Tuesday, 7 March 2017

06-03-3017ಚಾಮರಾಜನಗರ ಸುದ್ದಿಗಳು( ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಸಂಸದರಿಂದ ಚಾಲನೆ)

ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಸಂಸದರಿಂದ ಚಾಲನೆ ಚಾಮರಾಜನಗರ, ಮಾ. 06 - ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಇಂದು ಚಾಲನೆ ನೀಡಿದರು. ಒಟ್ಟು 189.48 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಧ್ರುವನಾರಾಯಣ ಅವರು ರಾಜ್ಯ ಸರ್ಕಾರ ಎಸ್‍ಇಪಿ, ಟಿಎಸ್‍ಪಿ ಯೋಜನೆಗೆ ಅತಿ ಹೆಚ್ಚು ಹಣವನ್ನು ಮೀಸಲಿಟ್ಟಿದೆ. ಹೀಗಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚು ಹಣವನ್ನು ವಿನಿಯೋಗಿಸಲಾಗುತ್ತಿದೆ ಎಂದರು. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳಿಗೆ ನೀಡುತ್ತಿರುವ ವಿಶೇಷ ಹೆಚ್ಚುವರಿ ಅನುದಾನ ಪರಿಣಾಮ ಡಾ. ಬಿ.ಆರ್. ಅಂಬೇಡ್ಕರ್ ಭವನ ಸೇರಿದಂತೆ ಇನ್ನಿತರ ಭವನಗಳಿಗೂ ಹೆಚ್ಚಿನ ನೆರವು ದೊರೆಯುತ್ತಿದೆ. ತಾಲೂಕು ಹೋಬಳಿ ಕೇಂದ್ರಗಳಲ್ಲೂ ಭವನ ನಿರ್ಮಾಣ ಮಾಡಲು ಸಾಕಷ್ಟು ಹಣ ಮಂಜೂರು ಮಾಡಲಾಗುತ್ತಿದೆ ಎಂದು ಧ್ರುವನಾರಾಯಣ ತಿಳಿಸಿದರು. ಪ್ರಸ್ತುತ ಜಿಲ್ಲಾ ಕೇಂದ್ರದ ಜಿಲ್ಲಾಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಯಡಿ ಹಲವು ಕೆಲಸಗಳನ್ನು ಪೂರ್ಣಗೊಳಿಸಿ ಸುಸಜ್ಜಿತಗೊಳಿಸಲಾಗುತ್ತಿದೆ. ಭವನ ಸರ್ವ ರೀತಿಯಲ್ಲಿ ಸಿದ್ಧಗೊಂಡರೆ ಸರ್ಕಾರಿ ಹಾಗೂ ಖಾಸಗಿ ಕಾರ್ಯಕ್ರಮಗಳಿಗೂ ಅನುಕೂಲವಾಗಲಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ಭವನದ ಬಾಡಿಗೆಯಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದರು. ಭವನದ ಕಾಮಗಾರಿ ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು. ನಿಗಧಿತ ವೇಳೆಗೆ ಕೆಲಸ ಪೂರ್ಣವಾಗಬೇಕು. ಸುಣ್ಣಬಣ್ಣ ಬಳಿಯುವ ಕೆಲಸವೂ ಅಚ್ಚುಕಟ್ಟಾಗಿ ಇರಬೇಕು. ಊಟದ ಹಾಲ್, ಸಭಾಂಗಣ, ಭವನದ ಮುಂದಿನ ಆವರಣ ಸೇರಿದಂತೆ ಎಲ್ಲವೂ ಪರಿಪೂರ್ಣವಾಗಿ ಇರಬೇಕು ಎಂದು ಧ್ರುವನಾರಾಯಣ ಸೂಚಿಸಿದರು. ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆದ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ಸರ್ಕಾರದ ಅನುದಾನದ ನೆರವಿನಿಂದ ಎಲ್ಲೆಡೆ ಭವನಗಳ ನಿರ್ಮಾಣಕ್ಕೆ ಅನುಕೂಲವಾಗಿದೆ. ಭವನಗಳು ಸದ್ಬಳಕೆಯಾಗಬೇಕು ಎಂದರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ರೇಣುಕ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲುಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಮಾಜಿ ನಗರಸಭಾ ಅಧ್ಯಕ್ಷರಾದ ನಂಜುಂಡಸ್ವಾಮಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಚ್. ಸತೀಶ್, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಮಾ. 8ರಂದು ನಗರದಲ್ಲಿ ಜನಮನ ಕಾರ್ಯಕ್ರಮ ಚಾಮರಾಜನಗರ, ಮಾ. 06 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾ ಆಶ್ರಯದಲ್ಲಿ ಮಾರ್ಚ್ 8ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಮನ - ಫಲÁನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಎಸ್. ಜಯಣ್ಣ, ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾವೇರಿ ಜಲಾನಯನ ಯೋಜನೆಗಳ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ. ಮಾ. 7ರಂದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ ಕುರಿತು ವಿಚಾರ ಸಂಕಿರಣ, ಕಾರ್ಯಾಗಾರ ಚಾಮರಾಜನಗರ, ಮಾ. 06 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ್ರಜಾಪರಿವರ್ತನಾ ವೇದಿಕೆ ಸಹಕಾರದೊಂದಿಗೆ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ಹಾಗೂ 1995ರ ಕುರಿತಾದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವನ್ನು ಮಾರ್ಚ್ 7ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಬಿ. ರಾಮು ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಪ್ರಸ್ತಾವಿತ ನಳಂದ ಬೌದ್ಧ ವಿ.ವಿ.ಯ ಪೂಜ್ಯ ಬಂತೆ ಬೋಧಿದತ್ತ ಅವರು ದಿವ್ಯ ಸಾನಿಧ್ಯ ವಹಿಸುವರು. ಮೈಸೂರಿನ ಉರಿಲಿಂಗಪೆದ್ದಿಮಠದ ಪೀಠಾಧ್ಯಕ್ಷರಾದ ಜ್ಞಾನಪ್ರಕಾಶ ಸ್ವಾಮೀಜಿ, ಹೈಕೋರ್ಟ್ ವಕೀಲರಾದ ಎಚ್. ಮೋಹನ್ ಕುಮಾರ್, ಕವಿ ಚಿಂತಕರು, ಮೈಸೂರು ವಿವಿ ಡಾ.ಬಿ.ಆರ್. ಅಂಬೇಡ್ಕರ್ ಪೀಠದ ಸಂದರ್ಶಕ ಪ್ರಾಧ್ಯಾಪಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಹಿರಿಯ ವಕೀಲರಾದ ಪುಟ್ಟರಾಜು ಅವರು ವಿಚಾರ ಮಂಡಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ತಹಸೀಲ್ದಾರ್ ಕೆ. ಪುರಂಧರ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಪ್ರೇಮಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಇದೇವೇಳೆ ಭೀಮಗೀತೆ ಗಾಯನ ಕಾರ್ಯಕ್ರಮ ಸಹ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಉಮ್ಮತ್ತೂರಿನಲ್ಲಿ ಜಿಲ್ಲೆಯ 5ನೇ ಗೋಶಾಲೆಗೆ ಲೋಕಸಭಾ ಸದಸ್ಯರಿಂದ ಚಾಲನೆ ಚಾಮರಾಜನಗರ, ಮಾ. 04- ಬರಗಾಲದ ಹಿನ್ನೆಲೆಯಲ್ಲಿ ಜಾನುವಾರುಗಳ ಮೇವು ಅಭಾವ ನೀಗಿಸುವ ಸಲುವಾಗಿ ಜಿಲ್ಲೆಯಲ್ಲಿ ತೆರೆಯಲÁಗಿರುವ 5ನೇ ಗೋಶಾಲೆಗೆ ಇಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಚಾಲನೆ ನೀಡಿದರು. ಚಾಮರಾಜನಗರ ತಾಲೂಕಿನ ಉಮ್ಮತ್ತೂರಿನಲ್ಲಿ ಜಿಲ್ಲೆಯ 5ನೇ ಗೋಶಾಲೆಯನ್ನು ಗೋವುಗಳಿಗೆ ಮೇವು ನೀಡುವ ಮೂಲಕ ಧ್ರುವನಾರಾಯಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದ್ದೇವೆ. ಸಂಕಷ್ಟ ಜನರ ನೆರವಿಗೆ ಬರುವ ಉದ್ದೇಶದಿಂದ ಸರ್ಕಾರ ಬರಪರಿಹಾರ ಕಾಮಗಾರಿ ಕೈಗೊಂಡಿದೆ. ಜಾನುವಾರುಗಳಿಗೆ ಮೇವು ಒದಗಿಸುವ ಉದ್ದೇಶದಿಂದ ಹೋಬಳಿಗೆ ಒಂದರಂತೆ ಗೋಶಾಲೆ ತೆರೆಯಲಾಗುತ್ತಿದೆ ಎಂದರು. ಈಗಾಗಲೇ ಮಂಗಲ, ರಾಮಾಪುರ, ಹುತ್ತೂರು, ಬಂಡಳ್ಳಿಯಲ್ಲಿ ಗೋಶಾಲೆ ಆರಂಭಿಸಲಾಗಿದೆ. ಅಲ್ಲದೆ ಹಲವು ಭಾಗಗಳಲ್ಲಿ ಮೇವು ನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು ಮೇವು ವಿತರಣೆ ನಿರತವಾಗಿವೆ. ಬರಗಾಲ ಸಂದರ್ಭದಲ್ಲಿ ಕೈಗೊಳ್ಳುತ್ತಿರುವ ಪರಿಹಾರ ಕಾಮಗಾರಿ ವಿಷಯದಲ್ಲಿ ಜನರೂ ಸಹ ಸಹಕರಿಸಬೇಕಾದ ಅಗತ್ಯವಿದೆದ ಎಂದು ಧ್ರುವನಾರಾಯಣ ತಿಳಿಸಿದರು. ಗೋಶಾಲೆಯನ್ನು ಆರಂಭಿಸಿದರಷ್ಟೇ ಸಾಲದು, ಅದನ್ನು ಅಧಿಕಾರಿಗಳು ನಿರಂತರವಾಗಿ ಮೇವು, ಕುಡಿಯುವ ನೀರು ವ್ಯವಸ್ಥೆಯನ್ನು ನಿರಂತರವಾಗಿ ಕಲ್ಪಿಸಿ ನಿರ್ವಹಿಸುವ ಹೊಣೆಗಾರಿಕೆ ತೆಗೆದುಕೊಳ್ಳಬೇಕು. ಯಾವುದೇ ದೂರುಗಳಿಗೆ ಅವಕಾಶ ಬಾರದಂತೆ ಗೋಶಾಲೆಯನ್ನು ನಡೆಸುವ ಮೂಲಕ ರೈತರು ಜಾನುವಾರುಗಳ ಪೋಷಕರಿಗೆ ನೆರವಾಗಬೇಕು ಎಂದು ಸೂಚಿಸಿದರು. ಉಮ್ಮತ್ತೂರು ಸೇರಿದಂತೆ ಒಟ್ಟು 24 ಕೆರೆಗಳಿಗೆ 236 ಕೋಟಿ ರೂ. ವೆಚ್ಚದಲ್ಲಿ ನೀರು ತುಂಬಿಸುವ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಬಿಡ್ ಪೂರ್ಣಗೊಂಡಿದ್ದು ಫೈನಾನ್ಸಿಯಲ್ ಬಿಡ್ ಮಾತ್ರ ಬಾಕಿ ಉಳಿದಿದೆ. ಇನ್ನೊಂದು ತಿಂಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಆರಂಭಕ್ಕೆ ಮುಖ್ಯಮಂತ್ರಿಯವರಿಂದಲೇ ಚಾಲನೆ ಕೊಡಿಸಲಾಗುತ್ತದೆ. ಒಂದು ವರ್ಷ 6 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದ ಅಂತರ್ಜಲ ಹೆಚ್ಚಳವಾಗಿ ಅನುಕೂಲವಾಗಲಿದೆ ಎಂದು ಧ್ರುವನಾರಾಯಣ ತಿಳಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ಬರಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮೇವು ಲಭ್ಯತೆ ಇಲ್ಲವಾದ್ದರಿಂದರೆ ಬಳ್ಳಾರಿಯಿಂದ ಮೇವು ಖರೀದಿಸಿ ವಿತರಿಸುವ ಕೆಲಸ ನಡೆದಿದೆ. ನೀರು, ನೆರಳು, ಮೇವು ಲಭ್ಯತೆ ಅನುಸಾರ ಗೋಶಾಲೆ ತೆರೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಮಾತನಾಡಿ ಈ ಭಾಗದಲ್ಲಿ ಗೋಶಾಲೆ ತೆರೆಯಬೇಕೆಂಬ ಬೇಡಿಕೆ ಜನರಿಂದ ಕೇಳಿಬಂದಿತ್ತು. ಸ್ಥಳೀಯರಾದ ಪುಟ್ಟಣ್ಣ ಅವರು ಗೋಶಾಲೆಗೆ ಜಾಗ ಕಲ್ಪಿಸಿಕೊಟ್ಟಿದ್ದಾರೆ. ಶಿವಣ್ಣ ಮತ್ತೊಬ್ಬರು ನೀರು ವ್ಯವಸ್ಥೆ ಮಾಡಲು ಮುಂದೆ ಬಂದಿದ್ದಾರೆ. ಹೀಗಾಗಿ ತಾಲೂಕು ಆಡಳಿತದೊಂದಿಗೆ ಸಹಕರಿಸಿರುವ ಹಿನ್ನೆಲೆಯಲ್ಲಿ ಗೋಶಾಲೆ ತೆರೆಯಲು ಅನುಕೂಲವಾಗಿದೆ ಎಂದು ಶ್ಲಾಘಿಸಿದರು. ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಚಾಮರಾಜನಗರ ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ನಿರ್ದೇಶಕರಾದ ಶಂಕರ ಮೂರ್ತಿ, ತಾ.ಪಂ. ಅಧ್ಯಕ್ಷರಾದ ಸುಧಾಮಲ್ಲಣ್ಣ, ಗ್ರಾ.ಪಂ. ಅಧ್ಯಕ್ಷರಾದ ಗೀತಾ, ಗೋಶಾಲೆ ತೆರೆಯಲು ನೆರವಾಗಿರುವ ಶಿವಣ್ಣ, ಪುಟ್ಟಣ್ಣ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Sunday, 5 March 2017

ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ ಈ ಬಾರೀ ಆಗುವುದೇ.? ಆತಂಕದಲ್ಲಿ ಪೋಷಕ, ವಿದ್ಯಾರ್ಥಿಗಳು, ಭಯಪಡದಿರಿ ನಿಶ್ಚಿಂತೆಯಾಗಿ ಪರೀಕ್ಷೆ ಎದುರಿಸಿ............................

ಸರ್ಕಾರಕ್ಕೆ ಸವಾಲಾಗಲಿದಿಯೇ, ಕಂಠಕಪ್ರಾಯವಾಗಲಿದಿಯೇ ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ.! ಬೆರಳಣಿಕೆ ಆರೋಪಿಗಳು ಮಾತ್ರ ನ್ಯಾಯಾಂಗ ಬಂದನ, ನಿರ್ದೆಶಕರ ತಲೆದಂದಕ್ಕೆ ನಡೆದಿದಿಯೇ ಕುತಂತ್ರ.? ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ಕಳೆದ ವರ್ಷ ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ ಮೇಲೆ ಸೋರಿಕೆಯಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಹೈರಾಣಾಗಿದ್ದು ವಿದ್ಯಾಬ್ಯಾಸವೇ ಬೇಡ ಎಂದು ಆತ್ಮಹತ್ಯೆ ಮಾಡಿಕೊಂಡವರೆಷ್ಟೋ ಆದರೂ ಕೊನೆಗೂ ಸರ್ಕಾರ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿಸುವಲ್ಲಿ ನಿಯೋಜಿಸಿದ ತಂಡ ಯಶಸ್ವಿಯಾಯಿತು. ಕಳೆದ ಸಾಲಿನಲ್ಲಿ ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆಯಿಂದ ರೊಚ್ಚಿಗೆದ್ದ ಪೋಷಕರು ವಿದ್ಯಾರ್ಥಿಗಳು ಪಿ.ಯು ಮಂಡಳಿ ಘೇರಾವ್ ಹಾಕಿ ಪ್ರತಿಭಟಿಸಿ ಪರೀಕ್ಷೆಯನ್ನೆ ಬರೆಯುವುದಿಲ್ಲ, ಕೃಪಾಂಕ ನೀಡಿ ಉತ್ತೀರ್ಣ ಮಾಡಿ ಎಂದೂ, ಪಿ.ಯು ಆಡಳಿತ ಮಂಡಳಿ ನಿರ್ದೇಶಕರ ರಾಜೀನಾಮೆ ನೀಡಿ ಸಂಪೂರ್ಣ ಜವಬ್ದಾರಿ ಹೊರತಕ್ಕದು ಎಂದು ಎಚ್ಚರಿಕೆ ನೀಡಿ ಪ್ರತಿಭಟಿಸಿದ್ದರು. ಕೊನೆಗೂ ಎಚ್ಚೆತ್ತ ಸರ್ಕಾರ ಮಾಡದ ತಪ್ಪಿಗೆ ಪಿ.ಯು ಆಡಳಿತ ಮಂಡಳಿಯ ಕೆಲವರನ್ನು ವರ್ಗಾವಣೆ ಮಾಡಿ ಶಿಕ್ಷೆ ವಿಧಿಸಿದರೆ ಇನ್ನ ಕೆಲವರು ರಾಜಕೀಯ ಪ್ರಮಖ ಲಾಭಿ ಬಳಸಿ ತನ್ನದೇ ಆದ ಲಾಭಿಯಲ್ಲಿ ಕೆಲವರನ್ನ ರಕ್ಷಿಸಿತ್ತು ಎನ್ನಲಾಗಿದೆ. ಸರ್ಕಾರ ಪ್ರಮುಖವಾಗಿ ನಾಲ್ಕು ತಂಡಗಳನ್ನು ರಚಿಸಿತ್ತು. ಅದರಂತೆಯೇ ಆರೋಪಿಗಳ ಪತ್ತೆಗಾಗಿ ತುಮಕೂರು, ಹಾನಗಲ್,ಮಂಗಳೂರು, ದಾರವಾಡ, ವಿವಿದೆಡೆ ಶೋಧ ಕಾರ್ಯನಡೆಸಿದ್ದರು. ಮಾಹಿತಿ ಲಭ್ಯವಾದ ಪ್ರಕಾರ ಒಂದು ತಂಡದಲ್ಲಿ ಇಬ್ಬರು ಡಿವೈಸ್ಪಿಗಳು, ಇಬ್ಬರು ಇನ್ಸ್‍ಪೆಕ್ಟರ್, ಮೂವರು ಸಿಬ್ಬಂದಿಗಳು ಒಟ್ಟು ಏಳು ಸದಸ್ಯರ ತಂಡದಲ್ಲಿ ಕಾಂiÀರ್iನಿರ್ವಹಿಸಿದ್ದರು ಎಂದು ತಿಳಿದುಬಂದಿದೆ. ಪ್ರಮುಖ ತಂಡಗಳಲ್ಲಿ ಅಂದಿನ ಅಧಿಕಾರಿಗಳಾದ ರೋಷನ್ ಜಮೀರ್, ಮಹದೇವಪ್ಪ, ಪ್ರಭುಶಂಕರ್, ರವೀಂದ್ರ, ರಾಜೇಂದ್ರ, ರವಿಪ್ರಸಾದ್ ಅವರು ಹಾಕಿದ ಗಾಳಕ್ಕೆ ಮೀನು ಸಿಕ್ಕಿದಂತೆ ಆರೋಪಿಗಳು ಒಬ್ಬರ ಹಿಂದೆ ಹಿಂದೆ ಸಿಕ್ಕಿ ಹಾಕಿಕೊಂಡರು. ಪ್ರಶ್ನೆಪತ್ರಿಕೆ ಸೋರಿಕೆ ಖಜಾನೆಯಿಂದ ಆಗಿರುವುದನ್ನು ಮನಗಂಡ ತಂಡದ ನಾಯಕರು ಆರೋಪಿಗಳನ್ನ ಹುಡುಕುತ್ತಾ ಹೋದಾಗ ಅಂದಿನ sಸಿ.ಬಿ.ಐ ಘಟಕದ ಡಿವೈಸ್ಪಿ ಅದಿಕಾರಿ ಮಹದೇವಪ್ಪ ಎಂಬುವವರು ಬೆಂಗಳೂರಿನ ದೇವನಹಳ್ಳಿಯಲ್ಲಿ ಪ್ರಮುಖ ಆರೋಪಿ ಶಿವಕುಮಾರ್ ಎಂಬುವವರನ್ನು ಬಂದಿಸಿದರು. ಇಡೀ ಪ್ರಕರಣದ ತನಿಖಾದಿಕಾರಿಯಾಗಿ ರೋಷನ್ ಜಮೀರ್ ಅವರು ನಿಯೋಜನೆಗೊಂಡಿದ್ದರು ಎಂದು ತಿಳಿದುಬಂದಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂದಿಸದಂತೆ ಕೆಲವರು ಜಾಮೀನಿನ ಮೇಲೆ ಹೊರಬಂದರೆ ಇನ್ನ ಕೆಲವರು ನ್ಯಾಯಾಂಗ ಬಂದನದಲ್ಲಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿನ ಖಜಾನೆಗಳೇ ಸೇಫ್ ಆಗದಿರುವುದೇ ಪ್ರಮುಖ ಕಾರಣವಾಗಿದ್ದು ಈ ಸೋರಿಕೆಗೆ ಕಾರಣವಾಯಿತು. ಇತ್ತ ಇದನ್ನೆ ಬಂಡವಾಳ ಮಾಢಿಕೊಂಡ ಟ್ಯುಟೋರಿಯಲ್ ಮಾಫಿಯಾಗಳು ಹೆಚ್ಚು ಫಲಿತಾಂಶ ತರಲು ಇದೇ ಅಡ್ಡದಾರಿಯನ್ನೇ ಬಳಸಿಕೊಂಡರು. ಪ್ರಸ್ತುತ ಈ ವರ್ಷದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗದೇ ಇದ್ದಲ್ಲಿ ಇವರೊಬ್ಬರನ್ನು ಬಿಟ್ಟು ಬೇರೆ ಯಾರು ಈ ಪ್ರಶ್ನೆಪತ್ರಿಕೆ ಮಾರ್ಗ ಅನುಸರಿಸುತ್ತಿರಲಿಲ್ಲ ಎಂಬುದಾಗಿಯೂ, ಮತ್ತೇ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಇದೇ ಗುಂಪಿನಲ್ಲಿ ಇರುವ ಬೇರೆಯವರು ಈ ಕೃತ್ಯದಲ್ಲಿ ಇರಬಹುದೆಂದು ಶಂಕಸಿ ಹುಡುಕಾಟ ನಡೆಸಬೇಕಾಗುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆ ಸಂಬಂದಿಸದಂತೆ ಈ ಬಾರಿ ಶಿಕ್ಷೆ ಇಲ್ಲ ಎಂದು ಸರ್ಕಾರ ಬೇಜವ್ದಾರಿ ಉತ್ತರ ನೀಡುತ್ತಿದ್ದು ಇತ್ತ ಪಿ.ಯು.ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನಿರ್ದೇಶಕರಾದ ಶಿಖಾ ಅವರು ಸಹಕಾರ ನೀಡುವಂತೆ ಕಳೆದ ಬಾರಿ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳನ್ನು ಕಸ್ಟಡಿ ಪಡೆಯುವಂತೆ ರಾಜ್ಯ ಪೋಲಿಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಜೈಲಿನಲ್ಲೆ ಇದ್ದುಕೊಂಡು ಪ್ರಶ್ನೆಪತ್ರಿಕೆ ಸೋರಿಕೆ ಮಾಡುವಂತಹ ಚಾಣಕ್ಷನಾಗಿರುವ ಶಿವಕುಮಾರ್ ಹಾಲಿ ನ್ಯಾಯಾಂಗ ಬಂದನದಲ್ಲಿದ್ದಾನೆ ಎಂದು ತಿಳಿದುಬಂದಿದ್ದು, ಕೆಲವರು ಹೊರಗಡೆಯಿದ್ದು ಮತ್ತೆ ಕೃತ್ಯ ನಡೆಯಬಹುದೆಂದು ಮುಂಜಾಗೃತವಾಗಿ ಆರೋಪಿಗಳನ್ನು ಬಂದಿಸಲು ಕೋರಿದ್ದಾರೆ ಪ್ರಮುಖವಾಗಿ ಪಿ.ಯು.ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನಿರ್ದೇಶಕರನ್ನೋ ಗುರಿಯಾಗಿಸಿಟ್ಟುಕೊಂಡೊ, ಹಣ ಮಾಡುವ ಲಾಬಿಯಿಂದಲೋ ಈ ಕುಕೃತ್ಯ ನಡೆಯುತ್ತಿದೆ ಎನ್ನಲಾಗಿದ್ದು ಕೆಲವರು ಜೈಲಿನಿಂದ ಹೊರಬಂದರೆ ಮತ್ತೆ ಸೋರಿಕೆಯಾಗುದೇ ಅಥವಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವಲ್ಲಿ ಸರ್ಕಾರ ಪ್ರಮುಖ ಪಾತ್ರ ವಹಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ********************************************************************** ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ, ಆರೋಪಿಗಳನ್ನು ಸದೆಬಡಿದ ಸೂಪರ್ ಕಾಫ್ ಆರಕ್ಷಕರು. ಚಾಮರಾಜನಗರ: ಕಳೆದ ವರ್ಷ ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ ಮೇಲೆ ಸೋರಿಕೆಯಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕಂಗಾಲಾಗಿ ಸರ್ಕಾರ ಆರೋಪಿಗಳನ್ನು ಪತ್ತೆ ಮಾಡಲು ಸಿ.ಬಿ.ಐ. ವಿಶೇಷ ಘಟಕಕ್ಕೆ ವಹಸಿದ್ದರು. ಸಿ.ಬಿ.ಐ ಘಟಕದ ಡಿವೈಸ್ಪಿ ಅದಿಕಾರಿ ಮಹದೇವಪ್ಪ ಎಂಬುವವರು ಬೆಂಗಳೂರಿನ ದೇವನಹಳ್ಳಿಯಲ್ಲಿ ಪ್ರಮುಖ ಆರೋಪಿ ಶಿವಕುಮಾರ್ ಎಂಬುವವರನ್ನು ಬಂದಿಸಿದರು. ಉಳಿದಂತೆ ರೋಷನ್ ಜಮೀರ್, ಪ್ರಭುಶಂಕರ್, ರವೀಂದ್ರ, ರಾಜೇಂದ್ರ, ರವಿಪ್ರಸಾದ್ ಅವರ ನಾಲ್ಕು ತಂಡಗಳು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದರು. **************************************************************************** ಬೆಂಗಳೂರಿನ ದೇವನಹಳ್ಳಿಯಲ್ಲಿ ಪ್ರಮುಖ ಆರೋಪಿ ಶಿವಕುಮಾರ್ ಸಿ.ಬಿ.ಐ ಘಟಕದ ಡಿವೈಸ್ಪಿ ಅದಿಕಾರಿ ಮಹದೇವಪ್ಪ ***********************************************************************

06-03-2017 ಪೇದೆಗೆ ನೇಣಿಗೆ ಶರಣು

ಪೇದೆಗೆ ನೇಣಿಗೆ ಶರಣು ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆಯ ತಾಲ್ಲೂಕಿನ ಬೇಗೂರು ಪೋಲೀಸ್ ಠಾಣೆ ವಸತಿನಿಲಯದಲ್ಲಿ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ನಡದಿದೆ. ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಬ್ಬಹಳ್ಳಿ ಗ್ರಾಮದ ಪ್ರಸಾದ್ (27) ಎಂಬ ಪೇದೆ ಆತ್ಮಹತ್ಯೆ ಮಾಢಿಕೊಂಢ ದುರ್ದೈವಿಯಾಗಿದ್ದಾನೆ. ಪ್ರಸಾದ್ ಮೂರು ತಿಂಗಳಿನಿಂದ ವಿಶೇಷ ಪಡೆಯಲ್ಲಿ ಬೇಗೂರು ಠಾಣೆಯಲ್ಲಿ ಕಾರ್ಯರ್ನಿಹಿಸುತ್ತಿದ್ದ ಎಂದು ತಿಳಿದುಬಂದಿದೆ. ಇವರು 2008 ಬ್ಯಾಚ್‍ನವರಾಗಿದ್ದು ಯಳಂದೂರು ಅಲ್ಲಿ ಕರ್ತವ್ಯ ಮುಗಿಸಿ ನಂತರ ಬೇಗೂರು ಠಾಣೆಗೆ ಮೂರು ತಿಂಗಳಿ ಹಿಂದೆಯಷ್ಟೇ ವರ್ಗಾವಣೆಯಾಗಿತ್ತು ಎನ್ನಲಾಗಿದೆ. ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.

Saturday, 4 March 2017

04-03-2017 ಚಾಮರಾಜನಗರ ಮಾ. 8ರಂದು ಜನಮನ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ )

ಮಾ. 8ರಂದು ಜನಮನ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ಚಾಮರಾಜನಗರ, ಮಾ. 04 :- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಪ್ರಯೋಜನ ಪಡೆದಿರುವ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಲಿರುವ ಜನಮನ-ಸಂವಾದ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜನಮನ ಕಾರ್ಯಕ್ರಮ ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಲಾಭ ದೊರೆಯಬೇಕೆಂಬುದು ಸರ್ಕಾರದ ಸದುದ್ದೇಶವಾಗಿದೆ. ಎಲ್ಲ ವರ್ಗಗಳ ಏಳಿಗೆಗಾಗಿ ಸರ್ಕಾರ ರೂಪುಗೊಳಿಸಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ತಲುಪುತ್ತಿದೆಯೇ? ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಹೇಗೆ ಮಾಡಬಹುದು? ಮೂಲ ಉದ್ದೇಶ ಈಡೇರಿದೆಯೇ? ಎಂಬ ಬಗ್ಗೆ ಫಲಾನುಭವಿಗಳಿಂದಲೇ ನೇರವಾಗಿ ಕೇಳಿ ತಿಳಿದುಕೊಳ್ಳುವ ಪ್ರಯತ್ನವನ್ನು ಜನಮನ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮಾರ್ಚ್ 8ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಜನಮನ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಲ್ಲಿ ಪ್ರಯೋಜನ ಪಡೆದಿರುವ ಜಿಲ್ಲೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಹೀಗಾಗಿ ಅಂದಿನ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತಂದು ಜನಮನವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು. ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿ ಭಾಗ್ಯ, ವಿದ್ಯಾಸಿರಿ, ಮೈತ್ರಿ, ಮನಸ್ವಿನಿ ವಿವಿಧ ನಿಗಮಗಳಿಂದ ಪಡೆದ ಸಾಲ ಮನ್ನಾದಂಥಹ ಪ್ರಮುಖ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸಂವಾದ ನಡೆಸಲಾಗುತ್ತದೆ. ಅತ್ಯಂತ ಪರಿಣಾಮಕಾರಿಯಾಗಿ ಜನಮನ ಕಾರ್ಯಕ್ರಮ ಮೂಡಿಬರಬೇಕು. ಈ ದಿಸೆಯಲ್ಲಿ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು. ಎಲ್ಲಾ ಭಾಗದ ಫಲಾನುಭವಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಬೇಕು. ನಿಗದಿತ ವೇಳೆಗೆ ಫಲಾನುಭವಿಗಳನ್ನು ಕರೆತರುವ ಹೊಣೆಗಾರಿಕೆ ಆಯಾ ಯೋಜನೆಗೆ ಸಂಬಂಧಿಸಿದಂತೆ ಅನುಷ್ಠಾನ ಮಾಡುತ್ತಿರುವ ಜಿಲ್ಲಾ ಅಧಿಕಾರಿಗಳ ಮೇಲಿದೆ. ಯಾವುದೇ ಲೋಪಕ್ಕೆ ಅವಕಾಶವಾಗದ ಹಾಗೆ ಅರ್ಥಪೂರ್ಣವಾಗಿ ಜನಮನ ಸಂವಾದ ನಡೆಯಲು ಬೇಕಿರುವ ಎಲ್ಲ ರೂಪುರೇಷೆಗಳಿಗೆ ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎ. ರಮೇಶ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕರಾದ ಆರ್. ರಾಚಪ್ಪ, ಚಾಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿಜಯ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಬಾಲಸುಂದರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸರಸ್ವತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಮಾ. 8ರಂದು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಚಾಮರಾಜನಗರ, ಮಾ. 04 :- ಕರ್ನಾಟಕ ರಾಜ್ಯ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 8ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ. ಮಾ. 6ರಂದು ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಚಾಲನೆ ಚಾಮರಾಜನಗರ, ಮಾ. 04 - ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮವು ಮಾರ್ಚ್ 6ರಂದು ಬೆಳಿಗ್ಗೆ 10 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ನಡೆಯಲಿದೆ. ಒಟ್ಟು 189.48 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಕಾಮಗಾರಿ ಗುದ್ದಲಿ ಪೂಜೆಯನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ನೆರವೇರಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾದ್ಯಕ್ಷರಾದ ಎಸ್. ಬಸವರಾಜು, ನಗರಸಭೆ ಅಧ್ಯಕ್ಷರಾದ ರೇಣುಕ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲುಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಇನ್ನಿತರ ಎಲ್ಲ ಚುನಾಯಿತ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ 2ನೇ ಶನಿವಾರ ಮೆಗಾ ಲೋಕ್ ಅದಾಲತ್ : ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ ಚಾಮರಾಜನಗರ, ಮಾ. 04:- ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮಾರ್ಚ್ ತಿಂಗಳಿನಿಂದ ಡಿಸೆಂಬರ್ ತಿಂಗಳಿನವರೆಗೆ ಪ್ರತೀ 2ನೇ ಶನಿವಾರ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಅವಕಾಶ ಕಲ್ಪಿಸುವ ಸಲುವಾಗಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮುಖಾಂತರ ಇತ್ಯರ್ಥಗೊಳಿಸಲು ಉದ್ದೇಶಿಸಲಾಗಿದೆ. ವ್ಯಾಜ್ಯವನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದು. ಜನತಾ ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು. ಸೌಹಾರ್ಧಯುತವಾಗಿ ಪ್ರಕರಣವು ಇತ್ಯರ್ಥಗೊಳ್ಳುವುದರಿಂದ ಬಾಂಧವ್ಯ ಹಾಗೂ ಉಳಿದ ವಿವಾದ ಇತ್ಯರ್ಥವಾಗಲಿದೆ. ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಮರುಪಾವತಿಸಲಾಗುತ್ತದೆ. ಕಡಿಮೆ ಖರ್ಚು ಶೀಘ್ರ ವಿಲೇವಾರಿಗಾಗಿ ಲೋಕ ಅದಾಲತ್ ವಿಶೇಷ ಅವಕಾಶವಾಗಿದ್ದು ನಾಗರಿಕರು ಇದರ ಪ್ರಯೋಜನ ಪಡೆಯಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮÁ. 8ರಂದು ವಿದ್ಯುತ್ ವ್ಯತ್ಯಯ ಚಾಮರಾಜನಗರ, ಮಾ. 04 :- ತಾಲೂಕಿನ ಚಂದಕವಾಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಮಾರ್ಚ್ 8ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಿರಿಕೆರೆ, ಕಾಳಿಕಾಂಬ, ಚಂದಕವಾಡಿ, ರೇಚಂಬಳ್ಳಿ, ಮಲ್ಲೇದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. ಕಾಣೆಯಾದ ವಿದ್ಯಾರ್ಥಿನಿ ಪತ್ತೆಗೆ ಮನವಿ ಚಾಮರಾಜನಗರ, ಮಾ. 04 (:- ಕಾಲೇಜು ವಿದ್ಯಾರ್ಥಿನಿಯೊಬ್ಬರು ಕಾಣೆಯಾಗಿರುವ ಬಗ್ಗೆ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೀಣಾ ಎಂಬಾಕೆ ಕಾಲೇಜಿನ ಪ್ರಿನ್ಸಿಪಾಲರಿಗೆ ನನ್ನ ತಂದೆಗೆ ಹುಷಾರಿಲ್ಲ ಎಂದು ತಿಳಿಸಿ ಊರಿಗೆ ಹೋಗುವುದಾಗಿ ಫೆಬ್ರವರಿ 17ರಂದು ಹೇಳಿ ಹೋಗಿದ್ದು. ಇದುವರೆಗೂ ಊರು ಹಾಗೂ ಕಾಲೇಜಿಗೂ ಬಂದಿರುವುದಿಲ್ಲ ಎಂದು ಈಕೆಯ ತಾಯಿ ಕುಮಾರಿ ಅವರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 23 ವರ್ಷದ ವೀಣಾ ದುಂಡುಮುಖ, ಗೋಧಿ ಮೈಬಣ್ಣ ಹೊಂದಿದ್ದು 5 1/2 ಅಡಿ ಎತ್ತರವಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಈಕೆಯ ಸುಳಿವು ದೊರೆತಲ್ಲಿ ನಗರದ ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ರಾಷ್ಟ್ರೀಯ ಯುವಪಡೆಗೆ ಸ್ವಯಂ ಸೇವಕರ ನೇಮಕ : ಅರ್ಜಿ ಆಹ್ವಾನ ಚಾಮರಾಜನಗರ, ಮಾ. 04 :- ನೆಹರು ಯುವ ಕೇಂದ್ರವು ರಾಷ್ಟ್ರೀಯ ಯುವಪಡೆಗಾಗಿ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಿದೆ. ಅಬ್ಯರ್ಥಿಗಳು ಕನಿಷ್ಟ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. (ಹೆಚ್ಚಿನ ವಿದ್ಯಾರ್ಹತೆ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ) 18 ರಿಂದ 29ರ ವಯೋಮಿತಿಯೊಳಗಿರಬೇಕು. ಜಿಲ್ಲೆಯ ನಿವಾಸಿಗಳಾಗಿರಬೇಕು. ಆಯ್ಕೆಯಾದವರಿಗೆ ತರಬೇತಿ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 5 ಸಾವಿರ ರೂ.ಗಳನ್ನು ಸಂಭಾವನೆ ಹಾಗೂ ಪ್ರವಾಸಭತ್ಯೆಗಾಗಿ ನೀಡಲಾಗುತ್ತದೆ. ಆಸಕ್ತರು ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ನೆಹರು ಯುವಕೇಂದ್ರ ಕಚೇರಿ (ಕೊ. ಸಂಖ್ಯೆ 223) ಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 18ರೊಳಗೆ ಸಲ್ಲಿಸಬೇಕು. ಸಂಪೂರ್ಣ ವಿವರವನ್ನು (ದೂ.ಸಂಖ್ಯೆ 08226-222120) ಕಚೇರಿಯಿಂದ ಪಡೆಯುವಂತೆ ನೆಹರು ಯುವಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಸ್. ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

03-03-2017 ಬರ ಪರಿಹಾರ ಕಾಮಗಾರಿ ಸಮರ್ಪಕ ನಿರ್ವಹಣೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಬರ ಪರಿಹಾರ ಕಾಮಗಾರಿ ಸಮರ್ಪಕ ನಿರ್ವಹಣೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಚಾಮರಾಜನಗರ ಮಾ 3 - ಬರಗಾಲ ಪರಿಸ್ಥಿತಿ ಎದುರಿಸುತ್ತಿರುವ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವು ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವ ಹೊಣೆಗಾರಿಕೆ ಇದೆ. ಹೀಗಾಗಿ ಬರಪರಿಹಾರ ಕಾಮಗಾರಿಯನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಬರಪರಿಹಾರ, ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಭಾವ ಪರಿಸ್ಥಿತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕಿದೆ. ಅವಶ್ಯವಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಆದ್ಯತೆ ಮೇರೆಗೆ ನೀರು ಒದಗಿಸುವ ಕೆಲಸವನ್ನು ತೆಗೆದುಕೊಳ್ಳಬೇಕು. ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿರುವವರಿಗೆ ಹಣ ಪಾವತಿಸಲು ವಿಳಂಬ ಮಾಡಬಾರದು. ತಹಸೀಲ್ದಾರ್, ಇತರೆ ಸಂಬಂಧಪಟ್ಟ ಅಧಿಕಾರಿಗಳು ಸಕಾಲದಲ್ಲಿ ಬಿಲ್ ಪಾವತಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು. ಇದೇವೇಳೆ ಮಾತನಾಡಿದ ಶಾಸಕರಾದ ನರೇಂದ್ರ ಅವರು ಮಹದೇಶ್ವರ ಬೆಟ್ಟದ ನಾಗಮಲೆ, ಮೆಂದಾರೆ ಭಾಗದಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಕಾಣಿಸಿಕೊಂಡು ಜನರು ಪರಿತಪಿಸುತ್ತಿದ್ದಾರೆ. ತುರ್ತಾಗಿ ಕಾಮಗಾರಿ ಕೈಗೊಂಡು ಜನರ ಬವಣೆ ಪರಿಹರಿಸಬೇಕಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವರು ಕೂಡಲೇ ಮಹದೇಶ್ವರ ಬೆಟ್ಟದ ಭಾಗದಲ್ಲಿ ಅತ್ಯಂತ ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದರು. ಗ್ರಾಮಗಳಿಗೆ ಸಾಗುವ ಮಾರ್ಗವನ್ನು ಸಿದ್ಧಪಡಿಸುವಂತೆ ಪಂಚಾಯತ್‍ರಾಜ್ ಎಂಜಿನಿಯರಿಂಗ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮೇವು ಪರಿಸ್ಥಿತಿಯನ್ನು ಪರಾಮರ್ಶಿಸಿದ ಸಚಿವರು ಪ್ರಸ್ತುತ ಇರುವ ಗೋಶಾಲೆ, ಮೇವುನಿಧಿ ಬ್ಯಾಂಕುಗಳಲ್ಲಿ ಜಾನುವಾರುಗಳಿಗೆ ಸಕಾಲಕ್ಕೆ ಮೇವು ಪೂರೈಸಬೇಕು. ಮೇವು ಒದಗಿಸುವ ಸಂಬಂಧ ದೂರುಗಳು ಬಾರದಂತೆ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು. ವಿವಿಧೆಡೆ ಗೋಶಾಲೆ ತೆರೆಯಲು ಉದ್ದೇಶಿಸಿರುವ ಸ್ಥಳಗಳಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಮೇವು ದಾಸ್ತಾನು ಮಾಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಯಾವುದೇ ಸಬೂಬು ಹೇಳದೆ ಸಮನ್ವಯದಿಂದ ಅತೀ ಶೀಘ್ರವಾಗಿ ಗೋಶಾಲೆ ಆರಂಭಿಸಲು ಅಗತ್ಯವಿರುವ ಎಲ್ಲ ಸಿದ್ಧತೆಯನ್ನು ಪೂರ್ಣಗೊಳಿಸಬೇಕು ಎಂದು ಉಸ್ತುವಾರಿ ಸಚಿವರು ತಾಕೀತು ಮಾಡಿದರು. ಇದೇವೇಳೆ ನಗರೋತ್ಥಾನ ಯೋಜನೆಯಡಿ ನಿಗದಿಪಡಿಸಿರುವ ಅನುದಾನದಡಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿ ಹಾಗೂ ನಗರ, ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು. ಶಾಸಕರಾದ ಎಸ್.ಜಯಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ಜಿಲ್ಲಾಮಟ್ಟದ ಅಧಿಕಾರಿಗಳು, ಇತರೆ ಜನಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

Thursday, 2 March 2017

02-03-2017 ಚಾಮರಾಜನಗರ ಸುದ್ದಿಗಳು(ಗ್ರಾಹಕ ಹಕ್ಕು ಕಾಯಿದೆ ಅರಿವು ಅಗತ್ಯ , ಅನಿಲ ಪಡಿತರ ಚೀಟಿದಾರರಿಗೂ ಸೀಮೆಎಣ್ಣೆ)

ಗ್ರಾಹಕ ಹಕ್ಕು ಕಾಯಿದೆ ಅರಿವು ಅಗತ್ಯ ಚಾಮರಾಜನಗರ, ಮಾ. 02 :- ಗ್ರಾಹಕರು ಯಾವುದೇ ವಸ್ತು ಖರೀದಿ ಅಥವಾ ಸೇವೆಯಲ್ಲಿ ಲೋಪದೋಷಗಳು ಕಂಡುಬಂದಾಗ ಯಾವುದೇ ಹಿಂಜರಿಕೆ ಇಲ್ಲದೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ದೂರು ದಾಖಲಿಸಿ ಪರಿಹಾರ ಪಡೆಯಬೇಕೆಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ವೇದಿಕೆಯ ಸದಸ್ಯರಾದ ಗೌರಮ್ಮಣ್ಣಿ ಅವರು ತಿಳಿಸಿದರು. ನಗರದ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಇಂದು ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಶ್ರೀಗಂಧ ಮಹಿಳಾ ಅಭಿವೃದ್ಧಿ ಸಂಘ, ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಹಕ ಜಾಗೃತಿ ಕುರಿತು ಕಾರ್ಯಕ್ರಮದಲ್ಲಿ ಅವರು ಮತನಾಡಿದರು. ಗ್ರಾಹಕರ ಸಂರಕ್ಷಣೆಗಾಗಿ 1986ರಲ್ಲಿ ಕಾಯಿದೆ ಜಾರಿಗೆ ಬಂದಿದೆ. ಇದರ ಅನುಷ್ಠಾನಕ್ಕೆ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಇದೆ. ಹಣ ಕೊಟ್ಟು ಖರೀದಿಸುವ ಯಾವುದೇ ವಸ್ತು ಅಥವಾ ಸೇವೆಯನ್ನು ಪಡೆಯುವವರು ಗ್ರಾಹಕರಾಗುತ್ತಾರೆ. ಕೊಂಡ ಸರಕು ಪಡೆದ ಸೇವೆಯಲ್ಲಿ ನ್ಯೂನತೆಗಳು ಇದ್ದರೆ ಪರಿಹಾರ ಪಡೆಯುವ ಹಕ್ಕು ಗ್ರಾಹಕರಿಗಿದೆ ಎಂದರು. ವಸ್ತು ಸೇವೆ ಪಡೆಯುವ ವೇಳೆ ಕಡ್ಡಾಯವಾಗಿ ರಸೀದಿ ಇನ್ನಿತರ ದಾಖಲೆಗಳನ್ನು ಪಡೆದುಕೊಳ್ಳಬೇಕು. ಅನ್ಯಾಯವಾದಾಗ ಪರಿಹಾರ ಪಡೆಯಲು ಅರ್ಜಿ ಸಲ್ಲಿಸುವ ವೇಳೆ ಅಂಗಡಿ ಉದ್ಯಮಿಗಳಿಂದ ಪಡೆದ ರಸೀತಿಯಂತಹ ದಾಖಲೆಗಳು ಪ್ರಮುಖವಾಗುತ್ತವೆ. ಹೀಗಾಗಿ ಯಾವುದೇ ಖರೀದಿ ಪ್ರಕ್ರಿಯೆ ಅಥವಾ ಸೇವೆ ಸೌಲಭ್ಯ ಪಡೆದುಕೊಂಡಾಗ ರಸೀದಿಯಂತಹ ದಾಖಲೆಗಳನ್ನು ಪಡೆದು ಇಟ್ಟುಕೊಳ್ಳಬೇಕು ಎಂದು ಗೌರಮ್ಮಣ್ಣಿ ಸಲಹೆ ಮಾಡಿದರು. ಜಾಗತೀಕರಣ ಯುಗದಲ್ಲಿ ಇಂದು ಆನ್ ಲೈನ್ ಮೂಲಕವೂ ವಸ್ತುಗಳನ್ನು ಖರೀದಿಸಲಾಗುತ್ತಿದೆ. ಜಾಹಿರಾತಿಗೆ ಮರುಳಾಗಿ ವಸ್ತು ಖರೀದಿಸುವ ಮೊದÀಲು ಚಿಂತನೆ ನಡೆಸಬೇಕು. ಪೈಪೋಟಿ ಯುಗದಲ್ಲಿ ಆಯ್ಕೆಯ ಹಕ್ಕು ಗ್ರಾಹಕರಿಗಿದೆ. ಬದಲಾದ ಪರಿಸ್ಥಿತಿಯಲ್ಲಿ ಗ್ರಾಹಕ ಹಾಗೂ ಮಾರಾಟಗಾರ ಇಬ್ಬರೂ ಸಹ ಎಚ್ಚರಿಕೆಯಿಂದ ಇರಬೇಕಿದೆ. ಯಾವುದೇ ನ್ಯೂನತೆ ಕಂಡುಬಂದಲ್ಲಿ ಪರಿಹಾರ ಪಡೆಯುವ ಎಲ್ಲಾ ಹಕ್ಕು ಗ್ರಾಹಕರಿಗಿದೆ ಎಂಬುದನ್ನು ಮರೆಯಬಾರದೆಂದು ಗೌರಮ್ಮಣ್ಣಿ ತಿಳಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಹಾರ ನಿರೀಕ್ಷಕರಾದ ವಿಶ್ವನಾಥ್ ಅವರು ಗ್ರಾಹಕರು ಮೋಸ ಹೋಗದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಆಯೋಜಿಸಿ ಕಾಯಿದೆ ಬಗ್ಗೆ ತಿಳಿವಳಿಕೆ ನೀಡಲಾಗುತ್ತದೆ. ಗ್ರಾಹಕ ಸಂರಕ್ಷಣೆ ಬಗ್ಗೆ ಮಹಿಳೆಯರಿಗೆ ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಲು ಕಾಲೇಜು ಸ್ತ್ರೀಶಕ್ತಿ ಸಂಘಟನೆಗಳ ಸ್ಥಳದಲ್ಲಿ ಗ್ರಾಹಕ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ಮಾಡಿದರು. ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಂಗಸ್ವಾಮಿ ಮಾತನಾಡಿ ಗ್ರಾಹಕರು ಪಡೆದ ವಸ್ತು ಸೇವೆಯಲ್ಲಿ ಗುಣಮಟ್ಟ ಇಲ್ಲವೆಂದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಪ್ರಶ್ನಿಸಬೇಕು. ಗ್ರಾಹಕರ ಶೋಷಣೆಯನ್ನು ತಪ್ಪಿಸಲು ಪ್ರಶ್ನಿಸುವ ಮನೋಭಾವ ರೂಢಿಸಿಕೊಂಡರೆ ಯಾವುದೇ ಮೋಸ ಅನ್ಯಾಯಕ್ಕೆ ಒಳಗಾಗುವ ಪ್ರಕರಣಗಳು ಸಹಜವಾಗಿ ಇಳಿಮುಖವಾಗಲಿದೆ ಎಂದು ಅಭಿಪ್ತಾಯಪಟ್ಟರು. ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಮಾದಮ್ಮ ಅಧ್ಯಕ್ಷತೆ ವಹಿಸಿದ್ದರು. ಶ್ರೀಗಂಧ ಮಹಿಳಾ ಅಭಿವೃದ್ಧಿ ಸಂಘದ ಸಲಹೆಗಾರರಾದ ಶಿವರಾಜಮ್ಮ, ಸುಶೀಲ, ಗ್ರಾಸ್ ವಿತರಕ ಸಂಸ್ಥೆಯ ಪ್ರತಿನಿಧಿಗಳಾದ ಮಹೇಶ್, ಮಹೇಶ್ವರಿ, ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲರಾದ ಎಂ.ಆರ್. ಸುಮತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ////////////////////////////////////////////////////////////////////////////////////////////////////////// ಮಾ. 10ರಿಂದ ಜಿಲ್ಲಾ ಕ್ರೀಡಾ ವಸತಿಶಾಲೆ ಪ್ರವೇಶಕ್ಕೆ ಆಯ್ಕೆ ಪ್ರಕ್ರಿಯೆ ಚಾಮರಾಜನಗರ, ಮಾ. 02 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017-18ನೇ ಸಾಲಿಗೆ ಜಿಲ್ಲಾ ಕ್ರೀಡಾ ವಸತಿ ಶಾಲೆ ಪ್ರವೇಶಕ್ಕಾಗಿ ಮಾರ್ಚ್ 10 ರಿಂದ 17ರವರೆಗೆ ತಾಲೂಕು ಕೇಂದ್ರಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಿದೆ. ಕಿರಿಯರ ವಿಭಾಗದಲ್ಲಿ ಪ್ರವೇಶಾತಿಗಾಗಿ ಪ್ರಸಕ್ತ ಸಾಲಿನಲ್ಲಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದು 2017-18ನೇ ಸಾಲಿಗೆ 5ನೇ ತರಗತಿಗೆ ಪ್ರವೇಶ ಪಡೆಯಲಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಾರ್ಚ್ 10ರಂದು ಕೊಳ್ಳೇಗಾಲದ ಶ್ರೀ ಮಹದೇಶ್ವರ ಕಾಲೇಜು, 13ರಂದು ಯಳಂದೂರಿನ ಸರ್ಕಾರಿ ಪದವಿಪೂರ್ವ ಕಾಲೇಜು, 14ರಂದು ಗುಂಡ್ಲುಪೇಟೆಯ ಡಿ. ದೇವರಾಜ ಅರಸು ಕ್ರೀಡಾಂಗಣ, 15ರಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯಾ ದಿನಾಂಕಗಳಂದು ಬೆಳಿಗ್ಗೆ 9.30 ಗಂಟೆಗೆ ತಾಲೂಕುವಾರು ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮಾರ್ಚ್ 17ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಮಟ್ಟದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವಾಲಿಬಾಲ್, ಫುಟ್ಬಾಲ್ ಕ್ರೀಡೆಗಳಿಗೆ ಸಂಬಂಧಿಸಿದಂತೆ ನಿರತರಾಗಿರುವ ವಿದ್ಯಾರ್ಥಿಗಳು ದಿನಾಂಕ 1.6.2017ಕ್ಕೆ ಅನ್ವಯವಾಗುವಂತೆ 12 ವರ್ಷಕ್ಕೊಳಪಟ್ಟಿರಬೇಕು. 140 ಸೆಂ.ಮೀ. ಎತ್ತರವಿರಬೇಕು. ವಿವರಗಳಿಗೆ ಮಹದೇವಯ್ಯ (ಮೊ.7760841489), ಕೆ.ಸಿ. ಶಿವಣ್ಣ (ಮೊ.9482110914), ಬಿ.ಕೆ. ಗೋಪಾಲ್ (ಮೊ.9945615695) ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08226-224932 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ///////////////////////////////////////////////////////////////////////////////////////////// ಅನಿಲ ಪಡಿತರ ಚೀಟಿದಾರರಿಗೂ ಸೀಮೆಎಣ್ಣೆ ಚಾಮರಾಜನಗರ, ಮಾ. 02 - ಪ್ರಸಕ್ತ ಸಾಲಿನ ಮಾಹೆಯಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಅನಿಲ ಪಡಿತರ ಚೀಟಿದಾರರಿಗೂ ಪ್ರತೀ ಮಾಹೆಗೆ ಒಂದು ಲೀಟರ್‍ನಂತೆ ಸಹಾಯಧನಯುಕ್ತ ಸೀಮೆಎಣ್ಣೆ ವಿತರಣೆಯಾಗಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಗ್ಯಾಸ್ ಸಂಪರ್ಕ ಹೊಂದಿರುವ ಅನಿಲ ಪಡಿತರ ಚೀಟಿದಾರರು ಸೀಮೆಎಣ್ಣೆ ಪಡೆಯುವ ಬಗ್ಗೆ ಗ್ರಾಮಪಂಚಾಯಿತಿಯಲ್ಲಿ ಆಹಾರ ಇಲಾಖೆಯ ತಂತ್ರಾಂಶದ ಮೂಲಕ ತಮ್ಮ ಒಪ್ಪಿಗೆ ನೀಡಬೇಕಿದೆ. ಒಪ್ಪಿಗೆ ನೀಡದೇ ಇದ್ದ ಕಾರ್ಡುಗಳಿಗೆ ಸೀಮೆಎಣ್ಣೆ ಹಂಚಿಕೆ ಮಾಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ಸ್ಥಳೀಯ ತಾಲೂಕು ಕಚೇರಿಯ ಆಹಾರ ನಿರೀಕ್ಷಕರನ್ನು ಭೇಟಿ ಮಾಡುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ ಚಾಮರಾಜನಗರ, ಮಾ. 02 - ಜಿಲ್ಲೆಯ ತಾಲೂಕು ಕೇಂದ್ರ ಹಾಗೂ ಪಟ್ಟಣ ಪ್ರದೇಶಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 6 ರಿಂದ 31ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು. ಮಾರ್ಚ್ 6ರಂದು ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಅತಿಥಿಗೃಹದಲ್ಲಿ, ಮಾರ್ಚ್ 14ರಂದು ಚಾಮರಾಜನಗರ ಪಟ್ಟಣದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು. ಮಾರ್ಚ್ 22ರಂದು ಯಳಂದೂರು, 27ರಂದು ಕೊಳ್ಳೇಗಾಲ ಹಾಗೂ ಮಾರ್ಚ್ 31ರಂದು ಹನೂರಿನಲ್ಲಿರುವ ಸರ್ಕಾರಿ ಅತಿಥಿಗೃಹದಲ್ಲಿ ದೂರುಗಳನ್ನು ಸ್ವೀಕರಿಸುವರು. ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ///////////////////////////////////////////////////////////////////////////////////////////// ವಿಶ್ವ ಮಹಿಳಾ ದಿನಾಚರಣೆ: ಸ್ವಚ್ಛ ಶಕ್ತಿ ಕಾರ್ಯಕ್ರಮ ಚಾಮರಾಜನಗರ ಮಾ 2 - ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯ ವತಿಯಿಂದ ಗುಜರಾತಿನ ಗಾಂಧಿ ನಗರದಲ್ಲಿ ಮಾ.8 ರಂದು ಸ್ವಚ್ಛ ಶಕ್ತಿ-2017 ಮಹಿಳಾ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ಸ್ವಚ್ಛ ಶಕ್ತಿ ಕಾರ್ಯಕ್ರಮವನ್ನು ಒಂದು ವಾರ ಹಮ್ಮಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಒಂದು ವಾರಗಳ ಕಾಲ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನೀರು ಮತ್ತು ನೈರ್ಮಲ್ಯ ಬಗ್ಗೆ ಸ್ತ್ರೀ ಶಕ್ತಿ ಸಂಘಗಳ ಪ್ರತಿನಿಧಿಗಳಿಗೆ ಜಾಗೃತಿ ಮೂಡಿಸುವುದು. ಮಹಿಳೆ ಮತ್ತು ಸ್ವಚ್ಛತೆ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶನ. ನೀರಿನ ಟ್ಯಾಂಕ್, ತೊಂಬೆಗಳನ್ನು ಸ್ವಚ್ಛಗೊಳಿಸುವುದು. ನೀರಿನ ಸೋರಿಕೆಯನ್ನು ತಡೆಗಟ್ಟುವುದು. ವೈಯಕ್ತಿಕ, ಕುಟುಂಬ ಹಾಗೂ ಗ್ರಾಮದ ಸ್ವಚ್ಛತೆ ಕುರಿತು ಮಹಿಳಾ ಸಂಘದ ಪ್ರತಿನಿಧಿಗಳಿಗೆ ಅರಿವು ಮೂಡಿಸುವುದು. ಮಹಿಳೆಯರು ಮತ್ತು ಮಕ್ಕಳಿಗೆ ಕ್ರೀಡಾಕೂಟ ಆಯೋಜನೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದು. ಗ್ರಾಮಗಳನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವಲ್ಲಿ ಮಹಿಳೆಯರ ಪಾತ್ರ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾ.8ರವರಗೆ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳಾ ಜನಪ್ರತಿನಿಧಿಗಳು, ಮಹಿಳಾ ಸ್ವ-ಸಹಾಯ ಸಂಘಗಳು, ಸ್ಥಳೀಯ ಮಹಿಳಾ ಮುಖಂಡರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. /////////////////////////////////////////////////////////////////////////////////////////////////////// ಮಹಿಳಾ ಪತ್ರಕರ್ತರ ಸಮಸ್ಯೆ ಸವಾಲು ಹಾಗೂ ಅವಕಾಶಗಳು ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಕೋರಿರುವ ಬಗ್ಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ರಾಜ್ಯ ಮಹಿಳಾ ವಿಶ್ಯವಿÀವಿದ್ಯಾಲಯ ಹಾಗೂ ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಾರ್ಚ್ 6 ಮತ್ತು 7ರಂದು ಮಹಿಳಾ ಪತ್ರಕರ್ತರ ಸಮಸ್ಯೆ ಸವಾಲು ಮತ್ತು ಅವಕಾಶಗಳು ಎಂಬ ವಿಚಾರ ಸಂಕಿರಣವನ್ನು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಸಲಾಗುತ್ತಿದೆ. ವಿಚಾರಸಂಕಿರಣಕ್ಕೆ ಆಗಮಿಸುವ ಮಹಿಳಾ ಪತ್ರಕರ್ತರಿಗೆ ಊಟ, ವಸತಿ, ಪ್ರಯಾಣ ವೆಚ್ಚವನ್ನು ನೀಡಲಾಗುತ್ತದೆ. ಭಾಗವಹಿಸಲು ಇಚ್ಚಿಸುವ ಮಹಿಳಾ ಪತ್ರಕರ್ತರು ತಮ್ಮ ಹೆಸರು, ದೂರವಾಣಿ ಸಂಖ್ಯೆಯನ್ನು ಮಾಧ್ಯಮ ಅಕಾಡೆಮಿಗೆ ಪತ್ರದ ಮೂಲಕ ಅಥವಾ ಇಮೇಲ್ ಞಚಿಡಿಟಿಚಿಣಚಿಞಚಿmeಜiಚಿಚಿಛಿಚಿಜemಥಿ@g.miಚಿಟ.ಛಿomಗೆ ಕಳುಹಿಸುವಂತೆ ಅಕಾಡೆಮಿಯ ಅಧ್ಯಕ್ಷರಾದ ಸಿದ್ಧರಾಜು ಅವರು ಕೋರಿರುತ್ತಾರೆ. ಈ ವಿಷಯವನ್ನು ತಮ್ಮ ತಾಲೂಕು ಮಟ್ಟದ ಪ್ರತಿನಿಧಿಗಳಿಗೂ ತಿಳಿಸುವಂತೆ ಕೋರಲಾಗಿದೆ. //////////////////////////////////////////////////////////////////////////////////////////////////////////////////////////

Wednesday, 1 March 2017

ವಾಟ್ಸಾಪ್ ಅಲ್ಲಿ ಬುಲೆಟ್., ಬೆಸ್ತು ಬಿದ್ದ ಪೋಲೀಸರು.!ಸಾಮಾಜಿಕ ಜಾಲತಾಣಕ್ಕಿಲ್ಲ ಕಡಿವಾಣ, ಡಿ.ಜಿ ಅವರಿಗೆ ದೂರು ಸಲ್ಲಿಕೆ

ವಾಟ್ಸಾಪ್ ಅಲ್ಲಿ ಜೀವಂತ ಬುಲೆಟ್., ಬೆಸ್ತು ಬಿದ್ದ ಪೋಲೀಸರು.! ಸಾಮಾಜಿಕ ಜಾಲತಾಣಕ್ಕಿಲ್ಲ ಕಡಿವಾಣ, ಡಿ.ಜಿ ಅವರಿಗೆ ದೂರು ಸಲ್ಲಿಕೆ ಚಾಮರಾಜನಗರ: ವಾಟ್ಸಾಪ್‍ನ ಗುಂಪಿನಲ್ಲಿ ಹರಿದಾಡಿದ ಸುಳ್ಳು ಸುದ್ದಿಯನ್ನು ನೋಡಿ ಪೂರ್ವಪರ ಪರಿಶೀಲನೆ ಮಾಡದೇ ವಾಹಿನಿಯಲ್ಲಿ ಸುದ್ದಿ ಪ್ರಕಟಿಸಿದ ಹಿನ್ನಲೆಯಲ್ಲಿ ಚಾಮರಾಜನಗರ ಪಟ್ಟಣ ಪೋಲೀಸರು ಪರಿಶೀಲನೆ ಮಾಡಿ ಕೊನೆಗೆ ಬೆಸ್ತು ಬಿದ್ದ ಘಟನೆ ನಡೆದಿದೆ. ಚಾಮರಾಜನಗರದ ವಾಟ್ಸಾಪ್‍ನ ಗುಂಪಿನಲ್ಲಿ ಕಾಲೇಜಿನ ವಸತಿ ನಿಲಯದಲ್ಲಿ ಜೀವಂತ ಗುಂಡುಗಳ ಪತ್ತೆ, ಪಟ್ಟಣ ಪೋಲೀಸರಿಂದ ಪರಿಶೀಲನೆ ಎಂದು ಹರಿದಾಡಿದ ಸುಳ್ಳು ಸುದ್ದಿ ಹಾಗೂ ಕೆಲವು ವಿದ್ಯುನ್ಮಾನ ಮಾದ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆಯೆ ಪಟ್ಟಣ ಪೋಲೀಸರು ಗಲಿಬಿಲಿಯಾಗಿ ತಮ್ಮ ಕಾರ್ಯವೈಖರಿಯನ್ನು ಚುರುಕುಗೊಳಿಸಿದರು. ಮಾದ್ಯಮದಲ್ಲಿ ಪ್ರಕಟವಾದ ವಾಹಿನಿ ವರದಿಗಾರರನ್ನು ಆ ವೇಳೆಗಾಗಲೇ ಪೋಲೀಸರು ಸಂಪರ್ಕಿಸಲಾಗಿ ಅದು ಸುದ್ದಿ ಸುಳ್ಳೆಂದು ಗೊತ್ತಾದಾಗ ಆರಕ್ಷಕರು ನಿಟ್ಟಿಸಿರು ಬಿಟ್ಟಿದ್ದಾರೆ. ಈಗಾಗಲೆ ಚಾಮರಾಜನಗರ ಕರ್ನಾಟಕ, ತಮಿಳುನಾಡು ಕೇರಳ ಗಡಿಭಾಗದಲ್ಲಿ ನಕ್ಸಲ್ ಬಗ್ಗೆ ಮಾಹಿತಿ ಬಗ್ಗೆ ಅದಿಕಾರಿ ವಲಯದಲ್ಲಿ ಆಗಾಗ ಸಭೆ ನಡೆಯುತ್ತಿದ್ದು ಈ ನಡುವೆ ಇಂತಹ ಸುದ್ದಿ ಬಂದಾಗ ನಿಜವಿರಬಹುದು ಎಂದು ಸಾರ್ವಜನಿಕರು ನಂಬುವ ಸ್ಥಿತಿ ತಲುಪುವಂತಾಗಿದೆ. ಈ ತಪ್ಪು ಮಾಹಿತಿ ಪೋಲೀಸರಷ್ಟೇ ಅಲ್ಲ ಸಾರ್ವಜನಿಕರನ್ನು ಸ್ವಲ್ಪ ಕಾಲ ಗೊಂದಕ್ಕೀಡು ಮಾಡಿತು. ಈ ಬಗ್ಗೆ ಮೈಸೂರು ಐ.ಜಿ.ಪಿ ಅವರನ್ನು ಸಂಪರ್ಕಿಸಲಾಗಿ ಘಟನೆ ಬಗ್ಗೆ ಮಾಹಿತಿ ತಿಳಿದಿಲ್ಲ. ಆಯಾ ವಲಯದ ವರೀಷ್ಠಾಧಿಕಾರಿಗಳಿಂದ ಮಾಹಿತಿ ತಿಳಿಯಲಾಗುತ್ತದೆ ನಂತರ ಅದರ ಬಗ್ಗೆ ಕ್ರಮವಸಹಿಸುತ್ತೇವೆ ಎಂದು ಉತ್ತರಿಸಿದರು. ಚಾಮರಾಜನಗರ ಪೊಲೀಸ್ ವರೀಷ್ಠಾದಿಕಾರಿ ಕುಲದೀಪ್ ಕುಮಾರ್ ಆರ್ ಜೈನ್ ಅವರನ್ನು ಸಂಪರ್ಕಿಸಲಾಗಿ, ಮಾದ್ಯಮಗಳಲ್ಲಿ ಬಂದ ಸುದ್ದಿ ಸುಳ್ಳಾಗಿದೆ ಎಂದು ಸ್ಷಷ್ಟಪಡಿಸಿದರಲ್ಲದೆ ಅಗತ್ಯ ದೂರು ಬಂದರೆ ಕ್ರಮತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಒಂದು ಮಾಹಿತಿ ಪ್ರಕಾರ ಸುಳ್ಳು ಸುದ್ದಿ ಹರಡಿದ ಗುಂಪಿನಲ್ಲಿ ಪೋಲೀಸ್ ಇಲಾಖೆಯನ್ನೆ ತೇಜೋವದೆ, ವ್ಯಂಗ್ಯವಾಡಿರುವ ಪದಳಿಂದ ಕೂಡಿರುವ ಪದ ಬಳಕೆ ಮಾಡಿರುವಂತಹ ಅಂಶಗಳು ಹರಿದಾಡಿದೆ ಎಂದು ಹೇಳಲಾಗುತ್ತಿದೆ. ಕಾನೂನಿಗೆ ವಿರುದ್ದವಾದ ಮಾಹಿತಿ ಸಂದೇಶ ಕಳಿಸಿದರೂ ಅದು ಕಾನೂನು ಕ್ರಮತೆಗೆದುಕೊಳ್ಳಬೇಕಾಗುತ್ತದೆ ಅಷ್ಟೇ ಅಲ್ಲ ಜನರನ್ನು ಭಯಬೀತರನ್ನಾಗಿಸುವಂತಹ ಸಂದೇಶ ರವಾನಿಸಿದರೂ ಬಾರತೀಯ ದಂಡ ಸಂಹಿತೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕರಣ ದಾಖಲಿಸಿಕೊಂಡು ವಾಟ್ಸಾಫ್ ಅಲ್ಲಿ ಹರಿದಾಡಿದ ತಪ್ಪು ಮಾಹಿತಿ ಎಲ್ಲಿಂದ ಬಂತು, ಹೇಗೆ ಹರಡಿತು ಎನ್ನುವ ಮೂಲಾಂಶಗಳನ್ನು ಪತ್ತೆ ಮಾಡಬೇಕಾಗಿದೆ. ಇಲ್ಲವಾದರೆ ಸುಳ್ಳು ಸುಳ್ಳು ಸುದ್ದಿಗಳೆ ಮುಂದೊಂದು ದಿನ ನಿಜವಾದರೆ ಇಲಾಖೆಯೆ ತಲೆದಂಡವಾಗುವುದರಲ್ಲಿ ಸಂಶಯವೇ ಇಲ್ಲ ಎಂದರೆ ತಪ್ಪಾಗಲಾರದು. ****************************************************

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*

  ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*    ಚಾಮರಾಜನಗರ, ಸೆಪ್ಟೆಂಬರ್ 28 :- ಈ ಬಾರಿಯ ರಾಷ್ಟ್ರೀಯ ಲೋ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು