Saturday, 6 May 2017

06=05=25017 ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 06 - ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2017-18ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯ ಪಡೆಯಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಮತ್ತು ಅದರ ಉಪ ಸಮುದಾಯಗಳನ್ನು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000ಗಳು ಪಟ್ಟಣ ಪ್ರದೇಶದವರಿಗೆ ರೂ.55,000ಗಳ ಒಳಗಿರಬೇಕು, ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000ಗಳು. 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಆಧಾರ್ ಸಂಖ್ಯೆ ಹೊಂದಿರಬೇಕು. ಅರ್ಜಿದಾರರÀು ಐಎಫ್‍ಸಿ ಕೋಡ್ ಹೊಂದಿರುವ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು.
ಚೈತನ್ಯ ಸಬ್ಸಿಡಿ ಕಂ ಸಾಫ್ಟ್‍ಲೋನ್ ಯೋಜನೆಯಡಿ ಕೃಷಿ, ವ್ಯಾಪಾರ, ಸಾರಿಗೆ ಕೈಗಾರಿಕೆ, ಸೇವಾ ವಲಯದಲ್ಲಿ ಬರುವ ಆರ್ಥಿಕ ಚಟುವಟಿಕೆಗಳಿಗೆ ಗರಿಷ್ಟ ರೂ. 5 ಲಕ್ಷಗಳವರೆಗೆ ಸಾಲ ಹಾಗೂ ನಿಗಮದಿಂದ ಶೇ.20ರಷ್ಟು ಗರಿಷ್ಠ ರೂ.1 ಲಕ್ಷಗಳ ಶೇಕಡ 4ರ ಬಡ್ಡಿ ದರದಲ್ಲಿ ಮಾರ್ಜಿನ್ ಹಣ. ರೂ.1 ಲಕ್ಷಕ್ಕಿಂತ ಕಡಿಮೆ ಇರುವ ಸಾಲಕ್ಕೆ ಶೇ.30ರಷ್ಟು ಅಥವಾ ಗರಿಷ್ಟ ರೂ. 10 ಸಾವಿರಗಳ ಸಹಾಯಧನ (ಸಬ್ಸಿಡಿ) ದೊರೆಯಲಿದೆ.
ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆಯಡಿ ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷಗಳ ಮಿತಿಯಲ್ಲಿದ್ದು, ಪರೀಕ್ಷೆ ಮುಖಾಂತರ ಮೆರಿಟ್ ಆಧಾರದ ಮೇಲೆ ಪ್ರವೇಶ ಪಡೆದು, ವಿವಿಧ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಅವಧಿಗೆ ಶೇ.2ರ ಬಡ್ಡಿ ದರದಲ್ಲಿ ಗರಿಷ್ಠ ವಾರ್ಷಿಕ ರೂ.1 ಲಕ್ಷಗಳವರೆಗೆ ಸಾಲ ಒದಗಿಸಲಾಗುವುದು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ     ಬಡ್ಡಿರಹಿತ ಸಾಲ ಯೋಜನೆ ಲಭ್ಯವಿದೆ.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಚಟುವಟಿಕೆ ಅನುಸಾರ ಗರಿಷ್ಠ ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು ಲಭಿಸಲಿದ್ದು ಇದರಲ್ಲಿ ಗರಿಷ್ಟ ಶೇ. 15ರಷ್ಟು ಸಹಾಯಧನ. ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.
ಕಿರುಸಾಲ ಸೌಲಭ್ಯ ಯೋಜನೆಯಡಿ ಸ್ವ ಸಹಾಯ ಗುಂಪುಗಳ ಸದಸ್ಯರು ಕೈಗೊಳ್ಳುವ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರದ ಚಟುವಟಿಕೆಗಳಿಗೆ ಅಂದರೆ ಹಣ್ಣು, ತರಕಾರಿ, ಹಾಲು, ಹೂ ಮಾರುವವರು, ತಳ್ಳುವ ಗಾಡಿ ವ್ಯಾಪಾರಿಗಳು ಮುಂತಾದ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಿಗೆ ವಾರ್ಷಿಕ ಶೇಕಡ 4ರ ಬಡ್ಡಿ ದರದಲ್ಲಿ ಗರಿಷ್ಠ  10 ಸಾವಿರ ರೂ. ಸಾಲ ಹಾಗೂ 5 ಸಾವಿರ ರೂ.ಗಳ ಸಹಾಯಧನ ನೀಡಲಾಗುವುದು. ಅರ್ಜಿದಾರರು ಬಿ.ಪಿ.ಎಲ್ ಕುಟುಂಬಕ್ಕೆ ಸೇರಿರಬೇಕು.
ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ ಯೋಜನೆಯಡಿ ಹಿಂದುಳಿದ ವರ್ಗಗಳ ಸಾಂಪ್ರದಾಯಿಕ ವೃತ್ತಿದಾರರು ಅಥವಾ ವೃತ್ತಿ ಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ, ಆಧುನಿಕ ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆಯನ್ನು ಮೇಲ್ದರ್ಜೆಗೇರಿಸಲು, ವೃತ್ತಿ ಅನುಸಾರ ಗರಿಷ್ಠ ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಿದ್ದು ಇದರಲ್ಲಿ ಗರಿಷ್ಠ ಶೇ. 15ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.2ರ ಬಡ್ಡಿ ದರದಲ್ಲಿ ಸÁಲ ನೀಡಲಾಗುವುದು.
ಗಂಗಾ-ಕಲ್ಯಾಣ ಯೋಜನೆ- ವೈಯಕ್ತಿಕ ಕೊಳವೆಬಾವಿ ಯೋಜನೆಯಡಿ 2.50 ಲಕ್ಷ ರೂ. ವೆಚ್ಚದಲ್ಲಿ ಕೊಳವೆ ಬಾವಿ ಕೊರೆಯಿಸಿ ಅಗತ್ಯ ಪರಿಕರಗಳನ್ನು ಒದಗಿಸಲಾಗುತ್ತದೆ. ಸಾಮೂಹಿಕ ನೀರಾವರಿ ಯೋಜನೆಯಡಿ ಕನಿಷ್ಠ 3 ಜನರು ಹೊಂದಿರುವ 8 ರಿಂದ 15 ಎಕರೆ ಜಮೀನಿಗೆ ರೂ. 4 ಲಕ್ಷಗಳ ವೆಚ್ಚದಲ್ಲಿ 2 ಕೊಳವೆ ಬಾವಿ, 15 ಎಕರೆಗಿಂತ ಹೆಚ್ಚಿನ ಜಮೀನಿಗೆ 6 ಲಕ್ಷ ರೂ.ಗಳ ವೆಚ್ಚದಲ್ಲಿ 3 ಕೊಳವೆಬಾವಿ ಕೊರೆಯಿಸಿ ಪಂಪ್‍ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಮಡಿವಾಳ, ಸವಿತ, ಕುಂಬಾರ, ತಿಗಳ ಮತ್ತು ಉಪ್ಪಾರ ಸಮುದಾಯಗಳ ಅಭಿವೃದ್ದಿಗೆ ವಿಶೇಷ ಆರ್ಥಿಕ ನೆರವು ನೀಡಲಾಗುತ್ತದೆ.
ಮಡಿವಾಳ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಡಿ ದೋಬಿವೃತ್ತಿ ನಿರ್ವಹಣೆಗೆ ಗರಿಷ್ಠ ರೂ.2 ಲಕ್ಷಗಳ ವರೆಗೆ ಶೇ.2ರ ಬಡ್ಡಿ ದರದಲ್ಲಿ ಸಾಲ. ಇದರಲ್ಲಿ ಶೇ.15ರಷ್ಟು ಸÀಹಾಯಧನ. ಮಹಿಳಾ ಸ್ವಸಹಾಯ ಗುಂಪುಗಳಿಗೆ ರೂ.3 ಲಕ್ಷಗಳವರೆಗೆ ಆರ್ಥಿಕ ನೆರವು.  ವೈಯಕ್ತಿಕ ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ. ಅರಿವು-ಶೈಕ್ಷಣಿಕ ಸಾಲ, ಕೌಶಲ್ಯಾಭಿವೃದ್ಧಿ ತರಬೇತಿ, ಡಿಟಿಪಿ ತರಬೇತಿ, ವಾಹನ ಚಾಲನ ತರಬೇತಿ, ಬ್ಯುಟಿಷಿಯನ್, ರೆಡಿಮೇಡ್ ಗಾರ್ಮೆಂಟ್ಸ್ ತರಬೇತಿ ಇತ್ಯಾದಿ ನೀಡಲಾಗುತ್ತದೆ.
ಸವಿತ ಸಮಾಜ ಅಭಿವೃದ್ಧಿ ಕಾರ್ಯಕ್ರಮಗಳಡಿ ಕ್ಷೌರಿಕ ವೃತ್ತಿ ನಿರ್ವಹಣೆಗೆ ರೂ.2.00 ಲಕ್ಷಗಳವರೆಗೆ ಶೇ. 2ರ ಬಡ್ಡಿ ದರದಲ್ಲಿ ಸಾಲ. ಇದರಲ್ಲಿ ಶೇ.15ರಷ್ಟು ಸಹಾಯಧನ. ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ. 2  ಲಕ್ಷಗಳವರೆಗೆ ಶೇ.4ರ ಬಡ್ಡಿ ದರದಲ್ಲಿ ಸಾಲ, ಇದರಲ್ಲಿ ಶೇ. 15ರಷ್ಡು ಸಹಾಯಧನ. ನಾದಸ್ವರ ಡೋಲು ಉಪಕರಣ ಕೊಳ್ಳಲು ವೈಯುಕ್ತಿಕ 10 ಸಾವಿರ ರೂ.ಗಳಿಂದ 25 ಸಾವಿರ ರೂ.ಗಳವರೆಗೆ ಆರ್ಥಿಕ ನೆರವು. ಇದರಲ್ಲಿ ಶೇ.30ರಷ್ಟು ಸಹಾಯಧನ ಲಭ್ಯವಿದೆ.
ತಿಗಳ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮದಡಿ ಹೂವು ತರಕಾರಿ ಮಾರಾಟಗಾರರಿಗೆ ತರಕಾರಿ ಹೂವು ಬೆಳೆ ಬೆಳೆಯಲು ಗರಿಷ್ಠ 2 ಲಕ್ಷ ರೂ.ಗಳವರೆಗೆ ಶೇ. 2ರ ಬಡ್ಡಿ ದರದಲ್ಲಿ ಸಾಲ, ಇದರಲ್ಲಿ ಶೇ. 15ರಷ್ಟು ಸಹಾಯಧನ. ವೈಯಕ್ತಿಕ ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ. ಅರಿವು-ಶೈಕ್ಷಣಿಕ ಸಾಲ, ಅನಿಮೇಷನ್, ಆಟೋಕ್ಯಾಡ್, ಸೌಂಡ್ ಇಂಜಿನಿಯರಿಂಗ್, ಡಿಟಿಪಿ ತರಬೇತಿ, ವಾಹನ ಚಾಲನ ತರಬೇತಿ, ರೆಡಿಮೇಡ್ ಗಾರ್ಮೆಂಟ್ಸ್ ತರಬೇತಿ ನೀಡಲಾಗುವುದು.
ಕುಂಬಾರ ಸಮುದಾಯದ ಅಭಿವೃದ್ಧಿ ಕಾರ್ಯಕ್ರವiದಡಿ ಕುಂಬಾರಿಕೆ ವೃತ್ತಿ ನಿರ್ವಹಣೆಗೆ ಗರಿಷ್ಟ 2 ಲಕ್ಷ ರೂ.ಗಳವರೆಗೆ ಶೇ.2ರ ಬಡ್ಡಿದರದಲ್ಲಿ ಸಾಲ. ಇದರಲ್ಲಿ ಶೇ. 15ರಷ್ಟು ಸಹಾಯಧನ. ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಟ 2 ಲಕ್ಷ ರೂ.ಗಳವರೆಗೆ ಶೇ.4ರ ಬಡ್ಡಿದರದಲ್ಲಿ ಸಾಲ. ಇದರಲ್ಲಿ ಶೇ.15ರಷ್ಟು ಸಹಾಯಧನ. ವೈಯಕ್ತಿಕ ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ. ಅರಿವು-ಶೈಕ್ಷಣಿಕ ಸಾಲ, ಕುಂಬಾರಿಕೆ ಕಲಾತ್ಮಕ ಉತ್ಪನ್ನಗಳ ತಯಾರಿಕೆ. ಡಿಟಿಪಿ ತರಬೇತಿ, ವಾಹನ ಚಾಲನ ತರಬೇತಿ, ರೆಡಿಮೇಡ್ ಗಾರ್ಮೆಂಟ್ಸ್ ತರಬೇತಿ ನೀಡಲಾಗುವುದು.
ಸಾರಾಯಿ ಮಾರಾಟ ನಿಷೇದದಿಂದ ಉದ್ಯೋಗ ಕಳೆದುಕೊಂಡಿರುವ ವೆಂಡರ್, ಮೂರ್ತೆದಾರರು, ಈಡಿಗ ಇತ್ಯಾದಿ ಸಮುದಾಯಗಳ ಸ್ವಯಂ ಉದ್ಯೋಗ ಕೈಗೊಳ್ಳಲು  ಆರ್ಥಿಕ ಚಟುವಟಿಕೆ ಅನುಸಾರ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಲ್ಲಿ ಗರಿಷ್ಠ 2 ಲಕ್ಷ ರೂ.ಗಳವರೆಗೆ ಸಾಲ ಶೇ. 4ರ ಬಡ್ಡಿದೆರದಲ್ಲಿ. ಇದರಲ್ಲಿ ಶೇ.15ರಷ್ಟು ಸಹಾಯಧನ ದೊರೆಯಲಿದೆ.
ಡಾ. ಡಿ.ಎಂ. ನಂಜುಂಡಪ್ಪ ವರದಿಯಲ್ಲಿ ಗುರುತಿಸಿರುವ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾವಂತ ನಿರುದ್ಯೋಗಿಗಳ (ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ) 10 ಸದಸ್ಯರನ್ನು ಒಳಗೊಂಡ ಸ್ವಸಹಾಯ ಗುಂಪುಗಳಿಗೆ 3.50 ಲಕ್ಷ ರೂ.ಗಳÀ ಆರ್ಥಿಕ ನೆರವು ನೀಡಲಿದ್ದು ಇದರಲ್ಲಿ ಶೇ. 30ರಷ್ಟು ಸಹಾಯಧನವಾಗಿ ಉಳಿಕೆ ಹಣವನ್ನು ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲವಾಗಿ ನೀಡಲಾಗುವುದು.
ಮಡಿವಾಳ ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಬ್ಯಾಂಕುಗಳ ಮೂಲಕ ಟ್ಯಾಕ್ಸಿ ಕೊಳ್ಳಲು 5 ಲಕ್ಷ ರೂ.ಗಳವರೆಗೆ ಸಾಲ ದೊರೆಯಲಿದೆ. ಇದರಲ್ಲಿ ನಿಗಮದಿಂದ ಶೇ. 20ರಷ್ಟು ಗರಿಷ್ಟ 1 ಲಕ್ಷ ರೂ.ಗಳ ಮಾರ್ಜಿನ್ ಹಣ, ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ. ಉಳಿಕೆ ಮೊತ್ತ ಬ್ಯಾಂಕ್ ಪಾಲಿನ ಸಾಲವಾಗಿರುತ್ತದೆ.
ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ದಿ ನಿಗಮದÀ ಸಾಲ ಯೋಜನೆಯಡಿ ಕೃಷಿವಲಯ, ಸಣ್ಣ ವ್ಯಾಪಾರ, ಸೇವಾ ವಲಯ, ಸಾರಿಗೆ ವಲಯದಲ್ಲಿ ಆಟೋರಿಕ್ಷ, ಗೂಡ್ಸ್ ಆಟೋರಿಕ್ಷ, ನ್ಯೂ ಸ್ವರ್ಣಿಮಾ, ಮೈಕ್ರೋ ಫೈನಾನ್ಸ್ ವಲಯಗಳಲ್ಲಿ ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗ ಕೈಗೊಳ್ಳಲು ಆಯಾ ವಲಯದ ಅನುಮೋದಿತ ಘಟಕ ವೆಚ್ಚದ ಮಿತಿಗೊಳಪಟ್ಟು ಗರಿಷ್ಠ ರೂ.10ಲಕ್ಷ ಗಳವರೆಗೆ ವಾರ್ಷಿಕ ಶೇಕಡ 6 ರಿಂದ 7ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗವುದು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಿದ್ದು ಇಂಜಿನಿಯರಿಂಗ್, ಮೆಡಿಕಲ್, ವೆಟರ್ನರಿ, ಕಾನೂನು, ಐ.ಸಿ.ಡಬೂ.್ಯಎ, ಸಿ.ಎ, ಹೋಟೆಲ್ ಮ್ಯಾನೇಜ್‍ಮೆಂಟ್ ಇತ್ಯಾದಿ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ.2.50 ಲಕ್ಷ ಅಥವಾ ಕೋರ್ಸ್‍ನ ಅವಧಿಗೆ ಒಟ್ಟು ರೂ.10ಲಕ್ಷಗಳ ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು.
ವಿದೇಶಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಅವಧಿಗೆ ರೂ.20ಲಕ್ಷ ಸಾಲವನ್ನು ಶೇ. 4ರ ಬಡ್ಡಿದರ. ಹಾಗೂ ವಿದ್ಯಾರ್ಥಿನಿಯರಿಗೆ ಶೇ.3.5ರ ಬಡ್ಡಿದರದಲ್ಲಿ ನೀಡಲಾಗುವುದು.
ಸ್ವಯಂ ಸಕ್ಷಮ ಯೋಜನೆಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ಲಿನಿಕ್ ಸ್ಥಾಪಿಸಲು ವಕೀಲ ವೃತ್ತಿ ಆರಂಭಿಸಲು, ಮೆಡಿಕಲ್ ಸ್ಟೋರ್ ಪ್ರಾರಂಭಿಸಲು, ಇತ್ಯಾದಿ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.10 ಲಕ್ಷಗಳವರೆಗೆ ಗರಿಷ್ಠ ಶೇ. 6 ರಿಂದ 7ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.
ಮಹಿಳಾ ಸಮೃದ್ಧಿ ಯೋಜನೆಯಡಿ ಹಿಂದುಳಿದ ವರ್ಗಗಳ ಮಹಿಳಾ ಸ್ವ ಸಹಾಯ ಗುಂಪುಗಳು, ಸ್ತ್ರೀ ಶಕ್ತಿ ಗುಂಪುಗಳು, ಸ್ವ ಶಕ್ತಿ ಗುಂಪುಗಳ ಮೂಲಕ ಆದಾಯ ತರುವಂತಹ ಆರ್ಥಿಕ ಉದ್ದೇಶಗಳಿಗೆ ಘಟಕ ವೆಚ್ಚ ಆಧರಿಸಿ ಗರಿಷ್ಠ ಪ್ರತಿ ಫಲಾನುಭವಿಗೆ ರೂ.35,000ಗಳ ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ನೀಡಲಾಗುವುದು.
ಮೈಕ್ರೋ ಫೈನಾನ್ಸ್ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಸ್ವ ಸಹಾಯ ಗುಂಪುಗಳು, ಸ್ತ್ರೀ ಶಕ್ತಿ, ಪುರುಷ ಗುಂಪುಗಳು, ಸ್ವ ಶಕ್ತಿ ಗುಂಪುಗಳ ಮೂಲಕ ಆದಾಯ ತರುವಂತಹ ಆರ್ಥಿಕ ಉದ್ದೇಶಗಳಿಗೆ, ಘಟಕ ವೆಚ್ಚ ಆಧರಿಸಿ ಗರಿಷ್ಠ ಪ್ರತಿ ಫಲಾನುಭವಿಗೆ ರೂ.35,000ಗಳ ಸಾಲವನ್ನು ಶೇ. 5ರ ಬಡ್ಡಿ ದgದಲ್ಲಿ ನೀಡಲಾಗುವುದುÀ.
ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ(ನಿ), ನಂ:305, 3ನೇ ಮಹಡಿ, ಜಿಲ್ಲಾಡಳಿತ ಭವನ ಚಾಮರಾಜನಗರ ಜಿಲ್ಲೆ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಉಚಿತ ಅರ್ಜಿಗಳನ್ನು ಮೇ 10 ರಿಂದ 25ರೊಳಗೆ ಪಡೆಯಬಹುದು. (ಅರ್ಜಿ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು) ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಇಲ್ಲಿಯೂ ಸಹ ಅರ್ಜಿ ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 26 ರಿಂದ ಜೂನ್ 9ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ. 8ರಂದು ವಿವಿಧ ಮಹಾತ್ಮರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಚಾಮರಾಜನಗರ, ಮೇ. 06 :- ಜಿಲ್ಲಾಡಳಿತದ ವತಿಯಿಂದ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ, ಸಂತಕವಿ ಸರ್ವಜ್ಞ, ದಲಿತ ವಚನಕಾರರು, ದೇವರ ದಾಸಿಮಯ್ಯ ಹಾಗೂ ಮಹಾವೀರ ಜಯಂತಿಯನ್ನು ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮೇ 8ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯ, ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ನಾಗರಿಕರು ಹಾಜರಾಗಿ ಅವಶ್ಯ ಸಲಹೆ ಸಹಕಾರ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ಕೋರಿದ್ದಾರೆ.






 

Friday, 5 May 2017

05-05-2017 ತಾಲೂಕುಗಳಿಗೆ ಭ್ರಷ್ಠಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ತಾಲೂಕುಗಳಿಗೆ ಭ್ರಷ್ಠಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಮೇ. 05 :- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಭ್ರಷ್ಠಾಚಾರ ನಿಗ್ರಹದಳ ಅಧಿಕಾರಿಗಳು ಮೇ 6 ರಿಂದ 31ರವರೆಗೆ ಆಯಾ ದಿನದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಮೇ 6ರಂದು ಗುಂಡ್ಲುಪೇಟೆ ಸರ್ಕಾರಿ ಅತಿಥಿಗೃಹದಲ್ಲಿ, ಮೇ 9ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸುವರು.
ಮೇ 17ರಂದು ಯಳಂದೂರಿನ ಸರ್ಕಾರಿ ಅತಿಥಿಗೃಹದಲ್ಲಿ, ಮೇ 24ರಂದು ಕೊಳ್ಳೇಗಾಲದ ಸರ್ಕಾರಿ ಅತಿಥಿಗೃಹದಲ್ಲಿ ದೂರುಗಳನ್ನು ಸ್ವೀಕರಿಸುವರು.
ಮೇ 31ರಂದು ಹನೂರಿನ ಸರ್ಕಾರಿ ಅತಿಥಿಗೃಹದಲ್ಲಿ ದೂರುಗಳನ್ನು ಸ್ವೀಕರಿಸುವರು.
ಭ್ರಚ್ಠಾಚಾರ ನಿಗ್ರಹ ದಳ 1988 ಕಾಯಿದೆಯಡಿ ಸರ್ಕಾರಿ ಕಚೇರಿ ಕೆಲಸಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಚ್ಠಾಚಾರ ನಿಗ್ರಹ ದಳದ ಕಚೇರಿ ಪ್ರಕಟಣೆ ತಿಳಿಸಿದೆ.












04-05-2017 ಆರ್ ಟಿ ಇ ಅಡಿ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಬಕಾರಿ ರಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ : ನಿಷೇಧಾಜ್ಞೆ

ಅಬಕಾರಿ ರಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ : ನಿಷೇಧಾಜ್ಞೆ

ಚಾಮರಾಜನಗರ, ಮೇ. 04 :- ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಪುರುಷ ಹಾಗೂ ಮಹಿಳಾ  ಅಬಕಾರಿ ರಕ್ಷಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಮೇ 7ರಂದು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.
     ಚಾಮರಾಜನಗರ ಪಟ್ಟಣದ ಸೇಂಟ್ ಪೌಲ್ಸ್ ಪ್ರೌಢಶಾಲೆ, ಸೇವಾ ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಸೇವಾ ಭಾರತಿ ಪ್ರಥಮದರ್ಜೆ ಕಾಲೇಜು,  ಶಂಕರಪುರ, ಸೇವಾ ಭಾರತಿ ಆಂಗ್ಲ ಮಾಧ್ಯಮ ಶಾಲೆ, ಚೆನ್ನಿಪುರದಮೋಳೆ ರಸ್ತೆ, ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜು, ಪ್ರೌಢಶಾಲಾ ವಿಭಾಗ, ಸರ್ಕಾರಿ ಪದವಿಪೂವರ್À ಬಾಲಕಿಯರ ಪ್ರೌಢಶಾಲೆ ವಿಭಾಗ, ಸತ್ತಿ ರಸ್ತೆ, ಎಂ.ಸಿ.ಎಸ್. ಪಬ್ಲಿಕ್ ಶಾಲೆ, ಗಾಳಿಪುರ, ಕಸಬಾ, ಸೋಮವಾರಪೇಟೆ, ಯೂನಿವರ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶ್ರೀದೇವಿ ಟೆಕ್ಸ್‍ಟೈಲ್ಸ್ ಹತ್ತಿರ, ಕರಿನಂಜನಪುರ, ಆದರ್ಶ ವಿದ್ಯಾಲಯ, ಬಿಇಓ ಕಚೇರಿ ಹಿಂಭಾಗ, ಸತ್ತಿ ರಸ್ತೆ, ಜೆ.ಎಸ್.ಎಸ್ ಬಾಲಕಿಯರ ಪ್ರೌಢಶಾಲೆ, ಜೆ.ಎಸ್.ಎಸ್. ಬಾಲಕರ ಪ್ರೌಢಶಾಲೆ, ಶ್ರೀರಾಮಚಂದ್ರ ಶಿಕ್ಷಕರ ತರಬೇತಿ ಸಂಸ್ಥೆ, ಪಿಡಬ್ಲ್ಯೂಡಿ ಬಡಾವಣೆ, ಸಿದ್ದಾರ್ಥ ಪ್ರಥಮದರ್ಜೆ ಕಾಲೇಜು, ಕೆ ಹೆಚ್ ಬಿ ಕಾಲೋನಿ, ಕರಿನಂಜನಪುರ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಯೂನಿವರ್ಸಿಟಿ ಆಫ್ ಮೈಸೂರು, ಜೋಡಿ ರಸ್ತೆ, ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸಿ ಆರ್ ಬಾಲರಪಟ್ಟಣ ಪ್ರೌಢಶಾಲೆ ಪÀರೀಕ್ಷಾ ಕೇಂದ್ರಗಳಾಗಿದೆ.
     ಪರೀಕ್ಷಾ ದಿನದಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
     ನಿಷೇಧಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ಆದೇಶದಲ್ಲಿ ತಿಳಿಸಿದ್ದಾರೆ.

ಉಚಿತ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 4 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲಿದ್ದು ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿssess.ಞಚಿಡಿ.ಟಿiಛಿ.iಟಿ ನೋಡಬಹುದು. ಅಲ್ಲದೆ ಸಹಾಯವಾಣಿ 080-65970009 ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದೆಂದು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ  ತಿಳಿಸಿದ್ದಾರೆ.

ಆರ್ ಟಿ ಇ ಅಡಿ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ

ಚಾಮರಾಜನಗರ, ಮೇ. 4 :- 2017-18ನೇ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಮಕ್ಕಳ ಶಿಕ್ಷಣ ಹಕ್ಕು ಕಾಯಿದೆ (ಆರ್ ಟಿ ಇ) ಸೆಕ್ಷನ್ 12(1)(ಸಿ)ಯಡಿ ದಾಖಲಾಗುವ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದಲೇ ಉಚಿತವಾಗಿ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಲಾಗುತ್ತದೆ. ಆರ್‍ಟಿಇ ವಿದ್ಯಾರ್ಥಿಗಳಿಂದ ಇದಕ್ಕಾಗಿ ಯಾವುದೇ ಶುಲ್ಕ ಸಂಗ್ರಹಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಲೇಖನ ಸಾಮಗ್ರಿಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲು ಪೋಷಕರು ಸ್ವತಂತ್ರರಾಗಿದ್ದಾರೆ. ಆದರೆ ಶಿಕ್ಷಣ ಹಕ್ಕು ಕಾಯಿದೆಯಡಿ ದಾಖಲಾಗುವ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದಲೇ ಪಠ್ಯಪುಸ್ತಕ ಸರಬರಾಜಾಗಲಿದೆ. ಕರ್ನಾಟಕ ಶಿಕ್ಷಣ ಕಾಯಿದೆಯಡಿ ಒಳಪಟ್ಟ ಐಸಿಎಸ್‍ಇ, ಸಿಬಿಎಸ್‍ಇ ಪಠ್ಯಕ್ರಮ ಅನುಸರಿಸುತ್ತಿರುವ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಿಗೂ ಸಹ ಶಿಕ್ಷಣ ಕಾಯಿದೆ ನಿಬಂಧನೆಗಳು ಅನ್ವಯವಾಗಲಿದೆ. ಆದುದರಿಂದ ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯಿದೆಯಡಿ ಸಂಬಂಧಪಟ್ಟ ಶಾಲೆಗಳ ಮಾನ್ಯತೆಯನ್ನು ಹಿಂತೆಗೆದುಕೊಂಡು ದಂಡ ವಿಧಿಸಲಾಗುವುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು  ತಿಳಿಸಿದ್ದಾರÉ.

 ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.  1,29,84,322/- 

ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:- ದಿನಾಂಕ:04-05-2017ರ ಗುರುವಾರದಂದು ಬೆಳಿಗ್ಗೆ  7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ.ಎಂ.ಗಾಯತ್ರಿ, ಕೆ.ಎ.ಎಸ್.(ಹಿರಿಯ ಶ್ರೇಣಿ) ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ  ಪರ್ಕಾವಣೆಯಲ್ಲಿ ಶ್ರೀ ಮ.ಮ. ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ  ಪ್ರಭಾರ  ಉಪ ಕಾರ್ಯದರ್ಶಿಗಳಾದ ಶ್ರೀ ಎಂ.ಬಸವರಾಜು  ರವರು, ಸಹಾಯಕ ಅಭಿಯಂತರರಾದ ಶ್ರೀ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ,  ಕಛೇರಿಯ ಅಧೀಕ್ಷಕರಾದ  ಶ್ರೀ ಬಿ.ಮಾದರಾಜು ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಛೇರಿಯ  ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಶ್ರೀ ಷಣ್ಮುಗ ವರ್ಮ, ಆರಕ್ಷಕ ನಿರೀಕ್ಷಕರು, ಮಹದೇಶ್ವರಬೆಟ್ಟ ಹಾಗೂ ಆರಕ್ಷಕ  ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್  & ಸಿಬ್ಬಂದಿ ವರ್ಗದವರು ಹಾಜರಿದ್ದರು. ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.  1,29,84,322/- ( ಒಂದು ಕೋಟಿ ಇಪ್ಪತ್ತೊಂಬತ್ತು ಲಕ್ಷದ ಎಂಬತ್ತ ನಾಲ್ಕು ಸಾವಿರದ ಮೂರು ನೂರ ಇಪ್ಪತ್ತೆರಡು ಮಾತ್ರ) ಬಂದಿರುತ್ತದೆ. ಇದಲ್ಲದೇ ಚಿನ್ನದ  ಪದಾರ್ಥಗಳು 0. 071 ( ಎಪ್ಪತ್ತೊಂದು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 1.540(ಒಂದು ಕೆಜಿ ಐದುನೂರ ನಲವತ್ತು ಗ್ರಾಂ) ದೊರೆತಿರುತ್ತದೆ






Wednesday, 3 May 2017

ಬಿಎಸ್‍ಎಫ್ ಯೋಧರಾದ ಪುಟ್ಟಸ್ವಾಮಿ ಅವರ ಅಂತ್ಯಕ್ರಿಯೆ ಚಿತ್ರಗಳು

  ಜಿಲ್ಲೆಯ ಬಿಎಸ್‍ಎಫ್ ಯೋಧರಾದ ಪುಟ್ಟಸ್ವಾಮಿ ಅವರ ಅಂತ್ಯಕ್ರಿಯೆ ಚಿತ್ರಗಳು








ಗುಂಡ್ಲುಪೇಟೆ ಪಟ್ಟಣದ ನಿವಾಸಿಯಾಗಿದ್ದ ಎನ್.ಪುಟ್ಟಸ್ವಾಮಿ ಅವರು ಬಿಎಸ್‍ಎಫ್ ಯೋಧರಾಗಿ ಅಸ್ಸಾಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಾವನ್ನಪ್ಪಿದ್ದರು.




03-05-2017 ಜಿಲ್ಲೆಯ ವಿವಿಧೆಡೆ ಬಾಲ್ಯ ವಿವಾಹ ನಿಷೇಧ ಕುರಿತ ಪ್ರಚಾರಾಂದೋಲನ

ಜಿಲ್ಲೆಯ ವಿವಿಧೆಡೆ ಬಾಲ್ಯ ವಿವಾಹ ನಿಷೇಧ ಕುರಿತ ಪ್ರಚಾರಾಂದೋಲನ

ಚಾಮರಾಜನಗರ, ಮೇ. 3 :- ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವ ನಿಟ್ಟಿನಲ್ಲಿ ಮನನ ಎಂಬ ವಿನೂತನ ಪ್ರಚಾರಾಂದೋಲನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಮ್ಮಿಕೊಂಡಿದೆ.
ಪ್ರತಿ ತಾಲೂಕಿಗೆ ಸರ್ಕಾರಿ ಬಾಲಮಂದಿರದ ಓರ್ವ ಮಗುವನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿಕೊಂಡು ಮನೆಮನೆಗೆ ಭೇಟಿ ನೀಡಿ ಬಾಲ್ಯ ವಿವಾಹ ನಿಷೇಧ ಕುರಿತ ಪ್ರಚಾರಾಂದೋಲನವನ್ನು ನಡೆಸಲಾಗುತ್ತಿದೆ.
ಮೇ 3ರಂದು ಚಾಮರಾಜನಗರ ತಾಲೂಕಿನ ಅಮಚವಾಡಿ, ಲಕ್ಷ್ಮೀಪುರ, ಮೇ 4ರಂದು ಹನೂರು ಭಾಗದ ಎಲ್ಲೆಮಾಳ ವ್ಯಾಪ್ತಿಯ ಚಂಗವಾಡಿ, ಮೇ 5ರಂದು ಕೊಳ್ಳೇಗಾಲ ತಾಲೂಕಿನ ಲಕ್ಷ್ಮೀಪುರ, ಮೇ 6ರಂದು ಚಾಮರಾಜನಗರ ತಾಲೂಕಿನ ಸಂತೆಮರಹಳ್ಳಿಮೋಳೆ, ಹೊಸಮೋಳೆ, ನಡುಕಲಮೋಳೆ, ಮೇ 8ರಂದು ಯಳಂದೂರು ತಾಲೂಕಿನ ಕಂದಹಳ್ಳಿ, ಮೇ 9ರಂದು ಕೊಳ್ಳೇಗಾಲ ತಾಲೂಕಿನ ಜಕ್ಕಳ್ಳಿ, ಸೋಲಿಗರ ಬೀದಿ, ಅರೆಪಾಳ್ಯ, ಮೇ 10ರಂದು ಗುಂಡ್ಲುಪೇಟೆ ತಾಲೂಕಿನ ಕಗ್ಗಳದಹುಂಡಿ, ಮಾದಯ್ಯನಹುಂಡಿ, ಮೇ 11ರಂದು ಹನೂರು ಭಾಗದ ಕಾಂಚಳ್ಳಿ, ಮೇ 12ರಂದು ಚಾಮರಾಜನಗರ ತಾಲೂಕಿನ ಬಡಗಲಮೋಳೆ, ತೆಂಕಲಮೋಳೆ, ಮೇ 15ರಂದು ಯಳಂದೂರು ತಾಲೂಕಿನ ಮಲಾರಪಾಳ್ಯ, ಟಿ. ಹೊಸೂರು, ಮೇ 16ರಂದು ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ, ಮೇ 17ರಂದು ಗುಂಡ್ಲುಪೇಟೆ ತಾಲೂಕಿನ ದೊಡ್ಡುಂಡಿ, ಚಿಕ್ಕುಂಡಿ, ಹಿರೀಕಾಟಿ, ಮೇ 18ರಂದು ಹನೂರು ಭಾಗದ ಪೊನ್ನಾಚಿ ಬಳಿ ಇರುವ ಎಲ್ಲಾ ಹಾಡಿಗಳು, ಮೇ 19ರಂದು ಚಾಮರಾಜನಗರ ತಾಲೂಕಿನ ಹೊಸಪೋಡು, ಮೂಕನಪಾಳ್ಯ, ಕೋಳಿಪಾಳ್ಯ, ಬೂತಾನಪೋಡು, ಮಾರಿಗುಡಿಪೋಡು, ಹೊಸಗೋಡೆ ಮದುವಿನಹುಂಡಿ, ಕನೇರ ಕಾಲೋನಿ, ಮೇ 20ರಂದು ಯಳಂದೂರು ತಾಲೂಕಿನ ಉಪ್ಪಿನಮೋಳೆ, ಮೇ 22ರಂದು ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ, ಮಾಡ್ರಳ್ಳಿ, ಮೇ 23ರಂದು ಹನೂರು ತಾಲೂಕಿನ ಬೂದಿಪಡಗ, ಹುಂಡೀಪಾಳ್ಯ, ಮೇ 24ರಂದು ಚಾಮರಾಜನಗರ ತಾಲೂಕಿನ ಸಾಗಡೆ, ಕೆಂಗಾಕಿ, ಬೆಟ್ಟದಪುರ, ಮೇ 25ರಂದು ಯಳಂದೂರು ತಾಲೂಕಿನ ಅಗರ, ಕಿನಕನಹಳ್ಳಿ, ಮಾಂಬಳ್ಳಿ, ಮೇ 26ರಂದು ಕೊಳ್ಳೇಗಾಲ ತಾಲೂಕಿನ ಬೂದಿಗಟ್ಟದೊಡ್ಡಿ ಗ್ರಾಮದ ಬಳಿ, ಮೇ 27ರಂದು ಯಳಂದೂರು ತಾಲೂಕಿನ ವೈ.ಕೆ. ಮೋಳೆ, ಗುಂಡ್ಲುಪೇಟೆ ತಾಲೂಕಿನ ಬೋಗಯ್ಯನಹುಂಡಿ, ಕುರುಬರಹುಂಡಿ ಹುಗ್ಗೀಸ್ ಕಾಲೋನಿ, ಮೇ 28ರಂದು ಹನೂರು ಭಾಗದ ಪಿ ಜಿ ಪಾಳ್ಯದ ಹತ್ತಿರವಿರುವ ಹಾಡಿಗಳಲ್ಲಿ ಪ್ರಚಾರಾಂದೋಲನ ಕಾರ್ಯಕ್ರಮ ನಡೆಯಲಿದೆ 

ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 3 - ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ  2017-18ನೇ ಸಾಲಿಗೆ ಆಸಕ್ತ ರೈತ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ವಲಯ ಯೋಜನೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಸೂಕ್ಷ್ಮ ನೀರಾವರಿ ಯೋಜನೆ)ಯಡಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ. ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ಲಭ್ಯ. ಮೊದಲ 2 ಹೆಕ್ಟೇರ್ ಪ್ರದೇಶಕ್ಕೆ ಶೇ.90ರಂತೆ ಮತ್ತು ಉಳಿದ 3 ಹೆಕ್ಟೇರ್ ಪ್ರದೇಶಕ್ಕೆ ಶೇಕಡಾವಾರು ಮಿತಿಯೊಳಗೆ ಸಹಾಯಧನ ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸ ತೋಟಗಳ ಸ್ಥಾಪನೆ ಕಾರ್ಯಕ್ರಮದಡಿ ಅಂಗಾಂಶ ಬಾಳೆ, ದಾಳಿಂಬೆ, ಪಪ್ಪಾಯ ಬೆಳೆಗಳ ಪ್ರದೇಶ ವಿಸ್ತರಣೆ ಮತ್ತು ತರಕಾರಿ ಬೇಸಾಯ ಕೈಗೊಳ್ಳಲು ಸಹಾಯಧನ ನೀಡಲಾಗುವುದು. ಸಮಗ್ರ ಕೀಟ, ರೋಗ  ಮತ್ತು ಪೋಷಕಾಂಶಗಳ ನಿರ್ವಹಣೆ, ಎರೆಹುಳು ಗೊಬ್ಬರ ಉತ್ಪಾದನಾ ಫಟಕ, ಜೀವಸಾರ ಉತ್ಪಾದನಾ ಘಟಕ ನಿರ್ಮಾಣ, ಸಮುದಾಯ ಹಾಗೂ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ, ಸಂರಕ್ಷಿತ ಬೇಸಾಯ ಮತ್ತು ಹಸಿರು ಮನೆ, ನೆರಳು ಚಪ್ಪರ ನಿರ್ಮಾಣ, ಪ್ಲಾಸ್ಟಿಕ್ ಹೊದಿಕೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ – ಟ್ರಾಕ್ಟರ್ (20 ಹೆಚ್‍ಪಿ), ಪವರ್ ಟಿಲ್ಲರ್ (8 ಹೆಚ್‍ಪಿ), ಕೊಯ್ಲೋತ್ತರ ನಿರ್ವಹಣೆಯಲ್ಲಿ ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಲಭಿಸಲಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅಂಗಾಂಶ ಕೃಷಿ ಬಾಳೆ ಬೆಳೆಯನ್ನು ನಿಖರ ಬೇಸಾಯ ಪದ್ಧತಿಯಲ್ಲಿ ಬೆಳೆಯಲು ನೀಡಲಿದೆ. ತೆಂಗು ಪುನಶ್ಚೇತನ ಕಾರ್ಯಕ್ರಮ ಇದರಲ್ಲಿ ಸೇರಿದೆ.
ಮಹಾತ್ಮಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೆಂಗು, ಮಾವು, ಸಪೋಟ, ಅಂಗಾಂಶ ಬಾಳೆ, ನುಗ್ಗೆ, ನೇರಳೆ, ನೆಲ್ಲಿ ಮುಂತಾದ ತೋಟಗಾರಿಕೆ ಬೆಳೆಗಳನ್ನು ಅಭಿವೃದ್ಧಿಪಡಿಸಲು ಮಾರ್ಗಸೂಚಿಯಂತೆ ಕೂಲಿ ಹಾಗೂ ಸಾಮಗ್ರಿ ವೆಚ್ಚ ನೀಡಲಾಗುವುದು. ವೈಯಕ್ತಿಕ ಕಾಮಗಾರಿಯಡಿ ಪುನಶ್ಚೇತನ, ಈರುಳ್ಳಿ ಶೇಖರಣಾ ಘಟಕ, ಕೊಳವೆಬಾವಿ, ಹಿಂಗು ಗುಂಡಿ, ಪೋಷಕಾಂಶ ಕೈತೋಟಕ್ಕೆ ನೆರವು ನೀಡಲಾಗುತ್ತದೆ.
ರಾಜ್ಯವಲಯ ಯೋಜನೆಯಡಿ ತೋಟಗಾರಿಕೆ ಬೆಳೆಗಳ ರೋಗ, ಕೀಟಗಳ ಸಮಗ್ರ ನಿಯಂತ್ರಣಕ್ಕೆ ನೆರವು ಲಭಿಸಲಿದೆ. ತೋಟಗಾರಿಕೆ ಬೆಳೆಗಳ ರೋಗ, ಕೀಟಗಳ ನಿಯಂತ್ರಣಕ್ಕಾಗಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರಂತೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ.90ರಂತೆ ಗರಿಷ್ಟ 2 ಹೆಕ್ಟೇರ್ ಮಿತಿಗೆ ಸಸ್ಯ ಸಂರಕ್ಷಣಾ ಔಷಧಿ ಖರೀದಿಸಿದ ರೈತರಿಗೆ ಸಹಾಯಧನವನ್ನು ಒದಗಿಸಲಾಗುವುದು.
ತೆಂಗು ಬೆಳೆ ಅಭಿವೃದ್ಧಿ ಯೋಜನೆಯಡಿ ಸಂಯೋಜಿತ ಬೇಸಾಯ - ಹೊಸ ಪ್ರಾತ್ಯಕ್ಷತೆ ತಾಕುಗಳ ನಿರ್ಮಾಣ ಮತ್ತು ನಿರ್ವಹಣೆ, ರೋಗ ಮತ್ತು ಕೀಟಗಳ ಸಮಗ್ರ ನಿರ್ವಹಣೆ ಕಾರ್ಯಕ್ರಮ, ರಿಪ್ಲಾಟಿಂಗ್ ಮತ್ತು ರಿಜುವೆನೇಷನ್ ಸ್ಕೀಂನಡಿ ನೆರವು ನೀಡಲಾಗುತ್ತದೆ.
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಪ್ರತಿ ತಾಲೂಕಿನಲ್ಲಿ ಗುಚ್ಚಗಳನ್ನು ಬಾಳೆ, ಟೊಮೇಟೋ, ಕಲ್ಲಂಗಡಿ ಬೆಳೆಗಳ ಅನುಷ್ಠಾನ, ತೋಟಗಾರಿಕೆಗೆ ಬೆಳೆಗಳನ್ನು ಗುಚ್ಚ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರೋತ್ಸಾಹಿಸಲಾಗುತ್ತದೆ. ಹನಿ ನೀರಾವರಿ ಪದ್ಧತಿ ಕಡ್ಡಾಯವಾಗಿದ್ದು ತೋಟಗಾರಿಕೆ ಉತ್ಪನ್ನಗಳ ಗುಣಮಟ್ಟವನ್ನು ಹೆಚ್ಚಿಸುವುದು, ಕೊಯ್ಲೋತ್ತರ ಸರಪಳಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸುವುದು, ಸಂಸ್ಕರಣಾ ಹಾಗೂ ಮೌಲ್ಯವರ್ಧನೆಗೆ ಪ್ರೋತ್ಸಾಹಿಸಲಾಗುತ್ತದೆ.
ತೋಟಗಾರಿಕೆ ಮತ್ತು ತಾರಸಿ ತೋಟಗಳ ಉತ್ತೇಜನ ಕಾರ್ಯಕ್ರಮವನ್ನು ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುವುದು. ಉಚಿತವಾಗಿ ತರಕಾರಿ ಬೀಜ, ಸಸಿ, ರಸಗೊಬ್ಬರ ಒಳಗೊಂಡ ಮಿನಿಕಿಟ್ ನೀಡಲಾಗುವುದು.
ತಾಲೂಕು ಪಂಚಾಯತ್ ಯೋಜನೆಯಡಿ ರೈತರಿಗೆ ತೋಟಗಾರಿಕೆ ವಿಷಯಗಳ ಕುರಿತು ತೋಟಗಾರಿಕೆ ವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ, ಸಂಶೋಧನಾ ಕೇಂದ್ರಗಳ ತಜ್ಞರಿಂದ ತರಬೇತಿ ನೀಡಲಾಗುವುದು.
ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಯೋಜನೆಯಡಿ ರೈತರಿಗೆ ಒಂದು ಎಕರೆ ಪ್ರದೇಶಕ್ಕೆ 1000 ರೂ. ಮೀರದಂತೆ ಉಚಿತವಾಗಿ ತೆಂಗು ಗಿಡಗಳನ್ನು ವಿತರಿಸಲಾಗುವುದು.
ಶೇಕಡ 50ರ ರಿಯಾಯಿತಿ ದರದಲ್ಲಿ ಸಸ್ಯ ಸಂರಕ್ಷಣೆ ಔಷಧಿ ಖರೀದಿಸಲು ಪ್ರೋತ್ಸಾಹ ನೀಡಲಾಗುವುದು. ಗರಿಷ್ಟ ಸಹಾಯಧನ 2000 ರೂ. ಪ್ರತಿ ಹೆಕ್ಟೇರ್‍ಗೆ ನೀಡಲಾಗುವುದು. ಸಸ್ಯ ಸಂರಕ್ಷಣಾ ಔಷಧಿಗಳಿಗೆ ಮಾರ್ಗಸೂಚಿ ಪ್ರಕಾರ 1.1 ದರ ಆಧರಿಸಿ ಸಹಾಯಧನ ಒದಗಿಸಲಾಗುವುದು.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಹೊಸ ತೆಂಗಿನ ತೋಟಗಳ ನಿರ್ಮಾಣ ಮಾಡಲು ಶೇ.90ರಷ್ಟು ಸಹಾಯಧನ ನೀಡಲಾಗುವುದು. ಮನೆ ಮುಂದೆ ನೆಡಲು 2 ರಿಂದ 4 ತೆಂಗಿನ ಸಸಿಗಳ ವಿತರಣೆ, ತರಕಾರಿ ಬೀಜ ವಿತರಣೆ ಮಾಡಲಾಗುವುದು.
ಈ ಎಲ್ಲ ಯೋಜನೆಗಳಡಿ ಸಹಾಯಧನ, ಸೌಲಭ್ಯ ಪಡೆಯಲು ಇಚ್ಚಿಸುವ ರೈತರು, ಸಂಘಸಂಸ್ಥೆಗಳು ಜಿಲ್ಲಾ, ಆಯಾ ತಾಲೂಕು, ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ನಿಗಧಿತ ಅರ್ಜಿ ನಮೂನೆಯಲ್ಲಿ ಪೂರಕ ದಾಖಲಾತಿಗಳೊಂದಿಗೆ ಮೇ 10 ರ ಒಳಗೆ  ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರಾದ ಎಂ. ನಾಗರಾಜು ಪ್ರಕಟಣೆಯಲ್ಲಿ ಕೋರಿದ್ದಾರೆ. 

ಮೇ 4ರಂದು ಜಿ.ಪಂ. ಸಾಮಾನ್ಯ ಸಭೆ

ಚಾಮರಾಜನಗರ, ಮೇ. 3- ಚಾಮರಾಜನಗರ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ಮೇ 4ರಂದು ಬೆಳಿಗ್ಗೆ 11 ಗಂಟೆಗೆ ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 4ರಂದು ಗೋಲಕ ಹಣ ಎಣಿಕೆ

ಚಾಮರಾಜನಗರ, ಮೇ. 3 - ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಯಾತ್ರಾಕ್ಷೇತ್ರ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರಸ್ವಾಮಿ ದೇವಾಲಯದಲ್ಲಿರುವ ಗೋಲಕಗಳ ಹಣ ಎಣಿಕೆ ಕಾರ್ಯವನ್ನು ಮೇ 4ರಂದು ಬೆಳಿಗ್ಗೆ ನಡೆಸಲಾಗುತ್ತದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಹಯೋಗದೊಂದಿಗೆ ಹಣ ಎಣಿಕೆ ಕಾರ್ಯ ನಡೆಯಲಿದೆ ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಅರಿವು ಸಾಲ ಯೋಜನೆ ಸೌಲಭ್ಯಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 3:- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2017-18ನೇ ಸಾಲಿಗೆ ಅರಿವು ಸಾಲ ಯೋಜನೆಯಡಿ ಸಿಇಟಿ ಇತರೆ ವೃತ್ತಿಪರ ಕೋರ್ಸುಗಳಾದ ಐಟಿಐ, ಡಿಪ್ಲೊಮಾ, ಎಂಟೆಕ್, ನರ್ಸಿಂಗ್, ಸ್ನಾತಕೋತ್ತರ ಪದವಿ, ಇತರೆ ಕೋರ್ಸು ಅಧ್ಯಯನ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೆರವು ನೀಡಲಿದ್ದು ಅರ್ಜಿ ಆಹ್ವಾನಿಸಿದೆ.
ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕವನ್ನು ನಿಗಮದ ವತಿಯಿಂದ ನೇರವಾಗಿ ಸಂಬಂಧಪಟ್ಟ ಕಾಲೇಜುಗಳಿಗೆ ಪಾವತಿಸಲಾಗುತ್ತಿದೆ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರೈಸ್ತ, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದು.
ಯೋಜನೆ ಪ್ರಯೋಜನ ಪಡೆಯಲು ನಿಗಮದ ವೆಬ್ ಸೈಟ್ ತಿತಿತಿ.ಞmಜಛಿ.ಞಚಿಡಿ.ಟಿiಛಿ.iಟಿ/ಚಿಡಿivu2 ತೆರೆಯಬೇಕು. ನಂತರ ಅರ್ಜಿಯನ್ನು ಭರ್ತಿ ಮಾಡಿ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಿದ ಕೂಡಲೇ ವಿದ್ಯಾರ್ಥಿಗಳು ಅರ್ಜಿಯ ಪ್ರಿಂಟ್‍ಔಟ್ ತೆಗೆದುಕೊಂಡು ಕ್ಯೂಆರ್ ಕೋಡ್‍ನೊಂದಿಗೆ ಆಧಾರ್ ಕಾರ್ಡ್, ಗುರುತಿನ ಚೀಟಿ, ಜಾತಿ ಆದಾಯ ಪ್ರಮಾಣ ಪತ್ರ (6 ಲಕ್ಷ ರೂ. ಮೀರಿರಬಾರದು), ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ಎರಡು ಭಾವಚಿತ್ರಗಳೊಂದಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ  ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-222332 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.



ಕೊಳ್ಳೇಗಾಲ : ಗುರುತಿನ ಚೀಟಿ ನವೀಕರಣಕ್ಕೆ ಬೀದಿಬದಿ ವ್ಯಾಪಾರಸ್ಥರಿಗೆ ಸೂಚನೆ

ಚಾಮರಾಜನಗರ, ಮೇ. 3:- ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಸ್ಥರಾಗಿ ಗುರುತಿಸಲಾಗಿರುವ ಫಲಾನುಭವಿಗಳು ಗುರುತಿನ ಚೀಟಿಯನ್ನು ನವೀಕರಣಗೊಳಿಸಿಕೊಳ್ಳಬೇಕು. ಈವರೆಗೆ ಗುರುತಿನ ಚೀಟಿ ಪಡೆಯದೇ ಇರುವವರು ಹೊಸದಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಗುರುತಿನ ಚೀಟಿ, ಕುಟುಂಬಸ್ಥರೊಂದಿಗಿನ ಭಾವಚಿತ್ರ ಲಗತ್ತಿಸಬೇಕು. ಅರ್ಜಿ ಸಲ್ಲಿಕೆ ಹಾಗೂ ನವೀಕರಣಕ್ಕೆ ಮೇ 15 ಕಡೆಯ ದಿನವಾಗಿದೆ. ವಿವರಗಳಿಗೆ ನಗರಸಭೆ ಕಚೇರಿ ಸಂಪರ್ಕಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
.

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಚಾಮರಾಜನಗರ, ಮೆ. 03 - ಕರ್ನಾಟಕ ಸಾಹಿತ್ಯ ಅಕಾಡೆಮಿಯು 2016ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತರು, ಸಾರ್ವಜನಿಕರು ಒಂದು ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು-560002 ಇಲ್ಲಿಗೆ ನೊಂದಾಯಿತ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ ಮೇ 20ರೊಳಗೆ ತಲುಪಿಸಬೇಕು.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಸಿ.ಎಚ್. ಭಾಗ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಕಿವುಡು, ಅಂಧ ಮಕ್ಕಳ ಸರ್ಕಾರಿ ವಸತಿಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೆ. 03:- ಮೈಸೂರಿನಲ್ಲಿರುವ ಕಿವುಡು ಅಂಧಮಕ್ಕಳ ಸರ್ಕಾರಿ ವಸತಿಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
1 ರಿಂದ 10ನೇ ತರಗತಿಯವರೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಪಠ್ಯಕ್ರಮ ಜತೆಗೆ ಯೋಗ, ಮೆಡಿಟೇಷನ್, ದೈಹಿಕ ಶಿಕ್ಷಣ, ಸಂಗೀತ, ಚಲನವಲನ, ಕಂಪ್ಯೂಟರ್ ತರಬೇತಿ ನೀಡಲಾಗುವುದು.
ಉಚಿತ ಊಟ, ವಸತಿ, ಸಮವಸ್ತ್ರ, ಪುಸ್ತಕ, ವೈದ್ಯಕೀಯ ತಪಾಸಣೆ ಸೌಲಭ್ಯ ಕಲ್ಪಿಸಲಾಗುವುದು.
ಶಾಲೆಗೆ ಸೇರಲು ಇಚ್ಚಿಸುವವರು ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿ (ದೂ.ಸಂ. 08226-223688/224688) ಅಥವಾ ಮೈಸೂರಿನ ತಿಲಕ್ ನಗರದಲ್ಲಿರುವ ಕಿವುಡು, ಅಂಧ ಮಕ್ಕಳ ಸರ್ಕಾರಿ ಶಾಲೆ ಅಧೀಕ್ಷಕರನ್ನು (ದೂ.ಸಂ. 0821-2494104/2497496) ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Tuesday, 2 May 2017

02-04-2015ಅದ್ದೂರಿಯಾಗಿ ನಡೆದ ಭಗೀರಥ ಜಯಂತಿ,ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ,ಮೇ 4ರಂದು ಜಿ.ಪಂ. ಸಾಮಾನ್ಯ ಸಭೆ

ಅದ್ದೂರಿಯಾಗಿ ನಡೆದ ಭಗೀರಥ ಜಯಂತಿ

 

ಚಾಮರಾಜನಗರ, ಮೇ. 2 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಜಿಲ್ಲಾ ಕೇಂದ್ರದಲ್ಲಿ ಇಂದು ಆಚರಿಸಲಾಯಿತು.
ಮೊದಲಿಗೆ ನಗರದ ಪÀ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಿದ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಸೇರಿದಂತೆ ಇತರೆ ಗಣ್ಯರು ಚಾಲನೆ ನೀಡಿದರು. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ಸಮಾವೇಶಗೊಂಡಿತು.
ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಆಕಾಶದಿಂದ ಗಂಗೆಯನ್ನು ತಂದುಕೊಟ್ಟ ಮಹಾತಪಸ್ವಿ ಭಗೀರಥರ ಜಯಂತಿ ಸಂದರ್ಭದಲ್ಲಿ ಉಪ್ಪಾರ ಜನಾಂಗದ ಸರ್ವಾಂಗೀಣ ಅಭಿವೃದ್ಧಿ ಸಂಬಂಧಿಸಿದಂತೆ ಚರ್ಚೆ ಮಾಡುವ ಸದವಕಾಶವು ಒದಗಿದೆ ಎಂದರು.\

ದೇಶದ ಬಹುತೇಕ ರಾಜ್ಯಗಳಲ್ಲಿ ಉಪ್ಪಾರ ಸಮುದಾಯ ವಾಸವಿದೆ. ಕರ್ನಾಟಕ ರಾಜ್ಯದಲ್ಲೂ 35 ರಿಂದ 40 ಲಕ್ಷ ಉಪ್ಪಾರ ಸಮುದಾಯದ ಜನಸಂಖ್ಯೆ ಇದೆ. ಉಪ್ಪಾರ ಜನಾಂಗದ ಸ್ಥಿತಿಗತಿಗಳನ್ನು ಅವಲೋಕನ ಮಾಡಿ ಸಾಮಾಜಿಕ, ಶೈಕ್ಷಣಿಕವಾಗಿ ಮೇಲೆ ಬರಲು ಅಗತ್ಯವಿರುವ ಕಾರ್ಯಕ್ರಮ ರೂಪಿಸಬೇಕಾಗಿದೆ ಎಂದು ಧ್ರುವನಾರಾಯಣ ತಿಳಿಸಿದರು.
 ಶೈಕ್ಷಣಿಕವಾಗಿ ಪ್ರಗತಿಯಾದರೆ ಸಮಾಜ ಮುಂದೆ ಬರಲು ಸಾಧ್ಯವಾಗಲಿದೆ. ಹೀಗಾಗಿ ಸಮುದಾಯದ ಯಜಮಾನರು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವಂತೆ ಪ್ರೇರೇಪಿಸಬೇಕು. ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಅನುಕೂಲವಾದ ಸೌಲಭ್ಯವನ್ನು ಕಲ್ಪಿಸಲಾಗಿದೆ. ಮೊರಾರ್ಜಿ ಶಾಲೆ, ಇತರೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಉಚಿತ ಪಠ್ಯಪುಸ್ತಕ ಸೇರಿದಂತೆ ಇತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕೆಂದು ಧ್ರುವನಾರಾಯಣ ಸಲಹೆ ಮಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಉಪ್ಪಾರ ಸಮುದಾಯವನ್ನು ಮೊದಲಿಗೆ ದೇವರಾಜ ಅರಸು ಅವರು ಗುರುತಿಸಿ ಉಪ್ಪಾರ ಜನಾಂಗದ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಲು ಅನುವು ಮಾಡಿಕೊಟ್ಟರು. ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ ಅವರು ಉಪ್ಪಾರ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡುವ ಮೂಲಕ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಪೂರಕ ಬಜೆಟ್‍ನಲ್ಲಿ ನಿಗಮಕ್ಕೆ 60 ಕೋಟಿ ರೂ. ನೆರವು ನೀಡುವಂತೆ ಕೋರಲಾಗಿದೆ ಎಂದರು.
ಸಮಾಜದಲ್ಲಿ ಇರುವ ಮೂಡನಂಬಿಕೆಗಳನ್ನು ಬಿಡಬೇಕು. ಬಾಲ್ಯ ವಿವಾಹ ಪದ್ಧತಿಯನ್ನು ತಡೆಯಬೇಕು. 18 ವರ್ಷ ತುಂಬಿದ ಬಳಿಕವೇ ಹೆಣ್ಣುಮಕ್ಕಳಿಗೆ ವಿವಾಹ ಮಾಡಬೇಕು. ಶಿಕ್ಷಣದತ್ತ ಹೆಚ್ಚು ಆಸಕ್ತರಾಗಲು ಪ್ರೋತ್ಸಾಹಿಸಬೇಕು ಎಂದರು.
ಮುಖ್ಯ ಭಾಷಣ ಮಾಡಿದ ಜನಪದ ವಿಧ್ವಾಂಸÀರಾದ ಡಾ. ಪಿ.ಕೆ. ರಾಜಶೇಖರ್ ಅವರು ಉಪ್ಪಾರರು ವಿಜ್ಞಾನ ಪ್ರಪಂಚಕ್ಕೆ ಈ ಹಿಂದೆಯೇ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಉಪ್ಪನ್ನು ಮದ್ದುಗುಂಡು, ಸಿಡಿಮದ್ದುಗಳಿಗೂ ಬಳಸಲು ಸರಬರಾಜು ಮಾಡುವ ಮೂಲಕ ಅನೇಕ ರಾಜಮಹಾರಾಜರ ವಿಶ್ವಾಸ ಗಳಿಸಿದ್ದರು. ಕೆರೆ ಕಟ್ಟೆ ಕೊಳ ಕಾಲುವೆಗಳ ಹೂಳೆತ್ತುವುದು, ಶಿಲ್ಪಿಗಳು ಕೆತ್ತಿದ ಶಿಲ್ಪಗಳನ್ನು ಜೋಡಿಸಿ ದೇವಾಲಯ ನಿರ್ಮಾಣ ಮಾಡುವಂತಹ ಕಾಯಕವನ್ನೂ ಉಪ್ಪಾರರು ನಿರ್ವಹಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅದ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಸದಸ್ಯರಾದ ಆರ್. ಬಾಲರಾಜು, ಶಶಿಕಲ ಸೋಮಲಿಂಗಪ್ಪ, ಸಿ.ಎನ್. ಬಾಲರಾಜು, ಚಂದ್ರಕಲಾ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಮುಖಂಡರಾದ ಮಂಗಲ ಶಿವಕುಮಾರ್, ಚಿಕ್ಕ ಮಹದೇವು, ಹನುಮಂತಶೆಟ್ಟಿ, ಜಿ.ಎಂ. ಗಾಡ್ಕರ್, ನೂರೊಂದು ಶೆಟ್ಟಿ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
             

ಬಿ.ಎಸ್.ಎಫ್ ಯೋಧರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸಂತಾಪ

ಚಾಮರಾಜನಗರ, ಮೇ.2 :- ಜಿಲ್ಲೆಯ ಬಿಎಸ್‍ಎಫ್ ಯೋಧರಾದ ಪುಟ್ಟಸ್ವಾಮಿ ಅವರ ನಿಧನಕ್ಕೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪುಟ್ಟಸ್ವಾಮಿ ಅವರ ಕುಟುಂಬಕ್ಕೆ ನಿಧನದ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಉಸ್ತುವಾರಿ ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪುಟ್ಟಸ್ವಾಮಿ ಅವರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಮುಖ್ಯ ಮಂತ್ರಿಯವರ ಗಮನಕ್ಕೆ ತರಲಾಗುವುದೆಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ ನಿವಾಸಿಯಾಗಿದ್ದ ಎನ್.ಪುಟ್ಟಸ್ವಾಮಿ ಅವರು ಬಿಎಸ್‍ಎಫ್ ಯೋಧರಾಗಿ ಅಸ್ಸಾಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಾವನ್ನಪ್ಪಿದ್ದರು. 

ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ, ಮೇ.2 :- ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ  2017-18ನೇ ಸಾಲಿಗೆ ಆಸಕ್ತ ರೈತ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ವಲಯ ಯೋಜನೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಸೂಕ್ಷ್ಮ ನೀರಾವರಿ ಯೋಜನೆ)ಯಡಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ. ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ಲಭ್ಯ. ಮೊದಲ 2 ಹೆಕ್ಟೇರ್ ಪ್ರದೇಶಕ್ಕೆ ಶೇ.90ರಂತೆ ಮತ್ತು ಉಳಿದ 3 ಹೆಕ್ಟೇರ್ ಪ್ರದೇಶಕ್ಕೆ ಶೇಕಡಾವಾರು ಮಿತಿಯೊಳಗೆ ಸಹಾಯಧನ ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸ ತೋಟಗಳ ಸ್ಥಾಪನೆ ಕಾರ್ಯಕ್ರಮದಡಿ ಅಂಗಾಂಶ ಬಾಳೆ, ದಾಳಿಂಬೆ, ಪಪ್ಪಾಯ ಬೆಳೆಗಳ ಪ್ರದೇಶ ವಿಸ್ತರಣೆ ಮತ್ತು ತರಕಾರಿ ಬೇಸಾಯ ಕೈಗೊಳ್ಳಲು ಸಹಾಯಧನ ನೀಡಲಾಗುವುದು. ಸಮಗ್ರ ಕೀಟ, ರೋಗ  ಮತ್ತು ಪೋಷಕಾಂಶಗಳ ನಿರ್ವಹಣೆ, ಎರೆಹುಳು ಗೊಬ್ಬರ ಉತ್ಪಾದನಾ ಫಟಕ, ಜೀವಸಾರ ಉತ್ಪಾದನಾ ಘಟಕ ನಿರ್ಮಾಣ, ಸಮುದಾಯ ಹಾಗೂ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ, ಸಂರಕ್ಷಿತ ಬೇಸಾಯ ಮತ್ತು ಹಸಿರು ಮನೆ, ನೆರಳು ಚಪ್ಪರ ನಿರ್ಮಾಣ, ಪ್ಲಾಸ್ಟಿಕ್ ಹೊದಿಕೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ – ಟ್ರಾಕ್ಟರ್ (20 ಹೆಚ್‍ಪಿ), ಪವರ್ ಟಿಲ್ಲರ್ (8 ಹೆಚ್‍ಪಿ), ಕೊಯ್ಲೋತ್ತರ ನಿರ್ವಹಣೆಯಲ್ಲಿ ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಲಭಿಸಲಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅಂಗಾಂಶ ಕೃಷಿ ಬಾಳೆ ಬೆಳೆಯನ್ನು ನಿಖರ ಬೇಸಾಯ ಪದ್ಧತಿಯಲ್ಲಿ ಬೆಳೆಯಲು ನೀಡಲಿದೆ. ತೆಂಗು ಪುನಶ್ಚೇತನ ಕಾರ್ಯಕ್ರಮ ಇದರಲ್ಲಿ ಸೇರಿದೆ.
ಮಹಾತ್ಮಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೆಂಗು, ಮಾವು, ಸಪೋಟ, ಅಂಗಾಂಶ ಬಾಳೆ, ನುಗ್ಗೆ, ನೇರಳೆ, ನೆಲ್ಲಿ ಮುಂತಾದ ತೋಟಗಾರಿಕೆ ಬೆಳೆಗಳನ್ನು ಅಭಿವೃದ್ಧಿಪಡಿಸಲು ಮಾರ್ಗಸೂಚಿಯಂತೆ ಕೂಲಿ ಹಾಗೂ ಸಾಮಗ್ರಿ ವೆಚ್ಚ ನೀಡಲಾಗುವುದು. ವೈಯಕ್ತಿಕ ಕಾಮಗಾರಿಯಡಿ ಪುನಶ್ಚೇತನ, ಈರುಳ್ಳಿ ಶೇಖರಣಾ ಘಟಕ, ಕೊಳವೆಬಾವಿ, ಹಿಂಗು ಗುಂಡಿ, ಪೋಷಕಾಂಶ ಕೈತೋಟಕ್ಕೆ ನೆರವು ನೀಡಲಾಗುತ್ತದೆ.
ರಾಜ್ಯವಲಯ ಯೋಜನೆಯಡಿ ತೋಟಗಾರಿಕೆ ಬೆಳೆಗಳ ರೋಗ, ಕೀಟಗಳ ಸಮಗ್ರ ನಿಯಂತ್ರಣಕ್ಕೆ ನೆರವು ಲಭಿಸಲಿದೆ. ತೋಟಗಾರಿಕೆ ಬೆಳೆಗಳ ರೋಗ, ಕೀಟಗಳ ನಿಯಂತ್ರಣಕ್ಕಾಗಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರಂತೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ.90ರಂತೆ ಗರಿಷ್ಟ 2 ಹೆಕ್ಟೇರ್ ಮಿತಿಗೆ ಸಸ್ಯ ಸಂರಕ್ಷಣಾ ಔಷಧಿ ಖರೀದಿಸಿದ ರೈತರಿಗೆ ಸಹಾಯಧನವನ್ನು ಒದಗಿಸಲಾಗುವುದು.
ತೆಂಗು ಬೆಳೆ ಅಭಿವೃದ್ಧಿ ಯೋಜನೆಯಡಿ ಸಂಯೋಜಿತ ಬೇಸಾಯ - ಹೊಸ ಪ್ರಾತ್ಯಕ್ಷತೆ ತಾಕುಗಳ ನಿರ್ಮಾಣ ಮತ್ತು ನಿರ್ವಹಣೆ, ರೋಗ ಮತ್ತು ಕೀಟಗಳ ಸಮಗ್ರ ನಿರ್ವಹಣೆ ಕಾರ್ಯಕ್ರಮ, ರಿಪ್ಲಾಟಿಂಗ್ ಮತ್ತು ರಿಜುವೆನೇಷನ್ ಸ್ಕೀಂನಡಿ ನೆರವು ನೀಡಲಾಗುತ್ತದೆ.
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಪ್ರತಿ ತಾಲೂಕಿನಲ್ಲಿ ಗುಚ್ಚಗಳನ್ನು ಬಾಳೆ, ಟೊಮೇಟೋ, ಕಲ್ಲಂಗಡಿ ಬೆಳೆಗಳ ಅನುಷ್ಠಾನ, ತೋಟಗಾರಿಕೆಗೆ ಬೆಳೆಗಳನ್ನು ಗುಚ್ಚ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರೋತ್ಸಾಹಿಸಲಾಗುತ್ತದೆ. ಹನಿ ನೀರಾವರಿ ಪದ್ಧತಿ ಕಡ್ಡಾಯವಾಗಿದ್ದು ತೋಟಗಾರಿಕೆ ಉತ್ಪನ್ನಗಳ ಗುಣಮಟ್ಟವನ್ನು ಹೆಚ್ಚಿಸುವುದು, ಕೊಯ್ಲೋತ್ತರ ಸರಪಳಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸುವುದು, ಸಂಸ್ಕರಣಾ ಹಾಗೂ ಮೌಲ್ಯವರ್ಧನೆಗೆ ಪ್ರೋತ್ಸಾಹಿಸಲಾಗುತ್ತದೆ.
ತೋಟಗಾರಿಕೆ ಮತ್ತು ತಾರಸಿ ತೋಟಗಳ ಉತ್ತೇಜನ ಕಾರ್ಯಕ್ರಮವನ್ನು ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುವುದು. ಉಚಿತವಾಗಿ ತರಕಾರಿ ಬೀಜ, ಸಸಿ, ರಸಗೊಬ್ಬರ ಒಳಗೊಂಡ ಮಿನಿಕಿಟ್ ನೀಡಲಾಗುವುದು.
ತಾಲೂಕು ಪಂಚಾಯತ್ ಯೋಜನೆಯಡಿ ರೈತರಿಗೆ ತೋಟಗಾರಿಕೆ ವಿಷಯಗಳ ಕುರಿತು ತೋಟಗಾರಿಕೆ ವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ, ಸಂಶೋಧನಾ ಕೇಂದ್ರಗಳ ತಜ್ಞರಿಂದ ತರಬೇತಿ ನೀಡಲಾಗುವುದು.
ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಯೋಜನೆಯಡಿ ರೈತರಿಗೆ ಒಂದು ಎಕರೆ ಪ್ರದೇಶಕ್ಕೆ 1000 ರೂ. ಮೀರದಂತೆ ಉಚಿತವಾಗಿ ತೆಂಗು ಗಿಡಗಳನ್ನು ವಿತರಿಸಲಾಗುವುದು.
ಶೇಕಡ 50ರ ರಿಯಾಯಿತಿ ದರದಲ್ಲಿ ಸಸ್ಯ ಸಂರಕ್ಷಣೆ ಔಷಧಿ ಖರೀದಿಸಲು ಪ್ರೋತ್ಸಾಹ ನೀಡಲಾಗುವುದು. ಗರಿಷ್ಟ ಸಹಾಯಧನ 2000 ರೂ. ಪ್ರತಿ ಹೆಕ್ಟೇರ್‍ಗೆ ನೀಡಲಾಗುವುದು. ಸಸ್ಯ ಸಂರಕ್ಷಣಾ ಔಷಧಿಗಳಿಗೆ ಮಾರ್ಗಸೂಚಿ ಪ್ರಕಾರ 1.1 ದರ ಆಧರಿಸಿ ಸಹಾಯಧನ ಒದಗಿಸಲಾಗುವುದು.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಹೊಸ ತೆಂಗಿನ ತೋಟಗಳ ನಿರ್ಮಾಣ ಮಾಡಲು ಶೇ.90ರಷ್ಟು ಸಹಾಯಧನ ನೀಡಲಾಗುವುದು. ಮನೆ ಮುಂದೆ ನೆಡಲು 2 ರಿಂದ 4 ತೆಂಗಿನ ಸಸಿಗಳ ವಿತರಣೆ, ತರಕಾರಿ ಬೀಜ ವಿತರಣೆ ಮಾಡಲಾಗುವುದು.
ಈ ಎಲ್ಲ ಯೋಜನೆಗಳಡಿ ಸಹಾಯಧನ, ಸೌಲಭ್ಯ ಪಡೆಯಲು ಇಚ್ಚಿಸುವ ರೈತರು, ಸಂಘಸಂಸ್ಥೆಗಳು ಜಿಲ್ಲಾ, ಆಯಾ ತಾಲೂಕು, ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ನಿಗಧಿತ ಅರ್ಜಿ ನಮೂನೆಯಲ್ಲಿ ಪೂರಕ ದಾಖಲಾತಿಗಳೊಂದಿಗೆ ಮೇ 10 ರ ಒಳಗೆ  ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರಾದ ಎಂ. ನಾಗರಾಜು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೇ 3ರಂದು ಮಾತಿನ ಮಹಾಕಾವ್ಯ ಸಾಕ್ಷ್ಯಚಿತ್ರ ಪ್ರದರ್ಶನ, ಬುದ್ಧನಗೆಯ ತಾಯಿನದಿ ಕಾವ್ಯಸಂಕಲನ ಲೋಕಾರ್ಪಣೆ ಸಮಾರಂಭ

ಚಾಮರಾಜನಗರ, ಮೇ. 2 :- ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರವು ವಿಶ್ವಜ್ಞಾನಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಅಂಗವಾಗಿ ಮೇ 3ರಂದು ಬೆಳಿಗ್ಗೆ 10 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಸಭಾಂಗಣದಲ್ಲಿ ಮಾತಿನ ಮಹಾಕಾವ್ಯ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಬುದ್ದನಗೆಯ ತಾಯಿನದಿ ಕಾವ್ಯಸಂಕಲನದ ಲೋಕಾರ್ಪಣೆ ಸಮಾರಂಭವನ್ನು ಏರ್ಪಡಿಸಿದೆ.
ಮೈಸೂರು ವಿವಿ ಪ್ರಭಾರ ಕುಲಪತಿಗಳಾದ ಪ್ರೊ. ದಯಾನಂದ ಮಾನೆ ಸಮಾರಂಭ ಉದ್ಘಾಟಿಸುವರು. ಸಂಸ್ಕøತಿ ಚಿಂತಕರಾದ ಪ್ರ. ಕೆ. ಮರುಳಸಿದ್ದಪ್ಪ ಬುದ್ದನಗೆಯ ತಾಯಿನದಿ ಕಾವ್ಯಸಂಕಲನ ಬಿಡುಗಡೆ ಮಾಡುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಮಾತಿನ ಮಹಾಕಾವ್ಯ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡುವರು.
ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಯನ ವಿಭಾಗದ ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ. ಕೃಷ್ಣಮೂರ್ತಿ ಹನೂರು ವಿಮರ್ಶಾ ಲೇಖನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡುವರು. ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ. ಶಿವಬಸವಯ್ಯ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೇ 4ರಂದು ಜಿ.ಪಂ. ಸಾಮಾನ್ಯ ಸಭೆ

ಚಾಮರಾಜನಗರ, ಮೇ.2:- ಚಾಮರಾಜನಗರ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ಮೇ 4ರಂದು ಬೆಳಿಗ್ಗೆ 11 ಗಂಟೆಗೆ ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 9ರಂದು ತಾ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ಮೇ. 2 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಮೇ 9ರಂದು ಬೆಳಿಗ್ಗೆ 11 ಗಂಟೆಗೆ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಹಾಲು ಉತ್ಪಾದಕರಿಗೆ ಮನವಿ
ಚಾಮರಾಜನಗರ, ಮೇ. 2 (ಕರ್ನಾಟಕ ವಾರ್ತೆ):- ಹಾಲು ಉತ್ಪಾದಕರು ಹಾಲಿನ ಪ್ರೋತ್ಸಾಹಧನ ಪಡೆಯಲು ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿ ಹಾಲು ಉತ್ಪಾದಕರ ಸಂಘಗಳಿಗೆ ತುರ್ತಾಗಿ ಮಾಹಿತಿ ನೀಡುವಂತೆ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಿಳಿಸಿದೆ.
ರೈತರು ಕೈಗೊಂಡಿರುವ ಹೈನುಗಾರಿಕೆ ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂ. ಪ್ರೋತ್ಸಾಹಧನ ನೀಡುತ್ತಿದೆ. ಪ್ರೋತ್ಸಾಹಧನವನ್ನು ಹಾಲು ಉತ್ಪಾದಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ಸರ್ಕಾರದ ಆದೇಶದಂತೆ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಜೋಡಣೆಯಾಗದ ಬ್ಯಾಂಕ್ ಖಾತೆಗಳಿಗೆ ಪ್ರೋತ್ಸಾಹಧನ ಪಾವತಿ ಮಾಡಲಾಗಿಲ್ಲ. ಆಧಾರ್ ಸಂಖ್ಯೆ ಜೋಡಣೆಯಾಗದ ಹಾಲು ಉತ್ಪಾದಕರ ಬ್ಯಾಂಕ್ ಖಾತೆಗಳಿಗೆ ಪ್ರೋತ್ಸಾಹಧನ ಹಣವನ್ನು ಜಮೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರು ಅವರ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜ್ಞಾನ ಲೇಖಕರ ತರಬೇತಿ ಶಿಬಿರ – ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 2 :- ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಉದಯೋನ್ಮುಖ ವಿಜ್ಞಾನ ಬರಹಗಾರರು ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು ಹಾಗೂ ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ.
ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ವಿಜ್ಞಾನ ಶಿಕ್ಷಕರು ಯುವ ಪತ್ರಿಕಾ ವರದಿಗಾರರು ಪತ್ರಿಕೋದ್ಯಮ ವಿದ್ಯಾರ್ಥಿಗಳು ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಶಿಬಿರದಲ್ಲಿ ಭಾಗವಹಿಸಬಹುದು.
ಮೇ ತಿಂಗಳ ಕೊನೆಯ ವಾರದಲ್ಲಿ ಶಿಬಿರ ಆಯೋಜಿಸಲಾಗುತ್ತಿದ್ದು ನುರಿತ ವಿಜ್ಞಾನ ಬರಹಗಾರರು ಸಂವಹನಕಾರರಿಂದ ವಿಜ್ಞಾನ ಬರವಣಿಗೆಯ ಕುರಿತು ಕೌಶಲ್ಯ ಆಕರ ಶಬ್ಧ ಬಳಕೆ ಅನುವಾದ ಇನ್ನಿತರ ವಿಷಯಗಳ ತರಬೇತಿ ನೀಡಲಾಗುವುದು.
20 ರಿಂದ 40ರ ವಯೋಮಾನದವರಿಗೆ ಆದ್ಯತೆ ನೀಡಲಾಗುವುದು. ನೋಂದಣಿ ಉಚಿತವಾಗಿದ್ದು ಊಟ, ವಸತಿ ಹಾಗೂ ಕರ್ತವ್ಯ ಸಹಿತ ರಜೆ (ಓಓಡಿ) ಸೌಲಭ್ಯ ಒದಗಿಸಲಾಗುವುದು.
ಆಸಕ್ತರು ಅವರ ಕಿರುಪರಿಚಯ, ವಿಳಾಸ, ದೂರವಾಣಿ ಸಂಖ್ಯೆ, ಇ ಮೇಲ್ ಐಡಿ ಇನ್ನಿತರ ವಿವರಗಳು ಮತ್ತು ಎಲ್ಲೂ ಪ್ರಕಟಗೊಳ್ಳದ 800 ಮತ್ತು 250 ಪದಗಳ ಎರಡು ಕನ್ನಡ ವೈಜ್ಞಾನಿಕ ಲೇಖನಗಳ ಸ್ವರಚಿತ ಪ್ರತಿಯೊಂದಿಗೆ ಅರ್ಜಿಯನ್ನು ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ.24/2, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-560070 ಇ ಮೇಲ್ :ಞಡಿvಠಿ.iಟಿಜಿo@gmಚಿiಟ.ಛಿom ಈ ವಿಳಾಸಕ್ಕೆ ಮೇ 5ರೊಳಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ಪರಿಷತ್ತಿನ ಕಚೇರಿ (080-26718939/26718962) ಅಥವಾ ವಿಜ್ಞಾನ ಲೇಖಕರ ತರಬೇತಿ ಶಿಬಿರದ ರಾಜ್ಯ ಸಂಯೋಜಕರಾದ ದಾನಿ ಬಾಬೂರಾವ್ ಅವರ ಮೊಬೈಲ್ ಸಂ. 9448568360 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

01-05-2017 ಮೇ 1ರಿಂದ ಜಾರಿಯಾದ ರಿಯಲ್ ಎಸ್ಟೇಟ್ ಕಾಯ್ದೆ. ಮೇ. 2ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿ,

  ಇಂದಿನಿಂದ ಜಾರಿಯಾದ ರಿಯಲ್ ಎಸ್ಟೇಟ್ ಕಾಯ್ದೆ 

  ರಿಯಲ್ ಎಸ್ಟೇಟ್ ಕಾಯ್ದೆ ಅಂದ್ರೆ ಏನು?ಅದರಲ್ಲಿ ಏನೆನಿದೆ?

 ನವದೆಹಲಿ, ಮೇ 01 : ರಿಯಲ್ ಎಸ್ಟೇಟ್ ನಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಗಟ್ಟಲು ರಿಯಲ್ ಎಸ್ಟೇಟ್ ನಿಯಂತ್ರಣ ಕಾಯ್ದೆ (ಆರ್‍ಇಆರ್ಷಎ) ಜಾರಿಗೆ ತಂದಿದೆ. ಹಲವು ವರ್ಷಗಳಿಂದ ನೆನೆಗುಂದಿಗೆ ಬಿದ್ದಿದ್ದ ರಿಯಲ್ ಎಸ್ಟೇಟ್(ನಿಯಂತ್ರಣ ಮತ್ತು ಅಭಿವೃದ್ಧಿ) ಮಸೂದೆ-2016 ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ಸಂಸತ್ತಿನಲ್ಲಿ ಅಂಗೀಕಾರವಾಗಿತ್ತು. ಕಾಯ್ದೆಯ ಎಲ್ಲ 92 ಸೆಕ್ಷನ್ ಗಳು ಮೇ 1 ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿವೆ.

ರಿಯಲ್ ಎಸ್ಟೇಟ್ ನಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಗಟ್ಟಲು ರಿಯಲ್ ಎಸ್ಟೇಟ್ ನಿಯಂತ್ರಣ ಕಾಯ್ದೆ (ಆರ್‍ಇಆರ್ಷಎ) ಜಾರಿಗೆ ತಂದಿದೆ. ಹಲವು ವರ್ಷಗಳಿಂದ ನೆನೆಗುಂದಿಗೆ ಬಿದ್ದಿದ್ದ ರಿಯಲ್ ಎಸ್ಟೇಟ್(ನಿಯಂತ್ರಣ ಮತ್ತು ಅಭಿವೃದ್ಧಿ) ಮಸೂದೆ-2016 ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ಸಂಸತ್ತಿನಲ್ಲಿ ಅಂಗೀಕಾರವಾಗಿತ್ತು. ಕಾಯ್ದೆಯ ಎಲ್ಲ 92 ಸೆಕ್ಷನ್ ಗಳು ಮೇ 1 ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿವೆ. 
 ಜಾರಿಗೆ ತಂದಿರುವ ಈ ಕಾಯ್ದೆಯನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಕೂಡ ಸ್ವಾಗತಿಸಿದ್ದಾರೆ. ಒಟ್ಟಿನಲ್ಲಿ ದೇಶದ ರಿಯಲ್ ಎಸ್ಟೇಟ್ ವಲಯದಲ್ಲಿ ತ್ವರಿತ ಮತ್ತು ವ್ಯಾಪಕ ಬದಲಾವಣೆ ತರುವ ಮಹತ್ವದ ಕಾಯ್ದೆಯನ್ನ ಮೋದಿ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಿದೆ.

 ರಿಯಲ್ ಎಸ್ಟೇಟ್ ನಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಗಟ್ಟಲು ರಿಯಲ್ ಎಸ್ಟೇಟ್ ನಿಯಂತ್ರಣ ಕಾಯ್ದೆ (ಆರ್‍ಇಆರ್ಷಎ) ಜಾರಿಗೆ ತಂದಿದೆ. ಹಲವು ವರ್ಷಗಳಿಂದ ನೆನೆಗುಂದಿಗೆ ಬಿದ್ದಿದ್ದ ರಿಯಲ್ ಎಸ್ಟೇಟ್(ನಿಯಂತ್ರಣ ಮತ್ತು ಅಭಿವೃದ್ಧಿ) ಮಸೂದೆ-2016 ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ಸಂಸತ್ತಿನಲ್ಲಿ ಅಂಗೀಕಾರವಾಗಿತ್ತು. ಕಾಯ್ದೆಯ ಎಲ್ಲ 92 ಸೆಕ್ಷನ್ ಗಳು ಮೇ 1 ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿವೆ
 ಜಾರಿಗೆ ತಂದಿರುವ ಈ ಕಾಯ್ದೆಯನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಕೂಡ ಸ್ವಾಗತಿಸಿದ್ದಾರೆ. ಒಟ್ಟಿನಲ್ಲಿ ದೇಶದ ರಿಯಲ್ ಎಸ್ಟೇಟ್ ವಲಯದಲ್ಲಿ ತ್ವರಿತ ಮತ್ತು ವ್ಯಾಪಕ ಬದಲಾವಣೆ ತರುವ ಮಹತ್ವದ ಕಾಯ್ದೆಯನ್ನ ಮೋದಿ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಿದೆ
 ಮನೆ ಖರೀದಿಸುವವರು, ಸೈಟು ಖರೀದಿ ಮಾಡೋರನ್ನು ರಕ್ಷಿಸಲು ಮತ್ತು ಪ್ರಾಮಾಣಿಕ ಖಾಸಗಿ ಉದ್ಯಮಿಗಳನ್ನು ಉತ್ತೇಜಿಸಲು ಅಗತ್ಯವಾದ ನಿಯಮಗಳೂ ಈ ಕಾಯ್ದೆಯಲ್ಲಿ ಇವೆ.
 * ಗೃಹ ನಿರ್ಮಾಣದ ಯೋಜನೆಗಳು ಕಡ್ಡಾಯವಾಗಿ ನೋಂದಣಿಯಾಗಬೇಕು.
 * ಗ್ರಾಹಕರಿಂದ ಸಂಗ್ರಹಿಸಿದ ಹಣದ ಶೇ.70ರಷ್ಟನ್ನು ಪ್ರತ್ಯೇಕ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಬೇಕು.
 * ಸಕಾಲದಲ್ಲಿ ಯೋಜನೆ ಪೂರ್ಣಗೊಳಿಸಬೇಕು. ಯೋಜನೆ ವಿಳಂಬವಾದರೆ ದಂಡ-ಜೈಲು ಶಿಕ್ಷೆ.
 * ಯೋಜನೆಗಳ ವಿವರ ಮತ್ತು ಪ್ರಗತಿಯನ್ನು ನಿಯಂತ್ರಣ ಸಂಸ್ಥೆಯ ಅಂತರ್ಜಾಲ ತಾಣದಲ್ಲಿ ಪ್ರಕಟಿಸಬೇಕು.
 * ಯೋಜನೆ ವಿಳಂಬವಾದರೆ ಖರೀದಿದಾರ ಪಡೆದ ಬ್ಯಾಂಕ್ ಸಾಲದ ತಿಂಗಳ ಬಡ್ಡಿಯನ್ನು ಕಟ್ಟಡ ನಿರ್ಮಾಣಗಾರ ಭರಿಸಬೇಕು.
 * ಮೇಲ್ಮನವಿ ನ್ಯಾಯಮಂಡಳಿ ಮತ್ತು ನಿಯಂತ್ರಣ ಪ್ರಾಧಿಕಾರಗಳ ಆದೇಶ ಉಲ್ಲಂಘಿಸಿದರೆ ಜೈಲು ಶಿಕ್ಷೆ ಜೊತೆ ದಂಡ.
 * ಡೆವಲಪರ್ಸ್ ಗಳಿಗೆ 3 ವರ್ಷ ಮತ್ತು ಏಜೆಂಟ್ ಹಾಗೂ ಖರೀದಿದಾರರಿಗೆ 1 ವರ್ಷ ಜೈಲು ಶಿಕ್ಷೆ.
 * ಪ್ರಾಧಿಕಾರ ರಚಿಸದೇ ಹೋದರೆ ಆಯಾ ರಾಜ್ಯ ಸರ್ಕಾರದ ವಿರುದ್ಧ ಜನರೇ ದೂರು ನೀಡಬಹುದು.

ಮೇ. 2ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿ

ಚಾಮರಾಜನಗರ, ಮೇ 01 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮೇ 2ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಮಧ್ಯಾಹಣ 12.30 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು  ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಹರ್ಷಿ ಭಗೀರಥ ಅವರ ಭಾವಚಿತಕ್ಕೆ ಪುಷ್ಪಾರ್ಚನೆ  ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜನಪದ ವಿಧ್ವಾಂಸÀರಾದ ಡಾ. ಪಿ.ಕೆ. ರಾಜಶೇಖರ್ ಅವರು ಮುಖ್ಯ ಭಾಷಣ ಮಾಡುವರು. ಅಮಚವಾಡಿಯ ಮಂಜುನಾಥಶೆಟ್ಟಿ ಮತ್ತು ತಂಡದವರು ಜನಪದ ಗೀತೆ ಗಾಯನ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.

        ಮೇ 2 ರಿಂದ ಕೃಷಿ ಅಭಿಯಾನ

ಚಾಮರಾಜನಗರ ಮೇ-01 ಕೃಷಿಇಲಾಖೆ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ಸಲುವಾಗಿ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ಮೇ 2 ರಿಂದ 12 ರವರೆಗೆ ಹಮ್ಮಿಕೊಂಡಿದೆ.
ಮೇ 2 ರಿಂದ 3 ರವರೆಗೆ ಸಂತೆಮರಹಳ್ಳಿ ಹೋಬಳಿಯಲ್ಲಿ ಅಭಿಯಾನ ನಡೆಯಲ್ಲಿದ್ದು ಮೇ 4 ರಂದು ಸಮಾರಂಭ ನಡೆಯಲಿದೆ.ಮೇ 4 ರಿಂದ 5 ರವರೆಗೆ ಚಾಮರಾಜನಗರ ಕಸಬ ಹೋಬಳಿಯಲ್ಲಿ ಅಭಿಯಾ£ ನಡೆಯಲ್ಲಿದ್ದು  ಮೇ 6 ರಂದು ಸಮಾರಂಭ ನಡೆಯಲಿದೆ.ಮೇ6 ರಿಂದ 7 ರವರೆಗೆ ಚಂದಕÀವಾಡಿ ಹೋಬಳಿಯಲ್ಲಿ ಅಭಿಯಾನ ಜರುಗಲಿದು ಮೇ 8 ರಂದು ಸಮಾರಂಭ ನಡೆಯಲಿದೆ. ಮೇ 8 ರಿಂದ 9 ರವರೆಗೆ ಹರದನಹಳ್ಳಿಯಲ್ಲಿ ಅಭಿಯಾನ ನಡೆಯಲ್ಲಿÀ್ಲದ್ದು ಮೇ 10 ರಂದು ಸಮಾರಂಭ ನಡೆಯಲಿದೆ. ಮೇ 10 ರಿಂದ 11 ರವರೆಗೆ ಹರವೆ ಹೋಬಳಿಯಲ್ಲಿ ಅಭಿಯಾನ ನಡೆಯಲ್ಲಿದ್ದು ಮೇ 12 ರಂದು ಸಮಾರಂಭ ನಡೆಯಲಿದೆ. ನಿಗದಿತ ದಿನಾಂಕದಂದು ಬೆಳಗ್ಗೆ 10 ಗಂಟೆಗೆ ಸಮಾರಂಭ ನಡೆಂiÀiಲಿದೆ.
ಅಭಿಯಾನದಲ್ಲಿ  ಅಧಿಕಾರಿಗಳು, ವಿಜ್ಞಾನಿಗಳು ರೈತರೊಂದಿಗೆ ಸಂವಾದ ನಡೆಸುವರು. ಈ ಅಭಿಯಾನದ ಕಾರ್ಯಕ್ರಮವನ್ನು ರೈತರು , ನಾಗರಿಕರು ಸದುಪಯೋಗ ಮಾಡಿಕೊಳ್ಳಬೇಕೆಂದು ತಾಲೂಕು ಸಹಾÀಯಕ ಕೃಷಿ ನಿರ್ದೆಶಕರಾದ ಸುಂದರಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸೀವಿಂಗ್ ಮಿಷನ್ ಅಪರೇಟರ್ ತರಬೇತಿ : ನೇರ ಸಂದರ್ಶನಕ್ಕೆ ಆಹ್ವಾನ

ಚಾಮರಾಜನಗರ ಮೇ-01 ಜವಳಿ ಮತ್ತು ಕೈ ಮಗ್ಗ ಇಲಾಖೆಯು 45 ದಿನಗಳ ಅವಧಿಯ ವಿದ್ಯುತ್ ಹೊಲಿಗೆ ಯಂತ್ರ (ಸೀವಿಂಗ್ ಮಿಷನ್ ಅಪರೇಟರ್) ತರಬೇತಿ ನೀಡಲಿದ್ದು ಆಸಕ್ತರು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಮೇ3 ರಿಂದ 5 ರವರೆಗೆ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಮೇ3 ರಂದು ಬೆಳಗ್ಗೆ 9 ರಿಂದ 11 ಗಂಟೆಯವರೆಗೆ ಗುಂಡ್ಲುಪೇಟೆ ಪಟ್ಟಣದ ಜೆ.ಎಸ್.ಎಸ್. ಕಾಲೇಜು ಎದುರು ಇರುವ ಉದಯರವಿ ಸೇವ ಸಂಸ್ಥೆ(ಮೋ.9632786586), ಹಳೆ ಆಸ್ಪತ್ರೆ ರಸ್ತೆಯಲ್ಲಿರುವ ಕಲ್ಪತರು ಗಾರ್ಮೆಂಟ್ಸ್(ಮೋ.998691896)ನಲ್ಲಿ ಬೆಳಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂದರ್ಶನ ನಡೆಯಲಿದೆ.
 ಮೇ3 ರಂದು ವiಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಚಾಮರಾಜನಗರz ದೇವಾಂಗ ಬೀದಿಯ 2 ನೇ ಕ್ರಾಸ್ ನಲ್ಲಿರುವ ಇಂಡಿಯನ್ ಇನ್ಸಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ, (ದೂ.ಸಂ.08226-222454), ಮೇ4 ರಂದು ಬೆಳಿಗ್ಗೆ9 ರಿಂದ 11 ಗಂಟೆಯವರೆಗೆ ಚಾಮರಾಜನಗರದ ವಾಣಿಯಾರ್ ಸ್ಟ್ರೀಟ್‍ನಲ್ಲಿರುವ  ಕಾವ್ಯಶ್ರೀ ಗಾಮೇರ್ಂಟ್ಸ್ (ಮೋ ನಂ 9880905210), ಬೆಳ್ಳಿಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮರಿಯಾಲದ ಜೆ.ಎಸ್.ಎಸ್ ನೈಪುಣ್ಯ ತರಬೇತಿ ಕೇಂದ್ರ, ಮೇ 4 ರಂದ್ದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಯಳಂದೂರಿನ ಬಳೆಪೇಟೆಯಲ್ಲಿರುವ ಕಲ್ಪತರು ಗಾಮೇರ್ಂಟ್ಸ್ (ಮೋ 9986912896) ನಲ್ಲಿ ಸಂದರ್ಶನ ನಡೇಯಲಿದೆ.
ಮೇ 5 ರಂದು ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಕೋಳ್ಳೆಗಾಲ ಪಟ್ಟಣದ ಬಸ್ತೀಪುರ ರಸ್ತೆಯ ರಾಜೀವನಗರ 4ನೇ ಕ್ರಾಸ್ ನಲ್ಲಿರುವ ಕಾವ್ಯಶ್ರೀ ಗಾಮೇರ್ಂಟ್ಸ್ (ಮೋ 9880905210), ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪೀಸ್ ಪಾರ್ಕ್‍ರಸ್ತೆಯ ಬಣ್ಣಾರಿ ಅಮ್ಮನ್ ದೇವಾಲಯದ ಪಕ್ಕದಲ್ಲಿರುವ ಕಲ್ಪತರು  ಗಾಮೇರ್ಂಟ್ಸ್ (ಮೋ 9986912896), ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಹನೂರು ಕ್ರಿಸ್ತರಾಜ ಕಾನ್ವೆಂಟ್ ಹತ್ತಿರವಿರುವ ಮಾತೃಶ್ರೀ ಗಾಮೇರ್ಂಟ್ಸ್ (ಮೋ 9986912896) ನಲ್ಲಿ ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು 18 ರಿಂದ 35 ರ ವಯೋಮಿತಿಯೋಳಗಿರಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಗರಿಷ್ಠ ವಯೋಮಿತಿ 40 ವರ್ಷಗಳು. ಅಭ್ಯರ್ಥಿಗಳು ಕನಿಷ್ಠ 5 ನೇ ತರಗತಿ ವ್ಯಾಸಂಗ ಮಾಡಿರಬೇಕು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿ (ಕೊಠಡಿ ಸಂಖ್ಯೆ 225) ಅಥವಾ ತರಬೇತಿ ಕೇಂದ್ರದಲ್ಲಿ ಪಡೆಯಬಹುದು ಅಗತ್ಯ ದಾಖಲೆ ಅರ್ಜಿಯೊಂದಿಗೆ ನೇರಸಂದರ್ಶನಕ್ಕೆ ಭಾಗವಹಿಸಬಹುದು. ವಿವರಗಳಿಗೆ ಜಿಲ್ಲಾಡಳಿತ ಭವನದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿ (ದೂರವಾಣಿ ಸಂಖ್ಯೆ 08226-222883) ಸಂರ್ಪಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*

  ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*    ಚಾಮರಾಜನಗರ, ಸೆಪ್ಟೆಂಬರ್ 28 :- ಈ ಬಾರಿಯ ರಾಷ್ಟ್ರೀಯ ಲೋ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು