ಪ್ರತಿಯೊಬ್ಬರಿಗೂ ಮತದಾನದ ಅರಿವು ಅಗತ್ಯ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ
ಚಾಮರಾಜನಗರ, ನವೆಂಬರ್ 19 - ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸ್ವೀಪ್ ಕಾರ್ಯಕ್ರಮಗಳ ಮುಖಾಂತರ ಪ್ರತಿಯೊಬ್ಬರಿಗೂ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.
ನಗರದ ಸಂತಪೌಲರ ಪ್ರೌಢಶಾಲೆಯಲ್ಲಿಂದು ಜಿಲ್ಲಾ ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮತದಾರರ ಸಾಕ್ಷರತಾ ಸಂಘ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಚಟುವಟಿಕೆಗಳಾದ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಮತದಾನದ ಮೂಲಕ ಅರ್ಹ ನಾಯಕರನ್ನು ಆಯ್ಕೆ ಮಾಡಬೇಕಾಗಿರುವ ನಿಟ್ಟಿನಲ್ಲಿ ಅನೇಕ ವರ್ಷಗಳಿಂದ ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿವೆ. ಚುನಾವಣೆಯಲ್ಲಿ ಪಾರದರ್ಶಕತೆ ಇರಬೇಕೆಂಬ ಉದ್ದೇಶದಿಂದ ಒಂದೊಂದು ಮತವೂ ಪ್ರಾಮುಖ್ಯತೆ ಪಡೆದಿದೆ. ಮತದಾನದ ಹಕ್ಕನ್ನು ಚಲಾಯಿಸುವ ಬಗ್ಗೆ ಅರಿವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜಕನಿಕರಿಗೆ ಮೂಡಿಸಬೇಕಾಗಿದೆ. ಮತದಾನದ ಮೂಲಕ ಸೂಕ್ತ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮದಾಗಿರುತ್ತದೆ ಎಂದು ತಿಳಿಸಿದರು.
ಪ್ರತಿ ವರ್ಷದಂತೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 25ರಂದು ಆಚರಿಸಲಾಗುತ್ತಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕಾಗಿರುವುದರಿಂದ ಈಗಾಗಲೇ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಚುನಾವಣಾ ಆಯೋಗದಿಂದ ಹೊರಡಿಸಲಾಗಿರುವ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ತಿದ್ದುಪಡಿ, ಬದಲಾವಣೆಗಳಿದ್ದಲ್ಲಿ ಪರಿಶೀಲಿಸಿ ವೈಯಕ್ತಿಕ ಮಾಹಿತಿಗಳನ್ನು ಪರಿಷ್ಕರಣೆ ಮಾಡಿಕೊಳ್ಳುವಂತೆ ತಿಳಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಯನ್ನು ತಿಳಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದು ಅತ್ಯಂತ ಮಹತ್ವದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಗುರಿಯನ್ನು ಹೊಂದಬೇಕು ಎಂದರು.
ವಿದ್ಯಾರ್ಥಿಗಳು ಮನೆಯಲ್ಲಿರುವ 18 ವರ್ಷ ತುಂಬಿದ ಕುಟುಂಬದ ಇತರೆ ಸದಸ್ಯರುಗಳು ಹಾಗೂ ಸಾರ್ವಜನಿಕರನ್ನು ಸಹ ಮತದಾನಕ್ಕೆ ನೋಂದಣಿ ಮಾಡಿಸಲು ಮತ್ತು ಮತದಾನದಲ್ಲಿ ಪಾಲ್ಗೊಳ್ಳಲು ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.
ತಾಲ್ಲೂಕು ಮಟ್ಟದ ವಿವಿಧ ಶಾಲೆಗಳಿಂದ ಆಯ್ಕೆಯಾಗಿರುವ ಒಟ್ಟು 55 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯೋಜನಾ ಉಪ ಸಮನ್ವಾಯಾಧಿಕಾರಿ ಲಕ್ಷ್ಮಿಪತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
--------
ಮತದಾನದ ಮೂಲಕ ರಾಷ್ಟ್ರ ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. : ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ
ಚಾಮರಾಜನಗರ, ನವೆಂಬರ್ 19 :- ಮತದಾನದ ಕಾರ್ಯದಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತ ಚಲಾವಣೆಯ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಷ್ಟ್ರವನ್ನು ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ, ಕಾಲೇಜು ಶಿಕ್ಷಣ ಇಲಾಖೆ, ಚುನಾವಣಾ ಸಾಕ್ಷರತಾ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಮತದಾನದಲ್ಲಿ ಭಾಗವಹಿಸುವಂತೆ ಹಾಗೂ ಮತದಾನದ ಪ್ರಾಮುಖ್ಯತೆ ಮತ್ತು ಮತದಾನದ ಸಾಕ್ಷರತೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಒಟ್ಟು 309 ಮತದಾರರ ಸಂಘಗಳನ್ನು ರಚಿಸಲಾಗಿದ್ದು, ಈ ಮೂಲಕ ಮತದಾನದ ಶಿಕ್ಷಣ, ಅರಿವು ಮತ್ತು ಮತದಾನದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿವಿಧ ಚಟುವಟಿಕೆಗಳ ಮೂಲಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.
ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಅರಿವು ಹಾಗೂ ಮಹತ್ವವನ್ನು ತಿಳಿಯಬೇಕಾಗಿದೆ. 18 ವರ್ಷ ತುಂಬಿದ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು. ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಚುನಾವಣಾ ಆಯೋಗ ಹೊರಡಿಸಿರುವÀ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ತಿದ್ದುಪಡಿ, ಇತರೆ ಬದಲಾವಣೆಗಳಿದ್ದಲ್ಲಿ ಖಾತರಿಪಡಿಸಿಕೊಳ್ಳುವಂತೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
-----
ನ. 20ರಿಂದ 22ರವರೆಗೆ ನಗರದಲ್ಲಿ ವಾರ್ಷಿಕ ಪೊಲೀಸ್ ಕ್ರೀಡಾಕೂಟ
ಚಾಮರಾಜನಗರ, ನವೆಂಬರ್ 19 :- ಚಾಮರಾಜನಗರ ಜಿಲ್ಲಾ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ನವೆಂಬರ್ 20 ರಿಂದ 22ರವರೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
ನವೆಂಬರ್ 20ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ನವೆಂಬರ್ 22ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಪ್ರವೀಣ್ ಮಧುಕರ್ ಪವಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಹುಮಾನ ವಿತರಣೆ ಮಾಡುವರು. ಬಂಡೀಪುರದ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಡಾ. ಪಿ. ರಮೇಶ್‍ಕುಮಾರ್, ಕೊಳ್ಳೇಗಾಲ ಮಲೈಮಹದೇಶ್ವರ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋμïಕುಮಾರ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರಾದ ದೀಪ ಜೆ ಕಂಟ್ರಾಕ್ಟರ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಅಣಬೆ ಬೇಸಾಯ ತೆರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನವೆಂಬರ್ 19 - ಎಸ್.ಬಿ.ಐ ಗ್ರಾಮೀಣ ತರಬೇತಿ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಅಣಬೆ ಬೇಸಾಯ ಕುರಿತು 10 ದಿನಗಳ ಉಚಿತ ತರಬೇತಿ ನೀಡಲು ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18ರಿಂದ 45ರ ವಯೋಮಿತಿಯಲ್ಲಿರಬೇಕು. ಗ್ರಾಮೀಣ ಬಿಪಿಎಲ್ ಕಾರ್ಡ್ ಅಥವಾ ಉದ್ಯೋಗ ಖಾತರಿ ಕಾರ್ಡ್, ಆಧಾರ್ ಕಾರ್ಡ್ ಹೊಂದಿರಬೇಕು. ತರಬೇತಿಯು ನವೆಂಬರ್ 22ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯಿಂದ ಅರ್ಜಿ ಪಡೆದು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಎಸ್‍ಬಿಐ ಮಾರ್ಗದರ್ಶಿ ಬ್ಯಾಂಕ್ ಅಥವಾ 9606098878, 9739067155, 8722483393, 08226-200214 ಸಂಪರ್ಕಿಸುವಂತೆ ಎಸ್‍ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment