ಮುಖ್ಯಮಂತ್ರಿಯವರ ಜಿಲ್ಲಾ ಭೇಟಿ ಹಿನ್ನೆಲೆ : ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ
ಚಾಮರಾಜನಗರ, ಡಿಸೆಂಬರ್ 12 - ಮುಖ್ಯಮಂತ್ರಿಗಳ ಡಿಸೆಂಬರ್ 13ರ ಜಿಲ್ಲಾ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಹಾಗೂ ಹನೂರಿನ ಮಹದೇಶರ್ವ ಕ್ರೀಡಾಂಗಣ್ಕಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು.
ಮೊದಲಿಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಚಿವರು ಕಾರ್ಯಕ್ರಮಕ್ಕಾಗಿ ಹಾಕಲಾಗಿರುವ ಬೃಹತ್ ವೇದಿಕೆ, ಶಾಮಿಯಾನ, ಇನ್ನಿತರ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಆಸನಗಳ ವ್ಯವಸ್ಥೆ, ಸಾರ್ವಜನಿಕರಿಗೆ ಕೈಗೊಂಡಿರುವ ಇನ್ನಿತರ ಸೌಕರ್ಯಗಳ ಬಗ್ಗೆ ವೀಕ್ಷಿಸಿದರು. ಕ್ರೀಡಾಂಗಣದಲ್ಲಿ ಕೈಗೊಂಡಿರುವ ಇತರೆ ಕೆಲಸಗಳನ್ನು ವೀಕ್ಷಿಸಿದ ಸಚಿವರು ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಕೈಗೊಂಡಿರುವ ಭದ್ರತಾ ವ್ಯವಸ್ಥೆ, ವಾಹನಗಳ ನಿಲುಗಡೆ, ಸಂಚಾರ ವ್ಯವಸ್ಥೆ, ಫಲಾನುಭವಿಗಳ ಕರೆತರಲು ಕೈಗೊಂಡಿರುವ ಸಿದ್ದತೆಗಳನ್ನು ಪರಿಶೀಲಿಸಿದರು.
ಇದೇ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವರು ಮುಖ್ಯಮಂತ್ರಿಯವರ ಕಾರ್ಯಕ್ರಮ ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಅಧಿಕಾರಿಗಳಿಗೆ ನಿಯೋಜಿಸಲಾಗಿರುವ ಕೆಲಸಗಳನ್ನು ಜವಾಬ್ದಾರಿಯುತವಾಗಿ ಮಾಡಬೇಕು. ಎಲ್ಲಿಯೂ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಬಳಿಕ ಹನೂರು ಪಟ್ಟಣಕ್ಕೆ ತೆರಳಿ ಅಲ್ಲಿಯೂ ಸಹ ಮುಖ್ಯಮಂತ್ರಿಯವರ ಕಾರ್ಯಕ್ರಮದ ಸಿದ್ದತೆಗಳನ್ನು ವ್ಯಾಪಕವಾಗಿ ಪರಿಶೀಲಿಸಿದರು. ಶಾಮಿಯಾನ, ಆಸನಗಳ ವ್ಯವಸ್ಥೆ, ಸುಗಮ ಸಂಚಾರಕ್ಕೆ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆ ಖುದ್ದು ವೀಕ್ಷಣೆ ಮಾಡಿದರು.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಯಶಸ್ವಿಯಾಗಿ ಕಾರ್ಯಕ್ರಮ ನಡೆಯಲು ಎಲ್ಲಾ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಬೇಕು. ವಹಿಸಲಾಗಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಫಲಾನುಭವಿಗಳನ್ನು ಕರೆತಂದು ಸೌಲಭ್ಯ ವಿತರಿಸುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಪರಿಶೀಲನೆ ಸಮಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಧಿಕಾರಿಗಳು ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆ ಕೈಗೊಂಡಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಜನ ಬರಲಿದ್ದಾರೆ ಎಂದು ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಶಾಸಕರಾದ ಎನ್. ಮಹೇಶ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಇತರೆ ಅಧಿಕಾರಿಗಳು ಇದ್ದರು.
----
ಡಿ. 13ರಂದು ಕಂದಾಯ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಡಿಸೆಂಬರ್ 12- ಕಂದಾಯ ಸಚಿವರಾದ ಆರ್. ಅಶೋಕ್ ಅವರು ಡಿಸೆಂಬರ್ 13 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಡಿಸೆಂಬರ್ 13ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವವರು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12.50 ಗಂಟೆಗೆ ಹನೂರು ಪಟ್ಟಣದ ರಾಮಾಪುರ ರಸ್ತೆಯಲ್ಲಿರುವ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವರು. ನಂತರ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ಹನೂರು ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವರು.
ಮಧ್ಯಾಹ್ನ 2.50 ಗಂಟೆಗೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವವರು. ಬಳಿಕ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 3.15 ಗಂಟೆಗೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸುವರು. ಸಂಜೆ 4.45 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುÀವರು ಎಂದು ಪ್ರಕಟಣೆ ತಿಳಿಸಿದೆ.
ಜಾಗೇರಿ ಗ್ರಾಮದ ಸಮಸ್ಯೆ ಇತ್ಯರ್ಥಕ್ಕೆ ಸರ್ವೆ ಕಾರ್ಯ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ
ಚಾಮರಾಜನಗರ, ಡಿಸೆಂಬರ್ 12 ಕೊಳ್ಳೇಗಾಲ ತಾಲೂಕಿನ ಜಾಗೇರಿ ಸರ್ವೆ ನಂ. 174 ಭೂಮಿಗೆ ಸಂಬಂಧಿಸಿದಂತೆ ಸರ್ವೆ ಕಾರ್ಯ ನಡೆಸಬೇಕು. ಅಲ್ಲಿಯವರೆಗೆ ವ್ಯವಸಾಯ ಮಾಡುತ್ತಿರುವ ರೈತರಿಗೆ ಯಾವುದೇ ತರಹದ ತೊಂದರೆ ನೀಡಬಾರದು ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಾಗೇರಿ ಗ್ರಾಮದಲ್ಲಿ ರೈತ ಮುಖಂಡರು ಹಾಗೂ ಗ್ರಾಮಸ್ಥರೊಂದಿಗೆ ನಡೆದ ಅಹವಾಲು ಆಲಿಕೆಯ ಸಭೆಯನ್ನುದ್ದೇಶಿಸಿ ಸಚಿವರು ಮಾತನಾಡಿದರು.
ಸರ್ವೆ ನಂ 174 ರಲ್ಲಿ ರೈತರು ಭೂಮಿಯನ್ನು ಉಳುಮೆ ಮಾಡುತ್ತಿರುವ ಸಂಬಂಧ ಜಮೀನುಗಳನ್ನು ಸರ್ವೆ ನಡೆಸಿ ಜನವರಿ 20ರ ಒಳಗಾಗಿ ವರದಿ ತಯಾರಿಸಿ ನೀಡಬೇಕು. ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೂ ತರಲಾಗುವುದು. ಸರ್ವೆ ಕಾರ್ಯ ನಡೆಯುವವರೆಗೆ ಯಾವುದೇ ತೊಂದರೆ ನೀಡುವುದು ಬೇಡ. ರೈತರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಚಿವರು ತಿಳಿಸಿದರು.
ನನಗೆ ರೈತರ ಕಷ್ಟ ಏನೆಂಬುದು ಹತ್ತಿರದಿಂದ ಬಲ್ಲೆ. ಮಾನವೀಯತೆ, ಮನುಷತ್ವ ಇರಬೇಕು. ರೈತರಿಗೆ, ಇಲ್ಲಿನ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ. ಸಮಸ್ಯೆ ಪರಿಹಾರಕ್ಕೆ ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇನೆ. ತಕ್ಷಣವೇ ಸರ್ವೆ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತಿದ್ದೇನೆ ಎಂದರು.
ಇದೇ ವೇಳೆ ವಸತಿ ಸೌಲಭ್ಯವನ್ನು ಹೆಚ್ಚು ಕಲ್ಪಿಸುವಂತೆ ಮನವಿ ಮಾಡಿದ ಗ್ರಾಮಸ್ಥರಿಗೆ ಸಚಿವರು ಹೆಚ್ಚಿನ ಮನೆಗಳ ಸೌಲಭ್ಯವನ್ನು ನೀಡುವುದಾಗಿ ತಿಳಿಸಿದರು.
ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಜಾಗೇರಿ ಅರಣ್ಯ ಜಮೀನನ್ನು ಹಲವಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ರೈತರು ಬಂದಿದ್ದು ಬಿಗಿಯಾದ ಅರಣ್ಯ ಕಾಯ್ದೆಯಿಂದ ಹಲವರಿಗೆ ತೊಂದರೆಯಾಗಿದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಸರಿಪಡಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ಶಾಸಕರಾದ ಎನ್. ಮಹೇಶ್, ಮಾಜಿ ಶಾಸಕರಾದ ಜಿ.ಎನ್. ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿμÁ್ಟಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಡಿಎಫ್‍ಒ ಸಂತೋμïಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‍ರಾಜ್, ಉಪ ವಿಭಾಗಾಧಿಕಾರಿ ಗೀತಾ ಹುಡೇದ, ತಹಶೀಲ್ದಾರರಾದ ಮಂಜುಳ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್, ಇತರರು ಉಪಸ್ಥಿತರಿದ್ದರು.
No comments:
Post a Comment