Saturday, 24 December 2022

24-12-2022 ಚಾಮರಾಜನಗರ ಸುದ್ದಿ(ಜಿಲ್ಲೆಯ 1693 ವಿಕಲಚೇತನ ಫಲಾನುಭವಿಗಳಿಗೆ ಉಚಿತ ಸಾಧನ, ಸಲಕರಣೆಗಳ ಸಮರ್ಪಣೆ )





ಜಿಲ್ಲೆಯ 1693 ವಿಕಲಚೇತನ ಫಲಾನುಭವಿಗಳಿಗೆ ಉಚಿತ ಸಾಧನ, ಸಲಕರಣೆಗಳ ಸಮರ್ಪಣೆ  


       ಚಾಮರಾಜನಗರ, ಡಿಸೆಂಬರ್ 24 - ಕೇಂದ್ರಸರ್ಕಾರದ ವಿಶೇಷ ಆಡಿಪ್ ಯೋಜನೆಯಡಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿನ 1693 ವಿಶೇಷಚೇತನ ಫಲಾನುಭವಿಗಳಿಗೆ 1 ಕೋಟಿ 20 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸಾಧನ, ಸಲಕರಣೆಗಳನ್ನು ನಗರದಲ್ಲಿಂದು ಉಚಿತವಾಗಿ ಸಮರ್ಪಣೆ ಮಾಡಲಾಯಿತು.


      ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ (ದಿವ್ಯಾಂಗಜನ್) ಇಲಾಖೆ, ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಆಲಿಂಕೋ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಾಮಾಜಿಕ ಅಧಿಕಾರಿತಾ ಶಿಬಿರ’ದಲ್ಲಿ ವಿಕಲಚೇತನರಿಗೆ ಅಗತ್ಯವುಳ್ಳ ಸಾಧನ, ಸಲಕರಣೆಗಳನ್ನು ವಿತರಿಸಲಾಯಿತು.


      ಕಾರ್ಯಕ್ರಮ ಉದ್ಘಾಟಿಸಿದ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ ಅವರು ಮಾತನಾಡಿ ದಿವ್ಯಾಂಗರಿಗೆ ಉಚಿತವಾಗಿ ಸಾಧನ, ಸಲಕರಣೆ ವಿತರಣೆ ಕಾರ್ಯಕ್ರಮ ಕೇಂದ್ರಸರ್ಕಾರದ ವಿಶಿಷ್ಟ ಕಾರ್ಯಕ್ರಮವಾಗಿದೆ. ಕೇಂದ್ರಸರ್ಕಾರವು ವಿಶೇಷಚೇತನರ ಬಗ್ಗೆ ವಿಶೇಷ ಕಾಳಜಿ ಹೊಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆ, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಉತ್ತಮ ಸೇವಾಕಾರ್ಯವಾಗಿದೆ ಎಂದು ತಿಳಿಸಿದರು.  


      ವಿಕಲತೆ ಆಕಸ್ಮಿಕ, ವಿಕಲಚೇತನರನ್ನು ಸಲಹುವ ಯಾವುದೇ ತಂದೆ, ತಾಯಿ ಹಾಗೂ ಪೋಷಕರು ಎಂತಹುದೇ ಪರಿಸ್ಥಿತಿಯಲ್ಲಿ ಚೈತನ್ಯ ಕಳೆದುಕೊಳ್ಳಬಾರದು. ವಿಕಲಾಂಗರಿಗೆ ಸೂಕ್ತ ಮಾರ್ಗದರ್ಶನ ನೀಡಿ ಚಿಕಿತ್ಸೆ ಕೊಡಿಸಬೇಕು. ಅವರಲ್ಲಿ ಭರವಸೆ ತುಂಬಬೇಕು. ಸರ್ಕಾರಗಳು ನಿಮ್ಮ ಜತೆಯಲ್ಲಿವೆ. ಅಗತ್ಯ ಸೌಲಭ್ಯಗಳನ್ನು ನೀಡಲಿವೆ. ವಿಕಲಚೇತನರ ನೋವಿಗೆ ಸ್ಪಂದಿಸುವುದು ಕೇಂದ್ರ ಹಾಗೂ ರಾಜ್ಯಸರ್ಕಾರಗಳ ಆದ್ಯತೆಯಾಗಿದೆ ಎಂದರು.


      ಕೇಂದ್ರಸರ್ಕಾರವು ದೇಶದಲ್ಲಿ ಈವರೆಗೆ 12756 ಶಿಬಿರಗಳನ್ನು ಏರ್ಪಡಿಸಿ, 1456 ಕೋಟಿ ವೆಚ್ಚದಲ್ಲಿ 20 ಲಕ್ಷಕ್ಕೂ ವಿಕಲಚೇತನರಿಗೆ ಸಾಧನ, ಸಲಕರಣೆಗಳನ್ನು ಉಚಿತವಾಗಿ ವಿತರಿಸಿದೆ. ವಿಕಲಚೇತನರ ಅಶಕ್ತ ಕುಟುಂಬಗಳಿಗೆ ನೆರವಾಗುವುದು ಸರ್ಕಾರ ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಎಲ್ಲಾ ವರ್ಗದ ಜನರಿಗೂ ವಿಶೇಷ ಕಲ್ಯಾಣ ಯೋಜನೆಗಳನ್ನು ರೂಪಿಸಿದೆ. ಕೇಂದ್ರಸರ್ಕಾರದ ಯೋಜನೆಗಳ ಬಗ್ಗೆ ಸಾಮಾನ್ಯ ಜನರಿಗೆ ಅರಿವು ಮೂಡಿಸಿ ಕಾರ್ಯಕ್ರಮಗಳನ್ನು ತಲುಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ನಾರಾಯಣಸ್ವಾಮಿ ಅವರು ತಿಳಿಸಿದರು. 


      ಘನ ಉಪಸ್ಥಿತಿ ವಹಿಸಿದ್ದ ಇಡೀ ಕಾರ್ಯಕ್ರಮದ ರೂವಾರಿ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಮಾತನಾಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ, ಸಲಕರಣೆ ವಿತರಣೆ ಮಾದರಿ, ಮಾನವೀಯತೆಗೆ ಸ್ಪಂದಿಸುವ ಹಾಗೂ ಹೃದಯ ತಟ್ಟುವಂತಹ ಕಾರ್ಯಕ್ರಮವಾಗಿದೆ. ಸಾಧನ, ಸಲಕರಣೆ ವಿತರಿಸಲು ದೇಶದ 36 ಲೋಕಸಭಾ ಕ್ಷೇತ್ರಗಳು ಆಯ್ಕೆಯಾಗಿವೆ. ಕರ್ನಾಟಕ ರಾಜ್ಯದಲ್ಲಿ ಚಾಮರಾಜನಗರ ಈ ಯೋಜನೆಗೆ ಆಯ್ಕೆಯಾಗಿರುವ ಏಕೈಕ ಲೋಕಸಭಾ ಕ್ಷೇತ್ರವಾಗಿದೆ ಎಂದರು. 



      ಜಿಲ್ಲೆಯ ಪ್ರತಿ ಹಳ್ಳಿ. ಗ್ರಾಮ ಪಂಚಾಯಿತಿ ಮಟ್ಟದಿಂದಲೂ ವಿಕಲಚೇತನರನ್ನು ಗುರುತಿಸಿ ಸಾಧನ, ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ಇವುಗಳ ಸದ್ಭಳಕೆ ಗ್ರಾಮೀಣ ಜನತೆಗೆ ಪೂರ್ಣಪ್ರಮಾಣದಲ್ಲಿ ಆಗಬೇಕು. ದಕ್ಷಿಣ ಭಾರತದಲ್ಲಿಯೇ ಇದು ದೊಡ್ಡಮಟ್ಟದ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಯಶಸ್ವಿಗೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಶ್ರಮಿಸಿದ್ದಾರೆ. ಕಾರ್ಯಕ್ರಮ ಯಶಸ್ಸು ಆತ್ಮತೃಪ್ತಿ ತಂದಿದೆ ಎಂದು ಲೋಕಸಭಾ ಸದಸ್ಯರಾದ ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು.


      ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಚಾಮರಾಜನಗರದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ದೊಡ್ಡಮಟ್ಟದ ವಿಶೇಷ ಕಾರ್ಯಕ್ರಮ ಇದಾಗಿದೆ. ಉಚಿತವಾಗಿ ಸಾಧನ, ಸಲಕರಣೆ ವಿತರಣೆಯಿಂದ ಜಿಲ್ಲೆಯ ವಿಕಲಚೇತನರಿಗೆ ಅನುಕೂಲವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಕಲಚೇತನರಿಗೆ ನೀಡುತ್ತಿರುವ ಮಾಸಾಶನವನ್ನು ಹೆಚ್ಚಿಸಬೇಕು ಎಂದರು.

   

      ಶಾಸಕರಾದ ಎನ್. ಮಹೇಶ್ ಹಾಗೂ ಸಿ.ಎಸ್. ನಿರಂಜನಕುಮಾರ್ ಅವರುಗಳು ಮಾತನಾಡಿ ವಿಕಲಚೇತನರಿಗೆ ಸಾಧನ, ಸಲಕರಣೆ ವಿತರಣೆಯು ಆಖಂಡ ಮಾನವೀಯತೆ ಕಾರ್ಯವಾಗಿದೆ. ವಿಕಲಚೇತನರನ್ನು ಅವರ ಮನೆಗಳಲ್ಲಿಯೇ ತಿರಸ್ಕಾರದಿಂದ ನೋಡುವುದು ಸಾಮಾನ್ಯ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಕಲಾಂಗರಲ್ಲಿ ಆತ್ಮವಿಶ್ವಾಸ ತುಂಬಿ ಸಮಾಜದಲ್ಲಿ ಇತರರಂತೆ ಸ್ವಾವಲಂಬಿಗಳಾಗಿ ಬದುಕಲು ಅವಕಾಶ ಮಾಡಿಕೊಟ್ಟಿವೆ ಎಂದರು.

      

      ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶೇಷಚೇತನ ಮಕ್ಕಳಿಗೆ ಆಗತ್ಯ ಸಾಧನ ಸಲಕರಣೆಗಳನ್ನು ಗಣ್ಯರು ವಿತರಣೆ ಮಾಡಿದರು.


      ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭಾ ಅಧ್ಯಕ್ಷರಾದ ಸಿ.ಎಂ. ಆಶಾ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ಉಪವಿಭಾಗಾಧಿಕಾರಿ ಗೀತಾಹುಡೇದ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಗೀತಾಲಕ್ಷ್ಮೀ, ಆಲಿಂಕೋ ಸಂಸ್ಥೆಯ ಹಿರಿಯ ವ್ಯವಸ್ಥಾಪಕರಾದ ಎ.ವಿ. ಆಶೋಕ್‍ಕುಮಾರ್, ಇತರರು ಕಾರ್ಯಕ್ರಮದಲ್ಲಿ ಇದ್ದರು.


      


            


       


 

Thursday, 22 December 2022

22-12-2022 ಚಾಮರಾಜನಗರ ಸುಧ್ದಿಗಳು




 



ಚಿಕ್ಕಲ್ಲೂರಿನ ಜಾತ್ರಾ ಮಹೋತ್ಸವ ಸಿದ್ದತೆಗೆ ಕ್ರಮ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ 

  ಚಾಮರಾಜನಗರ, ಡಿಸೆಂಬರ್ 22 :- ಕೊಳ್ಳೇಗಾಲ ತಾಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರಿನ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲ ಸಿದ್ದತೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಿಕ್ಕಲ್ಲೂರು ಜಾತ್ರಾ ಮಹೋತ್ಸವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಾತ್ರೆ ಭಕ್ತರ ಭಾವನೆಗಳಿಗೆ ಸಂಬಂಧಿಸಿದ್ದು, ಎಂದಿನಂತೆ ಸಾಂಪ್ರದಾಯಿಕ ಪರಂಪರೆ ಅನುಸಾರವಾಗಿ ಜಾತ್ರೆ ನಡೆಸಿಕೊಂಡು ಹೋಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಲಾಗುತ್ತದೆ. ಮೂಲಸೌಕರ್ಯ, ಕುಡಿಯುವ ನೀರು, ಬಸ್, ಸುಗಮ ಸಂಚಾರ ಸೇರಿದಂತೆ ಭಕ್ತಾಧಿಗಳಿಗೆ ಅಗತ್ಯವಿರುವ ಇನ್ನಿತರ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಪರಂಪರೆ ಪ್ರಕಾರ ಜಾತ್ರಾ ಮಹೋತ್ಸವಕ್ಕೆ ಭಕ್ತಾಧಿಗಳು ಆಗಮಿಸಲಿದ್ದು, ಎಲ್ಲ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇಂದಿನ ಸಭೆಯಲ್ಲಿ ಮುಖಂಡರು, ಭಕ್ತಾಧಿಗಳು ಸೇರಿದಂತೆ ಸರ್ವರಿಂದ ಜಾತ್ರಾ ಸಂಬಂಧ ವ್ಯಕ್ತವಾಗಿರುವ ಅಭಿಪ್ರಾಯ ಸಲಹೆಗಳನ್ನು ಆಲಿಸಲಾಗಿದೆ. ಜಾತ್ರೆಗೆ ಬೇಕಿರುವ ಎಲ್ಲ ಸಿದ್ದತೆಗಳನ್ನು ಮಾಡಲಾಗುತ್ತದೆ. ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. 

ಸಭೆಯಲ್ಲಿ ಭಾಗವಹಿಸಿದ್ದ ಸರ್ವ ಮುಖಂಡರು ಭಕ್ತಾಧಿಗಳು ಮಠಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಭಿನ್ನಾಬಿಪ್ರಾಯಗಳಿಂದ ಜಾತ್ರಾ ಪರಂಪರೆ ಆಚರಣೆಗೆ ಯಾವುದೇ ಅಡ್ಡಿಯಾಗಬಾರದೆಂದು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಮಾತನಾಡಿ ಈ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಜಾತ್ರೆಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಕ್ರಮ ವಹಿಸಲಾಗುತ್ತದೆ. ಎಂದಿನಂತೆ ಜಾತ್ರೆ ನಡೆಯಲು ಎಲ್ಲ ವ್ಯವಸ್ಥೆ ಕೈಗೊಳ್ಳಲಾಗುತ್ತದೆ ಎಂದರು. 

ಭಕ್ತರ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಜಾತ್ರೆ ನಡೆಸಿಕೊಂಡು ಹೋಗಬೇಕಿದೆ. ಹೆಚ್ಚಿನ ಜನರು ಜಾತ್ರೆಗೆ ಆಗಮಿಸುವ ಹಿನ್ನೆಲೆಯಲ್ಲಿ ಶಿಸ್ತುಬದ್ದವಾಗಿ ಹಲವು ವ್ಯವಸ್ಥೆಗಳನ್ನು ಮಾಡಬೇಕಿದೆ. ಇದಕ್ಕಾಗಿ ವಿವರವಾಗಿ ಚರ್ಚೆ ನಡೆಸಿ ಎಲ್ಲ ಸಿದ್ದತೆಗಳನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‍ರಾಜ್, ಉಪವಿಭಾಗಾಧಿಕಾರಿ ಗೀತಾ ಹುಡೇದ, ಮಠದ ಜ್ಞಾನನಂದ ಚೆನ್ನರಾಜೇ ಅರಸ್, ಬಿ.ಪಿ. ಭರತರಾಜೇ ಅರಸ್, ಸಾಹಿತಿ, ಮುಖಂಡರಾದ ಮಹದೇವ ಶಂಕನಪುರ, ಉಗ್ರನರಸಿಂಹೇಗೌಡ, ಸೋಮಶೇಖರ್, ರಾಜೇಂದ್ರ, ವೆಂಕಟರಮಣಪಾಪು, ರಾಜಶೇಖರಮೂರ್ತಿ, ಕೆ.ಎಂ. ನಾಗರಾಜು, ಅಣಗಳ್ಳಿ ಬಸವರಾಜು, ಬ್ಯಾಡಮೂಡ್ಲು ಬಸವಣ್ಣ, ಕಂದಹಳ್ಳಿ ನಾರಾಯಣ, ಇತರರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. 
----

ಕೌಟುಂಬಿಕ ಭದ್ರತೆ, ಜೀವನ ನಿರ್ವಹಣೆಗೆ ಉದ್ಯೋಗ ಅಗತ್ಯವಾಗಿದೆ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ 

         ಚಾಮರಾಜನಗರ, ಡಿಸೆಂಬರ್ 22 - ಕುಟುಂಬ ಭದ್ರತೆ, ಜೀವನ ನಿರ್ವಹಣೆಗೆ ಅತ್ಯಗತ್ಯವಾಗಿರುವುದರಿಂದ ಪ್ರತಿಯೊಬ್ಬರು ಉದ್ಯೋಗ ಮೇಳಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಅಭಿಪ್ರಾಯಪಟ್ಟರು. 

     ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಡೀ ಕುಟುಂಬ ನಿರ್ವಹಣೆಗೆ ಉದ್ಯೋಗ ಅವಶ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಜೀವನ ನಿರ್ವಹಣೆಗೆ ಸರ್ಕಾರಿ ಅಥವಾ ಖಾಸಗಿ ಕ್ಷೇತ್ರ ಯಾವುದಾದರೂ ಸರಿಯೇ ನಿರುದ್ಯೋಗಿಗಳು ಕೆಲಸ ನಿರ್ವಹಿಸಲು ಸಿದ್ದರಾಗಿರಬೇಕು. ವಿದ್ಯೆಯ ಜೊತೆಗೆ ತಮ್ಮಲ್ಲಿರುವ ಪ್ರತಿಭೆ, ನೈಪುಣ್ಯತೆ, ಕೌಶಲ್ಯವನ್ನು ಉದ್ಯೋಗದಾತ ಕಂಪನಿಗಳ ಸಮ್ಮುಖದಲ್ಲಿ ಪ್ರಸ್ತುತಪಡಿಸಬೇಕು. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕ, ಯುವತಿಯರು ಭೌತಿಕವಾಗಿ ಮಾತ್ರವಲ್ಲ ಮಾನಸಿಕವಾಗಿ ಸದೃಢರಾಗಿರಬೇಕು ಎಂದು ಜಿಲ್ಲಾಧಿಕಾರಿಯವರು ಕಿವಿಮಾತು ಹೇಳಿದರು.   

ಜಿಲ್ಲೆಯಲ್ಲಿ ಕಳೆದ ಬಾರಿ ನಡೆದ ಉದ್ಯೋಗ ಮೇಳದಲ್ಲಿ ನೊಂದಾಯಿತರಾಗಿದ್ದವರ ಪೈಕಿ 95 ಯುವಜನರಿಗೆ ಕೆಲಸ ದೊರೆತಿದೆ. ಈ ಬಾರಿಯೂ ಸಹ ಸಾಕಷ್ಟು ನಿರುದ್ಯೋಗಿಗಳು ಉದ್ಯೋಗ ಅರಸಿ ಮೇಳಕ್ಕೆ ಹಾಜರಾಗಿದ್ದಾರೆ. ಸಂಬಂಧಪಟ್ಟ ಇಲಾಖೆಗಳು ಸಂದರ್ಶನಕ್ಕೂ ಮೊದಲು ಕಾರ್ಯಾಗಾರಗಳನ್ನು ಆಯೋಜಿಸಿ ತರಬೇತಿ ನೀಡಿ ನಿರುದ್ಯೋಗಿಗಳು ಹೆಚ್ಚಿನ ಕೌಶಲ್ಯತೆ ಹೊಂದುವಂತೆ ಪರಿಪೂರ್ಣಗೊಳಿಸುವ ಕಾರ್ಯ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರಾದ ರಾಜೇಂದ್ರಪ್ರಸಾದ್ ಅವರು ಮಾತನಾಡಿ ಈ ಹಿಂದೆ ಉದ್ಯೋಗಮೇಳಗಳಿಗೆ ಜಿಲ್ಲೆಯ ನಿರುದ್ಯೋಗಿಗಳನ್ನು ಮೈಸೂರು, ಬೆಂಗಳೂರು, ಇತರೆ ಸ್ಥಳಗಳಿಗೆ ಕಳುಹಿಸಲಾಗುತ್ತಿತ್ತು. ಪ್ರಸ್ತುತ ಜಿಲ್ಲೆಯಲ್ಲಿಯೇ ಉದ್ಯೋಗಮೇಳಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ಕೈಗಾರಿಕೆಗಳ ಬೆಳವಣಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ನಿರುದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಮಹಮ್ಮದ್ ಅಕ್ಬರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಮಹದೇವಸ್ವಾಮಿ, ಕೈಮಗ್ಗ, ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಯೋಗೀಶ್, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ನಂಜನಗೂಡು, ಮೈಸೂರು ಹಾಗೂ ಬೆಂಗಳೂರಿನ ಖಾಸಗಿ ಕಂಪನಿಗಳಲ್ಲಿ ಮಾರುಕಟ್ಟೆ ಸೇವೆಗಳು, ಹಣಕಾಸು, ಇನ್ಸೂರೆನ್ಸ್, ಕೈಗಾರಿಕಾ, ಬ್ಯಾಂಕಿಂಗ್ ಮತ್ತು ಆಸ್ಪತ್ರೆ ಸೇವೆಗಳು ಹಾಗೂ ಇತರೆ ಎಲ್ಲಾ ರೀತಿಯ ಸೇವೆ ನೀಡುವ 32 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದವು.  
     
         ಉದ್ಯೋಗಮೇಳದಲ್ಲಿ ನೊಂದಣಿಯಾದ ಒಟ್ಟು 556 ಯುವಕ, ಯುವತಿಯರ ಪೈಕಿ ಉದ್ಯೋಗಕ್ಕೆ ಆಯ್ಕೆಗೊಂಡ 107 ಮಂದಿಗೆ ಪ್ರಮಾಣಪತ್ರ ವಿತರಿಸಲಾಯಿತು. 120 ಮಂದಿಯನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಯಿತು.

ಗೃಹರಕ್ಷಕರ ಸೇವಾ ಮನೋಭಾವ ಶ್ಲಾಘನೀಯ : ಜಿಲ್ಲಾ ಪೊಲೀಓಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್  

         ಚಾಮರಾಜನಗರ, ಡಿಸೆಂಬರ್ 22 - ಜೀವದ ಹಂಗು ತೊರೆದು ಸ್ವಯಂಪ್ರೇರಿತರಾಗಿ ಪೊಲೀಸರೊಂದಿಗೆ ಕಾರ್ಯನಿರ್ವಹಿಸುವ ಗೃಹರಕ್ಷಕರ ಸೇವಾ ಮನೋಭಾವ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ತಿಳಿಸಿದರು

     ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿಂದು ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

     ಗೃಹರಕ್ಷಕರು ಪೊಲೀಸರಂತೆ ವೃತ್ತಿ ಸಮಯದಲ್ಲಿ ಸಾಕಷ್ಟು ಕಠಿಣ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ಯಾವುದೇ ಜೀವನ ಭದ್ರತೆಯಲ್ಲದೇ ಸಂಪೂರ್ಣವಾಗಿ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಗೃಹರಕ್ಷಕರ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದೆ. ಪೊಲೀಸ್ ಇಲಾಖೆಗೆ ನೀಡಿರುವ ಎಲ್ಲಾ ಸೌಲಭ್ಯಗಳನ್ನು ಗೃಹರಕ್ಷಕರು ಪಡೆಯಲು ಸಹಕಾರ ನೀಡಲಾಗುವುದು ಎಂದರು.   
     ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಜಾತ್ರಾ ಕಾರ್ಯಕ್ರಮಗಳು, ಗಣ್ಯರು ಆಗಮಿಸುವ ವೇಳೆ ಹೆಚ್ಚಿನ ಭದ್ರತೆಗಾಗಿ ಪೊಲೀಸರೊಂದಿಗೆ ಗೃಹರಕ್ಷಕರನ್ನು ನಿಯೋಜನೆಗೊಳಿಸಲಾಗುತ್ತದೆ. ಯಾವುದೇ ಗೃಹರಕ್ಷಕರು ಕೌಟುಂಬಿಕ ಸಮಸ್ಯೆಗಳನ್ನು ಲೆಕ್ಕಿಸದೇ ಸೇವಾ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಲಿದ್ದಾರೆ. ಅವರ ಸೇವಾ ಕಾರ್ಯ ಮೆಚ್ಚುವಂತದ್ದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ತಿಳಿಸಿದರು.

     ಇದೇ ವೇಳೆ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಕೆ.ಪಿ. ನವೀನ್ ಕುಮಾರ್, ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕøತರಾದ ಬೆಂಗಳೂರಿನ ಐಟಿಐ ಲಿಮಿಟೆಡ್ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಡಾ. ಎಂ. ಪ್ರಸನ್ನ ಮತ್ತು ಸೇವೆಯಲ್ಲಿ ಉತ್ತಮ ಸಾಧನೆಗೈದ ಗೃಹರಕ್ಷಕರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೃಹರಕ್ಷಕದಳದ ಜಿಲ್ಲಾ ಕಮಾಂಡಂಟ್ ಬಿ.ಎಸ್. ಬಸವರಾಜು ವಹಿಸಿದ್ದರು.

      ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‍ರಾಜ್, ಸಾರಿಗೆ ಇಲಾಖೆ ಮೋಟಾರು ವಾಹನ ನಿರೀಕ್ಷಕರಾದ ಯೋಗೀಶ್, ಕೆ.ವಿ. ನಾಗರಾಜು, ಇತರರು ಕಾರ್ಯಕ್ರಮದಲ್ಲಿ ಇದ್ದರು.
----

ಡಿ. 23ರಂದು ಡೇ-ನಲ್ಮ್ ಯೋಜನೆ ಕುರಿತ ಕಾರ್ಯಾಗಾರ

 ಚಾಮರಾಜನಗರ, ಡಿಸೆಂಬರ್ 22:- ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಎಸ್.ಬಿ.ಐ) ಸಹಯೋಗದಲ್ಲಿ ಡೇ-ನಲ್ಮ್ ಅಭಿಯಾನದ ಸ್ವಯಂ ಉದ್ಯೋಗ ಕಾರ್ಯಕ್ರಮ ಉಪಘಟಕದಡಿ ಜಿಲ್ಲಾ ಮಟ್ಟದ ಬ್ಯಾಂಕ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಡಿಸೆಂಬರ್ 23ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ತಾಲೂಕು ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 

ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಎ. ಮಹಮದ್ ಅಕ್ಬರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡುವರು. ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಸುರೇಖಾ, ನಗರಸಭೆ ಪೌರಾಯುಕ್ತರಾದ ರಾಮ್‍ದಾಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಎನ್. ಪೂರ್ಣಿಮಾ, ಮೈಸೂರು ಕೆನರಾ ಬ್ಯಾಂಕ್ ನಿವೃತ್ತ ಮುಖ್ಯ ವ್ಯವಸ್ಥಾಪಕರಾದ ಕೃಷ್ಣಮೂರ್ತಿ, ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. 


ಡಿ. 23ರಂದು ಸಂತೇಮರಹಳ್ಳಿ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ
 
      ಚಾಮರಾಜನಗರ, ಡಿಸೆಂಬರ್ 22 :- ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮವು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಗೆ ಬರುವ ಸಂತೇಮರಹಳ್ಳಿ ಉಪಕೇಂದ್ರದಲ್ಲಿ ತುರ್ತು ಕಾಮಗಾರಿಯನ್ನು ಡಿಸೆಂಬರ್ 23ರಂದು ಹಮ್ಮಿಕೊಂಡಿರುವುದರಿಂದ ಸಂತೇಮರಹಳ್ಳಿ ಭಾಗದ ವಿವಿಧ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 

      ಯಡಿಯೂರು, ಸಂತೇಮರಹಳ್ಳಿ, ಸಂತೇಮರಹಳ್ಳಿ ಮೋಳೆ, ಹೊಸಮೋಳೆ, ಕೆಂಪನಪುರ, ಚುಂಗಡಿಪುರ, ಮಹಂತಾಳಪುರ, ಹುಲ್ಲೇಪುರ, ನಡಕಲಮೋಳೆ, ಬಸವಟ್ಟಿ, ತೆಳ್ಳನೂರು, ಕಾವುದವಾಡಿ, ಕಮರವಾಡಿ, ದೇಮಹಳ್ಳಿ, ಬಾಣಹಳ್ಳಿ, ಹೆಬ್ಬಳ್ಳಿ, ಕೊನ್ನುಂಡಿ, ಅಂಕನಶೆಟ್ಟಿಮೋಳೆ, ಹೆಗ್ಗವಾಡಿ, ಮೂಡಲಅಗ್ರಹಾರ, ವಿವೇಕಾನಂದ ಕಾಲೋನಿ, ಹೆಗ್ಗವಾಡಿಪುರ, ದೇಶವಳ್ಳಿ, ಕುದೇರು, ದೇಮಹಳ್ಳಿಮೋಳೆ, ಯಲಕ್ಕೂರು, ತೆಂಕಲಮೋಳೆ, ಬಡಗಲಮೋಳೆ, ಕರಡಿಮೋಳೆ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಂತೇಮರಹಳ್ಳಿ ಕಾರ್ಯ ಮತ್ತು ಪಾಲನ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. 

ಡಿ. 23ರಂದು ನಗರದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ :  ಜಾಥಾ, ಕಾರ್ಯಗಾರ ಆಯೋಜನೆ 

 ಚಾಮರಾಜನಗರ, ಡಿಸೆಂಬರ್ 22 - ಕೃಷಿ ಇಲಾಖೆ ವತಿಯಿಂದ ಭಾರತದ ಐದನೇ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ರವರ ಜನ್ಮದಿನದ ಅಂಗವಾಗಿ ಡಿಸೆಂಬರ್ 23ರಂದು ನಗರದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. 

ಬೆಳಿಗ್ಗೆ 9.45 ಗಂಟೆಗೆ ಜಿಲ್ಲಾಡಳಿತ ಭವನದ ಮುಂಭಾಗ ಗ್ರಾಹಕರಿಗೆ ಅರಿವು ಮೂಡಿಸುವ ಸಲುವಾಗಿ ರೈತರ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಸಿರಿಧಾನ್ಯ ಜಾಥಾಗೆ ಚಾಲನೆ ದೊರೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಗರದ ವಾಲ್ಮೀಕಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಮೌಲ್ಯವರ್ಧನೆಯ ಮೂಲಕ ಕೃಷಿ ಅಭಿವೃದ್ದಿಯನ್ನು ವೇಗಗೊಳಿಸುವುದು, ಸಿರಿಧಾನ್ಯ ಮತ್ತು ನೈಸರ್ಗಿಕ ಕೃಷಿ ಕುರಿತ ಕಾರ್ಯಗಾರವನ್ನು ಆಯೋಜಿಸಲಾಗಿದೆ. 

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರಾದ ಮಧುಸೂಧನ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ

Wednesday, 21 December 2022

21-12-2022 ಚಾಮರಾಜನಗರ ಸುದ್ದಿಗಳು









 

File -1 (photo n news)

ಗೌರವ, ಸಮಾನವಕಾಶ ನೀಡಿಕೆಯಿಂದ ಮಾನವ ಹಕ್ಕುಗಳ ಸಾರ್ಥಕತೆ : ನ್ಯಾಯಾಧೀಶರಾದ ಲೋಕಪ್ಪ 

         ಚಾಮರಾಜನಗರ, ಡಿಸೆಂಬರ್ 21  ಸಮಾಜದಲ್ಲಿ ಪ್ರತಿಯೊಬ್ಬರಿಗೂ ಗೌರವ ನೀಡಿ, ಸಮಾನವಕಾಶ ಕಲ್ಪಿಸುವುದರಲ್ಲಿ ಮಾನವ ಹಕ್ಕುಗಳ ಸಾರ್ಥಕತೆ ಅಡಗಿದೆ ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಲೋಕಪ್ಪ ಅವರು ಅಭಿಪ್ರಾಯಪಟ್ಟರು. 

     ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

     ಸಾಮಾಜಿಕ ಅಸಮಾನತೆ, ಲಿಂಗತ್ವ ತಾರತಮ್ಯಗಳನ್ನು ಬದಿಗೊತ್ತಿ ಪ್ರತಿಯೊಬ್ಬರು ಸಾಮಾಜಿಕ ಮುಂಚೂಣಿಯಲ್ಲಿ ನಿಂತು ಇತರರಿಗೂ ಸಮಾನ ಅವಕಾಶಗಳನ್ನು ಒದಗಿಸುವುದು ಮಾನವ ಹಕ್ಕು ದಿನದ ಪ್ರಾಮುಖ್ಯತೆಯಾಗಿದೆ. ಮನುಷ್ಯ ಮನುಷ್ಯನನ್ನು ಗೌರವಿಸಬೇಕು. ಮಾನವ ಹಕ್ಕುಗಳು ಸಾಮಾಜಿಕ ಬದಲಾವಣೆಗೆ ಮುನ್ನುಡಿಯಾಗಬೇಕು. ಮಾನವ ಹಕ್ಕುಗಳಿಗೆ ಬಹಳ ಹಿಂದಿನಿಂದಲೂ ಪ್ರಾತಿನಿಧ್ಯವಿದೆ. ಬುದ್ಧ, ಬಸವ, ಅಂಬೇಡ್ಕರ್. ಕನಕದಾಸರು ಸೇರಿದಂತೆ ಎಲ್ಲಾ ಸಾಧು ಸಂತರು, ವಿಚಾರವಾಧಿಗಳು ಮಾನವ ಹಕ್ಕುಗಳನ್ನು ಪ್ರತಿಪಾದಿಸುತ್ತಲೇ ಬಂದಿದ್ದಾರೆ ಎಂದರು.

     ಭಾರತಕ್ಕೆ ಪರಕೀಯರ ಆಗಮನ ಹಾಗೂ ವಿಶ್ವದಲ್ಲಿ ಸಂಭವಿಸಿದ 2 ಮಹಾಯುದ್ಧಗಳಿಂದ ಶೋಷಣೆ ಮತ್ತು ದೌರ್ಜನ್ಯಗಳು ಮಿತಿಮೀರಿದ್ದ ಹಿನ್ನೆಲೆಯಲ್ಲಿ ನಾಗರಿಕರನ್ನು ಸಂಕಷ್ಟದಿಂದ ರಕ್ಷಿಸುವ ನಿಟ್ಟಿನಲ್ಲಿ 1948ರಲ್ಲಿ ಮಾನವ ಹಕ್ಕುಗಳ ಆಯೋಗ ರಚನೆಯಾಯಿತು. ಈ ಕಾಲಘಟ್ಟದಲ್ಲಿಯೇ ಸಂವಿಧಾನ ರಚನೆಗೂ ಅಡಿಪಾಯ ಹಾಕಲಾಯಿತು. ಮಾನವ ಹಕ್ಕುಗಳ ಹಿತರಕ್ಷಣೆಯ ಆಧಾರದಲ್ಲಿ ಸಂವಿಧಾನ ರಚಿತವಾಗಿದೆ ಎಂದು ಲೋಕಪ್ಪ ತಿಳಿಸಿದರು.    

      ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಶಂಕರಾಚಾರ್ಯರು ಎಲ್ಲರೂ ಬ್ರಹ್ಮಸ್ವರೂಪಿಗಳು ಎಂದಿದ್ದಾರೆ. ಬಸವಣ್ಣನವರು ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ, ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ, ಈ ಸರಳ ತತ್ವಗಳನ್ನು ಸಮಾಜದ ಎಲ್ಲರೂ ಅರಿತು ಸಮಾಜಕ್ಕೆ ನಮ್ಮ ಕೊಡುಗೆ ಏನು? ಎಂಬುದನ್ನು ಮನಗಾಣಬೇಕು. ಮೇಲು-ಕೀಳು, ಕರಿಯ-ಬಿಳಿಯ ತಾರತಮ್ಯಗಳನ್ನು ಕಿತ್ತೊಗೆದು ಪ್ರತಿಯೊಬ್ಬರನ್ನು ಗೌರವ ಆದರಗಳಿಂದ ಕಾಣಬೇಕು. ಸಮಾನವಕಾಶಗಳಿಂದ ಇತರರ ನಿರೀಕ್ಷೆಗಳನ್ನು ತುಂಬಬೇಕು ಎಂದರು.

      ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಅವರು ಮಾತನಾಡಿ ಸಮಾಜದಲ್ಲಿ ಎಲ್ಲರಿಗೂ ಶಾಂತಿ, ನೆಮ್ಮದಿಯಿಂದ ಜೀವಿಸಲು ಮಾನವ ಹಕ್ಕುಗಳು ಅವಶ್ಯವಾಗಿವೆ. ಮಾನವ ಹಕ್ಕುಗಳ ಬಗ್ಗೆ ಜನರಿಗೆ ಅರಿವು ಕೂಡ ಅಷ್ಟೆ ಅಗತ್ಯವಾಗಿದೆ. ವಿಶ್ವಾದ್ಯಂತ 500ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾನವ ಹಕ್ಕುಗಳು ರಚಿತವಾಗಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಆಧಾರಸ್ಥಂಭವಾಗಿದ್ದರೆ ಅದರ ಮೂಲ ಮಾನವ ಹಕ್ಕುಗಳೇ ಆಗಿವೆ ಎಂದರು. 

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ಮನುಷ್ಯನಿಗೂ ಘನತೆ, ಗೌರವವಿದೆ. ಲಿಂಗಾಧಾರಿತ ಸಮಾಜದಲ್ಲಿ ಪುರುಷ, ಮಹಿಳೆಯರು, ಮಕ್ಕಳು ಹಾಗೂ ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರನ್ನು ಸಾಮಾಜಿಕವಾಗಿ ಹಾಗೂ ವೈಯಕ್ತಿಕವಾಗಿ ಗೌರವಿಸುವುದನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.  

     ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪಿ. ಮಾದೇಶ್ ಅವರು ಮಾತನಾಡಿ ಪ್ರಕೃತಿದತ್ತವಾದ ಸಂಪತ್ತು ಎಲ್ಲರಿಗೂ ಸಮಾನವಾಗಿ ದೊರೆಯಬೇಕು. ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಎಲ್ಲರಲ್ಲಿಯೂ ಅರಿವು ಮೂಡಿಸಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಮಾನವ ಹಕ್ಕುಗಳು ರಚಿತವಾಗಿವೆ. ಈ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ತಿಳಿವಳಿಕೆ ಹೊಂದಬೇಕು ಎಂದರು.

     ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾತನಾಡಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ. ಆದರೆ ಸಾಯುವ ಹಕ್ಕಿಲ್ಲ. ಆತ್ಮಹತ್ಯೆ ಮಾನವ ಹಕ್ಕು ಉಲ್ಲಂಘನೆಯಾಗಲಿದೆ. ಮಾನವ ಹಕ್ಕು ಉಲ್ಲಂಘನೆಯಿಂದ ಉಳ್ಳವರಿಗಿಂತ ಬಡವರಿಗೆ ತೊಂದರೆಯಾಗಲಿದೆ. ಅಧಿಕಾರಿಗಳು, ಸಿಬ್ಬಂದಿ ಮಾನವ ಹಕ್ಕುಗಳ ಬಗ್ಗೆ ಅರಿತು ನ್ಯಾಯಯುತವಾಗಿ ಕರ್ತವ್ಯಗಳನ್ನು ಪಾಲಿಸಬೇಕು ಎಂದರು. 

     ಇದೇ ವೇಳೆ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕುರಿತು ಜಿಲ್ಲೆಯ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 

 ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. 
------
(File -2 photo n news)

ವಿಶೇಷಚೇತನರಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ : ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರಿಂದ ಸಿದ್ದತೆ ಪರಿಶೀಲನೆ
 
      ಚಾಮರಾಜನಗರ, ಡಿಸೆಂಬರ್ 21 - ಜಿಲ್ಲೆಯ 1693 ವಿಶೇಷಚೇತನರಿಗೆ 5 ಕೋಟಿ ರೂ. ವೆಚ್ಚದಲ್ಲಿ ಸಾಧನ ಸಲಕರಣೆಗಳನ್ನು ವಿತರಿಸುವ ಬೃಹತ್ ವಿಶೇಷ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 24ರಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಇದರ ಸಿದ್ದತೆಗಳನ್ನು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಪರಿಶೀಲಿಸಿದರು.

     ಕಳೆದ ಜುಲೈ ತಿಂಗಳಿನಲ್ಲಿ ಜಿಲ್ಲೆಯ ವಿವಿಧೆಡೆ ನಡೆಸಲಾದ ವಿಶೇಷಚೇತನರ ತಪಾಸಣಾ ಶಿಬಿರದಲ್ಲಿ 1693 ವಿಶೇಷಚೇತನರಿಗೆ ಸಾಧನ, ಸಲಕರಣೆಗಳನ್ನು ವಿತರಿಸಲು ಗುರುತಿಸಲಾಗಿದೆ. ಈ ಎಲ್ಲರಿಗೂ ಇದೇ ಡಿಸೆಂಬರ್ 24ರಂದು ಸಾಧನ ಸಲಕರಣೆಗಳನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವಿತರಿಸಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಕ್ರೀಡಾಂಗಣಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ದತೆಗಳನ್ನು ವೀಕ್ಷಿಸಿದರು.

      ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷಚೇತನರು ಸಾಧನ ಸಲಕರಣೆಗಳನ್ನು ಪಡೆಯಲು ಅವರ ಅವಲಂಬಿತರೊಂದಿಗೆ ಜಿಲ್ಲಾ ಕ್ರೀಡಾಂಗಣಕ್ಕೆ ಬರಲಿದ್ದಾರೆ. ಸಾಧನ ಸಲಕರಣೆ ವಿತರಿಸಲು ಕೌಂಟರ್‍ಗಳನ್ನು ತೆರೆದು ಸುಗಮವಾಗಿ ಕಾರ್ಯಕ್ರಮ ನಡೆಯಲು ಸಿದ್ದತೆಯನ್ನು ಪೂರ್ಣಗೊಳಿಸಬೇಕು. ಆಹಾರ ವಿತರಣೆ,ಕುಡಿಯುವ ನೀರು, ಆಸನಗಳ ವ್ಯವಸ್ಥೆ, ವಾಹನಗಳ ಸಂಚಾರ ಸಮರ್ಪಕವಾಗಿರಬೇಕು. ವಿಶೇಷಚೇತನರು ಪಾಲ್ಗೊಳ್ಳುವ ಕಾರ್ಯಕ್ರಮವಾಗಿರುವುದರಿಂದ ಅವರಿಗೆ ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆ ಪರಿಪೂರ್ಣವಾಗಿರಬೇಕು ಎಂದು ಲೋಕಸಭಾ ಸದಸ್ಯರು ಸೂಚಿಸಿದರು.  

     ಬೃಹತ್ ಶಾಮಿಯಾನ, ವೇದಿಕೆ, ಕ್ರೀಡಾಂಗಣಕ್ಕೆ ಆಗಮಿಸುವ ಮಾರ್ಗಗಳ ಬಗ್ಗೆ ಪರಿಶೀಲಿಸಿದ ಶ್ರೀನಿವಾಸಪ್ರಸಾದ್ ಅವರು  ಮುತುವರ್ಜಿಯಿಂದ ಎಲ್ಲ ಅವಶ್ಯಕ ಸಿದ್ದತೆಗಳನ್ನು ತ್ವರಿತವಾಗಿ ಮುಗಿಸುವಂತೆ ತಿಳಿಸಿದರು. 

     ಇದಕ್ಕೂ ಮೊದಲು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಲೋಕಸಭಾ ಸದಸ್ಯರು ಕಾರ್ಯಕ್ರಮ ಆಯೋಜನೆ ಸಂಬಂಧ ಸಭೆ ನಡೆಸಿದರು. 

      ಈ ಸಂದರ್ಭದಲ್ಲಿ ಮಾತನಾಡಿದ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ವಿಶೇಷಚೇತನರು ಜಿಲ್ಲೆಯ ವಿವಿಧ ಭಾಗಗಳಿಂದ ಬರಲಿರುವ ಹಿನ್ನೆಲೆಯಲ್ಲಿ ವಾಹನಗಳ ನಿಯೋಜನೆಯನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ವಿಶೇಷಚೇತನರ ದೊಡ್ಡ ಸಾಧನ ಸಲಕರಣೆಗಳನ್ನು ಅವರವರ ಮನೆಗಳಿಗೆ ತಲುಪಿಸಲು ವಿಶೇಷ ಸಾಗಾಣಿಕೆ ವಾಹನಗಳು ಅಗತ್ಯವಿದೆ.  ಈ ಎಲ್ಲ ವ್ಯವಸ್ಥೆ ಸರಿಯಾದ ರೀತಿಯಲ್ಲಿ ಇರಬೇಕೆಂದು ನಿರ್ದೇಶನ ನೀಡಿದರು. 

     ಕ್ರೀಡಾಂಗಣದಲ್ಲಿ ಸ್ವಚ್ಚತೆ ಇರಬೇಕು. ವಿಶೇಷಚೇತನರು ಸಾಧನ ಸಲಕರಣೆಗಳನ್ನು ವೇದಿಕೆ ಬಳಿ ಪಡೆಯಲು ಸೂಕ್ತ ರ್ಯಾಂಪ್ ಇನ್ನಿತರ ಸ್ಥಳವಕಾಶ ಸಾಕಷ್ಟು ಇರಬೇಕು. ವಿಶೇಷಚೇತನರಿಗಾಗಿಯೇ ಪ್ರತ್ಯೇಕ ಆಸನಗಳ ವ್ಯವಸ್ಥೆ, ಗ್ಯಾಲರಿ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ಗಣ್ಯರು, ಅತಿಥಿಗಳಿಗೂ ಶಿಷ್ಟಾಚಾರ ಅನುಸಾರ ಎಲ್ಲ ಕ್ರಮಗಳಿಗೆ ಮುಂದಾಗಬೇಕೆಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು. 

    ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ವಿಶೇಷಚೇತನ ಫಲಾನುಭವಿಗಳನ್ನು ಕರೆತರಲು ಈಗಾಗಲೇ ಪಟ್ಟಿ ಮಾಡಿಕೊಂಡು ವಾಹನ ವ್ಯವಸ್ಥೆ ಮಾಡಲಾಗಿದೆ. ಸಾಧನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಸಾಗಾಣಿಕಾ ವಾಹನಗಳನ್ನು ಸಹ ನಿಯೋಜಿಸಲಾಗಿದೆ. ಕಾರ್ಯಕ್ರಮದ ಆಯೋಜನೆಗೆ ಸಕಲ ಸಿದ್ದತೆ ಮಾಡಲಾಗಿದೆ ಎಂದರು.  

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಅಲಿಮ್ಕೊ ಸಂಸ್ಥೆಯ ಬೆಂಗಳೂರಿನ ಉಪ ವ್ಯವಸ್ಥಾಪಕರಾದ ಎ. ಶಿವಕುಮಾರ್, ಅಶೋಕ್‍ಕುಮಾರ್ ಪಾಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧರಣೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಪಂಚಾಯತ್ ರಾಜ್ ಎಂಜಿನಿರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ತಿಬ್ಬಯ್ಯ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಪ್ರಸನ್ನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಆಯುಕ್ತರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಇನ್ನಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 

ಡಿ. 24ರಂದು ನಗರದಲ್ಲಿ ವಿಶೇಷಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮ

 ಚಾಮರಾಜನಗರ, ಡಿಸೆಂಬರ್ 21 : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್) ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಸಾಮಾಜಿಕ ಅಧಿಕಾರಿತಾ ಶಿಬಿರ ಕಾರ್ಯಕ್ರಮವನ್ನು ಡಿಸೆಂಬರ್ 24ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 

      ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ, ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. 

ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು.  ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.

ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ನಟರಾಜು ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

---
ನಗರದಲ್ಲಿ ಸ್ವಚ್ಚತಾ ಓಟ, ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

      ಚಾಮರಾಜನಗರ, ನವೆಂಬರ್ 21 - ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಸ್ವಚ್ಚತಾ ಓಟ ಹಾಗೂ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕುರಿತ ಜಾಗೃತಿ ಕಾರ್ಯಕ್ರಮಗಳಿಗೆ ನಗರದಲ್ಲಿ ಇಂದು ಚಾಲನೆ ದೊರೆಯಿತು. 

     ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ಹಸಿರು ನಿಶಾನೆ ತೋರಿದರು.

     ಗ್ರಾಮೀಣ ಜನರಲ್ಲಿ ನೈರ್ಮಲ್ಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಪ್ರವಾಸಿ ಮಂದಿರದಲ್ಲಿ ಅಂತ್ಯಗೊಂಡಿತು. ಸ್ವಚ್ಚತಾ ಓಟದಲ್ಲಿ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು, ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳು, ಸಾರ್ವಜನಿಕರು, ಇನ್ನಿತರರು ಪಾಲ್ಗೊಂಡಿದ್ದರು.

     ಇದೇ ವೇಳೆ ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮದ ಕುರಿತು ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಅವರು ಜಿಲ್ಲೆಯ ಎಲ್ಲಾ ಗ್ರಾಮೀಣ ಭಾಗದಲ್ಲಿ ಸ್ವಚ್ಚತೆ, ಶೌಚಾಲಯಗಳ ಸದ್ಭಳಕೆ, ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತ ಪರಿಕಲ್ಪನೆಯಡಿ ಸಾಂಕೇತಿಕವಾಗಿ ಇಂದು ಸ್ವಚ್ಚತಾ ಓಟ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಮುಕ್ತ ಮತದಾನ ಮಾಡಲು ಅನುಕೂಲವಾಗುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕುರಿತು ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

     ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಇನ್ನಿತರರು ಸ್ವಚ್ಚತಾ ಓಟದಲ್ಲಿ ಪಾಲ್ಗೊಂಡಿದ್ದರು.  

     

------

ಡಿ. 28ರಂದು ಜಿಲ್ಲಾ ಪರಿಶಿಷ್ಟ ಜಾತಿ, ವರ್ಗಗಳ ಹಿತರಕ್ಷಣಾ ಸಮಿತಿ ಸಭೆ 

 ಚಾಮರಾಜನಗರ, ಡಿಸೆಂಬರ್ 21 - ಜಿಲ್ಲಾ ಪರಿಶಿಷ್ಟ ಜಾತಿ, ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಯವರ ಅದ್ಯಕ್ಷತೆಯಲ್ಲಿ ಡಿಸೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
                                                                             
                                                                

ಪ್ರತಿ ಮನೆಮನೆಗೂ ಆರೋಗ್ಯ ಸೇವೆ ತಲುಪಿಸಲು ಆರೋಗ್ಯ ಅರಳಿ ಕಾರ್ಯಕ್ರಮ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯತ್ರಿ 

       ಚಾಮರಾಜನಗರ, ಡಿಸೆಂಬರ್ 21 - ಗ್ರಾಮಮಟ್ಟದಲ್ಲಿ ಪ್ರತಿ ಮನೆ ಮನೆಗೂ ಆರೋಗ್ಯ ಸೇವೆಯನ್ನು ಒದಗಿಸುವ ಸಲುವಾಗಿ ‘ಆರೋಗ್ಯ ಅರಳಿ’ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.

      ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಜಿ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಅಕಾಡಮಿ ಆಫ್ ಫ್ಯಾಮಿಲಿ ಫಿಜಿಷಿಯನ್ ಆಫ್ ಇಂಡಿಯಾ (ಂಈPI) ಸಂಸ್ಥೆಯ ಸಹಯೋಗದಲ್ಲಿ ‘ಆರೋಗ್ಯ ಅರಳಿ’ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುμÁ್ಠನಗೊಳಿಸುವ ಸಂಬಂಧ ನಡೆದ ದೃಷ್ಟಿಕೋನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ರಾಜ್ಯದಲ್ಲಿ ಪ್ರಾಯೋಗಿಕವಾಗಿ ಜಿಲ್ಲೆಯ ಚಂದಕವಾಡಿ ಹಾಗೂ ಮಂಗಲ ಗ್ರಾಮ ಪಂಚಾಯಿತಿಗಳನ್ನು ಆರೋಗ್ಯ ಅರಳಿ ಕಾರ್ಯಕ್ರಮಕ್ಕಾಗಿ ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮದಡಿ ಗ್ರಾಮಮಟ್ಟದಲ್ಲಿ ಪ್ರತಿ ಮನೆ ಮನೆಗೂ ಆರೋಗ್ಯ ಸೇವೆಯನ್ನು ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ವಿಕೇಂದ್ರೀಕೃತ ಮಾದರಿಯ ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ವ್ಯವಸ್ಥೆ ಸಮುದಾಯದೊಡಗೂಡಿ ಆರೋಗ್ಯ ಸೇವೆಯನ್ನು ಮನೆಮನೆಗೂ ತಲುಪಿಸಲಾಗುತ್ತದೆ ಎಂದರು.

      ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರುಗಳು, ಗ್ರಾಮ ಲೆಕ್ಕಿಗರು, ಸ್ಥಳೀಯ ಪೊಲೀಸ್ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳ ಸಹಕಾರ, ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

      ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು ಗ್ರಾಮಸಭೆಯನ್ನು ನಡೆಸಿ ಕಾರ್ಯಕ್ರಮದ ಸದುಪಯೋಗದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ವ್ಯಾಪ್ತಿಯ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಮಹಿಳಾ ಸ್ವ-ಸಹಾಯ ಸಂಘದ ವಿದ್ಯಾವಂತ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗಿರುವ ಸ್ವಾಮಿ ವಿವೇಕಾನಂದ ಯುವಕರ ಸಂಘದ ಸದಸ್ಯರು ಮತ್ತು ಪದವೀಧರ ಸ್ವಯಂಸೇವಕರುಗಳುಳ್ಳ ತಂಡವನ್ನು ರಚಿಸುವ ಮೂಲಕ ಪ್ರತಿ ಮನೆಮನೆಯ ಸಮೀಕ್ಷೆ ನಡೆಸಿ ಮಾಹಿತಿ ಕಲೆಹಾಕುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.

      ಇದೇ ವೇಳೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ಸಂಜೀವ್ ಅವರು ಮಾತನಾಡಿ ಆರೋಗ್ಯ ಅರಳಿ ಕಾರ್ಯಕ್ರಮಕ್ಕೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಲಾಗುವುದು ಎಂದು ತಿಳಿಸಿದರು.

     ಅಕಾಡಮಿ ಆಫ್ ಫ್ಯಾಮಿಲಿ ಫಿಜಿಷಿಯನ್ ಆಫ್ ಇಂಡಿಯಾ (ಂಈPI) ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ಅಶೂಜಿತ್ ಆನಂದ್, ಎಸ್.ಐ.ಆರ್.ಡಿ ರಾಜ್ಯ ಸಮಾಲೋಚಕರಾದ ವಸುಂಧರಾದೇವಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಕೆ.ಬಿ.ಪ್ರಭುಸ್ವಾಮಿ, ಉಪ ಕಾರ್ಯದರ್ಶಿ ಧರಣೇಶ್, ಯೋಜನಾ ನಿರ್ಣಾಯಕ ಮೌಲ್ಯಮಾಪನಾಧಿಕಾರಿ ವಿ. ದೀಪಾ, ಇತರರು ಕಾರ್ಯಾಗಾರದಲ್ಲಿ ಹಾಜರಿದ್ದರ
     




Tuesday, 20 December 2022

20-12-2022 (ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಅಹವಾಲುಗಳ ಆಲಿಕೆ)






ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಅಹವಾಲುಗಳ ಆಲಿಕೆ


         ಚಾಮರಾಜನಗರ, ಡಿಸೆಂಬರ್ 20 :- ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಯಳಂದೂರು ತಾಲೂಕಿನ ಕೆ. ದೇವರಹಳ್ಳಿ ಗ್ರಾಮದಲ್ಲಿಂದು ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾಮೀಣ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಿದರು.


     ಆರಂಭದಲ್ಲಿಯೇ ಗ್ರಾಮಸ್ಥರು ಮೂಲಸೌಕರ್ಯ, ರಸ್ತೆ, ಬಸ್‍ಗಳ ವ್ಯವಸ್ಥೆ, ವಿದ್ಯುತ್, ಪಡಿತರ, ಪಿಂಚಣಿ, ಸ್ಮಶಾನ, ಭೂಮಿ ಪರಿಹಾರ, ಕೆರೆಗಳ ಒತ್ತುವರಿ ಸೇರಿದಂತೆ ಇನ್ನೂ ಹಲವು ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು. 


ಗ್ರಾಮದಲ್ಲಿ ರಸ್ತೆಗಳು ಹಾಳಾಗಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಬಸ್ಸುಗಳ ಸಹ ಬರುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ಹೋಗಲು ಅನಾನುಕೂಲವಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಬಳಿ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸ್ಥಳದಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ತುರ್ತಾಗಿ ಬಸ್ ನಿಯೋಜಿಸುವಂತೆ ಸೂಚಿಸಿದರು. 


      ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗು ರಸ್ತೆ ದುರಸ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು. 


ಅರಣ್ಯ ಇಲಾಖೆಯಿಂದ ಭೂಮಿ ಸಂಬಂಧ ತೊಂದರೆಯಾಗುತಿದೆ. ಕಾಡುಪ್ರಾಣಿಗಳ ಹಾವಳಿ ಸಹ ಹೆಚ್ಚಿದೆ ಎಂದು ಹಲವು ಗ್ರಾಮಸ್ಥರು ಗಮನಕ್ಕೆ ತಂದ ವೇಳೆ ಸ್ಥಳೀಯ ಅರಣ್ಯ ಅಧಿಕಾರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಯವರು ಭೂಮಿ ಸಂಬಂಧ ಸಭೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು. ಕಾಡುಪ್ರಾಣಿಗಳ ಹಾವಳಿ ತಡೆಗಾಗಿ ಸೋಲಾರ್ ಬೇಲಿ, ರೈಲ್ವೆ ಕಂಬಿ ಅಳವಡಿಕೆ ಕಾರ್ಯ ನಡೆಯುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಸಮಸ್ಯೆ ನೀಗಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. 


ದೇವರಹಳ್ಳಿಯ 52 ಪಡಿತರ ಕುಟುಂಬಗಳು ಪಡಿತರ ಪಡೆಯಲು 7 ಕಿ.ಮೀ ದೂರವಿರುವ ಪಕ್ಕದ ಊರಿಗೆ ಹೋಗಬೇಕಿದೆ. ಇಲ್ಲಿಯೇ ಪಡಿತರ ವಿತರಿಸಿ ಅನುಕೂಲ ಕಲ್ಪಿಸಬೇಕೆಂಬ ಮನವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಗ್ರಾಮ ಪಂಚಾಯತ್ ನೆರವಿನಿಂದ ಇಲ್ಲಿಯೇ ಪಡಿತರ ವಿತರಿಸಲು ಕ್ರಮ ವಹಿಸಿ. ಇಲ್ಲವಾದಲ್ಲಿ ಪರ್ಯಾಯ ವ್ಯವಸ್ಥೆ ಮೂಲಕ ವಾಹನದಲ್ಲಿ ಪಡಿತರ ತಂದು ವಿತರಿಸಲು ಮುಂದಾಗುವಂತೆ ತಿಳಿಸಿದರು.


ವಸತಿ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಯವರು ಈಗಾಗಲೇ ಮನವಿ ಮಾಡಿರುವ ಗ್ರಾಮಸ್ಥರಿಗೆ ವಸತಿ ಸೌಕರ್ಯಕ್ಕಾಗಿ ಗ್ರಾಮ ಪಂಚಾಯಿತಿ ಮೂಲಕ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು. 


ಕಾರ್ಯಕ್ರಮದಲ್ಲಿ ವಿವಿಧ ಸವಲತ್ತುಗಳ ಮಂಜೂರಾತಿ ಪತ್ರವನ್ನು ಜಿಲ್ಲಾಧಿಕಾರಿಯವರು ವಿತರಿಸಿದರು. ಆರೋಗ್ಯ ಇಲಾಖೆ ಹಲವು ಉಪಯುಕ್ತ ಮಳಿಗೆಗಳನ್ನು ತೆರೆದಿತ್ತು.


ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯವರಿಗೆ ಗೊರುಕನ ನೃತ್ಯ ಪ್ರದರ್ಶನದ ಮೂಲಕ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. 


ಉಪವಿಭಾಗಾಧಿಕಾರಿ ಗೀತಾ ಹುಡೇದ, ಯರಗಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೀಲಮ್ಮ, ಉಪಾಧ್ಯಕ್ಷರಾದ ಮಹದೇವಮ್ಮ, ಸದಸ್ಯರಾದ ಸಿದ್ದರಾಜು, ಶಾಂತಮ್ಮ, ಮಹೇಶ್, ಸವಿತಾ, ಭಾಗ್ಯಮ್ಮ, ಸುಧಾ,ಮಲ್ಲಿಕಾರ್ಜುನಸ್ವಾಮಿ, ಶೋಭಾ, ಶಿವಕುಮಾರ್, ತಹಶೀಲ್ದಾರರಾದ ಆನಂದಪ್ಪ ನಾಯಕ, ಇತರರು ಉಪಸ್ಥಿತರಿದ್ದರು.


ಕ್ರೀಡೆಯಲ್ಲಿ ಸ್ಪರ್ಧಾ ಮನೋಭಾವನೆ ಮುಖ್ಯ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ


         ಚಾಮರಾಜನಗರ, ಡಿಸೆಂಬರ್ 20  ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವನೆಯೇ ಮುಖ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಿಳಿಸಿದರು. 


ತಾಲೂಕಿನ ಅಮಚವಾಡಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಅವರಣದಲ್ಲಿಂದು ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ, ಶ್ರೀ ವರಮಹಾಲಕ್ಷ್ಮಿ ಸಾಂಸ್ಕøತಿಕ ಕ್ರೀಡಾ ಸೇವಾ ಸಂಸ್ಥೆ ಸಹಕಾರದೊಂದಿಗೆ ನಡೆದ ಗ್ರಾಮ ಸಮೂಹ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಕ್ರೀಡೆಯಿಂದ ಆರೋಗ್ಯ ವೃದ್ದಿಯಾಗುತ್ತದೆ. ಜೊತೆಗೆ ನೆಮ್ಮದಿ ಸಿಗಲಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಗೂ ಆಸಕ್ತಿ ಹೊಂದಬೇಕು. ಕ್ರೀಡೆ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ನ್ಯಾಯಾಧೀಶರು ಸಲಹೆ ಮಾಡಿದರು.


     ಕಾನೂನಿನ ಬಗ್ಗೆ ಅರಿವು ಇರಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು  ಉಚಿತವಾಗಿ ಕಾನೂನು ಅರಿವು ನೆರವು ಸೌಲಭ್ಯ ನೀಡಲಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಿಳಿಸಿದರು. 


     ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುನಾಥ ಪ್ರಸನ್ನ ಅವರು ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಆಟಗಳು ಕಡಿಮೆಯಾಗುತ್ತಿದೆ. ಗ್ರಾಮೀಣ ಸೊಗಡನ್ನು ಉಳಿಸಿ ಪೋಷಿಸಬೇಕಿದೆ ಎಂದರು. 


      ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶಿವನಂಜಪ್ಪ ಅಧ್ಯಕ್ಷತೆ ವಹಿಸಿದ್ದರು


     


ಡಿ. 21ರಂದು ನಗರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ 


         ಚಾಮರಾಜನಗರ, ಡಿಸೆಂಬರ್ 20 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಹಯೋಗದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 


      ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಅಧ್ಯಕ್ಷತೆ ವಹಿಸುವರು. 


      ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪಿ. ಮಾದೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. 






 

Wednesday, 14 December 2022

14-12-2022 ಚಾಮರಾಜನಗರ ಸುದ್ದಿ


ಡಿ. 24ರಂದು ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ : ಸಿದ್ದತೆಗೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಸೂಚನೆ


      ಚಾಮರಾಜನಗರ, ಡಿಸೆಂಬರ್ 14 :- ಜಿಲ್ಲೆಯಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ನಡೆಸಲಾದ ವಿಕಲಚೇತನರ ತಪಾಸಣಾ ಶಿಬಿರದಲ್ಲಿ ಸಾಧನ, ಸಲಕರಣೆಗಳನ್ನು ವಿತರಿಸಲು ಗುರುತಿಸಲಾಗಿರುವ 1693 ವಿಕಲಚೇತನರಿಗೆ ಇದೇ ಡಿಸೆಂಬರ್ 24ರಂದು ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಇದಕ್ಕಾಗಿ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಸೂಚಿಸಿದರು.


     ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿಕಲಚೇತನರಿಗೆ ಸಾಧನ, ಸಲಕರಣೆ ವಿತರಿಸುವ ಕಾರ್ಯಕ್ರಮ   ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 


      ಕೇಂದ್ರ ಸರ್ಕಾರದ ಅಲಿಮ್ಕೊ ಸಂಸ್ಥೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ವಿಕಲಚೇತನರಿಗೆ ಅಗತ್ಯವಿರುವ ವಿವಿಧ ಸಾಧನ, ಸಲಕರಣೆಗಳನ್ನು ವಿತರಿಸುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಜುಲೈ ತಿಂಗಳಿನಲ್ಲಿ ತಪಾಸಣಾ ಶಿಬಿರ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ 1693 ವಿಕಲಚೇತನರಿಗೆ ಸಾಧನ ಸಲಕರಣೆ ಅಗತ್ಯ ಇರುವ ಬಗ್ಗೆ ಗುರುತಿಸಲಾಗಿತ್ತು. ಈ ಎಲ್ಲರಿಗೂ ಡಿಸೆಂಬರ್ 24ರಂದು ಸಾಧನ ಸಲಕರಣೆ ವಿತರಿಸಲು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ಎಲ್ಲಾ ಏರ್ಪಾಡುಗಳನ್ನು ಮಾಡಬೇಕೆಂದು ಲೋಕಸಭಾ ಸದಸ್ಯರು ತಿಳಿಸಿದರು. 


     ಕಾರ್ಯಕ್ರಮದ ಸ್ಥಳದಲ್ಲಿ ವಿಕಲಚೇತನರು ಸಾಧನ ಸಲಕರಣೆಗಳನ್ನು ಪಡೆಯಲು ಪ್ರತ್ಯೇಕ ಕೌಂಟರ್‍ಗಳನ್ನು ತೆರೆಯಬೇಕು. ಸೌಲಭ್ಯಕ್ಕಾಗಿ ಆಯ್ಕೆಯಾಗಿರುವವರಿಗೆ ಮಾಹಿತಿ ನೀಡಬೇಕು. ಆಯಾ ಗ್ರಾಮ ಪಂಚಾಯಿತಿ, ನಗರ ಪಟ್ಟಣ ವ್ಯಾಪ್ತಿಯಲ್ಲಿ ಇರುವ ಫಲಾನುಭವಿಗಳು ಸಾಧನ ಸಲಕರಣೆ ಪಡೆಯಲು ಅವಶ್ಯವಿರುವ ಎಲ್ಲಾ ಕ್ರಮಗಳಿಗೆ ತ್ವರಿತವಾಗಿ ಮುಂದಾಗುವಂತೆ ನಿರ್ದೇಶನ ನೀಡಿದರು. 


     ವ್ಹೀಲ್ ಚೇರ್, ತ್ರಿಚಕ್ರ ವಾಹನ ಅಗತ್ಯವಿರುವವರಿಗೆ ವಿಶೇಷ ಕೌಂಟರ್‍ಗಳು ಬೇಕಿದೆ. ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ವಿಸ್ತಾರವಾದ ಸ್ಥಳವಕಾಶ ಮಾಡಬೇಕಾಗುತ್ತದೆ. ಸಲಕರಣೆಗಳನ್ನು ನೀಡಲು ಮೊದಲೇ ರೂಪು ರೇಷೆ ತಯಾರಿಸಿಕೊಂಡು ಯಾವುದೇ ಗೊಂದಲಗಳಾಗದಂತೆ ವಿತರಿಸಬೇಕು ಎಂದು ಲೋಕಸಭಾ ಸದಸ್ಯರು ತಿಳಿಸಿದರು. 


     ವಿಕಲಚೇತನರನ್ನು ಕರೆತರಲು ಬಸ್‍ಗಳ ವ್ಯವಸ್ಥೆ ಮಾಡಬೇಕಿದೆ. ಅಂಗವೈಕಲ್ಯ ಪ್ರಮಾಣ ತೀರ ಹೆಚ್ಚಿರುವ ಹಾಗೂ ಬಸ್ ನಲ್ಲಿ ಬರಲು ಸಾಧ್ಯವಾಗದ ಫಲಾನುಭವಿಗಳಿಗೆ ವಿಶೇಷ ವಾಹನ ನಿಯೋಜಿಸಬೇಕಾಗುತ್ತದೆ. ಹಲವರಿಗೆ ಅವಲಂಬಿತರು ಜೊತೆಯಲ್ಲಿ ಬರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ವಾಹನಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಸಾಧನ ಸಲಕರಣೆ ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗೆ ಯೋಜನಾ ಬದ್ದವಾಗಿ ಕಾರ್ಯೋನ್ಮುಖರಾಗಬೇಕೆಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಸೂಚನೆ ನೀಡಿದರು.


     ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಸಾಧನ ಸಲಕರಣೆ ವಿತರಣೆಗೆ ಪೂರ್ವಭಾವಿಯಾಗಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ವಿಕಲಚೇತನರಿಗೆ ನೆರವಾಗುವ ವಿವಿದೋದ್ದೇಶ ಕಾರ್ಯಕರ್ತರ ಸಭೆ ನಡೆಸಿ ಸೂಕ್ತ ಮಾಗದರ್ಶನ ನೀಡಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಎನ್.ಸಿ.ಸಿ, ಎನ್.ಎಸ್.ಎಸ್. ಸ್ವಯಂ ಸೇವಕ ವಿದ್ಯಾರ್ಥಿಗಳ ನೆರವು ಪಡೆದುಕೊಳ್ಳಬೇಕು. ವೈದ್ಯಕೀಯ ಸಿಬ್ಬಂದಿ ಸಹ ಇರಬೇಕು. ಕಾರ್ಯಕ್ರಮದ ಜವಾಬ್ದಾರಿ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ ಎಂದರು. 


      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಅಲಿಮ್ಕೊ ಸಂಸ್ಥೆಯ ಬೆಂಗಳೂರಿನ ಉಪ ವ್ಯವಸ್ಥಾಪಕರಾದ ಶಿವಕುಮಾರ್, ಯೂನಿಟ್ ಮುಖ್ಯಸ್ಥರು ಹಾಗೂ ಹಿರಿಯ ವ್ಯವಸ್ಥಾಪಕರಾದ ಎ.ವಿ. ಅಶೋಕ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ದೀಪಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಪ್ರಸನ್ನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಮಂಜುನಾಥ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ, ನಗರಸಭೆ ಆಯುಕ್ತರಾದ ರಾಮದಾಸ್, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. 

     

ನಮ್ಮ ಕ್ಲಿನಿಕ್‍ಗೆ ವರ್ಚುವಲ್ ಮೂಲಕ ಮುಖ್ಯಮಂತ್ರಿಯವರಿಂದ ಚಾಲನೆ 


      ಚಾಮರಾಜನಗರ, ಡಿಸೆಂಬರ್ 14 - ಚಾಮರಾಜನಗರ ಜಿಲ್ಲೆಯಲ್ಲೂ ಆರಂಭವಾಗುತ್ತಿರುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ನಮ್ಮ ಕ್ಲಿನಿಕ್‍ಗಳಿಗೆ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ವರ್ಚುವಲ್ ಮೂಲಕ ಇಂದು ಚಾಲನೆ ನೀಡಿದರು.


     ರಾಜ್ಯದ ವಿವಿಧ ಜಿಲ್ಲೆಗಳ 114 ನಮ್ಮ ಕ್ಲಿನಿಕ್‍ಗಳಿಗೆ ಮುಖ್ಯಮಂತ್ರಿಯವರು ಹುಬ್ಬಳ್ಳಿಯಿಂದ ವರ್ಚುವಲ್ ಮೂಲಕ ಚಾಲನೆ ನೀಡಿದರು. ಚಾಮರಾಜನಗರದ ಕರಿನಂಜನಪುರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆ ಸೇರಿದಂತೆ ಜಿಲ್ಲೆಯ ಒಟ್ಟು ಮೂರು ಕಡೆ ನಮ್ಮ ಕ್ಲಿನಿಕ್‍ಗಳು ಆರಂಭವಾಗುತ್ತಿದೆ. ಇದರ ಉದ್ಘಾಟನೆ ನಗರದ ಕರಿನಂಜನಪುರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆಯ ನಮ್ಮ ಕ್ಲಿನಿಕ್ ನಲ್ಲಿ ಏರ್ಪಾಡಾಗಿತ್ತು. 


     ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸ್ಥಳೀಯವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 


      ಹುಬ್ಬಳ್ಳಿಯಿಂದ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರೊಂದಿಗೆ ಸಂವಾದ ನಡೆಸಿ ಚಾಮರಾಜನಗರ ಜಿಲ್ಲೆಯಲ್ಲಿ ಎಲ್ಲೆಲ್ಲಿ ನಮ್ಮ ಕ್ಲಿನಿಕ್‍ಗಳು ಪ್ರಾರಂಭವಾಗುತ್ತಿದೆ. ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆಯೆ ಎಂದು ಪ್ರಶ್ನಿಸಿದರು. ಇದಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಉತ್ತರಿಸಿ, ಚಾಮರಾಜನಗರದ ಕರಿನಂಜನಪುರ ಬಡಾವಣೆ ಹಾಗೂ ಗುಂಡ್ಲುಪೇಟೆಯಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗಿದೆ. ಕೊಳ್ಳೇಗಾಲದಲ್ಲಿ ಕಟ್ಟದ ಸಿದ್ದವಿದ್ದು ಇನ್ನೆರಡು ದಿನಗಳಲ್ಲಿ ಕಾರ್ಯಾರಂಭವಾಗಲಿದೆ. ನಮ್ಮ ಕ್ಲಿನಿಕ್‍ಗೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.


      ನಮ್ಮ ಕ್ಲಿನಿಕ್‍ನಲ್ಲಿ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ನಸಿರ್ಂಗ್ ಸಿಬ್ಬಂದಿ ಇದ್ದಾರೆ. ಔಷಧ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ. ನಮ್ಮ ಕ್ಲಿನಿಕ್ ಸಂಬಂಧ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.


      ಬಳಿಕ ಮುಖ್ಯಮಂತ್ರಿಗಳು ಸ್ಥಳೀಯ ನಿವಾಸಿ ಸುಧಾ ಅವರೊಂದಿಗೆ ಮಾತನಾಡಿದರು. ನೀವು ಕ್ಲಿನಿಕ್ ಹತ್ತಿರ ಇದ್ದೀರಾ? ಯಾವ ಬಡಾವಣೆ ನಿಮ್ಮದು? ಈ ಮೊದಲು ಈ ರೀತಿಯ ಕ್ಲಿನಿಕ್ ನಿಮ್ಮ ಬಡಾವಣೆಯಲ್ಲಿ ಇತ್ತೆ? ಕ್ಲಿನಿಕ್ ಬಂದಿರುವುದರಿಂದ ಅನುಕೂಲ ಆಗಲಿದೆಯಾ ಎಂದು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದರು. ಇದಕ್ಕೆ ಸುಧಾ ಅವರು ಆಸ್ಪತ್ರೆಗಾಗಿ ನಾವು ಪಟ್ಟಣಕ್ಕೆ ಹೋಗಬೇಕಿತ್ತು. ಈಗ ನಮ್ಮ ಬಡಾವಣೆಯಲ್ಲಿಯೇ ಕ್ಲಿನಿಕ್ ಮಾಡಿರುವುದರಿಂದ ತುಂಬಾ ಅನುಕೂಲವಾಗಿದೆ. ಇದಕ್ಕಾಗಿ ತಮಗೆ ಕೃತಜ್ಞತೆಗಳು ಎಂದರು. 


     ಸಣ್ಣ ಪುಟ್ಟ ಜ್ವರವಿರಲಿ, ಇನ್ನಿತರ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ಕ್ಲಿನಿಕ್‍ನಲ್ಲಿ ಉಚಿತವಾಗಿ ಚಿಕಿತ್ಸೆ, ಔಷಧ ನೀಡಲಾಗುತ್ತದೆ. ಟೆಸ್ಟ್ ಲ್ಯಾಬ್ ಸೌಲಭ್ಯವು ಇರುತ್ತದೆ. ಈ ಎಲ್ಲಾ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಿ ಬೇರೆಯವರಿಗೂ ನಮ್ಮ ಕ್ಲಿನಿಕ್ ಬಗ್ಗೆ ತಿಳಿಸಿಕೊಡಿ ಎಂದು ಮುಖ್ಯಮಂತ್ರಿಯವರು ಸಲಹೆ ಮಾಡಿದರು.


     ಸ್ಥಳೀಯವಾಗಿ ನಡೆದ ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಆಶಾ ನಟರಾಜು ಅವರು ನಮ್ಮ ಕ್ಲಿನಿಕ್ ಉದ್ಘಾಟಿಸಿದರು. ಸದಸ್ಯರಾದ ಮನೋಜ್ ಪಟೇಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ವೈದ್ಯಾಧಿಕಾರಿ ಡಾ. ಮಮತಾ ಸೇರಿದಂತೆ ಇತರರು ಇದ್ದರು

----

ಕೊಳ್ಳೇಗಾಲ : ಡಿ. 16ರಂದು ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ 

ಚಾಮರಾಜನಗರ, ಡಿಸೆಂಬರ್ 14 - ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23ನೇ ಸಾಲಿನ ಕೊಳ್ಳೇಗಾಲ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಡಿಸೆಂಬರ್ 16ರಂದು ಬೆಳಿಗ್ಗೆ 9 ಗಂಟೆಗೆ ಕೊಳ್ಳೇಗಾಲದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ಹತ್ತಿರದ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖೋ-ಖೋ, ಕಬ್ಬಡ್ಡಿ, ವಾಲಿಬಾಲ್, ಕುಸ್ತಿ, ಯೋಗ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಮಾತ್ರ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಧ್ಯಾಹ್ನದ ಉಪಹಾರ ಹಾಗೂ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಟ್ರೋಫಿಗಳನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಯಾವುದೇ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. 

ಗ್ರಾಮೀಣ ಕ್ರೀಡಾಕೂಟದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. 

ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಬ್ಯಾಂಕ್ ಪಾಸ್‍ಬುಕ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಬೇರೆ ಗ್ರಾಮ ಪಂಚಾಯಿತಿಯ ಕ್ರೀಡಾಪಟುಗಳ ತಂಡಗಳಿಗೆ ಸೇರಲು ಮತ್ತು ಸೇರಿಸಿಕೊಳ್ಳಲು ಅವಕಾಶವಿರುವುದಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಜೇತರಾಗಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ನೀಡಿರುವ ಫಲಿತಾಂಶ ಪಟ್ಟಿಯಂತೆ ಕ್ರೀಡೆಗಳನ್ನು ನಡೆಸಲಾಗುವುದು. ಹೊಸದಾಗಿ ಭಾಗವಹಿಸುವ ತಂಡಗಳಿಗೆ ಅವಕಾಶವಿರುವುದಿಲ್ಲ. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ.ಸಂ 08226-224932 ಅಥವಾ 9916466659, 9877160841, 99645615695, 9880211027 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಶಿಕ್ಷಕರ ಮರು ಹೊಂದಾಣಿಕೆ : ದಾಖಲೆಗಳನ್ನು ಅಪ್ ಲೋಡ್ ಮಾಡಲು ಸೂಚನೆ 

ಚಾಮರಾಜನಗರ, ಡಿಸೆಂಬರ್ 14:- ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷÀಕರನ್ನು ಮಂಜೂರಾದ ಹುದ್ದೆಗಳಿಗೆ ಎದುರಾಗಿ ಮ್ಯಾಪಿಂಗ್ ಮಾಡಲಾಗಿದೆ. ಇದರಲ್ಲಿ ಹೆಚ್ಚುವರಿ ಎಂದು ಗುರುತಿಸಿರುವ ಶಿಕ್ಷಕರು ಹಾಗೂ ಶೂನ್ಯ ದಾಖಲಾತಿ ಇರುವ ಶಾಲೆಗಳಲ್ಲಿನ ಶಿಕ್ಷಕರಿಗೆ ಹೆಚ್ಚುವರಿ ತಾತ್ಕಾಲಿಕ ಪಟ್ಟಿಯನ್ನು ವರ್ಗಾವಣೆ ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. 

ಸದರಿ ಶಿಕ್ಷಕರನ್ನು ಜಿಲ್ಲೆಯೊಳಗೆ ಅವಶ್ಯ ಶಾಲೆಗಳಿಗೆ ಮರುಹೊಂದಾಣಿಕೆ ಮಾಡುವ ಸಂಬಂಧ ತಾತ್ಕಾಲಿಕ ಹೆಚ್ಚುವರಿ ಶಿಕ್ಷಕರು ಆದ್ಯತೆ, ವಿನಾಯಿತಿ ಕೋರಲು ಅವಶ್ಯವೆನಿಸಿರುವ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದು ಇ.ಇ.ಡಿ.ಎಸ್ ಎಂಪ್ಲಾಯಿ ಲಾಗಿನ್‍ನಲ್ಲಿ ಪ್ರವೇಶಿಸಿ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಡಿಸೆಂಬರ್ 17 ಕೊನೆಯ ದಿನವಾಗಿದೆ. ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳನ್ನು ಶಿಕ್ಷಕರು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಇಂದೀಕರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹನಿ ನೀರಾವರಿ ಉಪಕರಣ ಅಳವಡಿಕೆಗೆ ಸಹಾಯಧನ : ಸದುಪಯೋಗಕ್ಕೆ ಮನವಿ

ಚಾಮರಾಜನಗರ, ಡಿಸೆಂಬರ್ 14 - ತೋಟಗಾರಿಕೆ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಸೂಕ್ಷ್ಮ ಹನಿ ನೀರಾವರಿ (ಪಿಎಂಕೆಎಸ್‍ವೈ) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಉಪಕರಣ ಅಳವಡಿಕೆಗೆ ಪರಿಶಿಷ್ಟ ವರ್ಗ, ಪರಿಶಿಷ್ಟ ಪಂಗಡದ ರೈತರಿಗೆ ಶೇ. 90ರಷ್ಟು ಸಹಾಯಧನವನ್ನು ನಿಗದಿಪಡಿಸಲಾಗಿದೆ. ಈಗಾಗಲೇ ಈ ಯೋಜನೆಯಡಿ ಸಹಾಯಧನ ಪಡೆದು 7 ವರ್ಷ ಪೂರ್ಣಗೊಂಡಿದ್ದಲ್ಲಿ ಎರಡನೇ ಬಾರಿ ಅದೇ ಫಲಾನುಭವಿಗಳು ಹನಿ ನೀರಾವರಿ ಪದ್ದತಿ ಅಳವಡಿಸಿಕೊಂಡಲ್ಲಿ ಸಹಾಯಧನ ನೀಡಲಾಗುತ್ತದೆ.

ಆಸಕ್ತ ರೈತರು ಅಗತ್ಯ ದಾಖಲೆಗಳನ್ನು ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಕಾರ್ಯದೇಶ ಪಡೆದು ತೋಟಗಾರಿಕೆ ಇಲಾಖೆ ಅನುಮೋದಿತ ಡ್ರಿಪ್ ಕಂಪನಿ, ಸಂಸ್ಥೆಗಳಿಂದ ಐಎಸ್‍ಐ ಗುಣಮಟ್ಟದ ಹನಿ ನೀರಾವರಿ ಉಪಕರಣ ಅಳವಡಿಸಿಕೊಂಡು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನೀರಿನಲ್ಲಿ ಕರಗುವ ರಸಗೊಬ್ಬರಗಳಿಗೆ ಸಹಾಯಧನ 
ಚಾಮರಾಜನಗರ, ಡಿಸೆಂಬರ್ 14 - ನೀರಿನಲ್ಲಿ ಕರಗುವ ರಸಗೊಬ್ಬರಗಳು ವಿಶೇಷ ವರ್ಗದ ರಸಗೊಬ್ಬರಗಳಾಗಿದ್ದು, ಗಿಡಗಳ ಬೆಳವಣಿಗೆಯ ನಿರ್ಣಾಯಕ ಹಂತಗಳಲ್ಲಿ ಪೋಷಕಾಂಶಗಳನ್ನು ಒದಗಿಸುವುದರಿಂದ ಉತ್ತಮ ಇಳುವರಿ ಲಭಿಸುತ್ತದೆ. 

ರಸಾವರಿ ತಾಂತ್ರಿಕತೆ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಪ್ರತಿ ಎಕರೆಗೆ ಶೇ. 40ರಂತೆ 8 ಸಾವಿರ ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ. 50ರಂತೆ 10 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ತೋಟಗಾರಿಕೆ ಇಲಾಖೆ ಅನುಮೋದಿತ ಸಂಸ್ಥೆ, ಕಂಪನಿಯಿಂದ ಮಾತ್ರ ಪರಿಕರಗಳನ್ನು ಖರೀದಿಸಬೇಕು. ಗರಿಷ್ಠ 1.00 ಹೆಕ್ಟೇರ್ ಪ್ರದೇಶಕ್ಕೆ ಮೀರದಂತೆ ಪ್ರತಿ ಫಲಾನುಭವಿಗೆ ಸಹಾಯಧನ ನೀಡಲಾಗುವುದು.

ರೈತರು ತಮ್ಮ ವಂತಿಕೆಯನ್ನು ಅನುಮೋದಿತ ಸಂಸ್ಥೆ, ಕಂಪನಿಗೆ ಪಾವತಿಸಿ ಇಲಾಖೆಗೆ ನಿರಾಪೇಕ್ಷಣಾ ಪತ್ರ ನೀಡಿದ್ದಲಿ, ಸಹಾಯಧನವನ್ನು ಕಂಪನಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಗೆ ಭಾವಚಿತ್ರ, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್, ಗಣಕೀಕೃತ ಬೆಳ ದೃಢೀಕರಣ, ತಾಕಿನ ಫೋಟೊ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಡಿ. 15ರಿಂದ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪದಾರ್ಥಗಳ ವಿತರಣೆ

         ಚಾಮರಾಜನಗರ, ಡಿಸೆಂಬರ್ 14 - ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕೊಳ್ಳೇಗಾಲ ಹಾಗೂ ಹನೂರು ತಾಲೂಕು ವ್ಯಾಪ್ತಿಯ 472 ಅಂಗನವಾಡಿ ಕೇಂದ್ರಗಳಿಗೆ ಡಿಸೆಂಬರ್ 15ರಿಂದ 28ರವರೆಗೆ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತದೆ. 

      ಡಿಸೆಂಬರ್ 15ರಂದು ಹನೂರು, ಸತ್ತೇಗಾಲ, 16ರಂದು ಬಂಡಳ್ಳಿ, ಕಸಬಾ-1, 17ರಂದು ಅಜ್ಜೀಪುರ, ಕಸಬಾ-2, 19ರಂದು ರಾಮಾಪುರ, ತೆಳ್ಳನೂರು, 20ರಂದು ಪಿ.ಜಿ.ಪಾಳ್ಯ, ಮಧುವನಹಳ್ಳಿ-1, 21ರಂದು ಲೊಕ್ಕನಹಳ್ಳಿ, ಮಧುವನಹಳ್ಳಿ-2, 22ರಂದು ಮಾರ್ಟಳ್ಳಿ, ಕಾಮಗೆರೆ, 23ರಂದು ಕೂಡ್ಲೂರು, ಚಿಲಕವಾಡಿ, 26ರಂದು ಮಲೆ ಮಹದೇಶ್ವರ ಬೆಟ್ಟ, 27ರಂದು ಕೌದಳ್ಳಿ, 28ರಂದು ದಂಟಳ್ಳಿ ವ್ಯಾಪ್ತಿಗೆ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತದೆ ಎಂದು ಕೊಳ್ಳೇಗಾಲ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಚಾಮರಾಜನಗರ ನಗರಸಭೆ : ಬಯಲು ಶೌಚ ಮುಕ್ತ ವಾರ್ಡ್ ಘೋಷಣೆ-ಆಕ್ಷೇಪಣೆ ಸಲ್ಲಿಕೆಗೆ ಅವಕಾಶ 
ಚಾಮರಾಜನಗರ, ಡಿಸೆಂಬರ್ 14:- ಚಾಮರಾಜನಗರ ನಗರಸಭೆಯ ಒಟ್ಟು 31 ವಾರ್ಡ್‍ಗಳನ್ನು ಬಯಲು ಶೌಚ ಮುಕ್ತ ವಾರ್ಡ್‍ಗಳೆಂದು ಘೋಷಿಸುವ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳಿದ್ದಲ್ಲಿ, ಡಿಸೆಂಬರ್ 26ರೊಳಗೆ ಲಿಖಿತವಾಗಿ ನಗರಸಭೆ ಕಚೇರಿಗೆ ಸಲ್ಲಿಸಬಹುದಾಗಿದೆ. 

      ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು 2ನೇ ಅಕ್ಟೋಬರ್ 2014 ರಿಂದ ಪ್ರಾರಂಭಿಸಿದ್ದು, ಸದರಿ ಯೋಜನೆಯ ಪ್ರಮುಖ ಉದ್ದೇಶ ಬಯಲು ಶೌಚ ಮುಕ್ತ ನಗರಗಳನ್ನಾಗಿ ಸೃಜಿಸುವುದು ಆಗಿರುತ್ತದೆ. ಸ್ವಚ್ಛ ಭಾರತ ಮಿಷನ್ ಯೋಜನೆಯ ಅಂಗವಾಗಿ ಚಾಮರಾಜನಗರ ನಗರಸಭೆಯ ವ್ಯಾಪ್ತಿಯಲ್ಲಿ ಬಯಲು ಶೌಚ ಮುಕ್ತ ವಾರ್ಡ್‍ಗಳನ್ನಾಗಿ ಘೋಷಿಸಲು ಇದುವರೆವಿಗೆ 2048 ವೈಯಕ್ತಿಕ ಶೌಚಾಲಯಗಳನ್ನು ಸಾರ್ವಜನಿಕರು ನಿರ್ಮಿಸಿಕೊಂಡಿರುತ್ತಾರೆ. ಬಯಲಿನಲ್ಲಿ ಶೌಚ ಮಾಡುವ ಪ್ರದೇಶಗಳನ್ನು ಗುರುತಿಸಿ ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗಿರುತ್ತದೆ. ಬಯಲು ಶೌಚ ಮಾಡದಂತೆ ಆಟೋ ಮೂಲಕ ಪ್ರಚಾರ ಮಾಡಲಾಗಿದ್ದು, ಸ್ವ-ಸಹಾಯ ಸಂಘದವರುಗಳಿಗೆ ಅರಿವು ಮೂಡಿಸಲಾಗಿರುತ್ತದೆ. ಶಾಲಾ ಕಾಲೇಜುಗಳಿಗೆ ಸ್ವಯಂ ಸೇವಕರುಗಳ ಮೂಲಕ ಶೌಚಾಲಯಗಳ ಸಮರ್ಪಕ ಬಳಕೆ ಮಾಡಲು ತಿಳಿಸಲಾಗಿದೆ.

ಈ ಎಲ್ಲಾ ಮಾಹಿತಿಗಳ ಅನುಸಾರ ಚಾಮರಾಜನಗರ ನಗರಸಭೆಯ ಒಟ್ಟು 31 ವಾರ್ಡ್‍ಗಳನ್ನು ಬಯಲು ಶೌಚ ಮುಕ್ತ ವಾರ್ಡ್‍ಗಳೆಂದು ಘೋಷಿಸಲು ಹಾಗೂ ಇದರ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳಿದ್ದಲ್ಲಿ, ಡಿಸೆಂಬರ್ 26ರ ಒಳಗೆ ಲಿಖಿತವಾಗಿ ನಗರಸಭೆ ಕಚೇರಿಗೆ ಸಲ್ಲಿಸುವಂತೆ ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಉಪಾಧ್ಯಕ್ಷರಾದ ಪಿ. ಸುಧಾ, ಪೌರಾಯುಕ್ತರಾದ ಎಸ್.ವಿ. ರಾಮದಾಸ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. 


      

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 

      ಚಾಮರಾಜನಗರ, ಡಿಸೆಂಬರ್ 14 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31ರÀವರೆಗೆ ವಿಸ್ತರಿಸಲಾಗಿದೆ. 

     ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿs://sevಚಿshiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ   ಮೂಲಕ ಡಿಸೆಂಬರ್ 31ರೊಳಗೆ ಸಲ್ಲಿಸಬಹುದು. 

      ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದ ಮಲ್ಟಿ ಪರ್ಪಸ್ ಹಾಲ್‍ನಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 7019952093, 9980800076, ಕೊಳ್ಳೇಗಾಲದ ಅಂಜುಮಾನ್-ಇಸ್ಲಾಮಿಯ ಕಾಂಪ್ಲೆಕ್ಸ್‍ನಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 7829587596, 9901625872, ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 8217593163, 9901625872 ಯಳಂದೂರು ತಾಲೂಕು ಕಚೇರಿಯಲ್ಲಿರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 9845254995, 9901625872 ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಡಿ. 16ರಂದು ಕೊಳ್ಳೇಗಾಲದಲ್ಲಿ ತಾಲೂಕು ಮಟ್ಟದ ಗ್ರಾಮೀಣ ಕೂಟ

       ಚಾಮರಾಜನಗರ, ಡಿಸೆಂಬರ್ 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕೊಳ್ಳೇಗಾಲ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಡಿಸೆಂಬರ್ 16ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲದ ಮಹದೇಶ್ವರ ಕಾಲೇಜು ಬಳಿಯಿರುವ ತಾಲೂಕು ಕ್ರಿಡಾಂಗಣದಲ್ಲಿ ಆಯೋಜಿಸಲಾಗಿದೆ.

     ಶಾಸಕರಾದ ಎನ್. ಮಹೇಶ್ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ನಗರಸಭೆ ಅಧ್ಯಕ್ಷರಾದ ಸಿ.ಎನ್. ರೇಖಾ, ಉಪಾಧ್ಯಕ್ಷರಾದ ಆರ್. ಸುಶೀಲ, ಸದಸ್ಯರಾದ ಆರ್. ಸುಮಾ ಸುಬ್ಬಣ್ಣ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟಿಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.  



 

Tuesday, 13 December 2022

13-12-2022 ಚಾಮರಾಜನಗರಕ್ಕೆ ಬೊಮ್ಮಾಯಿ ಭೇಟಿ, ವಿವಿದ ಕಾಮಗಾರಿಗಳಿಗೆ ಶಿಲಾನ್ಯಾಸ











 ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಬದ್ದ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಚಾಮರಾಜನಗರ, ಡಿಸೆಂಬರ್ 13 :- ಚಾಮರಾಜನಗರ ಜಿಲ್ಲೆಯ ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ನೀರು ತುಂಬಿಸಲು ಕ್ರಮ ಕೈಗೊಳ್ಳುವ ಜೊತೆಗೆ ಜಿಲ್ಲೆಯ ಅವಿವೃದ್ಸಿಗೆ ಬದ್ದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 


ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿಂದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. 


ಇಡೀ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಕೆರೆಗಳ ತುಂಬಿಸುವ ಸಮಗ್ರ ಅಭಿವೃದ್ದಿ ಯೋಜನೆಗೆ  ಎರಡು ಪ್ರಸ್ತಾವನೆಗಳು  ಮುಂದಿದೆ. 754 ಕೋಟಿ ರೂ. ವೆಚ್ಚದ ಯೋಜನೆಗೆ ಈಗಾಗಲೇ ಅನುಮೋದನೆಗೆ ಕಳುಹಿಸಲಾಗಿದೆ. ಸಾವಿರ ಕೋಟಿ ರೂ.ವೆಚ್ಚದ ಯೋಜನೆಗೆ ವಿಸೃತ ಯೋಜನಾ ವರದಿ ಸಲ್ಲಿಕೆಯಾಗಬೇಕಿದೆ. ಒಟ್ಟಾರೆ ಇಡೀ ಚಾಮರಾಜನಗರ ಜಿಲ್ಲೆಯ ಎಲ್ಲಾ ಭಾಗದ ಕೆರೆಗಳನ್ನು ಹಂತ ಹಂತವಾಗಿ ತುಂಬಿಸಲು ಅಗತ್ಯವಿರುವ ಯೋಜನೆಯನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದರು.


ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಹೆಚ್ಚಳವಾಗಲಿದೆ. ಕೃಷಿ ಚಟುವಟಿಕೆಗಳಿಗೆ, ಕುಡಿಯುವ ನೀರಿನ ಪೂರೈಕೆಗೂ ಅನುಕೂಲವಾಗಲಿದೆ. ಆರೋಗ್ಯಕರ ಜನವಸತಿಗಳಿಗೆ ಉಪಯೋಗವಾಗಲಿದೆ. ಹೀಗಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಂದಾಗಲಿದ್ದೇವೆ ಎಂದರು. 


ಚಾಮರಾಜನಗರ ಜಿಲ್ಲೆಯನ್ನು ಕೈಗಾರಿಕೆ ಜಿಲ್ಲೆಯಾಗಿ ಪರಿವರ್ತಿಸಲು ಸಾಧ್ಯವಿದೆ. ಕೈಗಾರಿಕಾ ಹೊಸಹತು ಟೌನ್‍ಶಿಪ್ ನಿರ್ಮಾಣ ಮಾಡಬಹುದು. ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸಣ್ಣ, ಮಧ್ಯಮ ಕೈಗಾರಿಕೆಗಳನ್ನು ತೆರೆಯಬಹುದು. ಇದರಿಂದ ಯುವ ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು. 


ಜಿಲ್ಲೆಗೆ ಕುಡಿಯುವ ನೀರಿನ ಯೋಜನೆಗೆ 102 ಕೋಟಿ ರೂ. ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ,ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪೌಷ್ಠಿಕತೆಯಂತಹ ಕಾರ್ಯಕ್ರಮಗಳಿಗೆ ಒತ್ತು ನೀಡಿದ್ದೇವೆ. ಜಿಲ್ಲೆಯ ಆರ್ಥಿಕ ಔದ್ಯೋಗಿಕ ಸಾಮಾಜಿಕ, ಶಿಕ್ಷಣ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ. ಅಭಿವೃದ್ದಿಯ ವಿಷಯದಲ್ಲಿ ಪಕ್ಷ ಬೇಧ ಇಲ್ಲ ಎಂದರು.  


ಚಾಮರಾಜನಗರ ಜಿಲ್ಲೆಗೆ ವಿಶ್ವ ವಿದ್ಯಾಲಯ ಮಂಜೂರು ಮಾಡಲಾಗಿದೆ. ಮಾದರಿ ವಿಶ್ವವಿದ್ಯಾಲಯವನ್ನಾಗಿಸಲು ಕ್ರಮ ವಹಿಸಲಾಗುವುದು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲೆಯ ಇತರ ಭಾಗಗಳಲ್ಲಿಯೂ ಅನುಷ್ಠಾನ ಗೊಳಿಸಲಾಗುವುದು ಎಂದು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 


ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಮಾತನಾಡಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು 1390 ಕೋಟಿ ರೂ. ವೆಚ್ಚದ ಯೋಜನೆ ಸಿದ್ದವಾಗಿದೆ. ಜಿಲ್ಲೆಗೆ 25 ವರ್ಷಗಳು ತುಂಬಿದ್ದು ಶಕ್ತಿ ತುಂಬುವ ಕೆಲಸ ಆಗಬೇಕಿದೆ. ಇಂದು ಒಂದು ಸಾವಿರಕ್ಕೂ ಹೆಚ್ಚು ಕೋಟಿ ರೂ. ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದರು.


ಮುಖ್ಯಮಂತ್ರಿಗಳು ಜನಪರ, ಬಡವರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿದ್ದಾರೆ. ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಜಿಲ್ಲೆಯ ಅಭಿವೃದ್ದಿ ಬಗ್ಗೆ ಕಾಳಜಿ ಹೊಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ  ತಿಳಿಸಿದರು. 


 ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಮಾತನಾಡಿ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇನ್ನೂ ಹೆಚ್ಚಿನ ಒತ್ತು ನೀಡಬೇಕಿದೆ. ಈಗಾಗಲೇ ವಿಶ್ವ ವಿದ್ಯಾಲಯ ಮಂಜೂರಾಗಿದ್ದು ಇದಕ್ಕಾಗಿ ಮುಖ್ಯಮಂತ್ರಿಯವರನ್ನು ಅಭಿನಂದಿಸುತ್ತೇನೆ. ಜಿಲ್ಲೆಗೆ ಕಾನೂನು ಕಾಲೇಜು ಸಹ ಬರಬೇಕಿದೆ. ಈ ಸಂಬಂಧ ಉಪಕುಲಪತಿ ಅವರ ಜೊತೆ ಮಾತನಾಡಿದ್ದೇನೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ದಿಯಾಗಬೇಕಿದೆ ಎಂದು ತಿಳಿಸಿದರು. 


ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಚಾಮರಾಜನಗರದಲ್ಲೂ ಸುಸಜ್ಜಿತ ಬಸ್ ನಿಲ್ದಾಣ ಆಗಬೇಕು. ಅತಿವೃಷ್ಠಿಯಿಂದ ಹಾನಿಗೀಡಾಗಿರುವ ರಸ್ತೆ ಮೂಲ ಸೌಕರ್ಯಗಳಿಗೆ ವಿಶೇಷ ಅನುದಾನ ನೀಡಬೇಕು. ಪರಿಶಿಷ್ಟರ ಕಾಲೋನಿಗಳಿಗೆ ಹೆಚ್ಚಿನ ಮೂಲ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದರು.


ಶಾಸಕರಾದ ಸಿ.ಎಸ್. ನಿರಂಜನ್‍ಕುಮಾರ್ ಅವರು ಮಾತನಾಡಿ ಜಾನಪದ ಕಲೆಗಳ ತವರೂರಾದ ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿಯವರು ಅನೇಕ ಅಭಿವೃದ್ದಿ ಕಾರ್ಯಗಳಿಗೆ ಮುಂದಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಜಿಲ್ಲೆಯ ಪ್ರಗತಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸರ್ಕಾರ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕಾಗಿ 18 ಕೋಟಿ ರೂ. ಅನುದಾನ ನೀಡಿದ್ದಾರೆ. 32 ಗ್ರಾಮಗಳ ನೀರಿನ ಯೋಜನೆಗೆ 22 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದರು. 


ಇದೇ ವೇಳೆ ಮುಖ್ಯಮಂತ್ರಿಯವರು ವಿಶೇಷಚೇತನರಿಗೆ ತ್ರಿಚಕ್ರ ವಾಹನ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.


ಕಂದಾಯ ಸಚಿವರಾದ ಆರ್. ಅಶೋಕ, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭಾ ಅಧ್ಯಕ್ಷರಾದ ಆಶಾ ನಟರಾಜು, ಸದಸ್ಯರಾದ ಚಂದ್ರಶೇಖರ್, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ. ಜಿ.ಸಿ. ಪ್ರಕಾಶ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿಪಿ. ಶಿವಕುಮಾರ್ ಇತರರು ಉಪಸ್ಥಿತರಿದ್ದರು.


---------

(ಬಾಕ್ಸ್ ಐಟಂ)

ಯಡಿಯೂರಪ್ಪ ಭಾವಚಿತ್ರ ಹಾಕದ್ದಕ್ಕೆ  ಪಕ್ಷದವರಿಂದಲೆ ಆಕ್ರೋಶ.! 

   *ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*       ಚಾಮರಾಜನಗರ: ವೇದಿಕೆ ಕಾರ್ಯಕ್ರಮದ ಎಲ್ಇಡಿ ಬ್ಯಾನರ್ ಅಲ್ಲಿ ಯಡಿಯೂರಪ್ಪ ಅವರ ಭಾವಚಿತ್ರ ಹಾಕದಿರುವುದನ್ನ ಅದೇ ಪಕ್ಷದ ಯಡಿಯೂರಪ್ಪ ಅಬಿಮಾನಿಗಳು ದಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ವೇದಿಕೆ ಎಲ್ಇಡಿ ಬ್ಯಾನರ್ ಅಲ್ಲಿನ ಬಾವಚಿತ್ರಗಳಲ್ಲಿ ಯಡಿಯೂರಪ್ಪ ಅವರ ಭಾವಚಿತ್ರ ಹಾಕದೆ ಇರೊದರಿಂದ ಯಡಿಯೂರಪ್ಪ ಅವರ ಕಾರ್ಯಕರ್ತರು ಅಸಮದಾನ ವ್ಯಕ್ತಪಡಿಸಿ ಖಂಡಿಸಿದರು.  ನಂತರ ವೇದಿಕೆಗೆ ಆಗಮಿಸಿದ ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಅವರು ಕಾರ್ಯಕರ್ತರನ್ನ ಸಮದಾನಪಡಿಸಿದರು.ನಮಗೂ ಯಡಿಯೂರಪ್ಪ ಅವರ ಮೇಲೆ ಗೌರವ ಅಬಿಮಾನ ಇದೆ. ಇದು ಸರ್ಕಾರಿ ಕಾರ್ಯಕ್ರಮ ಆದ್ದರಿಂದ ಹಾಕಲು ಅವಕಾಶವಿಲ್ಲ ಎಂದು ಸಮದಾನ ಪಡಿಸಿದ ಮೇಲೆ ಕಾರ್ಯಕರ್ತರು ಸುಮ್ಮನಾದರು

Monday, 12 December 2022

12-12-2022 ಚಾಮರಾಜನಗರ ಮುಖ್ಯಮಂತ್ರಿಯವರ ಜಿಲ್ಲಾ ಭೇಟಿ ಹಿನ್ನೆಲೆ : ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ )







 

ಮುಖ್ಯಮಂತ್ರಿಯವರ ಜಿಲ್ಲಾ ಭೇಟಿ ಹಿನ್ನೆಲೆ : ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ 

ಚಾಮರಾಜನಗರ, ಡಿಸೆಂಬರ್ 12 - ಮುಖ್ಯಮಂತ್ರಿಗಳ ಡಿಸೆಂಬರ್ 13ರ ಜಿಲ್ಲಾ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಹಾಗೂ ಹನೂರಿನ ಮಹದೇಶರ್ವ ಕ್ರೀಡಾಂಗಣ್ಕಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು. 

ಮೊದಲಿಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಚಿವರು ಕಾರ್ಯಕ್ರಮಕ್ಕಾಗಿ ಹಾಕಲಾಗಿರುವ ಬೃಹತ್ ವೇದಿಕೆ, ಶಾಮಿಯಾನ, ಇನ್ನಿತರ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಆಸನಗಳ ವ್ಯವಸ್ಥೆ, ಸಾರ್ವಜನಿಕರಿಗೆ ಕೈಗೊಂಡಿರುವ ಇನ್ನಿತರ ಸೌಕರ್ಯಗಳ ಬಗ್ಗೆ ವೀಕ್ಷಿಸಿದರು. ಕ್ರೀಡಾಂಗಣದಲ್ಲಿ ಕೈಗೊಂಡಿರುವ ಇತರೆ ಕೆಲಸಗಳನ್ನು ವೀಕ್ಷಿಸಿದ ಸಚಿವರು ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಕೈಗೊಂಡಿರುವ ಭದ್ರತಾ ವ್ಯವಸ್ಥೆ, ವಾಹನಗಳ ನಿಲುಗಡೆ, ಸಂಚಾರ ವ್ಯವಸ್ಥೆ, ಫಲಾನುಭವಿಗಳ ಕರೆತರಲು ಕೈಗೊಂಡಿರುವ ಸಿದ್ದತೆಗಳನ್ನು ಪರಿಶೀಲಿಸಿದರು. 

ಇದೇ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವರು ಮುಖ್ಯಮಂತ್ರಿಯವರ ಕಾರ್ಯಕ್ರಮ ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಅಧಿಕಾರಿಗಳಿಗೆ ನಿಯೋಜಿಸಲಾಗಿರುವ ಕೆಲಸಗಳನ್ನು ಜವಾಬ್ದಾರಿಯುತವಾಗಿ ಮಾಡಬೇಕು. ಎಲ್ಲಿಯೂ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಬಳಿಕ ಹನೂರು ಪಟ್ಟಣಕ್ಕೆ ತೆರಳಿ ಅಲ್ಲಿಯೂ ಸಹ ಮುಖ್ಯಮಂತ್ರಿಯವರ ಕಾರ್ಯಕ್ರಮದ ಸಿದ್ದತೆಗಳನ್ನು ವ್ಯಾಪಕವಾಗಿ ಪರಿಶೀಲಿಸಿದರು. ಶಾಮಿಯಾನ, ಆಸನಗಳ ವ್ಯವಸ್ಥೆ, ಸುಗಮ ಸಂಚಾರಕ್ಕೆ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆ ಖುದ್ದು ವೀಕ್ಷಣೆ ಮಾಡಿದರು. 

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಯಶಸ್ವಿಯಾಗಿ ಕಾರ್ಯಕ್ರಮ ನಡೆಯಲು ಎಲ್ಲಾ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಬೇಕು. ವಹಿಸಲಾಗಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಫಲಾನುಭವಿಗಳನ್ನು ಕರೆತಂದು ಸೌಲಭ್ಯ ವಿತರಿಸುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.

ಪರಿಶೀಲನೆ ಸಮಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಧಿಕಾರಿಗಳು ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆ ಕೈಗೊಂಡಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಜನ ಬರಲಿದ್ದಾರೆ ಎಂದು ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. 

ಶಾಸಕರಾದ ಎನ್. ಮಹೇಶ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಇತರೆ ಅಧಿಕಾರಿಗಳು ಇದ್ದರು. 
----

ಡಿ. 13ರಂದು ಕಂದಾಯ ಸಚಿವರ ಜಿಲ್ಲಾ ಪ್ರವಾಸ


ಚಾಮರಾಜನಗರ, ಡಿಸೆಂಬರ್ 12- ಕಂದಾಯ ಸಚಿವರಾದ ಆರ್. ಅಶೋಕ್ ಅವರು  ಡಿಸೆಂಬರ್ 13 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಡಿಸೆಂಬರ್ 13ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವವರು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 

ಮಧ್ಯಾಹ್ನ 12.50 ಗಂಟೆಗೆ ಹನೂರು ಪಟ್ಟಣದ ರಾಮಾಪುರ ರಸ್ತೆಯಲ್ಲಿರುವ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವರು. ನಂತರ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ಹನೂರು ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವರು.

ಮಧ್ಯಾಹ್ನ 2.50 ಗಂಟೆಗೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವವರು. ಬಳಿಕ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 3.15 ಗಂಟೆಗೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸುವರು. ಸಂಜೆ 4.45 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುÀವರು ಎಂದು ಪ್ರಕಟಣೆ ತಿಳಿಸಿದೆ.
ಜಾಗೇರಿ ಗ್ರಾಮದ ಸಮಸ್ಯೆ ಇತ್ಯರ್ಥಕ್ಕೆ ಸರ್ವೆ ಕಾರ್ಯ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ 

ಚಾಮರಾಜನಗರ, ಡಿಸೆಂಬರ್ 12 ಕೊಳ್ಳೇಗಾಲ ತಾಲೂಕಿನ ಜಾಗೇರಿ ಸರ್ವೆ ನಂ. 174 ಭೂಮಿಗೆ ಸಂಬಂಧಿಸಿದಂತೆ ಸರ್ವೆ ಕಾರ್ಯ ನಡೆಸಬೇಕು. ಅಲ್ಲಿಯವರೆಗೆ ವ್ಯವಸಾಯ ಮಾಡುತ್ತಿರುವ ರೈತರಿಗೆ ಯಾವುದೇ ತರಹದ ತೊಂದರೆ ನೀಡಬಾರದು ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಜಾಗೇರಿ ಗ್ರಾಮದಲ್ಲಿ ರೈತ ಮುಖಂಡರು ಹಾಗೂ ಗ್ರಾಮಸ್ಥರೊಂದಿಗೆ ನಡೆದ ಅಹವಾಲು ಆಲಿಕೆಯ ಸಭೆಯನ್ನುದ್ದೇಶಿಸಿ ಸಚಿವರು ಮಾತನಾಡಿದರು. 

ಸರ್ವೆ ನಂ 174 ರಲ್ಲಿ ರೈತರು ಭೂಮಿಯನ್ನು ಉಳುಮೆ ಮಾಡುತ್ತಿರುವ ಸಂಬಂಧ ಜಮೀನುಗಳನ್ನು ಸರ್ವೆ ನಡೆಸಿ ಜನವರಿ 20ರ ಒಳಗಾಗಿ ವರದಿ ತಯಾರಿಸಿ ನೀಡಬೇಕು. ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೂ ತರಲಾಗುವುದು. ಸರ್ವೆ ಕಾರ್ಯ ನಡೆಯುವವರೆಗೆ ಯಾವುದೇ ತೊಂದರೆ ನೀಡುವುದು ಬೇಡ. ರೈತರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಚಿವರು ತಿಳಿಸಿದರು. 

ನನಗೆ ರೈತರ ಕಷ್ಟ ಏನೆಂಬುದು ಹತ್ತಿರದಿಂದ ಬಲ್ಲೆ. ಮಾನವೀಯತೆ, ಮನುಷತ್ವ ಇರಬೇಕು. ರೈತರಿಗೆ, ಇಲ್ಲಿನ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ. ಸಮಸ್ಯೆ ಪರಿಹಾರಕ್ಕೆ ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇನೆ. ತಕ್ಷಣವೇ ಸರ್ವೆ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತಿದ್ದೇನೆ ಎಂದರು. 

ಇದೇ ವೇಳೆ ವಸತಿ ಸೌಲಭ್ಯವನ್ನು ಹೆಚ್ಚು ಕಲ್ಪಿಸುವಂತೆ ಮನವಿ ಮಾಡಿದ ಗ್ರಾಮಸ್ಥರಿಗೆ ಸಚಿವರು ಹೆಚ್ಚಿನ ಮನೆಗಳ ಸೌಲಭ್ಯವನ್ನು ನೀಡುವುದಾಗಿ ತಿಳಿಸಿದರು. 

ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಜಾಗೇರಿ ಅರಣ್ಯ ಜಮೀನನ್ನು ಹಲವಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ರೈತರು ಬಂದಿದ್ದು ಬಿಗಿಯಾದ ಅರಣ್ಯ ಕಾಯ್ದೆಯಿಂದ ಹಲವರಿಗೆ ತೊಂದರೆಯಾಗಿದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಸರಿಪಡಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.  

      ಶಾಸಕರಾದ ಎನ್. ಮಹೇಶ್, ಮಾಜಿ ಶಾಸಕರಾದ  ಜಿ.ಎನ್. ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿμÁ್ಟಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಡಿಎಫ್‍ಒ ಸಂತೋμïಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‍ರಾಜ್, ಉಪ ವಿಭಾಗಾಧಿಕಾರಿ ಗೀತಾ ಹುಡೇದ, ತಹಶೀಲ್ದಾರರಾದ ಮಂಜುಳ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್, ಇತರರು ಉಪಸ್ಥಿತರಿದ್ದರು. 



   



01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು