Saturday, 3 December 2022

03-12-2022 ಜಿಲ್ಲೆಗೆ ಡಿಸೆಂಬರ್ 12ರಂದು ಮುಖ್ಯಮಂತ್ರಿಗಳ ಭೇಟಿ: ಸಕಲ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಸೂಚನೆ




 ಜಿಲ್ಲೆಗೆ ಡಿಸೆಂಬರ್ 12ರಂದು ಮುಖ್ಯಮಂತ್ರಿಗಳ ಭೇಟಿ: ಸಕಲ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಸೂಚನೆ 

 

      ಚಾಮರಾಜನಗರ, ಡಿಸೆಂಬರ್ 03 :- ಚಾಮರಾಜನಗರ ಜಿಲ್ಲೆಗೆ ಇದೇ ಡಿಸೆಂಬರ್ 12ರಂದು ಮುಖ್ಯಂತ್ರಿಯವರು ಆಗಮಿಸಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪವಿಲ್ಲದಂತೆ ಅಧಿಕಾರಿಗಳು ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚನೆ ನೀಡಿದರು.


ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಪೂರ್ವ ಸಿದ್ದತೆಗಳ ಪರಿಶೀಲನೆಗಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


  ಮುಖ್ಯಂತ್ರಿಯವರು ಡಿಸೆಂಬರ್ 12 ರಂದು ಮೊದಲಿಗೆ ಚಾಮರಾಜನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವರು. ಬಳಿಕ ಹನೂರಿನಲ್ಲಿಯೂ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ. ತದನಂತರ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಸುವರು. ಈ ಎಲ್ಲಾ ಕಾರ್ಯಕ್ರಮಗಳಿಗೆ ಅಚ್ಚುಕಟ್ಟಾಗಿ ಪೂರ್ವ ಸಿದ್ದತೆ ಕೈಗೊಳ್ಳಬೇಕೆಂದು ಉಸ್ತುವಾರಿ ಸಚಿವರು ತಿಳಿಸಿದರು. 


ಜಿಲ್ಲೆ ಸವಾರ್ಂಗೀಣ ಅಭಿವೃಧ್ದಿಯಾಗಬೇಕಿದೆ. ಇನ್ನಷ್ಟು ಕಾರ್ಖಾನೆಗಳು, ಉದ್ಯಮಗಳು ಬೆಳೆಯಬೇಕಿದೆ. ಪ್ರಗತಿಗೆ ಉತ್ತೇಜನ ನೀಡಬೇಕಾಗುತ್ತೆದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮುಖೇನ ಶಕ್ತಿ ತುಂಬಬೇಕಿದೆ. ಅಭಿವೃದ್ದಿಗೆ ಪೂರಕವಾಗಿ ಹಲವು ಪ್ರಕ್ರಿಯೆಗಳು ನಡೆಯಬೇಕಿದೆ. ಮುಖ್ಯಂತ್ರಿಗಳ ಭೇಟಿ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ. ಹೀಗಾಗಿ ಅಧಿಕಾರಿಗಳು ಸಕಲ ಸಿದ್ದತೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು. 


ಇಡೀ ಜಿಲ್ಲೆಯ ಕೆರೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ವಿಸೃತ ಯೋಜನಾ ವರದಿ ತಯಾರಾಗಿದೆ. ಜಿಲ್ಲೆಯ ಜನರಿಗೆ ಅನುಕೂಲವಾಗುವ ಕಾರ್ಯಕ್ರಮ ಸೌಲಭ್ಯಗಳನ್ನು ತಲುಪಿಸಬೇಕು.ಅಧಿಕಾರಿಗಳು ಕಾರ್ಯಕ್ರಮ ಆಯೋಜನೆಗೆ ಪೂರಕವಾಗಿರುವ ಎಲ್ಲಾ ಕ್ರಮಗಳಿಗೆ ಮುಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. 


ಇದೇ ತಿಂಗಳ 7 ಹಾಗೂ 8ರಂದು ಜಿಲ್ಲೆಗೆ ಮತ್ತೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಜಿಲ್ಲೆಯ ಪ್ರಗತಿಗೆ ತಾವು ಬದ್ದರಾಗಿದ್ದು ಕಾರ್ಯಕ್ರಮಗಳ ಅನುμÁ್ಠನ ಮಾಡಲಾಗುವುದು ಎಂದರು. 


ಇದೇ ವೇಳೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕುಡಿಯುವ ನೀರಿನ ಮೂರನೇ ಹಂತ ಯೋಜನೆ ವಿಳಂಬವಾಗಿದೆ. ಇದು ಜಾರಿಗೆ ಬರಬೇಕು. ಸುಸಜ್ಜಿತ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳ ಗುರುತಿಸಲಾಗಿದ್ದು ಈ ಕಾರ್ಯ ಚಾಲನೆಗೆ ಬರಬೇಕಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಕೂಡಲೇ ಕುಡಿಯುವ ನೀರು ಯೋಜನೆಯ ಕಡತ ಮಂಡಿಸಬೇಕು. ಇದರ ಮುಂದಿನ ಪ್ರಕ್ರಿಯೆಗೆ ನಾನೇ ಕ್ರಮವಹಿಸುತ್ತೇನೆ ಎಂದರು. ಕೆಎಸ್‍ಆರ್‍ಟಿಸಿ  ಬಸ್ ನಿಲ್ದಾಣ ಸಂಬಂಧ ಸಹ ತ್ವರಿತವಾಗಿ ಕ್ರಮ ತೆಗೆದುಕೊಳ್ಳುವಂತೆ ಕೆಎಸ್‍ಆರ್‍ಟಿಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಯವರಿಗೆ ಸಚಿವರು ಸೂಚನೆ ನೀಡಿದರು.


ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಮುಖ್ಯಮಂತ್ರಿಯವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ ಹೆಚ್ಚು ಮೊತ್ತದ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸುತ್ತಿದ್ದಾರೆ. ಇದೇ ವೇಳೆ ರಾಮನಗುಡ್ಡ ಸೇರಿದಂತೆ ಎರಡು ಜಲಾಶಯಗಳಿಗೆ ಪೈಪ್ ಲೈನ್ ಅಳವಡಿಸಿದರೆ 17 ಸಾವಿರ ಹೆಕ್ಟೇರ್ ರೈತರ ಭೂಮಿಗೆ ಅನುಕೂಲವಾಗಲಿದೆ. ಮಲೈ ಮಹದೇಶ್ವರಬೆಟ್ಟ ವ್ಯಾಪ್ತಿಯ 6 ಹಳ್ಳಿಗಳಿಗೆ ವಿದ್ಯುತ್ ಕಲ್ಪಿಸಬೇಕು. ಈ ಎಲ್ಲಾ ಕೆಲಸಗಳು ಮುಖ್ಯಮಂತ್ರಿಗಳು ಬರುವ ಹೊತ್ತಿಗೆ ಆಗಬೇಕು ಎಂದು ಗಮನಕ್ಕೆ ತಂದರು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿ ಕೂಡಲೇ ಪೈಪ್ ಲೈನ್ ಕೆಲಸಗಳಿಗೆ ಮುಂದಾಗಬೇಕು. ಅರಣ್ಯ ಇಲಾಖೆಯವರು ವಿದ್ಯುತ್ ಸಂಪರ್ಕಕಕ್ಕೆ ಬೇಗನೆ ಅನುಮೋದನೆ ನೀಡಬೇಕೆಂದು ಸೂಚನೆ ನೀಡಿದರು.


  ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೆಕೆರೆ ಏತ ನೀರಾವರಿ ಯೋಜನೆ ಕಳೆದ ಎರಡು ವರ್ಷದಿಂದ ಬಾಕಿ ಉಳಿದಿದೆ. ಇದನ್ನು ಯೋಜನೆಗೆ ಸೇರ್ಪಡೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪಗಳು ವ್ಯವಸ್ಥೆಯಾಗಬೇಕು. ನಗರೋತ್ಥಾನ 4ನೇ ಹಂತದ ಅನುದಾನದಲ್ಲಿ ರಸ್ತೆ, ವಿದ್ಯುತ್ ದೀಪ ಇನ್ನಿತರ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ಇದಕ್ಕೆ ಅಗತ್ಯ ಸೂಚನೆ ನೀಡಬೇಕು ಎಂದರು. ಈ ಸಂಬಂಧ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ನಗರೋತ್ಥಾನದಡಿ ಕಾಮಗಾರಿ ನಿರ್ವಹಣೆಗೆ ಮುಂದಾಗಬೇಕು. ನೀರಾವರಿ ಇಲಾಖೆ ಅಧಿಕಾರಿಗಳು ಕೋಟೆಕೆರೆ ಅಭಿವೃದ್ದಿಗೆ ಯೋಜನೆಯಡಿ ಸೇರ್ಪಡೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು. 


ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ಮಾತನಾಡಿ ತಮ್ಮ ಭಾಗದ ಕೆರೆಗಳಿಗೆ ನೀರು ಹರಿಸುವುದು, ನಿರಂತರ ಜ್ಯೋತಿಗೆ 30 ಗ್ರಾಮ ಬಿಟ್ಟುಹೋಗಿರುವುದನ್ನು ಸೇರ್ಪಡೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ವಿದ್ಯುತ್ ದೀಪಗಳು ಅಳವಡಿಕೆಯಾಗಬೇಕು ಎಂದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಈ ಸಂಬಂಧ ಎಲ್ಲಾ ಕ್ರಮಗಳಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು. 


ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಕೆ.ಎಸ್. ಸುಂದರ್ ರಾಜ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಹಾಗೂ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ದೀಪ ಕಂಟ್ರಾಕ್ಟರ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ಸಂತೋμï ಕುಮಾರ್, ಕೆಶಿಪ್ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


ವಿಕಲಚೇತನರನ್ನು ಮುಖ್ಯವಾಹಿನಿಗೆ ತರಲು ಪ್ರತಿಯೊಬ್ಬರು ನೆರವಾಗಬೇಕು : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ.  


      ಚಾಮರಾಜನಗರ, ಡಿಸೆಂಬರ್ 03 :- ವಿಕಲಚೇತನರನ್ನು ಪ್ರೀತಿ, ಗೌರವದಿಂದ ಕಂಡು ಸಮಾಜಮುಖಿಯಾಗಿ ಕೆಲಸ ಮಾಡಲು ಅನುವು ಮಾಡಿಕೊಟ್ಟು ಮುಖ್ಯವಾಹಿನಿಗೆ ತರುವಲ್ಲಿ ಪ್ರತಿಯೊಬ್ಬರು ನೆರವಾಗಬೇಕು ಎಂದು ವಸತಿ, ಮೂಲಸೌಲಭ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.


     ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿವಿಧ ಇಲಾಖೆಗಳು, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ದಿ ಸಮಿತಿ ಹಾಗೂ ಸ್ಥಳೀಯ ಸ್ವಯಂ ಸೇವಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


     ಸರ್ಕಾರವು ಅಂಗವಿಕಲರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಹಲವು ಸೌಲಭ್ಯ, ಸವಲತ್ತುಗಳನ್ನು ಕಲ್ಪಿಸಿದೆ. ಶೇ. 40ರಷ್ಟು ಅಂಗವಿಕಲತೆ ಹೊಂದಿರುವವರಿಗೆ ಈ ಹಿಂದೆ ನೀಡುತ್ತಿದ್ದ 600 ರೂ. ಮಾಸಾಶನವನ್ನು 800ಕ್ಕೆ ಏರಿಸಲಾಗಿದೆ. ಶೇ. 75ರಷ್ಟು ಅಂಗವಿಕಲತೆ ಇರುವವರಿಗೆ 1200ರಿಂದ 1400 ರೂ. ಏರಿಕೆ ಮಾಡಲಾಗಿದೆ. ಅಲ್ಲದೇ ಬುದ್ದಿಮಾಂಧ್ಯರಿಗೆ 1200 ರೂ. ನಿಂದ 2000 ರೂ. ಗೆ ಹೆಚ್ಚಿಸಲಾಗಿದೆ ಎಂದರು.


     ಜಿಲ್ಲೆಯಲ್ಲಿ 20460 ಅಂಗವಿಕಲರಿದ್ದಾರೆ. 206 ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಲಾಗಿದೆ. ವಿಕಲಚೇತನರನ್ನು ವಿವಾಹವಾಗುವ ಅಂಗವಿಕಲರಿಗೆ ಸರ್ಕಾರದಿಂದ 50 ಸಾವಿರ ರೂ. ಪ್ರೋತ್ಸಾಹಧನ, ಲ್ಯಾಪ್‍ಟಾಪ್ ವಿತರಣೆ, 25 ಅಂಗವಿಕಲ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ, 993 ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಣೆ ಮಾಡಲಾಗಿದೆ. ಹೆರಿಗೆಯಾಗುವ ದೃಷ್ಟಿಹೀನ ಹೆಣ್ಣು ಮಕ್ಕಳಿಗೆ 2 ವರ್ಷಗಳ ಕಾಲ ಪ್ರತಿ ತಿಂಗಳು 2 ಸಾವಿರ ಶಿಶುಪಾಲನಾ ಭತ್ಯೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.


     ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸರ್ಕಾರದ ಯೋಜನೆಗಳ ಕುರಿತು ಅಂಗವಿಕಲರಿಗೆ ನಿರಂತರವಾಗಿ ಅರಿವು ಮೂಡಿಸುತ್ತಿದ್ದಾರೆ ಅಂಗವಿಕಲತೆ ಪ್ರಕೃತಿ ನಿಯಮವಾಗಿದೆ. ಅದನ್ನು ಮೀರಲು ಯಾರಿಂದಲೂ ಸಾಧ್ಯವಿಲ್ಲ. ದೇಶದ ಪ್ರಗತಿಯಲ್ಲಿ ವಿಕಲಚೇತನರ ಪಾತ್ರ ಪ್ರಮುಖವಾಗಿದೆ. ಇಂದು ಅಂಗವಿಕಲರು ದೇಶದ ಎಲ್ಲ ಅಭಿವೃದ್ಧಿ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಅವರನ್ನು ಮುಖ್ಯವಾಹಿನಿಗೆ ತರುವಲ್ಲಿ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ಸಹಕರಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. 


     ವಿಕಲಚೇತನ ಮಕ್ಕಳು ಜನಿಸಿದರೂ ಸಹ ತಾಯಿಂದಿರು ಎದೆಗುಂದದೇ ನೋವು, ಅಂತರಾಳದ ಭಾವನೆಗಳನ್ನು ಮೆಟ್ಟಿನಿಲ್ಲುವುದು ಭಾರತೀಯ ಸಂಸ್ಕøತಿಯಾಗಿದೆ. ಅಂಗವಿಕಲರನ್ನು ಸಮಾಜದ ಸತ್ಪ್ರಜೆಗಳಾಗಿ ರೂಪಿಸುವಲ್ಲಿ ಎಂತಹುದೇ ಸನ್ನಿವೇಶ, ಸಂದರ್ಭ ಎದುರಾದರೂ ಪೋಷಕರು ಧೃತಿಗೆಡಬಾರದು. ಸರ್ಕಾರ ನಿಮ್ಮ ಜೊತೆಗಿದೆ ವಿಕಲಚೇತನ ದೈಹಿಕ, ಮಾನಸಿಕ ಅಂಗವಿಕಲತೆಯಿಂದ ಬಳಲುವ ಮಕ್ಕಳಿಗೆ ಆತ್ಮಸ್ಥೈರ್ಯ ಹಾಗೂ ಮನೋಸ್ಥೈರ್ಯ ತುಂಬುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. 


     ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಂಗವಿಕಲರನ್ನು ವಸತಿ, ಮೂಲಸೌಲಭ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಹಾಗೂ ಗಣ್ಯರು ಸನ್ಮಾನಿಸಿ ಅಭಿನಂದಿಸಿದರು.  


     ಕಾರ್ಯಕ್ರಮದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. 


     ಶಾಸಕರಾದ ಎನ್. ಮಹೇಶ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಿರಂಜನಕುಮಾರ್, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಸ್. ಸುಂದರ್‍ರಾಜ್, ಡಿವೈಎಸ್‍ಪಿ ಪ್ರಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ದೀಪಾ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಗೀತಾಲಕ್ಷ್ಮೀ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್, ಇತರರು ಕಾರ್ಯಕ್ರಮದಲ್ಲಿ ಇದ್ದರು.


     ಕಾರ್ಯಕ್ರಮದ ಬಳಿಕ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.


ಡಿ.12 ರಂದು ನಗರಕ್ಕೆ ಸಿ.ಎಂ.ಭೇಟಿ ; ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ರೀಡಾಂಗಣದಲ್ಲಿ ಸಿದ್ದತೆ ಪರಿಶೀಲನೆ 


      ಚಾಮರಾಜನಗರ, ಡಿಸೆಂಬರ್ 03 - ಡಿಸೆಂಬರ್ 12 ರಂದು  ಮುಖ್ಯಮಂತ್ರಿಗಳಾದ  ಬಸವರಾಜಬೊಮ್ಮಯಿ ರವರು  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು  ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು  ವಸತಿ ಮತ್ತುಮೂಲ ಸೌಕರ್ಯಗಳ  ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದವಿ.ಸೋಮಣ್ಣ ಅವರು ನಗರದ ಡಾ.ಬಿ.ಆರ್.ಅಂಬೇಡ್ಕರ್  ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿದ್ದತೆ ಪರಿಶೀಲಿಸಿದರು.


ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಚಿವರು, ಸಿ.ಎಂ. ಭೇಟಿ ನೀಡುವ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳವನ್ನು ವೀಕ್ಷಿಸಿದರು. 


ಈ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವರು ಮುಖ್ಯಮಂತ್ರಿಗಳ ಬರುವ ಹಿನ್ನಲೆಯಲ್ಲಿ ಕ್ರೀಡಾಂಗಣದಲ್ಲಿ ಸುಸಜ್ಜಿತ ವೇದಿಕೆ,ಸಾರ್ವಜನಿಕರ ಆಸನಗಳ ವ್ಯವಸ್ಥೆ, ಫಲಾನುಭವಿಗಳಿಗೆ ಪ್ರತ್ಯೇಕ ಆಸನಗಳುಬೃಹತ್ ಶಾಮಿಯಾನ,ಬ್ಯಾರಿಕೇಡ್ ಅಳವಡಿಸಲು ಸೂಚಿಸಿದರು.


  ಸಾರ್ವಜನಿಕರು ಕ್ರೀಡಾಂಗಣಕ್ಕೆ ಆಗಮಿಸುವ ಹಾಗೂ ತೆರಳುವ ಮಾರ್ಗಗಳು  ಹೆಚ್ಚು ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ  ಸಚಿವರು ನಿರ್ದೇಶನ ನೀಡಿದರು.


ಹೆಚ್ಚು ಜನರು ಬರುವ ನಿರೀಕ್ಚೆ ಇರುವ ಕಾರಣ ಎಲ್ಲೂ ಗೊಂದಲಗಳಾಗಬಾರದು ಹಾಗೂ ಸಾರ್ವಜನಿಕರಿಗೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು.


ಈ ಸಂಧರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಆಶಾ ನಟರಾಜು, ಲೋಕೊಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿನಯಕುಮಾರ್,  ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಸಿ.ಕೆಂಪರಾಜು ,ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ  ಸುಂದರರಾಜು ಇದ್ದರು.


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು