Wednesday, 6 July 2016

ಚಾಮರಾಜನಗರ, ಜು. 05 ಮತ್ತು 06 ಸುದ್ದಿಗಳು

ನಗರದಲ್ಲಿ ಅರ್ಥಪೂರ್ಣವಾಗಿ ನಡೆದ ಬಾಬೂಜೀ ಪುಣ್ಯಸ್ಮರಣೆ  
 ಚಾಮರಾಜನಗರ, ಜು. 06 - ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬೂ ಜಗಜೀವನರಾಮ್ ಅವರ 30ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ ನಡೆಸಲಾಯಿತು.
ನಗರದ ಜೆ.ಎಚ್. ಪಟೇಲ್ ಸಬಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಸೇರಿದಂತೆ ಇತರೆ ಗಣ್ಯರು ಬಾಬೂಜೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಸಿ. ಪುಟ್ಟರಂಗಶೆಟ್ಟಿಯವರು ಬಾಬೂ ಜಗಜೀವನರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು. ಅನೇಕ ಮಹತ್ವದ ಖಾತೆಗಳನ್ನು ನಿರ್ವಹಿಸುವ ಮೂಲಕ ದೇಶದ ಮುನ್ನಡೆಗೆ ಕಾರಣರಾದರು. ಅವರ ಪರಿಶ್ರಮದಿಂದ ಪ್ರಗತಿಪರ ಯೋಜನೆಗಳು ಜಾರಿಯಾದವೆಂದು ತಿಳಿಸಿದರು.
ಬಾಬೂ ಜಗಜೀವನರಾಮ್ ಅವರು ಕೃಷಿ ಮಂತ್ರಿಯಾಗಿದ್ದ ವೇಳೆ ದೇಶದಲ್ಲಿ ಆಹಾರ ಅಭಾವ ಎದುರಿಸಬೇಕಾದ ಪರಿಸ್ಥಿತಿ ಬಂದೊದಗಿತ್ತು. ಅ ಸಂದರ್ಭದಲ್ಲಿ ಹಸಿರು ಕ್ರಾಂತಿಯನ್ನು ಬಾಬೂಜೀಯವರು ಅನುಷ್ಠಾನ ಮಾಡಿದ ಫಲವಾಗಿ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಯಿತು. ಇಂತಹ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಬಾಬೂ ಜಗಜೀವನರಾಮ್ ಅವರ ಸೇವಾ ಸಾಧನೆಯನ್ನು ಸ್ಮರಿಸುವುದು ಅವಶ್ಯವಾಗಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು ಮಾತನಾಡಿ ಬಾಬೂಜೀಯವರ ಹಸಿರು ಕ್ರಾಂತಿಯು ದೇಶದ ಆಹಾರ ಉತ್ಪಾದನೆಗೆ ಭದ್ರ ಬುನಾದಿಯಾಗಿದೆ. ಅವರು ಹಾಕಿಕೊಟ್ಟ ಮಾರ್ಗಗಳು ಇಂದಿಗೂ ಹಸಿರಾಗಿವೆ. ಹೀಗಾಗಿಯೆ ಆಹಾರ ರಫ್ತು ವಿಷಯದಲ್ಲಿ ಭಾರತ ದಾಪುಗಾಲು ಇಟ್ಟಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಕೇಂದ್ರದಲ್ಲಿ ಬಾಬೂ ಜಗಜೀವನರಾಮ್ ಭವನ ನಿಮಾಣಕ್ಕೆ ನಿವೇಶನ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ಶೀಘ್ರವೇ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳ ಸಹಕಾರದೊಂದಿಗೆ ಭವನ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಹಾಕಲಾಗುವುದು. ಭವನ ನಿಮಾಣವು ಪೂರ್ಣಗೊಂಡು ಭಾಬೂಜೀ ಅವರ ಚಿಂತನೆ, ಆದರ್ಶ, ಮೌಲ್ಯಯುತ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಕೇಂದ್ರವಾಗಲಿ ಎಂದು ರಾಮು ಆಶಿಸಿದರು.
ನಗರಸಭಾ ಸದಸ್ಯರಾದ ಮಹದೇವಯ್ಯ, ಸಿ.ಕೆ. ಮಂಜುನಾಥ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾಪಾಟಿ, ಉಪಕಾರ್ಯದರ್ಶಿ ಮುನಿರಾಜಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ ಜಿ, ಗೌಡ, ಮುಖಂಡರಾದ ಆರ್.ಎಂ. ಕಾಂತರಾಜು, ಚಾ.ಗು. ನಾಗರಾಜು, ಕೆ.ಎಂ. ನಾಗರಾಜು, ಬಸವನಪುರ ರಾಜಶೇಖರ್, ಆಲೂರು ನಾಗೇಂದ್ರ, ಶಿವಮೂರ್ತಿ, ತಹಶೀಲ್ದಾರ್ ಮಹದೇವು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರೇವಣ್ಣ, ವಿವಿಧ ಸಂಘಟನೆ, ಸಮುದಾಯಗಳ ಮುಖಂಡರು, ಅಧಿಕಾರಿಗಳು ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಜು. 19ರಂದು ಚಾಮರಾಜೇಶ್ವರ ಸ್ವಾಮಿ ರಥೋತ್ಸವ
ಚಾಮರಾಜನಗರ, ಜು. 06- ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರಸ್ವಾಮಿ ರಥೋತ್ಸವವು ಜುಲೈ 19ರಂದು ನೆರವೇರಲಿದೆ. ಪೂರ್ವಾಷಾಡ ನಕ್ಷತ್ರದಲ್ಲಿ ಬೆಳಿಗ್ಗೆ 10.05 ರಿಂದ 11.35ರ ಕನ್ಯಾ ಲಗ್ನದಲ್ಲಿ ಶ್ರೀ ಮನ್ಮಹಾರಥಾರೋಹಣ ಆನಂತರ ಹಂಸಾರೋಹಣ ನಂತರ ನಟೇಶೋತ್ಸವ ನಡೆಯಲಿದೆ.
ರಥೋತ್ಸವದ ಅಂಗವಾಗಿ ವಿವಿಧ ಉತ್ಸವಾದಿ ವಿಶೇಷ ಪÀೂಜಾ ಕೈಂಕರ್ಯಗಳು ನೆರವೇರಲಿದೆ.
ಜುಲೈ 12ರಂದು ಅಂಕುರಾರ್ಪಣ ಪೂರ್ವಕ ವೃಷಭಾಧಿವಾಸ, 13ರಂದು ಬೆಳಿಗ್ಗೆ 11.15 ರಿಂದ 12ಕ್ಕೆ ಕನ್ಯಾ ಲಗ್ನದಲ್ಲಿ ಮಹೂರ್ತದಲ್ಲಿ ಧ್ವಜಾರೋಹಣ ಪೂರ್ವಕ ಭೇರಿತಾಡನಾ ನಂತರ ಶಿಭಿಕಾರೋಹಣೋತ್ಸವ, 14ರಂದು ಚಂದ್ರ ಮಂಡಲಾರೋಹಣೋತ್ಸವ, 15ರಂದು ಅನಂತ ಪೀಠಾರೋಹಣೋತ್ಸವ, 16ರಂದು ಪುಷ್ಪ ಮಂಟಪಾರೋಹಣೋತ್ಸವ, 17ರಂದು ವೃಷಭಾರೋಹಣೋತ್ಸವ, 18ರಂದು ವಸಂತೋತ್ಸವಪೂರ್ವಕ, 20ರಂದು ಮೃಗಾಯಾತ್ರಾ ಪೂರ್ವಕ ಅಶ್ವಾರೋಹಣಾ ನಂತರ ಮಹಾಭೂತಾರೋಹಣ, ದೇವಿ ಪ್ರಣಯ ಕಲಹ ಸಂಧಾನೋತ್ಸವ, 21ರಂದು ಹಗಲು ಚೂರ್ಣೋತ್ಸವ ಪೂರ್ವಕ ಅವಭೃತ ತೀರ್ಥಸ್ನಾನ, ರಾತ್ರಿ ಧ್ವಜಾರೋಹಣ, ಮೌನಬಲಿ, 22ರಂದು ಪುಷ್ಪಯಾಗ ಪೂರ್ವಕ ಕೈಲಾಸಯಾನಾ ರೋಹಣೋತ್ಸವ, 23ರÀಂದು ಮಹಾಸಂಪ್ರೋಕ್ಷಣ ಪೂರ್ವಕ ನಂದಿವಾಹನೋತ್ಸವ ನಡೆಯಲಿದೆ
ವಾಹನ ಬಹಿರಂಗ ಹರಾಜು
ಚಾಮರಾಜನಗರ, ಜು. - ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯು ವಿವಿಧ ಪ್ರಕರಣಗಳಲ್ಲಿ ಅಮಾನತುಪಡಿಸಿಕೊಂಡಿರುವ ವಾಹನಗಳನ್ನು ನ್ಯಾಯಾಲಯ ಅನುಮತಿ ಮೇರೆಗೆ ಜುಲೈ 11ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಲಿದೆ.
ಆಸಕ್ತರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಹರಾಜು ಮಾಡಲಿರುವ ವಾಹನಗಳನ್ನು ವೀಕ್ಷಣೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹರಾಜು ಪ್ರಕ್ರಿಯೆ ಸಕ್ಷಮ ಪ್ರಾಧಿಕಾರಿಯಾಗಿರುವ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ
ಚಾಮರಾಜನಗರ, ಜು. - ಕರ್ನಾಟಕ ಸಾಹಿತ್ಯ ಅಕಾಡೆಮಿಯು 2015ನೇ ವರ್ಷದ ಪುಸ್ತಕ ಬಹುಮನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ.
ಕಾವ್ಯ(ವಚನಗಳು ಮತ್ತು ಹನಿಗವನಗಳು ಸೇರಿ), ಕಾದಂಬರಿ, ಸಣ್ಣ ಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ / ಆತ್ಮಕತೆ, ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯ ತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಎಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ ಇತ್ಯಾದಿ), ಮಾನವಿಕಗಳು (ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮನಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ (ಕನ್ನಡ ಭಾಷೆ ಮತ್ತು ಸಂಸ್ಕøತಿಗಳಿಗೆ ಸಂಬಂಧಿಸಿದ ಸಂಶೋಧನೆ), ಅನುವಾದ 1 (ಕಾದಂಬರಿ, ಕಾವ್ಯ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ ಇನ್ನಿತರ ಸೃಜನಶೀಲ ಕೃತಿಗಳು), ಅನುವಾದ-2 (ಶಾಸ್ತ್ರ ಸಾಹಿತ್ಯ, ಸಾಹಿತ್ಯ ವಿಮರ್ಶೆ ಇನ್ನಿತರ ಸೃಜನೇತರ ಕೃತಿಗಳು), ಸಂಕೀರ್ಣ (ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು), ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದಗೊಂಡ 100 ಪುಟಗಳಿಗೆ ಕಡಿಮೆ ಇಲ್ಲದ ಸೃಜನಾತ್ಮಕ ಕೃತಿಗೆ ಬಹುಮಾನ ನೀಡಲಾಗುತ್ತದೆ.
ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2015ರ ಜನವರಿಯಿಂದ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ 2015 ಎಂದು ಮುದ್ರಿತವಾಗಿರಬೇಕು.
ಮರು ಮುದ್ರಣವಾದ ಪುಸ್ತಕಗಳಾಗಿರಬಾರದು. ಜಾನಪದ, ಪಠ್ಯಪುಸ್ತಕ, ಪಿಹೆಚ್‍ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನ ಗ್ರಂಥಗಳಾಗಿರಬಾರದು. ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕøತ ಸಾಹಿತಿಗಳ ಕೃತಿಗಳಾಗಿರಬಾರದು. ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ 3 ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳಾಗಿರಬಾರದು. ಒಂದೇ ಪ್ರಕಾರದಲ್ಲಿ 2 ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಅದೇ ಪ್ರಕಾರದಲ್ಲಿ ಮತ್ತೆ ಪರಿಗಣಿಸಲಾಗುವುದಿಲ್ಲ.
ಆಸಕ್ತರು ಪುಸ್ತಕಗಳ ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು – 560002 ಇವರಿಗೆ ನೋಂದಣಿ ಅಂಚೆ, ಕೊರಿಯರ್ ಅಥವಾ ಖುದ್ದಾಗಿ ಜುಲೈ 10ರೊಳಗೆ ತಲುಪಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಜು. 8ರಂದು ಕೊಳ್ಳೇಗಾಲದಲಿ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಕುರಿತು ತಿಳಿವಳಿಕೆ ಕಾರ್ಯಕ್ರಮ
 ಚಾಮರಾಜನಗರ, ಜು. - ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ ಆಶ್ರಯದಲ್ಲಿ ಕೊಳ್ಳೇಗಾಲ ತಾಲೂಕಿನ ಭಾವಿ ಉದ್ಯಮಿಗಳಿಗೆ ಹಾಗೂ ವಿದ್ಯಾವಂತ ನಿರುದ್ಯೋಗಿ ಯುವಜನರಿಗಾಗಿ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಕುರಿತು ತಿಳಿವಳಿಕೆ ಕಾರ್ಯಕ್ರಮವನ್ನು ಜುಲೈ 8 ರಂದು ಬೆಳಿಗೆ 10.30 ಗಂಟೆಗೆ ಕೊಳ್ಳೇಗಾಲ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಸಾÀ್ಥಪಿಸಬಹುದಾದ ಉದ್ಯಮ ವಿವಿಧ ಇಲಾಖೆ ಬ್ಯಾಂಕುಗಳಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುತ್ತದೆ.
ಆಸಕ್ತರು ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಸ್ಥಳದಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ ಅಥವಾ ದೂರವಾಣಿ ಸಂಖ್ಯೆ 08226-226346, ಮೊಬೈಲ್ ಸಂಖ್ಯೆ 7760145784 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

 ಜು. 8ರಂದು ಕೊಳ್ಳೇಗಾಲದಲ್ಲಿ ಉದ್ಯಮಶೀಲತಾ ತಿಳಿವಳಿಕೆ ಉದ್ಘಾಟನಾ ಸಮಾರಂಭ
 ಚಾಮರಾಜನಗರ, ಜು.  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ ಆಶ್ರಯದಲ್ಲಿ ಕೊಳ್ಳೇಗಾಲ ತಾಲೂಕಿನ ಭಾವಿ ಉದ್ಯಮಿಗಳಿಗೆ ಹಾಗೂ ವಿದ್ಯಾವಂತ ನಿರುದ್ಯೋಗಿ ಯುವಜನರಿಗಾಗಿ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಕುರಿತು ತಿಳಿವಳಿಕೆ ಕಾರ್ಯಕ್ರಮವನ್ನು ಜುಲೈ 8 ರಂದು ಬೆಳಿಗೆ 10.30 ಗಂಟೆಗೆ ಕೊಳ್ಳೇಗಾಲ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
 ಶಾಸಕರಾದ ಆರ್ ನರೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು ಶಾಸಕರಾದ ಎಸ್. ಜಯಣ್ಣ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ಉಪಾಧ್ಯಕ್ಷರಾದ ಲತಾ ರಾಜಣ್ಣ, ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಎಚ್. ಶಿವರಾಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
 
ಹವಾಮಾನ ಆಧಾರಿತ ಬೆಳೆ ವಿಮೆ, ಪ್ರಧಾನಮಂತ್ರಿ ಫಸಲು ಬಿಮಾ ಬೆಳೆ ವಿಮೆ ಮಾಹಿತಿಗೆ ಸಹಾಯವಾಣಿ
 ಚಾಮರಾಜನಗರ, ಜು. - ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ನೆರವಾಗುವ ಹವಾಮಾನ ಆಧಾರಿತ ಬೆಳೆ ವಿಮೆ ಹಾಗೂ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆ ಕುರಿತು ರೈತರಿಗೆ, ಬೆಳೆಗಾರರಿಗೆ ಹೆಚ್ಚಿನ ಮಾಹಿತಿ ಪಡೆಯಲು ಜಿಲ್ಲೆಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ.
ತೆಂಗು ಮತ್ತು ಬಾಳೆ ಬೆಳೆಯು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಒಳಪಡಲಿದ್ದು ವಿಮಾ ಕಂತು ಪಾವತಿಸಲು ಇದೇ ತಿಂಗಳ ಜುಲೈ 10 ಕಡೆಯ ದಿನವಾಗಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆಡಿ ವಿವಿಧ ಬೆಳೆಗಳಿಗೆ ವಿಮಾ ಕಂತು ಪಾವತಿಸಲು ಜುಲೈ 30 ಕಡೆಯ ದಿನವಾಗಿದೆ. ರೈತರು, ಬೆಳೆಗಾರರು ಸಂಬಂಧಪಟ್ಟ ಬ್ಯಾಂಕುಗಳಲ್ಲಿ ಅಂತಿಮ ದಿನಾಂಕದ ಒಳಗೆ ವಿಮಾ ಕಂತುಗಳನ್ನು ಪಾವತಿಸಬೇಕು. ವಿಮೆ ಕಂತು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಲಭ್ಯವಿದೆ.
ಯೂನಿವರ್ಸಲ್ ಸೊಂಪೊ ಜನರಲ್ ಇನ್ಯೂರೆನ್ಸ್ ಕಂಪನಿ ಅಧಿಕಾರಿ ನವೀನ್ ಮೊಬೈಲ್ 9964101797, ಜೋಸೆಫ್ ಮೊ. 9986144000, ಲೀಡ್ ಬ್ಯಾಂಕ್ ದೂ.ಸಂ. 08226-223686, ಎಂಡಿಸಿಸಿ ಬ್ಯಾಂಕ್ ದೂ.ಸಂ. 08226-222019, ನಬಾರ್ಡ್ ಬ್ಯಾಂಕ್ 08226-225292, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಚಾಮರಾಜನಗರ ದೂ.ಸಂ.  08226-223049, ಗುಂಡ್ಲುಪೇಟೆ ದೂ.ಸಂ. 08229-222851, ಕೊಳ್ಳೇಗಾಲ ದೂ.ಸಂ. 08224-253449, ಯಳಂದೂರು ದೂ.ಸಂ. 08226-240600, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಚಾಮರಾಜನಗರ ದೂ.ಸಂ. 08226-222271, ಗುಂಡ್ಲುಪೇಟೆ ದೂ.ಸಂ. 08229-222270, ಕೊಳ್ಳೇಗಾಲ ದೂ.ಸಂ. 08224-253130, ಯಳಂದೂರು ದೂ.ಸಂ. 08226-240013 ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಹಾಗೂ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 13ರಂದು ಗುಂಡ್ಲುಪೇಟೆ ತಾಲೂಕು ಪ.ಜಾ. ವರ್ಗಗಳ ಹಿತರಕ್ಷಣಾ ಸಮಿತಿ ಸಭೆ
 ಚಾಮರಾಜನಗರ, ಜು.  ಗುಂಡ್ಲುಪೇಟೆ ತಾಲೂಕಿನ ಪರಿಶಿಷ್ಟ ಜಾತಿ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯು ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಜುಲೈ 13ರಂದು ಬೆಳಿಗ್ಗೆ 11 ಗಂಟೆಗೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಗೆ ತಾಲೂಕಿನ ಎಲ್ಲ ಪರಿಶಿಷ್ಟ ಜಾತಿ ವರ್ಗದ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿ ಸಲಹೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಆದರ್ಶ ವಿದ್ಯಾಲಯಕ್ಕೆ ದಾಖಲಾಗಲು ಸೂಚನೆ
 ಚಾಮರಾಜನಗರ, ಜು. - ನಗರದ ಆದರ್ಶ ವಿದ್ಯಾಲಯ (ಆರ್ ಎಂಎಸ್ ಎ) ದಲ್ಲಿ 2016-17ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ 2ನೇ ಪಟ್ಟಿಯಲ್ಲಿ ಆಯ್ಕೆಗೊಂಡಿರುವ ವಿದ್ಯಾರ್ಥಿಗಳು ದಾಖಲಾಗುವಂತೆ ಸೂಚಿಸಲಾಗಿದೆ.
ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ತಕ್ಷಣವೇ ಕಚೇರಿ ವೇಳೆಯಲ್ಲಿ ಮುಖ್ಯ ಶಿಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜು. 8ರಂದು ಚಾ.ನಗರ ಸಭೆಯ ಸಾಮಾನ್ಯ ಸಭೆ
ಚಾಮರಾಜನಗರ, ಜು. :- ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಅದ್ಯಕ್ಷರಾದ ಎಸ್.ಎನ್. ರೇಣುಕ ಅವರ ಅಧ್ಯಕ್ಷತೆಯಲ್ಲಿ ಜುಲೈ 8ರಂದು ಬೆಳಿಗ್ಗೆ 11 ಗಂಟೆಗೆ ನಗರದ ನಗರದ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರು  ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆ-ಹೌಸಿಂಗ್ ಫಾರ್ ಆಲ್ ಅನುಷ್ಟಾನ
 ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ  
  ಚಾಮರಾಜನಗರ, ಜು. 06 ಕೇಂದ್ರ ವಸತಿ ಮತ್ತು ಬಡತನ ನಿರ್ಮೂಲನಾ ಮಂತ್ರಾಲಯವು ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಎಲ್ಲ ಬಡ ಕುಟುಂಬಗಳಿಗೂ ಸೂರು ಒದಗಿಸುವ ಧ್ಯೇಯೋದ್ದೇಶದೊಂದಿಗೆ ಜಾರಿಗೆ ತಂದಿರುವ ಪ್ರಧಾನಮಂತ್ರಿ ಅವಾಸ್ ಯೋಜನೆ-ಹೌಸಿಂಗ್ ಫಾರ್ ಆಲ್ ನೂತನ ಅಭಿಯಾನವನ್ನು ಜಿಲ್ಲೆಯಲ್ಲೂ ಅನುಷ್ಠಾನಗೊಳಿಸಲಾಗುತ್ತಿದೆ.
ಅಭಿಯಾನವನ್ನು ನಾಲ್ಕು ವಿಭಾಗಗಳ ಮೂಲಕ ವಿಂಗಡಿಸಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರದ ಆಯ್ಕೆ ಮೇರೆಗೆ ಅನುಷ್ಟಾನಗೊಳಿಸಲಾಗುತ್ತದೆ.
ಮೊದಲ ವಿಭಾಗದಲ್ಲಿ ಭೂಮಿಯನ್ನು ಸಂಪನ್ಮೂಲವನ್ನಾಗಿಸಿಕೊಂಡು ಇನ್‍ಸೈಟ್ ಮಾದರಿಯಲ್ಲಿ ಕೊಳಚೆ ಪ್ರದೇಶಗಳನ್ನು ಪುನರ್ ಅಭಿವೃದ್ಧಿಪಡಿಸಲಾಗುತ್ತದೆ. ಕೇಂದ್ರ, ರಾಜ್ಯ, ನಗರ ಸ್ಥಳಿಯ ಸಂಸ್ಥೆ, ಖಾಸಗಿಯವರ ಅಸ್ತಿತ್ವದಲ್ಲಿರುವ ಜಮೀನಿನಲ್ಲಿ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಇನ್‍ಸೈಟ್ ಮಾದರಿಯಲ್ಲಿ ಮನೆಗಳನ್ನು ಒದಗಿಸಲಾಗುತ್ತದೆ. ಈ ಯೋಜನೆಯಡಿ ಪ್ರತಿ ಮನೆಗೆ 1 ಲಕ್ಷ ರೂ. ಸಹಾಯಧನವನ್ನು ಕೇಂದ್ರಸರ್ಕಾರ ನೀಡಲಿದೆ.
ಎರಡನೇ ವಿಭಾಗವಾದ ಕ್ರೆಡಿಟ್ ಲಿಂಕಡ್ ಸಬ್ಸಿಡಿ ಯೋಜನೆಯಡಿ ಅರ್ಥಿಕವಾಗಿ ದುರ್ಬಲ ವರ್ಗಕ್ಕೆ (ಇ.ಡಬ್ಲ್ಯೂ.ಎಸ್) ಸೇರಿದವರು, ಕಡಿಮೆ ಆದಾಯ ಹೊಂದಿದ ವರ್ಗ(ಎಲ್.ಐ.ಜಿ)ಕ್ಕೆ ಸೇರಿದ ಅರ್ಹ ಬಡವರಿಗೆ ಮನೆ ಖರೀದಿ, ಹೊಸದಾಗಿ ಮನೆ ನಿರ್ಮಾಣ, ಪ್ರಸ್ತುತ ಇರುವ ಮನೆ ವಿಸ್ತರಣೆ(ಅಡುಗೆ ಮನೆ, ಶೌಚಾಲಯ ನಿರ್ಮಾಣ) ಮಾಡಲು ಬ್ಯಾಂಕುಗಳು ವಿಧಿಸುವ ಬಡ್ಡಿದರದ ಪೈಕಿ ಶೇ. 6.5ರ ದರದಲ್ಲಿ ಬಡ್ಡಿ ಸಹಾಯಧನವನ್ನು 15 ವರ್ಷಗಳ ಅವಧಿಗೆ ಅಥವಾ ಸಾಲದ ಅವಧಿ ಪೈಕಿ ಯಾವುದು ಕಡಿಮೆ ಇರಲಿದೆಯೋ ಅ ಅವಧಿಗೆ 6 ಲಕ್ಷ ರೂ. ಮೊತ್ತದ ಸಾಲ ಸೌಲಭ್ಯವನ್ನು ಬ್ಯಾಂಕುಗಳಿಂದ ನೀಡಲಾಗುತ್ತದೆ. ಬಡ್ಡಿ ಸಹಾಯಧನವನ್ನು ಕೇಂದ್ರ ಸರ್ಕಾರ ನೇರವಾಗಿ ಸಾಲ ನೀಡಿರುವ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಿದೆ. 6 ಲಕ್ಷ ರೂ. ಗಿಂತ ಹೆಚ್ಚಿನ ಮೊತ್ತವನ್ನು ಸಾಲವಾಗಿ ಪಡೆದಲ್ಲಿ ಹೆಚ್ಚುವರಿ ಮೊತ್ತವನ್ನು ಸಬ್ಸಿಡಿ ರಹಿತವಾಗಿ ಮಂಜೂರು ಮಾಡಲಾಗುತ್ತದೆ.
ಮೂರನೇ ವಿಭಾಗವಾದ ಅಫ್ರೆಡಬಲ್ ಹೌಸಿಂಗ್ ಇನ್ ಪಾರ್ಟ್‍ನರ್‍ಶಿಪ್ ಅಡಿ ಅರ್ಥಿಕ ದುರ್ಬಲ ವರ್ಗಕ್ಕೆ ಸೇರಿದವರಿಗೆ ಕ್ಯಗೆಟುಕುವ ದರದಲ್ಲಿ ಮನೆಗಳನ್ನು ನಿರ್ಮಿಸಲು ವಿವಿಧ ಇಲಾಖೆಗಳ ಮೂಲಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಗಳನ್ನು ರೂಪಿಸಲು ಅವಕಾಶವಿದೆ. ಈ ಯೋಜನೆಯಲ್ಲಿ ಪ್ರತಿ ಇ.ಡಬ್ಲೂ.ಎಸ್ ಮನೆಗೆ 1.5 ಲಕ್ಷ ರೂ. ಅರ್ಥಿಕ ನೆರವು ಲಭಿಸಲಿದೆ.
ನಾಲ್ಕನೇ ವಿಭಾಗವಾದ ಫಲಾನುಭವಿ ನೇತೃತ್ವದ ಮನೆ ನಿರ್ಮಾಣ ಯೋಜನೆಯಡಿ ಇ.ಡಬ್ಲೂ.ಎಸ್ ಫಲಾನುಭವಿಗಳಿಗೆ ಹೊಸ ಮನೆ ನಿರ್ಮಿಸಲು ಮತ್ತು ಈಗಾಗಲೇ ಇರುವ ವಸತಿಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಥಿಕ ನೆರವು ಲಭಿಸಲಿದೆ. ಇದಕ್ಕೂ ಸಹ 1.5 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಫಲಾನುಭವಿಗಳು ಜಾಗದ ಒಡೆತನ ಹೊಂದಿರುವ ಬಗ್ಗೆ ಮಾಹಿತಿ ಸಲ್ಲಿಸಬೇಕಿದೆ.
ರಾಜ್ಯ ಸರ್ಕಾರವು ಎರಡನೇ ವಿಭಾಗದ ಯೋಜನೆ ಹೊರತುಪಡಿಸಿ ಉಳಿದ ಮೂರು ವಿಭಾಗಗಳ ಯೋಜನೆಯನ್ನು ಅನುಷ್ಟಾನ ಮಾಡಲಿದೆ. ಎರಡನೇ ವಿಭಾಗದ ಯೋಜನೆಯನ್ನು ಕೇಂದ್ರ ಸರ್ಕಾರ ಬ್ಯಾಂಕುಗಳ ಮೂಲಕ ನೇರವಾಗಿ ಅನುಷ್ಠಾನಗೊಳಿಸಲಿದೆ. ಪ್ರಧಾನಮಂತ್ರಿ ಅವಾಸ್ ಯೋಜನೆಯು ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ.
ಈ ಸೌಲಭ್ಯವನ್ನು ಪಡೆಯಲು ಬಿ.ಪಿ.ಎಲ್. ಕುಟುಂಬದವರ ವಾರ್ಷಿಕ ಆದಾಯ 87 ಸಾವಿರ ರೂ. ಗೆ ಮಿತಿಗೊಳಿಸಲಾಗಿದೆ. ಇ.ಡಬ್ಲೂ.ಎಸ್. ಕುಟುಂಬದ ವಾರ್ಷಿಕ ಆದಾಯವನ್ನು 87 ಸಾವಿರ ರೂ. ಗಳಿಂದ 3 ಲಕ್ಷ ರೂ. ಗಳಿಗೆ ಮತ್ತು ಎಲ್.ಐ.ಜಿ ಕುಟುಂಬದ ವಾರ್ಷಿಕ ಆದಾಯವನ್ನು 3 ಲಕ್ಷ ರೂ. ನಿಂದ 6 ಲಕ್ಷ ರೂ. ವರೆಗೆ ಮಿತಿ ನಿಗದಿ ಮಾಡಲಾಗಿದೆ.
ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರೂಪುರೇಷೆ ತಯಾರಿಸಲಾಗಿದೆ.
ವಸತಿ ರಹಿತರನ್ನು ಪಟ್ಟಿ ಮಾಡಲು ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಸಮೀಕ್ಷೆ ಸಮಯದಲ್ಲಿ ಫಲಾನುಭವಿಗಳು ಮಾಹಿತಿ ನೀಡಲು ವಿಫಲರಾದಲ್ಲಿ ವಸತಿ ಸೌಲಭ್ಯ ಪಡೆಯಲು ವಂಚಿತರಾಗಲಿದ್ದಾರೆ. ಹೀಗಾಗಿ ಎಲ್ಲ ಅರ್ಹ ಫಲಾನುಭವಿಗಳು ಯೋಜನೆ ಸೌಲಭ್ಯ ಪಡೆಯಲು ಸಮೀಕ್ಷೆದಾರರಿಗೆ ಸೂಕ್ತ ಮಾಹಿತಿ ನೀಡಬೇಕು. ವಸತಿ ರಹಿತರು ಸ್ಥಳಿಯ ಸಂಸ್ಥೆಗಳಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಲ್ಲಿಸುವ ಮೂಲಕ ವಸತಿ ಸೌಲಭ್ಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದ್ದಾರೆ.

Tuesday, 5 July 2016

04-07-2016

ಹೆಣ್ಣುಮಕ್ಕಳ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ ಸೌಲಭ್ಯ
ಚಾಮರಾಜನಗರ, ಜು. 04:- ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ನಗರದಲ್ಲಿ ಅಲ್ಪಸಂಖ್ಯಾತರ ಹೆಣ್ಣುಮಕ್ಕಳಿಗಾಗಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರಾರಂಭಿಸಿದ್ದು ಇದರ ಸೌಲಭ್ಯ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿನಿಲಯರಿಗೆ ಶೇ.75ರಷ್ಟು ಸೀಟುಗಳು ಲಭ್ಯವಿದೆ. ಉಳಿದ 25ರಷ್ಟು ಸೀಟುಗಳಿಗೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಯರಿಗೆ ಲಭ್ಯವಿದೆ.
ವಿದ್ಯಾರ್ಥಿನಿಲಯದಲ್ಲಿ ದೊರೆಯುವ ಸೌಲಭ್ಯಗಳು ಸಂಪೂರ್ಣ ಉಚಿತವಾಗಿದೆ. ಆಹಾರ ವೆಚ್ಚಕ್ಕಾಗಿ 1200 ರೂ. ನೀಡಲಾಗುತ್ತದೆ. ಕಂಪ್ಯೂಟರ್ ತರಬೇತಿ, ಗ್ರಂಥಾಲಯ, ಕ್ರೀಡಾ ಸಾಮಗ್ರಿ, ಹಾಸಿಗೆ ಹೊದಿಕೆ, ಇತರೆ ಅಗತ್ಯ ಪರಿಕರಗಳನ್ನು ಉಚಿತವಾಗಿ ನೀಡಲಾಗುತ್ತದೆ. ವೈದ್ಯಕೀಯ ವೆಚ್ಚವನ್ನು ಭರಿಸಲಾಗುತ್ತದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ 44,500 ರೂ. ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ಕ್ಕೆ ಸೇರಿದವರಾಗಿದ್ದಲ್ಲಿ 1 ಲಕ್ಷ ರೂ. ಮೀರಿರಬಾರದು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಥವಾ ದೂರವಾಣಿ ಸಂಖ್ಯೆ 08226-222180 ಮೊಬೈಲ್ 9980685550 ಹಾಗೂ 9480817623 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ವೇತನಕ್ಕೆ ದಾಖಲೆ ಸಲ್ಲಿಸಲು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸೂಚನೆ
 ಚಾಮರಾಜನಗರ, ಜು. 04 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಒಂದರಿಂದ ಹತ್ತನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ನೀಡಲಿದ್ದು ಇದಕ್ಕಾಗಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಪ್ರವರ್ಗ 1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 1 ಲಕ್ಷ ರೂ. ಮೀರಿರಬಾರದು. ಪ್ರವರ್ಗ 2ಎ, 3ಎ, 3ಬಿಗೆ ಸೇರಿದವರಾಗಿದ್ದಲ್ಲಿ 44500 ರೂ. ಮೀರಿರಬಾರದು.
ವಿದ್ಯಾರ್ಥಿಗಳು ಅಥವಾ ಪೋಷಕರ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯÁಂಕುಗಳಲ್ಲಿ ಖಾತೆ ತೆರೆದು ಅದರ ಸಂಖ್ಯೆ, ಐಎಫ್‍ಎಸ್‍ಸಿ ಕೋಡ್, ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್, ಜಾತಿ ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳನ್ನು ಕೂಡಲೆ ಆಯಾ ಶಾಲೆಯ ಮುಖ್ಯೋಪಾಧ್ಯಾರಿಗೆ ಸಲ್ಲಿಸಬೇಕೆಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ತಾಲೂಕಿನಲ್ಲಿ ಕೃಷಿ ಗಣತಿ ಆರಂಭ
 ಚಾಮರಾಜನಗರ, ಜು. 04 (ಕರ್ನಾಟಕ ವಾರ್ತೆ):- ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 10ನೇ ಕೃಷಿ ಗಣತಿ ಕಾರ್ಯವನ್ನು ತಾಲೂಕಿನಲ್ಲಿಯೂ ಆರಂಭಿಸಲಾಗಿದೆ.
ಜುಲೈ 1ರಿಂದ ತಾಲೂಕಿನ ಎಲ್ಲ ಹೋಬಳಿಗಳಲ್ಲಿ ಕೃಷಿ ಗಣತಿಗೆ ಚಾಲನೆ ನೀಡಲಾಗಿದೆ. ಸೆಪ್ಟೆಂಬರ್ ಒಳಗೆ ಮೊದಲ ಹಂತದ ಗಣತಿ ಕಾರ್ಯ ಪೂರ್ಣಗೊಳಿಸಲು ಗಡವು ನಿಗದಿ ಮಾಡಲಾಗಿದೆ. ತಹಸೀಲ್ದಾರ್ ಮಹದೇವು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ, ನೋಡಲ್ ಅಧಿಕಾರಿಗಳು ಭೂದಾಖಲೆಗಳ ತಂಡವು ಹರದನಹಳ್ಳಿ ಹೋಬಳಿ ತಂಡಕ್ಕೆ ಭೇಟಿ ನೀಡಿ ಕೃಷಿ ಗಣತಿ ಕಾರ್ಯವನ್ನು ಪರಿಶೀಲಿಸಿದೆ. ಖಾತೆದಾರರು, ರೈತರು ಕೃಷಿ ಗಣತಿಯನ್ನು ಯಶಸ್ವಿಗೊಳಿಸಬೇಕು ಎಂದು ತಹಸೀಲ್ದಾರ್ ಮಹದೇವು ಪ್ರಕಟಣೆಯಲ್ಲಿ ಕೋರಿದ್ದಾರೆ.
 
ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
 ಚಾಮರಾಜನಗರ, ಜು. 04 - ನಗರದ ಆದರ್ಶ ವಿದ್ಯಾಲಯದಲ್ಲಿ 2016-17ನೇ ಶೈಕ್ಷಣಿಕ ಸಾಲಿನಲ್ಲಿ 7 ರಿಂದ 10ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
 ವಿದ್ಯಾರ್ಥಿಯು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಆದರ್ಶ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕೆ ಪರೀಕ್ಷೆ ಬರೆದಿದ್ದು ಈ ಸಂಬಂಧ ಪ್ರವೇಶ ಪತ್ರ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ನಗರದ ಆದರ್ಶ ವಿದ್ಯಾಲಯದ ಕಚೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಕೆಗೆ ಜುಲೈ 9 ಕಡೆಯ ದಿನವಾಗಿದೆ. ಜುಲೈ 11ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದೆಂದು ವಿದ್ಯಾಲಯದ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸಹಾಯಧನ : ಅರ್ಜಿ ಆಹ್ವಾನ
 ಚಾಮರಾಜನಗರ, ಜು. 04 - ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ಉದ್ಯೋಗಿನಿ ಯೋಜನೆಯಡಿ ನೀಡಲಿರುವ ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದೆ.
ಗರಿಷ್ಠ ಯೋಜನಾ ವೆಚ್ಚವನ್ನು 1 ಲಕ್ಷ ರೂ.ಗಳೆಂದು ನಿಗದಿ ಮಾಡಲಾಗಿದೆ. ಸಾಮಾನ್ಯವರ್ಗದ ಮಹಿಳೆಯರಿಗೆ 7500 ರೂ. ಅಥವಾ ಶೇ. 20ರಷ್ಟು ಇವೆರಡರ ಪೈಕಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನೀಡಲಾಗುವುದು. ವಿಶೇಷ ವರ್ಗದ ಮಹಿಳೆಯರಿಗೆ 10 ಸಾವಿರ ರೂ. ಅಥವಾ ಶೇ. 30ರಷ್ಟು ಪೈಕಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನೀಡಲಾಗುವುದು. ಸ್ತ್ರೀಶಕ್ತಿ ಗುಂಪಿನ ಸದಸ್ಯರಿಗೂ ಸಾಲಸಹಾಯಧನ ನೀಡಲಾಗುತ್ತದೆ.
ಕೃಷಿ ಆಧಾರಿತ ಹಾಗೂ ಇತರೆ ಚಟುವಟಿಕೆಗಳಿಗೆ ಸಾಲ ನೀಡಲಾಗುತ್ತದೆ. ತರಬೇತಿ ಪಡೆದಿರುವವರಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಗಳು 18 ರಿಂದ 45ರ ವಯೋಮಿತಿಯೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ 45 ಸಾವಿರ ರೂ. ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಧವೆಯರು, ಸಂಕಷ್ಟಗೊಳಗಾದ ಮಹಿಳೆಯರು, ಅಂಗವಿಕಲರಿಗೆ ಆದ್ಯತೆ ಕೊಡಲಾಗುತ್ತದೆ.
ಅರ್ಜಿಗಳನ್ನು ಚಾಮರಾಜನಗರ, ಸಂತೆಮರಹಳ್ಳಿ, ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 18ರೊಳಗೆ ಸಲ್ಲಿಲ್ಲಿಸಬೇಕು. ಅರ್ಜಿಗಳನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವೆಬ್ ಸೈಟ್ ತಿತಿತಿ.ಞsತಿಜಛಿ.ಛಿom ಮೂಲಕವು ಪಡೆಯಬಹುದು.
ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಅಥವಾ ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸಂತೆಮರಹಳ್ಳಿ ವ್ಯಾಪ್ತಿಯ ಅಂಗನವಾಡಿಗಳಲ್ಲಿನ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
 ಚಾಮರಾಜನಗರ, ಜು. 04 - ಚಾಮರಾಜನಗರ ತಾಲೂಕು ಸಂತೆಮರಹಳ್ಳಿಯ ವ್ಯಾಪ್ತ್ಲಿಯಲ್ಲಿ ಇರುವ ಅಂಗನವಾಡಿಗಳಲ್ಲಿ 19 ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು ಇದರ ಭರ್ತಿಗಾಗಿ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಸವಟ್ಟಿ (ಇತರೆ), ಹೆಗ್ಗವಾಡಿ (ಪರಿಶಿಷ್ಟ ಜಾತಿ), ಹೆಚ್. ಮೂಕಳ್ಳಿ (ಇತರೆ), ಹೆಗ್ಗೊಠಾರ-3(ಪರಿಶಿಷ್ಟ ಜಾತಿ), ಹೆಗ್ಗವಾಡಿ-2 (ಇತರೆ), ರೇಚಂಬಳ್ಳಿ-1 (ಇತರೆ), ಕಸ್ತೂರು (ಇತರೆ), ಸೊತ್ತನಹುಂಡಿ (ಇತರೆ), ಮಸಣಾಪುರ-4 (ಇತರೆ),  ಉಮ್ಮತ್ತೂರು-4 (ಪರಿಶಿಷ್ಟ ಜಾತಿ), ಸುತ್ತೂರು-2 (ಪರಿಶಿಷ್ಟ ಜಾತಿ), ಜನ್ನೂರು ಹೊಸೂರು-2 (ಇತರೆ), ಮರಿಯಾಲ-2 (ಇತರೆ), ಬೇಡರಪುರ-2 (ಇತರೆ), ಕಾಡಹಳ್ಳಿ-1 (ಇತರೆ), ಮಸಗಾಪುರ (ಇತರೆ), ಮೂಡಲ ಅಗ್ರಹಾರ-1 (ಇತರೆ), ಲಿಂಗಣಾಪುರ (ಇತರೆ), ದೇಮಹಳ್ಳಿ-2 (ಇತರೆ) ಅಂಗನವಾಡಿಗಳಲ್ಲಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿರಬೇಕು. ಕನಿಷ್ಟ 4ನೇ ತರಗತಿ ಗರಿಷ್ಟ 9ನೇ ತರಗತಿ  ತೇರ್ಗಡೆಯಾಗಿರಬೇಕು. 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ನಿಗದಿತ ಮಾದರಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 16ರ ಸಂಜೆ 5 ಗಂಟೆಯೊಳಗೆ ಸಂತೆಮರಹಳ್ಳಿಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಇಡಲಾಗಿರುವ ಟೆಂಡರ್ ಪೆಟ್ಟಿಗೆಯಲ್ಲಿ ಹಾಕಬೇಕು. ವಿವರಗಳಿಗೆ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕೊಳ್ಳೇಗಾಲ ತಾಲೂಕು : ಅಂಗನವಾಡಿ ಸಹಾಯಕಿಯರ, ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
 ಚಾಮರಾಜನಗರ, ಜು. 04- ಕೊಳ್ಳೇಗಾಲ ತಾಲೂಕಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮುಡಿಗುಂಡ-5 (ಪರಿಶಿಷ್ಟ ಪಂಗಡ), ಲೊಕ್ಕನಹಳ್ಳಿ-4 (ಪರಿಶಿಷ್ಟ ಜಾತಿ), ಉದ್ದನೂರು (ಪರಿಶಿಷ್ಟ ಪಂಗಡ), ಇರ್ದಾಳ್ ದೊಡ್ಡಿ (ಪರಿಶಿಷ್ಟ ಪಂಗಡ), ಕಕ್ಕೆಹೊಲ (ಮಿನಿ) (ಪರಿಶಿಷ್ಟ ಪಂಗಡ), ಮೆದನಗಾಣೆ (ಮಿನಿ)(ಪರಿಶಿಷ್ಟ ಪಂಗಡ), ಜಗನ್ನಾಥನದೊಡ್ಡಿ (ಸಾಮಾನ್ಯ), ಕುರಟ್ಟಿ ಹೊಸೂರು-2 (ಪರಿಶಿಷ್ಟ ಜಾತಿ), ವಿ.ಎಸ್. ದೊಡ್ಡಿ (ಸಾಮಾನ್ಯ) ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರ ಹುದ್ದೆಗಳಿವೆ.
ದಂಟಳ್ಳಿ-1 (ಸಾಮಾನ್ಯ), ದಂಟಳ್ಳಿ-2 (ಸಾಮಾನ್ಯ), ಶೆಟ್ಟಳ್ಳಿ-2 (ಪರಿಶಿಷ್ಟ ಜಾತಿ). ಕುರಟ್ಟಿಹೊಸೂರು-1 (ಸಾಮಾನ್ಯ), ಕುರಟ್ಟಿಹೊಸೂರು-2 (ಪರಿಶಿಷ್ಟ ಜಾತಿ), ಹಲಗಾಪುರ (ಸಾಮಾನ್ಯ), ಜಗನ್ನಾಥನದೊಡ್ಡಿ (ಸಾಮಾನ್ಯ), ದೊಡ್ಡಿಂದುವಾಡಿ-4 (ಪರಿಶಿಷ್ಟ ಜಾತಿ), ಕೆಂಪನಪಾಳ್ಯ-1 (ಪರಿಶಿಷ್ಟ ಜಾತಿ), ಕೋಟೆಯೂರು (ಸಾಮಾನ್ಯ), ಪ್ರಕಾಶ್ ಪಾಳ್ಯ (ಸಾಮಾನ್ಯ), ಬೂದಬಾಳು-1 (ಸಾಮಾನ್ಯ), ಚಿಕ್ಕಮಾಲಾಪುರ-1 (ಪರಿಶಿಷ್ಟ ಜಾತಿ), ಗಂಗಾಧರನಕಟ್ಟೆ (ಸಾಮಾನ್ಯ), ಬೆಳತ್ತೂರು (ಸಾಮಾನ್ಯ), ಉದ್ದನೂರು (ಸಾಮಾನ್ಯ), ಜಿ.ಆರ್. ನಗರ (ಪರಿಶಿಷ್ಟ ಜಾತಿ), ಮುತ್ತುಶೆಟ್ಟಿಯೂರು (ಸಾಮಾನ್ಯ), ಗೋಪಿಶೆಟ್ಟಿಯೂರು-1 (ಪರಿಶಿಷ್ಟ ಜಾತಿ), ಆಂಜನೇಯಪುರ (ಸಾಮಾನ್ಯ), ಹಳೆ ಅಣಗಳ್ಳಿ (ಪರಿಶಿಷ್ಟ ಜಾತಿ), ಅರೇಪಾಳ್ಯ (ಸಾಮಾನ್ಯ), ಸಿಲ್ಕಲ್ ಪುರ (ಪರಿಶಿಷ್ಟ ಜಾತಿ), ಟಗರಪುರಮೋಳೆ-1 (ಸಾಮಾನ್ಯ), ಮಲ್ಲಹಳ್ಳಿಮಾಳ (ಪರಿಶಿಷ್ಟ ಜಾತಿ), ಸತ್ತೇಗಾಲ-3 (ಸಾಮಾನ್ಯ), ಸತ್ತೇಗಾಲ ಹ್ಯಾಂಡ್ ಪೋಸ್ಟ್ (ಸಾಮಾನ್ಯ), ಹಳೇ ಹಂಪಾಪುರ-1 (ಪರಿಶಿಷ್ಟ ಜಾತಿ), ಮಹಾಲಿಂಗನಕಟ್ಟೆ (ಸಾಮಾನ್ಯ), ಭೀಮನಗರ-2 (3ನೇ ವಾರ್ಡ್) (ಪರಿಶಿಷ್ಟ ಜಾತಿ), ಕಾಶಿವಿಶ್ವನಾಥಗುಡಿ ಬೀದಿ (15ನೇ ವಾರ್ಡ್) (ಸಾಮಾನ್ಯ), ಕಲ್ಲುಬಾವಿ ಕೇಂದ್ರ (4ನೇ ವಾರ್ಡ್) (ಪರಿಶಿಷ್ಟ ಜಾತಿ), ಈದ್ಗಾ ಮೊಹಲ್ಲಾ-1 (6ನೇ ವಾರ್ಡ್) (ಸಾಮಾನ್ಯ), ಬಾಪುನಗರ-1 (26ನೇ ವಾರ್ಡ್) (ಸಾಮಾನ್ಯ), ಉಚ್ಚಾಲಮ್ಮ ಕೇಂದ್ರ (1ನೇ ವಾರ್ಡ್)(ಪರಿಶಿಷ್ಟ ಜಾತಿ), ನೂರ್ ಮೊಹಲ್ಲಾ-2 (24ನೇ ವಾರ್ಡ್) (ಸಾಮಾನ್ಯ) ಅಂಗನವಾಡಿಗಳಲ್ಲಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
ಕಾರ್ಯಕರ್ತೆಯರ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಸಹಾಯಕಿಯರ ಹುದ್ದೆಗಳಿಗೆ ಕನಿಷ್ಟ 4ನೇ ತರಗತಿ ಗರಿಷ್ಟ 9ನೇ ತರಗತಿ ಉತ್ತೀರ್ಣರಾಗಿರಬೇಕು. 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿರಬೇಕು.
ನಿಗದಿತ ಮಾದರಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 22ರ ಸಂಜೆ 5 ಗಂಟೆಯೊಳಗೆ ಕೊಳ್ಳೇಗಾಲ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಇಡಲಾಗಿರುವ ಟೆಂಡರ್ ಪೆಟ್ಟಿಗೆಯಲ್ಲಿ ಹಾಕಬೇಕು. ವಿವರಗಳಿಗೆ ಕೊಳ್ಳೇಗಾಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸಂತೆಮರಹಳ್ಳಿ ವ್ಯಾಪ್ತಿಯ ಅಂಗನವಾಡಿಗಳಲ್ಲಿನ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
 ಚಾಮರಾಜನಗರ, ಜು. 04  ಚಾಮರಾಜನಗರ ತಾಲೂಕು ಸಂತೆಮರಹಳ್ಳಿಯ ವ್ಯಾಪ್ತ್ಲಿಯಲ್ಲಿ ಇರುವ ಅಂಗನವಾಡಿಗಳಲ್ಲಿ 5 ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಇದ್ದು ಇದರ ಭರ್ತಿಗಾಗಿ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರಗೂರು ಮೋಳೆ-1 (ಇತರೆ), ನಾಗವಳ್ಳಿ-8 (ಪರಿಶಿಷ್ಟ ಜಾತಿ), ನಲ್ಲೂರು-4 (ಪರಿಶಿಷ್ಟ ಜಾತಿ), ಬಾಗಳಿ (ಪರಿಶಿಷ್ಟ ಜಾತಿ), ಚಾಟಿಪುರ-2 (ಇತರೆ) ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರ ಹುದ್ದೆಗಳಿವೆ.
ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿರಬೇಕು. ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು.
ನಿಗದಿತ ಮಾದರಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 20ರ ಸಂಜೆ 5 ಗಂಟೆಯೊಳಗೆ ಸಂತೆಮರಹಳ್ಳಿಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಇಡಲಾಗಿರುವ ಟೆಂಡರ್ ಪೆಟ್ಟಿಗೆಯಲ್ಲಿ ಹಾಕಬೇಕು. ವಿವರಗಳಿಗೆ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಪ್ರವಾಸಿ ಟ್ಯಾಕ್ಸಿ ಸೌಲಭ್ಯ ಫಲಾನುಭವಿಗಳ ಪಟ್ಟಿ ಪ್ರಕಟ
 ಚಾಮರಾಜನಗರ, ಜು. 04 - ಪ್ರವಾಸೋದ್ಯಮ ಇಲಾಖೆಯ ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪ್ರವಾಸಿ ಟ್ಯಾಕ್ಸಿ ಸೌಲಭ್ಯಕ್ಕೆ ಆಯ್ಕೆಯಾಗಿರುವ ಅಂತಿಮ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
2014-15 ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆಯಡಿ 13, ಗಿರಿಜನ ಉಪಯೋಜನೆಯಡಿ 6 ಮಂದಿ, 2015-16ನೇ ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆಯಡಿ 30, ಗಿರಿಜನ ಉಪಯೋಜನೆಯಡಿ 4 ಮಂದಿ, ಬಿಸಿಎಂ ವರ್ಗದ 8 ಮಂದಿ ಫಲಾನುಭವಿಗಳು 2 ಲಕ್ಷ ರೂ. ಸಹಾಯಧನದೊಂದಿಗೆ ನೀಡಲಿರುವ ಪ್ರವಾಸೀ ಟ್ಯಾಕ್ಸಿ ಯೋಜನೆಗೆ ಆಯ್ಕೆಯಾಗಿದ್ದಾರೆ.
ಪಟ್ಟಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಾದೇಶಿಕ ಪ್ರವಾಸಿ ಕಚೇರಿ ಸಹಾಯಕ ನಿರ್ದೆಶಕರಾದ ಜನಾರ್ಧನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಸಿಎಂ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
 ಚಾಮರಾಜನಗರ, ಜು. 04- ಪ್ರವಾಸೋದ್ಯಮ ಇಲಾಖೆ ವತಿಯಿಂದ ಬಿಸಿಎಂ ವರ್ಗದವರಿಗೆ 2 ಲಕ್ಷ ರೂ. ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ನೀಡುವ ಸೌಲಭ್ಯಕ್ಕೆ ಅರ್ಜಿ ವಿತರಿಸುವ ಹಾಗೂ ಭರ್ತಿ ಮಾಡಿದ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
2015-16ನೇ ಸಾಲಿನಲ್ಲಿ ಬಿಸಿಎಂ ವರ್ಗದವರಿಗೆ ಪ್ರವಾಸಿ ಟ್ಯಾಕ್ಸಿ ಸೌಲಭ್ಯ ಪಡೆದುಕೊಳ್ಳುವ ಸಲುವಾಗಿ ಅರ್ಜಿ ಸಲ್ಲಿಕೆಗೆ ಜೂನ್ 30 ಕಡೆಯ ದಿನವೆಂದು ನಿಗದಿ ಮಾಡಲಾಗಿತ್ತು. ಸ್ವೀಕೃತಗೊಂಡ ಅರ್ಜಿಗಳ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಅರ್ಜಿ ವಿತರಿಸುವ ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸ್ವೀಕರಿಸುವ ಅವಧಿಯನ್ನು ಆಗಸ್ಟ್ 6ರವರೆಗೆ ವಿಸ್ತರಿಸಲಾಗಿದೆ. ಬಿಸಿಎಂ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಪ್ರವಾಸಿ ಟ್ಯಾಕ್ಸಿ ಸೌಲಭ್ಯ ಪಡೆದುಕೊಳ್ಳಬೇಕೆಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೆಶಕ ತಿಳಿಸಿದ್ದಾರೆ.

                         ಪಿಡಿಓಗಳು ಶಿಸ್ತು ರೂಢಿಸಿಕೊಳ್ಳಿ: ಸಿಇಓ ಸಲಹೆ
ಚಾಮರಾಜನಗರ: ಸರ್ಕಾರದ ಮುಖ್ಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಪ್ರತಿ ದಿನ ಮೂರು ತಾಸು ಮೀಸಲಾಗಿ ಇಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ನೂತನ ಕೆಡಿಪಿ ಭವನದಲ್ಲಿ ಸೋಮವಾರ ನಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸ್ವಚ್ಛ ಭಾರತ್ ಮಿಷನ್, ವಸತಿ ಯೋಜನೆಗಳ ಪ್ರಗತಿಯನ್ನು ಪಿಡಿಓಗಳು ಪ್ರತಿನಿತ್ಯ ಗಮನಿಸುವುದರ ಜತೆಗೆ ನಿಗಧಿತ ಗುರಿಯನ್ನು ಕಾಲಮಿತಿಯೊಳಗೆ ತಲುಪುದಕ್ಕೆ ಸರಿಯಾದ ದಿಕ್ಕಿನಲ್ಲಿ ಯೋಜನೆ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಿಡಿಓಗಳು ಗ್ರಾಮ ಪಂಚಾಯಿತಿ ಕಚೇರಿಗೆ ಹೋಗಿ ಅಲ್ಲಿನ ಕೆಲಸ ಮಾಡುವುದರ ಜತೆಗೆ. ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಇರುವ ಶಾಲೆ, ವಿದ್ಯಾರ್ಥಿ ನಿಲಯ, ಅಂಗನವಾಡಿ, ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಬೇಕು. ಸಮಸ್ಯೆಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಮಾಡುವಂತಹ ಕೆಲಸ ಮಾಡಬೇಕು ಎಂದು ತಿಳಿಸಿದರು.
ಪಿಡಿಓಗಳು ಮೂಲಭೂತವಾಗಿ ಶಿಸ್ತನ್ನು ರೂಢಿಸಿಕೊಳ್ಳಬೇಕು. ಪಾರದರ್ಶಕವಾಗಿ ಕೆಲಸ ಮಾಡಬೇಕು. ಆಗ ಅವರ ವ್ಯಾಪ್ತಿಯಲ್ಲಿ ಬರುವ ನೌಕರರು ಶಿಸ್ತಿನಿಂದ ಕೂಡಿರುತ್ತದೆ. ಇದರಿಂದಾಗಿ ಗ್ರಾಮ ಪಂಚಾಯಿತಿಯಲ್ಲಿ ಆರ್ಥಿಕ ಶಿಸ್ತು ಸಹ ಕಾಣುವಂತಾಗುತ್ತದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರುಗಳು ಸರ್ಕಾರ ಕೊಟ್ಟಿರುವ ಮಾರ್ಗದರ್ಶಿ ಸೂತ್ರದ ಅಡಿಯಲ್ಲಿಯೇ ಕೆಲಸ ಮಾಡಬೇಕು. ಇದನ್ನು ಬಿಟ್ಟು ತಮಗೆ ಸಂಬಂಧಿಸದ ಕೆಲಸಗಳನ್ನು ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿರಾಜಪ್ಪ, ಸಹಾಯಕ ಕಾರ್ಯದರ್ಶಿ ನಾಗೇಂದ್ರಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗÀಳಾದ ರೇವಣ್ಣ, ಮಂಜುನಾಥ ಸ್ವಾಮಿ, ಪುಷ್ಪಾ ಕಮ್ಮಾರ್ ಮತ್ತಿತರರು ಹಾಜರಿದ್ದರು.

18-03-2016 to 29-03-2016

ಅಸ್ಪøಶ್ಯತೆ ನಿವಾರಣೆಗೆ ಸಂಕಲ್ಪ : ಜಿಲ್ಲಾಧಿಕಾರಿ ಬಿ. ರಾಮು
ಚಾಮರಾಜನಗರ, ಮಾ. 18 - ಸಮಾಜದಲ್ಲಿ ಅಸ್ಪøಶ್ಯತಾ ಆಚರಣೆ ಬೇರಿಗೆ ಪೋಷಣೆ ಮಾಡದೆ ಬುಡಸಮೇತ ಕಿತ್ತುಹಾಕುವ ಸಂಕಲ್ಪ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಸ್ಪøಶ್ಯತಾ ನಿವಾರಣೆ ಕುರಿತ ವಿಚಾರಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಬಂದು ಬಹುವರ್ಷಗಳು ಕಳೆದಿವೆ. ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕು ಇದೆ. ಅಸ್ಪøಶ್ಯತೆ ಎನ್ನುವ ತಾಯಿ ಬೇರಿಗೆ ನೀರು, ಮಣ್ಣು, ಗೊಬ್ಬರ ಎರೆಯುವ ಕೆಲಸ ಮಾಡಬಾರದು. ಅಸ್ಪøಶ್ಯತೆ ಎಂಬ ಹೆಮ್ಮರವನ್ನು ಕಾಂಡದಿಂದ ಹಿಡಿದು ಬೇರು ಸಮೇತ ಕಿತ್ತೊಗೆಯುವ ಕಾಲ ಬಂದೇಬರುತ್ತದೆ. ಜನತೆ ಸೌಹಾರ್ಧತೆಯಿಂದ ಬಾಳುವ ಮನೋಭಾವನೆ ರೂಢಿಸಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು. ಸ್ವಾಭಿಮಾನದ ಜೀವನ ನಡೆಸಬೇಕು. ವ್ಯಕ್ತಿಗಳ ನಡುವೆ ಹುಟ್ಟುಹಾಕುವ ಕಂದಕಗಳನ್ನು ಮುಚ್ಚಬೇಕು. ಯಾವುದೇ ಬೇಧಭಾವ ಎಣಿಸದೆ ನೆಮ್ಮದಿಯಾಗಿ ಬದುಕಬೇಕು. ಮನಶಾಂತಿ ಹಾಳು ಮಾಡಿಕೊಳ್ಳದೆ ಕಷ್ಟಕ್ಕೆ ದೂಡಿಕೊಳ್ಳದೆ ಸಾತ್ವಿಕ ಬದುಕು ನಡೆಸುವ ಪ್ರಯತ್ನ ಮಾಡಬೇಕೆಂದು ರಾಮು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಳಂದ ಬೌದ್ಧ ವಿವಿಯ ಬೋಧಿದತ್ತ ಬಂತೇಜಿ ಅವರು ಜಾತೀಯತೆ ಮುಂದುವರೆಸುವ ವ್ಯವಸ್ಥೆಯನ್ನು ಕೈಬಿಡಬೇಕು. ಎಲ್ಲರನ್ನು ಸರಿಸಮಾನರಾಗಿ ಕಾಣುವ ಆಶಯಗಳಿಗೆ ಒಪ್ಪಿಕೊಳ್ಳುವ ಚಿಂತನೆ ಮಾಡಬೇಕು ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಹರವೆ ವಿರಕ್ತ ಮಠದ ಸರ್ಪಭೂಷಣ ಸ್ವಾಮೀಜಿಯವರು ಪ್ರತಿಯೊಬ್ಬರು ಮತ್ತೊಬ್ಬರನ್ನು ಗೌರವ ವಿಶ್ವಾಸದಿಂದ ಕಾಣುವಂತಾಗಬೇಕು. ಇನ್ನೊಬ್ಬರನ್ನು ಬದಲಾಯಿಸುವ ಮೊದಲು ತಮ್ಮನ್ನು ತಾವೇ ಬದಲಾಯಿಸಿಕೊಳ್ಳಬೇಕು. ಸಮಾಜದಲ್ಲಿ ಬದಲಾವಣೆ ತರುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದರು.
ಅಸ್ಪøಶ್ಯತೆ ನಿರ್ಮೂಲನೆಯಲ್ಲಿ ನಾಗರಿಕರ ಜವಾಬ್ದಾರಿ ಮತ್ತು ಹಕ್ಕು ಬಾಧ್ಯತೆಗಳು ಎಂಬ ವಿಷಯ ಕುರಿತು ಮಾತನಾಡಿದ ಅಮೃತ ಅತ್ರಾಡಿ ಅವರು ಸಾಮಾಜಿಕ ಕಳಕಳಿ ಹೊಂದಿರುವ ಮನಸ್ಸುಗಳ ಜತೆ ಆಡಳಿತಶಾಹಿ ಕೈಜೋಡಿಸಿದರೆ ಅಸ್ಪøಶ್ಯತೆಯ ಬೇರನ್ನು ಕಿತ್ತುಹಾಕಲು ಸಾಧ್ಯವಾಗಲಿದೆ. ಸ್ವಾಭಿಮಾನ ಬೆಳೆಸಿಕೊಂಡು  ಅಂಬೇಡ್ಕರ್ ಅವರ ಹಾದಿಯನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.
ಅಸ್ಪøಶ್ಯತೆಯ ಉಗಮ ಮತ್ತು ಸಾಮಾಜಿಕ ಅಸಮಾನತೆ ಎಂಬ ವಿಷಯ ಕುರಿತು ಮಾತನಾಡಿದ ಮೈಸೂರಿನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಡಾ. ಶಿವಕುಮಾರ್ ಸಹಭೋಜನ, ಅಂತರ್ಜಾತಿ ವಿವಾಹ, ಶಿಕ್ಷಣದಿಂದಲೇ ಅಸ್ಪøಶ್ಯತೆ ನಿವಾರಣೆಯಾಗಲು ಸಾಧ್ಯ ಎಂಬುದನ್ನು ಪೂರ್ಣವಾಗಿ ಒಪ್ಪಲಾಗದು. ಅಂಬೇಡ್ಕರ್ ಪ್ರತಿಪಾದಿಸಿದಂತೆ ಅಧಿಕಾರ ಹೀನ ಸ್ಥಿತಿಯೇ ಅಸ್ಪøಶ್ಯತೆ. ಸ್ವತಂತ್ರ್ಯ ರಾಜಕೀಯ ಅಧಿಕಾರವನ್ನು ಹೋರಾಟ ಮಾಡಿ ಪಡೆಯಬೇಕು. ವಿನಹ ಗೋಗರೆದು ಬೇಡಿದರೆ ಅಸ್ಪøಶ್ಯತೆ ಹೋಗುವುದಿಲ್ಲ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ಅಸ್ಪøಶ್ಯತೆ ನಿರ್ಮೂಲನೆ, ಕಾನೂನು ನೆರವು, ಪರಿಶಿಷ್ಟ ಜಾತಿ ವರ್ಗಗಳ ಮೇಲಿನ ದೌರ್ಜನ್ಯ ಪ್ರತಿಬಂಧ ಅಧಿನಿಯಮ ವಿಷಯ ಕುರಿತು ಮಾತನಾಡಿದರು.
ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ. ಶಿವಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರೇವಣ್ಣ, ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕರಾದ ದಾಶರಥಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆ
ಚಾಮರಾಜನಗರ, ಮಾ. 18- ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚಿಸಲಾಗಿದೆ.
ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ದೂರು ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ. ನಿವೃತ್ತ ಕೆಎಎಸ್ ಅಧಿಕಾರಿ ಪುಟ್ಟಮಾದಯ್ಯ, ದೀನಬಂಧು ಸಂಸ್ಥೆಯ ಪ್ರೊ.ಜಿ.ಎಸ್. ಜಯದೇವ್ ಸದಸ್ಯರಾಗಿದ್ದು ಜಿಲ್ಲಾ ಪೊಲೀಸ್ ಅಧೀಕ್ಷಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.
ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರವು ಡಿವೈಎಸ್‍ಪಿ ಹಾಗೂ ಕೆಳಗಿನ ಹಂತದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಂಜ್ಞೆಯ ಅಪರಾಧಗಳಲ್ಲಿ ತೊಡಗಿದ ಬಗೆಗಿನ ದೂರುಗಳ ಬಗ್ಗೆ ವಿಚಾರಣೆ ಮಾಡುವ ಅಧಿಕಾರ ಹೊಂದಿದೆ. ಪೊಲೀಸ್ ಅಭಿರಕ್ಷೆಯಲ್ಲಿ ನಡೆದ ಸಾವು, ತೀವ್ರ ಸ್ವರೂಪದ ಗಾಯ, ಅತ್ಯಾಚಾರ, ಇನ್ನಿತರ ವಿಷಯಗಳನ್ನು ವಿಚಾರಣೆ ಮಾಡುವ ಅಧಿಕಾರ ಸಹ ಹೊಂದಿದೆ.
ಡಿವೈಎಸ್‍ಪಿಗಿಂತ ಮೇಲ್ಪಟ್ಟ ಅಧಿಕಾರಿಗಳ ವಿರುದ್ಧ ದೂರುಗಳು ಸ್ವೀಕೃತವಾದಲ್ಲಿ ರಾಜ್ಯಮಟ್ಟದ ದೂರು ಪ್ರಾಧಿಕಾರಕ್ಕೆ ದೂರು ರವಾನಿಸಬೇಕಾಗುತ್ತದೆ. ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರವು ಪ್ರತಿವರ್ಷ ರಾಜ್ಯಸರ್ಕಾರಕ್ಕೆ ವಾರ್ಷಿಕ ವರದಿಯನ್ನು ಸಲ್ಲಿಸಬೇಕಿದೆ.
ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ಬಂದ ದೂರುಗಳನ್ನು ವಿಚಾರಣೆ ಮಾಡಲು ಸಿವಿಲ್ ನ್ಯಾಯಾಲಯದಷ್ಟೇ ಅಧಿಕಾರವಿರುತ್ತದೆ.
ಪ್ರತಿ ಠಾಣಾ ಮಟ್ಟದಲ್ಲಿ ಒಂದೊಂದು ಘಟಕ ಪ್ರಾರಂಭಿಸಬೇಕಿದೆ. ಕರ್ನಾಟಕ ರಾಜ್ಯ ಪೊಲೀಸ್ (ತಿದ್ದುಪಡಿ) ಕಾಯಿದೆ 2012ರ ನಿಯಮ 20ಡಿ, 20ಇ, 20ಎಫ್ ಹಾಗೂ 20ಜಿ ನಲ್ಲಿರುವ ಅಧಿಕಾರಗಳನ್ನು ಹೊಂದಿರುತ್ತದೆ.
ಯಾವುದೇ ದೂರು ಸಲ್ಲಿಸಬೇಕಿದ್ದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿ, ಮೈಸೂರು, ದೂ.ಸಂಖ್ಯೆ 0821-2414088, ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ, ಚಾಮರಾಜನಗರ ದೂ.ಸಂಖ್ಯೆ 08226-222243, 222912 ಮತ್ತು 224005 ಸಂಪರ್ಕಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇಸಿಗೆ ಹಿನ್ನೆಲೆ : ನೈರ್ಮಲ್ಯ ಕ್ರಮ ಪಾಲನೆಗೆ ನಗರಸಭೆ ಸೂಚನೆ
ಚಾಮರಾಜನಗರ, ಮಾ. 18 - ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿರುವ ಹೋಟೆಲ್, ಕ್ಯಾಂಟೀನ್, ಬಾರ್, ರೆಸ್ಟೋರೆಂಟ್ ಆಹಾರ ಪದಾರ್ಥ ಮಾರಾಟಗಾರರು ನೈರ್ಮಲ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ನಗರಸಭೆ ಸೂಚಿಸಿದೆ.
ಹೋಟೆಲ್‍ನಲ್ಲಿ ಗ್ರಾಹಕರಿಗೆ ಬಿಸಿ ನೀರು ಹಾಗೂ ಬಿಸಿ ಆಹಾರ ಪದಾರ್ಥಗಳನ್ನೇ ನೀಡಬೇಕು. ಸಿಹಿತಿಂಡಿಗಳ ಮೇಲೆ  ನೊಣ ಕ್ರಿಮಿಕೀಟ ಕೂರದ ಹಾಗೆ ಜಾಗ್ರತೆ ವಹಿಸಬೇಕು.
ರಸ್ತೆ ಬದಿಯ ಎಳನೀರು, ಹಣ್ಣು, ಪಾನಿಪುರಿ, ಫಾಸ್ಟ್ ಫುಡ್, ತಂಪುಪಾನೀಯ ಮಾರಾಟಗಾರರು ತ್ಯಾಜ್ಯವಸ್ತುಗಳನ್ನು ಚರಂಡಿ, ಖಾಲಿ ನಿವೇಶನಗಳಿಗೆ ಸುರಿಯದೆ ನಗರಸಭೆ ವಾಹನಗಳಿಗೆ ನೀಡಬೇಕು ಅಥವಾ ನಗರಸಭೆ ಸೂಚಿಸಿದ ಸ್ಥಳದಲ್ಲಿ ವಿಲೇವಾರಿ ಮಾಡಬೇಕು.
ಹೋಟೆಲ್, ಕ್ಯಾಂಟೀನ್, ಬಾರ್ ರೆಸ್ಟೋರೆಂಟ್‍ಗಳಿಗೆ ನಗರಸಭೆ ಆರೋಗ್ಯ ಅಧಿಕಾರಿ ಸಿಬ್ಬಂದಿ ಭೇಟಿ ನೀಡಿದ ಸಂದರ್ಭದಲ್ಲಿ ಶುಚಿತ್ವ ಪರಿಸರ ಕಂಡುಬರದಿದ್ದಲ್ಲಿ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲಾಗುತ್ತದೆ.
ನಾಗರಿಕರು ರಸ್ತೆ ಬದಿಗಳಲ್ಲಿ ಮಲಮೂತ್ರ ವಿಸರ್ಜನೆ ಮಾಡಬಾರದು. ದನ,ಹಂದಿ, ನಾಯಿ ಇತರೆ ಸಾಕುಪ್ರಾಣಿಗಳನ್ನು ಸಾರ್ವಜನಿಕ ರಸ್ತೆಗೆ ಬಿಡದೆ ತಮ್ಮ ನಿವಾಸ ಅಂಗಳದಲ್ಲೇ ಪೋಷಣೆ ಮಾಡಬೇಕು. ತಪ್ಪಿದಲ್ಲಿ ಪ್ರಾಣಿಗಳನ್ನು ಸೆರೆಹಿಡಿದು ಪಿಂಜರಾಪೋಲ್‍ಗೆ ಸಾಗಿಸಲಾಗುವುದು.
ಬೇಸಿಗೆ ವೇಳೆ ನಾಗರಿಕರು ಹೋಟೆಲ್ ಇನ್ನಿತರ ಆಹಾರ ಪದಾರ್ಥ ಮಾರಾಟಗಾರರು ಆರೋಗ್ಯಪೂರಕ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ನಗರಸಭೆ ಪೌರಾಯುಕ್ತರಾದ ಎಂ.ಜಿ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಮಾರಾಟ ವಿರುದ್ಧ ಕ್ರಮ
 ಚಾಮರಾಜನಗರ, ಮಾ. 18 - ಚಾಮರಾಜನಗರ ಪಟ್ಟಣ ವ್ಯಾಪ್ತಿಯಲ್ಲಿ 40 ಮೈಕ್ರಾನ್‍ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ದಾಸ್ತಾನು ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ.
40 ಮೈಕ್ರಾನ್‍ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಮಾರಾಟ ಬಳಕೆ ದಾಸ್ತಾನು ನಿಷೇಧ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಅಕ್ರಮ ದಾಸ್ತಾನು ವಶಪಡಿಸಿಕೊಂಡು ದಂಡ ವಿಧಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತರಾದ ಎಂ.ಜಿ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಮಾ. 19ರಂದು ನಗರದಲ್ಲಿ ಅಸ್ಪøಶ್ಯತಾ ನಿವಾರಣಾ ಕುರಿತು ಕಾರ್ಯಾಗಾರ
ಚಾಮರಾಜನಗರ, ಮಾ. 18 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಅಸ್ಪøಶ್ಯತಾ ನಿವಾರಣೆ ಕುರಿತ ಕಾರ್ಯಾಗಾರವನ್ನು ಮಾರ್ಚ್ 19ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸೇವಾಭಾರತಿ ಪ್ರಥಮದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಟ್ಟಣ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಆರ್. ಶ್ರೀಕಾಂತ್ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ವಕೀಲರು ಹಾಗೂ ಸೇವಾಭಾರತಿ ಶಿಕ್ಷಣ ಸಂಸ್ಥೆಯ ಸದಸ್ಯರಾದ ಕೆ. ಬಾಲಸುಬ್ರಹ್ಮಣ್ಯಂ ಅಧ್ಯಕ್ಷತೆ ವಹಿಸುವರು.
ಹಿರಿಯ ವಕೀಲರಾದ ಎಂ. ಚಿನ್ನಸ್ವಾಮಿ ವಿಚಾರ ಮಂಡಿಸುವರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ ಜಿ ಗೌಡ, ಪ್ರಾಂಶುಪಾಲರಾದ ಟಿ.ಎ. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ದಾಶರಥಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಮಾ. 23ರಂದು ಡಾ.ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನರಾಮ್ ದಿನಾಚರಣೆ ಕುರಿತು ಪೂರ್ವಭಾವಿ ಸಭೆ
ಚಾಮರಾಜನಗರ, ಮಾ. 18:- ಜಿಲ್ಲಾಡಳಿತದ ವತಿಯಿಂದ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನ ಆಚರಣೆ ಸಮಾರಂಭ ಹಮ್ಮಿಕೊಳ್ಳುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮಾರ್ಚ್ 23ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಸಭೆಗೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿ ಅಗತ್ಯ ಸಲಹೆ, ಮಾರ್ಗದರ್ಶನ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಡಾ. ಬಾಬು ಜಗಜೀವನರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣಾ ಸಮಿತಿಯ ಕಾರ್ಯದರ್ಶಿ ಜಿ. ರಾಜೇಶ್‍ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ.22ರಂದು ಮಹದೇಶ್ವರ ಬೆಟ್ಟದಲ್ಲಿ ಗೋಲಕ ಹಣ ಎಣಿಕೆ
ಚಾಮರಾಜನಗರ, ಮಾ. 18 - ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರಸ್ವಾಮಿ ದೇವಾಲಯದಲ್ಲಿ ಇರುವ  ಗೋಲಕಗಳ  ಹಣ ಎಣಿಕೆ ಕಾರ್ಯವನ್ನು ಮಾಚ್ ್ 22ರಂದು ಬೆಳಿಗ್ಗೆ ನಡೆಸಲಾಗುತ್ತದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಸಹಯೋಗದೊಂದಿಗೆ ಹಣ ಎಣಿಕೆ ಕಾರ್ಯ ಮಾಡಲಾಗುತ್ತದೆ ಎಂದು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ. 20ರಂದು ಹೊಸಪೋಡುವಿನಲ್ಲಿ ಗಿರಿಜನ ಬುಡಕಟ್ಟು ಸಾಂಸ್ಕøತಿಕ ಉತ್ಸವ
ಚಾಮರಾಜನಗರ, ಮಾ. 19 :- ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಗಿರಿಜನ ಬುಡಕಟ್ಟು ಸಾಂಸ್ಕøತಿಕ ಉತ್ಸವವನ್ನು ಮಾರ್ಚ್ 20ರಂದು ಬೆಳಿಗ್ಗೆ 11 ಗಂಟೆಗೆ ಕೊಳ್ಳೇಗಾಲ ತಾಲೂಕಿನ ಹನೂರು ವಲಯದ ಹೊಸಪೋಡುನಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವÀರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಉಮಾಶ್ರೀ ಮೆರವಣಿಗೆ ಉದ್ಘಾಟಿಸುವರು. ಶಾಸಕರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್‍ನ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಗೋ. ಮಧುಸೂದನ್, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಸದಸ್ಯರಾದ ಮರುಗದಮಣಿ, ತಾಲೂಕು ಪಂಚಾಯತ್ ಸದಸ್ಯರಾದ ಶಿವಮ್ಮ, ಗ್ರಾಮ ಪಂಚಾಯತ್ ಅಧÀ್ಯಕ್ಷರಾದ ಎಸ್. ಬಸವಣ್ಣ, ಉಪಾಧ್ಯಕ್ಷರಾದ ಶಾಂತಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕರಾದ ಕೆ.ಎ. ದಯಾನಂದ್, ಜಂಟಿನಿರ್ದೇಶಕರಾದ ಬಲವಂತರಾವ್ ಪಾಟೀಲ್ ಪಾಲ್ಗೊಳ್ಳುವರು.
ಬುಡಕಟ್ಟು ಸಾಂಸ್ಕøತಿಕ ಉತ್ಸವದಲ್ಲಿ ಬಿಳಿಗಿರಿರಂಗನ ಬೆಟ್ಟದ ಬಸವರಾಜು ಮತ್ತು ತಂಡದಿಂದ ಗೊರುಕನ ನೃತ್ಯ, ಯರಕನಗದ್ದೆ ಕಾಲೋನಿಯ ಪದ್ಮ ಮತ್ತು ತಂಡದಿಂದ ಗುಬ್ಬಿ ಹಾಲೇ ನೃತ್ಯ, ಕಾಳಮಳೆದೊಡ್ಡಿಯ ತಿಪ್ಪಯ್ಯ ಮತ್ತು ತಂಡದಿಂದ ಪಿನಾಸಿ ನೃತ್ಯ, ಬಿಳಿಗಿರಿರಂಗನ ಬೆಟ್ಟದ ಬೂಪನಿಪೋಡುವಿನ ದಾಸೇಗೌಡ ಮತ್ತು ತಂಡದಿಂದ ಹಾಡುಕೆ, ಮುನೇಶ್ವರ ಕಾಲೋನಿಯ ಶಿವರಾಮು ಮತ್ತು ತಂಡದಿಂದ ಸೋಲಿಗ ನೃತ್ಯ, ಮದ್ದೂರು ಕಾಲೋನಿಯ ರತ್ನಮ್ಮ ಮತ್ತು ತಂಡದಿಂದ ಪಿನಾಸಿ ನೃತ್ಯ, ಹರದನಹಳ್ಳಿಯ ಎಸ್. ನಟರಾಜು ಮತ್ತು ತಂಡದಿಂದ ಸುಗಮ ಸಂಗೀತ, ದಕ್ಷಿಣ ಕೊಡಗಿನ ರಮೇಶ್ ಮತ್ತು ತಂಡದಿಂದ ತೋಟದಿಮ್ಮಿ ನೃತ್ಯ, ಕೋಟೆಕೆರೆಯ ಮಹದೇವನಾಯ್ಕ ಮತ್ತು ತಂಡದಿಂದ ಹುಲಿವೇಷ, ಬಸವಾಪುರದ ಮಹದೇವನಾಯ್ಕ ಮತ್ತು ತಂಡದಿಂದ ತಂಬೂರಿ ಪದ, ಕೊಣದಕೆರೆಯ ದೇವರಾಜ್ ಮತ್ತು ತಂಡದಿಂದ ಮಾರಿ ಕುಣಿತ, ಬಾಣವಾಡಿಯ ಸಣ್ಣಮಾದೇಗೌಡ ಮತ್ತು ತಂಡದಿಂದ ಪಿನಾಸಿ ನೃತ್ಯ, ಹಾವಿನಮೂಲೆ ಕಲಾವಿದರಿಂದ ಸೋಬಾನೆ ಪದ, ಹರದನಹಳ್ಳಿಯ ಮಹೇಶ ಮತ್ತು ತಂಡದಿಂದ ಬೀಸು ಕಂಸಾಳೆ, ಮೈಸೂರಿನ ಮುತ್ತೂರು ಆಶ್ರಮಶಾಲೆ ಮಕ್ಕಳಿಂದ ಜಾನಪದ ನೃತ್ಯ, ಟಗರಪುರ ಪುರುಷೋತ್ತಮ್ ಮತ್ತು ತಂಡದಿಂದ ಭಕ್ತಿಗೀತೆ, ಗುಂಡ್ಲುಪೇಟೆಯ ಬಿ.ಎಂ. ಸುರೇಶ್ ಮತ್ತು ತಂಡದಿಂದ ಹಳ್ಳಿ ಗೌಡ್ರು ಎಂಬ ಸಾಮಾಜಿಕ ನಾಟಕ, ಹಂಗಳದ ಕಾಳನಾಯ್ಕ ಮತ್ತು ತಂಡದಿಂದ ಹರಿಕಥೆ, ಹರದನಹಳ್ಳಿಯ ಹೆಚ್.ಆರ್. ಕೃಷ್ಣಯ್ಯ (ಘಟಂ ಕೃಷ್ಣ) ಮತ್ತು ತಂಡದಿಂದ ರಂಗಗೀತೆ ಹಾಗೂ ಗುಂಡ್ಲುಪೇಟೆ ಕಲಾವಿದರಿಂದ ಕಾಡು ಕುರುಬರ ನೃತ್ಯ ಪ್ರದರ್ಶನ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಏ. 10ರೊಳಗೆ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ : ಡೀಸೀ ರಾಮು ತಾಕೀತು
ಚಾಮರಾಜನಗರ, ಮಾ. 19 - ಬರಪರಿಹಾರ ಯೋಜನೆಯಡಿ ನಿಗದಿಯಾಗಿರುವ ಅನುದಾನದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ತಕ್ಷಣವೇ ಕೈಗೆತ್ತಿಗೊಂಡು ಏಪ್ರಿಲ್ 10ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಬರಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಿರುವ ಮುಂಜಾಗರೂಕತಾ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆ ಸಂದರ್ಭ ಇರುವ ಕಾರಣದಿಂದ ವ್ಯಾಪಕವಾಗಿ ಬರಪರಿಹಾರ ನಿರ್ವಹಣೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಿದೆ.ಬರಪರಿಹಾರ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 75 ಲಕ್ಷ ರೂ.ನಂತೆ ಒಟ್ಟು 3 ಕೋಟಿ ರೂ ಅನುದಾನ ನಿಗದಿಯಾಗಿದ್ದು ಇದಕ್ಕೆ ಮಂಜೂರಾತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ತ್ವರಿತವಾಗಿ ಕುಡಿಯುವ ನೀರಿನ ಕಾಮಗಾರಿಯನ್ನು ಆರಂಭಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಹೋಬಳಿ ಮಟ್ಟಕ್ಕೆ ನೇಮಕವಾಗಿರುವ ನೋಡಲ್ ಅಧಿಕಾರಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್‍ಗಳು ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಬೇಕು. ಅಪೂರ್ಣವಾಗಿರುವ ಕಾಮಗಾರಿ ಪೂರ್ಣ ಮಾಡಬೇಕು. ವಿದ್ಯುತ್ ಸಂಪರ್ಕದ ಕಾರಣದಿಂದ ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಗೊಂಡು ಸಮರ್ಪಕವಾಗಿ ಬೇಸಿಗೆ ವೇಳೆ ನೀರು ಪೂರೈಸಬೇಕೆಂದು ರಾಮು ತಿಳಿಸಿದರು.
ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕ್, ತೊಂಬೆ, ನೀರಿನ ಪೈಪ್ ಲೈನ್ ಸುಸ್ಥಿತಿಯಲ್ಲಿದೆಯೇ ಎಂಬ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಕುಡಿಯುವ ನೀರು ಕಲುಷಿತವಾಗದಂತೆ ಎಚ್ಚರಿಕೆ ವಹಿಸಿ ಶುದ್ಧ ನೀರು ಸರಬರಾಜು ಮಾಡಬೇಕು ಎಂದರು.
ಗ್ರಾಮಾಂತರ ಹಾಗೂ ಪಟ್ಟಣ ನಗರ ಪ್ರದೇಶಗಳಲ್ಲಿ ಇರುವ ನೀರಿನ ಸಂಗ್ರಹಗಾರಗಳನ್ನು ಶುದ್ಧಗೊಳಿಸಬೇಕು. ಕ್ಲೋರಿನೇಷನ್ ಮಾಡಿ ಪುನಃ ಶುಚಿಗೊಳಿಸಬೇಕು. ನಂತರ  ಪರಿಶುದ್ಧ ನೀರು ಸಂಗ್ರಹಿಸಿ ಜನರಿಗೆ ಪೂರೈಸಬೇಕು, ಈ ಕೆಲಸವನ್ನು ಮುಂದಿನ ವಾರದೊಳಗೆ ನಿರ್ವಹಿಸಿ ತಪ್ಪದೇ ವರದಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳುವಾಗ ಒಳಚರಂಡಿ ಹಾದುಹೋಗುವ ಮಾರ್ಗದ ಪಕ್ಕದಲ್ಲಿಯೇ ಪೈಪ್ ಲೈನ್ ಹಾಕಬಾರದು. ಕೊಳವೆ ಒಡೆದು ಒಳಚರಂಡಿ ನೀರು ಸೇರಿ ಕಲುಷಿತವಾಗಿರುವ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಆರೋಗ್ಯಕರವಾಗಿ ನೀರು ಸರಬರಾಜು ಮಾಡುವ ಉದ್ದೇಶದಿಂದ ಒಳಚರಂಡಿ ಪೈಪ್ ಲೈನ್ ಪಕ್ಕದಲ್ಲಿಯೇ ಕುಡಿಯುವ ನೀರಿನ ಕೊಳವೆಗಳನ್ನು ಅಳವಡಿಸುವ ಕೆಲಸವನ್ನು ಕೈಬಿಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಬೇಸಿಗೆ ವೇಳೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ನೀರು ಸರಬರಾಜು ಮಾಡಬೇಕಿರುವ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಚುರುಕಿನಿಂದ ನಿರ್ವಹಿಸಬೇಕು. ಸೂಚಿತ ಅವಧಿಯೊಳಗೆ ಪೂರ್ಣಗೊಳಿಸಿ ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಕೆಲಸ ಹೇಗೆ ಪ್ರಗತಿಯಲ್ಲಿದೆ ಎಂಬ ಬಗ್ಗೆ ವೀಕ್ಷಿಸಿ ವರದಿ ಮಾಡಬೇಕು ಎಂದರು.
ಉದ್ಯೋಗ ಖಾತರಿ ಯೋಜನೆಯನ್ನು ಸಹ ಉತ್ತಮವಾಗಿ ನಿರ್ವಹಿಸಬೇಕು. ಯೋಜನೆಯಡಿ ಜಿಲ್ಲೆಯು ಹೆಚ್ಚಿನ ಪ್ರಗತಿಯತ್ತ ಹೆಜ್ಜೆ ಹಾಕಿದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ನರೇಗಾ ಅಡಿ ಮಾಡಲು ಅವಕಾಶವಿದೆ. ಬರಪೀಡಿತ ಪ್ರದೇಶಗಳಲ್ಲಿ ಹೆಚ್ಚು ಅವಧಿಯವರೆಗೆ ಉದ್ಯೋಗ ನೀಡಲು ಅವಕಾಶವೂ ಇದೆ. ಗ್ರಾಮಾಂತರ ಪ್ರದೇಶದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ತಡೆದು ಸ್ಥಳೀಯವಾಗಿಯೇ ಉದ್ಯೋಗ ಮಾಡಲು ಅವಕಾಶಗಳನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎಚ್. ನರಸಿಂಹಮೂರ್ತಿ ಮಾತನಾಡಿ ಈಗಾಗಲೇ ಉದ್ಯೋಗ ಖಾತರಿ ಯೋಜನೆಯಡಿ ನಿರ್ವಹಿಸಲಾಗಿರುವ ಕಾಮಗಾರಿ ಸ್ಥಳಕ್ಕೆ ನೋಡಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಾಡಬಹುದಾದ ಕಾಮಗಾರಿ ಕೆಲಸಗಳ ಬಗ್ಗೆ ಮಾರ್ಗದರ್ಶನ ಮಾಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ ಭಾರತಿ, ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ದೇವರಾಜು, ನಾಲ್ಕೂ ತಾಲೂಕು ವ್ಯಾಪ್ತಿಯ ತಹಸೀಲ್ದಾರರು, ನೋಡಲ್ ಅಧಿಕಾರಿಗಳಾಗಿ ನೇಮಕವಾಗಿರುವ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಸರ್ವರನ್ನು ಸಮಾನರನ್ನಾಗಿ ಕಾಣುವ ಆಶಯ ಈಡೇರಿಸಬೇಕು  
  ಚಾಮರಾಜನಗರ, ಮಾ. 19 :- ಬಹುಧರ್ಮೀಯರಿರುವ ಭಾರತದಲ್ಲಿಂದು  ನಾಗರಿಕರೆಲ್ಲರನ್ನು ಸರಿ-ಸಮಾನರಾಗಿ ಕಾಣುವ ಮೂಲಕ ಸಂವಿಧಾನದ ಆಶಯಗಳನ್ನು ಈಡೇರಿಸಬೇಕಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಚಿನ್ನಸ್ವಾಮಿ ಅವರು ತಿಳಿಸಿದರು.
ನಗರದ ಸೇವಾಭಾರತಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಆಸ್ಪøಶ್ಯತಾ ನಿವಾರಣೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ಜಾತಿ ಆಧಾರಿತ ಶೋಷಣೆ, ತಾರತಮ್ಯದಿಂದ ಕೂಡಿದೆ. ಸ್ಪøಶ್ಯ ಮತ್ತು ಆಸ್ಪøಶ್ಯ ಎಂದು ವರ್ಗೀಕರಿಸಿದ್ದರಿಂದ ಶೋಷಿತರಿಗೆ ಯಾವುದೇ ಸೌಲಭ್ಯಗಳಿರಲಿಲ್ಲ. ಸಂವಿಧಾನ ಜಾರಿಯಾದ ನಂತರ ಎಲ್ಲರೂ ಸಮಾನತೆಯಿಂದ ಜೀವನ ನಡೆಸಲು ಅವಕಾಶ ಲಭಿಸಿದೆ. ಸಂವಿಧಾನದ ಮೂಲ ಆಶಯ ಪ್ರತಿಯೊಬ್ಬರು ಸಮಾನತೆಯಿಂದ ಇರಬೇಕೆಂಬುದು ಆಗಿದೆ ಎಂದರು.
ಸಮುದಾಯದಲ್ಲಿ ಯಾವುದೇ ವ್ಯಕ್ತಿ ಶೋಷಣೆ, ದೌರ್ಜನ್ಯಕ್ಕೆ ಒಳಗಾದರೆ ಅಂತಹವರ ಪುನರ್ವಸತಿಗಾಗಿ ಸರ್ಕಾರ ಇಂದು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಸಂವಿಧಾನದ ಹಲವು ಪರಿಚ್ಚೇದಗಳು ಶೋಷಿತರ ಪರವಾಗಿವೆ ಎಂದು ತಿಳಿಸಿದರು.
ಇಂದು ಎಲ್ಲರೂ ಶಿಕ್ಷಣವನ್ನು ಸಮಾನವಾಗಿ ಪಡೆಯಲು ಸಂವಿಧಾನವೇ ಕಾರಣ. ಶಿಕ್ಷಣ ಪಡೆದ ಶೋಷಿತರು ಜಾಗೃತರಾಗುತ್ತಿದ್ದಾರೆ. ಇಂದಿನ ವಿದ್ಯಾರ್ಥಿಗಳು ತಾರತಮ್ಯರಹಿತ ಸಮಾಜ ನಿರ್ಮಾಣಕ್ಕಾಗಿ ವೈಚಾರಿಕ ನೆಲೆಗಟ್ಟಿನಲ್ಲಿ ಆಲೋಚಿಸುವ ಮನೋಭಾವ ಹೊಂದಬೇಕು. ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಚಿನ್ನಸ್ವಾಮಿ ತಿಳಿಸಿದರು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಪಟ್ಟಣ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ನಾಗಮ್ಮ ಅವರು ನಾವು ಸಂಘಜೀವಿಗಳು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ತುಳಿತಕ್ಕೊಳಗಾದವನ್ನು ತಿದ್ದಬೇಕು. ಆಸ್ಪøಶ್ಯತೆ ಹೋಗಲಾಡಿಸಲು ವಿದ್ಯಾರ್ಥಿಗಳು ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಕಾರ್ಯೋನ್ಮುಖರಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ವಕೀಲರು ಹಾಗೂ ಸೇವಾಭಾರತಿ ಕಾಲೇಜಿನ ಸದಸ್ಯರಾದ ಕೆ. ಬಾಲಸುಬ್ರಮಣ್ಯಂ ಅವರು ಸಮಾಜದಲ್ಲಿ ಜಾತಿವ್ಯವಸ್ಥೆ, ಅಸಮಾನತೆ ವಿರುದ್ಧ ಹಲವಾರು ತತ್ವಜ್ಞಾನಿಗಳು, ಸಂತರು, ದಾರ್ಶನಿಕರು ಹಾಗೂ ಸಮಾಜ ಸುಧಾರಕರು ಹೋರಾಡಿದ್ದಾರೆ. ವಿದ್ಯಾರ್ಥಿಗಳು ಇದನ್ನು ಮನಗಂಡು ತಮ್ಮ ಗ್ರಾಮಗಳಲ್ಲಿ ಜನತೆಗೆ ತಿಳಿವಳಿಕೆ ನೀಡಬೇಕು. ಆಸ್ಪøಶ್ಯತೆ ನಿವಾರಣೆಗೆ ಸಹಭೋಜನ, ಮಾತೃಭೋಜನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತಾಲೂಕು ಸಮಾಜ ಕಲ್ಯಾಣಾಧಿಕಾರಿ ದಾಶರಥಿ ಅವರು ಅಸ್ಪøಶ್ಯತೆ ನಿವಾರಣೆಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.
ಸಮುದಾಯದ ಮುಖಂಡರಾದ ಸಿ.ಎಂ. ಕೃಷ್ಣಮುರ್ತಿ ಹಾಗೂ ಸೇವಾಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಮಂಜುನಾಥ್ ಅವರು ಅಸ್ಪøಶ್ಯತೆ ನಿವಾರಣೆ ಕುರಿತು ಇದೇ ಸಂದರ್ಭದಲ್ಲಿ ಮಾತನಾಡಿದರು.
ಸಂಘಟನೆಯ ಮುಖಂಡರಾದ ಅರಕಲವಾಡಿ ನಾಗೇಂದ್ರ, ಸಿ.ಎಂ. ನರಸಿಂಹಮೂರ್ತಿ ಉಪಸ್ಥಿತರಿದ್ದರು.  

ಮಾರ್ಚ್ 29ರಂದು ನಗರದಲ್ಲಿ ಕನ್ನಡ ನುಡಿಹಬ್ಬ
ಚಾಮರಾಜನಗರ, ಮಾ.28 - ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ನುಡಿಹಬ್ಬ ಕಾರ್ಯಕ್ರಮವನ್ನು ಮಾರ್ಚ್ 29 ರಂದು ಸಂಜೆ 5.30 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್ ಮಹದೇವ ಪ್ರಸಾದ್ ಕಾರ್ಯಕ್ರಮ  ಉದ್ಘಾಟಿಸುವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಎಲ್.ಹನುಮಂತಯ್ಯ ಪ್ರಾಸ್ತಾವಿಕ ನುಡಿಗಳನ್ನಾಡುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ  ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಗೋ. ಮಧುಸೂಧನ್, ಎಸ್. ನಾಗರಾಜು (ಸಂದೇಶ್ ನಾಗರಾಜು), ಧರ್ಮಸೇನ, ನಗರಸಭಾ ಅಧ್ಯಕ್ಷರಾದ ರೇಣುಕಾ ಮಲ್ಲಿಕಾರ್ಜುನ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್‍ರಫೀ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎಚ್.ನರಸಿಂಹ ಮೂರ್ತಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಜ್ಯದ ಪ್ರಸಿದ್ಧ ಜಾನಪದ ತಂಡಗಳ ಬೃಹತ್ ಕನ್ನಡ ನುಡಿ ಜಾಗೃತಿ ಜಾಥಾ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಾ. 30ರಂದು ಎನ್‍ಎಚ್‍ಎಂ ಪ್ರಗತಿ ಪರಿಶೀಲನಾ ಸಭೆ
ಚಾಮರಾಜನಗರ, ಮಾ. 28 - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗಾಗಿ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಮಾರ್ಚ್ 30ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಎನ್ ಎಚ್ ಎಂ ಕಾರ್ಯಕ್ರಮಗಳ ಪ್ರಗತಿ, ಬಿಡುಗಡೆಯಾಗಿರುವ ಅನುದಾನ ಹಾಗೂ ಖರ್ಚು ವೆಚ್ಚಗಳ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ. ಪಾಂಡುವಿಜಯನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ. 30ರಂದು ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ
ಚಾಮರಾಜನಗರ, ಮಾ. 28 - ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಲುವಾಗಿ ಭೌದ್ಧಿಕ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಮಾರ್ಚ್ 30ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ವಿಶೇಷ ಘಟಕ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ವತಿಯಿಂದ ಏರ್ಪಾಡಾಗಿರುವ ಕಾರ್ಯಾಗಾರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ಉದ್ಘಾಟಿಸುವರು. ಮೈಸೂರು ಮಾನಸ ಗಂಗೋತ್ರಿಯ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾದ ಡಾ. ಎಂ. ರುದ್ರಯ್ಯ, ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಜಿ.ಆರ್. ಜನಾರ್ಧನ್ ಉಪಸ್ಥಿತರಿದ್ದು ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಅಧ್ಯಕ್ಷತೆ ವಹಿಸುವರೆಂದು ಪ್ರಕಟಣೆ ತಿಳಿಸಿದೆ.
ಮಾ. 29ರಂದು ನಗರದಲ್ಲಿ ಉದ್ಯೋಗ ಮೇಳ : ವಿವಿಧ ಹುದ್ದೆಗಳಿಗೆ ನೇಮಕ
ಚಾಮರಾಜನಗರ, ಮಾ. 28 - ಭಾರತೀಯ ಜೀವವಿಮಾ ನಿಗಮ (ಎಲ್‍ಐಸಿ ಆಫ್ ಇಂಡಿಯಾ) ಮತ್ತು ಯುರೇಕಾ ಫೋರ್ ಬೆಸ್ ಲಿಮಿಟೆಡ್ ಕಂಪನಿಯು ವಿವಿಧ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳುವ ಸಲುವಾಗಿ ಮಾರ್ಚ್ 29ರಂದು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿ ಉದ್ಯೋಗ ಮೇಳ ಆಯೋಜಿಸಿದೆ.
ಕಸ್ಟಮರ್ ಸೇಲ್ಸ್ ಸ್ಪೆಷಲಿಸ್ಟ್, ಕಸ್ಟಮರ್ ರಿಲೇಷನ್‍ಶಿಪ್ ಮ್ಯಾನೇಜ್ ಮೆಂಟ್, ಟೆರಿಟರಿ ಎಕ್ಸಿಕ್ಯುಟಿವ್ ಅಕೌಂಟೆಂಟ್, ಎಲ್‍ಐಸಿ ಏಜೆಂಟ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತದೆ.
ಎಸ್‍ಎಸ್‍ಎಲ್‍ಸಿ ನಂತರದ ಅಭ್ಯರ್ಥಿಗಳಿಗೆ ಎಲ್ ಐಸಿ ಏಜೆಂಟ್ ಆಗಲು ಅವಕಾಶವಿದೆ. ಪಿಯುಸಿ, ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೊಮಾ, ಪದವಿ, ಎಂಬಿಎ, ಬಿಇ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶಗಳಿವೆ. ಅಭ್ಯರ್ಥಿಗಳು 18 ರಿಂದ 30ರ ವಯೋಮಿತಿಯೊಳಗಿರಬೇಕು. ಆಸಕ್ತರು ಮಾರ್ಚ್ 29ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನಕ್ಕೆ ಸ್ವವಿವರಗಳೊಂದಿಗೆ ಹಾಜರಾಗಬೇಕು. ವಿವರಗಳಿಗೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ. ಉಮಾ ಹಾಗೂ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ (ಮೊ. 8884900212, 8762993030) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಭರ್ತಿ : ಅರ್ಜಿ ಆಹ್ವಾನ
ಚಾಮರಾಜನಗರ, ಮಾ. 28 - ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ನಡೆಸಲಾಗುವ ನೇಮಕಾತಿ ರ್ಯಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿ ರ್ಯಾಲಿಯು ಮೇ 1 ರಿಂದ 10ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆಯಲಿದೆ.
ಸೈನಿಕ ಸಾಮಾನ್ಯ ಹುದ್ದೆಗೆ ಸರಾಸರಿ ಶೇ.45ರಷ್ಟು ಹಾಗೂ ಪ್ರತಿಯೊಂದು ವಿಷಯದಲ್ಲಿ ಶೇ. 33ರಷ್ಟು ಅಂಕದೊಂದಿಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಈ ಹುದ್ದೆಗೆ 17 1/2 ಯಿಂದ 21ರ ವಯೋಮಿತಿಯೊಳಗಿರಬೇಕು.
ಸೈನಿಕ ಲಿಪಿಕ, ಉಗ್ರಾಣ ಪಾಲಕ ತಾಂತ್ರಿಕ ಹುದ್ದೆಗೆ ಸರಾಸರಿ ಕನಿಷ್ಟ ಶೇ.50 ಹಾಗೂ ಪ್ರತಿ ವಿಷಯದಲ್ಲಿ ಕನಿಷ್ಟ ಶೇ. 40ರಷ್ಟು ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪಿಯುಸಿ ತೇರ್ಗಡೆಯಾಗಿರಬೇಕು.  ಎಸ್‍ಎಸ್‍ಎಲ್‍ಸಿ ಅಥವಾ ದ್ವಿತೀಯ ಪಿಯುಸಿಯಲ್ಲಿ ಇಂಗ್ಲೀಷ್, ಗಣಿತ ಅಥವಾ ಅಕೌಂಟ್ಸ್ ಇಲ್ಲವೇ ಬುಕ್ ಕೀಪಿಂಗ್ ಅಧ್ಯಯನ ಮಾಡಿರಬೇಕು.
ಸೈನಿಕ ತಾಂತ್ರಿಕ ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಇಂಗ್ಲೀಷ್‍ನಲ್ಲಿ 35 ಅಂಕ ಹಾಗೂ ಸರಾಸರಿ ಕನಿಷ್ಟ ಶೇ. 45ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ 10ನೇ ತರಗತಿಯಲ್ಲಿ ಕನಿಷ್ಟ ಸರಾಸರಿ ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಜತೆಗೆ 3 ವರ್ಷದ ಡಿಪ್ಲೊಮಾ ಎಂಜಿನಿಯರಿಂಗ್ ಮಾಡಿರಬೇಕು.
ಸೈನಿಕ ತಾಂತ್ರಿಕ ಹುದ್ದೆಗೆ ಕನಿಷ್ಟ ಶೇ.50 ಹಾಗೂ ಪ್ರತಿ ವಿಷಯದಲ್ಲಿ ಕನಿಷ್ಟ ಶೇ.40ರಷ್ಟು ಅಂಕದೊಂದಿಗೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಒಳಗೊಂಡ ವಿಜ್ಞಾನ, ಇಂಗ್ಲೀಷ್ ಅಥವಾ ಬಿಎಸ್ಸಿ ಪದವಿ (ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಜೈವಿಕ ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯದಲ್ಲಿ ಪಿಯುಸಿಯಲ್ಲಿ ತೇರ್ಗಡೆಯಾಗಿರಬೇಕು.
ಸೈನಿಕ ಟ್ರೇಡ್ಸ್ ಮನ್ (ಚೆಫ್ ಡ್ರಸ್ಸರ್, ಪೈಂಟರ್, ಡೆಕೋರೇಟರ್, ಸ್ಟೀವರ್ಡ್ (ಸಹಾಯಕ ಸಿಬ್ಬಂದಿ ವಾಷರ್ ಮ್ಯಾನ್, ಆರ್ಟಿಸನ್, ಮರಗೆಲಸ, ದರ್ಜಿ) ಹುದ್ದೆಗೆ ಎಸ್ ಎಸ್ ಎಲ್ ಸಿ ಕನಿಷ್ಟ ಶೇ.33ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಹೌಸ್ ಕೀಪರ್ ಮತ್ತು ಮೆಸ್ ಕೀಪರ್ ಹುದ್ದೆಗೆ 8ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಈ ಎಲ್ಲ ಹುದ್ದೆಗಳಿಗೆ 17 1/2 ಯಿಂದ 23ರ ವಯೋಮಿತಿಯೊಳಗಿರಬೇಕು.
ಮಾಜಿ ಸೈನಿಕರನ್ನು ಡಿಎಸ್‍ಇ ಯಲ್ಲಿ ಸೈನಿಕ ಸಾಮಾನ್ಯ ಕರ್ತವ್ಯಕ್ಕೆ ಪುನರ್ ನೇಮಕ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 20 ಕಡೆಯ ದಿನವಾಗಿದೆ. ಅಗತ್ಯ ದಾಖಲೆಗಳು, ದೈಹಿಕ ದಾಢ್ರ್ಯತೆ ಪರೀಕ್ಷೆ ಇನ್ನಿತರ ನೇಮಕಾತಿ ಸಂಬಂಧ ಎಲ್ಲಾ ವಿವರಗಳಿಗೆ ಬೆಂಗಳೂರಿನ ನೇಮಕಾತಿ ಕಚೇರಿ, ಕೇಂದ್ರ ಕಾರ್ಯಸ್ಥಾನ ನೇಮಕಾತಿ ವಲಯ, ದೂ.ಸಂ. 080-25599290, 080-25596517 ಅಥವಾ ವೆಬ್ ಸೈಟ್ ತಿತಿತಿ.ರಿoiಟಿiಟಿಜiಚಿಟಿಚಿಡಿmಥಿ.ಟಿiಛಿ.iಟಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಏಪ್ರಿಲ್ ಅಂತ್ಯದಲ್ಲಿ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಯವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ
ಚಾಮರಾಜನಗರ, ಮಾ.29 :- ಜಿಲ್ಲೆಯ ಪ್ರಸಿದ್ಧ ಯಾತ್ರಾಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ಮಲೆಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದಿಂದ ಭಕ್ತಾಧಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅಂದಾಜು  47 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಏಪ್ರಿಲ್ ಅಂತ್ಯದಲ್ಲಿ ಮುಖ್ಯಮಂತ್ರಿಯವರಿಂದ ಚಾಲನೆ ಕೊಡಿಸಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ಸಹಕಾರ, ಸಕ್ಕರೆ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಯವರಿಂದ ಚಾಲನೆ ಕೊಡಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.
ಮಹದೇಶ್ವರ ಬೆಟ್ಟದಲ್ಲಿ ಒಳಚರಂಡಿ, ತಿರುಪತಿ-ತಿರುಮಲ ಮಾದರಿಯಲ್ಲಿ ಅಂತರಗಂಗÉ ನಿರ್ಮಾಣ, ಬಯಲು ರಂಗಮಂದಿರ ಮುಂಭಾಗದಲ್ಲಿ ಭಕ್ತಾಧಿಗಳಿಗೆ ನೆರಳಿನ ವ್ಯವಸ್ಥೆಗಾಗಿ ಶೆಲ್ಟರ್, ಗುಂಪಾಗಿ ಬರುವ ಭಕ್ತಾಧಿಗಳಿಗೆ ಸಮೂಹ ವಸತಿಗೃಹ, ಪ್ರಾಧಿಕಾರದ ವತಿಯಿಂದ 24 ವಸತಿ ಗೃಹ ನಿರ್ಮಾಣ, ಬೆಳ್ಳಿರಥ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಯವರಿಂದ ಹಸಿರು ನಿಶಾನೆ ನೀಡಲು ಸಭೆಯು ನಿರ್ಣಯಿಸಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರಾದ ಮಹದೇವಪ್ರಸಾದ್ ಅವರು ಮಹದೇಶ್ವರ ಬೆಟ್ಟದಲ್ಲಿ ಇನ್ನು 2-3 ವರ್ಷಗಳಲ್ಲಿ 500 ವಸತಿಗೃಹಗಳು ನಿರ್ಮಾಣವಾಗಲಿವೆ. ಪ್ರಾಧಿಕಾರ ನೌಕರರಿಗೂ ಪ್ರತೀವರ್ಷ ವಸತಿಗೃಹಗಳನ್ನು ಕಟ್ಟಲಾಗುತ್ತದೆ. ವರ್ಷದಿಂದ ವರ್ಷಕ್ಕೆ ಕ್ಷೇತ್ರಕ್ಕೆ ಭೇಟಿ ಕೊಡುವ ಭಕ್ತಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಹೀಗಾಗಿ ಒಳಚರಂಡಿ ಕಾಮಗಾರಿ ಅತಿ ಅವಶ್ಯಕವಾಗಿ ಕೈಗೆತ್ತಿಕೊಳ್ಳಬೇಕಿದೆ ಎಂದರು.
ಮಹದೇಶ್ವರಬೆಟ್ಟವು ಗ್ರಾಮ ಪಂಚಾಯಿತಿಯ ಕೇಂದ್ರಸ್ಥಾನವೂ ಆಗಿದ್ದು ಸಾಕಷ್ಟು ಜನರು ಇಲ್ಲಿ ವಾಸ ಮಾಡುತ್ತಿದ್ದಾರೆ. ಪ್ರಾಧಿಕಾರ ವ್ಯಾಪ್ತಿಯ ಪ್ರದೇಶವನ್ನು ಸ್ಪಚ್ಚವಾಗಿಟ್ಟುಕೊಳ್ಳಲು ಒಳಚರಂಡಿ ವ್ಯವಸ್ಥೆ ಅತಿ ಅಗತ್ಯವಾಗಿದೆ. ಹೀಗಾಗಿ 27.10 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳಬೇಕಿರುವ ಕಾಮಗಾರಿಗೆ ಶೇ.50ರಷ್ಟು ಅನುದಾನವನ್ನು ಸರ್ಕಾರದಿಂದ ನಿರೀಕ್ಷಿಸಿ ಕಾಮಗಾರಿ ಪ್ರಾರಂಭಿಸಬೇಕು ಎಂದರು.
ಅಂತಿಮವಾಗಿ ಸಭೆ ಈ ಕಾಮಗಾರಿಗೆ ಸರ್ಕಾರದ ಅನುದಾನ ನಿರೀಕ್ಷಿಸಿ ಪ್ರಾಧಿಕಾರ ಅನುದಾನದಿಂದ ಅನುಷ್ಠಾನಗೊಳಿಸುವ ಸಂಬಂಧ ಆಡಳಿತಾತ್ಮಕ ಮಂಜೂರಾತಿಗೆ ಅನುಮೋದನೆ ನೀಡಿತು.
ಜಾನಪದ ಕಲೆಯ ತವರೂರಾಗಿರುವ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಜಾನಪದ ಅಧ್ಯಯನ ಕೇಂದ್ರ ತೆರೆದು ಜಾನಪದ ಕಲಾ ಪರಂಪರೆ ಚಟುವಟಿಕೆಗಳಿಗೆ ಒತ್ತು ನೀಡಬೇಕೆಂಬುದು ಜಾನಪದ ಕಲಾವಿದರು ಹಾಗೂ ಭಕ್ತರ ಬಹುದಿನಗಳ ಬೇಡಿಕೆಯಾಗಿದೆ. ಇವರ ಆಶಯಕ್ಕೆ ತಕ್ಕಂತೆ ಈಹಿಂದೆ ಕನ್ನಡ ಮತ್ತು ಸಂಸ್ಕ್ಕøತಿ ಇಲಾಖೆಗೆ ನೀಡಲಾಗಿದ್ದ 3 ಎಕರೆ ಜಮೀನನ್ನು ವಾಪಸ್ ಪಡೆದು ಜಾನಪದ ಅಧ್ಯಯನ ಕೇಂದ್ರವನ್ನು ಪ್ರಾಧಿಕಾರದ ವತಿಯಿಂದ ತೆರೆಯುವ ಪ್ರಕ್ರಿಯೆಗೆ ಸಭೆ ನಿರ್ಣಯಿಸಿತು.
ಇದೇವೇಳೆ ಮಾತನಾಡಿದ ಸಚಿವರಾದ ಮಹದೇವಪ್ರಸಾದ್ ಮಲೆ ಮಹದೇಶ್ವರಸಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹೆಲಿಪ್ಯಾಡ್ ಬಳಿಯಿರುವ 8 ಎಕರೆ ವಿಸ್ತಾರ ಪ್ರದೇಶದಲ್ಲಿ ಒಂದು ಮೆಗಾವ್ಯಾಟ್ ಉತ್ಪಾದನಾ ಸಾಮಥ್ರ್ಯದ ಸೋಲಾರ್ ಪಿವಿ ಪ್ಲವರ್ ಪ್ಲಾಂಟ್ ಸ್ಥಾಪಿಸಬೇಕು. ಈ ಸಂಬಂಧ ವಿಸ್ತøತ ಯೋಜನಾ ವರದಿ ತಯಾರಿಸಬೇಕೆಂದು ನಿರ್ದೇಶನ ನೀಡಿದರು.
ಕ್ಷೇತ್ರದ ದೀಪದ ಒಡ್ಡುವಿನಲ್ಲಿ ಮಹದೇಶ್ವರರ 100 ಅಡಿ ಬೃಹತ್ ಪ್ರತಿಮೆ ನಿರ್ಮಾಣಕ್ಕೂ ಸಭೆ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಆ ಪ್ರದೇಶದ 40ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಒಂದು ತಿಂಗಳೊಳಗೆ ಹಸ್ತಾಂತರಿಸಲು ಜಿಲ್ಲಾಧಿಕಾರಿಯವರು ಕ್ರಮ ವಹಿಸಬೇಕೆಂದು ಉಸ್ತುವಾರಿ ಸಚಿವರು ಸೂಚಿಸಿದರು.
ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದ ಪ್ರಸಾದ್ ಯೋಜನೆ ನೆರವಿನೊಂದಿಗೆ ಶ್ರೀ ಮಲೆ ಮಹದೇಶ್ವರ ಟೂರಿಸ್ಟ್ ಸಕ್ರ್ಯೂಟ್ ಕಾರ್ಯಕ್ರಮವನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸುವ ಬಗ್ಗೆಯೂ ವಿಸ್ತøತ ಚರ್ಚೆ ನಡೆಯಿತು. ಮಹದೇಶ್ವರ ಬೆಟ್ಟವನ್ನು ಯಾತ್ರಾ ಪ್ರವಾಸಿ ತಾಣವನ್ನಾಗಿ ಆಕರ್ಷಿಸುವ ದಿಸೆಯಲ್ಲಿ ವಿಸ್ತಾರವಾದ ಪ್ರದೇಶದಲ್ಲಿ ಜಾನಪದ ವಸ್ತುಸಂಗ್ರಹಾಲಯ, ಬಯಲು ರಂಗಮಂದಿರ, ಜ್ಞಾನಮಂದಿರ, ಸಂಗೀತ ಕಾರಂಜಿ, ಔಷಧೀಯ ಸಸ್ಯಗಳ ವನ, ಪ್ರಕೃತಿ ಚಿಕಿತ್ಸಾಲಯ, ಮಕ್ಕಳ ಉದ್ಯಾನವನ ಇನ್ನಿತರ ವ್ಯವಸ್ಥೆಗಳನ್ನು ಕಲ್ಪಿಸುವ ಉದ್ದೇಶದ ಪ್ರವಾಸಿ ಸೌಕರ್ಯ ಯೋಜನೆಗೆ ವಿಸ್ತøತ ಯೋಜನಾ ವರದಿ ಸಲ್ಲಿಸುವಂತೆಯೂ ಸಚಿವರು ತಿಳಿಸಿದರು.
ಮಹದೇಶ್ವರರು ಸಂಚರಿಸಿದ ಪುಣ್ಯ ಸ್ಥಳಗಳನ್ನು ಅದರ ಮಹತ್ವವನ್ನು ಸಾರುವ ದಿಸೆಯಲ್ಲಿ ಅಭಿವೃದ್ಧಿಗೊಳಿಸುವ ಅಗತ್ಯವಿದೆ. ಇಂತಹ ಸ್ಥಳಗಳನ್ನು ಗುರುತಿಸಿ ಅಗತ್ಯ ಕೆಲಸ ಆರಂಭಿಸುವ ಪ್ರಕ್ರಿಯೆಯನ್ನು ನಡೆಸಲು ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದರು.
ಮುಖ್ಯಮಂತ್ರಿಯವರನ್ನು ಏಪ್ರಿಲ್ ಅಂತ್ಯದಲ್ಲಿ ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಹ್ವಾನಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಂಬಂಧ ರೂಪುರೇಷೆ, ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು, ಕ್ಷೇತ್ರದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ವ್ಯವಸ್ಥೆ, ತಿರುಪತಿ ಮಾದರಿಯಲ್ಲಿ ನಿರ್ಮಿಸಿರುವ ಅಂಗಡಿ ಮಳಿಗೆಗಳ ಉದ್ಘಾಟನೆಯನ್ನು ಸಹ ಮುಖ್ಯಮಂತ್ರಿಯವರಿಂದ ನೆರವೇರಿಸಲು ಎಲ್ಲ ಪೂರಕ ವ್ಯವಸ್ಥೆಗಳನ್ನು ನಿರ್ವಹಿಸುವಂತೆ  ಪ್ರಾಧಿಕಾರದ ಕಾರ್ಯದರ್ಶಿಯವರಿಗೆ ಸಚಿವರು ಸೂಚಿಸಿದರು.
ಮುಜರಾಯಿ ಸಚಿವರಾದ ಮನೋಹರ ತಹಸೀಲ್ದಾರ್, ಸಾಲೂರು ಮಠದ ಶ್ರೀಗಳು, ಶಾಸಕರಾದ ಆರ್. ನರೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆರ್. ಧರ್ಮಸೇನ, ಮುಜರಾಯಿ ಇಲಾಖೆ ಕಾರ್ಯದರ್ಶಿ ರಾಜ್ ಕುಮಾರ್ ಕತ್ರಿ, ಆಯುಕ್ತರಾದ ಆರ್. ಆರ್. ಜನ್ನು, ಜಿಲ್ಲಾಧಿಕಾರಿ ಬಿ. ರಾಮು, ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಿ. ಭಾರತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎಚ್. ನರಸಿಂಹಮೂರ್ತಿ ಸಭೆಯಲ್ಲಿ ಹಾಜರಿದ್ದರು.
ಮಾ. 30ರಂದು ಎನ್‍ಎಚ್‍ಎಂ ಪ್ರಗತಿ ಪರಿಶೀಲನಾ ಸಭೆ
ಚಾಮರಾಜನಗರ, ಮಾ. 29 - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗಾಗಿ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಮಾರ್ಚ್ 30ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಎನ್ ಎಚ್ ಎಂ ಕಾರ್ಯಕ್ರಮಗಳ ಪ್ರಗತಿ, ಬಿಡುಗಡೆಯಾಗಿರುವ ಅನುದಾನ ಹಾಗೂ ಖರ್ಚು ವೆಚ್ಚಗಳ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ. ಪಾಂಡುವಿಜಯನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾ.ಪಂ. ಉಪಚುನಾವಣೆ : ವೇಳಾಪಟ್ಟಿ ಪ್ರಕಟ
ಚಾಮರಾಜನಗರ, ಮಾ. 29 :- ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಜಿಲ್ಲೆಯ ಚಾಮರಾಜನಗರ ತಾಲೂಕಿನ ಮಾದಾಪುರ, ಸಾಗಡೆ, ನವಿಲೂರು, ಕುಲಗಾಣ, ಉಮ್ಮತ್ತೂರು, ಹರದನಹಳ್ಳಿ, ದೊಡ್ಡಮೋಳೆ, ಕೊಳ್ಳೇಗಾಲ ತಾಲೂಕಿನ ಲೊಕ್ಕನಹಳ್ಳಿ, ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮ ಪಂಚಾಯಿತಿಯ ಖಾಲಿ ಇರುವ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ. ಒಟ್ಟು 9 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಏಪ್ರಿಲ್ 4ರಂದು ಜಿಲ್ಲಾಧಿಕಾರಿಯವರು ಚುನಾವಣಾ ಅಧಿಸೂಚನೆ ಹೊರಡಿಸುವರು. ಏಪ್ರಿಲ್ 7 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಏಪ್ರಿಲ್ 11ರಂದು ಕಡೆಯ ದಿನವಾಗಿದೆ. ಏಪ್ರಿಲ್ 17ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ (ಮತದಾನ ಅವಶ್ಯವಿದ್ದರೆ). ಮರುಮತದಾನ ಅವಶ್ಯವಿದ್ದಲ್ಲಿ ಏಪ್ರಿಲ್ 18ರಂದು ನಡೆಸಲಾಗುತ್ತದೆ. ಏಪ್ರಿಲ್ 20ರಂದು ಬೆಳಿಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಏಪ್ರಿಲ್ 4 ರಿಂದ 20ರವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Saturday, 2 July 2016

28-06-2016 ರಿಂದ 02-07-2016 ಚಾಮರಾಜನಗರ ಪ್ರಮುಖ ಸುದ್ದಿಗಳು

ಕೋಟಿ ವೃಕ್ಷ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ, ಜು. 02 :- ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕೋಟಿವೃಕ್ಷ ಆಂದೋಲನ ಕಾರ್ಯಕ್ರಮಕ್ಕೆ ಇಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಸಿ  ನೆಡುವ ಮೂಲಕ ವಿದ್ಯುಕ್ತವಾಗಿ ವನ ಮಹೋತ್ಸವ ಹಾಗೂ ಕೋಟಿ ವೃಕ್ಷ ಆಂದೋಲನವನ್ನು ಉದ್ಘಾಟಿಸಿದರು.
ಬಳಿಕ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಉಸ್ತುವಾರಿ ಸಚಿವರು ಜನಸಾಂದ್ರತೆ ಒತ್ತಡದಿಂದ ಅರಣ್ಯ ಪ್ರದೇಶ ವಿಸ್ತಾರ ಕಡಿಮೆಯಾಗುತ್ತಿದೆ. ಪರಿಸರ ಸಂರಕ್ಷಣೆ ಹಾಗೂ ಅರಣ್ಯೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪರ್ಯಾಯವಾಗಿ ಗಿಡಮರಗಳನ್ನು ಬೆಳೆಸಿ ಪೋಷಿಸಲು ಎಲ್ಲ ಜಿಲ್ಲೆಗಳಲ್ಲಿ ಕೋಟಿ ವೃಕ್ಷ ಆಂದೋಲನ ಕಾರ್ಯಕ್ರಮವನ್ನು ನಡೆಸುತ್ತಿದೆ ಎಂದರು.
ಜಿಲ್ಲೆಯಲ್ಲಿ ಇಂದಿನಿಂದ ಅಕ್ಟೋಬರ್ 10ರವರೆಗೆ ಕೋಟಿವೃಕ್ಷ ಆಂದೋಲನ ನಡೆಯಲಿದ್ದು ಈ ಅವಧಿಯಲ್ಲಿ ಒಟ್ಟು 2 ಲಕ್ಷ ಸಸಿಗಳನ್ನು ಅರಣ್ಯ ಇಲಾಖೆ ಸಹಯೋಗದೊಂದಿಗೆ ವಿವಿಧ ಇಲಾಖೆಗಳು, ಇತರರು ಸೇರಿ ನೆಡಲಿದ್ದಾರೆ. ಅರಣ್ಯ ಇಲಾಖೆ ಬಳಿ 6 ಲಕ್ಷ ಹಾಗೂ ಜಲಾನಯನ ಇಲಾಖೆಯಲ್ಲಿ 2 ಲಕ್ಷ ಸಸಿಗಳು ಲಭ್ಯವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿಕೊಂಡಿರುವ ರೈತರಿಗೂ ಸಸಿಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ವೃಕ್ಷ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿದೆ ಎಂದರು.
ಪರಿಸರ ಸಮತೋಲನಕ್ಕೆ ಅರಣ್ಯ ಪ್ರದೇಶ ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಒಟ್ಟು ಭೂ ಭಾಗದಲ್ಲಿ ಶೇಕಡ 33ರಷ್ಟು ಅರಣ್ಯ ಇರಬೇಕಿದೆ. ಆದರೆ ಶೇ. 19ರಷ್ಟು ಮಾತ್ರ ಅರಣ್ಯ ಪ್ರದೇಶವಿದೆ.  ಹೀಗಾಗಿ ಪರಿಸರ, ಹವಾಮಾನದಲ್ಲಿ ಏರಿಳಿತಗಳನ್ನು ಕಾಣುತ್ತಿದ್ದೇವೆ. ಅರಣ್ಯ ವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ಹೊಣೆಗಾರಿಕೆ ವಹಿಸಬೇಕಿದೆ ಎಂದು ಸಚಿವರು ಸಲಹೆ ಮಾಡಿದರು.
ಜಿಲ್ಲೆಯು ಶೇ. 54ರಷ್ಟು ಅರಣ್ಯ ಪ್ರದೇಶ ಹೊಂದಿದೆ. ನಾಲ್ಕು ತಾಲೂಕುಗಳಲ್ಲಿಯೂ ಪೂರ್ವಪಶ್ಚಿಮ ಘಟ್ಟಗಳ ಸುತ್ತುವರೆದಿದೆ. ಆದಾಗ್ಯೂ ಉಳಿದ ಭಾಗಗಳಲ್ಲಿ ಪರಿಸರ ಸಮತೋಲನ ಕೊರತೆ ನೀಗಿಸಲು ನೆಡುತೋಪು ಅರಣ್ಯ ಬೆಳೆಸುವಿಕೆ ಪ್ರಯತ್ನ ಮುಂದುವರೆಯಬೇಕು. ಪ್ರಸ್ತುತ ವೃಕ್ಷ ಆಂದೋಲನ ಕಾರ್ಯಕ್ರಮದಲ್ಲಿ ನೆಡಲಾಗುವ ಸಸಿಗಳನ್ನು ಪೋಷಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಪರಿಸರ ಅಸಮತೋಲನದಿಂದ ಸಾಕಷ್ಟು ಭೀಕರ ಸಮಸ್ಯೆಗಳನ್ನು ಎದುರಿಸುವ ಅನಿವಾರ್ಯತೆ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಬಹುಭಾಗ ಅರಣ್ಯ ಪ್ರದೇಶವಿದೆ. 2 ಹುಲಿ ಯೋಜನೆ ಅಭಯಾರಣ್ಯ ಹೊಂದಿದ ಹೆಗ್ಗಳಿಕೆ ಇದೆ. ಆದರೂ ಇತರೆಡೆ ಸಸಿಗಳನ್ನು ನೆಡುವ ಮುಖಾಂತರ ಅರಣ್ಯೀಕರಣ ಕೆಲಸಕ್ಕೆ ಒತ್ತು ನೀಡಬೇಕಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಹ ಅರಣ್ಯ ಪೋಷಣೆಗೆ ಸಾಕಷ್ಟು ಅವಕಾಶಗಳಿದ್ದು ಸದ್ಭಳಕೆ ಮಾಡಿಕೊಳ್ಳಬೇಕೆಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ಯಾವುದೇ ಸರ್ಕಾರಿ ಯೋಜನೆ ಅನುಷ್ಠಾನಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ವಾಹನಗಳಿಂದ ಆಗುತ್ತಿರುವ ವಾಯುಮಾಲಿನ್ಯ ತಪ್ಪಿಸುವುದೂ ಸಹ ನಾಗರಿಕರ ಹೊಣೆಗಾರಿಕೆಯಾಗಿದೆ. ಒಟ್ಟಾರೆ ಪರಿಸರ ಕಾಪಾಡುವ ಕರ್ತವ್ಯ ಪ್ರತಿಯೊಬ್ಬರಿಗೂ ಇರಲೇಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪೂರ್ವಜರಿಗೆ ಪರಿಸರದ ಮೇಲೆ ಇದ್ದ ಕಾಳಜಿಯಿಂದ ಇಂದೂ ಸಹ ಹುಣಸೆ, ಬೇವು, ಅರಳಿ, ಆಲದಂತಹ ಅನೇಕ ಮರಗಳನ್ನು ಕಾಣಬಹುದಾಗಿದೆ. ಪ್ರಾಣಿಸಂಕುಲಗಳಿಂದಲೂ ಹರಡಿದ ಬೀಜ ಪರಿಣಾಮವಾಗಿ ಸ್ವಾಭಾವಿಕವಾಗಿ ಅನೇಕ ಸಸಿಗಳು ಹೆಮ್ಮರವಾಗಿ ಬೆಳೆದು ನಿಂತಿವೆ. ಪ್ರಸ್ತುತ ಕಾರ್ಯಕ್ರಮದಡಿ ನೆಡಲಾಗುವ ಸಸಿಗಳ ಪೈಕಿ ಶೇ. 80ರಷ್ಟಾದರೂ ಉಳಿಸಿ ಬೆಳೆಸಿದರೆ ಉದ್ದೇಶಿತ ಯೋಜನೆ ಸಾರ್ಥಕವಾಗುತ್ತದೆ ಎಂದರು.
ಶಾಸಕರಾದ ಎಸ್. ಜಯಣ್ಣ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಶಿಕ್ಷಣ ಮತ್ತು ಆರೋಗÀ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿ.ಪಂ. ಸದಸ್ಯರಾದ ಸಿ.ಎನ್. ಬಾಲರಾಜು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗೇಶ, ಜಿಲ್ಲಾಧಿಕಾರಿ ಬಿ. ರಾಮು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ಲಿಂಗರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಸ್ತುವಾರಿ ಸಚಿವರಿಂದ ‘ನಾಲ್ಕನೇ ವರ್ಷದೆಡೆಗೆ ಭರವಸೆಯ ನಡಿಗೆ’ ಕಿರುಹೊತ್ತಿಗೆ ಬಿಡುಗಡೆ
ಚಾಮರಾಜನಗರ, ಜು. 02 :- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ರಾಜ್ಯ ಸರ್ಕಾರದ 3 ವರ್ಷಗಳ ಸಾಧನೆಯನ್ನು ಕುರಿತ ಮಾಹಿತಿಯನ್ನು ಒಳಗೊಂಡ ‘ನಾಲ್ಕನೇ ವರ್ಷದೆಡೆಗೆ ಭರವಸೆಯ ನಡಿಗೆ’ ಕಿರುಹೊತ್ತಿಗೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಬಿಡುಗಡೆ ಮಾಡಿದರು.
ನಗರದ ಹೊರವಲಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಕೋಟಿವೃಕ್ಷ ಆಂದೋಲನ ಸಮಾರಂಭದಲ್ಲಿ ಸಚಿವರು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವರು ರಾಜ್ಯಸರ್ಕಾರ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳು, ಸಾಧನೆಗಳ ವಿವರಗಳು ಕಿರುಹೊತ್ತಿಗೆಯಲ್ಲಿ ಇವೆ. ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಯೋಜನೆಗಳ ಬಗ್ಗೆಯೂ ಮಾಹಿತಿ ಕೊಡಲಾಗಿದೆ ಎಂದರು.
ರಾಜ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 100ಕ್ಕೂ ಹೆಚ್ಚು ಈಡೇರಿಸಿದೆ. ನುಡಿದಂತೆ ನಡೆಯುತ್ತಿದ್ದೇವೆ. ಪ್ರಗತಿಪರ ಕಾರ್ಯಕ್ರಮಗಳು ಮುಂದುವರೆದಿವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ : ಸಚಿವ ಎಚ್.ಎಸ್. ಮಹದೇವಪ್ರಸಾದ್
  ಚಾಮರಾಜನಗರ, ಜು. 02- ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಇಂದಿನಿಂದ ಚಾಮರಾಜನಗರ ಜಿಲ್ಲೆಯೂ ಸೇರಿದಂತೆ ಒಟ್ಟು 6 ಜಿಲ್ಲೆಗಳಲ್ಲಿ ಆರಂಭವಾಗಿದೆ ಎಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರ ಉದ್ಘಾಟಿಸಿದ ಬಳಿಕ ಕೆ. ಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸುಲಿದ ತೆಂಗಿನ ಕಾಯಿಯನ್ನು ಚಾಮರಾಜನಗರ, ತುಮಕೂರು, ಉಡುಪಿ, ಹಾಸನ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಖರೀದಿಸಲಾಗುತ್ತಿದೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ತೆಂಗಿನಕಾಯಿ ಬೆಲೆ ಕುಸಿದಿರುವುದನ್ನು ಮನಗಂಡು ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ತದನಂತರ ಇತರ ಜಿಲ್ಲೆಗಳಲ್ಲೂ ಬೆಲೆ ಕುಸಿದಿದ್ದು ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಖರೀದಿಸಬೇಕೆಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಇತರೆ 5 ಜಿಲ್ಲೆಗಳನ್ನು ಸೇರ್ಪಡೆ ಮಾಡಿಕೊಂಡು ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವ ಮಹದೇವ ಪ್ರಸಾದ್ ತಿಳಿಸಿದರು.
ಆಯಾ ಜಿಲ್ಲೆಯ  ಎ.ಪಿ.ಎಂ.ಸಿ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಕ್ವಿಂಟಾಲ್‍ಗೆ 1600 ರೂ. ರಂತೆ ರೈತರು, ಬೆಳೆಗಾರರಿಂದ ತೆಂಗಿನ ಕಾಯಿಯನ್ನು ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುತ್ತದೆ. ರೈತರು, ಬೆಳೆಗಾರರು ಆರ್‍ಟಿಸಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ದೃಢೀಕರಿಸಿದ ಅರ್ಜಿ, ಇತರೆ ದಾಖಲೆಗಳನ್ನು ನೀಡಬೇಕು. ಮಾರಾಟ ಮಾಡಿದ ಹಣವನ್ನು ಆರ್‍ಟಿಜಿಎಸ್ ಮೂಲಕ ರೈತರು ಬೆಳೆಗಾರರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಯಾಗಿದ್ದು ಈಗಾಗಲೇ ಪ್ರತಿ ಜಿಲ್ಲೆಗೆ ತಲಾ ಒಂದು ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
 ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ ಪ್ರಕ್ರಿಯೆ ಆರಂಭ : ಸದುಪಯೋಗಕ್ಕೆ ಮನವಿ
  ಚಾಮರಾಜನಗರ, ಜು. 02 - ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಇಂದಿನಿಂದ ಜಿಲ್ಲೆಯಲ್ಲಿ ಆರಂಭವಾಗಿದೆ.
ಚಾಮರಾಜನಗರ, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ಕ್ವಿಂಟಾಲ್ 1600 ರೂ. ನಂತೆ ಸುಲಿದ ತೆಂಗಿನ ಕಾಯಿಯನ್ನು ರೈತರು, ಬೆಳೆಗಾರರಿಂದ ಖರೀದಿಸಲಾಗುತ್ತದೆ.
ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಬಯಸುವವರು ಜುಲೈ 2ರಿಂದ 6ರವರೆಗೆ ಎ.ಪಿ.ಎಂ.ಸಿ ಖರೀದಿ ಕೇಂದ್ರದಲ್ಲಿ ಮೊದಲು ನಿಗದಿತ ನಮೂನೆ ಅರ್ಜಿ ಪಡೆದು ನೊಂದಾಯಿಸಿಕೊಳ್ಳಬೇಕು. ಗ್ರಾಮ ಲೆಕ್ಕಾಧಿಕಾರಿ, ತೋಟಗಾರಿಕೆ ಇಲಾಖೆಯ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ನಿಗದಿತ ನಮೂನೆ ಅರ್ಜಿಯಲ್ಲಿ ದೃಢೀಕರಿಸಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಪಹಣಿ ಹಾಗೂ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು. ಆಧಾರ್ ಕಾರ್ಡ್ ಇಲ್ಲದವರು ತಕ್ಷಣವೇ ನಾಡ ಕಚೇರಿಯಲ್ಲಿ ಆಧಾರ್ ನೊಂದಣಿ ಮಾಡಿಸಿ ಅಲ್ಲಿ ನೀಡಲಾಗುವ ಸಂಖ್ಯೆಯನ್ನು ಲಗತ್ತಿಸಬಹುದು. ಆಯಾ ತಾಲೂಕು ವ್ಯಾಪ್ತಿಯ ಎ.ಪಿ.ಎಂ.ಸಿಯಲ್ಲಿ ತೆಂಗಿನಕಾಯಿ ಮಾರಾಟ ಮಾಡಲು ನೊಂದಣಿ ಮಾಡಿಸಿದ ರೈತರು, ಬೆಳೆಗಾರರಿಂದ ಸುಲಿದ ತೆಂಗಿನ ಕಾಯಿಯನ್ನು ಜುಲೈ 4 ರಿಂದ ಖರೀದಿಸಲಾಗುತ್ತದೆ. ಯಳಂದೂರು ತಾಲೂಕಿನ ರೈತರು ಕೊಳ್ಳೇಗಾಲ ಎ.ಪಿ.ಎಂ.ಸಿ ಖರೀದಿ ಕೇಂಧ್ರದಲ್ಲಿ ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ತೆಂಗಿನ ಕಾಯಿ ಮಾರಾಟ ಮಾಡಿದ ಹಣವನ್ನು ರೈತರು, ಬೆಳೆಗಾರರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಬಿ. ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
ವಿವಿಧ ಅಭಿವೃದ್ಧಿ ಕಾಮಗಾರಿ, ಉದ್ಘಾಟನೆ, ಚಾಲನೆ
 ಚಾಮರಾಜನಗರ, ಜು. 02 :- ಜಿಲ್ಲೆಯಲ್ಲಿ ಇಂದು ವಿವಿದೆಡೆ ಅಭಿವೃದ್ಧಿ ಕಾಮಗಾರಿ ಕಟ್ಟಡ, ರಸ್ತೆ, ಇತರೆ ಕೆಲಸಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಚಾಲನೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಜಿಲ್ಲಾ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಚಂದಕವಾಡಿಯಲ್ಲಿ 1314.80 ಲಕ್ಷ ರೂ. ವೆಚ್ಚದಲ್ಲಿ ರಾಮಸಮುದ್ರದಿಂದ ಅಮೃತಭೂಮಿವರೆಗೆ ಸುಮಾರು 13.90 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರವನ್ನು ಮೊದಲಿಗೆ ಹೊಂಡರಬಾಳುವಿನಲ್ಲಿ ಉದ್ಘಾಟಿಸಿದರು. ತದನಂತರ ಗುಂಬಳ್ಳಿ ಬಳಿ ಕೂಡ ಪ್ರವೇಶದ್ವಾರವನ್ನು ಉದ್ಘಾಟಿಸಿದರು. ನಂತರ ಸಂತೆಮರಹಳ್ಳಿಯಲ್ಲಿ ಆರ್ಚರಿ ಕ್ರೀಡಾ ಶಾಲೆ ಹಾಗೂ ವಸತಿ ನಿಲಯ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದರು.
 ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಇತರೆ ಸ್ಥಳೀಯ ಸದಸ್ಯರು, ಮುಖಂಡರು, ಜನಪ್ರತಿನಿಧಿಗಳು ಹಾಜರಿದ್ದರು.

ಶಿಕ್ಷಣ ಸುಧಾರಣೆ ಕುರಿತ ಸ್ಮಾರ್ಟ್ ಯೋಜನೆಗೆ ಚಾಲನೆ  
  ಚಾಮರಾಜನಗರ, ಜು. 02 (- ಜಿಲ್ಲೆಯ ಶಿಕ್ಷಣದ ಸಮಗ್ರ ಸುಧಾರಣೆಗಾಗಿ ಸ್ಮಾರ್ಟ್ ಯೋಜನೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಯುನಿಸೆಫ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ಮಾರ್ಟ್ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಶಿಕ್ಷಣ ಕ್ಷೇತ್ರದ ವಿನೂತನ ಕಾರ್ಯಕ್ರಮ ಇದಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ನಮ್ಮ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಈ ಸ್ಮಾರ್ಟ್ ಯೋಜನೆ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿದೆ ಎಂದರು.
ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ 11 ರಿಂದ 27 ಸ್ಥಾನಕ್ಕೆ ಕುಸಿರುವುದು ಅತಂಕಕಾರಿ ಸಂಗತಿ. ಇದನ್ನು ಗಮನದಲ್ಲಿಟ್ಟು ಮುಂಬರುವ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಹೊಸ ಯೋಜನೆಗಳ ಚಿಂತನೆ ಅಗತ್ಯವಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ, ಮಾರ್ಗದರ್ಶನ ಹಾಗೂ ಸ್ಪಂದನಾತ್ಮಕ ಬೋಧನೆಯ ಧ್ಯೇಯದೊಂದಿಗೆ ಆರಂಭಗೊಂಡಿರುವ ಈ ಸ್ಮಾರ್ಟ್ ಯೋಜನೆ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಮಕ್ಕಳ ವಿದ್ಯಾಭ್ಯಾಸ ಗುಣಮಟ್ಟದಿಂದ ಕೂಡಿರಬೇಕು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಪ್ರಜ್ಞೆ ಮೂಡಬೇಕು. ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ತರಬೆಕೆಂಬುದೇ ಈ ಯೋಜನೆಯ ಉದ್ದೇಶ. ಪ್ರಮುಖವಾಗಿ ಮಕ್ಕಳಿಗೆ  ಶಿಕ್ಷಕರು ಶಿಸ್ತನ್ನು ಕಲಿಸಬೇಕು. ಶೈಕ್ಷಣಿಕ ಚಟುವಟಿಕೆಗಳ ಅರಿವು ಮೂಡಿಸುವುದು ಶಿಕ್ಷಕರ ಕರ್ತವ್ಯ. ಶಿಕ್ಷಕರಿಗೆ ಶಿಕ್ಷಣದ ಮೌಲ್ಯಾಧಾರಿತ ತರಬೇತಿ ನೀಡಬೇಕು. ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ, ಪ್ರವೃತ್ತಿಯನ್ನು ಪ್ರತಿ ತಿಂಗಳು ಪರಿಶೀಲಿಸಿದರೆ ಶೈಕ್ಷಣಿಕ ಚಟುವಟಿಕೆಗಳ ಗುಣಮಟ್ಟ ಹೆಚ್ಚಲು ಅನುವಾಗುತ್ತದೆ ಎಂದು ಸಚಿವರು ಕಿವಿಮಾತು ಹೇಳಿದರು.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಸಾಕಷ್ಟು ಅನುದಾನ ಒದಗಿಸಿದೆ. ಜಿಲ್ಲೆಗೆ ಮೊರಾರ್ಜಿ,  ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಆದರ್ಶ ವಸತಿ ಶಾಲೆಗಳನ್ನು ಮಂಜೂರು ಮಾಡುವ ಮೂಲಕ ಅಭಿವೃದ್ದಿಗೆ ಮುಂದಾಗಿದೆ. ಎಲ್ಲಾ ಶಾಲೆ, ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ನೀಡಿದೆ. ಇದನ್ನು ಜಿಲ್ಲೆಯ ವಿದ್ಯಾರ್ಥಿಗಳು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಸ್ಮಾರ್ಟ್ ಯೋಜನೆ ಶಿಕ್ಷಣ ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ. ಸಂಬಂಧಪಟ್ಟ ಇಲಾಖೆಗಳು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿ ಯೋಜನೆಯ ಸಮರ್ಪಕ ಕಾರ್ಯನಿರ್ವಹಣೆಗೆ ಸಹಕಾರಿಯಾಗಬೇಕು. ಮುಖ್ಯವಾಗಿ ಸ್ಮಾರ್ಟ್ ಯೋಜನೆ ನಿರ್ವಹಣೆಗಾಗಿ ಯುನಿಸೆಫ್‍ನಿಂದ 25 ಲಕ್ಷ, ಐ.ಎಲ್.ಎಫ್.ಎಸ್ ಕಂಪನಿಯಿಂದ 25 ಲಕ್ಷ  ಸೇರಿದಂತೆ ಒಟ್ಟು 1.50 ಕೋಟಿ ಅನುದಾನ ದೊರೆತಿದೆ. ಜಿಲ್ಲೆಯಲ್ಲಿ ಮೊದಲಬಾರಿ ಅನುಷ್ಟಾನಗೊಂಡ ಜಿ.ಪಿ. ಒನ್ ಸೇವೆ ಇಂದು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಸ್ಮಾರ್ಟ್ ಯೋಜನೆಗೂ ಅಂತಹ ಯಶಸ್ಸು ಸಿಗಬೇಕು ಎಂದು ಸಚಿವರು ತಿಳಿಸಿದರು.
ಸಂಸದ ಆರ್. ಧ್ರುವನಾರಾಯಣ ಅವರು ಮಾತನಾಡಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ.  ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಈ ಸ್ಮಾರ್ಟ್ ಯೋಜನೆ ನೆರವಾಗಲಿದೆ. ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಮಂಜೂರಾಗಿದ್ದು, ಶಿಕ್ಷಣದಲ್ಲಿ ಸುಧಾರಣೆ ತರಲು ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯವಾಗಿ ಶಿಕ್ಷಕರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ತರಬೇತಿ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ ಶಿಕ್ಷಣ ಕ್ಷೇತ್ರದ ಪ್ರಮುಖ ಯೋಜನೆಯಾ ಸ್ಮಾರ್ಟ್ ಯೋಜನೆಯು ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭದಲ್ಲಿಯೆ ಚಾಲನೆಗೊಂಡಿರುವುದು ವಿಶೇಷವಾದದ್ದು. ಮುಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ. ಯೋಜನೆ ಜಾರಿಗೊಳ್ಳುವಲ್ಲಿ ಎಲ್ಲ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು ಹೆಚ್ಚು ಶ್ರಮಿಸಬೇಕಾಗಿದೆ ಎಂದರು
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮಾತನಾಡಿ ಸ್ಮಾರ್ಟ್ ಯೋಜನೆಯ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಳ್ಳೇಗಾಲ ಶಾಸಕರಾದ ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಮಾತನಾಡಿದರು.
ಸ್ಮಾರ್ಟ್ ಯೋಜನೆಯ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾಪಾಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ನಗರಸಭಾ ಅದ್ಯಕ್ಷರಾದ ರೇಣುಕಾಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಬೊಮ್ಮಯ್ಯ ವೇದಿಕೆಯಲ್ಲಿದ್ದರು.        

     ಹವಾಮಾನ ಆಧಾರಿತ ಬೆಳೆ ವಿಮೆ ನೊಂದಣಿ ಅವಧಿ ಜುಲೈ 10ರವರೆಗೆ ವಿಸ್ತರಣೆ  
 ಚಾಮರಾಜನಗರ, ಜು. :- ತೋಟಗಾರಿಕೆ ಬೆಳೆಯಾದ ಅಂಗಾಂಶ ಕೃಷಿ ಬಾಳೆ, ಕಂದುಬಾಳೆ ಹಾಗೂ ತೆಂಗುಬೆಳೆಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಲಭ್ಯವಿದ್ದು, ಈ ಯೋಜನೆಗೆ ನೊಂದಾಯಿಸುವ ಅವಧಿಯನ್ನು ಜುಲೈ 10ರ ವರೆಗೆ ವಿಸ್ತರಿಸಲಾಗಿದೆ.
ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವೆಂದು ನಿಗದಿ ಮಾಡಲಾಗಿತ್ತು. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಈ ವಿಮೆ ಯೋಜನೆಗೆ ರೈತರು ನೊಂದಾಯಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜುಲೈ 10ರ ವರೆಗೂ ಕಾಲಾವಕಾಶ ವಿಸ್ತರಿಸಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲು ವಿಮಾ ಯೋಜನೆ ಸಹ ಇದ್ದು, ಜಿಲ್ಲೆಯ ಯಳಂದೂರು ತಾಲೂಕು ಹೊರತು ಪಡಿಸಿ ಉಳಿದ ಎಲ್ಲ ತಾಲೂಕುಗಳಲ್ಲಿ ಹೋಬಳಿವಾರು ಟೊಮೆಟೋ(ನೀರಾವರಿ), ಅರಿಶಿಣ, ಬದನೆ, ಆಲೂಗಡ್ಡೆ(ನೀರಾವರಿ), ಬೀನ್ಸ್, ಈರುಳ್ಳಿ(ನೀರಾವರಿ), ವಿಮೆ ವ್ಯಾಪ್ತಿಗೆ ಬರಲಿವೆ. ಈ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವಾಗಿದೆ.
ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಹತ್ತಿರದ ಬ್ಯಾಂಕ್ ಶಾಖೆ ಸಂಪರ್ಕಿಸಬೇಕು. ವಿವರಗಳಿಗೆ ಹೋಬಳಿ, ತಾಲೂಕು ಮಟ್ಟದ ತೋಟಗಾರಿಕೆ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕತಿಳಿಸಿದ್ದಾರೆ.  

*********************

ಮಾಹಿತಿ ಹಕ್ಕು ಕಾಯಿದೆ ಬಗ್ಗೆ ಸಂಪೂರ್ಣ ತಿಳಿವಳಿಕೆ ಹೊಂದಲು ಆಯುಕ್ತರ ಸಲಹೆ
ಚಾಮರಾಜನಗರ, ಜೂ. 28 - ಕಚೇರಿಗಳಲ್ಲಿ ವ್ಯವಸ್ಥಿತವಾಗಿ ಕಡತ ನಿರ್ವಹಣೆ ಕೆಲಸವನ್ನು ಮಾಡುವುದರಿಂದ ಮಾಹಿತಿ ಹಕ್ಕುಗಳ ಸಂಬಂಧ ಸ್ವೀಕೃತವಾದ ಅರ್ಜಿಗಳನ್ನು ನಿಗದಿತ ವೇಳೆಗೆ ವಿಲೇವಾರಿ ಮಾಡಬಹುದೆಂದು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಕೆ.ಎಂ. ಚಂದ್ರೇಗೌಡ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿಂದು ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಯಾವುದೇ ಮಾಹಿತಿ ಕೋರಿ ಬಂದ ಅರ್ಜಿಗಳಿಗೆ ಮಾಹಿತಿ ಒದಗಿಸಬೇಕಾದರೆ ಮುಖ್ಯವಾಗಿ ಕಡತಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಹೀಗಾಗಿ ಕಚೇರಿಗಳಲ್ಲಿ ಕಡತ ವರ್ಗೀಕರಣ ಕೆಲಸವನ್ನು ಮಾಡಿಕೊಳ್ಳಬೇಕು. ಇದರಿಂದ ಕಾಲಮಿತಿಯೊಳಗೆ ಮಾಹಿತಿ ಹಕ್ಕು ಅರ್ಜಿಗೆ ಪೂರಕವಾಗಿ ಮಾಹಿತಿ ನೀಡಲು ಅನುಕೂಲವಾಗಲಿದೆ ಎಂದು ಆಯುಕ್ತರು ತಿಳಿಸಿದರು.
ಮಾಹಿತಿ ಹಕ್ಕುಗಳಿಗೆ ಸಂಬಂಧಿಸಿದ ಕಾಯಿದೆ, ನಿಯಮ, ಅಧಿಸೂಚನೆ, ಸುತ್ತೋಲೆ ಹಾಗೂ ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಬೇಕು. ಇದರಿಂದ ಅರ್ಜಿ ವಿಲೇವಾರಿಯಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಹಾಯವಾಗಲಿದೆ. ನಿಯಮಾವಳಿ ಅನ್ವಯ ಅರ್ಜಿದಾರರಿಗೆ ಯಾವ ಮಾಹಿತಿ ಕೊಡಬೇಕು ಅಥವಾ ಕೊಡಬಾರದು ಎಂಬ ವಿಷಯವು ಮನದಟ್ಟವಾಗಲಿದೆ. ಮಾಹಿತಿ ಹಕ್ಕು ಬಗ್ಗೆ ಸಂಪೂರ್ಣ ತಿಳಿವಳಿಕೆ ಹೊಂದುವುದರಿಂದ ಅರ್ಜಿ ವಿಲೇವಾರಿ ಕೆಲಸವು ಸರಳವಾಗುತ್ತದೆ ಎಂದು ಆಯುಕ್ತರು ತಿಳಿಸಿದರು.
ಮಾಹಿತಿ ಕೋರಿ ಬಂದ ಅರ್ಜಿಗಳಿಗೆ ಆ ಕಚೇರಿಯಲ್ಲಿ ಮಾಹಿತಿ ಲಭ್ಯವಿದ್ದರೆ 30 ದಿನಗಳೊಳಗೆ ನೀಡಬೇಕು. ಆದಷ್ಟು ಆ ಮಾಹಿತಿಯನ್ನು ನೋಂದಾಯಿತ ಅಂಚೆ ಮೂಲಕವೇ ರವಾನೆ ಮಾಡಬೇಕು. ಇದರಿಂದ ಮಾಹಿತಿ ರವಾನಿಸಿದ ಬಗ್ಗೆ ನಿರ್ದಿಷ್ಟ ದಾಖಲೆ ಅಥವಾ ಖಾತರಿಯನ್ನು ಹೊಂದಬಹುದಾಗಿದೆ. ಅರ್ಜಿದಾರರು ಕೇಳಿದ ಮಾಹಿತಿ ನಿಮ್ಮ ವ್ಯಾಪ್ತಿಯಲ್ಲಿ ಲಭ್ಯವಿಲ್ಲದಿದ್ದಲ್ಲಿ ಸಂಬಂಧಪಟ್ಟ ಇಲಾಖೆಗೆ 5 ದಿನಗಳೊಳಗೆ ವರ್ಗಾಯಿಸಬೇಕು ಎಂದರು.
ಅರ್ಜಿದಾರರು ಯಾವ ಮಾಹಿತಿಯನ್ನು ಕೇಳಿದ್ದಾರೆ ಎಂಬ ಬಗ್ಗೆ ಸಂಪೂರ್ಣವಾಗಿ ಅರ್ಥವಾಡಿಕೊಳ್ಳಬೇಕು. ಕೆಲ ನಿರ್ಧಿಷ್ಟ ನಿಯಮಾವಳಿ ಪ್ರಕಾರ ಕೆಲವೊಂದು ವಿಷಯಗಳಿಗೆ ಸಂಬಂಧಪಟ್ಟಂತೆ ಮಾಹಿತಿಯನ್ನು ನೀಡಲು ಅವಕಾಶವಿರುವುದಿಲ್ಲ. ಮೂರನೇ ವ್ಯಕ್ತಿಗೆ ಸಂಬಂಧಪಟ್ಟಂತೆ ಮಾಹಿತಿ ಕೇಳಿದ ಸಂದರ್ಭದಲ್ಲಿ ಆ ಮೂರನೇ ವ್ಯಕ್ತಿಗೆ ನೋಟೀಸ್ ನೀಡಿ ಅವರ ಅನುಮತಿಯನ್ನು ಪಡೆಯಬೇಕು. ಮೂರನೇ ವ್ಯಕ್ತಿ ಒಪ್ಪಿದಲ್ಲಿ ಮಾತ್ರ ಅವರ ಮಾಹಿತಿಯನ್ನು ಅರ್ಜಿದಾರರಿಗೆ ಕೊಡಬೇಕಾಗುತ್ತದೆ ಎಂದು ಮಾಹಿತಿ ಆಯುಕ್ತರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ ಜಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜೂ. 30ರಂದು ದೇವರಾಜ ಅರಸು ಅವರ ವ್ಯಕ್ತಿತ್ವ, ಸಾಧನೆಗಳ ಕುರಿತು ನಾಟಕ ಪ್ರದರ್ಶನಕ್ಕೆ ಚಾಲನೆ
ಚಾಮರಾಜನಗರ, ಜೂ. 28 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ನೇತಾರ, ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಜೂನ್ 30ರಂದು ಸಂಜೆ 6 ಗಂಟೆಗೆ ಮಂಡ್ಯ ರಮೇಶ್ ನಿರ್ದೇಶಿಸಲಿರುವ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತು ನಾಟಕ ಪ್ರದರ್ಶನವನ್ನು ನಗರದ ಜಿಲ್ಲಾಡಳಿತ ಭವನದ ಆವರಣದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ,  ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಗೋ. ಮಧುಸೂದನ್, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅರಸು ಅವರ ವ್ಯಕ್ತಿತ್ವ ಸಾಧನೆ ಕುರಿತು ನಾಟಕ ಪ್ರದರ್ಶನ ವೀಕ್ಷಣೆಗೆ ಮನವಿ
ಚಾಮರಾಜನಗರ, ಜೂ. 28 - ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರೆಂದೇ ಪ್ರಸಿದ್ಧರಾಗಿದ್ದ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಹಾಗೂ ಮಹತ್ವದ ಸಾಧನೆಗಳನ್ನು ಪ್ರಸ್ತುತ ಪಡಿಸುವ ನಾಟಕ ಪ್ರದರ್ಶನವು ಜೂನ್ 30ರಂದು ಸಂಜೆ 6 ಗಂಟೆಗೆ ನಗರದ ಜಿಲ್ಲಾಡಳತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಾಡಾಗಿದೆ.
ಮಂಡ್ಯ ರಮೇಶ್ ನಾಟಕ ತಂಡವು ಅರಸು ಅವರ ವ್ಯಕ್ತಿತ್ವ ಹಾಗೂ ಸಾಧನೆಗಳ ಕುರಿತ ನಾಟಕ ಪ್ರದರ್ಶನ ನೀಡಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿತವಾಗಿದೆ.
ಈ ನಾಟಕ ಪ್ರದರ್ಶನವನ್ನು ದೇವರಾಜ ಅರಸು ಅವರ ಅಭಿಮಾನಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ನಾಗರಿಕರು ವೀಕ್ಷಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ದೂ.ಸಂ. 08226-222180 ಅಥವಾ ಮೊಬೈಲ್ 9480817623 ಸಂಪರ್ಕಿಸಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ಸಾಲಸೌಲಭ್ಯಕ್ಕೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 28 (ಕರ್ನಾಟಕ ವಾರ್ತೆ):- ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಧಾರ ಯೋಜನೆಯಡಿ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೀಡುವ ಸಾಲಸೌಲಭ್ಯಕ್ಕೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಯೋಜನೆಯಡಿ ಬಂಡವಾಳಕ್ಕೆ 20 ಸಾವಿರ ರೂ. ಸಾಲ ಹಾಗೂ ಒಂದು ಗೂಡಂಗಡಿ (ಕಿಯೊಸ್ಕಾ) ನೀಡಲಾಗುತ್ತದೆ. ಆಸಕ್ತರು ಗ್ರಾಮ ಪಂಚಾಯಿತಿ ಕಚೇರಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಅಥವಾ ತಾಲೂಕು ಪಂಚಾಯಿತಿ ಕಚೇರಿಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜುಲೈ 30 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-223688 ಅಥವಾ 224688 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ
ಚಾಮರಾಜನಗರ, ಜೂ. 28 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲಿದ್ದು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ ಸೇರಿದವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 10 ಕಡೆಯ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅಥವಾ ಮೊಬೈಲ್ ಸಂಖ್ಯೆ 9480818013, 9480818010, ಸ್ಥಿರÀ ದೂರವಾಣಿ ಸಂಖ್ಯೆ 080-44554444 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಪರಿಶಿಷ್ಟರ, ಮೋಳೆ ಕಾಲೋನಿಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ತಯಾರಿಸಿ : ಧ್ರುವನಾರಾಯಣ
ಚಾಮರಾಜನಗರ ಜೂನ್-29  ಪಟ್ಟಣದ ಮೋಳೆಗಳು ಹಾಗೂ ಪರಿಶಿಷ್ಟರ ಕಾಲೋನಿಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರದ ವಿವಿಧ ಯೋಜನೆಗಳಡಿ ನೆರವು ಲಭಿಸಲಿದ್ದು, ಇದಕ್ಕಾಗಿ ಅಗತ್ಯ ಕ್ರಿಯಾ ಯೋಜನೆ ತಯಾರಿಸುವಂತೆ ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ತಿಳಿಸಿದರು.
ಕೊಳ್ಳೇಗಾಲ ಪಟ್ಟಣದ ಮೋಳೆಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಒಂದು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೊಳ್ಳೇಗಾಲ ಪಟ್ಟಣದಲ್ಲಿ ಇರುವ ಮೋಳೆಗಳು ಹಾಗೂ ಪರಿಶಿಷ್ಟರು ವಾಸಿಸುವ ಪ್ರದೇಶಗಳಿಗೆ ಮೂಲ ಸೌಲಭ್ಯ ಅಭಿವೃದ್ಧಿ ಪಡಿಸುವ ಸಲುವಾಗಿಯೇ ಕೊಳಚೆ ನಿರ್ಮೂಲನಾ ಮಂಡಳಿ ಹಾಗೂ ಪರಿಶಿಷ್ಟ ಜಾತಿ, ವರ್ಗ ವಿಶೇಷ ಘಟಕ ಉಪಯೋಜನೆಯಡಿ ಅನುದಾನ ಸಿಗಲಿದೆ. ಈ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡು ಸೌಕರ್ಯ ಒದಗಿಸಬಹುದಾಗಿದೆ. ಹೀಗಾಗಿ ಕ್ರಿಯಾ ಯೋಜನೆಯನ್ನು ನಗರಸಭೆ ಎಲ್ಲರ ಸಹಕಾರ ಪಡೆದು ಸಿದ್ಧಪಡಿಸಬೇಕು ಎಂದು ತಿಳಿಸಿದರು.
ಹಿಂದುಳಿದ ಜನರೇ ಹೆಚ್ಚು ವಾಸಿಸುವ ಮೋಳೆಗಳಲ್ಲಿ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸಿ ಅವರಿಗೆ ಸೌಲಭ್ಯ ಒದಗಿಸುವುದು ಆದ್ಯ ಕರ್ತವ್ಯವಾಗಿದೆ. ವಿಶೇಷವಾಗಿ ಕೊಳ್ಳೇಗಾಲ ಪಟ್ಟಣದ 13ನೇ ವಾರ್ಡಿಗೆ ಸೇರಿದ ಮೋಳೆಯಲ್ಲಿ ಮೂಲಸೌಕರ್ಯ ಒದಗಿಸಬೇಕೆಂಬ ಬೇಡಿಕೆ ಈ ಹಿಂದಿನಿಂದಲೂ ಇದೆ. ಹೀಗಾಗಿ ಕೊಳಚೆ ನಿರ್ಮೂಲನಾ ಮಂಡಳಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ, ಚರಂಡಿ ಕಾಮಗಾರಿಗಳನ್ನು ನಿರ್ವಹಿಸಿ ಜನರಿಗೆ ಅನುಕೂಲ ಮಾಡಿಕೊಡಲಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಸ್ಥಳೀಯ ಮೋಳೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಇನ್ನೂ ನಾಲ್ಕು ಕೋಟಿ ರೂ.ಗಳ ಅಗತ್ಯವಿದೆ ಎಂದು ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ನಗರಸಭೆ ವತಿಯಿಂದಲೂ ಸಾಧ್ಯವಿರುವ ಗರಿಷ್ಠ ಪ್ರಮಾಣದ ಅನುದಾನ ನಿಗಧಿ ಮಾಡಬೇಕು. ಇನ್ನಿತರ ಕಡೆ ಲಭಿಸಬಹುದಾದ ಅವಶ್ಯ ಹಣಕಾಸು ಪಡೆದುಕೊಂಡು ಎಲ್ಲಾ ಅಗತ್ಯಗಳನ್ನು ಪೂರೈಸಲು ತಾವೂ ಸಹ ಶಿಫಾರಸ್ಸು ಮಾಡುವುದಾಗಿ ಧ್ರುವನಾರಾಯಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಎಸ್.ಜಯಣ್ಣ ರವರು ಮೋಳೆಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರದಿಂದ ಮಂಜೂರು ಮಾಡಿಸಲು ಮುಂದಾಗುತ್ತೇನೆ. ಸ್ಥಳೀಯ ಜನರ ಅಪೇಕ್ಷೆಯಂತೆ ಅವರಿಗೆ ನೀಡಬೇಕಿರುವ ಸೌಕರ್ಯಗಳನ್ನು ಒಳಗೊಂಡ ಮಾಸ್ಟರ್ ಪ್ಲಾನ್ ತಯಾರಿಸಬೇಕೆಂದು ತಿಳಿಸಿದರು.
ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯಪಾಲಕ ಎಂಜಿನಿಯರ್ ಮಂಜು ಮಾತನಾಡಿ, ಮಂಡಳಿ ವತಿಯಿಂದ ಕೊಳಚೆ ಪ್ರದೇಶದಲ್ಲಿ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಸಲುವಾಗಿಯೇ 200 ಕೋಟಿ ರೂ.ಹಣ ನಿಗಧಿಯಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿಯೂ 20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯನ್ನು ಕೈಗೊಳ್ಳಲು ಅವಕಾಶವಿದೆ. ಇದಕ್ಕಾಗಿ ಶೀಘ್ರದಲ್ಲಿಯೇ ವಿಸ್ತøತ ಯೋಜನಾ ವರದಿ ತಯಾರಿಸಲಿದ್ದೇವೆ ಎಂದರು.
ನಗರಸಭೆ ಅಧ್ಯಕ್ಷರಾದ ಮಲ್ಲಿಕಾರ್ಜುನಯ್ಯ, ಉಪಾಧ್ಯಕ್ಷರಾದ ಶಾಂತರಾಜು, ಸದಸ್ಯರಾದ ಶಾರದಾ ವರದರಾಜು, ಸುರೇಶ್, ರಾಘವೇಂದ್ರ, ಮಹದೇವಪ್ರಸಾದ್, ಮುಡಿಗುಂಡ ಮಹದೇವು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿವಕುಮಾರ್, ಕೊಪ್ಪಾಳಿ ಮಹದೇವನಾಯಕ, ನಗರಸಭಾ ಆಯುಕ್ತರಾದ ಲಿಂಗರಾಜು, ಕೊಳಚೆ ನಿರ್ಮೂಲನಾ ಮಂಡಳಿಯ ಸಹಾಯಕ ಕಾರ್ಯಪಾಲಕರು ಉಪಸ್ಥಿತರಿದ್ದರು.
ಜೂ. 30ರಂದು ದೇವರಾಜ ಅರಸು ಅವರ ವ್ಯಕ್ತಿತ್ವ, ಸಾಧನೆಗಳ ಕುರಿತು ನಾಟಕ ಪ್ರದರ್ಶನಕ್ಕೆ ಚಾಲನೆ
ಚಾಮರಾಜನಗರ, ಜೂ. 29 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ನೇತಾರ, ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಜೂನ್ 30ರಂದು ಸಂಜೆ 6 ಗಂಟೆಗೆ ಮಂಡ್ಯ ರಮೇಶ್ ನಿರ್ದೇಶಿಸಲಿರುವ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತು ನಾಟಕ ಪ್ರದರ್ಶನವನ್ನು ನಗರದ ಜಿಲ್ಲಾಡಳಿತ ಭವನದ ಆವರಣದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ,  ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಗೋ. ಮಧುಸೂದನ್, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅರಸು ಅವರ ವ್ಯಕ್ತಿತ್ವ ಸಾಧನೆ ಕುರಿತು ನಾಟಕ ಪ್ರದರ್ಶನ ವೀಕ್ಷಣೆಗೆ ಮನವಿ
ಚಾಮರಾಜನಗರ, ಜೂ. 29  ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರೆಂದೇ ಪ್ರಸಿದ್ಧರಾಗಿದ್ದ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಹಾಗೂ ಮಹತ್ವದ ಸಾಧನೆಗಳನ್ನು ಪ್ರಸ್ತುತ ಪಡಿಸುವ ನಾಟಕ ಪ್ರದರ್ಶನವು ಜೂನ್ 30ರಂದು ಸಂಜೆ 6 ಗಂಟೆಗೆ ನಗರದ ಜಿಲ್ಲಾಡಳತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಾಡಾಗಿದೆ.
ಮಂಡ್ಯ ರಮೇಶ್ ನಾಟಕ ತಂಡವು ಅರಸು ಅವರ ವ್ಯಕ್ತಿತ್ವ ಹಾಗೂ ಸಾಧನೆಗಳ ಕುರಿತ ನಾಟಕ ಪ್ರದರ್ಶನ ನೀಡಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿತವಾಗಿದೆ.
ಈ ನಾಟಕ ಪ್ರದರ್ಶನವನ್ನು ದೇವರಾಜ ಅರಸು ಅವರ ಅಭಿಮಾನಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ನಾಗರಿಕರು ವೀಕ್ಷಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ದೂ.ಸಂ. 08226-222180 ಅಥವಾ ಮೊಬೈಲ್ 9480817623 ಸಂಪರ್ಕಿಸಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ದೇಶದ ಆರ್ಥಿಕ ಅಭಿವೃದ್ಧಿ ಯೋಜನೆಗೆ ಮಹಾಲೊನೋಬಿಸ್ ಕೊಡುಗೆ ಅಪಾರ
ಚಾಮರಾಜನಗರ, ಜೂ,2-ದೇಶದ ಆರ್ಥಿಕ ಅಭಿವೃದ್ದಿಗಾಗಿ ರೂಪಿಸಿದ ಯೋಜನೆಗಳಿಗೆ ಸಾಂಖ್ಯಿಕ ತಜ್ಞರಾದ ಪ್ರೋ|. ಮಹಾಲೊನೋಬಿಸ್ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಉಪಕಾರ್ಯದರ್ಶಿ ಮುನಿರಾಜಪ್ಪ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಇಂದು ಸಾಂಖ್ಯಿಕ ಇಲಾಖೆ ವತಿಯಿಂದ ಮಹಾಲೊನೊಬಿಸ್ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಾಂಖ್ಯಿಕ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರಗತಿಗೆ ಪೂರಕವಾಗಿರುವ ಯೋಜನೆಗಳ ತಯಾರಿಕೆ, ಸಮೀಕ್ಷಾ ವಿಧಾನ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಗೆ ಮಹಾಲೊನೋಬಿಸ್ ಅಪಾರ ಕೊಡುಗೆ ನೀಡಿದ್ದಾರೆ. ಮುಂದಿನ ಪೀಳಿಗೆಗೂ ಅನುಕೂಲವಾಗುವ ಭದ್ರ ಬುನಾದಿಯನ್ನು ಹಾಕಿಕೊಟ್ಟಿದ್ದಾರೆ ಎಂದು ಮುನಿರಾಜಪ್ಪ ತಿಳಿಸಿದರು.
ಮಹಾಲೋನೋಬಿಸ್ ಅವರ ಚಿಂತನೆ, ಸಮೀಕ್ಷೆ ಮಾರ್ಗದರ್ಶನವು ಇಂದಿಗೂ ಪ್ರಸ್ತುತವಾಗಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಯೋಜನೆಗಳನ್ನು ಮುಂದುವರೆಸಲಾಗುತ್ತಿದೆ. ಅವರ ಹೆಸರಿನಲ್ಲಿ ಸಾಂಖ್ಯಿಕ ದಿನವನ್ನು ಆಚರಿಸುವ ಮೂಲಕ ಸ್ಮರಿಸುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಮುನಿರಾಜಪ್ಪ ಪ್ರಶಂಸಿದರು.
ಕೃಷಿ ಮತ್ತು ರೈತರ ಕಲ್ಯಾಣ ವಿಷಯ ಕುರಿತು ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ರವರು ಮಾತನಾಡಿ ವಿದ್ಯಾರ್ಥಿಗಳು ಕೃಷಿ ಸಂಬಂಧಿತ ಮೂಲ ಅಂಕಿಅಂಶಗಳನ್ನು ಸಹಾ ವಿದ್ಯಾಭ್ಯಾಸದ ಜೊತೆ ತಿಳಿಯಬೇಕಿದೆ. ದೇಶದ ಆದಾಯ ತಲಾದಾಯ, ಕೃಷಿ ಬೆಳವಣಿಗೆಯಲ್ಲಿನ ಪಾತ್ರ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಸಲಹೆ ಮಾಡಿದರು.
ಸಿದ್ದಾರ್ಥ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ರಂಗಸ್ವಾಮಿ ಮಾತನಾಡಿ ಮಹಾಲೊನೋಬಿಸ್ ಅವರ ರಾಷ್ಟ್ರೀಯ ಮಾದರಿ ಸಮೀಕ್ಷೆ ಆರ್ಥಿಕ ಸಾಮಾಜಿಕ ಸಮೀಕ್ಷೆ, ಬೆಳೆ ವಿಮೆ, ಬೆಳೆ ಅಂದಾಜು ಸೇರಿದಂತೆ ಅನೇಕ ನೀತಿ ವಿಧಾನಗಳನ್ನು ಅನುಸರಿಸಲಾಗಿದೆ ಎಂದರು.
ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ ಪ್ರಮೀಳ ಮಾತನಾಡಿ ಮಹಾಲೊನೋಬಿಸ್ ಅವರು ಯೋಜನಾ ಆಯೋಗದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ ಎರಡನೇ ಪಂಚವಾರ್ಷಿಕ ಯೋಜನೆಯಲ್ಲಿ ಕೃಷಿ ಕೈಗಾರಿಕೆ ಆದ್ಯತೆ ನೀಡುವಲ್ಲಿ ಇವರ ಕೊಡುಗೆ ಬಹಳಷ್ಟಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಾದೇಶು ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ನಾಗರಾಜು, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರಾದ ಡಾ|| ಬಾಲಸುಂದರ್, ಸಹಾಯಕ ಸಂಖ್ಯಾಧಿಕಾರಿ ಮಹದೇವು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪದ್ಮಶ್ರೇಣಿ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ
ಚಾಮರಾಜನಗರ, ಜೂ. 30:- ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಕೊಡಮಾಡುವ 2017ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುತ್ತದೆ,
ಕಲೆ (ಜನಪ್ರಿಯ ಕಲೆ, ಸಂಗೀತ, ಚಿತ್ರಕಲೆ, ವಾಸ್ತುಶಿಲ್ಪ, ಶಿಲ್ಪಕಲೆ, ಚಲನಚಿತ್ರ, ಛಾಯಾಗ್ರಹಣ ಇತರೆ), ಸಮಾಜಕಾರ್ಯ(ಸಮಾಜಸೇವೆ, ಧರ್ಮಾರ್ಥ ಸೇವೆ, ಸಮುದಾಯ ಯೋಜನೆ ಕೊಡುಗೆ), ಸಾರ್ವಜನಿಕ ವ್ಯವಹಾರ (ಕಾನೂನು, ಸಾರ್ವಜನಿಕ ಜೀವನ, ರಾಜಕೀಯ ಇತ್ಯಾದಿ), ವಿಜ್ಞಾನ, ತಾಂತ್ರಿಕ ತಂತ್ರಜ್ಞಾನ ಇತರೆ ಗೌರವಾನ್ವಿತ ವೃತ್ತಿ, ವ್ಯಾಪಾರ, ಕೈಗಾರಿಕೆ (ಬ್ಯಾಂಕಿಂಗ್ ಆರ್ಥಿಕ ಚಟುವಟಿಕೆ, ಮ್ಯಾನೇಜ್‍ಮೆಂಟ್, ಪ್ರವಾಸೋದ್ಯಮ, ವಾಣಿಜ್ಯ), ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ (ಪತ್ರಿಕೋದ್ಯಮ, ಬೋಧನೆ, ಪುಸ್ತಕ ಬರೆಯುವಿಕೆ, ವೈದ್ಯ, ಶಿಕ್ಷಣ ಅಭಿವೃದ್ಧಿ ಸುಧಾರಣೆ ಇತ್ಯಾದಿ), ನಾಗರಿಕ ಸೇವೆ (ಆಡಳಿತದಲ್ಲಿ ಸರ್ಕಾರಿ ನೌಕರರು ಸಾಧಿಸಿರುವ ಶ್ರೇಷ್ಠತೆ), ಕ್ರೀಡೆ, ಅಥ್ಲೆಟಿಕ್ಸ್, ಸಾಹಸ ಕ್ರೀಡೆ ಮತ್ತು ಯೋಗ, ಇತರೆ ಕ್ಷೇತ್ರಗಳು, ಮಾನವ ಹಕ್ಕುಗಳ ಸಂರಕ್ಷಣೆ, ಭಾರತ ಸಂಸ್ಕøತಿಕ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸರಕ್ಷಣೆ ಒಳಗೊಂಡಂತೆ ಕ್ಷೇತ್ರಗಳನ್ನು ಪರಿಗಣಿಸಲಾಗುತ್ತದೆ.
ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೊಂದಿರುವುದನ್ನು ದೃಢಪಡಿಸಿಕೊಳ್ಳಬೇಕು. ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿಯನ್ನು ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನಿಸಬೇಕಾಗುತ್ತದೆ.
ಅಂಗವಿಕಲರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಮಾಜದ ದುರ್ಬಲ ವರ್ಗದವರು, ಮಹಿಳೆಯರನ್ನು ಗಮನಕ್ಕೆ ತೆಗೆದುಕೊಳ್ಳಬೇಕು. ಯಾವುದೇ ವಿಶೇಷ ಸಂಸ್ಥೆ, ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಹೆಸರುಗಳನ್ನು ಶಿಫಾರಸು ಮಾಡುವ ಮುಂಚೆ ಆ ಸಂಸ್ಥೆಗಳನ್ನು ಸಂಪರ್ಕಿಸಬೇಕು. ಈ ಪ್ರಶಸ್ತಿಯನ್ನು ಸಾಮಾನ್ಯವಾಗಿ ಮೃತಪಟ್ಟ ವ್ಯಕ್ತಿಗಳಿಗೆ ನೀಡಲಾಗುವುದಿಲ್ಲ. ಆದರೂ ವಿಶೇಷ ಸಂದರ್ಭಗಳಲ್ಲಿ ಶಿಫಾರಸು ಮಾಡಲ್ಪಟ್ಟ ವ್ಯಕ್ತಿಯು ಇತ್ತೀಚೆಗೆ ಮೃತನಾಗಿದ್ದರೆ ಅಂದರೆ ಯಾವ ಗಣರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆಯೋ ಆ ವರ್ಷದಲ್ಲಿ ಮೃತಪಟ್ಟಿದ್ದರೆ ಅಂತಹವರಿಗೆ ಮರಣೋತ್ತರ ಪ್ರಶಸ್ತಿಯನ್ನು ನೀಡುವ ಬಗ್ಗೆ ಸರ್ಕಾರವು ಪರಿಗಣಿಸಬಹುದಾಗಿದೆ.
ಶಿಫಾರಸು ಪ್ರಸ್ತಾವನೆಗಳನ್ನು ಜುಲೈ 5ರೊಳಗೆ ಆನ್ ಲೈನ್ ಮೋಡಿನಲ್ಲಿ ಕಳುಹಿಸಬೇಕಿದೆ. ಪದ್ಮಶ್ರೇಣಿಯ ಈ ಪ್ರಶಸ್ತಿಗೆ ಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳು ಇದ್ದಲ್ಲಿ ಅಂತಹ ವ್ಯಕ್ತಿಗಳ ಹೆಸರನ್ನು ತಹಸೀಲ್ದಾರರ ಮೂಲಕ ಪ್ರಸ್ತಾವನೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಪಿಯು ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ
ಚಾಮರಾಜನಗರ, ಜೂ. 30 - ಜಿಲ್ಲೆಯ ನಾಲ್ಕೂ ತಾಲೂಕು ಕೇಂದ್ರಗಳಲ್ಲಿ ಜುಲೈ 1 ರಿಂದ 13ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ತಾಲೂಕು ಕೇಂದ್ರಗಳಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಆದೇಶ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಬೆಳಿಗ್ಗೆ 8 ರಿಂದ ಸಂಜೆ 5.30 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪರೀಕ್ಷಾ ಕಾರ್ಯವು ನ್ಯಾಯೋಚಿತ, ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಯಲೆಂಬ ಸದುದ್ದೇಶದಿಂದ ನಿಷೇದಾಜ್ಞೆ ವಿಧಿಸಲಾಗಿದೆ. ಈ ಆದೇಶವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದ್ದಾರೆ.
ಗಣಕಯಂತ್ರ ಪರೀಕ್ಷೆ : ನಿಷೇದಾಜ್ಞೆ ಜಾರಿ
ಚಾಮರಾಜನಗರ, ಜೂ. 30 - ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಜುಲೈ 1ರಂದು ಹಾಗೂ ತಾಲೂಕು ಕಚೇರಿ ಬಳಿಯ ವಿಷುಯಲ್ ಸಾಫ್ಟ್‍ಟೆಕ್ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್‍ನಲ್ಲಿ ಜುಲೈ 2 ರಿಂದ 8ರವರೆಗೆ ಗಣಕಯಂತ್ರ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಈ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಲಿಖಿತ ಪರೀಕ್ಷೆ, ತಾಲೂಕು ಕಚೇರಿ ಬಳಿಯ ವಿಷುಯಲ್ ಸಾಫ್ಟ್‍ಟೆಕ್ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್‍ನಲ್ಲಿ ಪ್ರಾಯೋಜಿಕ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಆದೇಶ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5.30 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪರೀಕ್ಷಾ ಕಾರ್ಯವು ನ್ಯಾಯೋಚಿತ, ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಯಲೆಂಬ ಸದುದ್ದೇಶದಿಂದ ನಿಷೇದಾಜ್ಞೆ ವಿಧಿಸಲಾಗಿದೆ. ಈ ಆದೇಶವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದ್ದಾರೆ.

ಅಂಕನಶೆಟ್ಟಿಪುರ : ಆರ್ ಟಿ ಚಿಲ್ಡ್ರನ್ ಶಾಲೆಗೆ ದಾಖಲು ಮಾಡದಿರÀಲು ಸೂಚನೆ
ಚಾಮರಾಜನಗರ, ಜೂ. 30 (ಕರ್ನಾಟಕ ವಾರ್ತೆ):- ತಾಲೂಕಿನ ಅಂಕನಶೆಟ್ಟಿಪುರದಲ್ಲಿ ಆರ್ ಟಿ ಚಿಲ್ಡ್ರನ್ ಶಾಲೆಯು ಅನುಮತಿ ಪಡೆಯದೆ 6 ರಿಂದ 8ನೇ ತರಗತಿ ಪ್ರಾರಂಭಿಸಿದ್ದು ಇಲಾಖೆ ಗಮನಕ್ಕೆ ಬಂದಿದ್ದು ಪೋಷಕರು ಮಕ್ಕಳನ್ನು ಸೇರ್ಪಡೆ ಮಾಡಬಾರದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ಸದರಿ ಶಾಲೆಯಲ್ಲಿ 6 ರಿಂದ 8ನೇ ತರಗತಿಗಳನ್ನು ಅನಧಿಕೃತವಾಗಿ ಪ್ರಾರಂಭಿಸಿದ್ದು ಕಾನೂನುಬಾಹಿರವಾಗಿರುತ್ತದೆ, ಈ ಹಿನ್ನೆಲೆಯಲ್ಲಿ ಪೋಷಕರು ಯಾವುದೇ ಕಾರಣಕ್ಕೂ 6 ರಿಂದ 8ನೇ ತರಗತಿಗೆ ತಮ್ಮ ಮಕ್ಕಳಿಗೆ ಪ್ರವೇಶ ಪಡೆಯಬಾರದೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 30 :- ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಮೆಟ್ರಿಕ್ ನಂತರದ ಬಾಲಕರ ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಇತರೆ ಜನಾಂಗದವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರವರ್ಗ 1, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 2.5 ಲಕ್ಷ ರೂ. ಒಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇನ್ನಿತರ ಜನಾಂಗದ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಒಂದು ಲಕ್ಷ ರೂ. ಒಳಗಿರಬೇಕು. ಅರ್ಜಿ ಸಲ್ಲಿಕೆಗೆ ಜುಲೈ 23 ಕಡೆಯ ದಿನವಾಗಿದೆ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಅರ್ಜಿ ಸಲ್ಲಿಕೆ, ಇನ್ನಿತರ ಸಂಪೂರ್ಣ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅಥವಾ hಣಣಠಿ://ಞಚಿಡಿeಠಿಚಿss.ಛಿgg.gov.iಟಿ ಸಂಪರ್ಕಿಸಬೇಕು. ಅಲ್ಲದೆ ಮೊಬೈಲ್ ಸಂಖ್ಯೆ 9480818013 ಸ್ಥಿರÀ ದೂರವಾಣಿ ಸಂಖ್ಯೆ 080-44554444 ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದು.
ತಾಂತ್ರಿಕ ತೊಂದರೆಗಳಾದಲ್ಲಿ ಇ ಮೇಲ್ bಛಿತಿhosಣeಟಚಿಜmissioಟಿ@gmಚಿiಟ.ಛಿom ಮೂಲಕ ದಾಖಲೆಗಳೊಂದಿಗೆ ಕೋರಿಕೆ ಸಲ್ಲಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಲೆ ಅಭಿವೃದ್ಧಿಗೆ ಶ್ರಮಿಸುವ ಯುವ ಸಂಘಗಳಿಗೆ ನಗದು ಪ್ರೋತ್ಸಾಹಧನ : ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 30  ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುವ ಯುವಸಂಘಗಳಿಗೆ ನೀಡಲಾಗುವ ನಗದು ಪ್ರೋತ್ಸಾಹಧನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ.
ನೋಂದಣಿಯಾಗಿರುವ ಸಂಘಸಂಸ್ಥೆಗಳು ತಮ್ಮ ಕಾರ್ಯ ವ್ಯಾಪ್ತಿಯ ಒಂದು ಸರ್ಕಾರಿ ಶಾಲೆಯನ್ನು ಆಯ್ಕೆ ಮಾಡಿಕೊಂಡು ಶಾಲೆಯ ಆಟದ ಮೈದಾನ ಅಭಿವೃದ್ಧಿ, ಶಾಲಾ ಆವರಣದಲ್ಲಿ ಹಸಿರೀಕರಣ, ಕೈತೋಟ ನಿರ್ಮಾಣ, ಪರಿಸರ ಸಂರಕ್ಷಣೆ, ಶಾಲೆಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳ ಪೂರೈಕೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವೈಜ್ಞಾನಿಕ ವಿಷಯದಲ್ಲಿ ಅರಿವು ಮೂಡಿಸುವಿಕೆ, ಸರಳ ಬೋಧನೆ, ವಿಶೇಷ ಮಕ್ಕಳ ಆರೈಕೆ (ಬುದ್ಧಿಮಾಂದ್ಯ ಶಾಲೆ, ಇನ್ನಿತರ ಕಡೆ), ಅಲೆಮಾರಿ ಮಕ್ಕಳಿಗೆ ಶೈಕ್ಷಣಿಕ ಸಹಕಾರ, ಮಳೆ ನೀರು ಕೊಯ್ಲು ನಿರ್ಮಾಣ, ಪಠ್ಯ ಜ್ಞಾನದ ಸಾಮಥ್ರ್ಯ ಅಭಿವೃದ್ಧಿ ಹೀಗೆ ವಿವಿಧ ಅಭಿವೃದ್ಧಿಗಳಲ್ಲಿ ಶ್ರಮಿಸುವ ಯುವ ಸಂಘಗಳನ್ನು ಪ್ರೋತ್ಸಾಹಿಸಲು 1 ಲಕ್ಷ ರೂ ನಗದು ನೀಡಲಾಗುತ್ತದೆ.
ಅರ್ಜಿಯನ್ನು ಈಗಾಗಲೇ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ವಿತರಿಸಲಾಗÀುತ್ತಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಕೆಗೆ ಜುಲೈ 13 ಕಡೆಯ ದಿನವಾಗಿದೆ. ವಿವರಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224932, ಮೊಬೈಲ್ 9482718278 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜು. 1ರಂದು ತಂಬಾಕು ನಿಯಂತ್ರಣ ಕಾಯಿದೆ ಕಾರ್ಯಾಗಾರ
ಚಾಮರಾಜನಗರ, ಜೂ. 30 - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ಬ್ಲೂಮ್ ಬರ್ಗ್ ಇನಿಷಿಯೇಟಿವ್ ಪ್ರಾಜೆಕ್ಟ್ ವತಿಯಿಂದ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜುಲೈ 1ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವವನದ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 2 ರಿಂದ ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ ಪ್ರಕ್ರಿಯೆ ಆರಂಭ  
  ಚಾಮರಾಜನಗರ, ಜು. 01 - ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಜುಲೈ 2ರಿಂದ ಜಿಲ್ಲೆಯಲ್ಲಿ ಆರಂಭವಾಗಲಿದೆ.
ಚಾಮರಾಜನಗರ, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ಕ್ವಿಂಟಾಲ್ 1600 ರೂ. ನಂತೆ ಸುಲಿದ ತೆಂಗಿನ ಕಾಯಿಯನ್ನು ರೈತರು, ಬೆಳೆಗಾರರಿಂದ ಖರೀದಿಸಲಾಗುತ್ತದೆ.
ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಬಯಸುವವರು ಜುಲೈ 2ರಿಂದ 6ರವರೆಗೆ ಎ.ಪಿ.ಎಂ.ಸಿ ಖರೀದಿ ಕೇಂದ್ರದಲ್ಲಿ ಮೊದಲು ನಿಗದಿತ ನಮೂನೆ ಅರ್ಜಿ ಪಡೆದು ನೊಂದಾಯಿಸಿಕೊಳ್ಳಬೇಕು. ಗ್ರಾಮ ಲೆಕ್ಕಾಧಿಕಾರಿ, ತೋಟಗಾರಿಕೆ ಇಲಾಖೆಯ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ನಿಗದಿತ ನಮೂನೆ ಅರ್ಜಿಯಲ್ಲಿ ದೃಢೀಕರಿಸಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಪಹಣಿ ಹಾಗೂ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು. ಆಧಾರ್ ಕಾರ್ಡ್ ಇಲ್ಲದವರು ತಕ್ಷಣವೇ ನಾಡ ಕಚೇರಿಯಲ್ಲಿ ಆಧಾರ್ ನೊಂದಣಿ ಮಾಡಿಸಿ ಅಲ್ಲಿ ನೀಡಲಾಗುವ ಸಂಖ್ಯೆಯನ್ನು ಲಗತ್ತಿಸಬಹುದು. ಆಯಾ ತಾಲೂಕು ವ್ಯಾಪ್ತಿಯ ಎ.ಪಿ.ಎಂ.ಸಿಯಲ್ಲಿ ತೆಂಗಿನಕಾಯಿ ಮಾರಾಟ ಮಾಡಲು ನೊಂದಣಿ ಮಾಡಿಸಿದ ರೈತರು, ಬೆಳೆಗಾರರಿಂದ ಸುಲಿದ ತೆಂಗಿನ ಕಾಯಿಯನ್ನು ಜುಲೈ 4 ರಿಂದ ಖರೀದಿಸಲಾಗುತ್ತದೆ. ಯಳಂದೂರು ತಾಲೂಕಿನ ರೈತರು ಕೊಳ್ಳೇಗಾಲ ಎ.ಪಿ.ಎಂ.ಸಿ ಖರೀದಿ ಕೇಂಧ್ರದಲ್ಲಿ ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ತೆಂಗಿನ ಕಾಯಿ ಮಾರಾಟ ಮಾಡಿದ ಹಣವನ್ನು ರೈತರು, ಬೆಳೆಗಾರರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಬಿ. ರಾಮು ತಿಳಿಸಿದ್ದಾರೆ.  

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ  
  ಚಾಮರಾಜನಗರ, ಜೂ. 30- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜುಲೈ 1, 2 ಹಾಗೂ 3ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ಜುಲೈ 1ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜುಲೈ 2ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರದ ಹೊರ ವಲಯದಲ್ಲಿರುವ ಎಂಜಿನಿಯರಿಂಗ್ ಕಾಲೇಜು ಅವರಣದಲ್ಲಿ ಕೋಟಿ ವೃಕ್ಷ ಕಾರ್ಯಕ್ರಮದಡಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿ ಯೋಜನೆ ಪ್ರವೇಶದ್ವಾರ ಉದ್ಘಾಟಿಸುವರು. ಮಧ್ಯಾಹ್ನ 3 ಗಂಟೆಗೆ ಹೊಂಡರಬಾಳುವಿನಲ್ಲಿ ಹುಲಿ ಯೋಜನೆ ಪ್ರವೇಶದ್ವಾರ ಉದ್ಘಾಟಿಸುವರು.
ಜುಲೈ 3ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಕ್ಷೇತ್ರದಲ್ಲಿ ನಡೆಯುವ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರೆಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಕೋಟಿ ವೃಕ್ಷ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ, ಜು. 02 :- ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕೋಟಿವೃಕ್ಷ ಆಂದೋಲನ ಕಾರ್ಯಕ್ರಮಕ್ಕೆ ಇಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಸಿ  ನೆಡುವ ಮೂಲಕ ವಿದ್ಯುಕ್ತವಾಗಿ ವನ ಮಹೋತ್ಸವ ಹಾಗೂ ಕೋಟಿ ವೃಕ್ಷ ಆಂದೋಲನವನ್ನು ಉದ್ಘಾಟಿಸಿದರು.
ಬಳಿಕ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಉಸ್ತುವಾರಿ ಸಚಿವರು ಜನಸಾಂದ್ರತೆ ಒತ್ತಡದಿಂದ ಅರಣ್ಯ ಪ್ರದೇಶ ವಿಸ್ತಾರ ಕಡಿಮೆಯಾಗುತ್ತಿದೆ. ಪರಿಸರ ಸಂರಕ್ಷಣೆ ಹಾಗೂ ಅರಣ್ಯೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪರ್ಯಾಯವಾಗಿ ಗಿಡಮರಗಳನ್ನು ಬೆಳೆಸಿ ಪೋಷಿಸಲು ಎಲ್ಲ ಜಿಲ್ಲೆಗಳಲ್ಲಿ ಕೋಟಿ ವೃಕ್ಷ ಆಂದೋಲನ ಕಾರ್ಯಕ್ರಮವನ್ನು ನಡೆಸುತ್ತಿದೆ ಎಂದರು.
ಜಿಲ್ಲೆಯಲ್ಲಿ ಇಂದಿನಿಂದ ಅಕ್ಟೋಬರ್ 10ರವರೆಗೆ ಕೋಟಿವೃಕ್ಷ ಆಂದೋಲನ ನಡೆಯಲಿದ್ದು ಈ ಅವಧಿಯಲ್ಲಿ ಒಟ್ಟು 2 ಲಕ್ಷ ಸಸಿಗಳನ್ನು ಅರಣ್ಯ ಇಲಾಖೆ ಸಹಯೋಗದೊಂದಿಗೆ ವಿವಿಧ ಇಲಾಖೆಗಳು, ಇತರರು ಸೇರಿ ನೆಡಲಿದ್ದಾರೆ. ಅರಣ್ಯ ಇಲಾಖೆ ಬಳಿ 6 ಲಕ್ಷ ಹಾಗೂ ಜಲಾನಯನ ಇಲಾಖೆಯಲ್ಲಿ 2 ಲಕ್ಷ ಸಸಿಗಳು ಲಭ್ಯವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿಕೊಂಡಿರುವ ರೈತರಿಗೂ ಸಸಿಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ವೃಕ್ಷ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿದೆ ಎಂದರು.
ಪರಿಸರ ಸಮತೋಲನಕ್ಕೆ ಅರಣ್ಯ ಪ್ರದೇಶ ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಒಟ್ಟು ಭೂ ಭಾಗದಲ್ಲಿ ಶೇಕಡ 33ರಷ್ಟು ಅರಣ್ಯ ಇರಬೇಕಿದೆ. ಆದರೆ ಶೇ. 19ರಷ್ಟು ಮಾತ್ರ ಅರಣ್ಯ ಪ್ರದೇಶವಿದೆ.  ಹೀಗಾಗಿ ಪರಿಸರ, ಹವಾಮಾನದಲ್ಲಿ ಏರಿಳಿತಗಳನ್ನು ಕಾಣುತ್ತಿದ್ದೇವೆ. ಅರಣ್ಯ ವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ಹೊಣೆಗಾರಿಕೆ ವಹಿಸಬೇಕಿದೆ ಎಂದು ಸಚಿವರು ಸಲಹೆ ಮಾಡಿದರು.
ಜಿಲ್ಲೆಯು ಶೇ. 54ರಷ್ಟು ಅರಣ್ಯ ಪ್ರದೇಶ ಹೊಂದಿದೆ. ನಾಲ್ಕು ತಾಲೂಕುಗಳಲ್ಲಿಯೂ ಪೂರ್ವಪಶ್ಚಿಮ ಘಟ್ಟಗಳ ಸುತ್ತುವರೆದಿದೆ. ಆದಾಗ್ಯೂ ಉಳಿದ ಭಾಗಗಳಲ್ಲಿ ಪರಿಸರ ಸಮತೋಲನ ಕೊರತೆ ನೀಗಿಸಲು ನೆಡುತೋಪು ಅರಣ್ಯ ಬೆಳೆಸುವಿಕೆ ಪ್ರಯತ್ನ ಮುಂದುವರೆಯಬೇಕು. ಪ್ರಸ್ತುತ ವೃಕ್ಷ ಆಂದೋಲನ ಕಾರ್ಯಕ್ರಮದಲ್ಲಿ ನೆಡಲಾಗುವ ಸಸಿಗಳನ್ನು ಪೋಷಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಪರಿಸರ ಅಸಮತೋಲನದಿಂದ ಸಾಕಷ್ಟು ಭೀಕರ ಸಮಸ್ಯೆಗಳನ್ನು ಎದುರಿಸುವ ಅನಿವಾರ್ಯತೆ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಬಹುಭಾಗ ಅರಣ್ಯ ಪ್ರದೇಶವಿದೆ. 2 ಹುಲಿ ಯೋಜನೆ ಅಭಯಾರಣ್ಯ ಹೊಂದಿದ ಹೆಗ್ಗಳಿಕೆ ಇದೆ. ಆದರೂ ಇತರೆಡೆ ಸಸಿಗಳನ್ನು ನೆಡುವ ಮುಖಾಂತರ ಅರಣ್ಯೀಕರಣ ಕೆಲಸಕ್ಕೆ ಒತ್ತು ನೀಡಬೇಕಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಹ ಅರಣ್ಯ ಪೋಷಣೆಗೆ ಸಾಕಷ್ಟು ಅವಕಾಶಗಳಿದ್ದು ಸದ್ಭಳಕೆ ಮಾಡಿಕೊಳ್ಳಬೇಕೆಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ಯಾವುದೇ ಸರ್ಕಾರಿ ಯೋಜನೆ ಅನುಷ್ಠಾನಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ವಾಹನಗಳಿಂದ ಆಗುತ್ತಿರುವ ವಾಯುಮಾಲಿನ್ಯ ತಪ್ಪಿಸುವುದೂ ಸಹ ನಾಗರಿಕರ ಹೊಣೆಗಾರಿಕೆಯಾಗಿದೆ. ಒಟ್ಟಾರೆ ಪರಿಸರ ಕಾಪಾಡುವ ಕರ್ತವ್ಯ ಪ್ರತಿಯೊಬ್ಬರಿಗೂ ಇರಲೇಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪೂರ್ವಜರಿಗೆ ಪರಿಸರದ ಮೇಲೆ ಇದ್ದ ಕಾಳಜಿಯಿಂದ ಇಂದೂ ಸಹ ಹುಣಸೆ, ಬೇವು, ಅರಳಿ, ಆಲದಂತಹ ಅನೇಕ ಮರಗಳನ್ನು ಕಾಣಬಹುದಾಗಿದೆ. ಪ್ರಾಣಿಸಂಕುಲಗಳಿಂದಲೂ ಹರಡಿದ ಬೀಜ ಪರಿಣಾಮವಾಗಿ ಸ್ವಾಭಾವಿಕವಾಗಿ ಅನೇಕ ಸಸಿಗಳು ಹೆಮ್ಮರವಾಗಿ ಬೆಳೆದು ನಿಂತಿವೆ. ಪ್ರಸ್ತುತ ಕಾರ್ಯಕ್ರಮದಡಿ ನೆಡಲಾಗುವ ಸಸಿಗಳ ಪೈಕಿ ಶೇ. 80ರಷ್ಟಾದರೂ ಉಳಿಸಿ ಬೆಳೆಸಿದರೆ ಉದ್ದೇಶಿತ ಯೋಜನೆ ಸಾರ್ಥಕವಾಗುತ್ತದೆ ಎಂದರು.
ಶಾಸಕರಾದ ಎಸ್. ಜಯಣ್ಣ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಶಿಕ್ಷಣ ಮತ್ತು ಆರೋಗÀ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿ.ಪಂ. ಸದಸ್ಯರಾದ ಸಿ.ಎನ್. ಬಾಲರಾಜು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗೇಶ, ಜಿಲ್ಲಾಧಿಕಾರಿ ಬಿ. ರಾಮು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ಲಿಂಗರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಸ್ತುವಾರಿ ಸಚಿವರಿಂದ ‘ನಾಲ್ಕನೇ ವರ್ಷದೆಡೆಗೆ ಭರವಸೆಯ ನಡಿಗೆ’ ಕಿರುಹೊತ್ತಿಗೆ ಬಿಡುಗಡೆ
ಚಾಮರಾಜನಗರ, ಜು. 02 :- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ರಾಜ್ಯ ಸರ್ಕಾರದ 3 ವರ್ಷಗಳ ಸಾಧನೆಯನ್ನು ಕುರಿತ ಮಾಹಿತಿಯನ್ನು ಒಳಗೊಂಡ ‘ನಾಲ್ಕನೇ ವರ್ಷದೆಡೆಗೆ ಭರವಸೆಯ ನಡಿಗೆ’ ಕಿರುಹೊತ್ತಿಗೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಬಿಡುಗಡೆ ಮಾಡಿದರು.
ನಗರದ ಹೊರವಲಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಕೋಟಿವೃಕ್ಷ ಆಂದೋಲನ ಸಮಾರಂಭದಲ್ಲಿ ಸಚಿವರು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವರು ರಾಜ್ಯಸರ್ಕಾರ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳು, ಸಾಧನೆಗಳ ವಿವರಗಳು ಕಿರುಹೊತ್ತಿಗೆಯಲ್ಲಿ ಇವೆ. ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಯೋಜನೆಗಳ ಬಗ್ಗೆಯೂ ಮಾಹಿತಿ ಕೊಡಲಾಗಿದೆ ಎಂದರು.
ರಾಜ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 100ಕ್ಕೂ ಹೆಚ್ಚು ಈಡೇರಿಸಿದೆ. ನುಡಿದಂತೆ ನಡೆಯುತ್ತಿದ್ದೇವೆ. ಪ್ರಗತಿಪರ ಕಾರ್ಯಕ್ರಮಗಳು ಮುಂದುವರೆದಿವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ : ಸಚಿವ ಎಚ್.ಎಸ್. ಮಹದೇವಪ್ರಸಾದ್
  ಚಾಮರಾಜನಗರ, ಜು. 02- ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಇಂದಿನಿಂದ ಚಾಮರಾಜನಗರ ಜಿಲ್ಲೆಯೂ ಸೇರಿದಂತೆ ಒಟ್ಟು 6 ಜಿಲ್ಲೆಗಳಲ್ಲಿ ಆರಂಭವಾಗಿದೆ ಎಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರ ಉದ್ಘಾಟಿಸಿದ ಬಳಿಕ ಕೆ. ಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸುಲಿದ ತೆಂಗಿನ ಕಾಯಿಯನ್ನು ಚಾಮರಾಜನಗರ, ತುಮಕೂರು, ಉಡುಪಿ, ಹಾಸನ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಖರೀದಿಸಲಾಗುತ್ತಿದೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ತೆಂಗಿನಕಾಯಿ ಬೆಲೆ ಕುಸಿದಿರುವುದನ್ನು ಮನಗಂಡು ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ತದನಂತರ ಇತರ ಜಿಲ್ಲೆಗಳಲ್ಲೂ ಬೆಲೆ ಕುಸಿದಿದ್ದು ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಖರೀದಿಸಬೇಕೆಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಇತರೆ 5 ಜಿಲ್ಲೆಗಳನ್ನು ಸೇರ್ಪಡೆ ಮಾಡಿಕೊಂಡು ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವ ಮಹದೇವ ಪ್ರಸಾದ್ ತಿಳಿಸಿದರು.
ಆಯಾ ಜಿಲ್ಲೆಯ  ಎ.ಪಿ.ಎಂ.ಸಿ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಕ್ವಿಂಟಾಲ್‍ಗೆ 1600 ರೂ. ರಂತೆ ರೈತರು, ಬೆಳೆಗಾರರಿಂದ ತೆಂಗಿನ ಕಾಯಿಯನ್ನು ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುತ್ತದೆ. ರೈತರು, ಬೆಳೆಗಾರರು ಆರ್‍ಟಿಸಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ದೃಢೀಕರಿಸಿದ ಅರ್ಜಿ, ಇತರೆ ದಾಖಲೆಗಳನ್ನು ನೀಡಬೇಕು. ಮಾರಾಟ ಮಾಡಿದ ಹಣವನ್ನು ಆರ್‍ಟಿಜಿಎಸ್ ಮೂಲಕ ರೈತರು ಬೆಳೆಗಾರರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಯಾಗಿದ್ದು ಈಗಾಗಲೇ ಪ್ರತಿ ಜಿಲ್ಲೆಗೆ ತಲಾ ಒಂದು ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
 ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ ಪ್ರಕ್ರಿಯೆ ಆರಂಭ : ಸದುಪಯೋಗಕ್ಕೆ ಮನವಿ
  ಚಾಮರಾಜನಗರ, ಜು. 02 - ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಇಂದಿನಿಂದ ಜಿಲ್ಲೆಯಲ್ಲಿ ಆರಂಭವಾಗಿದೆ.
ಚಾಮರಾಜನಗರ, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ಕ್ವಿಂಟಾಲ್ 1600 ರೂ. ನಂತೆ ಸುಲಿದ ತೆಂಗಿನ ಕಾಯಿಯನ್ನು ರೈತರು, ಬೆಳೆಗಾರರಿಂದ ಖರೀದಿಸಲಾಗುತ್ತದೆ.
ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಬಯಸುವವರು ಜುಲೈ 2ರಿಂದ 6ರವರೆಗೆ ಎ.ಪಿ.ಎಂ.ಸಿ ಖರೀದಿ ಕೇಂದ್ರದಲ್ಲಿ ಮೊದಲು ನಿಗದಿತ ನಮೂನೆ ಅರ್ಜಿ ಪಡೆದು ನೊಂದಾಯಿಸಿಕೊಳ್ಳಬೇಕು. ಗ್ರಾಮ ಲೆಕ್ಕಾಧಿಕಾರಿ, ತೋಟಗಾರಿಕೆ ಇಲಾಖೆಯ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ನಿಗದಿತ ನಮೂನೆ ಅರ್ಜಿಯಲ್ಲಿ ದೃಢೀಕರಿಸಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಪಹಣಿ ಹಾಗೂ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು. ಆಧಾರ್ ಕಾರ್ಡ್ ಇಲ್ಲದವರು ತಕ್ಷಣವೇ ನಾಡ ಕಚೇರಿಯಲ್ಲಿ ಆಧಾರ್ ನೊಂದಣಿ ಮಾಡಿಸಿ ಅಲ್ಲಿ ನೀಡಲಾಗುವ ಸಂಖ್ಯೆಯನ್ನು ಲಗತ್ತಿಸಬಹುದು. ಆಯಾ ತಾಲೂಕು ವ್ಯಾಪ್ತಿಯ ಎ.ಪಿ.ಎಂ.ಸಿಯಲ್ಲಿ ತೆಂಗಿನಕಾಯಿ ಮಾರಾಟ ಮಾಡಲು ನೊಂದಣಿ ಮಾಡಿಸಿದ ರೈತರು, ಬೆಳೆಗಾರರಿಂದ ಸುಲಿದ ತೆಂಗಿನ ಕಾಯಿಯನ್ನು ಜುಲೈ 4 ರಿಂದ ಖರೀದಿಸಲಾಗುತ್ತದೆ. ಯಳಂದೂರು ತಾಲೂಕಿನ ರೈತರು ಕೊಳ್ಳೇಗಾಲ ಎ.ಪಿ.ಎಂ.ಸಿ ಖರೀದಿ ಕೇಂಧ್ರದಲ್ಲಿ ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ತೆಂಗಿನ ಕಾಯಿ ಮಾರಾಟ ಮಾಡಿದ ಹಣವನ್ನು ರೈತರು, ಬೆಳೆಗಾರರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಬಿ. ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
ವಿವಿಧ ಅಭಿವೃದ್ಧಿ ಕಾಮಗಾರಿ, ಉದ್ಘಾಟನೆ, ಚಾಲನೆ
 ಚಾಮರಾಜನಗರ, ಜು. 02 :- ಜಿಲ್ಲೆಯಲ್ಲಿ ಇಂದು ವಿವಿದೆಡೆ ಅಭಿವೃದ್ಧಿ ಕಾಮಗಾರಿ ಕಟ್ಟಡ, ರಸ್ತೆ, ಇತರೆ ಕೆಲಸಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಚಾಲನೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಜಿಲ್ಲಾ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಚಂದಕವಾಡಿಯಲ್ಲಿ 1314.80 ಲಕ್ಷ ರೂ. ವೆಚ್ಚದಲ್ಲಿ ರಾಮಸಮುದ್ರದಿಂದ ಅಮೃತಭೂಮಿವರೆಗೆ ಸುಮಾರು 13.90 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರವನ್ನು ಮೊದಲಿಗೆ ಹೊಂಡರಬಾಳುವಿನಲ್ಲಿ ಉದ್ಘಾಟಿಸಿದರು. ತದನಂತರ ಗುಂಬಳ್ಳಿ ಬಳಿ ಕೂಡ ಪ್ರವೇಶದ್ವಾರವನ್ನು ಉದ್ಘಾಟಿಸಿದರು. ನಂತರ ಸಂತೆಮರಹಳ್ಳಿಯಲ್ಲಿ ಆರ್ಚರಿ ಕ್ರೀಡಾ ಶಾಲೆ ಹಾಗೂ ವಸತಿ ನಿಲಯ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದರು.
 ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಇತರೆ ಸ್ಥಳೀಯ ಸದಸ್ಯರು, ಮುಖಂಡರು, ಜನಪ್ರತಿನಿಧಿಗಳು ಹಾಜರಿದ್ದರು.

ಶಿಕ್ಷಣ ಸುಧಾರಣೆ ಕುರಿತ ಸ್ಮಾರ್ಟ್ ಯೋಜನೆಗೆ ಚಾಲನೆ  
  ಚಾಮರಾಜನಗರ, ಜು. 02 (- ಜಿಲ್ಲೆಯ ಶಿಕ್ಷಣದ ಸಮಗ್ರ ಸುಧಾರಣೆಗಾಗಿ ಸ್ಮಾರ್ಟ್ ಯೋಜನೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಯುನಿಸೆಫ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ಮಾರ್ಟ್ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಶಿಕ್ಷಣ ಕ್ಷೇತ್ರದ ವಿನೂತನ ಕಾರ್ಯಕ್ರಮ ಇದಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ನಮ್ಮ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಈ ಸ್ಮಾರ್ಟ್ ಯೋಜನೆ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿದೆ ಎಂದರು.
ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ 11 ರಿಂದ 27 ಸ್ಥಾನಕ್ಕೆ ಕುಸಿರುವುದು ಅತಂಕಕಾರಿ ಸಂಗತಿ. ಇದನ್ನು ಗಮನದಲ್ಲಿಟ್ಟು ಮುಂಬರುವ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಹೊಸ ಯೋಜನೆಗಳ ಚಿಂತನೆ ಅಗತ್ಯವಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ, ಮಾರ್ಗದರ್ಶನ ಹಾಗೂ ಸ್ಪಂದನಾತ್ಮಕ ಬೋಧನೆಯ ಧ್ಯೇಯದೊಂದಿಗೆ ಆರಂಭಗೊಂಡಿರುವ ಈ ಸ್ಮಾರ್ಟ್ ಯೋಜನೆ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಮಕ್ಕಳ ವಿದ್ಯಾಭ್ಯಾಸ ಗುಣಮಟ್ಟದಿಂದ ಕೂಡಿರಬೇಕು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಪ್ರಜ್ಞೆ ಮೂಡಬೇಕು. ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ತರಬೆಕೆಂಬುದೇ ಈ ಯೋಜನೆಯ ಉದ್ದೇಶ. ಪ್ರಮುಖವಾಗಿ ಮಕ್ಕಳಿಗೆ  ಶಿಕ್ಷಕರು ಶಿಸ್ತನ್ನು ಕಲಿಸಬೇಕು. ಶೈಕ್ಷಣಿಕ ಚಟುವಟಿಕೆಗಳ ಅರಿವು ಮೂಡಿಸುವುದು ಶಿಕ್ಷಕರ ಕರ್ತವ್ಯ. ಶಿಕ್ಷಕರಿಗೆ ಶಿಕ್ಷಣದ ಮೌಲ್ಯಾಧಾರಿತ ತರಬೇತಿ ನೀಡಬೇಕು. ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ, ಪ್ರವೃತ್ತಿಯನ್ನು ಪ್ರತಿ ತಿಂಗಳು ಪರಿಶೀಲಿಸಿದರೆ ಶೈಕ್ಷಣಿಕ ಚಟುವಟಿಕೆಗಳ ಗುಣಮಟ್ಟ ಹೆಚ್ಚಲು ಅನುವಾಗುತ್ತದೆ ಎಂದು ಸಚಿವರು ಕಿವಿಮಾತು ಹೇಳಿದರು.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಸಾಕಷ್ಟು ಅನುದಾನ ಒದಗಿಸಿದೆ. ಜಿಲ್ಲೆಗೆ ಮೊರಾರ್ಜಿ,  ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಆದರ್ಶ ವಸತಿ ಶಾಲೆಗಳನ್ನು ಮಂಜೂರು ಮಾಡುವ ಮೂಲಕ ಅಭಿವೃದ್ದಿಗೆ ಮುಂದಾಗಿದೆ. ಎಲ್ಲಾ ಶಾಲೆ, ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ನೀಡಿದೆ. ಇದನ್ನು ಜಿಲ್ಲೆಯ ವಿದ್ಯಾರ್ಥಿಗಳು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಸ್ಮಾರ್ಟ್ ಯೋಜನೆ ಶಿಕ್ಷಣ ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ. ಸಂಬಂಧಪಟ್ಟ ಇಲಾಖೆಗಳು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿ ಯೋಜನೆಯ ಸಮರ್ಪಕ ಕಾರ್ಯನಿರ್ವಹಣೆಗೆ ಸಹಕಾರಿಯಾಗಬೇಕು. ಮುಖ್ಯವಾಗಿ ಸ್ಮಾರ್ಟ್ ಯೋಜನೆ ನಿರ್ವಹಣೆಗಾಗಿ ಯುನಿಸೆಫ್‍ನಿಂದ 25 ಲಕ್ಷ, ಐ.ಎಲ್.ಎಫ್.ಎಸ್ ಕಂಪನಿಯಿಂದ 25 ಲಕ್ಷ  ಸೇರಿದಂತೆ ಒಟ್ಟು 1.50 ಕೋಟಿ ಅನುದಾನ ದೊರೆತಿದೆ. ಜಿಲ್ಲೆಯಲ್ಲಿ ಮೊದಲಬಾರಿ ಅನುಷ್ಟಾನಗೊಂಡ ಜಿ.ಪಿ. ಒನ್ ಸೇವೆ ಇಂದು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಸ್ಮಾರ್ಟ್ ಯೋಜನೆಗೂ ಅಂತಹ ಯಶಸ್ಸು ಸಿಗಬೇಕು ಎಂದು ಸಚಿವರು ತಿಳಿಸಿದರು.
ಸಂಸದ ಆರ್. ಧ್ರುವನಾರಾಯಣ ಅವರು ಮಾತನಾಡಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ.  ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಈ ಸ್ಮಾರ್ಟ್ ಯೋಜನೆ ನೆರವಾಗಲಿದೆ. ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಮಂಜೂರಾಗಿದ್ದು, ಶಿಕ್ಷಣದಲ್ಲಿ ಸುಧಾರಣೆ ತರಲು ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯವಾಗಿ ಶಿಕ್ಷಕರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ತರಬೇತಿ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ ಶಿಕ್ಷಣ ಕ್ಷೇತ್ರದ ಪ್ರಮುಖ ಯೋಜನೆಯಾ ಸ್ಮಾರ್ಟ್ ಯೋಜನೆಯು ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭದಲ್ಲಿಯೆ ಚಾಲನೆಗೊಂಡಿರುವುದು ವಿಶೇಷವಾದದ್ದು. ಮುಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ. ಯೋಜನೆ ಜಾರಿಗೊಳ್ಳುವಲ್ಲಿ ಎಲ್ಲ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು ಹೆಚ್ಚು ಶ್ರಮಿಸಬೇಕಾಗಿದೆ ಎಂದರು
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮಾತನಾಡಿ ಸ್ಮಾರ್ಟ್ ಯೋಜನೆಯ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಳ್ಳೇಗಾಲ ಶಾಸಕರಾದ ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಮಾತನಾಡಿದರು.
ಸ್ಮಾರ್ಟ್ ಯೋಜನೆಯ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾಪಾಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ನಗರಸಭಾ ಅದ್ಯಕ್ಷರಾದ ರೇಣುಕಾಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಬೊಮ್ಮಯ್ಯ ವೇದಿಕೆಯಲ್ಲಿದ್ದರು.        

     ಹವಾಮಾನ ಆಧಾರಿತ ಬೆಳೆ ವಿಮೆ ನೊಂದಣಿ ಅವಧಿ ಜುಲೈ 10ರವರೆಗೆ ವಿಸ್ತರಣೆ  
 ಚಾಮರಾಜನಗರ, ಜು. :- ತೋಟಗಾರಿಕೆ ಬೆಳೆಯಾದ ಅಂಗಾಂಶ ಕೃಷಿ ಬಾಳೆ, ಕಂದುಬಾಳೆ ಹಾಗೂ ತೆಂಗುಬೆಳೆಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಲಭ್ಯವಿದ್ದು, ಈ ಯೋಜನೆಗೆ ನೊಂದಾಯಿಸುವ ಅವಧಿಯನ್ನು ಜುಲೈ 10ರ ವರೆಗೆ ವಿಸ್ತರಿಸಲಾಗಿದೆ.
ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವೆಂದು ನಿಗದಿ ಮಾಡಲಾಗಿತ್ತು. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಈ ವಿಮೆ ಯೋಜನೆಗೆ ರೈತರು ನೊಂದಾಯಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜುಲೈ 10ರ ವರೆಗೂ ಕಾಲಾವಕಾಶ ವಿಸ್ತರಿಸಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲು ವಿಮಾ ಯೋಜನೆ ಸಹ ಇದ್ದು, ಜಿಲ್ಲೆಯ ಯಳಂದೂರು ತಾಲೂಕು ಹೊರತು ಪಡಿಸಿ ಉಳಿದ ಎಲ್ಲ ತಾಲೂಕುಗಳಲ್ಲಿ ಹೋಬಳಿವಾರು ಟೊಮೆಟೋ(ನೀರಾವರಿ), ಅರಿಶಿಣ, ಬದನೆ, ಆಲೂಗಡ್ಡೆ(ನೀರಾವರಿ), ಬೀನ್ಸ್, ಈರುಳ್ಳಿ(ನೀರಾವರಿ), ವಿಮೆ ವ್ಯಾಪ್ತಿಗೆ ಬರಲಿವೆ. ಈ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವಾಗಿದೆ.
ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಹತ್ತಿರದ ಬ್ಯಾಂಕ್ ಶಾಖೆ ಸಂಪರ್ಕಿಸಬೇಕು. ವಿವರಗಳಿಗೆ ಹೋಬಳಿ, ತಾಲೂಕು ಮಟ್ಟದ ತೋಟಗಾರಿಕೆ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕತಿಳಿಸಿದ್ದಾರೆ.  

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*

  ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*    ಚಾಮರಾಜನಗರ, ಸೆಪ್ಟೆಂಬರ್ 28 :- ಈ ಬಾರಿಯ ರಾಷ್ಟ್ರೀಯ ಲೋ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು