Tuesday, 1 August 2023

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ


ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ





ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*




 


ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇಂದಿರಾ ಕ್ಯಾಂಟೀನ್, ಆಸ್ಪತ್ರೆ, ಹಾಸ್ಟೆಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಮೊದಲು ಜಿಲ್ಲಾಧಿಕಾರಿ ಕಚೇರಿ ಯ ಗೇಟ್ ಬಳಿ ಪಕ್ಕದ ಇಂದಿರಾ ಕ್ಯಾಂಟೀನ್ ಗೆ ಅನಿರೀಕ್ಷಿತ ಭೇಟಿ ನೀಡಿ ಅಡುಗೆ ಸಾಮಾಗ್ರಿಗಳು, ದಿನಸಿ ದಾಸ್ತಾನು ವೀಕ್ಷಣೆ ಮಾಡಿದರು.ಶುಚಿತ್ವ,ಆಹಾರ ವಿತರಣೆ,ಮೆನು ಪರಿಶೀಲಿಸಿದರು.


ರಾತ್ರಿ ಗ್ರಾಹಕರಿಗೆ ವಿತರಿಸಲು ಸಿದ್ದಪಡಿಸಲಾಗಿದ್ದ ರೈಸ್ ಬಾತ್ ಅನ್ನು ಜಿಲ್ಲಾಧಿಕಾರಿ ಅವರು ಸೇವಿಸಿದರು.


ಪ್ರತಿದಿನ ಟೋಕನ್ ವಿತರಿಸಬೇಕು.ಆ ಪ್ರಕಾರವೇ ಆಹಾರ ನೀಡಬೇಕು.ಆಹಾರದಲ್ಲಿ ಗುಣಮಟ್ಟ,ಶುಚಿತ್ವ ಕಾಪಾಡಿ ಕೊಳ್ಳ ಬೇಕು.ಎಲ್ಲಿಯೂ ಲೋಪಗಳಾಗಾದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.


ಕ್ಯಾಂಟೀನ್ ಗೆ ಸಿ.ಸಿ.ಕೆಮರಾ ಅಳವಡಿಸಬೇಕು.ಪ್ರತಿ ನಿತ್ಯ ಎಷ್ಟು ಮಂದಿಗೆ ಆಹಾರ ವಿತರಿಸಲಾಗಿದೆ ಎಂಬ ಪೂರ್ಣ ವರದಿ ಲೆಕ್ಕ ಪತ್ರ ಸಲ್ಲಿಸುವಂತೆ ಕ್ಯಾಂಟೀನ್ ನಿರ್ವಾಹಕ ರಿಗೆ ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.


ಬಳಿಕ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇರುವ ತಾಯಿ‌ಮಕ್ಕಳ ಆಸ್ಪತ್ರೆ ಹಾಗೂ ತುರ್ತು ನಿಗಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯರ ಆರೋಗ್ಯ ವಿಚಾರಿಸಿದರು. ಚಿಕಿತ್ಸೆ ಹೇಗೆ ನೀಡಲಾಗುತ್ತಿದೆ? ವೈದ್ಯಕೀಯ ಸೇವೆ ಸರಿಯಾಗಿ ಸಿಗುತ್ತಿದೆಯೇ ಎಂದು ಪ್ರಶ್ನಿಸಿದರು.


ತೀವ್ರತರ ಮಕ್ಕಳ ನಿಘಾ ಘಟಕ,ಅಪೌಷ್ಟಿಕತೆ ಮಕ್ಕಳ ನಿರ್ವಹಣೆ ವಿಭಾಗಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.ಅಪೌಷ್ಟಿಕತೆ ನಿವಾರಣೆಗೆ ಅನುಸರಿಸಲಾಗುತ್ತಿರುವ ವಿಧಾನಗಳ ಬಗ್ಗೆ ಮಾಹಿತಿ ಪಡೆದರು. ಈ ಸಂಬಂಧಿಸಿದಂತೆ ಅಗತ್ಯವಾದ ಸೂಚನೆ ನೀಡಿದರು.

Monday, 24 July 2023

24-07-2023 ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರ ಕೆಡಿಪಿ ಸಭೆ

 


ಯೋಜನೆಗಳ ಪ್ರಯೋಜನ ತಲುಪಿಸಲು ತ್ವರಿತ ಕ್ರಮ ವಹಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ

         ಚಾಮರಾಜನಗರ, ಜುಲೈ 24 :- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ವಿಶೇಷ ಮುತುವರ್ಜಿಯಿಂದ ಕಾರ್ಯನಿರ್ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸೂಚನೆ ನೀಡಿದರು.

     ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

     ಅನುಷ್ಠಾನಗೊಳಿಸಲಾಗುತ್ತಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಲು ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು, ಸಂಬಂಧಪಟ್ಟ ಇತರೆ ಇಲಾಖೆ ಅಧಿಕಾರಿಗಳು ವ್ಯಾಪಕವಾಗಿ ತೊಡಗಿಕೊಳ್ಳಬೇಕು. ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ತ್ವರಿತವಾಗಿ ಆಗಬೇಕು. ಅರ್ಹರೆಲ್ಲರಿಗೂ ಯೋಜನೆ ಸೌಲಭ್ಯ ಸಿಗಬೇಕು ಎಂದರು.

      ನೋಂದಣಿ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಯಾವುದೇ ತಾಂತ್ರಿಕ ತೊಂದರೆಗಳು ಇನ್ನಿತರ ಸಮಸ್ಯೆಗಳಿದ್ದಲ್ಲಿ ಕೂಡಲೇ ಪರಿಹರಿಸಬೇಕು. ಜನರು ಸುಗಮವಾಗಿ ಯೋಜನೆಗೆ ನೋಂದಾಯಿಸಲು, ಅರ್ಜಿ ಸಲ್ಲಿಸಲು ತೊಡಕುಗಳು ಬಾರದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

      ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಎನ್. ಮಂಜುನಾಥಪ್ರಸಾದ್ ಅವರು ಮಾತನಾಡಿ ನೋಂದಣಿ ಕೇಂದ್ರಗಳಿಗೆ ಬರುವ ಫಲಾನುಭವಿಗಳಿಗೆ ಮೂಲ ಸೌಕರ್ಯ ಇರಬೇಕು. ಜನಸಂದಣಿಯಾಗದಂತೆ ಶೀಘ್ರವಾಗಿ ನೋಂದಣಿ ಕಾರ್ಯ ಮಾಡಬೇಕು. ಪ್ರಜಾ ಪ್ರತಿನಿಧಿ ಸ್ವಯಂ ಸೇವಕರು ಮನೆ ಮನೆಗೆ ಹೋಗಿ ನೋಂದಣಿ ಮಾಡುವ ಪ್ರಕ್ರಿಯೆಯನ್ನು ತ್ವರಿತವಾಗಿ ನಿರ್ವಹಿಸಬೇಕು ಎಂದರು.
 
      ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಮಾತನಾಡಿ ಜಿಲ್ಲೆಯಲ್ಲಿ 270 ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ನೇರವಾಗಿಯೂ ನೋಂದಣಿ ಕೇಂದ್ರಕ್ಕೆ ಬಂದು ನೊಂದಾಯಿಸಿಕೊಳ್ಳಬಹುದು. ಈಗಾಗಲೇ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 35 ಸಾವಿರ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 28551 ಫಲಾನುಭವಿಗಳಿಗೆ ಮಂಜೂರಾತಿ ಆದೇಶ ನೀಡಲಾಗಿದೆ ಎಂದರು.  

     ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ನಗದು ವರ್ಗಾಯಿಸಲಾಗುತ್ತಿರುವ ಪ್ರಕ್ರಿಯೆ ಹಾಗೂ ಶಕ್ತಿ ಯೋಜನೆ ಅನುಷ್ಠಾನ ಬಗ್ಗೆ ಪ್ರಗತಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಯೋಜನೆಯ ಪ್ರಯೋಜನ ಪಡೆದುಕೊಂಡಿರುವ ಕುರಿತು ಮಾಹಿತಿ ಪಡೆದರು. 

     ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಆರೋಗ್ಯ ಸೇವೆಗಳು ಜನರಿಗೆ ಸುಲಭವಾಗಿ ಸಿಗಬೇಕು. ವೈದ್ಯರು, ತಂತ್ರಜ್ಞರ ಕೊರತೆ ಇರಬಾರದು. ಜಿಲ್ಲಾ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಲಭ್ಯವಿದ್ದು ಎಲ್ಲ ವೈದ್ಯಕೀಯ ಸೌಲಭ್ಯಗಳು ದೊರೆಯಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ದೂರುಗಳು ಬಾರದಂತೆ ಸಮರ್ಪಕವಾಗಿ ಔಷಧ ಚಿಕಿತ್ಸೆಗಳು ಲಭ್ಯವಾಗಬೇಕು ಎಂದರು. 

      ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳು ಜಿಲ್ಲೆಯ ರೈತರಿಗೆ ಅನುಕೂಲವಾಗಬೇಕು. ರೈತರಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಿ. ರೇಷ್ಮೆ ಬೆಳೆ ಅಭಿವೃದ್ದಿಗೆ ಎಲ್ಲಿ ಸೂಕ್ತ ಜಾಗಗಳಿವೆ, ಫಾರಂಗಳು ಲಭ್ಯವಿದೆ ಎಂಬ ಬಗ್ಗೆ ಪರಿಶೀಲಿಸಿ, ಸೌಲಭ್ಯಗಳನ್ನು ತಲುಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು. 

      ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಮುಂಗಾರು ಬೇಗನೆ ಆರಂಭವಾಗಿರುವ ತಾಲೂಕುಗಳಲ್ಲಿ ಇದುವರೆಗೆ ಎಷ್ಟು ಪ್ರಮಾಣದಲ್ಲಿ ಬಿತ್ತನೆಯಾಗಿದೆ, ಮಳೆ ಕೊರತೆಯಿಂದ ಎಷ್ಟು ಪ್ರಮಾಣದಲ್ಲಿ ಬೆಳೆಗೆ ಹಾನಿಯಾಗಬಹುದು ಎಂಬ ಬಗ್ಗೆ ಮಾಹಿತಿ ಒದಗಿಸಬೇಕು. ರೈತರಿಗೆ ಬೆಳೆಗಾರರಿಗೆ ಇಲಾಖೆಗಳಿಂದ ಸೂಕ್ತ ಸಲಹೆ, ಮಾರ್ಗದರ್ಶನ ಮಾಡಬೇಕು ಎಂದರು. 

     ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ರೇಷ್ಮೆ ಬೆಳೆಗೆ ಜಿಲ್ಲೆ ಪ್ರಸಿದ್ದಿಯಾಗಿತ್ತು. ರೇಷ್ಮೆ ಮಾರುಕಟ್ಟೆಯಲ್ಲಿ ಬೆಳೆಗಾರರಿಗೆ ಅನುಕೂಲವಾಗಬೇಕು. ಕುದೇರಿನಲ್ಲಿ ಇರುವ ರೇಷ್ಮೆ ತರಬೇತಿ ಕಾಲೇಜು ಸ್ಥಗಿತವಾಗದಂತೆ ನೋಡಿಕೊಳ್ಳಬೇಕಿದೆ. ಈ ಮೂಲಕ ರೇಷ್ಮೆ ಬೆಳೆಗೆ ಉತ್ತೇಜನ ನೀಡಬೇಕಿದೆ ಎಂದರು.

      ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ಕಾಡಂಚಿನ ಗ್ರಾಮಗಳಲ್ಲಿ ವಿದ್ಯುತ್ ರಸ್ತೆ, ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕಿದೆ. ಅರಣ್ಯ ಇಲಾಖೆಯ ತೊಡಕುಗಳಿದ್ದು ಈ ಬಗ್ಗೆ ಪ್ರತ್ಯೇಕ ಸಭೆ ಕರೆದು ವಿವರವಾಗಿ ಚರ್ಚಿಸಿದರೆ ಸಮಸ್ಯೆಗಳು ಬಗೆಹರಿಯಲಿವೆ ಎಂದು ಗಮನ ಸೆಳೆದರು. 

      ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿ ತಮ್ಮ ಕ್ಷೇತ್ರದಲ್ಲಿ ಹಲವು ಶಿಕ್ಷಕರು ವರ್ಗಾವಣೆಗೊಂಡಿದ್ದಾರೆ. ಇದರಿಂದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಆಗಬಾರದು. ಹೀಗಾಗಿ ಅಗತ್ಯಕ್ಕೆ ತಕ್ಕಂತೆ ಶಿಕ್ಷಕರ ನಿಯೋಜನೆಯಾಗಬೇಕಿದೆ ಎಂದರು.

     ವಿಧಾನ ಪರಿಷತ್ತಿನ ಸದಸ್ಯರಾದ ಮರಿತಿಬ್ಬೇಗೌಡ ಅವರು ಮಾತನಾಡಿ ಅರಣ್ಯದಂಚಿನ ಪೋಡುಗಳಲ್ಲಿರುವ ಜನತೆಗೆ ಸಾರಿಗೆ ಸೌಲಭ್ಯವಿಲ್ಲ. ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಬರಲು ಕಷ್ಟಪಡಬೇಕಿದೆ. ಸ್ಥಗಿತಗೊಂಡಿರುವ ಜನವನ ಸಾರಿಗೆ ಯನ್ನು ಪುನರ್ ಆರಂಭಿಸಿ ಅದಕ್ಕೆ ಅಗತ್ಯವಿರುವ ನಿರ್ವಹಣಾ ವ್ಯವಸ್ಥೆಯನ್ನು ಅರಣ್ಯ ಇಲಾಖೆ ಮಾಡಬೇಕೆಂದು ತಿಳಿಸಿದರು. 

     ವಿಧಾನ ಪರಿಷತ್ತಿನ ಸದಸ್ಯರಾದ ಸಿ.ಎನ್. ಮಂಜೇಗೌಡ ಹಾಗೂ ಡಾ. ಡಿ. ತಿಮ್ಮಯ್ಯ ಅವರು ಮಾತನಾಡಿ ರೈತರು ಬೆಳೆಗಾರರು ಕೃಷಿ, ತೋಟಗಾರಿಕೆ ಬೆಳೆಗಳ ಉತ್ಪನ್ನ ಹೆಚ್ಚಳಕ್ಕೆ ಪೂರಕವಾಗಿರುವ ತರಬೇತಿ ವಿಚಾರ ಸಂಕೀರಣ ಚಟುವಟಿಕೆಗಳನ್ನು ಸಂಬಂಧಪಟ್ಟ ಇಲಾಖೆಗಳು ಹೆಚ್ಚು ಹಮ್ಮಿಕೊಳ್ಳಬೇಕು. ಇಲಾಖಾ ಕಾರ್ಯಕ್ರಮಗಳ ಕುರಿತು ಜನರಿಗೆ ವ್ಯಾಪಕವಾಗಿ ತಿಳಿವಳಿಕೆ ನೀಡಬೇಕು. ರೇಷ್ಮೆ ಬೆಳೆಯಲ್ಲಿ ಚಾಮರಾಜನಗರ ಜಿಲ್ಲೆಯೂ ಈ ಹಿಂದೆ ಹೊಂದಿದ್ದ ಪ್ರಗತಿ ಮತ್ತೆ ಕಾಣುವಂತಾಗಬೇಕು ಎಂದರು. 

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್. ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಅಧಿಕಾರಿ ಸಂತೋಷ್ ಕುಮಾರ್ ಇದ್ದರು. 

     ಜುಲೈ 25 ರಂದು ನಗರದಲ್ಲಿ ಬಾಲ್ಯ ವಿವಾಹ ನಿಷೇಧ, ಮಕ್ಕಳ ಹಕ್ಕುಗಳ ರಕ್ಷಣೆ ಕಾರ್ಯಕ್ರಮ, 
ಜಾಗೃತಿ ವಾಕಾಥಾನ್

      ಚಾಮರಾಜನಗರ. ಜುಲೈ 24 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಬಾಲ್ಯ ವಿವಾಹ ವಿರೋಧಿ ವೇದಿಕೆ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಆಶ್ರಯದಲ್ಲಿ ಬಾಲ್ಯ ವಿವಾಹ ನಿμÉೀಧ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಕಾರ್ಯಕ್ರಮ ಹಾಗೂ ಜಾಗೃತಿಗೆ ಬೃಹತ್ ವಾಕಾಥಾನ್ ಅನ್ನು ಜುಲೈ 25 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

     ನಗರದ ಚಾಮರಾಜೇಶ್ವರ ದೇವಾಲಯ ಬಳಿ ಬೆಳಿಗ್ಗೆ 9.30 ಗಂಟೆಗೆ ವಾಕಾಥಾನ್ ಗೆ ಚಾಲನೆ ನೀಡಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.

     ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿಯವರಾದ ಸಿ.ಟಿ. ಶಿಲ್ಪಾನಾಗ್ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಉಪ ಪೊಲೀಸ್ ಅಧೀಕ್ಷಕರು ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಅನ್ಸರ್ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಸವಿತಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಪ್ರಸನ್ನ, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷರಾದ ಸರಸ್ವತಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗೀತಾ ಲಕ್ಷ್ಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್. ಚೆಲುವರಾಜು, ಕರ್ನಾಟಕ ಬಾಲ್ಯ ವಿವಾಹ ವಿರೋಧಿ ವೇದಿಕೆ, ಚೈಲ್ಡ್ ರೈಟ್ಸ್ ಟ್ರಸ್ಟ್ ನ ಅಡ್ವೋಕೇಸಿ ಹಾಗೂ ಕೋ ಆರ್ಡಿನೇಟರ್ ವೆಂಕಟೇಶ್, ಕೊಳ್ಳೇಗಾಲದ ಪಿ.ಎಂ.ಎಸ್.ಆರ್. ಸಂಸ್ಥೆಯ ಆಡಿಸ್ ಅರ್ನಾಲ್ಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

      ಬೆಂಗಳೂರಿನ ಚೈಲ್ಡ್ ರೈಟ್ ಟ್ರಸ್ಟ್ ನ ನಿರ್ದೇಶಕರಾದ ನಾಗಸಿಂಹ. ಜಿ. ರಾವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಬೆಳೆ ವಿಮೆಗೆ ಮಾವು ಬೆಳೆ ಸೇರ್ಪಡೆ : ಸದುಪಯೋಗಕ್ಕೆ ಮನವಿ

         ಚಾಮರಾಜನಗರ, ಜುಲೈ 24 :- ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ತೋಟಗಾರಿಕೆ ಬೆಳೆಯನ್ನು ಸೇರ್ಪಡೆಗೊಳಿಸಿದ್ದು, ವಿಮಾ ಸೌಲಭ್ಯ ಪಡೆಯುವಂತೆ ತಿಳಿಸಿದೆ.  

     ಮಾವು ಬೆಳೆಯು ಸದರಿ ಯೋಜನೆಯಡಿ ಜಿಲ್ಲೆಯ ಮುಖ್ಯ ಬೆಳೆಯಾಗಿ ಅಧಿಸೂಚನೆಯಾಗಿದ್ದು ಎಲ್ಲಾ ಹೋಬಳಿಯ ರೈತರು ಮಾವು ಬೆಳೆಗೆ ವಿಮಾ ಸೌಲಭ್ಯ ಪಡೆಯಬಹುದಾಗಿದೆ. ಮಾವು ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮೆ ಕೈಗೊಳ್ಳಲು 4 ಸಾವಿರ ರೂ. ವಿಮಾ ಕಂತು ನಿಗದಿಯಾಗಿದೆ. 

     ಆಸಕ್ತ ಮಾವು ಬೆಳೆಗಾರರು ತಾಲೂಕು ಮತ್ತು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ, ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ವಿಮಾ ಕಂತು ಪಾವತಿಸಬಹುದಾಗಿದೆ. ವಿಮಾ ಕಂತು ಪಾವತಿಸಲು ಜುಲೈ 31 ಕೊನೆಯ ದಿನವಾಗಿದೆ. 

     ಅಧಿಸೂಚಿತ ಬೆಳೆಗಳಿಗೆ ಸಾಲ ಪಡೆದ ರೈತರ ವಂತಿಕೆಯನ್ನು ಸಾಲ ಪಡೆದ ಬ್ಯಾಂಕ್ ಗಳಿಂದಲೇ ವಿಮಾ ಮೊತ್ತ ಕಡಿತಗೊಳಿಸಲಾಗುವುದು. ಆಕ್ಷೇಪಣೆಗಳಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಅಂಗನವಾಡಿ ಕೇಂದ್ರಗಳಿಗೆ ಆಹಾರ ಪದಾರ್ಥಗಳ ವಿತರಣೆ

         ಚಾಮರಾಜನಗರ, ಜುಲೈ 24:- ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕೊಳ್ಳೇಗಾಲ ಹಾಗೂ ಹನೂರು ತಾಲೂಕು ವ್ಯಾಪ್ತಿಯ 479 ಅಂಗನವಾಡಿ ಕೇಂದ್ರಗಳಿಗೆ ಆಗಸ್ಟ್ 5 ರವರೆಗೆ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತದೆ. 

      ಜುಲೈ 25ರಂದು ಬಂಡಳ್ಳಿ, ತೆಳ್ಳನೂರು, 26ರಂದು ಅಜ್ಜೀಪುರ, ಮಧುವನಹಳ್ಳಿ-1 ಮತ್ತು ಮಧುವನಹಳ್ಳಿ-2, 27ರಂದು ರಾಮಾಪುರ, ಕಾಮಗೆರೆ, 28ರಂದು ಪಿ.ಜಿ.ಪಾಳ್ಯ, ಕಸಬಾ-1, 29ರಂದು ಲೊಕ್ಕನಹಳ್ಳಿ, ಕಸಬಾ-2, 31ರಂದು ಮಾರ್ಟಳ್ಳಿ, ಚಿಲಕವಾಡಿ, ಆಗಸ್ಟ್ 1ರಂದು ಕೂಡ್ಲೂರು, 2ರಂದು ಕೌದಳ್ಳಿ, 3ರಂದು ದಂಟಳ್ಳಿ ಹಾಗೂ 5ರಂದು ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತದೆ ಎಂದು ಕೊಳ್ಳೇಗಾಲ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


Tuesday, 4 July 2023

04-07-2023 ಚಾಮರಾಜನಗರ ನ್ಯೂಸ್



ಜು. 8ರಂದು ರಾಷ್ಟ್ರೀಯ ಲೋಕ್ ಅದಾಲತ್ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ 

       ಚಾಮರಾಜನಗರ, ಜುಲೈ 4 :- ಚಾಮರಾಜನಗರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ರಾಜಿಯೋಗ್ಯ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜುಲೈ 8ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ  ಬಿ.ಎಸ್. ಭಾರತಿ ಅವರು ತಿಳಿಸಿದರು. 

      ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರಗಳ ಕೇಂದ್ರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ನ್ಯಾಯಾಧೀಶರು ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಹಾಗೂ ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ತಾಲೂಕಿನ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದರು. 

      ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ, ವಿದ್ಯುತ್ ಮತ್ತು ನೀರಿನ ಶುಲ್ಕ, ಕಾರ್ಮಿಕ ವಿವಾದಗಳು, ಭೂ ಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿಗೆ ಸಂಬಂಧಿಸಿದ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳು, ರಾಜಿಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣ (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ)ಗಳನ್ನು ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ತಿಳಿಸಿದರು.

      ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಗಸೂಚಿ (ಎಸ್.ಓ.ಪಿ) ಯಂತೆ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯೋಗ್ಯ ಪ್ರಕರಣಗಳನ್ನು ಶೀಘ್ರ ಹಾಗೂ ಪರಿಣಾಮಕಾರಿ ತೀರ್ಮಾನಕ್ಕಾಗಿ ಚಾಮರಾಜನಗರ ಜಿಲ್ಲಾ ಕೇಂದ್ರ ನ್ಯಾಯಾಲಯಗಳಲ್ಲಿ, ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸಂಧಾನಕಾರರ ಮೂಲಕ ಸೂಕ್ತ ಮಾರ್ಗದರ್ಶನ ನೀಡುವ ಪ್ರತಿದಿನ ಪೂರ್ವಭಾವಿ ಸಮಾಲೋಚನೆಗಳು ಭೌತಿಕ /ವಿ.ಸಿ. ಮೂಲಕ ನಡೆಯುತ್ತಿದೆ. ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಆನ್‍ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್, ವಾಟ್ಸ್ ಆಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಸಮಿತಿಗಳನ್ನು ಸಂಪರ್ಕಿಸಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿ ಎಂದರು. 

      ಜುಲೈ 8 ರಂದು ನಡೆಯುವ ಮೆಗಾ ಲೋಕ ಅದಾಲತ್ ನಲ್ಲಿ ಸಂಬಂಧಿತ ವಕೀಲರು, ಕಕ್ಷಿದಾರರು ತಮ್ಮ ಸಹಕಾರವನ್ನು ನೀಡಿದಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗಿ ಪಕ್ಷಕಾರರ ನಡುವೆ ಬಾಂಧವ್ಯ ನೆಲೆಸುವಂತಾಗುತ್ತದೆ ಎಂದು ತಿಳಿಸಿದರು. 

     ಕಳೆದ ಫೆಬ್ರವರಿ 11ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 11,975 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಪೈಕಿ 1621 ನ್ಯಾಯಾಲಯದ ಪ್ರಕರಣಗಳಾಗಿದ್ದು, 10354 ವ್ಯಾಜ್ಯ ಪೂರ್ವ ಪ್ರಕರಣಗಳಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. 

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ಮಾತನಾಡಿ        ಲೋಕ್ ಅದಾಲತ್ ನಲ್ಲಿ ಹೆಚ್ಚೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಿಮಾ ಕಂಪನಿಗಳು, ಭೂ ಸ್ವಾಧೀನಾಧಿಕಾರಿಗಳು, ಬ್ಯಾಂಕ್‍ಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೆÇಲೀಸ್ ಇಲಾಖೆ, ವಕೀಲರು, ಕಂದಾಯ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಜುಲೈ 8ರಂದು ನಡೆಯುವ ಲೋಕ್ ಅದಾಲತ್ ನಲ್ಲಿ 13 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು. 

      ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಇಂದುಶೇಖರ್ ಅವರು ಮಾತನಾಡಿ ಬೃಹತ್ ಲೋಕ್ ಅದಾಲತ್ ನಲ್ಲಿ ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಇತರೆ ರಾಜಿಯೋಗ್ಯ ಪ್ರಕರಣಗಳನ್ನು ಬಗೆಹರಿಸಲಾಗುತ್ತದೆ. ಕಕ್ಷಿದಾರರು ಈ ಲೋಕ್ ಅದಾಲತ್ ನ ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು. 

5 ಕಿ.ಮೀ ಒಳಗೆ ಗೃಹ ಬಳಕೆ ಅನಿಲ ಸಿಲಿಂಡರ್‍ಗಳ ಸಾಗಾಣಿಕೆ ಉಚಿತ 
  
       ಚಾಮರಾಜನಗರ, ಜುಲೈ 04- ಜಿಲ್ಲೆಯ ಎಲ್ಲ ಅನಿಲ ವಿತರಕರು 5 ಕಿ.ಮೀ. ಒಳಗೆ ಭರ್ತಿ ಗೃಹ ಬಳಕೆಯ ಅನಿಲ ಸಿಲಿಂಡರ್ ಗಳನ್ನು ಗ್ರಾಹಕರಿಗೆ ಸಾಗಾಣಿಕೆ ಮಾಡಲು ಯಾವುದೇ ದರವನ್ನು ಪಡೆಯದೆ  ಉಚಿತವಾಗಿ ಸರಬರಾಜು ಮಾಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

      ಅನಿಲ ವಿತರಕರು 5 ಕಿ.ಮೀ ಒಳಗೆ ಗೃಹ ಬಳಕೆಯ ಅನಿಲ ಸಿಲಿಂಡರ್ ಗಳನ್ನು ಗ್ರಾಹಕರಿಗೆ ತಲುಪಿಸಲು ಯಾವುದೇ ದರವನ್ನು ಪಡೆಯುವಂತಿಲ್ಲ. 5 ಕಿ.ಮೀ ನಂತರ ಪ್ರತೀ ಕಿಲೋ ಮೀಟರ್ ಗೆ ಪ್ರತಿ ಸಿಲಿಂಡರ್ ಗೆ 1.60 ರೂ. ಪಡೆಯಬೇಕು. ಹೆಚ್ಚು ಪಡೆದಲ್ಲಿ ದಿ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ ರೆಗ್ಯುಲೇಷನ್ ಆಫ್ ಸಪ್ಲೈ ಅಂಡ್ ಡಿಸ್ಟ್ರುಬ್ಯೂಷನ್ ಆದೇಶ 2000 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೆಶಕರಾದ ಯೋಗಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರ್ಶ ವಿದ್ಯಾಲಯ : ಆಯ್ಕೆ ಪಟ್ಟಿ ಪ್ರಕಟ

      ಚಾಮರಾಜನಗರ, ಜುಲೈ 04 - ಚಾಮರಾಜನಗರದ ಮಲ್ಲಯ್ಯನಪುರದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ 2023-24ನೇ ಸಾಲಿನ 6ನೇ ತರಗತಿ ಪ್ರವೇಶ ಸಂಬಂಧ ಎರಡನೇ ಸುತ್ತಿನ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಈಗಾಗಲೆ ದಾಖಲಾತಿ ಆರಂಬವಾಗಿದ್ದು, ಜುಲೈ 13ರವರೆಗೂ ದಾಖಲಾತಿ ಮಾಡಿಕೊಳ್ಳಲಾಗುತ್ತದೆ ಎಂದು ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಗ್ರಾ.ಪಂ ಉಪ ಚುನಾವಣೆ : ವೇಳಾ ಪಟ್ಟಿ ಪ್ರಕಟ 
  
       ಚಾಮರಾಜನಗರ, ಜುಲೈ 04 :- ರಾಜ್ಯ ಚುನಾವಣಾ ಆಯೋಗವು ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು  ವೇಳಾಪಟ್ಟಿ ಪ್ರಕಟಿಸಿದೆ.

      ಜುಲೈ 6ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಜುಲೈ 12 ಕೊನೆಯ ದಿನವಾಗಿದೆ. ಜುಲೈ 13ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಜುಲೈ 15ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಜುಲೈ 23ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುತ್ತದೆ. ಮರುಮತದಾನದ ಅವಶ್ಯವಿದ್ದರೆ ಜುಲೈ 25ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಜುಲೈ 26ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

      ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜುಲೈ 6 ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಚಾಮರಾಜನಗರ ತಾಲೂಕಿನ ಮಸಣಾಪುರ, ಹೆಗ್ಗೋಠಾರ, ಹರವೆ, ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ, ಗೌಡಹಳ್ಳಿ ಗ್ರಾಮ ಪಂಚಾಯಿತಿಗಳ ತಲಾ ಒಂದು ಸ್ಥಾನ ಹಾಗೂ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಗ್ರಾಮ ಪಂಚಾಯಿತಿಯ ಎರಡು ಸ್ಥಾನಗಳು ಸೇರಿದಂತೆ ಒಟ್ಟಾರೆ 6 ಗ್ರಾಮ ಪಂಚಾಯಿತಿಗಳ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಪೂವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಜು. 7ರಂದು ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕ ಹಣ ಎಣಿಕೆ 

       ಚಾಮರಾಜನಗರ, ಜುಲೈ 04 - ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಎಣಿಕೆ ಕಾರ್ಯವನ್ನು ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಜುಲೈ 7ರಂದು ಬೆಳಿಗ್ಗೆ ಸೂಕ್ತ ಪೊಲೀಸ್ ಬಂದೋಬಸ್ತ್‍ನೊಂದಿಗೆ ನಡೆಸಲಾಗುವುದು ಎಂದು ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕರಾದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ




 

Saturday, 1 July 2023

01-07-2023 ಚಾಮರಾಜನಗರ ನ್ಯೂಸ್

 



ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ  
  
       ಚಾಮರಾಜನಗರ, ಜುಲೈ 01 :- ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಬೇಕು. ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಕುಡಿಯುವ ನೀರಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಮುಂದೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗದಿದ್ದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಿರಲು ಈಗಿನಿಂದಲೇ ಆಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು. ಜನರಿಗೆ ಕುಡಿಯುವ ನೀರಿನ ಬವಣೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದೆಂಬ ಬಗ್ಗೆ ಪೂರ್ವ ಪರಿಶೀಲನೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಈಗ ಇರುವ ಹಣವನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಕೆ ಮಾಡಲು ಸಿದ್ಧವಾಗಿಟ್ಟುಕೊಳ್ಳÀಬೇಕು. ಪ್ರಥಮ ಆದ್ಯತೆಯನ್ನು ಕುಡಿಯುವ ನೀರಿಗೆ ನೀಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಮುಂಬರುವ ದಿನಗಳಲ್ಲಿ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಕೊರತೆ ಬಾರದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಜಿಲ್ಲೆಯ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಇನ್ನಿತರ ಪರಿಕರಗಳನ್ನು ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಂಡಿರಬೇಕು. ಬೇಡಿಕೆಗೆ ತಕ್ಕಂತೆ ರೈತರಿಗೆ ಪೂರೈಸಬೇಕು. ಬೆಳೆಗಳಿಗೆ ವಿಮೆ ಸೌಲಭ್ಯ ಪಡೆಯಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ಕರಪತ್ರ, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಇನ್ನಿತರ ವಿಧಾನಗಳ ಮೂಲಕ ಬೆಳೆ ವಿಮೆ ಕುರಿತು ಹೆಚ್ಚು ಪ್ರಚಾರ ಮಾಡಬೇಕು. ತಾಲೂಕು ಸಹಾಯಕ ಕೃಷಿ ನಿರ್ದೇಶಕರಿಗೆ ಈ ಬಗ್ಗೆ ಜವಾಬ್ದಾರಿ ನೀಡಬೇಕೆಂದು ಸಚಿವರು ತಿಳಿಸಿದರು.

ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮುಂಗಾರು ಹಂಗಾಮಿಗೆ ಈವರೆಗೆ ಎಷ್ಟು ಮಂದಿ ರೈತರು ಬೆಳೆ ವಿಮೆಗೆ ನೊಂದಾಯಿಸಿದ್ದಾರೆ ?, ಕಳೆದ ಬಾರಿ ವಿಮೆ ಮಾಡಿಸಿದವರಿಗೆ ಹಣ ಬಂದಿದಿಯೇ ? ಎಂಬ ಬಗ್ಗೆ ವಿವರ ನೀಡಬೇಕು. ಸಕಾಲದಲ್ಲಿ ಪ್ರಯೋಜನ ರೈತರಿಗೆ ತಲುಪಬೇಕು ಎಂದು ತಿಳಿಸಿದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಕಳೆದ ಬಾರಿ ಮಳೆಯಿಂದ ಬಾಳೆ ಸೇರಿದಂತೆ ಇತರೆ ಬೆಳೆಗಳು ಹಾನಿಗೀಡಾಗಿವೆ. ಈ ಬಗ್ಗೆ ನೀಡಲಾಗಿರುವ ಪರಿಹಾರಗಳ ಕ್ರಮದ ಕುರಿತು ಮಾಹಿತಿ ನೀಡಬೇಕು. ಮುಂದೆ ಮಳೆ ಬರದಿದ್ದರೆ ಪರಿಸ್ಥಿತಿ ನಿಭಾಯಿಸಲು ಯಾವ ಸಿದ್ದತಾ ಕ್ರಮ ಕೈಗೊಂಡಿದ್ದೀರಿ ? ಎಂಬ ಬಗ್ಗೆ ವಿವರ ನೀಡಬೇಕು ಎಂದರು.

      ಶಾಸಕರಾದ ಎಂ.ಆರ್. ಮಂಜುನಾಥ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದ ಹಲವೆಡೆ ಇತ್ತೀಚೆಗೆ ವೇಗವಾಗಿ ಬೀಸಿದ ಗಾಳಿ ಬಡಿತಕ್ಕೆ ಸಾಕಷ್ಟು ಬೆಳೆ ಹಾನಿಯಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ತೊಂದರೆ ಅನುಭವಿಸಿದ್ದು, ಬಾಳೆ ಹಾಳಾಗಿದೆ. ಇದಕ್ಕೆ ಹೆಚ್ಚಿನ ಪರಿಹಾರ ಸಿಗಬೇಕು ಎಂದರು.

ಸಹಕಾರ ಇಲಾಖೆ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಎನ್. ಮಂಜುನಾಥ ಪ್ರಸಾದ್ ಅವರು ಮಾತನಾಡಿ ಮಳೆಯ ಮುನ್ಸೂಚನೆ ಬಗ್ಗೆ ಹವಾಮಾನ ಇಲಾಖೆ ನಿಖರ ಮಾಹಿತಿ ನೀಡಲಿದೆ. ಮಳೆ ಕೊರತೆಯಾದರೆ ಪರ್ಯಾಯವಾಗಿ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಪೂರ್ವಸಿದ್ದತೆಯನ್ನು ಅಧಿಕಾರಿಗಳು ಮಾಡಬೇಕಿದೆ ಎಂದು ತಿಳಿಸಿದರು.

ಕಾಡಂಚಿನ ಪ್ರದೇಶಗಳು, ಪೋಡುಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ ವಿಳಂಬವಾಗುತ್ತಿದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು. ಈ ಸಂದರ್ಭದಲ್ಲಿ ಸಚಿವರು ಕುಡಿಯುವ ನೀರಿನಂತಹ ಅಗತ್ಯ ಸೌಕರ್ಯಗಳಿಗೆ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ನಡೆಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಿ ಎಂದರು.

ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಜಿಲ್ಲೆಯ ಆಸ್ಪತ್ರೆ ಹಾಗೂ ವೈದ್ಯರ ಲಭ್ಯತೆ ಬಗ್ಗೆ ವಿವರ ಪಡೆದ ಉಸ್ತುವಾರಿ ಸಚಿವರು ಡಯಾಲಿಸಿಸ್ ಚಿಕಿತ್ಸೆಗೆ ಆಯಾ ಭಾಗದಲ್ಲಿಯೇ ಅನುಕೂಲವಾಗಬೇಕು. ಪ್ರಸ್ತಾವನೆಗೊಂಡಿರುವ ಆಸ್ಪತ್ರೆಗಳ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು. 

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಅವರು ಮಾತನಾಡಿ ಕಾಡಂಚಿನ ಭಾಗಗಳಲ್ಲಿ ಜನರು ಆಸ್ಪತ್ರೆಗೆ ಬರಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅರಣ್ಯ ವಾಸಿಗಳಿಗೆ ಸಮರ್ಪಕವಾಗಿ ಆರೋಗ್ಯ ಸೌಲಭ್ಯ ಸಿಗÀಬೇಕು. ಡಯಾಲಿಸಿಸ್ ನ ಒಂದು ಚಿಕಿತ್ಸಾ ಕೇಂದ್ರ ವ್ಯವಸ್ಥೆಗೆ ನನ್ನ ಕ್ಷೇತ್ರದ ಅನುದಾನದಲ್ಲಿ ನೆರವು ನೀಡುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ಅವರು ಮಾತನಾಡಿ ಅದಿವಾಸಿಗಳ ಸಂಖ್ಯಗೆ ಅನುಗುಣವಾಗಿ ಆರೋಗ್ಯ ಸೌಲಭ್ಯ ಒದಗಿಸಬೇಕಿದೆ. ವಾರದಲ್ಲಿ ಎರಡು ದಿನ ಮೊಬೈಲ್ ವಾಹನಗಳ ಮೂಲಕ ಹಾಡಿಗಳಿಗೆ ಸಂಚರಿಸಿ ಆರೋಗ್ಯ ತಪಾಸಣೆ, ಚಿಕಿತ್ಸೆ ನೀಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ ಅಧಿಕಾರಿಗಳು ಸ್ಪಂದನಾಶೀಲರಾಗಿ ಕಾರ್ಯನಿರ್ವಹಿಸಬೇಕು. ಜನರನ್ನು ಅಲೆದಾಡಿಸದೇ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಯಾವುದೇ ಸಬೂಬು, ಕಾರಣ ಹೇಳಿ ಜನರ ಕೆಲಸ ಮಾಡುವುದನ್ನು ನಿಲ್ಲಿಸಬಾರದು. ಸರ್ಕಾರ ಇರುವುದೇ ಜನರ ಕೆಲಸಕ್ಕಾಗಿ. ಸಾರ್ವಜನಿಕರ ಒಳಿತಿಗೆ ಕಾರ್ಯನಿರ್ವಹಿಸಿದರೆ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ ಎಂದು ತಿಳಿಸಿದರು.

ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿ ತಮ್ಮ ಕ್ಷೇತ್ರದ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಾಹಿತಿ ಹಕ್ಕಿನಡಿ ಕೇಳಲಾದ ಮಾಹಿತಿಗೆ ಹೆಚ್ಚು ಮೊತ್ತದ ಶುಲ್ಕ ಕಟ್ಟುವಂತೆ ಅರ್ಜಿದಾರರಿಗೆ ಕೇಳಲಾಗಿದೆ. ಈ ಬಗ್ಗೆ ನಿಖರವಾಗಿ ಪರಿಶೀಲಿಸಿ ವಿವರ ನೀಡಬೇಕು ಎಂದರು.  

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶು ಸಂಗೋಪನೆ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಪೂವಿತ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ, ಬಂಡೀಪುರ ಹುಲಿ ಸಂರಕ್ಷೀತ ಪ್ರದೇಶದ ನಿರ್ದೇಶಕರಾದ ರಮೇಶ್‍ಕುಮಾರ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ದೀಪಾ ಕಂಟ್ರಾಕ್ಟರ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರಿಂದ ವನ ಮಹೋತ್ಸವಕ್ಕೆ ಚಾಲನೆ  

        ಚಾಮರಾಜನಗರ, ಜುಲೈ 01 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರಣ್ಯ ಇಲಾಖೆ ವತಿಯಿಂದ ಗಿಡಗಳನ್ನು ನೆಡುವ ವನ ಮಹೋತ್ಸವ ಕಾರ್ಯಕ್ರಮಕ್ಕೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಚಾಲನೆ ನೀಡಿದರು.

    ತಾಲೂಕಿನ ಬದನಗುಪ್ಪೆ ಬಳಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಗಿಡ ನೆಡುವ ಮೂಲಕ ಉಸ್ತುವಾರಿ ಸಚಿವರು ವನ ಮಹೋತ್ಸವಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ವನ ಮಹೋತ್ಸದ ಅಂಗವಾಗಿ 6 ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದರು. 

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಪೂವಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ದೀಪಾ ಕಂಟ್ರಾಕ್ಟರ್, ಇತರರು ಉಪಸ್ಥಿತರಿದ್ದರು.

ಜುಲೈ 3 ರಂದು ಶ್ರೀ ಚಾಮರಾಜೇಶ್ವರಸ್ವಾಮಿ ಮಹಾ ರಥೋತ್ಸವ 
  
       ಚಾಮರಾಜನಗರ, ಜುಲೈ 01- ನಗರದಲ್ಲಿ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾ ರಥೋತ್ಸವವು ಜುಲೈ 3 ರಂದು ನೆರವೇರಲಿದೆ.  

      ಜುಲೈ 3ರಂದು ಸೋಮವಾರ ಮೂಲ/ಪೂರ್ವಾಷಾಢ ನಕ್ಷತ್ರದಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಶ್ರೀಮನ್ಮಹಾರಥಾರೋಹಣ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ
  
       ಚಾಮರಾಜನಗರ, ಜುಲೈ 01 :- ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 2023-24ನೇ ಸಾಲಿನಲ್ಲಿ ಏರ್ಪಡಿಸಿದ್ದ ರಸಪ್ರಶ್ನೆಯಲ್ಲಿ ಚಾಮರಾಜನಗರದ ಮಲ್ಲಯ್ಯನಪುರದಲ್ಲಿರುವ ಆದರ್ಶ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿಗಳಾದ ಎ.ಎಂ. ಶರತ್ ಹಾಗೂ ಯು.ಎಂ. ಮಹದೇವಪ್ರಸಾದ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 2ರಂದು ಗ್ರಾಹಕ ಸಂರಕ್ಷಣೆ ಕಾಯ್ದೆ ಕುರಿತು ಸಂವಾದ ಪ್ರಸಾರ 
  
       ಚಾಮರಾಜನಗರ, ಜುಲೈ 01 - ಗ್ರಾಹಕರ ಸಂರಕ್ಷಣಾ ಕಾಯ್ದೆ-2019ರ ಕುರಿತು ಅರಿವು ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿ ವಿಜಯಕುಮಾರ್ ಅವರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ ದೂರದರ್ಶನ ಚಂದನ ವಾಹಿನಿಯಲ್ಲಿ ಜುಲೈ 2ರಂದು ಸಂಜೆ 6ರಿಂದ 6.30 ಗಂಟೆಯವರೆಗೆ ಪ್ರಸಾರವಾಗಲಿದೆ. 

ಪಕ್ಷಕಾರರು, ವಕೀಲರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾ ಗ್ರಾಹಕರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಹನ ಹರಾಜು 

        ಚಾಮರಾಜನಗರ, ಜುಲೈ 01 :- ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ದ್ವಿಚಕ್ರ ವಾಹನಗಳನ್ನು ಜುಲೈ 8ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗವಾಗಿ ಹರಾಜು ಮಾಡಲಾಗುತ್ತದೆ. 

      ವಾಹನಗಳ ವಿವರ ಹಾಗೂ ಹರಾಜು ಸಂಬಂಧ ಷರತ್ತುಗಳನ್ನು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಡೆಯಬಹುದೆಂದು ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

     

Wednesday, 28 June 2023

28-06-2023 ಚಾಮರಾಜನಗರ ನ್ಯೂಸ್



 
ಚಾಮರಾಜೇಶ್ವರಸ್ವಾಮಿ ರಥೋತ್ಸವ : ಅಧಿಕಾರಿ ಹಾಗೂ ಮುಖಂಡರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ 
      
       ಚಾಮರಾಜನಗರ, ಜೂನ್ 28 :- ಚಾಮರಾಜನಗರದಲ್ಲಿ ಜುಲೈ 3ರಂದು ನಡೆಯುವ ಶ್ರೀ ಚಾಮರಾಜೇಶ್ವರಸ್ವಾಮಿ ಮಹಾರಥೋತ್ಸವವನ್ನು ಅದ್ದೂರಿಯಾಗಿ ನಡೆಸುವ ಸಂಬಂಧ ಅಧಿಕಾರಿಗಳು ಹಾಗೂ ವಿವಿಧ  ಮುಖಂಡರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಯಿತು. 

      ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಾಗೂ ತಹಶೀಲ್ದಾರ್ ಐ.ಇ. ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರೀ ಚಾಮರಾಜೇಶ್ವರಸ್ವಾಮಿ ಮಹಾರಥೋತ್ಸವ ಸಂಬಂಧ ವಿವರವಾಗಿ ಚರ್ಚಿಸಲಾಯಿತು. 

      ದೇವಸ್ಥಾನ ಹಾಗೂ ರಥ ಸಾಗುವ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ರಥೋತ್ಸವದಂದು ತೇರು ಸಾಗುವ ಮಾರ್ಗಗಳಲ್ಲಿ ಮರಳು ಹಾಕಬೇಕು. ರಥೋತ್ಸವ ಮುಗಿದ ಕೂಡಲೇ ಮರಳನ್ನು ತೆರವುಗೊಳಿಸಿ ವಾಹನ ಸವಾರರು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು. ಕರ್ಕಶ ಶಬ್ದದ ಪೀಪಿಗಳಿಂದ ಉಂಟಾಗುವ ಹಾಗೂ ಬಣ್ಣ ಹಚ್ಚಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುವುದನ್ನ ತಪ್ಪಿಸಬೇಕು. ತೇರು ರಕ್ಷಣೆಗೆ ಮೇಲ್ಚಾವಣಿ ನಿರ್ಮಾಣ ಮಾಡಬೇಕು ಎಂಬೂದು ಸೇರಿದಂತೆ ಇತರೆ ಸಲಹೆಗಳನ್ನು ಮುಖಂಡರು ಸಭೆಯಲ್ಲಿ ನೀಡಿದರು. 

      ತಹಶೀಲ್ದಾರ್ ಬಸವರಾಜು ಅವರು ಮಾತನಾಡಿ ಕಳೆದ ಬಾರಿ ಅಚ್ಚುಕಟ್ಟಾಗಿ ರಥೋತ್ಸವ ನೆರವೇರಿದೆ. ಈ ವರ್ಷವೂ ಸಹ ಸುಸೂತ್ರವಾಗಿ ನಡೆಯಲು ಈ ಹಿಂದಿನಂತೆ ಎಲ್ಲರೂ ಸಹಕಾರ ನೀಡಬೇಕು. ಪ್ರತಿ ಗ್ರಾಮದ ಗ್ರಾಮಸ್ಥರು, ಯಜಮಾನರು, ಮುಖಂಡರು ರಥೋತ್ಸವಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ಮುಂದುವರೆಸಬೇಕು ಎಂದು ಮನವಿ ಮಾಡಿದರು. 

      ಈ ವರ್ಷವು ಸಾಕಷ್ಟು ಭಕ್ತಾಧಿಗಳು ಬರುವ ನಿರೀಕ್ಷೆಯಿದೆ. ಭಕ್ತಾಧಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಜಾರಿಗೊಳಿಸಲಾಗುವುದು. ದೇವಸ್ಥಾನದ ಸುತ್ತಲೂ ಶುಚಿತ್ವ ಕಾಪಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ರಥೋತ್ಸವಕ್ಕೂ ಮೊದಲು ಹಾಗೂ ರಥೋತ್ಸವದ ನಂತರ ಎಲ್ಲಾ ಅವಶ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಬಸವರಾಜು ಅವರು ತಿಳಿಸಿದರು.

      ನಗರಸಭೆಯ ಸದಸ್ಯರಾದ ಚಿನ್ನಮ್ಮ, ನೀಲಮ್ಮ, ಭಾಗ್ಯಮ್ಮ, ಸುದರ್ಶನ್ ಗೌಡ, ದೇವಸ್ಥಾನದ ಆಗಮಿಕರಾದ ದರ್ಶನ್, ಅರ್ಚಕರಾದ ಅನಿಲ್, ಮುಖಂಡರಾದ ಗಣೇಶ್ ದೀಕ್ಷಿತ್, ನಗರಸಭೆಯ ಪೌರಾಯುಕ್ತರಾದ ಎಸ್.ವಿ. ರಾಮದಾಸ್, ಪಟ್ಟಣ ಪೋಲಿಸ್ ಠಾಣೆ ಇನ್ಸ್‍ಪೆಕ್ಟರ್ ಸುನೀಲ್, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜು, ಅಗ್ನಿಶಾಮಕಾಧಿಕಾರಿ ಶಿವಾಜಿರಾವ್ ಪವರ್, ದೇವಸ್ಥಾನದ ಕಾರ್ಯನಿರ್ವಾಹಕಾಧಿಕಾರಿ ರಾಜಶೇಖರ್‍ಮೂರ್ತಿ, ಬಂಡಿಗಾರ್ ದಪೇದಾರ್ ಹಾಗೂ ವಿವಿಧ ಕೋಮಿನ ಮುಖಂಡರು, ಯಜಮಾನರು ಸಭೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-೧
-------



ಬಕ್ರೀದ್ ಹಬ್ಬ ಹಿನ್ನೆಲೆ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಾಂತಿ ಸೌಹಾರ್ದತ ಸಭೆ 
      
       ಚಾಮರಾಜನಗರ, ಜೂನ್ 27 :- ಇದೇ ಜೂನ್ 29ರಂದು ಬಕ್ರೀದ್ ಹಬ್ಬ ಆಚರಣೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರ ಅಧ್ಯಕ್ಷತೆಯಲ್ಲಿಂದು ಶಾಂತಿ ಸಭೆ ನಡೆಯಿತು.

      ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಈ ಹಿಂದಿನಿಂದಲೂ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ. ಇದೇ ರೀತಿ ಈ ಬಾರಿಯೂ ಹಬ್ಬ ಆಚರಿಸುವಂತೆ ಮನವಿ ಮಾಡಿದರು. 

      ತ್ಯಾಗದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಲಾಗುತ್ತಿದೆ. ಇದೇ ಪರಂಪರೆ ಜಿಲ್ಲೆಯಲ್ಲಿ ಮುಂದುವರೆಯಲಿ. ಹಬ್ಬಕ್ಕೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುತ್ತದೆ ಎಂದರು.

      ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಬ್ಬದ ಸಂದರ್ಭದಲ್ಲಿ ಕುಡಿಯುವ ನೀರು, ನೈರ್ಮಲ್ಯ, ವಿದ್ಯುತ್ ಸೇರಿದಂತೆ ಯಾವುದೇ ಸೌಕರ್ಯಗಳಿಗೆ ಕೊರತೆಯಾಗದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಇದೇ ವೇಳೆ ಸೂಚನೆ ನೀಡಿದರು. 

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಮಾತನಾಡಿ ಜಿಲ್ಲೆಯಲ್ಲಿ ಈ ಹಿಂದೆಯೂ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗಿದೆ. ಎಲ್ಲಿಯೂ ಸೌಹಾರ್ದತೆಗೆ ಭಂಗ ಬಂದಿಲ್ಲ. ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಈದ್ಗಾ ಮೈದಾನ ಸೇರಿದಂತೆ ಪ್ರಾರ್ಥನಾ ಮಂದಿರಗಳ ಬಳಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದರು. 

      ಕಾನೂನು ಸುವ್ಯವಸ್ಥೆಗೆ ಎಲ್ಲರ ಸಹಕಾರ ಅಗತ್ಯವಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಯಾವುದೇ ಪ್ರಚೋದಾನಾತ್ಮಕ ಹೇಳಿಕೆಗಳಿಗೆ ಕಿವಿಗೊಡಬಾರದು. ವಿಶೇಷವಾಗಿ ಯುವ ಜನರಿಗೆ ಹಿರಿಯರು ಮಾರ್ಗದರ್ಶನ ಮಾಡಬೇಕು. ಸಾಮರಸ್ಯದಿಂದ ಹಬ್ಬ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ತಿಳಿಸಿದರು. 

      ಇದೇ ಸಂದರ್ಭದಲ್ಲಿ ಮಾತನಾಡಿದ ಮುಸ್ಲಿಂ ಮುಖಂಡರು ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ಬಾರಿಯು ಶಾಂತಿಯುತವಾಗಿ ಸೌಹಾರ್ದತೆ, ಸಾಮರಸ್ಯ ಕಾಪಾಡಿಕೊಂಡು ಹಬ್ಬ ಆಚರಿಸಲಿದ್ದೇವೆ ಎಂದರು. 

       ತಹಶೀಲ್ದಾರರಾದ ಐ.ಇ. ಬಸವರಾಜು, ಮಂಜುಳಾ, ನಗರಸಭೆ ಆಯುಕ್ತರಾದ ಎಸ್.ವಿ. ರಾಮದಾಸ್, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ. ರಾಜು, ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡರು, ಇತರೆ ಮುಖಂಡರು ಸಭೆಯಲ್ಲಿ ಹಾಜರಿದ್ದರು. 
ಚಿತ್ರ-೨
-----

  
ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ
      
       ಚಾಮರಾಜನಗರ, ಜೂನ್ 27 - ಬೆಂಗಳೂರು ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ಸಾಧನೆ ಕೊಡುಗೆ ಅಪಾರವಾಗಿದ್ದು, ಸ್ಮರಣೀಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.

      ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

      ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಿರ್ಮಾಣಕ್ಕೆ ಕಾರಣರಾದ ಕೆಂಪೇಗೌಡರ ಕೊಡುಗೆಯನ್ನು ಪ್ರತಿಯೊಬ್ಬರೂ ನೆನಪಿಸಿಕೊಳ್ಳಬೇಕಿದೆ. ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿಯೂ ನಿರ್ಮಿಸಿದ ಗೋಪುರ, ದ್ವಾರಗಳು ಇಂದಿಗೂ ಸಹ ಅವರ ಅಸಾಮಾನ್ಯ ಜ್ಞಾನದ ಬಗ್ಗೆ ತಿಳಿಸುತ್ತದೆ. ಸಾಕಷ್ಟು ಕೆರೆ ಕಟ್ಟೆಗಳನ್ನು ನಿರ್ಮಾಣ ಮಾಡಿದರು. ಅಲ್ಲದೇ ವೃತ್ತಿಯ ಆಧಾರಿತವಾಗಿ ನಿರ್ಮಿಸಿದ ಪೇಟೆಗಳನ್ನು ಉದಾಹರಣೆ ಸಹಿತವಾಗಿ ಇಂದು ಸಹ ನೋಡಬಹುದಾಗಿದೆ ಎಂದರು. 

      ಸುಭದ್ರ ನೆಲೆ, ವಿಶ್ವ ವಿಖ್ಯಾತ ನಗರವಾದ ಬೆಂಗಳೂರು ನಿರ್ಮಾಪಕರಾದ ಕೆಂಪೇಗೌಡರ ಜನ್ಮ ದಿನದ ಆಚರಣೆಯು ಎಲ್ಲರ ಹೆಮ್ಮೆಯಾಗಿದೆ. ಈ ಸಂದರ್ಭದಲ್ಲಿ ಎಲ್ಲರಿಗೂ ಕೆಂಪೇಗೌಡರ ಜಯಂತಿಯ ಶುಭಾಶಯಗಳನ್ನು ಕೋರುವುದಾಗಿ  ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.

     ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು ಮಾತನಾಡಿ ಕೆಂಪೇಗೌಡರ ಜೀವನ ಚರಿತ್ರೆಯಿಂದ ಕಲಿಯುವುದು ತುಂಬಾ ಇದೆ. ಕೆಂಪೇಗೌಡರವರು ತಮ್ಮ ನಿಸ್ವಾರ್ಥ ಮನೋಭಾವದಿಂದ ಇಂದು ಜಗತ್ಪ್ರಸಿದ್ದಿಯನ್ನ ಪಡೆದಿದ್ದಾರೆ. ಅವರ ಅಸಾಮಾನ್ಯ ವ್ಯಕ್ತಿತ್ವ, ಜಾಣತನ, ಆಡಳಿತದಿಂದ ಇಂದಿನ ಬೃಹತ್ ಬೆಂಗಳೂರು ಕಾಣಲು ಸಾಧ್ಯವಾಯಿತು. ಯಾವ ವ್ಯಕ್ತಿ ತನಗೋಸ್ಕರ ಬದುಕದೇ ಪರರ ಒಳಿತಿಗಾಗಿ ಬದುಕುತ್ತಾರೆಯೋ ಅವರು ಯಾವಾಗಲೂ ಜೀವಂತವಾಗಿರುತ್ತಾರೆ. ಅಂತಹ ಸಾಲಿನಲ್ಲಿ ನಾಡಪ್ರಭು ಕೆಂಪೇಗೌಡರು ನಿಲ್ಲುತ್ತಾರೆ ಎಂದು ತಿಳಿಸಿದರು. 

      ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಟಿ. ಜಯಲಕ್ಷ್ಮೀ ಸೀತಾಪುರ ಅವರು ಮಾತನಾಡಿ ಕೆಂಪೇಗೌಡರ ಸಾಧನೆಗೆ ಅವರ ತಂದೆ ತಾಯಿ ನೀಡಿದ ನೀತಿ ಶಿಕ್ಷಣವೇ ಕಾರಣ ಎಂದು ಹೇಳಬಹುದು. ಅವರು ನೀಡಿದ ನೀತಿ ಪಾಠಗಳೇ ಕೆಂಪೇಗೌಡರು ಜಗತ್ತಿನಾದ್ಯಂತ ಹೆಸರು ಮಾಡಲು ಸಾಧ್ಯವಾಯಿತು. ಇಂದಿನ ಶಿಕ್ಷಣಕ್ಕೆ ಹೋಲಿಸಿದರೆ ಅಂದಿನ ಶಿಕ್ಷಣ ಮೌಲ್ಯವನ್ನು ಅರ್ಥಮಾಡಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. 

      ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಸಮುದಾಯದ ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಪುಟ್ಟಸ್ವಾಮಿಗೌಡ, ಪಣ್ಯದಹುಂಡಿ ರಾಜು, ಚಿನ್ನಮುತ್ತು, ಸಿ.ವಿ. ನಾಗೇಂದ್ರ, ಮಹೇಶ್‍ಗೌಡ ಇತರೆ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

      ಕಾರ್ಯಕ್ರಮಕ್ಕೂ ಮೊದಲು ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಮೆರವಣೆಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಚಾಲನೆ ನೀಡಿದರು. ಮೆರವಣಿಗೆÀಯು ವಿವಿಧ ಕಲಾ ತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದ ಬಳಿ  ಮುಕ್ತಾಯಗೊಂಡಿತು.  

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ 
      
      ಚಾಮರಾಜನಗರ, ಜೂನ್ 27- ಚಾಮರಾಜನಗರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿಗಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.

     10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ಸಂಬಂಧಪಟ್ಟ ದಾಖಲಾತಿಗಳನ್ನು ದೃಢೀಕರಿಸಿ ಜುಲೈ 15ರೊಳಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 
ಜುಲೈ 3 ರಂದು ಶ್ರೀ ಚಾಮರಾಜೇಶ್ವರಸ್ವಾಮಿ ಮಹಾ ರಥೋತ್ಸವ : ವಿವಿಧ ಪೂಜಾ ಕೈಂಕರ್ಯಗಳು 
  
       ಚಾಮರಾಜನಗರ, ಜೂನ್ 27 - ನಗರದಲ್ಲಿ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾ ರಥೋತ್ಸವವು ಜುಲೈ 3 ರಂದು ನಡೆಯಲಿದ್ದು, ಇದರ ಅಂಗವಾಗಿ ಜುಲೈ 7ರವರೆಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಲಿವೆ. 

      ಜುಲೈ 3ರಂದು ಸೋಮವಾರ ಮೂಲ/ಪೂರ್ವಾಷಾಢ ನಕ್ಷತ್ರದಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಶ್ರೀಮನ್ಮಹಾರಥಾರೋಹಣ ಜರುಗಲಿದೆ. 

      ಜೂನ್ 28ರಂದು ಚಂದ್ರಮಂಡಲಾರೋಹಣೋತ್ಸವ, 29ರಂದು ಅನಂತ ಪೀಠಾರೋಹಣೋತ್ಸವ, 30ರಂದು ಪುಷ್ಪಮಂಟಪಾರೋಹಣೋತ್ಸವ, ಜುಲೈ 1 ರಂದು ವೃಷಭಾರೋಹಣೋತ್ಸವ, 2ರಂದು ವಸಂತೋತ್ಸವ ಪೂರ್ವಕ ಗಜಾವಾಹನೋತ್ಸವ ನಡೆಯಲಿದೆ.

      ಜುಲೈ 4ರಂದು ಮೃಗಯಾತ್ರಾ ಪೂರ್ವಕ ಅಶ್ವಾರೋಹಣ ನಂತರ ಮಹಾಭೂತಾರೋಹಣ, ದೇವಿ ಪ್ರಣಯ ಕಲಹ ಸಧಾನೋತ್ಸವ, 5ರಂದು ಹಗಲುಚೂರ್ಣೋತ್ಸವ ಪೂರ್ವಕ ಅವಭೃತ ತೀರ್ಥಸ್ನಾನ, ಧ್ವಜಾವರೋಹಣ, ಮೌನಬಲಿ, 6ರಂದು ಪುಷ್ಪಯೋಗ ಪೂರ್ವಕ ಕೈಲಾಸಯಾನಾರೋಹಣೋತ್ಸವ ಹಾಗೂ 7ರಂದು ಮಹಾಸಂಪ್ರೋಕ್ಷಣಾ ಪೂರ್ವಕ ನಂದಿವಾಹನೋತ್ಸವ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ತೋಟಗಾರಿಕೆ ಬೆಳೆಗಳಿಗೆ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನ 
      
       ಚಾಮರಾಜನಗರ, ಜೂನ್ 27 :- 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಜಿಲ್ಲೆಯ ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಟೊಮೆಟೊ, ಆಲೂಗಡ್ಡೆ ಮತ್ತು ಅರಿಶಿಣ ಬೆಳೆಗೆ ಬೆಳೆವಿಮೆ ಕೈಗೊಳ್ಳಲು ಅವಕಾಶವಿದೆ.
 
      ನೀರಾವರಿ ಆಶ್ರಿತ ಈರುಳ್ಳಿ ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 80500 ರೂ.ಗಳಾಗಿದ್ದು ವಿಮಾ ಕಂತಾಗಿ ಶೇ. 5ರಷ್ಟು ಅಂದರೆ ಪ್ರತಿ ಎಕರೆಗೆ 1630 ರೂ. ಗಳನ್ನು ಜೂನ್ 30 ರೊಳಗೆ ಪಾವತಿಸಬೇಕಿದೆ. 

     ಟೊಮೆಟೊ ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 141500 ರೂ.ಗಳಾಗಿದ್ದು ವಿಮಾ ಕಂತಾಗಿ ಶೇ. 5ರಷ್ಟು ಅಂದರೆ ಪ್ರತಿ ಎಕರೆಗೆ 2864 ರೂ.ಗಳನ್ನು ಜುಲೈ 15 ರೊಳಗೆ ಪಾವತಿಸಬೇಕಿದೆ. 

     ನೀರಾವರಿ ಆಶ್ರಿತ ಆಲೂಗಡ್ಡೆ ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 148500 ರೂ.ಗಳಾಗಿದ್ದು ವಿಮಾ ಕಂತಾಗಿ ಶೇ. 5ರಷ್ಟು ಅಂದರೆ ಪ್ರತಿ ಎಕರೆಗೆ 3006 ರೂ.ಗಳನ್ನು ಜುಲೈ 15 ರೊಳಗೆ ಪಾವತಿಸಬೇಕಿದೆ. 

        ಅರಿಶಿಣ ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 142250 ರೂ.ಗಳಾಗಿದ್ದು ವಿಮಾ ಕಂತಾಗಿ ಶೇ. 5ರಷ್ಟು ಅಂದರೆ  ಪ್ರತಿ ಎಕರೆಗೆ 2880 ರೂ.ಗಳನ್ನು ಜುಲೈ 31ರೊಳಗೆ ಪಾವತಿಸಬೇಕಿದೆ. 

      ಚಾಮರಾಜನಗರ ತಾಲೂಕಿನ ಕಸಬಾ ಹಾಗೂ ಚಂದಕವಾಡಿ ಹೋಬಳಿಗೆ ನೀರಾವರಿ ಆಶ್ರಿತ ಈರುಳ್ಳಿ ಹಾಗೂ ಅರಿಶಿಣ, ಟೊಮ್ಯಾಟೊ, ಸಂತೇಮರಹಳ್ಳಿ ಹೋಬಳಿಗೆ ಅರಿಶಿಣ, ಟೊಮ್ಯಾಟೊ, ಹರದನಹಳ್ಳಿ ಹೋಬಳಿಗೆ ನೀರಾವರಿ ಆಶ್ರಿತ ಈರುಳ್ಳಿ, ಆಲೂಗಡ್ಡೆ ಮತ್ತು ಅರಿಶಿಣ, ಟೊಮ್ಯಾಟೊ ಹಾಗೂ ಹರವೆ ಹೋಬಳಿಗೆ ಅರಿಶಿಣ, ಟೊಮ್ಯಾಟೊ ಬೆಳೆಗಳು ವಿಮಾ ವ್ಯಾಪ್ತಿಗೆ  ಒಳಪಡಲಿವೆ.

      ಗುಂಡ್ಲುಪೇಟೆ ತಾಲೂಕಿನ ಕಸಬಾ, ತೆರಕಣಾಂಬಿ, ಬೇಗೂರು, ಹಂಗಳ ಹೋಬಳಿಗೆ ನೀರಾವರಿ ಆಶ್ರಿತ ಈರುಳ್ಳಿ, ಹಾಗೂ ಅರಿಶಿಣ, ಟೊಮ್ಯಾಟೊ ಬೆಳೆಗಳು ವಿಮಾ ವ್ಯಾಪ್ತಿಗೆ ಒಳಪಡಲಿವೆ. 

      ಕೊಳ್ಳೇಗಾಲ ತಾಲೂಕಿನ ಕಸಬಾ, ಪಾಳ್ಯ ಹೋಬಳಿಗೆ ನೀರಾವರಿ ಆಶ್ರಿತ ಈರುಳ್ಳಿ ಮತ್ತು ಅರಿಶಿಣ, ಟೊಮ್ಯಾಟೊ ಬೆಳೆಗಳು ವಿಮಾ ವ್ಯಾಪ್ತಿಗೆ ಒಳಪಡಲಿವೆ.

     ಹನೂರು ತಾಲೂಕಿನ ರಾಮಾಪುರ ಹೋಬಳಿಗೆ ನೀರಾವರಿ ಆಶ್ರಿತ ಈರುಳ್ಳಿ ಹಾಗೂ ಅರಿಶಿಣ, ಲೊಕ್ಕನಹಳ್ಳಿ ಹೋಬಳಿಗೆ ನೀರಾವರಿ ಆಶ್ರಿತ ಈರುಳ್ಳಿ, ಆಲೂಗಡ್ಡೆ ಮತ್ತು ಅರಿಶಿಣ, ಟೊಮ್ಯಾಟೊ, ಹನೂರು ಹೋಬಳಿಗೆ ನೀರಾವರಿ ಆಶ್ರಿತ ಈರುಳ್ಳಿ ಹಾಗೂ ಅರಿಶಿಣ, ಟೊಮ್ಯಾಟೊ ಬೆಳೆಗಳು ವಿಮಾ ವ್ಯಾಪ್ತಿಗೆ ಸೇರಲಿವೆ.

      ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೆಶಕರಾದ ಶಿವಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 







ಆದರ್ಶ ವಿದ್ಯಾಲಯದಲ್ಲಿ 7 ರಿಂದ 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ 
      
     ಚಾಮರಾಜನಗರ, ಜೂನ್ 28 - ಚಾಮರಾಜನಗರದ ಆದರ್ಶ ವಿದ್ಯಾಲಯದಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ 7 ರಿಂದ  9ನೇ ತರಗತಿಯವರೆಗೆ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

     ಚಾಮರಾಜನಗರ ತಾಲೂಕಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಜುಲೈ 11ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಚಾಮರಾಜನಗರದ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 


Wednesday, 29 March 2023

29-03-2023 ವಿಧಾನಸಭಾ ಸಾರ್ವತ್ರಿಕ ಚುನಾವಣೆ : ನೀತಿ ಸಂಹಿತೆ ಉಲ್ಲಂಘನೆ ವಿರುದ್ದ ಕ್ರಮ -ಜಿಲ್ಲಾಧಿಕಾರಿ ಡಿ.ಎಸ್. ರಮೇಶ್

ವಿಧಾನಸಭಾ ಸಾರ್ವತ್ರಿಕ ಚುನಾವಣೆ : ನೀತಿ ಸಂಹಿತೆ ಉಲ್ಲಂಘನೆ ವಿರುದ್ದ ಕ್ರಮ -ಜಿಲ್ಲಾಧಿಕಾರಿ ಡಿ.ಎಸ್. ರಮೇಶ್
*ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*
       ಚಾಮರಾಜನಗರ, ಮಾರ್ಚ್ 29- ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದವರ ವಿರುದ್ದ ಪ್ರಜಾ ಪ್ರಾತಿನಿದ್ಯ ಕಾಯ್ದೆ ಅನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.

      ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ಕ್ರಮ ವಹಿಸಲಾಗಿದೆ ಎಂದರು. 

      ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಪ್ರತೀ ವಿಧಾನಸಭಾ ಕ್ಷೇತ್ರಗಳ 10 ರಿಂದ 12 ಮತಗಟ್ಟೆಗಳಿಗೆ ಒಬ್ಬರಂತೆ ಒಟ್ಟು 97 ಸೆಕ್ಟರ್ ಅಧಿಕಾರಿಗಳು ಹಾಗೂ ಚುನಾವಣಾ ಅಕ್ರಮ ದೂರುಗಳಿಗೆ ಸಂಬಂಧಿಸಿದಂತೆ ಕಾರ್ಯೋನ್ಮುಖರಾಗಲು 12 ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ನೇಮಿಸಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಮೇಲೆ ನಿಗಾ ಇಡಲು ವಿಧಾನಸಭಾ ಕ್ಷೇತ್ರವಾರು ಮಾದರಿ ನೀತಿ ಸಂಹಿತೆ ತಂಡ ನೇಮಕ ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಮಾದರಿ ನೀತಿ ಸಂಹಿತೆಯ ಜಿಲ್ಲಾ ನೋಡಲ್ ಅಧಿಕಾರಿಗಳಾಗಿದ್ದಾರೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. 
      
      ಚುನಾವಣೆ ವೇಳಾ ಪಟ್ಟಿ ಪ್ರPಟವಾಗಿದ್ದು ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕಡೆಯ ದಿನವಾಗಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ಮೇ 13ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಮೇ 15ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಇಂದಿನಿಂದ ಮೇ 15ರವರೆಗೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. 

      ಜಿಲ್ಲೆಯಲ್ಲಿ ಒಟ್ಟು 982 ಮತಗಟ್ಟೆಗಳನ್ನು ತೆರೆಯಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 253, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 241, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 239, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿವೆ. ನಗರ ಪ್ರದೇಶದÀಲ್ಲಿ 287, ಗ್ರಾಮಾಂತರ ಪ್ರದೇಶದಲ್ಲಿ 695 ಮತಗಟ್ಟೆಗಳು ಸ್ಥಾಪಿಸಲಾಗಿದೆ. 

      ಜಿಲ್ಲೆಯಲ್ಲಿ 422963 ಪುರುಷರು, 431226 ಮಹಿಳೆಯರು, 68 ಇತರರು ಸೇರಿದಂತೆ ಒಟ್ಟು 854257 ಮತದಾರರಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 110797 ಪುರುಷರು, 108387 ಮಹಿಳೆಯರು, 16 ಇತರರು ಸೇರಿದಂತೆ ಒಟ್ಟು 219200 ಮತದಾರರಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 106235 ಪುರುಷರು, 108909 ಮಹಿಳೆಯರು, 18 ಇತರರು ಸೇರಿದಂತೆ ಒಟ್ಟು 215162 ಮತದಾರರಿದ್ದಾರೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 101744 ಪುರುಷರು, 106012 ಮಹಿಳೆಯರು, 15 ಇತರರು ಸೇರಿದಂತೆ ಒಟ್ಟು 207771 ಮತದಾರರಿದ್ದಾರೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 104187 ಪುರುಷರು, 107918 ಮಹಿಳೆಯರು, 19 ಇತರರು ಸೇರಿದಂತೆ ಒಟ್ಟು 212124 ಮತದಾರರಿದ್ದಾರೆ. ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟಾರೆ 195 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿಯವರು ಮಾಹಿತಿ ನೀಡಿದರು. 

      ಚುನಾವಣಾ ಆಯೋಗದ ನಿರ್ದೆಶನದಂತೆ ವಿಕಲಚೇತನ ಮತದಾರರು ಹಾಗೂ 80 ವರ್ಷ ಮೇಲ್ಪಟ್ಟ ವಯೋಮಾನದ ಹಾಸಿಗೆ ಹಿಡಿದಿರುವ ಮತ ಚಲಾಯಿಸಲು ಶಕ್ತರಲ್ಲದ ಹಿರಿಯ ನಾಗರಿಕರು ಅಂಚೆ ಮೂಲಕ ಮತ ಚಲಾಯಿಸಲು ಅವರಿಗೆ ಅಂಚೆ ಮತ ಪತ್ರ ನೀಡಲು ವ್ಯವಸ್ಥೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 11965 ವಿಕಲಚೇತನ ಮತದಾರರಿದ್ದಾರೆ. ಒಟ್ಟು 23300 ಮಂದಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರಿದ್ದಾರೆ. 

      ಸಾರ್ವಜನಿಕರಿಂದ ದುರವಾಣಿ ಮತ್ತು ಆನ್‍ಲೈನ್ ಮೂಲಕ ಸ್ವೀಕೃತವಾಗುವ ದೂರುಗಳನ್ನು ಇತ್ಯರ್ಥ ಪಡಿಸಲು ಜಿಲ್ಲಾ ಕೇಂದ್ರದಲ್ಲಿ 24*7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಲು ಜಿಲ್ಲಾ ಸಂಪರ್ಕ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಹಾಗೂ ದೂರು ಸಲ್ಲಿಸಲು ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ. ಜಿಲ್ಲೆಯಲ್ಲಿ ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ಚುನಾವಣೆಗೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ಮಾತನಾಡಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಕುರಿತು ನಿಗಾ ವಹಿಸಲು ವಿಧಾನಸಭಾ ಕ್ಷೇತ್ರವಾರು ಮಾದರಿ ನೀತಿ ಸಂಹಿತೆ ತಂಡ ಇರಲಿದೆ. ಜಿಲ್ಲಾ ಕೇಂದ್ರದಲ್ಲಿ ಎಂಸಿಎಂಸಿ ತಂಡ, ವೀಡಿಯೋ ಸರ್ವಲೆನ್ಸ್, ವೀಡಿಯೋ ವೀವಿಂಗ್ ತಂಡಗಳು ಕಾರ್ಯನಿರ್ವಹಿಸಲಿವೆ ಎಂದರು. 

       ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಅವರು ಮಾತನಾಡಿ ಅಂತರ್ ರಾಜ್ಯ ಹಾಗೂ ಅಂತರ ಜಿಲ್ಲೆಗಳಿಗೆ ಸಂಚರಿಸುವ ವಾಹನಗಳ ಮೇಲೆ ನಿಗಾ ಇಡಲು ಜಿಲ್ಲಾ ವ್ಯಾಪ್ತಿಯಲ್ಲಿ 11 ಅಂತರರಾಜ್ಯ ಹಾಗೂ 8 ಅಂತರ ಜಿಲ್ಲಾ ಚೆಕ್‍ಪೋಸ್ಟ್ ಗಳನ್ನು ತೆರೆಯಲಾಗಿದ್ದು ಪೊಲೀಸ್, ಕಂದಾಯ ಇನ್ನಿತರೆ ಇಲಾಖೆಗಳ ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ ಎಂದರು. 

     ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸುದ್ದಿಗೋಷ್ಠಿಯಲ್ಲಿ ಇದ್ದರು.




ವಿಧಾನಸಭಾ ಚುನಾವಣೆ : ಶಸ್ತ್ರಾಸ್ತ್ರ ಠೇವಣಿಗೆ ಜಿಲ್ಲಾಧಿಕಾರಿ ಆದೇಶ

       ಚಾಮರಾಜನಗರ, ಮಾರ್ಚ್ 29 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅಧಿಕೃತವಾಗಿ ಶಸ್ತ್ರಾಸ್ತ್ರ (ಬಂದೂಕು) ಪರವಾನಗಿ ಹೊಂದಿರುವ ಪರವಾನಗಿದಾರರನ್ನು ಗುರುತಿಸಿ ಸದರಿಯವರಿಗೆ ನೋಟಿಸ್ ಜಾರಿ ಮಾಡಿ ಪರವಾನಗಿ ಹೊಂದಿರುವ ಆಯುಧಗಳನ್ನು (ಬಂದೂಕು) ದಂಡ ಪ್ರಕ್ರಿಯ ಸಂಹಿತಾ 1973 ಕಲಂ 144ರಡಿಯಲ್ಲಿ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳ ವಶಕ್ಕೆ ಕೂಡಲೇ ಪಡೆಯುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಆದೇಶಿಸಿದ್ದಾರೆ. 

      ವಿಧಾನಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು ಮಾರ್ಚ್ 29ರಿಂದ ಮೇ 15ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪರವಾನಗಿ ಪಡೆದು ಹೊಂದಿರುವ ಶಸ್ತ್ರಾಸ್ತ್ರಗಳನ್ನು (ಬಂದೂಕು) ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವ ಸಂಬಂಧ ಸ್ಕ್ರೀನಿಂಗ್ ಕಮಿಟಿ ರಚಿಸಲಾಗಿದೆ. 

      ಚುನಾವಣೆ ಘೋಷಣೆಯಾಗಿದ್ದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ಪರವಾನಗಿ ಪಡೆದು ಹೊಂದಿರುವಂತಹ ಶಸ್ತ್ರಾಸ್ತ್ರಗಳನ್ನು (ಬಂದೂಕು) ಠೇವಣಿ ಕುರಿತಂತೆ ಭಾರತ ಚುನಾವಣಾ ಆಯೋಗ ದಿನಾಂಕ 01-09-2009ರ ಪತ್ರದಲ್ಲಿ ನಿರ್ದೆಶನಗಳನ್ನು ಹೊರಡಿಸಿದೆ. ಅದರನ್ವಯ ಪರಿಶೀಲಿಸಿ ಅಧಿಕೃತವಾಗಿ ಶಸ್ತ್ರಾಸ್ತ್ರ (ಬಂದೂಕು) ಪರವಾನಗಿ ಹೊಂದಿರುವ ಪರವಾನಗಿದಾರರನ್ನು ಗುರುತಿಸಿ ಸದರಿಯವರಿಗೆ ನೋಟಿಸ್ ಜಾರಿ ಮಾಡಿ ಪರವಾನಗಿ ಹೊಂದಿರುವ ಆಯುಧಗಳನ್ನು (ಬಂದೂಕು) ದಂಡ ಪ್ರಕ್ರಿಯ ಸಂಹಿತಾ 1973 ಕಲಂ 144ರಡಿಯಲ್ಲಿ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ಸಂಬಂಧಪಟ್ಟ ಪೊಲೀಸ್ ಠಾಣಾಗಳ ವಶಕ್ಕೆ ಕೂಡಲೇ ಪಡೆಯುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

Sunday, 26 March 2023

26-03-2023 ಚಾಮರಾಜನಗರ ಸುದ್ದಿ

64ಕ್ಕೂ ಹೆಚ್ಚು ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ನೇರ ನೆರವು : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ 

 

       ಚಾಮರಾಜನಗರ. ಮಾರ್ಚ್ 26:- ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಸುಮಾರು 64ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಡಿಬಿಟಿ ಮೂಲಕ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ, ಪ್ರೋತ್ಸಾಹಧನ ಹಾಗೂ ಇತರೆ ಸೌಲಭ್ಯಗಳು ಜಮೆಯಾಗುತ್ತಿದೆ ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.


      ಗುಂಡ್ಲುಪೇಟೆಯ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.


      ಯಾವುದೇ ಅಭಿವೃದ್ದಿ ಕಾರ್ಯವು ಜನರ ಸಕ್ರಿಯ ಸಹಭಾಗಿತ್ವ ಮತ್ತು ಸಹಕಾರವಿಲ್ಲದೆ ಪೂರ್ಣವಾಗುವುದಿಲ್ಲ. ಸಧೃಢ ಭಾರತ ನಿರ್ಮಾಣಕ್ಕೆ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ, ಪ್ರಧಾನಮಂತ್ರಿ ಉಜ್ವಲ್ ಯೋಜನೆ, ರಾಷ್ಟ್ರೀಯ ಆರೋಗ್ಯ ಮಿಷನ್, ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ ಸೇರಿದಂತೆ ಹಲವು ಯೋಜನೆಗಳು ಜಾರಿಯಲ್ಲಿವೆ ಎಂದರು. 


      ಗಡಿ ಜಿಲ್ಲೆ ಚಾಮರಾಜನಗರದ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದ್ದು, ಕಳೆದ ಡಿಸೆಂಬರ್ 13ರಂದು ಮುಖ್ಯಮಂತ್ರಿಯವರು ಜಿಲ್ಲೆಗೆ ಭೇಟಿ ನೀಡಿ ಸುಮಾರು 1,099 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಚಾಮರಾಜನಗರ ಮತ್ತು ಹನೂರಿನಲ್ಲಿ ನಡೆದ ಮುಖ್ಯಮಂತ್ರಿಯವರ ಎರಡು ಕಾರ್ಯಕ್ರಮಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿದ ಜಿಲ್ಲೆಯ ಜನತೆಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು. 


      2022-23ನೇ ಸಾಲಿನಲ್ಲಿ ಪ್ರವಾಹದಿಂದ ಹಾನಿಯಾದ 1,750 ಮನೆಗಳಿಗೆ 12.78 ಕೋಟಿ ಪರಿಹಾರ ಮಂಜೂರು ಮಾಡಲಾಗಿದೆ. ಪ್ರವಾಹದಿಂದ ಹಾನಿಗೀಡಾದ 8,052 ಹೆಕ್ಟೇರ್ ವಿಸ್ತೀರ್ಣದ 14,949 ರೈತ ಫಲಾನುಭವಿಗಳಿಗೆ 15 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಸುತ್ತುನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 2,432 ಸ್ವ ಸಹಾಯ ಸಂಘಗಳಿಗೆ 35.70 ಕೋಟಿ ಸಮುದಾಯ ಬಂಡವಾಳ ನಿಧಿ ನೀಡಲಾಗಿದೆ ಎಂದರು.


      ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಇದುವರೆಗೆ 3,176 ಫಲಾನುಭವಿಗಳಿಗೆ ಒಟ್ಟು 2,541 ಲಕ್ಷ ಸಹಾಯಧನ ನೀಡಲಾಗಿದೆ. ನರೇಗಾ ಯೋಜನೆಯಡಿ ಈವರೆಗೆ 5.05 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದ್ದು 1,435 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. 


      ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಉಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸ್ವಚ್ಚತಾ ಅಭಿಯಾನದ ಮೂಲಕ ಪ್ರತಿಯೊಬ್ಬರ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಹೆಣ್ಣು ಮಕ್ಕಳ ಹಿತದೃಷ್ಠಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದರು. 


       ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಹೆಣ್ಣು ಮಕ್ಕಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹಿಳಾ ಪೂರಕ ಯೋಜನೆಗಳಿಂದ ರಾಜ್ಯದ ಉನ್ನತ ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ಮಹಿಳೆಯರು ಮುಂದಿದ್ದಾರೆ. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ ಎಂದರು. 


      ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಇತರೆ ಗಣ್ಯರು ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. ವಿವಿಧ ಇಲಾಖೆಗಳು ತೆರೆದಿದ್ದ ಯೋಜನೆ ಮಾಹಿತಿ ಮಳಿಗೆಗಳನ್ನು ಉದ್ಘಾಟಿಸಿದರು. 

     

       ವಿಧಾನಪರಿಷತ್ತಿನ ಸದಸ್ಯರಾದ ವೈ. ನಾರಾಯಣಸ್ವಾಮಿ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಪಿ. ಗಿರೀಶ್, ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್, ಸದಸ್ಯರಾದ ಜಿ.ಎಸ್. ಕಿರಣ್, ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಗೀತಾ ಹುಡೇದ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

----------

     

      ಆನೆಮಡುವಿನ ಕೆರೆಗೆ ನೀರು ತುಂಬಿಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಚಾಲನೆ 

 

       ಚಾಮರಾಜನಗರ. ಮಾರ್ಚ್ 26 - ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಆನೆಮಡುವಿನ ಕೆರೆಗೆ ನೀರು ತುಂಬಿಸುವ ಕಾಮಗಾರಿಗೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು. 


       ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆ ಅಭಿವೃಧ್ದಿಗೆ ಮೂಲ ಸೌಲಭ್ಯಗಳು ಅಗತ್ಯವಾಗಿವೆ. ಈ ನಿಟ್ಟಿನಲ್ಲಿ ಕ್ರಮ ವಹಿಸಿದ್ದು, ಇಂದು ಈ ಭಾಗದ ಜನರ ಬೇಡಿಕೆಯಂತೆ ಆನೆಮಡುವಿನ ಕೆರೆಗೆ ನೀರು ಹರಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದು ಒಳ್ಳೆಯ ಕೆಲಸ. ಇದರ ಸದುಪಯೋಗ ಮಾಡಿಕೊಳ್ಳಿ ಎಂದರು. 


      ಮುಖ್ಯಮಂತ್ರಿಗಳು ಎಲ್ಲಾ ವರ್ಗದವರಿಗು ಸಮಾನತೆ ಕೊಟ್ಟು ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಜಿಲ್ಲೆಯ ವಿವಿಧ ಗ್ರಾಮಗಳ ಮೂಲ ಸೌಕರ್ಯ ಅಭಿವೃದ್ದಿಗೆ 26.5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 100 ರಿಂದ 150 ಎಕರೆ ಜಮೀನು ಲಭ್ಯವಾದರೆ 10 ಸಾವಿರ ಎಕರೆಗೆ ನೀರಾವರಿ ಸೌಲಭ್ಯಕ್ಕೆ ಹೊಸದಾಗಿ ಕೆರೆ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು. 


      ಶಿಕ್ಷಣ, ನೀರಾವರಿ, ವಿದ್ಯುತ್ ಇನ್ನಿತರ ಸೌಕರ್ಯಗಳು ಪ್ರಗತಿಗೆ ಪೂರಕವಾಗಿವೆ. ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ನಮ್ಮೆಲ್ಲರ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.


     ರೈತ ಮುಖÀಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ ಆನೆಮಡುವಿನ ಕೆರೆಗೆ ನೀರು ಹರಿಸಲು ಮುಂದಾಗಿರುವುದರಿಂದ ಈ ಭಾಗದ ಕೃಷಿ ಪಂಪ್‍ಸೆಟ್‍ಗಳಿಗೆ ಅಂತರ್ಜಲ ಹೆಚ್ಚಳಕ್ಕೆ ಸಹಾಯವಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೆರೆಗೆ ನೀರು ತುಂಬಿಸುವ ಭರವಸೆಯನ್ನು ಈಡೇರಿಸಿದ್ದು, ಕಾಮಗಾರಿ ಆರಂಭಕ್ಕೆ ಚಾಲನೆ ದೊರೆತಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. 


       ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ, ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ಮುಖಂಡರಾದ ಎ.ಆರ್. ಬಾಲರಾಜು, ಪ್ರಭುಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ನಾಗಣ್ಣ, ರಾಮಚಂದ್ರ, ಶಿವಬಸಪ್ಪ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

     ---------


ವಸತಿ ಯೋಜನೆಗಳಲ್ಲಿ ಮೂಲಸೌಕರ್ಯಕ್ಕೆ ವಿಶೇಷ ಆದ್ಯತೆ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ 

 

       ಚಾಮರಾಜನಗರ. ಮಾರ್ಚ್ 26 - ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಸೌಲಭ್ಯವನ್ನು ಕಲ್ಪಿಸುವಾಗ ಮೂಲ ಸೌಕರ್ಯಗಳಿಗೆ ವಿಶೇಷ ಆದ್ಯತೆ ನೀಡುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.


      ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ದಿ ಕೋಶ ಮತ್ತು ನಗರಸಭೆ ವತಿಯಿಂದ ನಗರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮಹಿಳೆಯರು ಹಾಗೂ ಪೌರಕಾರ್ಮಿಕರಿಗೆ ವಿಶೇಷ ಸವಲತ್ತುಗಳು, ಮನೆಗಳ ಹಸ್ತಾಂತರ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. 


      ವಸತಿ ಯೋಜನೆ ನೀಡುವಾಗಲೇ ನೀರು, ಶೌಚಾಲಯ, ಇನ್ನಿತರ ಮೂಲ ಸೌಲಭ್ಯಗಳು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ದೂರದೃಷ್ಠಿಯಿಂದ ಬಡವರ ಕೆಲಸ ಮಾಡಿಕೊಡಬೇಕು. ಎಲ್ಲಿಯೂ ತೊಂದರೆ ಆಗದ ಹಾಗೆ ಜನರಿಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು. 


      ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ವಸತಿ ಯೋಜನೆ ಸಿಕ್ಕರೆ ಅವರ ಜೀವನದಲ್ಲಿ ಆನಂದ, ನೆಮ್ಮದಿ ಕಾಣಬಹುದು. ಭವಿಷ್ಯದ ಹಿತದೃಷ್ಠಿಯಿಂದ ಮನೆಗಳನ್ನು ನೀಡಬೇಕಾಗುತ್ತದೆ. ಒಳ್ಳೆಯ ಕಾರ್ಯದಲ್ಲಿ ಎಲ್ಲರು ತೊಡಗಿಕೊಳ್ಳೋಣ ಎಂದು ಸಚಿವರು ತಿಳಿಸಿದರು.


      ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ವಸತಿ, ಮೂಲ ಸೌಕರ್ಯಗಳು ಜನರಿಗೆ ಅತ್ಯಗತ್ಯವಾಗಿವೆ. ಮಹಿಳೆಯರಿಗೆ ಇಂದು ನೀಡಲಾಗುತ್ತಿರುವ ಹೊಲಿಗೆಯಂತ್ರಗಳಿಂದ ಆರ್ಥಿಕವಾಗಿ ಅನುಕೂಲವಾಗಲಿದೆ. ಸೌಲಭ್ಯಗಳಿಂದ ಜನರ ಜೀವನ ಹಸನಾಗಲಿ ಎಂದು ಆಶಿಸಿದರು. 


      ಇದೇ ವೇಳೆ ಗಣ್ಯರು ಮಹಿಳೆಯರಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ, ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳ ಕೀ ಹಸ್ತಾಂತರಿಸಿದರು.


      ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಉಪಾಧ್ಯಕ್ಷರಾದ ಸುಧಾ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭಾ ಸದಸ್ಯರಾದ ಮನೋಜ್ ಪಟೇಲ್, ಮಹೇಶ್, ಕಲಾವತಿ, ಶಿವರಾಜ್, ರಾಘವೇಂದ್ರ, ನಗರಸಭೆ ಪೌರಾಯುಕ್ತರಾದ ಎಸ್.ವಿ. ರಾಮ್‍ದಾಸ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

---

ಶಂಕರದೇವರ ಗುಡ್ಡದ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ 

 

       ಚಾಮರಾಜನಗರ. ಮಾರ್ಚ್ 26 - ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದ ಶಂಕರದೇವರ ಗುಡ್ಡದ ಬಳಿ ರಸ್ತೆ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದರು. 


      ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ದೇವಾಲಯದ ಭಕ್ತಾಧಿಗಳಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಬೇಕಿದೆ. ಈ ಉದ್ದೇಶದಿಂದ ರಸ್ತೆ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.


      ದೇವಾಲಯ ಸುತ್ತಮುತ್ತಲ ಪ್ರದೇಶ ಸುಂದರವಾಗಿದೆ. ದೇವಾಲಯದ ಅಭಿವೃದ್ದಿಗೆ ಆದ್ಯತೆ ನೀಡಿ ಇನ್ನಷ್ಟು ಸೌಕರ್ಯಗಳನ್ನು ನೀಡುವ ಮೂಲಕ ಹೆಚ್ಚು ಭಕ್ತಾದಿಗಳು ಬರುವಂತಾಗಬೇಕು. ಇದಕ್ಕೆ ಪೂರಕವಾಗಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. 


      ಉಪವಿಭಾಗಾಧಿಕಾರಿ ಗೀತಾ ಹುಡೇದ, ಮುಖಂಡರಾದ ಮಂಗಲ ಶಿವಕುಮಾರ್, ಉಪ್ಪಾರ ಶ್ರೀಗಳಾದ ಮಂಜುನಾಥಸ್ವಾಮಿ, ಗೌಡಿಕೆ ಮಹದೇವಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಆರ್.ಸಿ. ಕೆಂಪರಾಜು, ನಾಗು ರಮೇಶ್ ಇತರರು ಈ ಸಂದರ್ಭದಲ್ಲಿ ಇದ್ದರು.



















 

Thursday, 26 January 2023

26-01-2023 ಚಾಮರಾಜನಗರ


  ಜಗಜ್ಯೋತಿ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರಿಂದ ಭೂಮಿಪೂಜೆ 


       ಚಾಮರಾಜನಗರ, ಜನವರಿ 26:- ಜಗಜ್ಯೋತಿ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್‍ಕುಮಾರ್ ರಂಗಮಂದಿರದ ಮುಂಭಾಗ ಭೂಮಿಪೂಜೆ ನೆರವೇರಿಸಿದರು.


  ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇತಿಹಾಸ ಪುರುಷರು, ಸಾಮಾಜಿಕ ಸುಧಾರಕರ ಪುತ್ಥಳಿ ನಿರ್ಮಾಣ ಮಾಡುವಾಗ ದೂರದೃಷ್ಠಿ ಚಿಂತನೆ ಇರಬೇಕಿದೆ. ಜಿಲ್ಲಾಕೇಂದ್ರದಲ್ಲಿ ಬಸವೇಶ್ವರರ ಪುತ್ಥಳಿಯನ್ನು ಅಚ್ಚುಕಟ್ಟಾಗಿ ನಿರ್ಮಿಸಲು ಅಗತ್ಯವಿರುವ ಸಂಪೂರ್ಣ ಅನುದಾನವನ್ನು ಸರ್ಕಾರದಿಂದ ದೊರಕಿಸಲಾಗುವುದು ಎಂದರು.


ಸಮಾಜ ಸುಧಾರಣೆಗೆ ಶ್ರಮಿಸಿದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬಸವೇಶ್ವರರು ಸದಾ ಸ್ಮರಣೀಯರು. ಎಂಟುನೂರು ವರ್ಷಗಳ ಹಿಂದೆಯೇ ಬಸವಣ್ಣನವರು ಕಾಯಕ ತತ್ವದ ಮಹತ್ವ ಸಾರಿದವರು. ಸಮಾಜದ ವ್ಯವಸ್ಥೆಗೆ ಚಿಂತನೆ ನಡೆಸಿದವರು. ಬಸವೇಶ್ವರರ ಪ್ರತಿಮೆ ನಿರ್ಮಾಣಕ್ಕೆ ಪ್ರಸ್ತಾವನೆಗೆ ಅನುಮತಿ ಬಂದಿದೆ. ಈ ಹಿನ್ನೆಲೆಯಲ್ಲಿ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.


ಚಾಮರಾಜನಗರಕ್ಕೆ ಐತಿಹಾಸಿಕ ಹಿನ್ನೆಲೆ ಇದೆ. ಇಂತಹ ಸ್ಥಳದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪನೆಯಾಗುತ್ತಿದೆ. ಪುತ್ಥಳಿ ಚೆನ್ನಾಗಿ ಮೂಡಿಬರಬೇಕು. ಪುತ್ಥಳಿ ಸೇರಿದಂತೆ ಇದಕ್ಕೆ ಸಂಬಂಧಿಸಿದ ಇತರೆ ಕೆಲಸಗಳನ್ನು ಸಹ ನಿರ್ವಹಿಸಬೇಕು. ಸಾಕಷ್ಟು ಅರ್ಥಪೂರ್ಣ ಹಾಗೂ ಅಕರ್ಷಕವಾಗಿ ನಿರ್ಮಾಣ ಕಾರ್ಯ ಆಗಬೇಕು. ಈ ಹಿನ್ನೆಲೆಯಲ್ಲಿ ಅಗತ್ಯ ಸೂಚನೆ ನೀಡಲಾಗುತ್ತಿದೆ ಎಂದರು.


ಪುತ್ಥಳಿ ನಿರ್ಮಿಸುವ ಕಾರ್ಯ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಪುತ್ಥಳಿ ಅಚ್ಚುಕಟ್ಟಾಗಿ ರೂಪುಗೊಳ್ಳಬೇಕಿದ್ದು, ಉತ್ತಮ ವಾಸ್ತುಶಿಲ್ಪಿಯಿಂದ ನಿರ್ಮಾಣವಾಗಬೇಕಿದೆ. ನಿರ್ಮಾಣ ಕಾರ್ಯದ ನೀಲಿ ನಕಾಶೆ ತಯಾರಿಸಿ ಅಗತ್ಯವಿರುವ ಹೆಚ್ಚಿನ ಅನುದಾನ, ವಿವರ ಎಲ್ಲವನ್ನು ಒಂದು ವಾರದೊಳಗೆ ಸಲ್ಲಿಸಲು ಸೂಚಿಸಿದ್ದೇನೆ. ತಕ್ಷಣವೇ ಪುತ್ಥಳಿ ನಿರ್ಮಾಣ ಸಂಬಂಧ ಅಗತ್ಯ ಕ್ರಮ ವಹಿಸಲಿದ್ದು, 15ರಿಂದ 20 ದಿನದೊಳಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಣ್ಣ ಅವರು ತಿಳಿಸಿದರು.


    ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಸಮಾಜದ ಮುಖಂಡರಾದ ಮೂಡ್ಲುಪುರ ನಂದೀಶ್, ಹಂಗಳ ನಂಜಪ್ಪ, ಆಲೂರು ಮಲ್ಲು, ಆರ್, ಸುಂದರ್, ಕೆಲ್ಲಂಬಳ್ಳಿ ಸೋಮನಾಯ್ಕ, ದಯಾನಿಧಿ, ಕೊತ್ತಲವಾಡಿ ಕುಮಾರ್, ಬಿ.ಕೆ. ರವಿಕುಮಾರ್, ಡಿ. ನಾಗೇಂದ್ರ, ನಾಗೇಶ್, ಗುಂಡ್ಲುಪೇಟೆ ಸುರೇಶ್, ಕಾಳನಹುಂಡಿ ಗುರುಸ್ವಾಮಿ, ರತ್ನಮ್ಮ ಬಸವರಾಜು, ವಿಶ್ವನಾಥ್, ಲೋಕೇಶ್, ಗುರುಸ್ವಾಮಿ, ಪುರುಷೋತ್ತಮ್, ಮಂಗಲ ಶಿವಕುಮಾರ್, ಹೊಸೂರು ನಟೇಶ್, ಸ್ವಾಮಿ, ಇತರರು ಇದ್ದರು.


ಮುಖ್ಯಮಂತ್ರಿಗಳ ಗ್ರಾಮಿಣ ನಿವೇಶನ ಯೋಜನೆಯಡಿ 1200 ನಿವೇಶನ ಹಂಚಿಕೆಗೆ ಕ್ರಮ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ 


       ಚಾಮರಾಜನಗರ, ಜನವರಿ 26 :- ಮುಖ್ಯಮಂತ್ರಿಗಳ ಗ್ರಾಮೀಣ ನಿವೇಶನ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಸ್ತುತ 60 ಎಕರೆ ಜಮೀನು ಲಭ್ಯವಿದ್ದು, ಸದರಿ ಜಮೀನಿನಲ್ಲಿ ಅರ್ಹ ನಿವೇಶನ ರಹಿತರಿಗೆ 1200 ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲಾಗುತ್ತಿದ್ದು, ಈಗಾಗಲೇ 174 ಫಲಾ£ುÀಭವಿಗಳಿಗೆ ಹಕ್ಕುಪತ್ರವನ್ನು ನೀಡಲಾಗಿದೆ ಎಂದು ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.


ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿರತ ವತಿಯಿಂದ ಆಯೋಜಿಸಲಾಗಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು.


ವಿವಿಧ ವಸತಿ ಯೋಜನೆಯಡಿ ಪ್ರಸ್ತುತ ಸಾಲಿಗೆ 4920 ಫಲಾನುಭವಿಗಳ ಆಯ್ಕೆ ಗುರಿ ನಿಗಧಿಪಡಿಸಿ, ಒಟ್ಟು 4663 ಫಲಾನುಭವಿಗಳಿಗೆ ಮನೆ ಮಂಜೂರಾತಿ ಕಾಮಗಾರಿ ಪತ್ರ ನೀಡಲಾಗಿದೆ. ಪ್ರಗತಿಯಲ್ಲಿದ್ದ 11,667 ಮನೆಗಳ ಪೈಕಿ ಈ ಸಾಲಿನಲ್ಲಿ 3135 ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.


ವಸತಿ ಫಲಾನುಭವಿಗಳು ತಮ್ಮ ನಿವೇಶನವನ್ನು ಸರ್ಕಾರಕ್ಕೆ ಅಡಮಾನ ಇಡುವುದರಿಂದ ಅನುಭವಿಸುತ್ತಿದ್ದ ತೊಂದರೆಯನ್ನು ಮನಗಂಡು ಅಡಮಾನಕ್ಕೆ ಸಂಪೂರ್ಣ ವಿನಾಯಿತಿ ನೀಡಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ವಸತಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿಯನ್ನು ಗಾವ್ರಿುೀಣ ಪ್ರದೇಶದಲ್ಲಿ ರೂ. 1.20 ಲಕ್ಷ ಕ್ಕೆ ಹಾಗೂ ನಗರ ಪ್ರದೇಶದಲ್ಲಿ ರೂ. 2 ಲಕ್ಷಕ್ಕೆ ಏರಿಸಲಾಗಿದೆ ಎಂದರು


ಭಾರತವು ಸಾರ್ವಭೌಮ ಗಣತಂತ್ರ ದೇಶ ಎಂದು ಘೋಷಿಕೊಂಡು ಇದೀಗ 73 ವರ್ಷಗಳು ಸಂದಿವೆ. ಸಂವಿಧಾನವನ್ನು ಅಳವಡಿಸಿಕೊಂಡ ಉದ್ದೇಶವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಮೂಲಭೂತ ಹಕ್ಕುಗಳಾದ ಸ್ವಾತಂತ್ರ್ಯ, ಸಮಾನತೆ, ಜೊತೆಗೆ ಧಾರ್ಮಿಕ, ಸಾಂಸ್ಕøತಿಕ, ಶೈಕ್ಷಣಿಕ ಮತ್ತು ಇತರೆ ಹಕ್ಕುಗಳನ್ನು ನೀಡುವುದಾಗಿದೆ. ಬಲಿಷ್ಠ ಒಕ್ಕೂಟ ಸರ್ಕಾರವನ್ನು ರೂಪಿಸುವ ಅತ್ಯುತ್ತಮ ಮಾದರಿ ಸಂವಿಧಾನವನ್ನು ಅಳವÀಡಿಸಿಕೊಂಡಿರುವುದು ನಮ್ಮ ದೇಶದ ಹೆಮ್ಮೆಯ ಸಂಕೇತ. ಭಾರತ  ಸಂವಿಧಾನವು ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ. ಇದು ಡಾ. ಬಿಆರ್. ಅಂಬೇಡ್ಕರ್‍ರವರ ಅವಿರತ ಶ್ರಮದ ಫಲ. ಅದಕ್ಕಾಗಿಯೇ ನಾವು ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು “ಸಂವಿಧಾನ ಶಿಲ್ಪಿ” ಎಂದು ಸ್ಮರಿಸುತ್ತೇವೆ. ಸಂವಿಧಾನ ಕರಡು ಸಮಿತಿಯ ಸಲಹೆಗಾರರಾಗಿದ್ದ ಕನ್ನಡಿಗ ಬೆನಗಲ್ ನರಸಿಂಗರಾವ್ ಅವರ ಕೊಡುಗೆಯೂ ಇಲ್ಲಿ ಸ್ಮರಣಾರ್ಹವಾಗಿದೆ ಎಂದರು.


      ಗಣರಾಜ್ಯದ ಈ 73 ವರ್ಷಗಳಲ್ಲಿ ದೇಶವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದೆ. ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಾರ್ವಜನಿಕ ಆರೋಗ್ಯ, ಶಿಕ್ಷಣ, ಮೂಲಸೌಕರ್ಯ, ಪರಿಸರ ರಕ್ಷಣೆ, ಶಾಂತಿ ಪಾಲನೆ ಜೊತೆಗೆ ನೆಲ-ಜಲ, ಸಂಸ್ಕøತಿ ಹಾಗೂ ಪರಂಪರೆಯ ಸಂರಕ್ಷಣೆ ಹೀಗೆ ದೇಶವು ವಿವಿಧ ಆಯಾಮಗಳಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಭಾರತದ ಕೀರ್ತಿ ವಿಶ್ವಾದ್ಯಂತ ಹರಡಿದೆ. ಕರ್ನಾಟಕದ ಪಾಲಿಗೆ ಅಭಿವೃದ್ಧಿಯಲ್ಲಿ ಸುವರ್ಣಯುಗ ಪ್ರಾರಂಭವಾಗಿದೆ. ನಮ್ಮ ಸರ್ಕಾರದ ಯೋಜನೆ ಹಾಗೂ ಕಾರ್ಯಕ್ರಮಗಳು ಕರ್ನಾಟಕದ ಚಿತ್ರಣ ಬದಲಿಸಲಿದೆ. ಅರೋಗ್ಯ, ಶಿಕ್ಷಣ, ವಸತಿ, ಕೈಗಾರಿಕೆ, ಕೃಷಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಮೂಲಸೌಕರ್ಯ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯಗಳಲ್ಲಿ ಪ್ರಗತಿಯತ್ತ ಸಾಗಿದೆ ಎಂದು ಸಚಿವರು ತಿಳಿಸಿದರು. 


      ರಾಜ್ಯದ ಜನತೆಯ ಆಶಯ ಸಾಕಾರಗೊಳಿಸಲು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ಕಟಿಬದ್ದವಾಗಿದೆ. ನವ ಭಾರತ-ನವ ಕರ್ನಾಟಕ ನಿರ್ಮಾಣಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸಿದೆ. ರೈತ ವಿದ್ಯಾನಿಧಿ ಯೋಜನೆಯಡಿ 10 ಲಕ್ಷ ರೈತ ವಿದ್ಯಾರ್ಥಿಗಳಿಗೆ 440 ಕೋಟಿ ರೂ.  ಗಳ ವಿದ್ಯಾರ್ಥಿವೇತನ, ರೈತ ಶಕ್ತಿ ಯೋಜನೆಯಡಿ ರೂ. 400 ಕೋಟಿ ಡೀಸೆಲ್ ಸಹಾಯಧನÀ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಇದುವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಂದಾಜು 1.05 ಕೋಟಿ ರೈತ ಫಲಾನುಭವಿಗಳಿಗೆ 14790 ಕೋಟಿ ರೂ. ಗಳ ಆರ್ಥಿಕ ನೆರವು, ಕಳೆದ ಎರಡು ವರ್ಷಗಳಲ್ಲಿ 33.21 ಲಕ್ಷ ರೈತರಿಗೆ 5644 ಕೋಟಿ ರೂ.ಗಳ ಬೆಳೆ ಪರಿಹಾರ, ವಿವಿಧ ವಸತಿ ಯೋಜನೆಯಡಿ 5 ಲಕ್ಷ ಹೊಸ ಮನೆಗಳ ಗುರಿ, 1412 ಕೋಟಿ ರೂಗಳ ವೆಚ್ಚದಲ್ಲಿ 8100ಕ್ಕೂ ಹೆಚ್ಚು ಶಾಲಾ ಕೊಠಡಿಗಳ ನಿರ್ಮಾಣ, ಕಟ ್ಟಡ ಕಾರ್ಮಿಕರ ಶ್ರೇಯೋಭಿವೃದ್ದಿಗೆ 2610 ಕೋಟಿ ರೂ.ಗಳ ಯೋಜನೆ, ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸಲು ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 504 ಕೋಟಿ ರೂ.ಗಳ ವೆಚ್ಚದÀ “ಕ್ರೀಡಾ ಅಂಕಣ” ನಿರ್ಮಾಣ, ಇತ್ಯಾದಿ ಜನಪರ ಯೋಜನೆಗಳು ನಮ್ಮ ಸರ್ಕಾರದÀ ದೂರದೃಷ್ಠಿ ಮತ್ತು ಅಭಿವೃದ್ಧಿ ಪರ ಚಿಂತನೆಗೆ ಸಾಕ್ಷಿಯಾಗಿವೆ ಎಂದರು.


    ದೇಶದ ರಕ್ಷಣೆಯಲ್ಲಿ ತಮ್ಮ ಬದುಕನ್ನೇ ಮುಡುಪಾಗಿಡುವ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗೆ ಸರ್ಕಾರವು ಬದ್ದವಾಗಿದ್ದು, ರಾಜ್ಯದ ಸೈನಿಕರು ಸೇವೆಯಲ್ಲಿದ್ದಾಗ ಮೃತಪಟ್ಟರೆ ಅವರ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ. ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಕ್ಷೇತ್ರದಲ್ಲೂ ಸಹ ಗಣನೀಯ ಸಾಧನೆ ಮಾಡಲಾಗಿದೆ. ವಿವಿಧ ವಸತಿ ಯೋಜನೆಯಡಿ ಕಳೆದ 3 ವರ್ಷಗಳಲ್ಲಿ ಸುಮಾರು 5 ಲಕ್ಷ ಮನೆಗಳನ್ನು ನಿರ್ಮಿಸಲಾಗಿದ್ದು, ಈ ಮನೆಗಳ ಫಲಾನುಭವಿಗಳಿಗೆ ಸುಮಾರು 7300 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ. ನೆರೆ ಹಾವಳಿಯಿಂದ ಸಂತ್ರಸ್ಥರಾದ ಸುಮಾರು 1.75 ಲಕ್ಷ ಮನೆಗಳಿಗೆ ಮೊದಲ ಬಾರಿಗೆ ಜಿ.ಪಿ.ಎಸ್ ತಂತ್ರಜ್ಞಾನ ಅಳವಡಿಸಿ ರೂ. 2456 ಕೋಟಿ ಪರಿಹಾರ ನೇರವಾಗಿ ಸಂತ್ರಸ್ಥರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು. 


      ರಾಜ್ಯದಲ್ಲಿ ಸುಮಾರು 5 ಸಾವಿರ ಎಕರೆ ಜಮೀನನ್ನು ವಸತಿ ನಿವೇಶನಗಳ ಅಭಿವೃದ್ಧಿಗಾಗಿ ಕಾಯ್ದಿರಿಸಲಾಗಿದ್ದು, ಸುಮಾರು 1.50 ಲಕ್ಷ ನಿವೇಶನಗಳ ಹಂಚಿಕೆಗೆ ಕ್ರಮ ವಹಿಸಲಾಗಿದೆ. ರಾಜ್ಯದ 1821 ಘೋಷಿತ ಕೊಳಗೇರಿಗಳ 3.37 ಲಕ್ಷ ಕುಟುಂಬಗಳಿಗೆ ಅವರ ಸ್ವತ್ತಿನ ಭೂ ಮಾಲೀಕತ್ವದ ಹಕ್ಕನ್ನು ಕ್ರಯ ಪತ್ರದ ಮೂಲಕ ನೀಡುವ ಐತಿಹಾಸಿಕ ತೀರ್ಮಾನ ಮಾಡಿ  ಈಗಾಗಲೇ ಸುಮಾರು 1.68 ಲಕ್ಷ ಕುಟುಂಬಗಳ ಸಮೀಕ್ಷೆ ಕೈಗೊಂಡು, 90 ಸಾವಿರಕ್ಕೂ ಹೆಚ್ಚಿನ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡಿ, ನೋಂದಣಿ ಮಾಡಿ ಭೂಮಾಲೀಕತ್ವ ನೀಡಲಾಗಿದೆ ಎಂದರು. 


  ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯಡಿ ಶಿವಮೊಗ್ಗ, ಹಾಸನ ಮತ್ತು ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ರಾಯಚೂರಿನಲ್ಲಿ 219 ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆÉಗೆ 240 ಎಕರೆ ಜಮೀನನ್ನು ಸ್ವಾಧೀನಪಡಿಸಲು ಅನುಮೋದನೆ ನೀಡಿದ್ದು, ಈಗಾಗಲೇ 50 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಅಲ್ಲದೇ, ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲು ಸಚಿವ ಸಂಪುಟದ ಅನುಮೋದನೆಯನ್ನು ನೀಡಲಾಗಿದೆ ಎಂದು ಸಚಿವರು ತಿಳಿಸಿದರು. 


  ಸುಮಾರು 15767 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, 148 ಕಿ.ಮೀ. ಉದ್ದದ ರೈಲ್ವೆ ಜಾಲವನ್ನು 2026ರ ಒಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಚಾಮರಾಜನಗರ ಜಿಲ್ಲೆಯು ಪ್ರಕೃತಿ ಸೌಂದರ್ಯದ ಹಾಗೂ ಜಾನಪದ ಕಲೆಗಳ ತವರೂರಾಗಿದ್ದು, ಮಲೆ ಮಹದೇಶ್ವರಸ್ವಾಮಿ, ಮಂಟೇಸ್ವಾಮಿ ಹಾಗೂ ಬಿಳಿಗಿರಿರಂಗನಾಥಸ್ವಾಮಿಯ ಬಗ್ಗೆ ಜಾನಪದ ಮಹಾ ಕಾವ್ಯಗಳನ್ನು ಜಗತ್ತಿಗೆ ಕೊಟ್ಟ ಹೆಮ್ಮೆಯ ಜಿಲ್ಲೆಯಾಗಿದೆ. ಎರಡು ಹುಲಿ ಸಂರಕ್ಷಿತ ಪ್ರದೇಶ, ಎರಡು ವನ್ಯಜೀವಿಧಾಮಗಳನ್ನು ಹೊಂದಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಜಿಲ್ಲೆ ಎಂದು ಪ್ರಸಿದ್ದಿಯಾಗಿದೆ. ಸ್ವಾತಂತ್ರ್ಯ ಹೋರಾಟಗಾರರಾದ ದೊಡ್ಡರಾಯಪೇಟೆ ಶಂಕರಪ್ಪ, ರಾಮಸಮುದ್ರ ಆರ್.ಎಸ್. ಶ್ರೀನಿವಾಸರಾವ್, ಕರಿನಂಜನಪುರ ತೋಟದಪ್ಪ, ಶ್ರೀಮತಿ ಲಲಿತ ಜಿ. ಟ್ಯಾಗೇಟ್‍ರವರು ಈ ಜಿಲ್ಲೆಯವರು. ಕರ್ನಾಟಕ ರತ್ನ ವರನಟ ಡಾ. ರಾಜ್‍ಕುಮಾರ್ ಹಾಗೂ ಡಾ. ಪುನೀತ್ ರಾಜ್‍ಕುಮಾರ್‍ರವರು ನಮ್ಮ ಜಿಲ್ಲೆಯವರು ಎಂಬುದು ನಮಗೆ ಹೆಮ್ಮೆ. ಗಡಿ ಜಿಲ್ಲೆಯಾದ ಚಾಮರಾಜನಗರದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ನುಡಿದರು.


ದಿನಾಂಕ:13.12.2022ರಂದು ರಾಜ್ಯದ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಜಿಲ್ಲೆಗೆ ಭೇಟಿ ನೀಡಿ, ಒಟ್ಟು 1099 ಕೋಟಿಗಳಷ್ಟು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಜಿಲ್ಲೆಯ ಸಮಸ್ತ ನಾಗರಿಕರಿಗೆ ಮತ್ತು ಜನಪ್ರತಿನಿಧಿಗಳಿಗೆ ಮತ್ತೊಮ್ಮೆ ಹೃದಯಪೂರ್ವಕ ವಂದನೆಗಳು. ಭಾರತÀದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನೆಪಿಗಾಗಿ “ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ” ಜಿಲ್ಲೆಯಲ್ಲಿ 15 ಗ್ರಾಮ ಪಂಚಾಯಿತಿಗಳ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಅಗತ್ಯವಿರುವ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. 150 ಕೆರೆಗಳನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಜಿಲ್ಲೆಯ 130 ಗ್ರಾಮ ಪಂಚಾಯತಿಗಳ ಕೆರೆ ಅಭಿವೃದ್ದಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.


ಹರ್‍ಘರ್ ತಿರಂಗಾ ಯೋಜನೆಯಡಿ ಜಿಲ್ಲೆಯಲ್ಲಿ 112 ಸ್ವ-ಸಹಾಯ ಸಂಘಗಳ 223 ಮಹಿಳಾ ಸದಸ್ಯರು 130 ಗ್ರಾಮ ಪಂಚಾಯತಿಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ 80 ಸಾವಿರ ರಾಷ್ಟ್ರಧ್ವಜಗಳನ್ನು ತಯಾರಿಸಿ ಮಾರಾಟ ಮಾಡುವುದರೊಂದಿಗೆ ಮಹಿಳಾ ಸದಸ್ಯರಿಗೆ ಆರ್ಥಿಕ ಸದೃಢತೆ ಸಾಧಿಸಲು ನೆರವಾಗಿದೆ. 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ 1750 ಮನೆಗಳಿಗೆ ಒಟ್ಟು 12.78 ಕೋಟಿ ರೂಪಾಯಿಗಳ ಪರಿಹಾರವನ್ನು ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ 8052 ಹೆಕ್ಟೇರ್ ವಿಸ್ತೀರ್ಣದ 14,949 ರೈತ ಫಲಾನುಭವಿಗಳಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆ ಪರಿಹಾರವಾಗಿ ರೂ. 15 ಕೋಟಿಗಳನ್ನು ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು. 


 ಗ್ರಾಮ ಒನ್ ಯೋಜನೆಯು ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಜಿಲ್ಲೆಯಲಿ ್ಲ 121 ಕೇಂದ್ರಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಯವರೆಗೆ 2.64 ಲಕ್ಷ ಸೇವೆಗಳನ್ನು ಒದಗಿಸಲಾಗಿದೆ. ‘ಸುತ್ತು ನಿಧಿ ಯೋಜನೆಯಡಿ’ ಪ್ರತಿ ಸ್ವ-ಸಹಾಯ ಸಂಘಕ್ಕೆ ರೂ. 15 ಸಾವಿರ ಗಳಂತೆ 138 ಸ್ವ-ಸಹಾಯ ಗುಂಪುಗಳಿಗೆ ರೂ. 20 ಲಕ್ಷ ಗಳ ಸುತ್ತು ನಿಧಿಯನ್ನು ಹಾಗೂ ಸಮುದಾಯ ಬಂಡವಾಳ ನಿಧಿಯಡಿ 2349 ಸ್ವ-ಸಹಾಯ ಸಂಘಗಳಿಂದ 9015 ಫಲಾನುಭವಿಗಳಿಗೆ ರೂ. 33 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ನೀಡಲಾಗಿದೆ ಎಂದರು.


ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 53 ಸಾವಿರ ಕುಟುಂಬಗಳಿಗೆ 87 ಸಾವಿರ ಉದ್ಯೋಗ ನೀಡಲಾಗಿದ್ದು, ಈವರೆಗೆ ರೂ. 116 ಕೋಟಿ ವೆಚ್ಚ ಮಾಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುವರಿ 14062 ವೈಯಕ್ತಿಕ ಗೃಹ ಶೌಚಾಲಯಗಳನ್ನು ಪೂರ್ಣಗೊಳಿಸಲಾಗಿದ್ದು, ಒಟ್ಟಾರೆ ಜಿಲ್ಲೆಯಾದ್ಯಂತ ಈವರೆಗೆ ಸುಮಾರು 2 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಈಡಾಗುವ ರೈತರನ್ನು ಅನಿಶ್ಚಿತತೆಯಿಂದ ಪಾರುಮಾಡಲು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆ ಜಾರಿಗೊಳಿಸಲಾಗಿದ್ದು, ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕವಾಗಿ ಒಟ್ಟಾರೆ ರೂ. 10 ಸಾವಿರ ಆರ್ಥಿಕ ನೆರವು ನೀಡಲಾಗುತ್ತಿದ್ದು, ಈ ಸಾಲಿನಲ್ಲಿ 1.15 ಲಕ್ಷ ರೈತರು ಆರ್ಥಿಕ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು “ಮುಖ್ಯ ಮಂತ್ರಿ ರೈತ ವಿದ್ಯಾ ನಿಧಿ” ಯೋಜನೆಯಡಿ ಇದುವgರೆಗೆ ಜಿಲ್ಲೆಯ 11144 ರೈತರ ಮಕ್ಕಳ ಖಾತೆಗೆ ರೂ. 4.15 ಕೋಟಿ ಜಮೆ ಮಾಡಲಾಗಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು. 


ಪ್ರಧಾನಮಂತ್ರಿ ಆzರ್ಶ ಗ್ರಾಮ ಯೋಜನೆಯಡಿ 19 ಗ್ರಾಮಗಳನ್ನು ಆಯ್ಕೆಮಾಡಿ ರೂ. 3.47 ಕೋಟಿಗಳ ಅನುದಾನದಲ್ಲಿ ಮೂಲಸೌಕರ್ಯ, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ರೂ. 1.75 ಕೋಟಿಗಳ ವೆಚ್ಚದಲ್ಲಿ ದಿ. ಬಿ. ರಾಚಯ್ಯ ಸ್ಮಾರಕ ಭವನ ನಿರ್ಮಾಣ ಹಾಗೂ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ರೂ. 16 ಕೋಟಿ ವಿದ್ಯಾರ್ಥಿವೇತನವನ್ನು ನೀಡಲಾಗಿದೆ ಎಂದರು. 


ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ಜಿಲ್ಲೆಯ ಗ್ರಾಮೀಣ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗಾಗಿ ಒಟ್ಟು ರೂ. 94 ಕೋಟಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ ಉದ್ದದ 24 ರಸ್ತೆಗಳನ್ನು ಅಭಿವೃದ್ದಿಪಡಿಸಲು ರೂ. 143 ಕೋಟಿಗಳ ಅನುದಾನ ಮಂಜೂರಾಗಿದ್ದು, ಈಗಾಗಲೇ ರೂ. 62 ಕೋಟಿಗಳ ಮೊತ್ತದಲ್ಲಿ 57 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಿಸಲಾಗಿದೆ. ಜಿಲ್ಲಾ ಮುಖ್ಯರಸ್ತೆ ಸುಧಾರಣೆಗಳ ಅಡಿಯಲ್ಲಿ ಒಟ್ಟು 84 ಕಿ.ಮೀ ಉದ್ದದ 27 ರಸ್ತೆಗಳನ್ನು ಅಭಿವೃದ್ದಿಪಡಿಸಲು ರೂ. 70 ಕೋಟಿಗಳ ಅನುದಾನ ಮಂಜೂರಾಗಿದ್ದು, 46 ಕಿ.ಮೀ ಉದ್ದದ ರಸ್ತೆ ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು. 


ವಿಶೇಷ ಘಟಕ ಯೋಜನೆಯಡಿಯಲ್ಲಿ ರೂ. 18 ಕೋಟಿಗಳ ಅನುದಾನದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣ ಕಾಮಗಾರಿಯನ್ನು ಅನುಷ್ಟಾನ ಮಾಡಲಾಗುತ್ತಿದೆ. ಗಿರಿಜನ ಉಪಯೋಜನೆ ಅಡಿಯಲ್ಲಿ 6.50 ಕೋಟಿ ರೂ. ಗಳ ಅನುದಾನದಲ್ಲಿ ಹನೂರು ತಾಲ್ಲೂಕಿನಲ್ಲಿ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ಅನುಷ್ಟಾನ ಮಾಡಲಾಗುತ್ತಿದೆ. ನಗರೋತ್ಥಾನ ಯೋಜನೆಯಡಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 715 ಕೋಟಿ ರೂ. ಗಳ ಅನುದಾನ ನಿಗಧಿಪಡಿಸಿದ್ದು, 608 ಕೋಟಿ ರೂ.ಗಳ 75 ಕಾಮಗಾರಿಗಳ ಕ್ರಿಯಾಯೋಜನೆ ಅನುಮೋದನೆಯಾಗಿದೆ. ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿ 50 ಕೋಟಿ ರೂ.ಗಳ ಅನುದಾನದ 24 ಕಾಮಗಾರಿಗಳಲ್ಲಿ 17 ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. 


ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಿರುವ 37 ಡೊಂಗ್ರಿ ಗೆರೆಸಿಯಾ ಜನಾಂಗದ ಕುಟುಂಬಗಳಿಗೆ ಹೊಸಮನೆ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯ ಹಾಗೂ ವಿದ್ಯುತ್ ಸರಬರಾಜು ಮಾಡಲು ಒಟ್ಟು ರೂ. 1.80 ಕೋಟಿಗಳ ಅನುದಾನ ಮಂಜೂರಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಭಾಗ್ಯಲಕ್ಷ್ಮಿ ಯೋಜನೆಯನ್ನು ಮರುವಿನ್ಯಾಸಗೊಳಿಸಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆ ಮೂಲಕ ಜಿಲ್ಲೆಯಲ್ಲಿ ಈವರೆಗೆ 70027 ಫಲಾನುಭವಿಗಳಿಗೆ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.


ಹನೂರು, ಗುಂಡ್ಲುಪೇಟೆ, ಕೊಳ್ಳೇಗಾಲ ಮತ್ತು ಯಳಂದೂರು ತಾಲ್ಲೂಕುಗಳ ವ್ಯಾಪ್ತಿಯಲಿ ್ಲ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಒಟ್ಟು 290 ಗ್ರಾಮಗಳಿಗೆ ಅಂದಾಜು ಮೊತ್ತ 406 ಕೋಟಿ ರೂ. ಗಳ ಕಾಮಗಾರಿಯು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ. ಹನೂರು, ಕೊಳ್ಳೇಗಾಲ ಮತ್ತು ಯಳಂದೂರು ತಾಲ್ಲೂಕುಗಳ 373 ಜನವಸತಿಗಳ ಒಟ್ಟು 88522 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕವನ್ನು ಕಲ್ಪಿಸಲು 228 ಕೋಟಿ ರೂ.ಗಳ ಯೋಜನೆ ಕೈಗೆತ್ತಿಕೊಂಡಿದ್ದು, ಇದುವರೆಗೆ 38,678 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದರು. 


ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 25 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಒಟ್ಟು ರೂ. 40 ಕೋಟಿ ಬಂಡವಾಳವನ್ನು ನಿರೀಕ್ಷಿಸಲಾಗಿದೆ. ಇದರಿಂದ 462 ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಜಿಲ್ಲೆಯಲ್ಲಿ ಆಯೋಜಿಸಿದ್ದ ಉದ್ಯೋಗಮೇಳದಲ್ಲಿ 33 ಖಾಸಗಿ ಕಂಪನಿಗಳು ಭಾಗವಹಿಸಿದ್ದು, 107 ಉದ್ಯೋಗಾಕಾಂಕ್ಷಿಗಳು ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆದಿರುತ್ತಾರೆ. 120 ಅ¨Às್ಯರ್ಥಿಗಳು ಅಂತಿಮ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ. ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳನ್ನು ಒಗ್ಗೂಡಿಸಿ, ಆರ್ಥಿಕ ಹಾಗೂ ಸಾಮಾಜಿಕ ಸದೃಢತೆಯನ್ನು ಸರ್ವರಿಗೂ ನೀಡಿ, ನಾಡನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ನಮ್ಮ ಗುರಿ ಎಂದು ಸಚಿವರು ನುಡಿದರು.


ಗಣತಂತ್ರ ವ್ಯವಸ್ಥೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವು ಜನರ ಸಕ್ರಿಯ ಸಹಭಾಗಿತ್ವ ಮತ್ತು ಸಹಕಾರ ಇಲ್ಲದೆ ಅರ್ಥಪೂರ್ಣವಾಗಲಾರದು. ಬಲಿಷ್ಠ ಭಾರತದ ನಿರ್ಮಾಣದ ಸಂಕಲ್ಪ ತೊಟ್ಟು ದಿನದ 24 ಗಂಟೆ ಪ್ರಜಾ ಸೇವಕನಂತೆ ದುಡಿಯುತ್ತಿರುವ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರಮೋದಿ ಅವರ ಕೈ ಬಲಪಡಿಸುವುದರ ಜತೆಗೆ ಶಕ್ತ್ತಿಶಾಲಿ ಕರ್ನಾಟಕ ನಿರ್ಮಾಣಕ್ಕೆ ನಾವೆಲ್ಲರೂ ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಪ್ರತಿಜ್ಞೆ ಮಾಡೋಣ. ಬಾಹ್ಯ ಶಕ್ತಿ ಅಷ್ಟೇ ಅಲ್ಲದೆ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡುವ ಘಾತುಕ ಶಕ್ತಿಗಳ ಬಗ್ಗೆ ಜಾಗೃತರಾಗೋಣ. ಎಂತಹ ಪರಿಸ್ಥಿತಿಯಲ್ಲೂ ದೇಶ ಹಾಗೂ ನಮ್ಮ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡೋಣ. ಏಕತೆ ಮತ್ತು ಅಖಂಡತೆ ನಮ್ಮ ಮಂತ್ರವಾಗಬೇಕು ಎಂದರು.


ಜಗತ್ತಿನಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಕರ್ನಾಟಕಕ್ಕೆ ಇದರಲ್ಲಿ ವಿಶೇಷ ಸ್ಥಾನಮಾನವಿದೆ. ಬಹು ಸಂಸ್ಕøತಿ - ಬಹು ಭಾಷೆ ನಮ್ಮ ವಿಶೇಷತೆ. ಸಂಕುಚಿತ ಭಾವನೆ, ಪ್ರಾದೇಶಿಕ ಅಸಮಾನತೆ, ಇತ್ಯಾದಿ ವಿಷಯಗಳನ್ನು ಬದಿಗೊತ್ತಿ ದೇಶದ ಸಮಗ್ರತೆ ಮತ್ತು ಅಖಂಡತೆಯ ನೆರಳಿನಲ್ಲಿ ಅನಕ್ಷರತೆ, ಬಡತನ, ನಿರುದ್ಯೋಗ ನಿರ್ಮೂಲನೆಗೊಳಿಸುವಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ. ಈ ದಿಸೆಯಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. 









01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು