ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಲನೆ ನೀಡುವರು. ಶಾಸಕರಾದ ಎನ್. ಮಹೇಶ್ ಹಾಗೂ ಕೊಳ್ಳೇಗಾಲ ನಗರಸಭಾ ಅಧ್ಯಕ್ಷರಾದ ಸಿ.ಎನ್. ರೇಖಾ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಘನ ಉಪಸ್ಥಿತಿ ವಹಿಸುವರು. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬುಡಕಟ್ಟು ಸಂಶೋಧನ ಸಂಸ್ಥೆಯ ನಿರ್ದೇಶಕರಾದ ರಾಜೇಶ್ ಜಿ. ಗೌಡ ಭಾಗವಹಿಸಲಿದ್ದು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುವರು.
ಕೇಂದ್ರ ಸರ್ಕಾರ ಜನತೆಯ ಉಪಯೋಗಕ್ಕಾಗಿ ಜಾರಿಗೆ ತಂದಿರುವ ಹಲವು ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನದಲ್ಲಿ ಕರ್ನಾಟಕದ ಬುಡಕಟ್ಟು ಜನರ ವಿವರ, ಸರ್ವರಿಗೂ ಆರೋಗ್ಯ ಒದಗಿಸುವ ಆಯುಷ್ಮಾನ್ ಭಾರತ, ಆರೋಗ್ಯ ರಕ್ಷಣೆ ಮತ್ತು ಸಾಂಕ್ರಾಮಿಕ ನಿರ್ವಹಣೆ, ಸಶಕ್ತ ರೈತ ಸಮೃದ್ಧ ಭಾರತ, ಆದಿವಾಸಿಗಳ ಸರ್ವತೋಮುಖ ಅಭಿವೃದ್ದಿಯ ಖಾತ್ರಿ, ಹರ್ ಘರ್ ಜಲ್, ರಾಷ್ಟ್ರೀಯ ಶಿಕ್ಷಣ ನೀತಿ 2020, ದಿವ್ಯಾಂಗರ ಸಬಲೀಕರಣ, ಸಂಪರ್ಕಿತ ಭಾರತ ನಿರ್ಮಾಣ ಮುಂತಾದ ಹಲವು ಯೋಜನೆಗಳ ಮಾಹಿತಿ ದೊರೆಯಲಿದೆ. 
ಭಾರತ ಸ್ವಾತಂತ್ರ್ಯದ ಶತಮಾನೋತ್ಸವದ ಹೊತ್ತಿಗೆ ದೇಶದ ಪ್ರಗತಿಯನ್ನು ದೂರದರ್ಶಿತ್ವದಿಂದ ಮನಗಂಡಿರುವ ಪ್ರಧಾನಮಂತ್ರ್ರಿಯವರ ಪಂಚ ಸಂಕಲ್ಪದ ಪರಿಚಯವನ್ನೂ ಈ ಪ್ರದರ್ಶನ ಮಾಡಿಕೊಡಲಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಕನ್ನಡನಾಡಿನ ವೀರ ಮಹನೀಯರನ್ನು ಈ ಅಮೃತ ಮಹೋತ್ಸವದ ಸವಿ ಸಂದರ್ಭದಲ್ಲಿ ನೆನಪಿಸಿಕೊಳ್ಳುವ ಮತ್ತು ಸ್ವಾತಂತ್ರ್ಯ ಹೋರಾಟದ ವೀರಗಾಥೆಗಳನ್ನು ಮತ್ತು ಹೆಜ್ಜೆ ಗುರುತುಗಳನ್ನು ದಾಖಲಿಸುವ ಪ್ರದರ್ಶನ ಇದಾಗಿದೆ. 
ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ರ್ಯಾಲಿ, ಜಾಗೃತಿ ಜಾಥಾ, ವಿದ್ಯಾರ್ಥಿಗಳು ಹಾಗೂ ಆದಿವಾಸಿಗಳಿಗಾಗಿ ಸ್ಫರ್ಧೆಗಳನ್ನು ನಡೆಸಲಾಗುತ್ತದೆ. ಜನತೆಗೆ ಉಪಯುಕ್ತ ಮಾಹಿತಿ ಒದಗಿಸುವ ಉಪನ್ಯಾಸ, ರಾಷ್ಟ್ರಾಭಿಮಾನವನ್ನು ಸ್ಫುರಿಸುವ ಚಲನಚಿತ್ರ ಪ್ರದರ್ಶನ, ಭಾರತ ಸರ್ಕಾರದ ನಾಟಕ ಮತ್ತು ಸಂಗೀತ ವಿಭಾಗದ ಕಲಾ ತಂಡ ಮತ್ತು ಸ್ಥಳೀಯ ಆದಿವಾಸಿ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 
ಸಾರ್ವಜನಿಕರಿಗೆ, ಮಹಿಳೆಯರಿಗೆ, ಫಲಾನುಭವಿಗಳಿಗೆ, ವಿದ್ಯಾರ್ಥಿಗಳಿಗೆ ಈ ಛಾಯಾಚಿತ್ರ ಪ್ರದರ್ಶನ ಉಪಯುಕ್ತವಾಗಲಿದೆ ಎಂದು ಮೈಸೂರಿನ ಕೇಂದ್ರ ಸಂವಹನ ಇಲಾಖೆಯ ಉಪನಿರ್ದೇಶಕರಾದ ಡಾ. ಟಿ.ಸಿ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----ಛಾಯಾಚಿತ್ರ ಪ್ರದರ್ಶನ ಹಿನ್ನೆಲೆಯಲ್ಲಿ ಪೂರ್ವಭಾವಿ ಪ್ರಚಾರ : ಗಮನಸೆಳೆದ ಬುಡಕಟ್ಟು ಸಂಸ್ಕøತಿಯ ಕಾರ್ಯಕ್ರಮಗಳು
     ಚಾಮರಾಜನಗರ, ನವೆಂಬರ್ 17 - ಕೊಳ್ಳೇಗಾಲದಲ್ಲಿ ನಾಳೆ (ನವೆಂಬರ್ 18ರಿಂದ) ಆರಂಭಗೊಳ್ಳಲಿರುವ ಎರಡು ದಿನಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಸಂಸ್ಕøತಿ ಹಬ್ಬದ ಪ್ರಯುಕ್ತ ಪೂರ್ವ ಭಾವಿ ಪ್ರಚಾರ ಕಾರ್ಯಕ್ರಮ ಇಂದು ನಡೆಯಿತು. 
      ಕೊಳ್ಳೇಗಾಲದÀ ಜೆಎಸ್‍ಎಸ್ ಕಾಲೇಜು ಆವರಣದಿಂದ ಹೊರಟ ಜಾಗೃತಿ ಜಾಥಾಕ್ಕೆ ನಗರಸಭಾ ಅಧ್ಯಕ್ಷರಾದ ರೇಖಾ ಸಿ.ಎನ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಉಪ ನಿರ್ದೇಶಕರಾದ ಡಾ. ಟಿ.ಸಿ. ಪೂರ್ಣಿಮಾ ಉಪಸ್ಥಿತರಿದ್ದರು. ಜನಜಾತೀಯ ಗೌರವ ದಿವಸ, ನಂತರ ವಿವಿಧ ಸ್ಫರ್ಧಾ ಚಟುವಟಿಕೆಗಳನ್ನು ನಡೆಸಲಾಯಿತು. 
     ಏಕಲವ್ಯ ಶಾಲೆಯ ಮಕ್ಕಳು ಬುಡಕಟ್ಟು ಸಂಸ್ಕøತಿಯನ್ನು ಪ್ರತಿಬಿಂಬಿಸುವ ನೃತ್ಯಗೀತ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು. ಕಾಲೇಜಿನ ಆವರಣದಲ್ಲಿ ನಡೆದ ವಿವಿಧ ಸ್ಫರ್ಧೆಗಳಲ್ಲಿ ರಂಗೋಲಿ, ವೇಷಭೂಷಣ ಮತ್ತು ಏಕಪಾತ್ರಾಭಿನಯ, ಚಿತ್ರಕಲಾ, ಸಾಮೂಹಿಕ ನೃತ್ಯ ಇನ್ನಿತರ ಸ್ಫರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

17-11-2022 ಚಾಮರಾಜನಗರ ಸುದ್ದಿ

ವಿಶ್ವ ವಿಶೇಷಚೇತನರ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ 

       ಚಾಮರಾಜನಗರ, ನವೆಂಬರ್ 17 :- ವಿಶ್ವ ವಿಶೇಷಚೇತನರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

     ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮ ಏರ್ಪಾಡು ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

     ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 3ರಂದು ನಿಗದಿಯಾಗಿದೆ. ಈ ಕಾರ್ಯಕ್ರಮಕ್ಕೆ ಪುರ್ವಭಾವಿಯಾಗಿ ವಿಶೇಷಚೇತನರಿಗೆ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಇದೇ ನವೆಂಬರ್ 29ರಂದು ನಡೆಸಬೇಕಿದೆ. ಹೀಗಾಗಿ ಈ ಎರಡು ಕಾರ್ಯಕ್ರಮಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

      ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗಾಗಿ ಭಾಗವಹಿಸಲು ವಿಶೇಷಚೇತನರಿಗೆ ಉಚಿತವಾಗಿ ಬಸ್‍ನಲ್ಲಿ ಪ್ರಯಾಣಿಸುವ ಸೌಲಭ್ಯಕ್ಕೆ ಅಗತ್ಯ ಕ್ರಮವಹಿಸಬೇಕು. ಸ್ಪರ್ಧೆಗಳಿಗೆ ತೀರ್ಪುಗಾರರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ನಿಯೋಜಿಸಬೇಕು. ಕ್ರೀಡಾಕೂಟಕ್ಕೆ ಅಗತ್ಯವಿರುವ ನೆರವನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ನೀಡಬೇಕು ಎಂದರು. 

      ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಯ ದಿನದಂದು ಮಧ್ಯಾಹ್ನದ ಉಪಹಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಶಾಮಿಯಾನ, ಸ್ವಚ್ಚತೆ, ಇನ್ನಿತರ ಅವಶ್ಯಕ ಸಿದ್ದತೆಗಳು ಇರಬೇಕು. ಡಿಸೆಂಬರ್ 3ರಂದು ನಗರದ ಜೆ.ಎಚ್. ಪಟೇಲ್  ಸಭಾಂಗಣದಲ್ಲಿ  ವಿಶ್ವ ವಿಶೇಷಚೇತನರ ದಿನಾಚರಣೆ ವೇದಿಕೆ ಕಾರ್ಯಕ್ರಮ ಹಾಗೂ ಜಾಥಾ ಮೆರವಣಿಗೆಗೆ ಪೂರಕ ಕ್ರಮಗಳನ್ನು ವಹಿಸಬೇಕು. ಕಲಾತಂಡಗಳ ನಿಯೋಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು. 

     ಸಮಾರಂಭದ ಎಲ್ಲಾ ಪೂರ್ವ ಸಿದ್ದತೆಗಳು ಹಾಗೂ ನಿರ್ವಹಣೆಗಾಗಿ ವಿವಿಧ ಸಮಿತಿಗಳು ರಚನೆಯಾಗಲಿವೆ. ಸಮಿತಿಯಲ್ಲಿ ನೇಮಕವಾಗಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಕಾರ್ಯಕ್ರಮ ಯಶಸ್ವಿಯಾಗುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು. 

     ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಡಿವೈಎಸ್‍ಪಿ ಪ್ರಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರರಾದ ಸಿ.ಜಿ. ರವಿಶಂಕರ್, ಕೆ.ಬಿ. ಆನಂದಪ್ಪ ನಾಯಕ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಚಾಮರಾಜನಗರ ನಗರಸಭೆ ಆಯುಕ್ತರಾದ ರಾಮದಾಸ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಸಿ. ದೀಪಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಇತರೆ ಅಧಿಕಾರಿಗಳು, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ದಿ ಸಮಿತಿಯ ಪದಾಧಿಕಾರಿಗಳಾದ ಎನ್. ಕೃಷ್ಣಮೂರ್ತಿ, ಎಂ. ರಮೇಶ್, ರೂಪೇಶ್, ರಾಜಣ್ಣ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು. 

---------

ಹರವೆ ಗ್ರಾಮ ಪಂಚಾಯಿತಿ ಕಚೇರಿ, ಹಾಸ್ಟೆಲ್, ಗ್ರಂಥಾಲಯಕ್ಕೆ ಜಿ.ಪಂ. ಸಿಇಒ ಭೇಟಿ : ಪರಿಶೀಲನೆ 

      ಚಾಮರಾಜನಗರ, ನವೆಂಬರ್ 17 :- ಚಾಮರಾಜನಗರ ತಾಲೂಕು ಹರವೆ ಗ್ರಾಮ ಪಂಚಾಯಿತಿ ಕಚೇರಿ, ಹಾಸ್ಟೆಲ್, ಗ್ರಂಥಾಲಯಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

     ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ಎನ್.ಆರ್.ಎಲ್.ಎಂ, ಅಮೃತ ಗ್ರಾಮ ಪಂಚಾಯಿತಿ ಹಾಗೂ ಇತರೆ ಯೋಜನೆಗಳಡಿ ಅನುಷ್ಠಾನಗೊಳಿಸಲಾಗಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. 

        ಬಾಪೂಜಿ ಸೇವಾಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಪರಿಶೀಲಿಸಿ, ಸಕಾಲದಲ್ಲಿ ಸೇವೆಗಳನ್ನು ಸಮರ್ಪಕವಾಗಿ ತಲುಪಿಸಲು ಸೂಚಿಸಿದರು. ತೆರಿಗೆ ಪರಿಷ್ಕರಣೆ ಮಾಡಿ ವಸೂಲಾತಿಗೆ ಕ್ರಮವಹಿಸುವಂತೆ ಹಾಗೂ ಅಪೂರ್ಣಗೊಂಡಿರುವ ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನ (ಆರ್.ಜಿ.ಪಿ.ಎಸ್.ಎ) ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ತುರ್ತು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.
 
ಗ್ರಾಮ ಪಂಚಾಯಿತಿಯ ಗ್ರಂಥಾಲಯಕ್ಕೆ ಭೇಟಿ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಪಟ್ಟ ಪುಸ್ತಕಗಳನ್ನು ಇಡಲು ಹಾಗೂ ಹೆಚ್ಚಿನ ಸದಸ್ಯತ್ವ ನೋಂದಣಿ, ಬಯಲು ಗ್ರಂಥಾಲಯ ಅನುಷ್ಠಾನ ಸಂಬಂಧ ಅಂದಾಜು ಪಟ್ಟಿಯನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗೆ ಸೂಚನೆ ನೀಡಿದರು. 

ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿಯನ್ನು ವೀಕ್ಷಿಸಿದರು. ಹಾಸಿಗೆ, ಹೊದಿಕೆ, ಮಂಚ, ಕೊಠಡಿಗಳು, ಅಡುಗೆ ಕೋಣೆ, ಕುಡಿಯುವ ನೀರು, ಸ್ನಾನಗೃಹ ಮತ್ತು ಶೌಚಾಲಯಗಳನ್ನು ಪರಿಶೀಲಿಸಿದರು. ಸ್ವಚ್ಛತೆಯನ್ನು ಕಾಪಾಡಲು ಸೂಚಿಸಿದರು.

     ವಿದ್ಯಾರ್ಥಿನಿಲಯದಲ್ಲಿ ಗ್ರಂಥಾಲಯ ತೆರೆಯಬೇಕು. ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತಹ ಪುಸ್ತಕಗಳು, ದಿನಪತ್ರಿಕೆಗಳು ಹಾಗೂ ನಿಯತಕಾಲಿಕಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿದ್ಯಾರ್ಥಿಗಳ ಜೊತೆ ಕುಂದುಕೊರತೆ ವ್ಯಾಸಂಗ ಕುರಿತು ಚರ್ಚಿಸಿದರು.

     ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖಾ ವತಿಯಿಂದ ಜಲಜೀವನ್ ಮಿಷನ್ ಯೋಜನೆಯಡಿ ಹರವೆ ಗ್ರಾಮದಲ್ಲಿ ಅನುμÁ್ಠನಗೊಳಿಸಲಾಗುತ್ತಿರುವ ಮನೆ-ಮನೆಗೂ ಕಾರ್ಯಾತ್ಮಕ ನಳನೀರು ಸಂಪರ್ಕ ಕಾಮಗಾರಿ ಪರಿಶೀಲಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಇತರೆ ಅಧಿಕಾರಿಗಳು ಹಾಜರಿದ್ದರು. 
-------
ಚಾಮರಾಜನಗರ ನಗರಸಭೆ ಆನ್‍ಲೈನ್ ಸೇವೆಗೆ ಅಡಚಣೆ : ಸಹಕರಿಸಲು ಮನವಿ

      ಚಾಮರಾಜನಗರ, ನವೆಂಬರ್ 17 :- ಚಾಮರಾಜನಗರ ನಗರಸಭಾ ವ್ಯಾಪ್ತಿಯ ಪೌರಸುಧಾರಣಾ ಕೋಶದ ತಂತ್ರಾಂಶದಲ್ಲಿ ತಾಂತ್ರಿಕ ತೊಂದರೆ ಇರುವುದರಿಂದ ನಗರಸಭೆಯ ಆನ್‍ಲೈನ್ ಸೇವೆಗಳಾದ ಇ-ಆಸ್ತಿ, ಆಸ್ತಿ ತೆರಿಗೆ ಚಲನ್, ಉದ್ದಿಮೆ ಪರವಾನಗಿ, ಜಲನಿಧಿ, ಇನ್ನಿತರ ಸೇವೆಗಳನ್ನು ಆನ್‍ಲೈನ್ ನಲ್ಲಿ ನೀಡಲು ಅಡಚಣೆ ಉಂಟಾಗಿದೆ. ತಂತ್ರಾಂಶ ಸರಿಯಾದ ನಂತರ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗುತ್ತದೆ. ನಗರಸಭಾ ವ್ಯಾಪ್ತಿಯ ಆಸ್ತಿಯ ಮಾಲೀಕರು ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ. 

ನ. 19ರಂದು ಮಲ್ಲೆದೇವನಹಳ್ಳಿಯಲ್ಲಿ ವಿದ್ಯುತ್ ಅದಾಲತ್ 

      ಚಾಮರಾಜನಗರ, ನವೆಂಬರ್ 17 ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಉಪವಿಭಾಗದ ಕಾಗಲವಾಡಿ ವ್ಯಾಪ್ತಿಯ ಮಲ್ಲೇದೇವನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ವಿದ್ಯುತ್ ಅದಾಲತನ್ನು ನವೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. 

    ಸಂತೇಮರಹಳ್ಳಿಯ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಗ್ರಾಹಕರು ಹಾಜರಾಗಿ ಸಮಸ್ಯೆಗಳಿದ್ದಲ್ಲಿ ತಿಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. 

ನ. 19ರಂದು ಮಾದಾಪುರದಲ್ಲಿ ವಿದ್ಯುತ್ ಅದಾಲತ್ 

      ಚಾಮರಾಜನಗರ, ನವೆಂಬರ್ 17  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಅದಾಲತನ್ನು ಚಾಮರಾಜನಗರ ತಾಲೂಕಿನ ಮಾದಾಪುರ ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ನವೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
    
      ನಿಗಮದ ಮೈಸೂರು ವಲಯದ ಮುಖ್ಯ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಗ್ರಾಹಕರು ಹಾಜರಾಗಿ ಕುಂದು ಕೊರತೆ ಸಮಸ್ಯೆಗಳಿದ್ದಲ್ಲಿ ತಿಳಿಸಿ ಪರಿಹರಿಸಿಕೊಳ್ಳುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. 

ನ. 19ರಂದು ದೊಡ್ಡರಾಯಪೇಟೆಯಲ್ಲಿ ವಿದ್ಯುತ್ ಅದಾಲತ್ 

      ಚಾಮರಾಜನಗರ, ನವೆಂಬರ್ 17  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನವೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.
    
      ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ಅಧ್ಯಕ್ಷತೆ ವಹಿಸಲಿದ್ದು ವಿದ್ಯುತ್ ಸಂಬಂಧ ಕುಂದು ಕೊರತೆ ಸಮಸ್ಯೆಗಳಿದ್ದಲ್ಲಿ ವಿದ್ಯುತ್ ಅದಾಲತ್ ಗೆ ಹಾಜರಾಗಿ ಪರಿಹರಿಸಿಕೊಳ್ಳುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. 

ನ. 20ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ 

       ಚಾಮರಾಜನಗರ, ನವೆಂಬರ್ 17  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನವೆಂಬರ್ 20ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

      ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‍ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ 10 ಮತ್ತು 11, ಮುತ್ತಿಗೆ, ಹೆಗ್ಗೋಠಾರ ಸುತ್ತಮುತ್ತಲ ಪ್ರದೇಶಗಳು, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಮರಿಯಾಲ, ಬೇಡರಪುರ, ಕೆಲ್ಲಂಬಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 

     ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912ಗೆ ಕರೆ ಮಾಡುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
     
----
ಜಿ.ಪಂ ಸಿಇಒ ಅವರಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ 

       ಚಾಮರಾಜನಗರ, ನವೆಂಬರ್ 17  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಕೊಳ್ಳೇಗಾಲ ತಾಲೂಕಿನ ಸರಗೂರು ಹಾಗೂ ಪಾಳ್ಯಕ್ಕೆ ಭೇಟಿ ನೀಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲಿಸಿದರು.

      ಸರಗೂರು ಬಳಿಯ ಕಾವೇರಿ ನದಿಯ ಹತ್ತಿರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಿಸುತ್ತಿರುವ ಜಾಕ್‍ವೆಲ್ ಕಾಮಗಾರಿಯನ್ನು ವೀಕ್ಷಿಸಿದರು. ಪಾಳ್ಯ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಕುಡಿಯುವ ನೀರಿನ ಶುದ್ದಿಕರಣ ಘಟಕವನ್ನು ಪರಿಶೀಲಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗ ಕಚೇರಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಡಿ ಕೊಳ್ಳೇಗಾಲ ತಾಲೂಕು ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳ ಪ್ರಗತಿ ಕುರಿತು ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪ್ರಸ್ತುತ ಯೋಜನೆಗಳಡಿ ಬಾಕಿಯಿರುವ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಹಾಗೂ ಜಲಜೀವನ್ ಮಿಷನ್ ಯೋಜನೆಯ ಹಂತ-2ರ ಕಾಮಗಾರಿಗಳನ್ನು ಆದಷ್ಟು ಬೇಗನೆ ಮುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚಿಸಿದರು. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯಪಾಲಕ ಎಂಜಿನಿಯರ್ ಗಂಗಾಧರಯ್ಯ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಆನಂದಮೂರ್ತಿ, ಇತರೆ ಅಧಿಕಾರಿಗಳು ಹಾಜರಿದ್ದರು.  
-------

----

ನ. 18ರಂದು ಕೊಳ್ಳೇಗಾಲದಲ್ಲಿ ಕೇಂದ್ರ ಸರ್ಕಾರದ ಸೇವೆ, ಪ್ರಧಾನಿಯವರ ದೂರದರ್ಶಿತ್ವ 2047 ವಿಷಯ, ಬುಡಕಟ್ಟು ಜನತೆ ಅಭಿವೃದ್ದಿಯ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ 

       ಚಾಮರಾಜನಗರ, ನವೆಂಬರ್ 17 :- ಭಾರತ ಸಾತ್ವಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟ, ಕೇಂದ್ರ ಸರ್ಕಾರದ 8 ವರ್ಷಗಳ ಸೇವೆ ಹಾಗೂ ಪ್ರಧಾನ ಮಂತ್ರಿಯವರ ದೂರದರ್ಶಿತ್ವ 2047 ವಿಷಯವನ್ನೊಳಗೊಂಡ ಛಾಯಾಚಿತ್ರ ಪ್ರದರ್ಶನವನ್ನು ನವೆಂಬರ್ 18 ಮತ್ತು 19ರಂದು  ಕೊಳ್ಳೆಗಾಲದ ಜೆಎಸ್‍ಎಸ್ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ಆದಿವಾಸಿಗಳ ವೀರೋಚಿತ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿ ಅಂಗವಾಗಿ ಆಚರಿಸುವ ಜನಜಾತೀಯ ಗೌರವದ ಸಪ್ತಾಹವಾಗಿಯೂ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಬುಡಕಟ್ಟು ಜನತೆಯ ಅಭಿವೃದ್ಧಿಯ ಬಗ್ಗೆಯೂ ಛಾಯಾಚಿತ್ರ ಪ್ರದರ್ಶನವಿರಲಿದೆ. 

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮೈಸೂರಿನ ಕೇಂದ್ರ ಸಂವಹನ ಇಲಾಖೆ ಆಯೋಜಿಸುತ್ತಿರುವ ಈ ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನ ಸಂಸ್ಥೆ ಇವರ ಸಹಯೋಗದಲ್ಲಿ ಸರ್ಕಾರದ ವಿವಿಧ ಇಲಾಖೆಗಳು ಮತ್ತು ವಿದ್ಯಾಸಂಸ್ಥೆಗಳ ನೆರವಿನೊಂದಿಗೆ ಆಯೋಜಿಸಲಾಗಿದೆ. 

ಕೊಳ್ಳೆಗಾಲದ ಜೆಎಸ್‍ಎಸ್ ಕಾಲೇಜಿನ ಆವರಣದಲ್ಲಿ ನವೆಂಬರ್ 18ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಲನೆ ನೀಡುವರು. ಶಾಸಕರಾದ ಎನ್. ಮಹೇಶ್ ಹಾಗೂ ಕೊಳ್ಳೇಗಾಲ ನಗರಸಭಾ ಅಧ್ಯಕ್ಷರಾದ ಸಿ.ಎನ್. ರೇಖಾ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಘನ ಉಪಸ್ಥಿತಿ ವಹಿಸುವರು. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬುಡಕಟ್ಟು ಸಂಶೋಧನ ಸಂಸ್ಥೆಯ ನಿರ್ದೇಶಕರಾದ ರಾಜೇಶ್ ಜಿ. ಗೌಡ ಭಾಗವಹಿಸಲಿದ್ದು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುವರು.

ಕೇಂದ್ರ ಸರ್ಕಾರ ಜನತೆಯ ಉಪಯೋಗಕ್ಕಾಗಿ ಜಾರಿಗೆ ತಂದಿರುವ ಹಲವು ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನದಲ್ಲಿ ಕರ್ನಾಟಕದ ಬುಡಕಟ್ಟು ಜನರ ವಿವರ, ಸರ್ವರಿಗೂ ಆರೋಗ್ಯ ಒದಗಿಸುವ ಆಯುಷ್ಮಾನ್ ಭಾರತ, ಆರೋಗ್ಯ ರಕ್ಷಣೆ ಮತ್ತು ಸಾಂಕ್ರಾಮಿಕ ನಿರ್ವಹಣೆ, ಸಶಕ್ತ ರೈತ ಸಮೃದ್ಧ ಭಾರತ, ಆದಿವಾಸಿಗಳ ಸರ್ವತೋಮುಖ ಅಭಿವೃದ್ದಿಯ ಖಾತ್ರಿ, ಹರ್ ಘರ್ ಜಲ್, ರಾಷ್ಟ್ರೀಯ ಶಿಕ್ಷಣ ನೀತಿ 2020, ದಿವ್ಯಾಂಗರ ಸಬಲೀಕರಣ, ಸಂಪರ್ಕಿತ ಭಾರತ ನಿರ್ಮಾಣ ಮುಂತಾದ ಹಲವು ಯೋಜನೆಗಳ ಮಾಹಿತಿ ದೊರೆಯಲಿದೆ. 

ಭಾರತ ಸ್ವಾತಂತ್ರ್ಯದ ಶತಮಾನೋತ್ಸವದ ಹೊತ್ತಿಗೆ ದೇಶದ ಪ್ರಗತಿಯನ್ನು ದೂರದರ್ಶಿತ್ವದಿಂದ ಮನಗಂಡಿರುವ ಪ್ರಧಾನಮಂತ್ರ್ರಿಯವರ ಪಂಚ ಸಂಕಲ್ಪದ ಪರಿಚಯವನ್ನೂ ಈ ಪ್ರದರ್ಶನ ಮಾಡಿಕೊಡಲಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಕನ್ನಡನಾಡಿನ ವೀರ ಮಹನೀಯರನ್ನು ಈ ಅಮೃತ ಮಹೋತ್ಸವದ ಸವಿ ಸಂದರ್ಭದಲ್ಲಿ ನೆನಪಿಸಿಕೊಳ್ಳುವ ಮತ್ತು ಸ್ವಾತಂತ್ರ್ಯ ಹೋರಾಟದ ವೀರಗಾಥೆಗಳನ್ನು ಮತ್ತು ಹೆಜ್ಜೆ ಗುರುತುಗಳನ್ನು ದಾಖಲಿಸುವ ಪ್ರದರ್ಶನ ಇದಾಗಿದೆ. 

ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ರ್ಯಾಲಿ, ಜಾಗೃತಿ ಜಾಥಾ, ವಿದ್ಯಾರ್ಥಿಗಳು ಹಾಗೂ ಆದಿವಾಸಿಗಳಿಗಾಗಿ ಸ್ಫರ್ಧೆಗಳನ್ನು ನಡೆಸಲಾಗುತ್ತದೆ. ಜನತೆಗೆ ಉಪಯುಕ್ತ ಮಾಹಿತಿ ಒದಗಿಸುವ ಉಪನ್ಯಾಸ, ರಾಷ್ಟ್ರಾಭಿಮಾನವನ್ನು ಸ್ಫುರಿಸುವ ಚಲನಚಿತ್ರ ಪ್ರದರ್ಶನ, ಭಾರತ ಸರ್ಕಾರದ ನಾಟಕ ಮತ್ತು ಸಂಗೀತ ವಿಭಾಗದ ಕಲಾ ತಂಡ ಮತ್ತು ಸ್ಥಳೀಯ ಆದಿವಾಸಿ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 

ಸಾರ್ವಜನಿಕರಿಗೆ, ಮಹಿಳೆಯರಿಗೆ, ಫಲಾನುಭವಿಗಳಿಗೆ, ವಿದ್ಯಾರ್ಥಿಗಳಿಗೆ ಈ ಛಾಯಾಚಿತ್ರ ಪ್ರದರ್ಶನ ಉಪಯುಕ್ತವಾಗಲಿದೆ ಎಂದು ಮೈಸೂರಿನ ಕೇಂದ್ರ ಸಂವಹನ ಇಲಾಖೆಯ ಉಪನಿರ್ದೇಶಕರಾದ ಡಾ. ಟಿ.ಸಿ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
----

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಗೃಹ ಬಳಕೆದಾರರಿಗೆ ವಿದ್ಯುತ್ ಶುಲ್ಕ ಮರು ಪಾವತಿ ಸೌಲಭ್ಯ : ನೋಂದಣಿಗೆ ಮನವಿ

      ಚಾಮರಾಜನಗರ, ನವೆಂಬರ್ 17 - ಸರ್ಕಾರವು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಗೃಹ ಬಳಕೆದಾರರಿಗೆ ದಿನಾಂಕ 1-05-2022ರಿಂದ ಅನ್ವಯವಾಗುವಂತೆ ಉಚಿತವಾಗಿ 75 ಯೂನಿಟ್‍ಗಳವರೆಗಿನ ವಿದ್ಯುತ್ ಶುಲ್ಕವನ್ನು ನೇರ ನಗದು ವರ್ಗಾವಣೆ ಯೋಜನೆಯ ಮೂಲಕ ಮರು ಪಾವತಿಸಲು ಆದೇಶಿಸಿದ್ದು, ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯಬಹುದಾಗಿದೆ.

     ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿ, ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿ ಯೋಜನೆಯ ಸೌಲಭ್ಯ ಪಡೆಯಬಹುದು. ಫಲಾನುಭವಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರ, ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಅರ್ಜಿ ಸಲ್ಲಿಸುವ ದಿನಾಂಕದ ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್ ಶುಲ್ಕ ಪೂರ್ಣ ಪ್ರಮಾಣದಲ್ಲಿ ಪಾವತಿ ಮಾಡಿರಬೇಕು. ಪ್ರತಿ ಮಾಹೆಯು ಸೌಲಭ್ಯ ಪಡೆಯಲು ಆಯಾ ತಿಂಗಳು ನಿಗದಿತ ಸಮಯದೊಳಗೆ ವಿದ್ಯುತ್ ಶುಲ್ಕ ಪಾವತಿಸಬೇಕು. ಒಂದು ಬಿಪಿಎಲ್ ಪಡಿತರ ಚೀಟಿಗೆ ಓರ್ವ ಫಲಾನುಭವಿ ಮಾತ್ರ ಯೋಜನೆ ಸೌಲಭ್ಯ ಪಡೆಯಬಹುದು. ಫಲಾನುಭವಿಯ ಸ್ಥಾವರದ ಮಾಸಿಕ ವಿದ್ಯುತ್ ಬಳಕೆ ಗರಿಷ್ಟ 250 ಯೂನಿಟ್ ಒಳಗೆ ಇರುವ ಕುಟುಂಬಕ್ಕೆ ಮಾತ್ರ ಯೋಜನೆ ಲಭ್ಯವಿರುತ್ತದೆ. 

     ನೇರ ನಗದು ವರ್ಗಾವಣೆ ಮೂಲಕ ಮಾಸಿಕ 75 ಯೂನಿಟ್‍ಗಳವರೆಗೆ ವಿದ್ಯುತ್ ಶುಲ್ಕವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮರು ಪಾವತಿಸÀಲಾಗುವುದು. 

     ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ದೃಢೀಕರಣ ಪತ್ರ, ಇತ್ತೀಚಿನ ವಿದ್ಯುತ್ ಬಿಲ್ ಪ್ರತಿ, ಬಾಡಿಗೆ ಅಥವಾ ಗುತ್ತಿಗೆ ಒಪ್ಪಂದದ ಪ್ರತಿ (ಅರ್ಜಿದಾರರು ಬಾಡಿಗೆ ಅಥವಾ ಗುತ್ತಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ) ಆಧಾರ್ ಕಾರ್ಡ್ ಜೊತೆ ನೊಂದಣಿಯಾದ ಮೊಬೈಲ್ ಸಂಖ್ಯೆ ದಾಖಲೆಗಳೊಂದಿಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿ, ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ನೋಂದಾಯಿಸಬಹುದು.  

     ಹೆಚ್ಚಿನ ಮಾಹಿತಿಗಾಗಿ ಸಂಬಂಧ ಪಟ್ಟ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಪವಿಭಾಗದ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 

      ಚಾಮರಾಜನಗರ, ನವೆಂಬರ್ 17 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 

     ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿs://sevಚಿshiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ   ಮೂಲಕ ನವೆಂಬರ್ 30ರೊಳಗೆ ಸಲ್ಲಿಸಬಹುದು. 

      ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದ ಮಲ್ಟಿ ಪರ್ಪಸ್ ಹಾಲ್ ನಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 7019952093, 9980685550, ಕೊಳ್ಳೇಗಾಲದ ಅಂಜುಮಾನ್-ಇಸ್ಲಾಮಿಯ ಕಾಂಪ್ಲೆಕ್ಸ್‍ನಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 7829587596, 7760553146, ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 9482217387, 7760553146, ಯಳಂದೂರು ತಾಲೂಕು ಕಚೇರಿಯಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 9845254995, 7760553146 ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹರವೆ ಗ್ರಾಮ ಪಂಚಾಯಿತಿ ಕಚೇರಿ, ಹಾಸ್ಟೆಲ್, ಗ್ರಂಥಾಲಯಕ್ಕೆ ಜಿ.ಪಂ. ಸಿಇಒ ಭೇಟಿ : ಪರಿಶೀಲನೆ 

      ಚಾಮರಾಜನಗರ, ನವೆಂಬರ್ 17 :- ಚಾಮರಾಜನಗರ ತಾಲೂಕು ಹರವೆ ಗ್ರಾಮ ಪಂಚಾಯಿತಿ ಕಚೇರಿ, ಹಾಸ್ಟೆಲ್, ಗ್ರಂಥಾಲಯಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

     ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ಎನ್.ಆರ್.ಎಲ್.ಎಂ, ಅಮೃತ ಗ್ರಾಮ ಪಂಚಾಯಿತಿ ಹಾಗೂ ಇತರೆ ಯೋಜನೆಗಳಡಿ ಅನುಷ್ಠಾನಗೊಳಿಸಲಾಗಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. 

        ಬಾಪೂಜಿ ಸೇವಾಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಪರಿಶೀಲಿಸಿ, ಸಕಾಲದಲ್ಲಿ ಸೇವೆಗಳನ್ನು ಸಮರ್ಪಕವಾಗಿ ತಲುಪಿಸಲು ಸೂಚಿಸಿದರು. ತೆರಿಗೆ ಪರಿಷ್ಕರಣೆ ಮಾಡಿ ವಸೂಲಾತಿಗೆ ಕ್ರಮವಹಿಸುವಂತೆ ಹಾಗೂ ಅಪೂರ್ಣಗೊಂಡಿರುವ ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನ (ಆರ್.ಜಿ.ಪಿ.ಎಸ್.ಎ) ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ತುರ್ತು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.
 
ಗ್ರಾಮ ಪಂಚಾಯಿತಿಯ ಗ್ರಂಥಾಲಯಕ್ಕೆ ಭೇಟಿ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಪಟ್ಟ ಪುಸ್ತಕಗಳನ್ನು ಇಡಲು ಹಾಗೂ ಹೆಚ್ಚಿನ ಸದಸ್ಯತ್ವ ನೋಂದಣಿ, ಬಯಲು ಗ್ರಂಥಾಲಯ ಅನುಷ್ಠಾನ ಸಂಬಂಧ ಅಂದಾಜು ಪಟ್ಟಿಯನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗೆ ಸೂಚನೆ ನೀಡಿದರು. 

ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿಯನ್ನು ವೀಕ್ಷಿಸಿದರು. ಹಾಸಿಗೆ, ಹೊದಿಕೆ, ಮಂಚ, ಕೊಠಡಿಗಳು, ಅಡುಗೆ ಕೋಣೆ, ಕುಡಿಯುವ ನೀರು, ಸ್ನಾನಗೃಹ ಮತ್ತು ಶೌಚಾಲಯಗಳನ್ನು ಪರಿಶೀಲಿಸಿದರು. ಸ್ವಚ್ಛತೆಯನ್ನು ಕಾಪಾಡಲು ಸೂಚಿಸಿದರು.

     ವಿದ್ಯಾರ್ಥಿನಿಲಯದಲ್ಲಿ ಗ್ರಂಥಾಲಯ ತೆರೆಯಬೇಕು. ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತಹ ಪುಸ್ತಕಗಳು, ದಿನಪತ್ರಿಕೆಗಳು ಹಾಗೂ ನಿಯತಕಾಲಿಕಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿದ್ಯಾರ್ಥಿಗಳ ಜೊತೆ ಕುಂದುಕೊರತೆ ವ್ಯಾಸಂಗ ಕುರಿತು ಚರ್ಚಿಸಿದರು.

     ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖಾ ವತಿಯಿಂದ ಜಲಜೀವನ್ ಮಿಷನ್ ಯೋಜನೆಯಡಿ ಹರವೆ ಗ್ರಾಮದಲ್ಲಿ ಅನುμÁ್ಠನಗೊಳಿಸಲಾಗುತ್ತಿರುವ ಮನೆ-ಮನೆಗೂ ಕಾರ್ಯಾತ್ಮಕ ನಳನೀರು ಸಂಪರ್ಕ ಕಾಮಗಾರಿ ಪರಿಶೀಲಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಇತರೆ ಅಧಿಕಾರಿಗಳು ಹಾಜರಿದ್ದರು. 

ಚಾಮರಾಜನಗರ ನಗರಸಭೆ ಆನ್‍ಲೈನ್ ಸೇವೆಗೆ ಅಡಚಣೆ : ಸಹಕರಿಸಲು ಮನವಿ

      ಚಾಮರಾಜನಗರ, ನವೆಂಬರ್ 17 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭಾ ವ್ಯಾಪ್ತಿಯ ಪೌರಸುಧಾರಣಾ ಕೋಶದ ತಂತ್ರಾಂಶದಲ್ಲಿ ತಾಂತ್ರಿಕ ತೊಂದರೆ ಇರುವುದರಿಂದ ನಗರಸಭೆಯ ಆನ್‍ಲೈನ್ ಸೇವೆಗಳಾದ ಇ-ಆಸ್ತಿ, ಆಸ್ತಿ ತೆರಿಗೆ ಚಲನ್, ಉದ್ದಿಮೆ ಪರವಾನಗಿ, ಜಲನಿಧಿ, ಇನ್ನಿತರ ಸೇವೆಗಳನ್ನು ಆನ್‍ಲೈನ್ ನಲ್ಲಿ ನೀಡಲು ಅಡಚಣೆ ಉಂಟಾಗಿದೆ. ತಂತ್ರಾಂಶ ಸರಿಯಾದ ನಂತರ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗುತ್ತದೆ. ನಗರಸಭಾ ವ್ಯಾಪ್ತಿಯ ಆಸ್ತಿಯ ಮಾಲೀಕರು ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ. 

ನ. 19ರಂದು ಮಲ್ಲೆದೇವನಹಳ್ಳಿಯಲ್ಲಿ ವಿದ್ಯುತ್ ಅದಾಲತ್ 

      ಚಾಮರಾಜನಗರ, ನವೆಂಬರ್ 17 (ಕರ್ನಾಟಕ ವಾರ್ತೆ):- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಉಪವಿಭಾಗದ ಕಾಗಲವಾಡಿ ವ್ಯಾಪ್ತಿಯ ಮಲ್ಲೇದೇವನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ವಿದ್ಯುತ್ ಅದಾಲತನ್ನು ನವೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. 

    ಸಂತೇಮರಹಳ್ಳಿಯ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಗ್ರಾಹಕರು ಹಾಜರಾಗಿ ಸಮಸ್ಯೆಗಳಿದ್ದಲ್ಲಿ ತಿಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. 

ನ. 19ರಂದು ಮಾದಾಪುರದಲ್ಲಿ ವಿದ್ಯುತ್ ಅದಾಲತ್ 

      ಚಾಮರಾಜನಗರ, ನವೆಂಬರ್ 17 (ಕರ್ನಾಟಕ ವಾರ್ತೆ):- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಅದಾಲತನ್ನು ಚಾಮರಾಜನಗರ ತಾಲೂಕಿನ ಮಾದಾಪುರ ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ನವೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
    
      ನಿಗಮದ ಮೈಸೂರು ವಲಯದ ಮುಖ್ಯ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಗ್ರಾಹಕರು ಹಾಜರಾಗಿ ಕುಂದು ಕೊರತೆ ಸಮಸ್ಯೆಗಳಿದ್ದಲ್ಲಿ ತಿಳಿಸಿ ಪರಿಹರಿಸಿಕೊಳ್ಳುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. 

ನ. 19ರಂದು ದೊಡ್ಡರಾಯಪೇಟೆಯಲ್ಲಿ ವಿದ್ಯುತ್ ಅದಾಲತ್ 

      ಚಾಮರಾಜನಗರ, ನವೆಂಬರ್ 17 (ಕರ್ನಾಟಕ ವಾರ್ತೆ):- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನವೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.
    
      ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ಅಧ್ಯಕ್ಷತೆ ವಹಿಸಲಿದ್ದು ವಿದ್ಯುತ್ ಸಂಬಂಧ ಕುಂದು ಕೊರತೆ ಸಮಸ್ಯೆಗಳಿದ್ದಲ್ಲಿ ವಿದ್ಯುತ್ ಅದಾಲತ್ ಗೆ ಹಾಜರಾಗಿ ಪರಿಹರಿಸಿಕೊಳ್ಳುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. 

ನ. 20ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ 

       ಚಾಮರಾಜನಗರ, ನವೆಂಬರ್ 17 (ಕರ್ನಾಟಕ ವಾರ್ತೆ):- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನವೆಂಬರ್ 20ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

      ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‍ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ 10 ಮತ್ತು 11, ಮುತ್ತಿಗೆ, ಹೆಗ್ಗೋಠಾರ ಸುತ್ತಮುತ್ತಲ ಪ್ರದೇಶಗಳು, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಮರಿಯಾಲ, ಬೇಡರಪುರ, ಕೆಲ್ಲಂಬಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 

     ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912ಗೆ ಕರೆ ಮಾಡುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
     
ಜಿ.ಪಂ ಸಿಇಒ ಅವರಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ 

       ಚಾಮರಾಜನಗರ, ನವೆಂಬರ್ 17 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಕೊಳ್ಳೇಗಾಲ ತಾಲೂಕಿನ ಸರಗೂರು ಹಾಗೂ ಪಾಳ್ಯಕ್ಕೆ ಭೇಟಿ ನೀಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲಿಸಿದರು.

      ಸರಗೂರು ಬಳಿಯ ಕಾವೇರಿ ನದಿಯ ಹತ್ತಿರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಿಸುತ್ತಿರುವ ಜಾಕ್‍ವೆಲ್ ಕಾಮಗಾರಿಯನ್ನು ವೀಕ್ಷಿಸಿದರು. ಪಾಳ್ಯ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಕುಡಿಯುವ ನೀರಿನ ಶುದ್ದಿಕರಣ ಘಟಕವನ್ನು ಪರಿಶೀಲಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗ ಕಚೇರಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಡಿ ಕೊಳ್ಳೇಗಾಲ ತಾಲೂಕು ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳ ಪ್ರಗತಿ ಕುರಿತು ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪ್ರಸ್ತುತ ಯೋಜನೆಗಳಡಿ ಬಾಕಿಯಿರುವ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಹಾಗೂ ಜಲಜೀವನ್ ಮಿಷನ್ ಯೋಜನೆಯ ಹಂತ-2ರ ಕಾಮಗಾರಿಗಳನ್ನು ಆದಷ್ಟು ಬೇಗನೆ ಮುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚಿಸಿದರು. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯಪಾಲಕ ಎಂಜಿನಿಯರ್ ಗಂಗಾಧರಯ್ಯ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಆನಂದಮೂರ್ತಿ, ಇತರೆ ಅಧಿಕಾರಿಗಳು ಹಾಜರಿದ್ದರು.  
-------

ವಿಶ್ವ ವಿಶೇಷಚೇತನರ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ 

       ಚಾಮರಾಜನಗರ, ನವೆಂಬರ್ 17 :- ವಿಶ್ವ ವಿಶೇಷಚೇತನರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

     ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮ ಏರ್ಪಾಡು ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

     ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 3ರಂದು ನಿಗದಿಯಾಗಿದೆ. ಈ ಕಾರ್ಯಕ್ರಮಕ್ಕೆ ಪುರ್ವಭಾವಿಯಾಗಿ ವಿಶೇಷಚೇತನರಿಗೆ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಇದೇ ನವೆಂಬರ್ 29ರಂದು ನಡೆಸಬೇಕಿದೆ. ಹೀಗಾಗಿ ಈ ಎರಡು ಕಾರ್ಯಕ್ರಮಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

      ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗಾಗಿ ಭಾಗವಹಿಸಲು ವಿಶೇಷಚೇತನರಿಗೆ ಉಚಿತವಾಗಿ ಬಸ್‍ನಲ್ಲಿ ಪ್ರಯಾಣಿಸುವ ಸೌಲಭ್ಯಕ್ಕೆ ಅಗತ್ಯ ಕ್ರಮವಹಿಸಬೇಕು. ಸ್ಪರ್ಧೆಗಳಿಗೆ ತೀರ್ಪುಗಾರರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ನಿಯೋಜಿಸಬೇಕು. ಕ್ರೀಡಾಕೂಟಕ್ಕೆ ಅಗತ್ಯವಿರುವ ನೆರವನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ನೀಡಬೇಕು ಎಂದರು. 

      ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಯ ದಿನದಂದು ಮಧ್ಯಾಹ್ನದ ಉಪಹಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಶಾಮಿಯಾನ, ಸ್ವಚ್ಚತೆ, ಇನ್ನಿತರ ಅವಶ್ಯಕ ಸಿದ್ದತೆಗಳು ಇರಬೇಕು. ಡಿಸೆಂಬರ್ 3ರಂದು ನಗರದ ಜೆ.ಎಚ್. ಪಟೇಲ್  ಸಭಾಂಗಣದಲ್ಲಿ  ವಿಶ್ವ ವಿಶೇಷಚೇತನರ ದಿನಾಚರಣೆ ವೇದಿಕೆ ಕಾರ್ಯಕ್ರಮ ಹಾಗೂ ಜಾಥಾ ಮೆರವಣಿಗೆಗೆ ಪೂರಕ ಕ್ರಮಗಳನ್ನು ವಹಿಸಬೇಕು. ಕಲಾತಂಡಗಳ ನಿಯೋಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು. 

     ಸಮಾರಂಭದ ಎಲ್ಲಾ ಪೂರ್ವ ಸಿದ್ದತೆಗಳು ಹಾಗೂ ನಿರ್ವಹಣೆಗಾಗಿ ವಿವಿಧ ಸಮಿತಿಗಳು ರಚನೆಯಾಗಲಿವೆ. ಸಮಿತಿಯಲ್ಲಿ ನೇಮಕವಾಗಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಕಾರ್ಯಕ್ರಮ ಯಶಸ್ವಿಯಾಗುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು. 

     ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಡಿವೈಎಸ್‍ಪಿ ಪ್ರಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರರಾದ ಸಿ.ಜಿ. ರವಿಶಂಕರ್, ಕೆ.ಬಿ. ಆನಂದಪ್ಪ ನಾಯಕ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಚಾಮರಾಜನಗರ ನಗರಸಭೆ ಆಯುಕ್ತರಾದ ರಾಮದಾಸ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಸಿ. ದೀಪಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಇತರೆ ಅಧಿಕಾರಿಗಳು, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ದಿ ಸಮಿತಿಯ ಪದಾಧಿಕಾರಿಗಳಾದ ಎನ್. ಕೃಷ್ಣಮೂರ್ತಿ, ಎಂ. ರಮೇಶ್, ರೂಪೇಶ್, ರಾಜಣ್ಣ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು. 
----

ನ. 18ರಂದು ಕೊಳ್ಳೇಗಾಲದಲ್ಲಿ ಕೇಂದ್ರ ಸರ್ಕಾರದ ಸೇವೆ, ಪ್ರಧಾನಿಯವರ ದೂರದರ್ಶಿತ್ವ 2047 ವಿಷಯ, ಬುಡಕಟ್ಟು ಜನತೆ ಅಭಿವೃದ್ದಿಯ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ 

       ಚಾಮರಾಜನಗರ, ನವೆಂಬರ್ 17 :- ಭಾರತ ಸಾತ್ವಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟ, ಕೇಂದ್ರ ಸರ್ಕಾರದ 8 ವರ್ಷಗಳ ಸೇವೆ ಹಾಗೂ ಪ್ರಧಾನ ಮಂತ್ರಿಯವರ ದೂರದರ್ಶಿತ್ವ 2047 ವಿಷಯವನ್ನೊಳಗೊಂಡ ಛಾಯಾಚಿತ್ರ ಪ್ರದರ್ಶನವನ್ನು ನವೆಂಬರ್ 18 ಮತ್ತು 19ರಂದು  ಕೊಳ್ಳೆಗಾಲದ ಜೆಎಸ್‍ಎಸ್ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ಆದಿವಾಸಿಗಳ ವೀರೋಚಿತ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿ ಅಂಗವಾಗಿ ಆಚರಿಸುವ ಜನಜಾತೀಯ ಗೌರವದ ಸಪ್ತಾಹವಾಗಿಯೂ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಬುಡಕಟ್ಟು ಜನತೆಯ ಅಭಿವೃದ್ಧಿಯ ಬಗ್ಗೆಯೂ ಛಾಯಾಚಿತ್ರ ಪ್ರದರ್ಶನವಿರಲಿದೆ. 

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮೈಸೂರಿನ ಕೇಂದ್ರ ಸಂವಹನ ಇಲಾಖೆ ಆಯೋಜಿಸುತ್ತಿರುವ ಈ ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನ ಸಂಸ್ಥೆ ಇವರ ಸಹಯೋಗದಲ್ಲಿ ಸರ್ಕಾರದ ವಿವಿಧ ಇಲಾಖೆಗಳು ಮತ್ತು ವಿದ್ಯಾಸಂಸ್ಥೆಗಳ ನೆರವಿನೊಂದಿಗೆ ಆಯೋಜಿಸಲಾಗಿದೆ. 

ಕೊಳ್ಳೆಗಾಲದ ಜೆಎಸ್‍ಎಸ್ ಕಾಲೇಜಿನ ಆವರಣದಲ್ಲಿ ನವೆಂಬರ್ 18ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಲನೆ ನೀಡುವರು. ಶಾಸಕರಾದ ಎನ್. ಮಹೇಶ್ ಹಾಗೂ ಕೊಳ್ಳೇಗಾಲ ನಗರಸಭಾ ಅಧ್ಯಕ್ಷರಾದ ಸಿ.ಎನ್. ರೇಖಾ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಘನ ಉಪಸ್ಥಿತಿ ವಹಿಸುವರು. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬುಡಕಟ್ಟು ಸಂಶೋಧನ ಸಂಸ್ಥೆಯ ನಿರ್ದೇಶಕರಾದ ರಾಜೇಶ್ ಜಿ. ಗೌಡ ಭಾಗವಹಿಸಲಿದ್ದು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುವರು.

ಕೇಂದ್ರ ಸರ್ಕಾರ ಜನತೆಯ ಉಪಯೋಗಕ್ಕಾಗಿ ಜಾರಿಗೆ ತಂದಿರುವ ಹಲವು ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನದಲ್ಲಿ ಕರ್ನಾಟಕದ ಬುಡಕಟ್ಟು ಜನರ ವಿವರ, ಸರ್ವರಿಗೂ ಆರೋಗ್ಯ ಒದಗಿಸುವ ಆಯುಷ್ಮಾನ್ ಭಾರತ, ಆರೋಗ್ಯ ರಕ್ಷಣೆ ಮತ್ತು ಸಾಂಕ್ರಾಮಿಕ ನಿರ್ವಹಣೆ, ಸಶಕ್ತ ರೈತ ಸಮೃದ್ಧ ಭಾರತ, ಆದಿವಾಸಿಗಳ ಸರ್ವತೋಮುಖ ಅಭಿವೃದ್ದಿಯ ಖಾತ್ರಿ, ಹರ್ ಘರ್ ಜಲ್, ರಾಷ್ಟ್ರೀಯ ಶಿಕ್ಷಣ ನೀತಿ 2020, ದಿವ್ಯಾಂಗರ ಸಬಲೀಕರಣ, ಸಂಪರ್ಕಿತ ಭಾರತ ನಿರ್ಮಾಣ ಮುಂತಾದ ಹಲವು ಯೋಜನೆಗಳ ಮಾಹಿತಿ ದೊರೆಯಲಿದೆ. 

ಭಾರತ ಸ್ವಾತಂತ್ರ್ಯದ ಶತಮಾನೋತ್ಸವದ ಹೊತ್ತಿಗೆ ದೇಶದ ಪ್ರಗತಿಯನ್ನು ದೂರದರ್ಶಿತ್ವದಿಂದ ಮನಗಂಡಿರುವ ಪ್ರಧಾನಮಂತ್ರ್ರಿಯವರ ಪಂಚ ಸಂಕಲ್ಪದ ಪರಿಚಯವನ್ನೂ ಈ ಪ್ರದರ್ಶನ ಮಾಡಿಕೊಡಲಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಕನ್ನಡನಾಡಿನ ವೀರ ಮಹನೀಯರನ್ನು ಈ ಅಮೃತ ಮಹೋತ್ಸವದ ಸವಿ ಸಂದರ್ಭದಲ್ಲಿ ನೆನಪಿಸಿಕೊಳ್ಳುವ ಮತ್ತು ಸ್ವಾತಂತ್ರ್ಯ ಹೋರಾಟದ ವೀರಗಾಥೆಗಳನ್ನು ಮತ್ತು ಹೆಜ್ಜೆ ಗುರುತುಗಳನ್ನು ದಾಖಲಿಸುವ ಪ್ರದರ್ಶನ ಇದಾಗಿದೆ. 

ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ರ್ಯಾಲಿ, ಜಾಗೃತಿ ಜಾಥಾ, ವಿದ್ಯಾರ್ಥಿಗಳು ಹಾಗೂ ಆದಿವಾಸಿಗಳಿಗಾಗಿ ಸ್ಫರ್ಧೆಗಳನ್ನು ನಡೆಸಲಾಗುತ್ತದೆ. ಜನತೆಗೆ ಉಪಯುಕ್ತ ಮಾಹಿತಿ ಒದಗಿಸುವ ಉಪನ್ಯಾಸ, ರಾಷ್ಟ್ರಾಭಿಮಾನವನ್ನು ಸ್ಫುರಿಸುವ ಚಲನಚಿತ್ರ ಪ್ರದರ್ಶನ, ಭಾರತ ಸರ್ಕಾರದ ನಾಟಕ ಮತ್ತು ಸಂಗೀತ ವಿಭಾಗದ ಕಲಾ ತಂಡ ಮತ್ತು ಸ್ಥಳೀಯ ಆದಿವಾಸಿ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 

ಸಾರ್ವಜನಿಕರಿಗೆ, ಮಹಿಳೆಯರಿಗೆ, ಫಲಾನುಭವಿಗಳಿಗೆ, ವಿದ್ಯಾರ್ಥಿಗಳಿಗೆ ಈ ಛಾಯಾಚಿತ್ರ ಪ್ರದರ್ಶನ ಉಪಯುಕ್ತವಾಗಲಿದೆ ಎಂದು ಮೈಸೂರಿನ ಕೇಂದ್ರ ಸಂವಹನ ಇಲಾಖೆಯ ಉಪನಿರ್ದೇಶಕರಾದ ಡಾ. ಟಿ.ಸಿ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
----

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಗೃಹ ಬಳಕೆದಾರರಿಗೆ ವಿದ್ಯುತ್ ಶುಲ್ಕ ಮರು ಪಾವತಿ ಸೌಲಭ್ಯ : ನೋಂದಣಿಗೆ ಮನವಿ

      ಚಾಮರಾಜನಗರ, ನವೆಂಬರ್ 17 - ಸರ್ಕಾರವು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಗೃಹ ಬಳಕೆದಾರರಿಗೆ ದಿನಾಂಕ 1-05-2022ರಿಂದ ಅನ್ವಯವಾಗುವಂತೆ ಉಚಿತವಾಗಿ 75 ಯೂನಿಟ್‍ಗಳವರೆಗಿನ ವಿದ್ಯುತ್ ಶುಲ್ಕವನ್ನು ನೇರ ನಗದು ವರ್ಗಾವಣೆ ಯೋಜನೆಯ ಮೂಲಕ ಮರು ಪಾವತಿಸಲು ಆದೇಶಿಸಿದ್ದು, ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯಬಹುದಾಗಿದೆ.

     ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿ, ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿ ಯೋಜನೆಯ ಸೌಲಭ್ಯ ಪಡೆಯಬಹುದು. ಫಲಾನುಭವಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರ, ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಅರ್ಜಿ ಸಲ್ಲಿಸುವ ದಿನಾಂಕದ ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್ ಶುಲ್ಕ ಪೂರ್ಣ ಪ್ರಮಾಣದಲ್ಲಿ ಪಾವತಿ ಮಾಡಿರಬೇಕು. ಪ್ರತಿ ಮಾಹೆಯು ಸೌಲಭ್ಯ ಪಡೆಯಲು ಆಯಾ ತಿಂಗಳು ನಿಗದಿತ ಸಮಯದೊಳಗೆ ವಿದ್ಯುತ್ ಶುಲ್ಕ ಪಾವತಿಸಬೇಕು. ಒಂದು ಬಿಪಿಎಲ್ ಪಡಿತರ ಚೀಟಿಗೆ ಓರ್ವ ಫಲಾನುಭವಿ ಮಾತ್ರ ಯೋಜನೆ ಸೌಲಭ್ಯ ಪಡೆಯಬಹುದು. ಫಲಾನುಭವಿಯ ಸ್ಥಾವರದ ಮಾಸಿಕ ವಿದ್ಯುತ್ ಬಳಕೆ ಗರಿಷ್ಟ 250 ಯೂನಿಟ್ ಒಳಗೆ ಇರುವ ಕುಟುಂಬಕ್ಕೆ ಮಾತ್ರ ಯೋಜನೆ ಲಭ್ಯವಿರುತ್ತದೆ. 

     ನೇರ ನಗದು ವರ್ಗಾವಣೆ ಮೂಲಕ ಮಾಸಿಕ 75 ಯೂನಿಟ್‍ಗಳವರೆಗೆ ವಿದ್ಯುತ್ ಶುಲ್ಕವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮರು ಪಾವತಿಸÀಲಾಗುವುದು. 

     ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ದೃಢೀಕರಣ ಪತ್ರ, ಇತ್ತೀಚಿನ ವಿದ್ಯುತ್ ಬಿಲ್ ಪ್ರತಿ, ಬಾಡಿಗೆ ಅಥವಾ ಗುತ್ತಿಗೆ ಒಪ್ಪಂದದ ಪ್ರತಿ (ಅರ್ಜಿದಾರರು ಬಾಡಿಗೆ ಅಥವಾ ಗುತ್ತಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ) ಆಧಾರ್ ಕಾರ್ಡ್ ಜೊತೆ ನೊಂದಣಿಯಾದ ಮೊಬೈಲ್ ಸಂಖ್ಯೆ ದಾಖಲೆಗಳೊಂದಿಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿ, ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ನೋಂದಾಯಿಸಬಹುದು.  

     ಹೆಚ್ಚಿನ ಮಾಹಿತಿಗಾಗಿ ಸಂಬಂಧ ಪಟ್ಟ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಪವಿಭಾಗದ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 

      ಚಾಮರಾಜನಗರ, ನವೆಂಬರ್ 17 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 

     ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿs://sevಚಿshiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ   ಮೂಲಕ ನವೆಂಬರ್ 30ರೊಳಗೆ ಸಲ್ಲಿಸಬಹುದು. 

      ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದ ಮಲ್ಟಿ ಪರ್ಪಸ್ ಹಾಲ್ ನಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 7019952093, 9980685550, ಕೊಳ್ಳೇಗಾಲದ ಅಂಜುಮಾನ್-ಇಸ್ಲಾಮಿಯ ಕಾಂಪ್ಲೆಕ್ಸ್‍ನಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 7829587596, 7760553146, ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 9482217387, 7760553146, ಯಳಂದೂರು ತಾಲೂಕು ಕಚೇರಿಯಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 9845254995, 7760553146 ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು