Saturday, 21 January 2023

21-01-2023 ಚಾಮರಾಜನಗರ ಸುದ್ದಿ



ಅಂಬಿಗರ ಚೌಡಯ್ಯನವರ ವಚನಗಳು ಪ್ರಸ್ತುತ ಸಮಾಜಕ್ಕೂ ಅವಶ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ 


      ಚಾಮರಾಜನಗರ, ಜನವರಿ 21 - ಮೂಡನಂಬಿಕೆಗಳ ವಿರುದ್ದ ತಮ್ಮ ವಚನಗಳ ಮೂಲಕ ಧ್ವನಿ ಎತ್ತಿದ ಅಂಬಿಗರ ಚೌಡಯ್ಯನವರ ವಚನಗಳು ಪ್ರಸ್ತುತ ಸಮಾಜಕ್ಕೂ ಅವಶ್ಯಕವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅಭಿಪ್ರಾಯಪಟ್ಟರು. 


     ನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


     ಬಸವಣ್ಣನವರ ಸಮಕಾಲೀನವರಾಗಿದ್ದ ಅಂಬಿಗರ ಚೌಡಯ್ಯ ಅವರು ವೃತ್ತಿಯಲ್ಲಿ ಅಂಬಿಗರಾಗಿದ್ದರೂ ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದಿದ ಶರಣರು. ಸಮಾಜದಲ್ಲಿದ್ದ ಮೂಡನಂಬಿಕೆಗಳ ವಿರುದ್ದ ತಮ್ಮ ವಚನಗಳ ಮೂಲಕ ಧ್ವನಿ ಎತ್ತಿದವರು ಎಂದರು.


     12ನೇ ಶತಮಾನದಲ್ಲಿ ಅಂಬಿಗರ ಚೌಡಯ್ಯನವರು ರಚಿಸಿದ ವಚನಗಳು ನೇರವಾಗಿದ್ದವು. ಇವರ ವಿಚಾರ ಮೌಲ್ಯಗಳು ಎಲ್ಲರಿಗೂ ತಲುಪಬೇಕಿದೆ. ಪ್ರಸ್ತುತ ಸಮಾಜಕ್ಕೆ ಇವರ ವಚನಗಳು ಅವಶ್ಯಕವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.


     ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ಅಂಬಿಗರ ಚೌಡಯ್ಯನವರ ಜಯಂತಿ ಕೇವಲ ಆಚರಣೆಗಷ್ಟೇ ಸೀಮಿತವಾಗಬಾರದು. ಅವರ ವಚನಗಳ ಸಾರ ನಮಗೆ ದಾರಿ ದೀಪವಾಗಬೇಕು. ಅಂದಿನ ಕಾಲದಲ್ಲೇ ಅಂಬಿಗರ ಚೌಡಯ್ಯನವರ ವಚನಗಳು ಪರಿಣಾಮಕಾರಿಯಾಗಿ ಸದ್ದು ಮಾಡಿದವು ಎಂದರು.


     ಚಾಮರಾಜನಗರ ಆದರ್ಶ ವಿದ್ಯಾಲಯದ ಶಿಕ್ಷಕರಾದ ಬಿ. ಅರ್ಕಪ್ಪ ಅವರು ಉಪನ್ಯಾಸ ನೀಡಿ ಸಮಾಜದ ಕಂದಾಚಾರ, ಮೂಢನಂಬಿಕೆ, ಅಸಮಾನತೆ, ಬಡವ ಶ್ರೀಮಂತ ಎಂಬ ಭೇದಭಾವಗಳ ಮಧ್ಯೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ವಿಚಾರ ಮೌಲ್ಯಗಳನ್ನು ವಚನಗಳಲ್ಲಿ ಸಾರಿದ ಅಂಬಿಗರ ಚೌಡಯ್ಯ ವಚನಕ್ರಾಂತಿಕಾರರಾಗಿದ್ದಾರೆ ಎಂದರು. 


     ಕಾಯಕ ನೋಡಿ ಜಾತಿಯನ್ನು ನಿಧರ್Àರಿಸುತ್ತಿದ್ದ ಸಮಾಜದಲ್ಲಿ ತಮ್ಮ ಸತ್ಯವಾದ ವಚನಗಳಿಂದಲೇ ಮುನ್ನೆಲೆಗೆ ಬಂದವರು ಅಂಬಿಗರ ಚೌಡಯ್ಯನವರು. ಯಾರನ್ನು ಕೀಳಾಗಿ ಕಾಣಬಾರದು. ಎಲ್ಲಾ ವೃತ್ತಿಗೂ ಅದರದ್ದೇ ಆದ ಗೌರವವಿದೆ. ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಬೇಕು ಎಂದು ಶಿಕ್ಷಕರಾದ ಬಿ. ಅರ್ಕಪ್ಪ ಅವರು ತಿಳಿಸಿದರು.


     ನಗರಸಭೆ ಸದಸ್ಯರಾದ ಹೆಚ್.ಎಸ್. ಮಮತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೆಶಕರಾದ ಗುರುಲಿಂಗಯ್ಯ, ಸಮುದಾಯ ಮುಖಂಡರಾದ ಗು. ಪುರುಷೋತ್ತಮ್, ಶ್ರೀನಿವಾಸ್, ಪ್ರಕಾಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 



ಕೊತ್ತಲವಾಡಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ : ಅಹವಾಲುಗಳ ಆಲಿಕೆ-ಪರಿಹಾರಕ್ಕೆ ಸೂಚನೆ


         ಚಾಮರಾಜನಗರ, ಜನವರಿ 21:- ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಾಯಿತು. 


     ಕೊತ್ತಲವಾಡಿ ಗ್ರಾಮದ ಗಂಗಾಧರೇಶ್ವರ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಉದ್ಘಾಟಿಸಿದರು. 


      ಆರಂಭದಲ್ಲಿಯೇ ಗ್ರಾಮಸ್ಥರು ಮಾತನಾಡಿ ಗ್ರಾಮದ ಕೆರೆಗೆ ಚರಂಡಿ ನೀರು ಹರಿದು ಹೋಗುತ್ತಿದೆ. ಊರಿನಲ್ಲಿರುವ ಶತಮಾನ ಕಂಡ ಶಾಲೆ ಕೊಠಡಿಗಳ ದುರಸ್ತಿಯಾಗಬೇಕಿದೆ. ಜಾನುವಾರುಗಳ ಸಂಖ್ಯೆಯ ಹೆಚ್ಚಿದ್ದು ಪ್ರತ್ಯೇಕ ಪಶು ವೈದ್ಯರ ನಿಯೋಜನೆ ಮಾಡಬೇಕಿದೆ. 24*7 ಆಸ್ಪತ್ರೆಗೆ ಸಿಬ್ಬಂದಿ ನೇಮಕವಾಗಬೇಕಿದೆ. ಶುದ್ದ ಕುಡಿಯುವ ನೀರಿನ ಘಟಕ, ಕೆ.ಎಸ್.ಆರ್.ಟಿಸಿ ಬಸ್ ಸೌಲಭ್ಯ, ಕೆರೆಗಳಿಗೆ ತಡೆಗೋಡೆ, ವಿದ್ಯುತ್ ಕಂಬಗಳು ಬೇಕಿದೆ. ಊರಿನ ರಸ್ತೆಗಳನ್ನು ಹೆಚ್ಚಿನ ಗುಣಮಟ್ಟದಲ್ಲಿ ಮಾಡಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕಿದೆ ಎಂದು ಗಮನಕ್ಕೆ ತಂದರು. 


      ಸ್ಮಶಾನ, ಬಕರ್ ಹುಕುಂ ಸಾಗುವಳಿ, ಇ-ಸ್ವತ್ತು, ಅಂಗನವಾಡಿ, ಖಾಯಂ ಗ್ರಾಮ ಲೆಕ್ಕಿಗರ ನೇಮಕ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಲು ಗ್ರಾಮಸ್ಥರು ಮನವಿ ಮಾಡಿದರು. 


      ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಗ್ರಾಮಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನ ಅನುದಾನದಿಂದ ಶಾಲೆಗಳ ಅಭಿವೃದ್ದಿ ಮಾಡಲು ಸೂಚಿಸಲಾಗಿದೆ. ಶುದ್ದ ಕುಡಿಯುವ ನೀರಿನ ಘಟಕ ಸೌಲಭ್ಯಕ್ಕೆ ಶಾಸಕರ ಅನುದಾನದಲ್ಲಿ ನೆರವು ನೀಡಲಾಗುವುದು. ಸ್ಮಶಾನಕ್ಕಾಗಿ ಸರ್ಕಾರದ ನಿಯಮಾವಳಿ ಅನುಸಾರ ಭೂಮಿ ನೀಡಲಾಗುತ್ತದೆ ಎಂದರು. 


ಸರಿಯಾದ ದಾಖಲೆಗಳನ್ನು ನೀಡಿದ್ದಲ್ಲಿ ಇ-ಸ್ವತ್ತು ನೀಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು. ನಿಗದಿತ ವೇಳೆಗೆ ಇ-ಸ್ವತ್ತು ನೀಡುವ ಕಾರ್ಯವನ್ನು ನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿ ಪರಿಹಾರ ಪಡೆದುಕೊಳ್ಳಲು ಅವಕಾಶವಾಗುತ್ತದೆ. ಹೀಗಾಗಿ ಈ ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.  


ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಸ್ಮಶಾನಕ್ಕಾಗಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಗ್ರಾಮದಲ್ಲಿ ಹೆಚ್ಚಿನ ಜನಸಂಖ್ಯೆ ಇರುವ ಹಿನ್ನೆಲೆಯಲ್ಲಿ ಎರಡು ಎಕರೆ ಜಾಗ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ಬಸ್ ವ್ಯವಸ್ಥೆಯನ್ನು ಅಗತ್ಯಕ್ಕೆ ತಕ್ಕಂತೆ ಮಾಡಲು ಸೂಚಿಸಲಾಗಿದೆ ಎಂದರು. 


ಊರಿನ ಶತಮಾನ ಕಂಡ ಸರ್ಕಾರಿ ಶಾಲೆ ಅಭಿವೃದ್ದಿಗೆ ಕ್ರಿಯಾ ಯೋಜನೆಯಲ್ಲಿ ಅನುಮೋದನೆ ನೀಡಲಾಗುತ್ತದೆ. ಪಶು ವೈದ್ಯರ ಖಾಯಂ ನಿಯೋಜನೆಗೂ ತಿಳಿಸಲಾಗಿದೆ. ಕೆರೆಗೆ ಕಲುಷಿತ ನೀರು ಸೇರದಂತೆ ಅಗತ್ಯವಿರುವ ಕೆಲಸ ನಿರ್ವಹಿಸಲು ಪರಿಶೀಲಿಸಲು ಸೂಚಿಸಲಾಗಿದೆ. ಇತರೆ ಎರಡು ಕೆರೆಗಳ ಸಂರಕ್ಷಣೆಗೆ ತಡೆಗೋಡೆ ನಿರ್ಮಿಸುವ ಸಂಬಂಧ ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿ ಶೀಘ್ರ ಪರಿಹರಿಸಲು ನಿರ್ದೇಶನ ನೀಡಲಾಗುವುದೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು. 


ಇದೇ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. 


ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೀತಾ, ಉಪಾಧ್ಯಕ್ಷರಾದ ಸತ್ಯಾನಂದ, ಉಪವಿಭಾಗಾಧಿಕಾರಿ ಗೀತಾ ಹುಡೇದ, ತಹಶೀಲ್ದಾರರಾದ ಬಸವರಾಜು, ಭೂ ದಾಖಲೆಗಳ ಉಪನಿರ್ದೇಶಕರಾದ ವಿದ್ಯಾಯಿನಿ, ಸಹಾಯಕ ಅರಣ್ಯ ಸಂರಕ್ಷಾಣಧಿಕಾರಿ ಸುರೇಶ್, ಇತರರು ಉಪಸ್ಥಿತರಿದ್ದರು.


ಗ್ರಾಮಕ್ಕೆ ಆಗಮಿಸಿದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರನ್ನು ಗ್ರಾಮದ ಮುಖಂಡರು, ಶಾಲಾ ಮಕ್ಕಳು ಸಂಭ್ರಮದಿಂದ ಬರಮಾಡಿಕೊಂಡರು. ಎತ್ತಿನಗಾಡಿ ಮೆರವಣಿಗೆ ಮೂಲಕ ಕರೆತಂದರು. ಶಾಸಕರು, ಜಿಲ್ಲಾಧಿಕಾರಿಯವರು ಗ್ರಾಮ ಪಂಚಾಯತ್ ನ ಗ್ರಂಥಾಲಯ, ಶತಮಾನದ ಸರ್ಕಾರಿ ಶಾಲೆಗೆ ಭೇಟಿ ನೀಡಿದರು. ಕಾರ್ಯಕ್ರಮದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಪ್ರಾತ್ಯಕ್ಷಿಕೆ ಪ್ರದರ್ಶನವನ್ನು ವೀಕ್ಷಿಸಿದರು. 



ಗ್ರಾಮ ಒನ್ ಕೇಂದ್ರ ತೆರೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ


       ಚಾಮರಾಜನಗರ, ಜನವರಿ 21 - ಜಿಲ್ಲೆಯಲ್ಲಿ ಪ್ರಸ್ತುತ ಬಾಕಿ ಇರುವ 62 ಗ್ರಾಮ ಪಂಚಾಯಿತಿಗಳಲ್ಲಿ 72 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


      ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಅನ್ನು ಸೇವಾ ಸಿಂಧು ಯೋಜನೆಯಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಇದರಡಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅವಕಾಶವಿದೆ. 


     ಈ ಯೋಜನೆಯಡಿ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 130 ಗ್ರಾಮ ಪಂಚಾಯಿತಿಗಳಲ್ಲಿ 196 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು. ಈಗಾಗಲೇ 121 ಕೇಂದ್ರಗಳನ್ನು ತೆರೆಯಲಾಗಿದೆ. ಬಾಕಿ ಇರುವ 62 ಗ್ರಾಮ ಪಂಚಾಯಿತಿಗಳಲ್ಲಿ 72 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಿದೆ. ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತಿಯುಳ್ಳ ಅಭ್ಯರ್ಥಿಗಳು  hಣಣಠಿ://gಡಿಚಿmಚಿoಟಿebಟs.ಛಿom/ಚಿಠಿಠಿಟiಛಿಚಿಟಿಣ-ಡಿegisಣಡಿಚಿಣioಟಿ ಜಾಲತಾಣದಲ್ಲಿ ಆನ್ ಲೈನ್ ಮುಖಾಂತರ ಜನವರಿ 31 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-69008800 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

        

ಜ. 23ರಂದು ಬಾಲ್ಯ ವಿವಾಹ ನಿಷೇಧ ಕುರಿತು ತರಬೇತಿ ಕಾರ್ಯಾಗಾರ


        ಚಾಮರಾಜನಗರ, ಜನವರಿ 21 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ನಿಷೇಧ ಕುರಿತು ಭಾಗೀದಾರರಿಗೆ ತರಬೇತಿ ಕಾರ್ಯಾಗಾರವನ್ನು ಜನವರಿ 23ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಹಳೆ ಕೆ.ಡಿ.ಪಿ. ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

 

ಜಿಲ್ಲಾಧಿಕಾರಿಯವರಾದ ಡಿ.ಎಸ್. ರಮೇಶ್ ಅವರು ಕಾರ್ಯಗಾರ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಅಧ್ಯಕ್ಷತೆ ವಹಿಸುವರು. 


      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಡಿವೈಎಸ್‍ಪಿ ಹಾಗೂ ವಿಶೇಷ ಮಕ್ಕಳ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 


     ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸರಸ್ವತಿ, ಮೈಸೂರಿನ ಒಡಿಪಿ ಸಂಸ್ಥೆಯ ಧನರಾಜ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ. 


ತಳ ಸಮುದಾಯದ ವಿಶಿಷ್ಟ ಕಲೆಗಳ ತರಬೇತಿಗೆ ಅರ್ಜಿ ಆಹ್ವಾನ 


       ಚಾಮರಾಜನಗರ, ಜನವರಿ 21 - ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳ ತರಬೇತಿ ಶಿಬಿರವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಆಯೋಜಿಸಿದ್ದು ತರಬೇತಿ ಪಡೆಯಲು ಇಚ್ಚಿಸುವ ಯುವ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. 


ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಇಂತಹ ಕಲೆಗಳನ್ನು ಕಲಿಯಲು ಜನವರಿ 27ರಿಂದ ತರಬೇತಿ ಶಿಬಿರ ಆರಂಭಿಸಲಾಗುತ್ತಿದೆ. ತರಬೇತಿ ಪಡೆಯಲು ಇಚ್ಚಿಸುವ ಯುವ ಕಲಾವಿದರು ಅರ್ಜಿಯನ್ನು ಜನವರಿ 24ರೊಳಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ತಲುಪಿಸಬೇಕು. 


ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9739383162, 9449181240, 8050021978 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ವಾಣಿಜ್ಯ ಪರೀಕ್ಷೆ : ನಿಷೇಧಾಜ್ಞೆ


ಚಾಮರಾಜನಗರ, ಜನವರಿ 21  ವಾಣಿಜ್ಯ ಪರೀಕ್ಷೆಗಳು ಚಾಮರಾಜನಗರ ಪಟ್ಟಣದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜನವರಿ 23ರಿಂದ 25 ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಸುವ ಸದುದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.


ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿಸಿ 1973ರ ಕಲಂ 144 ರನ್ವಯ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೇ ಸದರಿ ದಿನಗಳಂದು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮುಚ್ಚಲು ಸಹ ಆದೇಶಿಸಲಾಗಿದೆ.


ನಿಷೇದಾಜ್ಞೆ ಆದೇಶವು ಪರೀಕ್ಷೆ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಮತ್ತು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.



 

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು