Tuesday, 6 December 2022

06-12-2022 ಅಂಬೇಡ್ಕರ್ ಅವರ ಚಿಂತನೆ ಅಳವಡಿಸಿಕೊಳ್ಳಲು ಜಿಲ್ಲಾಧಿಕಾರಿ ಡಿಎಸ್. ರಮೇಶ್ ಸಲಹೆ


 ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆ ಅಳವಡಿಸಿಕೊಳ್ಳಲು ಜಿಲ್ಲಾಧಿಕಾರಿ ಡಿಎಸ್. ರಮೇಶ್ ಸಲಹೆ  


      ಚಾಮರಾಜನಗರ, ಡಿಸೆಂಬರ್ 06 :- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದ್ದು, ಅವರ ಉದಾತ್ತ ಚಿಂತನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು. 


 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 66ನೇ ಪರಿನಿರ್ವಾಣ ದಿನ ಆಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. 


  ಮಾನವ ಜನಾಂಗದ ಏಳಿಗೆಗಾಗಿ ತಮ್ಮ ಜೀವನವನ್ನು ಮುಡಿಪಿಟ್ಟ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಮಹನೀಯರ ಆದರ್ಶ ಚಿಂತನೆಗಳನ್ನು ಮರೆಯಬಾರದು. ದೇಶ ಸಮಾಜದ ಸುಧಾರಣೆ ಹಾಗೂ ಒಳ್ಳೆಯ ದಾರಿಯಲ್ಲಿ ನಡೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಅಳವಡಿಸಿಕೊಂಡು ಮುಂದೆ ಹೋಗಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು. 


 ಯಾರು ಬಲಹೀನರಾಗಬಾರದು, ಪ್ರತಿಯೊಬ್ಬರಲ್ಲೂ ತಮ್ಮದೇ ಆದ ಶಕ್ತಿ ಇರುತ್ತದೆ. ನಮ್ಮಲ್ಲಿ ನಾವೇ ಶಕ್ತಿ ತುಂಬುವಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಪ್ರತಿಪಾದಿಸಿದ ವಿಚಾರ ಆಲೋಚನೆ ಆದರ್ಶಗಳನ್ನು ಪಾಲಿಸಬೇಕು. ಇದಕ್ಕಾಗಿ ಪ್ರತಿಯೊಬ್ಬರು ಶಪಥ ಮಾಡಬೇಕು ಎಂದರು.


 ಅಂಬೇಡ್ಕರ್ ಅವರ ಮಹತ್ತರ ಧ್ಯೇಯೊದ್ದೇಶಗಳನ್ನು ಸ್ಮರಿಸಬೇಕು. ಶಾಂತಿ, ಆರೋಗ್ಯಯುತ ಸಮಾಜ ನಿರ್ಮಾಣದ ಗುರಿ ಹೊಂದಬೇಕು. ಅರ್ಥಪೂರ್ಣ ಬದುಕು ಹಾಗೂ ಸರಿಯಾದ ದಾರಿಯಲ್ಲಿ ಮುನ್ನಡೆಯಲು ಅಂಬೇಡ್ಕರ್ ಅವರ ಮಾದರಿ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು. 


 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸರ್ವ ಜನರ ಸಮಾನತೆಗೆ ಶ್ರಮಿಸಿದವರು. ಮಾನವೀಯ ಚಿಂತನೆಗಳನ್ನು ಹೊಂದಿದ್ದ ಅಂಬೇಡ್ಕರ್ ಅವರನ್ನ ಪ್ರತಿಯೊಬ್ಬರು ಸ್ಮರಿಸಬೇಕು ಎಂದರು. 


 ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಸಿ.ಎಂ.ನರಸಿಂಹಮೂರ್ತಿ, ಮಹೇಶ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತ ಗೀತೆಗಳನ್ನು ಹಾಡಿದರು. 


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‍ರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಮೊದಲಿಗೆ ಜಿಲ್ಲಾಡಳಿತ ಭವನದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಇತರೆ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಮಾಲಾರ್ಪಣೆ ಮಾಡಿದರು.


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು