File -1 (photo n news)
ಗೌರವ, ಸಮಾನವಕಾಶ ನೀಡಿಕೆಯಿಂದ ಮಾನವ ಹಕ್ಕುಗಳ ಸಾರ್ಥಕತೆ : ನ್ಯಾಯಾಧೀಶರಾದ ಲೋಕಪ್ಪ
ಚಾಮರಾಜನಗರ, ಡಿಸೆಂಬರ್ 21 ಸಮಾಜದಲ್ಲಿ ಪ್ರತಿಯೊಬ್ಬರಿಗೂ ಗೌರವ ನೀಡಿ, ಸಮಾನವಕಾಶ ಕಲ್ಪಿಸುವುದರಲ್ಲಿ ಮಾನವ ಹಕ್ಕುಗಳ ಸಾರ್ಥಕತೆ ಅಡಗಿದೆ ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಲೋಕಪ್ಪ ಅವರು ಅಭಿಪ್ರಾಯಪಟ್ಟರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಅಸಮಾನತೆ, ಲಿಂಗತ್ವ ತಾರತಮ್ಯಗಳನ್ನು ಬದಿಗೊತ್ತಿ ಪ್ರತಿಯೊಬ್ಬರು ಸಾಮಾಜಿಕ ಮುಂಚೂಣಿಯಲ್ಲಿ ನಿಂತು ಇತರರಿಗೂ ಸಮಾನ ಅವಕಾಶಗಳನ್ನು ಒದಗಿಸುವುದು ಮಾನವ ಹಕ್ಕು ದಿನದ ಪ್ರಾಮುಖ್ಯತೆಯಾಗಿದೆ. ಮನುಷ್ಯ ಮನುಷ್ಯನನ್ನು ಗೌರವಿಸಬೇಕು. ಮಾನವ ಹಕ್ಕುಗಳು ಸಾಮಾಜಿಕ ಬದಲಾವಣೆಗೆ ಮುನ್ನುಡಿಯಾಗಬೇಕು. ಮಾನವ ಹಕ್ಕುಗಳಿಗೆ ಬಹಳ ಹಿಂದಿನಿಂದಲೂ ಪ್ರಾತಿನಿಧ್ಯವಿದೆ. ಬುದ್ಧ, ಬಸವ, ಅಂಬೇಡ್ಕರ್. ಕನಕದಾಸರು ಸೇರಿದಂತೆ ಎಲ್ಲಾ ಸಾಧು ಸಂತರು, ವಿಚಾರವಾಧಿಗಳು ಮಾನವ ಹಕ್ಕುಗಳನ್ನು ಪ್ರತಿಪಾದಿಸುತ್ತಲೇ ಬಂದಿದ್ದಾರೆ ಎಂದರು.
ಭಾರತಕ್ಕೆ ಪರಕೀಯರ ಆಗಮನ ಹಾಗೂ ವಿಶ್ವದಲ್ಲಿ ಸಂಭವಿಸಿದ 2 ಮಹಾಯುದ್ಧಗಳಿಂದ ಶೋಷಣೆ ಮತ್ತು ದೌರ್ಜನ್ಯಗಳು ಮಿತಿಮೀರಿದ್ದ ಹಿನ್ನೆಲೆಯಲ್ಲಿ ನಾಗರಿಕರನ್ನು ಸಂಕಷ್ಟದಿಂದ ರಕ್ಷಿಸುವ ನಿಟ್ಟಿನಲ್ಲಿ 1948ರಲ್ಲಿ ಮಾನವ ಹಕ್ಕುಗಳ ಆಯೋಗ ರಚನೆಯಾಯಿತು. ಈ ಕಾಲಘಟ್ಟದಲ್ಲಿಯೇ ಸಂವಿಧಾನ ರಚನೆಗೂ ಅಡಿಪಾಯ ಹಾಕಲಾಯಿತು. ಮಾನವ ಹಕ್ಕುಗಳ ಹಿತರಕ್ಷಣೆಯ ಆಧಾರದಲ್ಲಿ ಸಂವಿಧಾನ ರಚಿತವಾಗಿದೆ ಎಂದು ಲೋಕಪ್ಪ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಶಂಕರಾಚಾರ್ಯರು ಎಲ್ಲರೂ ಬ್ರಹ್ಮಸ್ವರೂಪಿಗಳು ಎಂದಿದ್ದಾರೆ. ಬಸವಣ್ಣನವರು ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ, ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ, ಈ ಸರಳ ತತ್ವಗಳನ್ನು ಸಮಾಜದ ಎಲ್ಲರೂ ಅರಿತು ಸಮಾಜಕ್ಕೆ ನಮ್ಮ ಕೊಡುಗೆ ಏನು? ಎಂಬುದನ್ನು ಮನಗಾಣಬೇಕು. ಮೇಲು-ಕೀಳು, ಕರಿಯ-ಬಿಳಿಯ ತಾರತಮ್ಯಗಳನ್ನು ಕಿತ್ತೊಗೆದು ಪ್ರತಿಯೊಬ್ಬರನ್ನು ಗೌರವ ಆದರಗಳಿಂದ ಕಾಣಬೇಕು. ಸಮಾನವಕಾಶಗಳಿಂದ ಇತರರ ನಿರೀಕ್ಷೆಗಳನ್ನು ತುಂಬಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಅವರು ಮಾತನಾಡಿ ಸಮಾಜದಲ್ಲಿ ಎಲ್ಲರಿಗೂ ಶಾಂತಿ, ನೆಮ್ಮದಿಯಿಂದ ಜೀವಿಸಲು ಮಾನವ ಹಕ್ಕುಗಳು ಅವಶ್ಯವಾಗಿವೆ. ಮಾನವ ಹಕ್ಕುಗಳ ಬಗ್ಗೆ ಜನರಿಗೆ ಅರಿವು ಕೂಡ ಅಷ್ಟೆ ಅಗತ್ಯವಾಗಿದೆ. ವಿಶ್ವಾದ್ಯಂತ 500ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾನವ ಹಕ್ಕುಗಳು ರಚಿತವಾಗಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಆಧಾರಸ್ಥಂಭವಾಗಿದ್ದರೆ ಅದರ ಮೂಲ ಮಾನವ ಹಕ್ಕುಗಳೇ ಆಗಿವೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ಮನುಷ್ಯನಿಗೂ ಘನತೆ, ಗೌರವವಿದೆ. ಲಿಂಗಾಧಾರಿತ ಸಮಾಜದಲ್ಲಿ ಪುರುಷ, ಮಹಿಳೆಯರು, ಮಕ್ಕಳು ಹಾಗೂ ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರನ್ನು ಸಾಮಾಜಿಕವಾಗಿ ಹಾಗೂ ವೈಯಕ್ತಿಕವಾಗಿ ಗೌರವಿಸುವುದನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪಿ. ಮಾದೇಶ್ ಅವರು ಮಾತನಾಡಿ ಪ್ರಕೃತಿದತ್ತವಾದ ಸಂಪತ್ತು ಎಲ್ಲರಿಗೂ ಸಮಾನವಾಗಿ ದೊರೆಯಬೇಕು. ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಎಲ್ಲರಲ್ಲಿಯೂ ಅರಿವು ಮೂಡಿಸಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಮಾನವ ಹಕ್ಕುಗಳು ರಚಿತವಾಗಿವೆ. ಈ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ತಿಳಿವಳಿಕೆ ಹೊಂದಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾತನಾಡಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ. ಆದರೆ ಸಾಯುವ ಹಕ್ಕಿಲ್ಲ. ಆತ್ಮಹತ್ಯೆ ಮಾನವ ಹಕ್ಕು ಉಲ್ಲಂಘನೆಯಾಗಲಿದೆ. ಮಾನವ ಹಕ್ಕು ಉಲ್ಲಂಘನೆಯಿಂದ ಉಳ್ಳವರಿಗಿಂತ ಬಡವರಿಗೆ ತೊಂದರೆಯಾಗಲಿದೆ. ಅಧಿಕಾರಿಗಳು, ಸಿಬ್ಬಂದಿ ಮಾನವ ಹಕ್ಕುಗಳ ಬಗ್ಗೆ ಅರಿತು ನ್ಯಾಯಯುತವಾಗಿ ಕರ್ತವ್ಯಗಳನ್ನು ಪಾಲಿಸಬೇಕು ಎಂದರು.
ಇದೇ ವೇಳೆ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕುರಿತು ಜಿಲ್ಲೆಯ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
------
(File -2 photo n news)
ವಿಶೇಷಚೇತನರಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ : ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರಿಂದ ಸಿದ್ದತೆ ಪರಿಶೀಲನೆ
ಚಾಮರಾಜನಗರ, ಡಿಸೆಂಬರ್ 21 - ಜಿಲ್ಲೆಯ 1693 ವಿಶೇಷಚೇತನರಿಗೆ 5 ಕೋಟಿ ರೂ. ವೆಚ್ಚದಲ್ಲಿ ಸಾಧನ ಸಲಕರಣೆಗಳನ್ನು ವಿತರಿಸುವ ಬೃಹತ್ ವಿಶೇಷ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 24ರಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಇದರ ಸಿದ್ದತೆಗಳನ್ನು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಪರಿಶೀಲಿಸಿದರು.
ಕಳೆದ ಜುಲೈ ತಿಂಗಳಿನಲ್ಲಿ ಜಿಲ್ಲೆಯ ವಿವಿಧೆಡೆ ನಡೆಸಲಾದ ವಿಶೇಷಚೇತನರ ತಪಾಸಣಾ ಶಿಬಿರದಲ್ಲಿ 1693 ವಿಶೇಷಚೇತನರಿಗೆ ಸಾಧನ, ಸಲಕರಣೆಗಳನ್ನು ವಿತರಿಸಲು ಗುರುತಿಸಲಾಗಿದೆ. ಈ ಎಲ್ಲರಿಗೂ ಇದೇ ಡಿಸೆಂಬರ್ 24ರಂದು ಸಾಧನ ಸಲಕರಣೆಗಳನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವಿತರಿಸಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಕ್ರೀಡಾಂಗಣಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ದತೆಗಳನ್ನು ವೀಕ್ಷಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷಚೇತನರು ಸಾಧನ ಸಲಕರಣೆಗಳನ್ನು ಪಡೆಯಲು ಅವರ ಅವಲಂಬಿತರೊಂದಿಗೆ ಜಿಲ್ಲಾ ಕ್ರೀಡಾಂಗಣಕ್ಕೆ ಬರಲಿದ್ದಾರೆ. ಸಾಧನ ಸಲಕರಣೆ ವಿತರಿಸಲು ಕೌಂಟರ್‍ಗಳನ್ನು ತೆರೆದು ಸುಗಮವಾಗಿ ಕಾರ್ಯಕ್ರಮ ನಡೆಯಲು ಸಿದ್ದತೆಯನ್ನು ಪೂರ್ಣಗೊಳಿಸಬೇಕು. ಆಹಾರ ವಿತರಣೆ,ಕುಡಿಯುವ ನೀರು, ಆಸನಗಳ ವ್ಯವಸ್ಥೆ, ವಾಹನಗಳ ಸಂಚಾರ ಸಮರ್ಪಕವಾಗಿರಬೇಕು. ವಿಶೇಷಚೇತನರು ಪಾಲ್ಗೊಳ್ಳುವ ಕಾರ್ಯಕ್ರಮವಾಗಿರುವುದರಿಂದ ಅವರಿಗೆ ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆ ಪರಿಪೂರ್ಣವಾಗಿರಬೇಕು ಎಂದು ಲೋಕಸಭಾ ಸದಸ್ಯರು ಸೂಚಿಸಿದರು.
ಬೃಹತ್ ಶಾಮಿಯಾನ, ವೇದಿಕೆ, ಕ್ರೀಡಾಂಗಣಕ್ಕೆ ಆಗಮಿಸುವ ಮಾರ್ಗಗಳ ಬಗ್ಗೆ ಪರಿಶೀಲಿಸಿದ ಶ್ರೀನಿವಾಸಪ್ರಸಾದ್ ಅವರು ಮುತುವರ್ಜಿಯಿಂದ ಎಲ್ಲ ಅವಶ್ಯಕ ಸಿದ್ದತೆಗಳನ್ನು ತ್ವರಿತವಾಗಿ ಮುಗಿಸುವಂತೆ ತಿಳಿಸಿದರು.
ಇದಕ್ಕೂ ಮೊದಲು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಲೋಕಸಭಾ ಸದಸ್ಯರು ಕಾರ್ಯಕ್ರಮ ಆಯೋಜನೆ ಸಂಬಂಧ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ವಿಶೇಷಚೇತನರು ಜಿಲ್ಲೆಯ ವಿವಿಧ ಭಾಗಗಳಿಂದ ಬರಲಿರುವ ಹಿನ್ನೆಲೆಯಲ್ಲಿ ವಾಹನಗಳ ನಿಯೋಜನೆಯನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ವಿಶೇಷಚೇತನರ ದೊಡ್ಡ ಸಾಧನ ಸಲಕರಣೆಗಳನ್ನು ಅವರವರ ಮನೆಗಳಿಗೆ ತಲುಪಿಸಲು ವಿಶೇಷ ಸಾಗಾಣಿಕೆ ವಾಹನಗಳು ಅಗತ್ಯವಿದೆ. ಈ ಎಲ್ಲ ವ್ಯವಸ್ಥೆ ಸರಿಯಾದ ರೀತಿಯಲ್ಲಿ ಇರಬೇಕೆಂದು ನಿರ್ದೇಶನ ನೀಡಿದರು.
ಕ್ರೀಡಾಂಗಣದಲ್ಲಿ ಸ್ವಚ್ಚತೆ ಇರಬೇಕು. ವಿಶೇಷಚೇತನರು ಸಾಧನ ಸಲಕರಣೆಗಳನ್ನು ವೇದಿಕೆ ಬಳಿ ಪಡೆಯಲು ಸೂಕ್ತ ರ್ಯಾಂಪ್ ಇನ್ನಿತರ ಸ್ಥಳವಕಾಶ ಸಾಕಷ್ಟು ಇರಬೇಕು. ವಿಶೇಷಚೇತನರಿಗಾಗಿಯೇ ಪ್ರತ್ಯೇಕ ಆಸನಗಳ ವ್ಯವಸ್ಥೆ, ಗ್ಯಾಲರಿ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ಗಣ್ಯರು, ಅತಿಥಿಗಳಿಗೂ ಶಿಷ್ಟಾಚಾರ ಅನುಸಾರ ಎಲ್ಲ ಕ್ರಮಗಳಿಗೆ ಮುಂದಾಗಬೇಕೆಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ವಿಶೇಷಚೇತನ ಫಲಾನುಭವಿಗಳನ್ನು ಕರೆತರಲು ಈಗಾಗಲೇ ಪಟ್ಟಿ ಮಾಡಿಕೊಂಡು ವಾಹನ ವ್ಯವಸ್ಥೆ ಮಾಡಲಾಗಿದೆ. ಸಾಧನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಸಾಗಾಣಿಕಾ ವಾಹನಗಳನ್ನು ಸಹ ನಿಯೋಜಿಸಲಾಗಿದೆ. ಕಾರ್ಯಕ್ರಮದ ಆಯೋಜನೆಗೆ ಸಕಲ ಸಿದ್ದತೆ ಮಾಡಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಅಲಿಮ್ಕೊ ಸಂಸ್ಥೆಯ ಬೆಂಗಳೂರಿನ ಉಪ ವ್ಯವಸ್ಥಾಪಕರಾದ ಎ. ಶಿವಕುಮಾರ್, ಅಶೋಕ್‍ಕುಮಾರ್ ಪಾಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧರಣೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಪಂಚಾಯತ್ ರಾಜ್ ಎಂಜಿನಿರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ತಿಬ್ಬಯ್ಯ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಪ್ರಸನ್ನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಆಯುಕ್ತರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಇನ್ನಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಡಿ. 24ರಂದು ನಗರದಲ್ಲಿ ವಿಶೇಷಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮ
ಚಾಮರಾಜನಗರ, ಡಿಸೆಂಬರ್ 21 : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್) ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಸಾಮಾಜಿಕ ಅಧಿಕಾರಿತಾ ಶಿಬಿರ ಕಾರ್ಯಕ್ರಮವನ್ನು ಡಿಸೆಂಬರ್ 24ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ, ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ನಟರಾಜು ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
---
ನಗರದಲ್ಲಿ ಸ್ವಚ್ಚತಾ ಓಟ, ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ಚಾಮರಾಜನಗರ, ನವೆಂಬರ್ 21 - ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಸ್ವಚ್ಚತಾ ಓಟ ಹಾಗೂ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕುರಿತ ಜಾಗೃತಿ ಕಾರ್ಯಕ್ರಮಗಳಿಗೆ ನಗರದಲ್ಲಿ ಇಂದು ಚಾಲನೆ ದೊರೆಯಿತು.
ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ಹಸಿರು ನಿಶಾನೆ ತೋರಿದರು.
ಗ್ರಾಮೀಣ ಜನರಲ್ಲಿ ನೈರ್ಮಲ್ಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಪ್ರವಾಸಿ ಮಂದಿರದಲ್ಲಿ ಅಂತ್ಯಗೊಂಡಿತು. ಸ್ವಚ್ಚತಾ ಓಟದಲ್ಲಿ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು, ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳು, ಸಾರ್ವಜನಿಕರು, ಇನ್ನಿತರರು ಪಾಲ್ಗೊಂಡಿದ್ದರು.
ಇದೇ ವೇಳೆ ಸ್ವಚ್ಚತಾ ಓಟ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮದ ಕುರಿತು ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಅವರು ಜಿಲ್ಲೆಯ ಎಲ್ಲಾ ಗ್ರಾಮೀಣ ಭಾಗದಲ್ಲಿ ಸ್ವಚ್ಚತೆ, ಶೌಚಾಲಯಗಳ ಸದ್ಭಳಕೆ, ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತ ಪರಿಕಲ್ಪನೆಯಡಿ ಸಾಂಕೇತಿಕವಾಗಿ ಇಂದು ಸ್ವಚ್ಚತಾ ಓಟ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಮುಕ್ತ ಮತದಾನ ಮಾಡಲು ಅನುಕೂಲವಾಗುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕುರಿತು ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಇನ್ನಿತರರು ಸ್ವಚ್ಚತಾ ಓಟದಲ್ಲಿ ಪಾಲ್ಗೊಂಡಿದ್ದರು.
------
ಡಿ. 28ರಂದು ಜಿಲ್ಲಾ ಪರಿಶಿಷ್ಟ ಜಾತಿ, ವರ್ಗಗಳ ಹಿತರಕ್ಷಣಾ ಸಮಿತಿ ಸಭೆ
ಚಾಮರಾಜನಗರ, ಡಿಸೆಂಬರ್ 21 - ಜಿಲ್ಲಾ ಪರಿಶಿಷ್ಟ ಜಾತಿ, ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಯವರ ಅದ್ಯಕ್ಷತೆಯಲ್ಲಿ ಡಿಸೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಮನೆಮನೆಗೂ ಆರೋಗ್ಯ ಸೇವೆ ತಲುಪಿಸಲು ಆರೋಗ್ಯ ಅರಳಿ ಕಾರ್ಯಕ್ರಮ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯತ್ರಿ
ಚಾಮರಾಜನಗರ, ಡಿಸೆಂಬರ್ 21 - ಗ್ರಾಮಮಟ್ಟದಲ್ಲಿ ಪ್ರತಿ ಮನೆ ಮನೆಗೂ ಆರೋಗ್ಯ ಸೇವೆಯನ್ನು ಒದಗಿಸುವ ಸಲುವಾಗಿ ‘ಆರೋಗ್ಯ ಅರಳಿ’ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಜಿ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಅಕಾಡಮಿ ಆಫ್ ಫ್ಯಾಮಿಲಿ ಫಿಜಿಷಿಯನ್ ಆಫ್ ಇಂಡಿಯಾ (ಂಈPI) ಸಂಸ್ಥೆಯ ಸಹಯೋಗದಲ್ಲಿ ‘ಆರೋಗ್ಯ ಅರಳಿ’ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುμÁ್ಠನಗೊಳಿಸುವ ಸಂಬಂಧ ನಡೆದ ದೃಷ್ಟಿಕೋನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರಾಯೋಗಿಕವಾಗಿ ಜಿಲ್ಲೆಯ ಚಂದಕವಾಡಿ ಹಾಗೂ ಮಂಗಲ ಗ್ರಾಮ ಪಂಚಾಯಿತಿಗಳನ್ನು ಆರೋಗ್ಯ ಅರಳಿ ಕಾರ್ಯಕ್ರಮಕ್ಕಾಗಿ ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮದಡಿ ಗ್ರಾಮಮಟ್ಟದಲ್ಲಿ ಪ್ರತಿ ಮನೆ ಮನೆಗೂ ಆರೋಗ್ಯ ಸೇವೆಯನ್ನು ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ವಿಕೇಂದ್ರೀಕೃತ ಮಾದರಿಯ ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ವ್ಯವಸ್ಥೆ ಸಮುದಾಯದೊಡಗೂಡಿ ಆರೋಗ್ಯ ಸೇವೆಯನ್ನು ಮನೆಮನೆಗೂ ತಲುಪಿಸಲಾಗುತ್ತದೆ ಎಂದರು.
ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರುಗಳು, ಗ್ರಾಮ ಲೆಕ್ಕಿಗರು, ಸ್ಥಳೀಯ ಪೊಲೀಸ್ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳ ಸಹಕಾರ, ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು ಗ್ರಾಮಸಭೆಯನ್ನು ನಡೆಸಿ ಕಾರ್ಯಕ್ರಮದ ಸದುಪಯೋಗದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ವ್ಯಾಪ್ತಿಯ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಮಹಿಳಾ ಸ್ವ-ಸಹಾಯ ಸಂಘದ ವಿದ್ಯಾವಂತ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗಿರುವ ಸ್ವಾಮಿ ವಿವೇಕಾನಂದ ಯುವಕರ ಸಂಘದ ಸದಸ್ಯರು ಮತ್ತು ಪದವೀಧರ ಸ್ವಯಂಸೇವಕರುಗಳುಳ್ಳ ತಂಡವನ್ನು ರಚಿಸುವ ಮೂಲಕ ಪ್ರತಿ ಮನೆಮನೆಯ ಸಮೀಕ್ಷೆ ನಡೆಸಿ ಮಾಹಿತಿ ಕಲೆಹಾಕುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.
ಇದೇ ವೇಳೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ಸಂಜೀವ್ ಅವರು ಮಾತನಾಡಿ ಆರೋಗ್ಯ ಅರಳಿ ಕಾರ್ಯಕ್ರಮಕ್ಕೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಲಾಗುವುದು ಎಂದು ತಿಳಿಸಿದರು.
ಅಕಾಡಮಿ ಆಫ್ ಫ್ಯಾಮಿಲಿ ಫಿಜಿಷಿಯನ್ ಆಫ್ ಇಂಡಿಯಾ (ಂಈPI) ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ಅಶೂಜಿತ್ ಆನಂದ್, ಎಸ್.ಐ.ಆರ್.ಡಿ ರಾಜ್ಯ ಸಮಾಲೋಚಕರಾದ ವಸುಂಧರಾದೇವಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಕೆ.ಬಿ.ಪ್ರಭುಸ್ವಾಮಿ, ಉಪ ಕಾರ್ಯದರ್ಶಿ ಧರಣೇಶ್, ಯೋಜನಾ ನಿರ್ಣಾಯಕ ಮೌಲ್ಯಮಾಪನಾಧಿಕಾರಿ ವಿ. ದೀಪಾ, ಇತರರು ಕಾರ್ಯಾಗಾರದಲ್ಲಿ ಹಾಜರಿದ್ದರ
No comments:
Post a Comment