Tuesday, 16 January 2018

ಮತದಾರರಿಗೆ ಚುನಾವಣಾ ನೊಂದಣಿ ಅರಿವು ಮೂಡಿಸಿ: ಸಿ.ಇ.ಒ,ಕೊಳವೆಬಾವಿ ಕೊರೆಯಲು ಅನುಮತಿ ಕಡ್ಡಾಯ : ಸುರಕ್ಷತಾ ಕ್ರಮಗಳನ್ನು ಪಾಲಿಸಿ - ಜಿಲ್ಲಾಧಿಕಾರಿ ಬಿ. ರಾಮು ಸೂಚನೆ (16-01-2018)


ಮತದಾರರಿಗೆ ಚುನಾವಣಾ ನೊಂದಣಿ ಅರಿವು ಮೂಡಿಸಿ: ಸಿ.ಇ.ಒ

ಚಾಮರಾಜನಗರ, ಜ. 16- 18 ವರ್ಷ ವಯೋಮಿತಿ ದಾಟಿದ ಪ್ರತಿಯೊಬ್ಬ ಮತದಾರರನ್ನು ಜ. 22ರೊಳಗೆ ನೊಂದಾಯಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿರುವ ಜಿ.ಪಂ. ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಚುನಾವಣಾ ಪೂರ್ವ ಸಭೆಯನ್ನದ್ದೇಶಿಸಿ ಅವರು ಮಾತನಾಡಿದರು.ಚುನಾವಣಾ ಪೂರ್ವ ಸಿದ್ದತೆಯಲ್ಲಿ ಮತದಾರರ ವ್ಯವಸ್ಥಿತ ನೊಂದಣಿ ಮತ್ತು ಚುನಾವಣಾ ಪಾಲ್ಗೊಳ್ಳುವಿಕೆ (Sveeಠಿ) ಅತ್ಯಂತ ಮಹತ್ವದ್ದಾಗಿದೆ. 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ 18 ವರ್ಷ ವಯೋಮಿತಿ ಮೀರಿದವರನ್ನು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸಬೇಕು. ಶಾಲಾ ಕಾಲೇಜಿನ ಮುಖ್ಯಸ್ಥರು ವಿದ್ಯಾರ್ಥಿ ಮತದಾರರ ನೊಂದಾವಣೆಗೆ ನಮೂನೆ 6ನ್ನು ಕಡ್ಡಾಯವಾಗಿ ವಿತರಿಸಿ ಭರ್ತಿಮಾಡಿ ಸಲ್ಲಿಸಬೇಕು ಎಂದರು.ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಬಹುಮುಖ್ಯವಾಗಿದೆ. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಮತ್ತು ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ಕ್ಷೇತ್ರಮಟ್ಟದ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಕ್ರಮವಹಿಸುವಂತೆ ತಿಳಿಸಿದರು.ಮಹಿಳೆಯರು, ವಿಕಲಚೇತನರು, ಹೆಚ್.ಐ.ವಿ ಪೀಡಿತರು, ಲಿಂಗತ್ವ ಅಲ್ಪಸಂಖ್ಯಾತರುಗಳನ್ನು ಭೇಟಿ ಮಾಡಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟನಲ್ಲಿ ಕ್ಷೇತ್ರಮಟ್ಟದ ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಂಡು ಅರಿವು ಮೂಡಿಸುವ ಕೆಲಸವಾಗಬೇಕು. ಜಿಲ್ಲೆಯಾದ್ಯಂತ ಜ. 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಕಡ್ಡಾಯವಾಗಿ ಕ್ಷೇತ್ರಮಟ್ಟದಲ್ಲಿ ಆಯೋಜಿಸುವಂತೆ ಸೂಚನೆರ ನೀಡಿದರು.ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಯವರು ಮತ್ತು ಪಂಚಾಯತ್ ಅಬಿವೃದ್ಧಿ ಅಧಿಕಾರಿಗಳು 18 ವರ್ಷ ಮೀರಿದ ಯುವ ಮತದಾರರ ಹೆಸರನ್ನು ಸೇರ್ಪಡೆಗೊಳಿಸಲು ಗ್ರಾಮಗಳಲ್ಲಿ ಟಾಂ ಟಾಂ ಪ್ರಚಾರ ನೀಡಬೇಕು ಇದಕ್ಕಾಗಿ ಹೊಸ ಮತದಾರರ ನೊಂದಣಿ ದಿನಾಂಕವನ್ನು ಚುನಾವಣಾ ಆಯೋಗವು ಜ. 12ರಿಂದ ಜ. 22 ರವರೆಗೆ ವಿಸ್ತರಿಸಿದೆ ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು ನೊಂದಣಿ ಸಮಯದಲ್ಲಿ ವಿಕಲಚೇತನರಿಗೆ ಸೂಕ್ತ ವ್ಯವಸ್ತೆ ಕಲ್ಪಿಸಬೇಕು. ಗುಡ್ಡಗಾಡು ಪ್ರದೇಶದ ನಿವಾಸಿಗಳಿಗೆ ಸೂಕ್ತ ಮಾಹಿತಿ ನೀಡಿ ನೊಂದಣಿಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು. ನಮೂನೆ 6ರಲ್ಲಿ ಹೊಸದಾಗಿ ನೊಂದಣಿ ಮಾಡುವುದು, ನಮೂನೆ 6(ಎ) ವಿದೇಶದಲ್ಲಿ ನಾಗರೀಕತ್ವ, ನಮೂನೆ 7 ರಲ್ಲಿ ಮರಣ ಹಾಗೂ ಮದುವೆಯಾಗಿ ಹೊರಹೋಗಿರುವವರನ್ನು ರದ್ದು ಮಾಡುವುದು, ನಮೂನೆ 8 ರಲ್ಲಿ ವರ್ಗಾವಣೆ ಮಾಡುವುದು, ನಮೂನೆ 8(ಎ) ನಲ್ಲಿ ಹೆಸರು ಮತ್ತು ಇತರೆ ತಿದ್ದುಪಡಿಗೆ ಅವಕಾಶ ಕಲ್ಪಿಸುವುದನ್ನು ತ್ವರಿತವಾಗಿ ಮಾಡಬೇಕಾಗಿದೆ ಎಂದು ಹರೀಶ್‍ಕುಮಾರ್ ಅವರು ತಿಳಿಸಿದರು.ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ. ಜಿಲ್ಲಾ ಆರೋಗ್ಯಾಧಿಕಾರಿ ಹಾಗು ಇತರೆ ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.


ಕೊಳವೆಬಾವಿ ಕೊರೆಯಲು ಅನುಮತಿ ಕಡ್ಡಾಯ : ಸುರಕ್ಷತಾ ಕ್ರಮಗಳನ್ನು ಪಾಲಿಸಿ - ಜಿಲ್ಲಾಧಿಕಾರಿ ಬಿ. ರಾಮು ಸೂಚನೆ

ಚಾಮರಾಜನಗರ, ಜ. 16: ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು 15 ದಿನ ಮುಂಚಿತವಾಗಿಯೇ ಸಂಬಂಧಪಟ್ಟ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದ್ದಾರೆ.
ಜಮೀನು ಮಾಲೀಕರು, ಬೋರ್‍ವೆಲ್ ಕೊರೆಯುವವರು 15 ದಿನ ಮುಂಚಿತವಾಗಿಯೇ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಆಯುಕ್ತರು ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿ ನಿರಾಪೇಕ್ಷಣಾ ಪತ್ರ ಪಡೆದುಕೊಳ್ಳಬೆಕು. ಅಧಿಸೂಚಿತ ಪ್ರದೇಶದಲ್ಲಿ ಕೊಳವೆಬಾವಿ ಕೊರೆಯುವ ಮೊದಲು ಜಿಲ್ಲಾಮಟ್ಟದ ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಅನುಷ್ಠಾನ ಸಮಿತಿಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಖಾಸಗಿ ಬೋರ್ ವೆಲ್ ಪಡೆಯಬೇಕಾದಲ್ಲಿ ಕರ್ನಾಟಕ ಅಂತರ್ಜಲ ಸಂರಕ್ಷಣಾ ಕಾಯಿದೆ ಪ್ರಕಾರ ಸಾರ್ವಜನಿಕ ಕೊಳವೆ ಬಾವಿ, ತೆರೆದ ಬಾವಿಯಿಂದ 500 ಮೀ. ಅಂತರದಲ್ಲಿ ಯಾವುದೇ ರೀತಿಯ ಇನ್ನೊಂದು ಬಾವಿ ಕೊರೆಯುವಂತಿಲ್ಲ. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೊಂದಣಿಯಾಗಿ ನಮೂನೆ 7ಎ ಹೊಂದಿರುವ ರಿಗ್ ವಾಹನಗಳಿಂದ ಮಾತ್ರ ಕೊಳವೆ ಬಾವಿಗಳನ್ನು ಕೊರೆಸಬೇಕು. ಬೋರ್ ವೆಲ್ ಕೊರೆಯುವಾಗ ಸ್ಥಳದಲ್ಲಿ ರಿಗ್ ಮಾಲೀಕರು  ಹಾಗೂ ಕೊರೆಸುವವರ ಹೆಸರು ಇರುವ ನಾಮಫಲಕಗಳನ್ನು ಹಾಕಬೇಕು.
ಸಫಲ ಅಥವಾ ವಿಫಲ ಕೊಳವೆ ಬಾವಿಗಳಿಗೆ ಕೇಸಿಂಗ್ ಅಳವಡಿಸಿ ಸುತ್ತ ಕಾಂಕ್ರೀಟ್ ಪ್ಲಾಟ್ ಫಾರಂ ನಿರ್ಮಿಸಿ ಪೈಪ್‍ಗೆ ಭದ್ರವಾಗಿ ಕ್ಯಾಪ್ ಹಾಕಿ ವೆಲ್ಡಿಂಗ್ ಮಾಡಿಸಬೇಕು. ಒಂದುವೇಳೆ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ ಮುಚ್ಚದೇ ಇದ್ದು ಯಾವುದೇ ಅನಾಹುತ ಸಂಭವಿಸಿದಲ್ಲಿ ಬೋರ್‍ವೆಲ್ ಕೊರೆದ ಸಂಸ್ಥೆ ಹಾಗೂ ಜಮೀನಿನ ಮಾಲೀಕರೇ ನೇರ ಹೊಣೆಗಾರರಾಗುತ್ತಾರೆ. ಸುರಕ್ಷತೆ ವಹಿಸದೇ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವೈಫಲ್ಯ ಕಂಡುಬಂದಲ್ಲಿ ಜಿಲ್ಲಾಡಳಿತದಿಂದ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ.
ರಿಗ್ ಮಾಲೀಕರು ಏಜೆನ್ಸಿಯವರು ಕೊಳವೆ ಬಾವಿ ಕೊರೆಯುವ ಕಾರ್ಯ ಮುಕ್ತಾಯವಾದ ಕೂಡಲೇ ನಮೂನೆ 1 ಸಿಯಲ್ಲಿ ವಿವರಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಅಧಿಕಾರಿಗಳಿಗೆ ಹಾಗೂ ಅಧಿನಿಯಮದ ಪ್ರಕಾರ ಪ್ರಾಧಿಕಾರಕ್ಕೆ ಸಲ್ಲಿಸಬೇಕು.
ಗ್ರಾಮಾಂತರ ಪ್ರದೇಶದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಕಾರ್ವನಿರ್ವಾಹಕ ಅಧಿಕಾರಿಗಳು, ನಗರ ಪಟ್ಟಣ ಪ್ರದೇಶದಲ್ಲಿ ಕಿರಿಯ ಎಂಜಿನಿಯರ್, ಅನುಷ್ಠಾನ ಅಧಿಕಾರಿಗಳು ಮೇಲ್ವಿಚಾರಕರಾಗಿ ಇರುತ್ತಾರೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 17ರಂದÀು ಜಿ.ಪಂ. ಕೆಡಿಪಿ ಸಭೆ 

ಚಾಮರಾಜನಗರ, ಜ. 16 - ಚಾಮರಾಜನಗರ ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜನವರಿ 17ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಜ. 18ರಂದು ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಾಗಾರ ಉದ್ಘಾಟನಾ ಸಮಾರಂಭ

ಚಾಮರಾಜನಗರ, ಜ. 16 - ಜಿಲ್ಲಾ ಪಂಚಾಯತ್‍ನ ಕೈಮಗ್ಗ ಮತ್ತು ಜವಳಿ ಇಲಾಖೆಯು ಕೊಳ್ಳೇಗಾಲದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಜನವರಿ 18ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರದ ನೂತನ ಜವಳಿ ನೀತಿ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಒಂದು ದಿನದ ಕಾರ್ಯಾಗಾರ ಹಮ್ಮಿಕೊಂಡಿದೆ.
ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಸಮಾರಂಭ ಉದ್ಘಾಟಿಸುವರು. ಶಾಸಕರಾದ ಎಸ್. ಜಯಣ್ಣ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ್, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ  ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ಕೊಳ್ಳೇಗಾನ ನಗರಸಭೆ ಅಧ್ಯಕ್ಷರಾದ ಶಾಂತರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ನಗರಸಭೆ ಉಪಾಧ್ಯಕ್ಷರಾದ ಶಿವಾನಂದ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಲತಾ ರಾಜಣ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಜವಳಿ ಅಭಿವೃದ್ಧಿ ಆಯುಕ್ತರಾದ ಆರ್. ಗಿರೀಶ್, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜವಳಿ ಅಭಿವೃದ್ಧಿ ಆಯುಕ್ತರ ಪತ್ರಾಂಕಿತ ಸಹಾಯಕರಾದ ವಿಜಯಕುಮಾರ್ ಬಿ. ನಿರಾಳೆ, ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿನಿರ್ದೇಶಕರಾದ ಎಸ್. ಪ್ರಕಾಶ್, ಎ. ಸುರೇಶ್ ಕುಮಾರ್ ಪಾಲ್ಗೊಳ್ಳುವರು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 19ರಂದು ಚಾ.ನಗರ ತಾಲೂಕು ಮಟ್ಟದ ಯುವಜನ ಮೇಳ 

ಚಾಮರಾಜನಗರ, ಜ. 16 :- ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಸವಾಪುರದ ಗೌತಮಬುದ್ಧ ಸಾಂಸ್ಕøತಿಕ ಕಲಾ ಮತ್ತು ಕ್ರೀಡಾ ಯುವಜನ ಸಂಘ ಮತ್ತು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರುಗಳ ವತಿಯಿಂದ ಚಾಮರಾಜನಗರ ತಾಲೂಕು ಮಟ್ಟದ ಯುವಜನ ಮೇಳವನ್ನು ಜನವರಿ 19ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅಧ್ಯಕ್ಷತೆ ವಹಿಸುವರು.
ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ದಯಾನಿಧಿ, ಚಂದಕವಾಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್. ಬಾಲರಾಜು, ಮಾದಾಪುರ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎಸ್. ಬಾಲರಾಜು, ಅಮಚವಾಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ, ಉಡಿಗಾಲ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ಚಂದ್ರಕಲಾ ಚಂದ್ರಶೇಖರ್, ಸಂತೆಮರಹಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಶೀಲಾ ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್.ಎಸ್. ಪ್ರೇಮಲತಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದ ಅಂಗವಾಗಿ ಭಾವಗೀತೆ, ರಂಗಗೀತೆ, ಏಕಪಾತ್ರಾಭಿನಯ, ಲಾವಣಿ, ಜಾನಪದ ನೃತ್ಯ, ಕೋಲಾಟ, ಭಜನೆ, ಸೋಬಾನೆ ಪದ, ರಾಗಿ ಬೀಸುವ ಕಲ್ಲಿನ ಪದ ಹಾಗೂ ಚರ್ಮವಾದ್ಯ ಮೇಳ ಸ್ಪರ್ಧೆಗಳು ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಎಂ ಚಲುವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ರಿಯಾಯಿತಿ ಬಸ್‍ಪಾಸ್ ನವೀಕರಣೆ 

ಚಾಮರಾಜನಗರ, ಜ. 16:- ಚಾಮರಾಜನಗರ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜಿಲ್ಲೆಯ ತಾಲೂಕುಗಳಲ್ಲಿನ ವಿಕಲಚೇತನ ಫಲಾನುಭವಿಗಳಿಗೆ 2018ನೇ ಸಾಲಿಗೆ ರಿಯಾಯಿತಿ ದರದ ಬಸ್ ಪಾಸುಗಳನ್ನು ನವೀಕರಿಸುವ ಸಂಬಂಧü ಆಯಾ ತಾಲೂಕುಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕ್ರಮ ಕೈಗೊಳ್ಳಲಿದೆ. ಮಾನ್ಯತೆ ಇರುವ 31.12.2017ರ ಬಸ್ ಪಾಸುಗಳನ್ನು ಫೆಬ್ರವರಿ 28ರವರೆಗೆ ಮಾತ್ರ ಪರಿಗಣಿಸಲಾಗುವುದು.
ಚಾಮರಾಜನಗರ ತಾಲೂಕಿನ ವಿಕಲಚೇತನರಿಗೆ ಜನವರಿ 18 ರಿಂದ 20ರವರೆಗೆ ನಗರದ ಬಸ್ ನಿಲ್ದಾಣದಲ್ಲಿ, ಗುಂಡ್ಲುಪೇಟೆ ತಾಲೂಕಿನವರಿಗೆ ಜನವರಿ 22 ಹಾಗೂ 23ರಂದು ಗುಂಡ್ಲುಪೇಟೆ ಬಸ್ ನಿಲ್ದಾಣದಲ್ಲಿ, ಕೊಳ್ಳೇಗಾಲ ಹಾಗೂ ಯಳಂದೂರಿನವರಿಗೆ ಜನವರಿ 25 ರಿಂದ 27ರವರೆಗೆ ಕೊಳ್ಳೇಗಾಲ ಘಟಕದಲ್ಲಿ ಹಾಗೂ ನಂಜನಗೂಡು ವಿಕಲಚೇತನರಿಗೆ ಜನವರಿ 29 ರಿಂದ 31ರವರೆಗೆ ನಂಜನಗೂಡು ಘಟಕದಲ್ಲಿ ನವೀಕರಿಸಲಾಗುವುದು.
ನವೀಕರಣಕ್ಕೆ ಇಚ್ಚಿಸುವವರು 2017ನೇ ಸಾಲಿನಲ್ಲಿ ಪಡೆದಿರುವ ಬಸ್ ಪಾಸ್, ಅಂಗವಿಕಲರ ಗುರುತಿನ ಚೀಟಿ ಹಾಗೂ ನಕಲು ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ, ಇತ್ತೀಚಿನ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಪಾಸ್ ದರ  660 ರೂ.ಗಳನ್ನು ಪಾವತಿಸಬೇಕು.
ತಾಲೂಕು ಕೇಂದ್ರಗಳಲ್ಲಿ ಆಯಾ ದಿನದಂದು ಫಲಾನುಭವಿಗಳು ಖುದ್ದು ಹಾಜರಿದ್ದು ಬಸ್ ಪಾಸ್‍ಗಳನ್ನು ನವೀಕರಿಸಿಕೊಳ್ಳಬೇಕು. ಫೆಬ್ರವರಿ 28ರ ನಂತರ ಯಾವುದೇ ವಿಕಲಚೇತನರ ಬಸ್ ಪಾಸ್‍ಗಳನ್ನು ನವೀಕರಿಸಲು ಅವಕಾಶವಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 17ರಂದು ಚಾ.ನಗರ ಸಭೆ ಸಾಮಾನ್ಯ ಸಭೆ

ಚಾಮರಾಜನಗರ, ಜ. 16 - ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಜನವರಿ 17ರಂದು ಮಧ್ಯಾಹ್ನ 3 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷರಾದ ಶೋಭಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 24ರಂದು ಪ.ಜಾ, ಪ.ಪಂಗಡವರಿಗೆ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಗೆ ನೇರ ಆಯ್ಕೆ

ಚಾಮರಾಜನಗರ, ಜ. 16- ಮೈಸೂರಿನಲ್ಲಿರುವ ಕೇಂದ್ರೀಯ ಪ್ಲಾಸ್ಟಿಕ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗ್ಲೀಷ್ ಮತ್ತು ವಿವಿಧ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಗೆ ಜನವರಿ 24ರಂದು ನೇರ ಆಯ್ಕೆ ನಡೆಸಲಿದೆ.
ತರಬೇತಿ 6 ತಿಂಗಳದಾಗಿದ್ದು ಉಚಿತ ಊಟ, ವಸತಿ ಹಾಗೂ ಮಾಸಿಕ 500 ರೂ.ಗಳ ಶಿಷ್ಯ ವೇತನ ನೀಡಲಿದೆ. 18 ರಿಂದ 35ರ ವಯೋಮಿತಿಯ ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ, ಐಟಿಐ, ಡಿಪ್ಲೊಮಾ ಪದವಿ ಅಭ್ಯರ್ಥಿಗಳು ಅರ್ಹರು.
ಹೆಚ್ಚಿನ ಮಾಹಿತಿಗೆ ಮೈಸೂರಿನ ಹೆಬ್ಬಾಳದ ಕೈಗಾರಿಕಾ ಕೇಂದ್ರಲ್ಲಿರುವ ಸಿಪೆಟ್ (ದೂ.ಸಂಖ್ಯೆ 0821-2510681, ಮೊಬೈಲ್ 9632688884) ಸಂಪರ್ಕಿಸುವಂತೆ ಸಿಪೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ : ಶಾಲಾ ಮುಖ್ಯಸ್ಥರಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಜ. 16:- ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ನನ್ನ ನೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸುವ ಯೋಜನೆಯನ್ನು ಹಮ್ಮಿಕೊಂಡಿದೆ.
ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ಶಾಲೆಗಳಲ್ಲಿ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಕಾರ್ಯಕ್ರಮಕ್ಕೆ ಪ್ರಾಧಿಕಾರವು 5000 ರೂ.ಗಳ ಗರಿಷ್ಟ ಮಿತಿಯೊಂದಿಗೆ ವಾಸ್ತವಿಕ ವೆಚ್ಚ ಭರಿಸಲಿದೆ.
ಕಾರ್ಯಕ್ರಮದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು, ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಜನವರಿ 20ರೊಳಗೆ ಸ್ವಯಂ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮದ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
ಅರ್ಜಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 (ದೂ.ಸಂ. 080-22484516, 22107704) ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರನ್ನು ಅಥವಾ ಪ್ರಾಧಿಕಾರದ ವೆಬ್ ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಞಚಿಞಚಿಠಿಡಿಚಿಜhiಞಚಿಡಿಚಿ.ಛಿom ಸಂಪರ್ಕಿಸುವಂತೆ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Friday, 12 January 2018

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಹಕ್ಕು ಆಕ್ಷೇಪಣೆ ಸಲ್ಲಿಕೆಗೆ ಜ. 22ರವರೆಗೂ ಕಾಲಾವಕಾಶ ವಿಸ್ತರಣೆ (12-01-2018)

   

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಹಕ್ಕು ಆಕ್ಷೇಪಣೆ ಸಲ್ಲಿಕೆಗೆ ಜ. 22ರವರೆಗೂ ಕಾಲಾವಕಾಶ ವಿಸ್ತರಣೆ 

ಚಾಮರಾಜನಗರ, ಜ. 12 - ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹೆಸರು ಸೇರ್ಪಡೆ ಹಕ್ಕು ಆಕ್ಷೇಪಣೆ ಸಲ್ಲಿಕೆಗೆ ಜನವರಿ 22ರವರೆಗೂ ಕಾಲಾವಕಾಶ ವಿಸ್ತರಿಸಲಾಗಿದ್ದು ಜಿಲ್ಲೆಯ ಜನತೆ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಮನವಿ ಮಾಡಿಕೊಂಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು ದಿನಾಂಕ 1.1.2018ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಈ ಸಂಬಂಧ ಹಕ್ಕು ಆಕ್ಷೇಪಣೆ ಸಲ್ಲಿಸಲು ಜನವರಿ 12ರವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಚುನಾವಣಾ ಆಯೋಗವು  ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಹಕ್ಕು ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಅವಕಾಶ ನೀಡುವ ಸಲುವಾಗಿ ಜನವರಿ 22ರವರೆಗೂ ಕಾಲಾವಕಾಶ ವಿಸ್ತರಣೆ ಮಾಡಿದೆ ಎಂದರು.
18 ವರ್ಷ ತುಂಬಿದ ಅರ್ಹ ಮತದಾರರು ನಮೂನೆ 6ರ ಅರ್ಜಿಗಳನ್ನು ಸಂಬಂಧಿಸಿದ ತಹಸೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು. ನಿಗದಿತ ದಿನಾಂಕದೊಳಗೆ ಮತದಾರರ ನೊಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಸೀಲ್ದಾರ್ ಕಚೇರಿಯ ಚುನಾವಣಾ ಶಾಖೆಗೆ ಸಲ್ಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, 18 ವರ್ಷ ತುಂಬಿದ ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆ, ಮರಣ ಹೊಂದಿದ ಮತದಾರರ ಹೆಸರನ್ನು ಕೈಬಿಡುವುದು ವಿಶೇಷ ಆಂದೋಲನ ಕಾರ್ಯಕ್ರಮದಲ್ಲಿ ನಡೆಸಲಿದೆ. ವಿಶೇಷ ಆಂದೋಲನವನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಮಾಡಲು ಸೂಚಿಸಲಾಗಿದೆ. ಈ ಸಂಬಂಧ ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್‍ಓ) ಸಭೆ ನಡೆಸಲಾಗುತ್ತದೆ ಎಂದರು.
ವಿಶೇಷ ಆಂದೋಲನ ಜನವರಿ 22ರವರೆಗೂ ನಡೆಯಲಿದೆ. ಹಕ್ಕು ಆಕ್ಷೇಪಣೆಗಳನ್ನು ಫೆಬ್ರವರಿ 12ರಂದು ಇತ್ಯರ್ಥಪಡಿಸಲಾಗುತ್ತದೆ. ಮತದಾರರ ಪಟ್ಟಿಗೆ ಹೆಸರುಗಳ ಸೇರ್ಪಡೆ, ಫೋಟೋಗಳ ಸೇರ್ಪಡೆ ಪೂರಕ ಪಟ್ಟಿಗಳನ್ನು ಫೆಬ್ರವರಿ 24ರಂದು ಸಿದ್ಧಪಡಿಸಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರವರಿ 28ರಂದು ಪ್ರಕಟಿಸಲಾಗುತ್ತದೆ.
ಮತದಾರರ ಪಟ್ಟಿಯಲ್ಲಿ ಕಂಡುಬರುವ ಲೋಪದೋಷಗಳನ್ನು ಸರಿಪಡಿಸಿ ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಿ ಶೇ.100ರಷ್ಟು ದೋಷರಹಿತ ಮತದಾರರ ಪಟ್ಟಿಗೆ ಸಿದ್ಧತೆಗೆ ಎಲ್ಲಾ ಕ್ರಮ ವಹಿಸಲಾಗಿದೆ. ಮತದಾರರ ಪಟ್ಟಿಗೆ ಹಕ್ಕು ಆಕ್ಷೇಪಣೆಗಳನ್ನು ಸಲ್ಲಿಸಲು ಜನವರಿ 22ರವರೆಗೆ ಕಾಲಾವಕಾಶ ಇರುವುದರಿಂದ ಜಿಲ್ಲೆಯ ಜನತೆ ಈ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಮನವಿ ಮಾಡಿಕೊಂಡರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ ಗಾಯತ್ರಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಜ. 17ರಂದು ಚಾ.ನಗರ ಸಭೆ ಸಾಮಾನ್ಯ ಸಭೆ

ಚಾಮರಾಜನಗರ, ಜ. 12  ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಜನವರಿ 17ರಂದು ಮಧ್ಯಾಹ್ನ 3 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷರಾದ ಶೋಭಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 18ರಂದು ಅಡುಗೆಯವರು, ಅಡುಗೆ ಸಹಾಯಕರ ಹುದ್ದೆಗೆ ಕೌನ್ಸೆಲಿಂಗ್

ಚಾಮರಾಜನಗರ, ಜ. 12 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಡುಗೆಯವರು ಹಾಗೂ ಅಡುಗೆ ಸಹಾಯಕರ ಹುದ್ದೆಗಳ ನೇಮಕಾತಿ ಸಂಬಂಧ ಅಂತಿಯ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ವತಿಯಿಂದ ಜನವರಿ 18ರಂದು ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಕೆ.ಎಸ್.ಆರ್.ಟಿ.ಸಿ. ಡಿಪೋ ಹತ್ತಿರದ ಡಿ. ದೇವರಾಜ ಅರಸು ಭವನದಲ್ಲಿ ಕೌನ್ಸೆಲಿಂಗ್ ನಡೆಸಲಾಗುವುದು.
ಅಡುಗೆಯವರ ಹುದ್ದೆಗೆ ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಅಡುಗೆ ಸಹಾಯಕರ ಹುದ್ದೆಗೆ ಮಧ್ಯಾಹ್ನ 1.30 ರಿಂದ ಸಂಜೆ 5.30ರವರೆಗೆ ಕೌನ್ಸೆಲಿಂಗ್ ನಡೆಯಲಿದೆ.
ರಾಜ್ಯಾದ್ಯಂತ ಏಕರೂಪ ಮಾದರಿಯಲ್ಲಿ ಒಂದೇ ಸಮಯದಲ್ಲಿ ಕೌನ್ಸೆಲಿಂಗ್ ನಡೆಯಲಿರುವುದರಿಂದ ಅಭ್ಯರ್ಥಿಗಳು ಆಯಾ ಹುದ್ದೆಗೆ ನಿಗಧಿಪಡಿಸಿದ ಸಮಯಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ ತಿತಿತಿ.ಛಿhಚಿmಚಿಡಿಚಿರಿಚಿಟಿಚಿgಚಿಡಿ.ಟಿiಛಿ.iಟಿ ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಜ. 12- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಜನವರಿ 20 ರಿಂದ 24ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸಲಿದ್ದಾರೆ.
ಜನವರಿ 20ರಂದು ಯಳಂದೂರು, 22ರಂದು ಕೊಳ್ಳೇಗಾಲ, 23ರಂದು ಚಾಮರಾಜನಗರ ಹಾಗೂ 24ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜ. 19ರಂದು ಚಾ.ನಗರ ತಾಲೂಕು ಮಟ್ಟದ ಯುವಜನ ಮೇಳ 

ಚಾಮರಾಜನಗರ, ಜ. 12 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಚಾಮರಾಜನಗರ ತಾಲೂಕು ಮಟ್ಟದ ಯುವಜನ ಮೇಳವನ್ನು ಜನವರಿ 19ರಂದು ಕರಿನಂಜನಪುರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದು ಬೆಳಿಗ್ಗೆ 9 ಗಂಟೆಗೆ ತಾಲೂಕಿನ ವ್ಯವಸ್ಥಾಪಕರಲ್ಲಿ ವರದಿ ಮಾಡಿಕೊಳ್ಳುವಂತೆ ತಿಳಿಸಿದೆ.
ವೈಯಕ್ತಿಕವಾಗಿ ಭಾವಗೀತೆ, ಲಾವಣಿ, ರಂಗಗೀತೆ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳಿವೆ.
ಗುಂಪು ಸ್ಪರ್ಧೆಗಳಾಗಿ ಗೀಗೀ ಪದ (5 ಮಂದಿ), ಕೋಲಾಟ ಹಾಗೂ ಜಾನಪದ ನೃತ್ಯ (12 ಮಂದಿ), ಸೋಬಾನೆ ಪದ (4 ಮಂದಿ), ಭಜನೆ (8 ಮಂದಿ), ಜಾನಪದ ಗೀತೆ ಹಾಗೂ ಚರ್ಮವಾದ್ಯ ಮೇಳ (6 ಮಂದಿ) ಸ್ಪರ್ಧೆಗಳು ನಡೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ (ದೂರವಾಣಿ ಸಂಖ್ಯೆ 08226-224932) ಅಥವಾ ಮೊಬೈಲ್ ಸಂಖ್ಯೆ 9482718278, 9880211027ನ್ನು ಸಂಪರ್ಕಿಸುವಂತೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
   

ಯುವಜನರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಜಾಗೃತಿ ಮೂಡಿಸಿ:ಡಿಸಿ

 ಚಾಮರಾಜನಗರ, ಜ.12 - ಜಿಲ್ಲೆಯಲ್ಲಿ 18 ವರ್ಷ ತುಂಬಿರುವ ಎಲ್ಲಾ ಅರ್ಹ ಯುವಜನರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಗತ್ಯ ಜಾಗೃತಿ ಉಂಟು ಮಾಡುವಂತೆ ಜಿಲ್ಲಾಧಿಕಾರಿ ಬಿ.ರಾಮು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಮತದಾರರ ಜಾಗೃತಿ ಅಭಿಯಾನ ಹಿನ್ನೆಲೆಯಲ್ಲಿ ನಡೆದ ಕಾಲೇಜು ಪ್ರಾಂಶಪಾಲರ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರು ಮತದಾನ ಮಾಡುವ ಮಹತ್ವದ ಬಗ್ಗೆ ತಿಳಿಸಿಕೊಡಬೇಕಿದೆ. 18 ವರ್ಷ ತುಂಬಿರುವ ಎಲ್ಲರನ್ನು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕಿದೆ. ಮತದಾನ ಮಾಡುವ ಹಕ್ಕನ್ನು ನೀಡಿದ್ದು, ಇದರ ಬಗ್ಗೆ ಯುವಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲದಿರುವ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸುವುದು ಮತ್ತು ಕಾಲೇಜುಗಳಲ್ಲಿ ಮತದಾರರ ಸಾಕ್ಷರತೆ ಕ್ಲಬ್‍ಗಳನ್ನು ರಚಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರಸ್ತುತ ವಿದ್ಯುನ್ಮಾನ ಮತ ಯಂತ್ರಗಳನ್ನು (ಇ.ವಿ.ಎಂ) ಚುನಾವಣೆಯಲ್ಲಿ ಬಳಸಲಾಗುತ್ತಿದೆ. ಮತದಾರನು ತಾನು ಯಾರಿಗೆ ಮತ ಹಾಕಿದ್ದೇನೆ ಎಂಬುದನ್ನು ವಿ.ವಿ.ಪ್ಯಾಟ್‍ಗಳ ಮೂಲಕ ತಿಳಿದುಕೊಳ್ಳಲು ಅವಕಾಶವಿದೆ.              ಜಿಲ್ಲೆಯಲ್ಲಿ ಮೊದಲ ಬಾರಿಗೆ ವಿ.ವಿ.ಪ್ಯಾಟ್‍ನ್ನು ಕಳೆದ ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಳಸಲಾಗಿತ್ತು. ಈ ವಿ.ವಿ.ಪ್ಯಾಟ್ ಹಾಗೂ ಇ.ವಿ.ಎಂ ಬಗ್ಗೆ ನೂತನವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ಯುವಜನರಿಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ರಾಮು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಅವರು ಮಾತನಾಡಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತದಾರರ ಸಾಕ್ಷರತೆ ಕ್ಲಬ್‍ಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಮತದಾನದ ಪ್ರಾಮುಖ್ಯತೆ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸಬೇಕು ಎಂದರು.
ವಿದ್ಯಾರ್ಥಿಗಳಿಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಮತದಾನದ ಮಹತ್ವ ಕುರಿತು ಚರ್ಚಾಸ್ಪರ್ಧೆ, ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಬಹುಮಾನಗಳನ್ನು ವಿತರಿಸಲಾಗುವುದು. ಈ ಹಿನ್ನಲೆಯಲ್ಲಿ ಪ್ರಾಂಶುಪಾಲರು ಅಗತ್ಯ ಪ್ರಕ್ರಿಯೆಗೆ ಮುಂದಾಗಬೇಕೆಂದು ಹರೀಶ್ ಕುಮಾರ್ ಅವರು ನಿರ್ದೇಶನ ನೀಡಿದರು.
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮತದಾರರ ಸಾಕ್ಷರತ ಕ್ಲಬ್‍ಗಳನ್ನು ನಿರ್ವಹಣೆಗೆ ಸಮಾಜ ಶಾಸ್ತ್ರ ಶಿಕ್ಷಕರು, ಉಪನ್ಯಾಸಕರು ಅಥವಾ ಈ ಹಿಂದೆ ಚುನಾವಣಾ ಕರ್ತವ್ಯ ನಿರ್ವಹಿಸಿ ಅನುಭವ ಹೊಂದಿರುವ ಬೋಧಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಿಕೊಳ್ಳಬೇಕು. ಈ ಸಂಬಂಧ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಕಚೇರಿಗೆ ಮಾಹಿತಿ ನೀಡಬೇಕು ಎಂದು ಹರೀಶ್ ಕುಮಾರ್ ತಿಳಿಸಿದರು.
ಮತದಾರರ ಸಾಕ್ಷರತೆ ಕ್ಲಬ್‍ಗಳಿಗೆ ಇ.ವಿ.ಎಂ ಮತ್ತು ವಿ.ವಿ.ಪ್ಯಾಟ್‍ಗಳ ಬಳಕೆಯ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಿಕೊಡಲಾಗುವುದು. ಜಿಲ್ಲೆಯಲ್ಲಿ ಹೆಚ್ಚಾಗಿ ಹಾಡಿಗಳಿದ್ದು, ಸಾಕ್ಷರತೆಯ ಪ್ರಮಾಣ ಕಡಿಮೆ ಇರುವಂತಹ ಹಾಡಿಗಳಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲಾಗುವುದು ಎಂದು ಹರೀಶ್ ಕುಮಾರ್ ಅವರು ನುಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ ಕಾಲೇಜಿನಲ್ಲಿರುವ 18 ವರ್ಷ ತುಂಬಿದ ಎಲ್ಲಾ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ನಮೂನೆ-6ನ್ನು ಭರ್ತಿಮಾಡಿ ಪ್ರಾಂಶಪಾಲರ ಸಹಿಯೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‍ರವರ ಕಚೇರಿಗೆ ಸಲ್ಲಿಸಬೇಕೆಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ಫೌಜಿಯಾ ತರನ್ನಮ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹದೇವಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಎಲ್ಲಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕನ್ನಡ ಸಾಹಿತ್ಯಕ್ಕೆ ಶ್ರೀಮಂತ ಇತಿಹಾಸ:ಡಾ.ಗೀತ ಮಹದೇವಪ್ರಸಾದ್ 

ಚಾಮರಾಜನಗರ, ಜ.12:- ಕನ್ನಡ ಸಾಹಿತ್ಯಕ್ಕೆ ಶ್ರೀಮಂತ ಚರಿತ್ರೆಯಿದೆ. ಅದರ ವ್ಯಾಪ್ತಿ ಅತ್ಯಂತ ವಿಶಾಲವಾಗಿದೆ ಎಂದು ಸಕ್ಕರೆ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ತಿಳಿಸಿದರು.
ಗುಂಡ್ಲುಪೇಟೆಯಲ್ಲಿ ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆರಂಭಗೊಂಡ 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಭಾಷೆಯ ಸಾಹಿತ್ಯ ಜೀವಂತವಾಗಿದ್ದರೆ ಅದು ನಿಂತ ನೀರಾಗುವುದಿಲ್ಲ. ಬದಲಾಗಿ ಅದು ಸದಾ ಹರಿಯುವ ನೀರಿನಂತೆ ಸಮೃದ್ಧವಾಗಿರುತ್ತದೆ, ಕ್ರಿಯಾಶೀಲವಾಗಿರುತ್ತದೆ. ಪ್ರತಿಯೊಂದು ಕಾಲದಲ್ಲಿಯೂ ಸಾಹಿತ್ಯ ತನ್ನನ್ನು ತಾನು ಬದಲಾವಣೆಗೆ ಒಡ್ಡಿಕೊಳ್ಳುತ್ತದೆ. ಹೊಸದನ್ನು ಸೇರಿಸಿಕೊಂಡು ಹಳೆಯದನ್ನು ಸ್ಮರಿಸಿಕೊಂಡು ಮುಂದೆ ಸಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಪ್ರತಿಯೊಂದು ಸಾಹಿತ್ಯವೂ ಆಯಾ ದೇಶಗಳ, ಆಯಾ ಕಾಲಘಟ್ಟಗಳ ಜೊತೆ ಮುಖಾಮುಖಿಯಾಗುವುದರ ಮೂಲಕವೇ ರೂಪುಗೊಳ್ಳುತ್ತದೆ ಎಂದು ತಿಳಿಸಿದರು.
ಸಾಹಿತ್ಯವು ಸಮಾಜದ ಒಟ್ಟು ಪರಿಸ್ಥಿತಿಯ ಪ್ರಭಾವಕ್ಕೆ ಒಳಗಾಗಿಯೋ ಅಥವಾ ಆಯಾ ಸಾಮಾಜಿಕ ಮನಸ್ಥಿತಿಯನ್ನು ವಿರೋಧಿಸುವ ಹೋರಾಟದ ಫಲವಾಗಿಯೋ ರೂಪುಗೊಳ್ಳುತ್ತದೆ. ಆದರೆ ಸೃಜನಶೀಲ ಸಾಹಿತ್ಯ ಈ ಎರಡೂ ರೀತಿಯ ಒತ್ತಡಗಳನ್ನೂ ಮೀರಿ, ಅದರಾಚೆಗೆ ಸ್ವತಂತ್ರ ಅಭಿವ್ಯಕ್ತಿ ಪಡೆದುಕೊಳ್ಳುತ್ತದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು ಹೇಳಿದರು.
ಮುದ್ದುಮಾದಪ್ಪ ದತ್ತಿ ಪ್ರಶಸ್ತಿ ಪ್ರದಾನ ಮಾಡಿದ ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಮಾತನಾಡಿ, ಕನ್ನಡ ಭಾಷೆ, ನೆಲ ಜಲಕ್ಕೆ ಧಕ್ಕೆಯಾದಾಗ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯ ಮೂಲಕ ಹಾಗೂ ಕವಿಗಳು ಸಾಹಿತಿಗಳು ತಮ್ಮ ಬರಹಗಳ ಮೂಲಕ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸಿದರು.
ಸಚಿವರಾದ ದಿ. ಮಹದೇವಪ್ರಸಾದ್ ಅವರು, ಕನ್ನಡ ಮತ್ತು ಸಂಸ್ಕøತಿ ಸಚಿವರಾಗಿದ್ದಾಗ ಜಿಲ್ಲಾ ಸಾಹಿತ್ಯ ಸಮ್ಮೇಳನಗಳಿಗೆ 5 ಲಕ್ಷ ರೂ. ಅನುದಾನ ನೀಡುವ ಮೂಲಕ ಪ್ರೋತ್ಸಾಹ ನೀಡಿದರು. ಅವರನ್ನು ನಾವಿಂದು ಸ್ಮರಿಸಿಕೊಳ್ಳಬೇಕು ಎಂದರು.
ಶೀಲಾ ಸತ್ಯೇಂದ್ರಸ್ವಾಮಿ ಅವರಿಗೆ ಮುದ್ದುಮಾದಪ್ಪ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೊ. ಮಲೆಯೂರು ಗುರುಸ್ವಾಮಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿದರು.
ಹಿರಿಯ ಸಾಹಿತಿ ಸಂಶೋಧಕ, ಜಿಜಿ. ಮಂಜುನಾಥನ್ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್. ವಿನಯ್, ಮಂಗಳಾ ಮುದ್ದುಮಾದಪ್ಪ, ಜಿ.ಪಂ. ಉಪಾದ್ಯಕ್ಷ ಯೋಗೇಶ್, ಸದಸ್ಯರಾದ ಕೆ.ಎಸ್. ಮಹೇಶ್, ಬಿ.ಕೆ. ಬೊಮ್ಮಯ್ಯ, ಚೆನ್ನಪ್ಪ, ಕಾಡಾ ಆಧ್ಯಕ್ಷ ಎಚ್.ಎಸ್. ನಂಜಪ್ಪ, ಮಾಜಿ ಅಧ್ಯಕ್ಷರಾದ ಎ.ಎಂ. ನಾಗಮಲ್ಲಪ್ಪ, ಸೋಮಶೇಖರ ಬಿಸಲವಾಡಿ, ತಾಲೂಕು ಅಧ್ಯಕ್ಷ ಚಿದಾನಂದಸ್ವಾಮಿ, ಮಲ್ಲಿಕಾರ್ಜುನಪ್ಪ, ನಾಗರಾಜಶರ್ಮನ್, ಗುರುಪ್ರಸಾದ್, ಜಿ. ರಾಜಪ್ಪ, ನವಮಿ ಬಂಡಿಗೆರೆ, ಪಳನಿಸ್ವಾಮಿ, ಬಾಹುಬಲಿ ಜಯರಾಜ್, ರೈತ ಸಂWದ ಮಹೇಶ್‍ಪ್ರಭು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.




ನೀವು ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದೀರಾ.? ನೀವು ಬುದ್ದಿವಂತರಾದರೆ ಇದನ್ನು ಓದಿ….***

ನೀವು ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದೀರಾ.? ನೀವು ಬುದ್ದಿವಂತರಾದರೆ ಇದನ್ನು ಓದಿ….***

10 ನಿಮಿಷ ಸಮಯ ಮಾಢಿಕೊಂಡು ಓದುವಂತವರಾಗಿ, ಇಲ್ಲದಿದ್ದರೆ ಇದನ್ನ ಓದಲೇ ಬೇಡಿ. ಶೇರ್ ಮಾಡಿ ಮುಂದಿನ ಬುದ್ದಿವಂತ ಜನ ಓದುತ್ತಾರೆ. ನಾವು ಸಂದರ್ಶಕರ ಪುಸ್ತಕದ ಬಗ್ಗೆ, ಅದರ ಆಗು ಹೋಗುಗಳು, ಮಹತ್ವ, ಯಶಸ್ವಿಯಾಗಿ ನಡೆಯುತ್ತಿದಿಯೇ.? ಎಂಬುದರ ಬಗ್ಗೆ  ನೇರ ಮಾತು

ಸಂದರ್ಶಕರೇ…ಎಚ್ಚರ.. ನೀವು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ಅಂಶಗಳು…

ಅರೆ ಇದೇನಿದು? ಪೊಲೀಸ್ ಠಾಣೆ ಮೆಟ್ಟಿಲು ಏಕೆ ಹತ್ತಬೇಕು, ನಾವು ಬುದ್ದಿವಂತರು ಅನ್ನೊದನ್ನ ನಿರ್ದರಿಸೋಕೆ ಇವರ್ಯಾರು ಎಂದು ಕೊಂಡಿದ್ದೀರಾ? ಹೌದು ನೀವು ಮೆಟ್ಟಿಲು ಏರಬೇಕಾದ ಅನಿವಾರ್ಯವಿದ್ದಾಗ ಕೆಲವು ಮುಂಜಾಗ್ರತ ಕ್ರಮವಹಿಸಿ ಇಲ್ಲದಿದ್ದರೆ ನೀವು ನಿಜವಾಗಲೂ ದಡ್ಡರೇ..!
ನೀವು ಪೊಲೀಸ್ ಠಾಣೆಗೆ  ಹೋಗುವಾಗಲೆ ಅಲ್ಲಿ ಸ್ವಾಗತಕಾರರು ನಿಮ್ಮನ್ನ ಸ್ವಾಗತಿಸಲು ಕಾದು ಕುಳಿತಿರುತ್ತಾರೆ ಅಷ್ಟೇ ಅಲ್ಲ ನಿಮಗೆ ಯಾವ ತರಹದ ಸಹಾಯ ಠಾಣಾ ವ್ಯಾಪ್ತಿಯಲ್ಲಿ ಆಗಬೇಕು ಎಂಬುದನ್ನು ತಿಳಿಸುತ್ತಾರೆ.

ಸಂದರ್ಶಕರ ಪುಸ್ತಕ ಎಂದರೇನು?

ಮೊಬೈಲ್ ಕಳೆದುಕೊಂಡಾಗ, ಜಗಳವಾಡಿಕೊಂಡಾಗ, ಹಣಕಾಸು, ಲೇವಾದೇವಿ ವ್ಯವಹಾರ ,ಮೋಸ ವಂಚನೆ ಪ್ರಕರಣಗಳ ದಾಖಲು ಮಾಡಬೇಕಾದಾಗ ಅಥವಾ ಯಾರಾದರನ್ನ ನೋಡಬೇಕಾದರೆ ಠಾಣೇಯಲ್ಲಿ ನಿಮ್ಮ ಹೆಸರು, ವಿಳಾಸ, ವೃತ್ತಿ ,ಏನಕ್ಕಾಗಿ, ಯಾರನ್ನ ನೋಡಲು ಬಂದಿದ್ದೀರಾ, ? ಎಂಬ ಇತ್ಯಾದಿ ಅಂಶಗಳು ಪುಸ್ತಕದಲ್ಲಿ ನೊಂದಣೆಯಾಗುತ್ತದೆ ಅದೇ ಸಂದರ್ಶಕರ ಪುಸ್ತಕ ಎಂದು ಕರೆಯಲ್ಪಡುತ್ತದೆ. ಆದರೆ ಈಗ ಉನ್ನತೀಕರಿಸಿ ಈ ಸಂದರ್ಶಕರು ಎಂದು ಕಂಪ್ಯೂಟರ್ ಅಲ್ಲಿ ನಮೂದಿಸಲಾಗುತ್ತಿದೆ.
ನಾ ಕಂಡಂತೆ ಚಾಮರಾಜನಗರದಲ್ಲಿ ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿ ಮದುಕರ್ ಶೆಟ್ಟಿ ಅವರು ಹಿಂದೆ  ಎಸ್ಪಿ ಅವರ ಹುದ್ದೆಯಲ್ಲಿ ಅದಿಕಾರದಲ್ಲಿದ್ದಾಗ ಈ ಯೋಜನೆ ಜಾರಿಯಲ್ಲಿತ್ತು ಅಷ್ಟೇ ಅಲ್ಲ ಚಾಚು ತಪ್ಪದೆ ಪಾಲನೆಯಾಗುತ್ತಿತ್ತು. ನಂತರ ಇವರು ಬೇರೆಡೆಗೆ ವರ್ಗಾವಣೆಯಾದ ಮೇಲೆ ಇದನ್ನು ಕಂತೆ ಕಟ್ಟಿ ಗುಡ್ ಬೈ ಹೇಳಿದ್ದರು.
ಸಡನ್ ಆಗಿ ಮತ್ತೆ ಕಾಣಿಸಿಕೊಂಡಿದ್ದೆ 2015 ರ ಎಸ್ಪಿ ಕುಲದೀಪ್ ಕುಮಾರ್ ಜೈನ್ ಅವರ ಅವದಿಯಲ್ಲಿ ಅದೂ ಅವರ ಕಚೇರಿಯಲ್ಲಿ,,… ಇನ್ನ ಯಾವುದೇ ಠಾಣೆಯಲ್ಲಿ ಇರಲಿಲ್ಲ.. ಈ ಪುಸ್ತಕ ಇಡುವಂತೆ ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಅವರು ಎರಡು ಬಾರಿ ಜೈನ್ ಅವರಿಗೆ ಅರ್ಜಿ ಸಲ್ಲಿಸಿದ್ದರು.ಅಷ್ಟೇ ಅಲ್ಲ ದಕ್ಷಿಣ ವಲಯ ಮಹಾನಿರ್ದೇಶಕರಿಗೆ, ಬೆಂಗಳೂರು ಮಹಾನಿರ್ದೇಶಕರಿಗೂ ಮನವಿ ಮಾಢಲಾಗಿತ್ತು.
ಈಗ ಎಲ್ಲೆಡೆ ಠಾಣೆಗಳಲ್ಲಿ ಸಂದರ್ಶಕರ ಪುಸ್ತಕ ರಾರಾಜಿಸುತ್ತಿದೆ. ಸ್ವಾಗತಕಾರರು ಸಹಾಯ ಬೇಕೆ ಎಂಬ ಪುಟ್ಟ ನಾಮಫಲಕ ಹಾಕಿ ತಮ್ಮ ಸಂದರ್ಶಕರನ್ನು ಬರ ಮಾಡಿಕೊಳ್ಳುತ್ತಿದ್ದಾರೆ. ಬೀಟ್ ವ್ಯವಸ್ಥೆಯಿಂದ ಕಡಿಮೆಯಾಗಿದ್ದ ಠಾಣೇಗಳಲ್ಲಿ ಜನರ ದರ್ಶನ, ಈಗ ಸಂದರ್ಶಕರ ಪುಸ್ತಕ ಬಂದ ಮೇಲಂತು ಮೊದಲು ಠಾಣೆಗೆ ಬರುತ್ತಿದ್ದ ಜನರು, ಮದ್ಯವರ್ತಿಗಳ ಸಂಖ್ಯೆ ತೀರ ಕಡಿಮೆಯಾಗಿದೆ.

ಸಂದರ್ಶಕರ ಪುಸ್ತ ಅಗತ್ಯವೇನು?

 ಹೌದು ಇದರ ಅಗತ್ಯ ಏನಿದೆ ಅಂತೆಲ್ಲ ಕೇಳಬಹುದು.. ಮುಂದೆ ನೀವು ಮೆಟ್ಟಿಲು ಏರಿದಾಗ ಬಹುಶಃ ನಿಮಗೆ ಗೊತ್ತಾಗುತ್ತದೆ. ನನಗೆ ಅನುಭವಕ್ಕೆ ಬಂದಂತೆ, ಹೊಂಗನೂರು ಗಲಭೆ ಪ್ರಕರಣದಲ್ಲಿ ಕೆಲವರು ಟಪಾಲು ವಿಬಾಗಕ್ಕೆ ಅರ್ಜಿ ಕೊಟ್ಟು ಬಂದು ಅರ್ಜಿ ಕೊಟ್ಟಿದ್ದೇನೆ, ಏನು ಕ್ರಮ ತೆಗೆದುಕೊಂಡಿದ್ದೀರಾ ಎಂದು ಸಾರ್ವಜನಿಕ ಕೇಳಿದಾಗ ಎಸ್ಪಿ ಜೈನ್ ಕೊಟ್ಟ ಉತ್ತರ ಇಷ್ಟೆ…,, ನಿನಗೆ ನ್ಯಾಯ ಬೇಕಿದ್ದರೆ ನೇರವಾಗಿ ನನ್ನ ಬಳಿ ಬರಬೇಕಿತ್ತು. ಯಾವುದೋ ಅರ್ಜಿಯನ್ನು ಎಲ್ಲಿಗೋ ಕೊಟ್ಟು ಹೋದರೆ ಅದು ನನ್ನ ಬಳಿ ಬರುವ ತನಕ ವಿಳಂಬವಾಗಬಹುದು ಅಥವಾ ಅದರ ವಿಚಾರ ಏನು ಎಂಬುದು ತಿಳಿಯಲು ಸಮಯವಕಾಶ ಬೇಕಾಗಬಹುದು ಎಂದಿದ್ದರು.
ಸುಮ್ಮನಾಗದ ಸಾರ್ವಜನಿಕ ನಿಮ್ಮನ್ನು ನೋಡಿಯೇ ಅರ್ಜಿ ಕೊಟ್ಟು ಬಂದು ಮಾತನಾಢುತ್ತಿರುವುದು ಎಂದಾಗ ನೀವು ಎಲ್ಲಿಗೆ ಯಾಕೆ ಬಂದಿದ್ದೀರೀ, ಯಾವಾಗ ಬಂದಿದ್ದೀರಾ ಎಂಬ ಎಲ್ಲಾ ಅಂಶ ಕಛೇರಿಯಲ್ಲಿ ಸಿಗುತ್ತದೆ ಬನ್ನಿ ತೋರಿಸುತ್ತೇವೆ ಎಂದರು. ನೂರಾರು ಜನರ ಮದ್ಯೆ ಈ  ಖಡಕ್ ಉತ್ತರಕ್ಕೆ ಆತನಿಗೆ ಬೆವರು ಇಳಿದೇ ಹೋಯಿತು.
ಇದು ಇಲಾಖೆಯದು ಒಂದು ಕಡೆಯಾದರೆ ನನ್ನ ಸ್ವಂತ ಅನುಭವ ಕಥೆಯೂ ಇದೆ ಕೇಳಿ….ಒಂದು ಮಾನವ ಹಕ್ಕು ಆಯೋಗ ಮತ್ತು ಎಸ್ಪಿ ಅವರ ಆದೇಶದ ಅರ್ಜಿ ವಿಚಾರಣೆ ಚಾಮರಾಜನಗರದಿಂದ ಗುಂಡ್ಲುಪೇಟೆಗೆ ಹೋಗಿ ಬರಬೇಕಾದ ಸ್ಥಿತಿಯನ್ನು ಅಲ್ಲಿನ ಪೇದೆ …(ವಿ…..ಪೇದೆ ಮೊದಲ ಹೆಸರು.)  ಸೃಷ್ಟಿ ಮಾಢಿದ್ದರು.
ಎಷ್ಟೇ ಆದರೂ ಇವರ ಆದೇಶ ಉಲ್ಲಂಘನೆ ಮಾಢುವುದು ಬೇಡ ಎಂದು ಠಾಣೆಗೆ ಹೋದರೆ ಅಲ್ಲಿ ನಾಟಕೀಯ ವ್ಯವಸ್ಥೆ ಇನ್ಸ್‍ಪೆಕ್ಟರ್ (ಪ್ರ) ಅವರದ್ದು, ನಾನು ಅಲ್ಲಿದ್ದೀನಿ, ಇಲ್ಲಿದೀನಿ ಅಂತ, ಹೋಗಿರುವುದಕ್ಕೆ ನಾನು ಸಾಕ್ಷಿಯಿಲ್ಲ. ಏನು ಮಾಡೋದು  ಯೋಚಿಸಿ ಅಲ್ಲಿ ಪೊಟೋ ತೆಗೆದು ವರೀಷ್ಠಾಧಿಕಾರಿ  ಜೈನ್ ಅವರಿಗೆ ಕಳುಹಿಸಬೇಕಾದ ಸ್ಥಿತಿ ಎದುರಾಯಿತು. ನಾನೇನು ವಿದ್ಯಾವಂತ, ಆಂಡ್ರಾಯ್ಡ್ ಮೊಬೈಲ್, ಸಾಮಾಜಿಕ ಜಾಲತಾಣದ ಅರಿವು, ಹಿರಿಯ ಅದಿಕಾರಿಗಳÀ ದೂರವಾಣಿ ಸಂಖ್ಯೆ ಗೊತ್ತಿತ್ತು ಕಳಿಸಿದೆ. ಠಾಣೆಗೆ  ಬಂದವರೆಲ್ಲ ಕಳಿಸಬೇಕಲ್ಲ.. ರೈತರು, ಕೂಲಿಕಾರರು, ಬರುತ್ತಾರೆ ಅವರಿಗೆ ಗದ್ಗರಿತ ಮಾತು ಕೇಳಿ ಭಯ ಉಂಟುಮಾಡುವವರು ಇರುವಾಗ ಇನ್ನೆಲ್ಲಿ ಎಸ್ಪಿ ಅವರ ಜೊತೆ ದರ್ಶನ, ಸಂದರ್ಶನ ನೀವೆ ಹೇಳಿ. ಆದರೂ ನಿಮಗೆ ಒಂದಷ್ಟು ಟಿಪ್ಟ್ ಕೊಡ್ತೇವೆ ಪಾಲಿಸಿ.

ನಿಮಗಿಷ್ಟು ಟಿಪ್ಸ್….:.

1) ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದಂತೆಯೇ ನೀವು ನೇರವಾಗಿ ಸ್ವಾಗತಕಾರರ ಬಳಿ ಹೋಗಿ  ಅವರು ಕೇಳಿದ ನಿಮ್ಮ ಮಾಹಿತಿಯನ್ನು ನೀಡಿ ಹಾಗೇ ಅವರ ಹೆಸರು. ಇಲಾಖೆ ನೀಡಿದ ಫೊನ್ ನಂಬರ್ ಪಡೆಯಿರಿ.
2)ಕಡ್ಡಾಯವಾಗಿ ನೀವು ಪ್ರವೇಶ ಕೊಟ್ಟ ಸಮಯವನ್ನು ಸಂದರ್ಶಕರ ಪುಸ್ತಕದಲ್ಲಿ ಅವರು ಬರೆದುಕೊಳ್ಳುವಂತೆ ಹೇಳಿ, ಬರುವಾಗ ನೀವು ಆ ಜಾಗ ಬಿಡುವ ಸಮಯ ಕಡ್ಡಾಯವಾಗಿ ನಮೂದಿಸಿ ಬನ್ನಿ.
3) ನಿಮ್ಮ ಖಾಸಗೀ ವಾಹನಗಳನ್ನು ಠಾಣೆಯ ಹೊರಗಡೆ ನಿಲ್ಲಿಸಿ, ಒಳಗಡೆ ತೆಗೆದುಕೊಂಡು ಪಾರ್ಕಿಂಗ್ ಸಮಸ್ಯೆಗೆ ನೀವು ಕಾರಣರಾಗಬೇಡಿ.
4) ನಿಮಗೆ ಅಲ್ಲಿ ಯಾರಾದರೂ ಸರಿಯಾಗಿ ಸ್ಪಂದಿಸದಿದ್ದರೆ ಹಿರಿಯ ಅದಿಕಾರಿಗಳು ,ವರೀಷ್ಟಾಧಿಕಾರಿಗಳ ಬಳಿ ಅಪ್ಪಣೆ ಪಡೆದು ಮೌಖಿತ, ಲಿಖಿತ ದೂರು ಸಲ್ಲಿಸಿ.
5) ನಿಮ್ಮ ವಿಚಾರಣೆ  ಮಾಡುವ ಅದಿಕಾರಿಗಳು, ಸ್ಥಳದಲ್ಲಿರುವ ಪೇದೆಗಳು, ಸಿಬ್ಬಂದಿಗಳು ಯಾರು ಏನು? ( ಒಂದೆ ಹೆಸರಿನವರು ಇಬ್ಬರು ಮೂವರು ಇದ್ದರೆ ಕಷ್ಟ, ಆದರೆ (ಮೆಟಲ್) ಸಂಖ್ಯೆ ಬದಲಾಗಿರುತ್ತದೆ.
5) ಹಣಕಾಸು ವ್ಯವಹಾರಿವಿದ್ದರೆ ಚೆಕ್, ಡಿ.ಡಿ ಮೂಲಕ ವ್ಯವಹರಿಸಿ ನಿಮಗೆ ಆದಾಯ ಅದಿಕಾರಿಗಳಿಂದ ವಿಚಾರಣೆ ತಪ್ಪಬಹುದು

ಡಿ.ಜಿ.ಪಿ ಅವರೇ ಧನ್ಯವಾದಗಳು, 

ನಾನು ಬರೆದ  ಕೆಲವು ಪತ್ರಗ ಳನ್ನ ಓದಿ ಈಗಾಗಲೇ ಅಂದು ( ಆರ್.ಕೆ.ದತ್ತ ಅವರು ಕ್ರಮ ತೆಗೆದುಕೊಂಡಿರುತ್ತೀರಿ ಧನ್ಯವಾದಗಳು, ಇನ್ನು ಸಿ.ಸಿ.ಕ್ಯಾಮೆರಾ ಅಳವಡಿಕೆ ಬಗ್ಗೆ ಅನುಮೋದನೆ ಸಲ್ಲಿಕೆ ಕುರಿತು ತಿಳಿಸಿರುತ್ತೀರಿ. ಆದರೆ  ಇಂದು ಚಾಮರಾಜನಗರದಲ್ಲಿರುವ ಇಲಾಖೆಯ ಸಿ.ಸಿ.ಕ್ಯಾಮೆರಾ ಕೆಟ್ಟಿದೆ. ಈಗಾಗಲೇ ಚಾಲ್ತಿ ಮಾಢಿರುವ ಸಂದರ್ಶಕರ ಪುಸ್ತಕದ ವಿವರ  (ನನಗೆ ತಿಳಿದು ಬಂದಂತೆ 23-11-2017)  ಸರಿಯಾಗಿ ಮಾಹಿತಿ ಪಡೆಯುತ್ತಿಲ್ಲ ಅಷ್ಟೇ  ಅಲ್ಲಿ ನಮೂದಿಸುತ್ತಿಲ್ಲ ಎಂಬ ಗಂಬೀರ ಆರೋಪ ಮಾಢುತ್ತಿದ್ದೇನೆ. ಅದನ್ನು  ಇಂದಿನ ಡಿ.ಜಿ.ಪಿ ನೀಲಮಣಿ ರಾಜು ಅವರಿಗೆ  ಪತ್ರ ಮುಖೆನಾ ತಿಳಿಸುತ್ತಿದ್ದೇನೆ.  ಗಂಬೀರವಾಗಿ ಪರಿಗಣಿಸಿ ಪರಿಶೀಲಿಸಿ..….


 ಸಂಪರ್ಕಿಸಿ...
ಚಾಮರಾಜನಗರ ನಿವಾಸಿಗಳಾಗಿದ್ದರೆ ದಯಮಾಡಿ ಎಸ್ಪಿ--9480804600, 9480804601, 

ಕಚೇರಿ: ಜೋಡಿ ರಸ್ತೆ, ಗುರುಮಲ್ಲೇಶ್ವರ ವಿರಕ್ತ ಮಠ ಸಮೀಪ..
ಬೆಂಗಳೂರು: ಮಹಾನಿರ್ದೇಶಕರು, ನೃಪತುಂಗರಸ್ತೆ
ಮೈಸೂರು: ನಜರ್ ಬಾದ್ , 


ಇಂತಿ ...ರಾಮಸಮುದ್ರ ಎಸ್.ವೀರಭದ್ರಸ್ವಾಮಿ


Thursday, 11 January 2018

ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಯವರಿಂದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ : ಪ್ರಾಧಿಕಾರದ ಸಭೆ (11-01-2018)

 ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಯವರಿಂದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ : ಪ್ರಾಧಿಕಾರದ ಸಭೆ

ಚಾಮರಾಜನಗರ, ಜ. 11- ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ಇಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಮಲೈಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಬಳಿಕ ಮಲೈಮಹದೇಶ್ವರ ಸ್ವಾಮಿ ಕ್ಷೇತ್ರಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು.
ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಲುವಾಗಿ ಬುಧವಾರ ಮುಖ್ಯಮಂತ್ರಿಯವರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಚಾಮರಾಜನಗರ ತಾಲೂಕಿನ ನಾಗವಳ್ಳಿ, ಕೊಳ್ಳೇಗಾಲ ಹಾಗೂ ಹನೂರು ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಬುಧವಾರ ರಾತ್ರಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಮುಖ್ಯಮಂತ್ರಿಯವರು ವಾಸ್ತವ್ಯ ಹೂಡಿದ್ದರು.
ಇಂದು ಬೆಳಿಗ್ಗೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಮುಖ್ಯಮಂತ್ರಿಯವರು ದೇವರ ದರ್ಶನ ಪಡೆದರು. ಬಳಿಕ ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಂತರಗಂಗೆ ಕಾಮಗಾರಿ ಸ್ಥಳಕ್ಕೆ ಭೇಟಿ ಕೊಟ್ಟರು. ಅಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪ್ರಾಧಿಕಾರದ ವತಿಯಿಂದಲೇ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆಗಳ ಕಾಮಗಾರಿಯನ್ನು ಸಹ ಪರಿಶೀಲಿಸಿದರು.
ದೇವಾಲಯದ ಬಳಿ ಜನರ ನೆರಳಿಗಾಗಿ ನಿರ್ಮಾಣ ಮಾಡಲಾಗಿರುವ ಬೃಹತ್ ರಂಗಮಂದಿರವನ್ನು ಕೆಲಹೊತ್ತು ನಿಂತು ಮುಖ್ಯಮಂತ್ರಿಯವರು ವೀಕ್ಷಿಸಿದರು. ಮಹದೇಶ್ವರ ಬೆಟ್ಟದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಆದಷ್ಟು ಶೀಘ್ರವೇ ಪೂರ್ಣಗೊಳಿಸಬೇಕೆಂದು ಮುಖ್ಯಮಂತ್ರಿಯವರು ಸೂಚಿಸಿದರು.
ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿಯವರು ಪ್ರಾಧಿಕಾರದ ಸಭೆಯನ್ನು ನಡೆಸಿದರು. ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್), ಶಾಸಕರಾದ ಆರ್. ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಎಸ್. ಜಯಣ್ಣ, ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೊಪ್ಪಾಳಿ ಮಹದೇವನಾಯ್ಕ, ಜವರೇಗೌಡ, ಕೀಳನಪುರದ ಮಹದೇವಪ್ಪ, ಕಾವೇರಿ ಶಿವಕುಮರ್, ದೇವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಪ್ರಾಧಿಕಾರದ ಕಾರ್ಯದರ್ಶಿ ಎ.ಜೆ. ರೂಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಗಣೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕುಮಾರ್, ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
   

ಮತದಾನದ ಮಹತ್ವದ ಅರಿವು ಮೂಡಿಸಿ:ಜಿ.ಪಂ ಸಿ.ಇ.ಒ ಡಾ.ಕೆ.ಹರೀಶ್ ಕುಮಾರ್  

ಚಾಮರಾಜನಗರ, ಜ. 11  ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಗೊಳ್ಳಲು ವಿದ್ಯಾರ್ಥಿಗಳಿಗೂ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದ್ದು, ಈ ಸಂಬಂಧ ಅಗತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.
ಹನೂರು ತಾಲ್ಲೂಕಿನ ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನ ಆಚರಣೆ ಹಿನ್ನೆಲೆಯಲ್ಲಿ ಮತದಾನದ ಪ್ರಾಮುಖ್ಯತೆ ಬಗ್ಗೆ ಅರಿವು ಉಂಟು ಮಾಡುವ ದಿಸೆಯಲ್ಲಿ ಕೈಗೊಳ್ಳಬೇಕಿರುವ ವಿವಿಧ ಚಟುವಟಿಕೆಗಳ ಕುರಿತ ಸಭೆಯಯಲ್ಲಿ ಅವರು ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮತದಾರರಾಗಲಿದ್ದಾರೆ. ಹೀಗಾಗಿ ಮತದಾನದ ಮಹತ್ವ ತಿಳಿಯಬೇಕಿದೆ. 18 ವರ್ಷ ತುಂಬಿದ ಎಲ್ಲರು ಮತದಾರರಾಗುವುದರಿಂದ ಮತದಾನದ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದರು.
ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಮತದಾನ ಪ್ರಕ್ರಿಯೆ ಹಂತಗಳು ಹಾಗೂ ಇದಕ್ಕೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಮನದಟ್ಟಾಗುವಂತೆ ಮಾಹಿತಿ ನೀಡÀಬೇಕು. ಮತದಾನದ ಜಾಗೃತಿ ಮೂಡಿಸಲು ಚರ್ಚಾ ಸ್ಪರ್ಧೆ, ಪ್ರಬಂಧ, ಚಿತ್ರಕಲೆ ಸ್ಪರ್ಧೆಯನ್ನು ಹಮ್ಮಿಕೊಳ್ಳಬೇಕು ಎಂದು ಹರೀಶ್ ಕುಮಾರ್ ರವರು ತಿಳಿಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಮತದಾರರ ಸಾಕ್ಷರತೆ ಕ್ಲಬ್‍ಗಳನ್ನು ರಚಿಸಿ ಆ ಮೂಲಕ ನಿರಂತರವಾಗಿ ಮತದಾರರ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಬೇಕು ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ಮರಣ ಹೊಂದಿರುವ, ವಲಸೆ ಹೋಗಿರುವ ಮತದಾರರ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆ ಬಗ್ಗೆ ಪೋಷಕರಲ್ಲೂ ತಿಳಿವಳಿಕೆ ನೀಡಬೇಕಿದೆ ಎಂದರು.
ಉಪ ವಿಭಾಗಾಧಿಕಾರಿ ಫೌಜಿಯ ತರನಮ್ ಮಾತನಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತದಾನದ ಮಹತ್ವವನ್ನು ತಿಳಿಸಿಕೊಡುವ ದಿಸೆಯಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ಫೌಜಿಯ ತರನಮ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹದೇವಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್, ಬಿ.ಆರ್.ಸಿ, ಸಿ.ಆರ್.ಪಿ ಗಳು ಸಭೆಯಲ್ಲಿ ಹಾಜರಿದ್ದರು.



ಗುಂಡ್ಲುಪೇಟೆ : ಜ. 12, 13ರÀಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಚಾಮರಾಜನಗರ, ಜ. 11 - ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಗುಂಡ್ಲುಪೇಟೆ ಗುರುಭವನದಲ್ಲಿ ಜನವರಿ 12 ಹಾಗೂ 13ರಂದು ನಡೆಯಲಿದೆ.
ಜನವರಿ 12ರಂದು ಬೆಳಿಗ್ಗೆ 10.30 ಗಂಟೆಗೆ ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಖ್ಯಾತ ಸಾಹಿತಿಗಳಾದ ಸಿ. ನಾಗಣ್ಣ ಸಮ್ಮೇಳನ ಉದ್ಘಾಟಿಸುವರು. ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎಸ್. ಆಶಯ ನುಡಿ ನುಡಿಯುವರು.
ಸಂಸದರಾದ ಆರ್. ಧ್ರುವನಾರಾಯಣ ದಿ. ಮುದ್ದು ಮಾದಪ್ಪ ದತ್ತಿ ಪ್ರಶಸ್ತಿಯನ್ನು ಸಾಹಿತಿಗಳಾದ ಶೀಲಾ ಸತ್ಯೇಂದ್ರಸ್ವಾಮಿ ಅವರಿಗೆ ಪ್ರಧಾನ ಮಾಡುವರು.
ಹಿರಿಯ ಸಾಹಿತಿ ಮತ್ತು ಸಂಶೋಧಕರಾದ ಜಿ.ಜಿ. ಮಂಜುನಾಥನ್ ಸಮೇಳನಾಧ್ಯಕ್ಷರ ನುಡಿಗಳನ್ನಾಡುವರು.
ಖ್ಯಾತ ಸಾಹಿತಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮಲೆಯೂರು ಗುರುಸ್ವಾಮಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡುವರು. ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎ.ಎಂ. ನಾಗಮಲ್ಲಪ್ಪ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಸೋಮಶೇಖರ ಬಿಸಲ್ವಾಡಿ ಪುಸ್ತಕ ಲೋಕಾರ್ಪಣೆ ಮಾಡುವರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎಸ್. ಜಯಣ್ಣ, ಆರ್. ನರೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಪಿ. ಗಿರೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಧ್ವಜಾರೋಹಣ ನೆರವೇರಿಸುವರು. 8.30 ಗಂಟೆಗೆ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಎಸ್. ಮಹೇಶ್ ಮೆರವಣಿಗೆಗೆ ಚಾಲನೆ ನೀಡುವರು. ಪುರಸಭೆ ಉಪಾಧ್ಯಕ್ಷರಾದ ಜಿ.ಕೆ. ನಾಗೇಂದ್ರ ಪುಷ್ಪಾರ್ಚನೆ ಮಾಡುವರು. ಆರಕ್ಷಕ ಉಪನಿರೀಕ್ಷಕರಾದ ಬಿ.ಎಸ್. ಶಿವರುದ್ರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.
ಸಮ್ಮೇಳನದಲ್ಲಿ ವಿವಿಧ ವಿಷಯಗಳ ಕುರಿತು ಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ಜ. 13ರಂದು ನಗರದಲ್ಲಿ ಜಿಲ್ಲಾ ಯುವಜನ ಸಮಾವೇಶ

ಚಾಮರಾಜನಗರ, ಜ. 1- ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ. ನೆಹರು ಯುವ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಹಾಗೂ ರಂಗವಾಹಿನಿ ಇವರ ಸಹಯೋಗದಲ್ಲಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಯುವಜನ ಸಮಾವೇಶವನ್ನು ಜನವರಿ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಸದರಾದ ಆರ್. ಧ್ರುವನಾರಾಯಣ ಸಮಾವೇಶ ಉದ್ಘಾಟಿಸುವರು. ಕೆಆರ್ ಡಿಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಯುವಜನರಿಗೆ ಸಂದೇಶ ನೀಡುವರು.
ದೀನಬಂಧು ಸಂಸ್ಥೆಯ ನಿರ್ದೇಶಕರಾದ ಜಿ.ಎಸ್. ಜಯದೇವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೈಸೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಕೆ.ಎಂ. ಪ್ರಸನ್ನಕುಮಾರ್ ಅತಿಥಿ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದÉ.

ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಜ. 11- ಜಿಲ್ಲೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ. ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2018-19ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸ್ಥಳೀಯ ವಸತಿ ಶಾಲೆ, ತಾಲೂಕು ಮಟ್ಟದ ಕಚೇರಿ ಹಾಗೂ ತಾಲೂಕು ಬಿಇಓ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಮೀಪದ ಯಾವುದಾದರೂ ವಸತಿ ಶಾಲೆಗೆ ಜನವರಿ 13ರ ಸಂಜೆ 5.30ರ ಒಳಗೆ ಸಲ್ಲಿಸಬೇಕು.
ಪ್ರವೇಶ ಪರೀಕ್ಷೆ ಫೆಬ್ರವರಿ 18ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ವಸತಿ ಶಾಲಾ ಪ್ರಾಂಶುಪಾಲರನ್ನು (ದೂ.ಸಂ. 08229-232228, ಮೊಬೈಲ್ 9164373076) ಸಂಪರ್ಕಿಸುವಂತೆ ಮೊರಾರ್ಜಿ ದೇಸಾಯಿ ವಸತಿಶಾಲೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ : ಜ. 12 ರಿಂದ ರಾಷ್ಟ್ರೀಯ ಯುವದಿನ, ಸಪ್ತಾಹ ಆಚರಣೆ

 ಚಾಮರಾಜನಗರ, ಜ. 11- ನೆಹರು ಯುವ ಕೇಂದ್ರ, ಜಿಲ್ಲೆಯ ಯುವ, ಮಹಿಳಾ ಸಂಘಟನೆಗಳು ಹಾಗೂ ಜಿಲ್ಲೆಯ ವಿವಿಧ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಪ್ರೌಢಶಾಲೆಗಳ ಸಯಯೋಗದಲ್ಲಿ ದಿವ್ಯಚೇತನ ಸ್ವಾಮಿ ವಿವೇಕಾನಂದರವರ 155ನೇ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನ ಹಾಗೂ ಸಪ್ತಾಹ ದಿನಾಚರಣೆಯನ್ನು ಜನವರಿ 12 ರಿಂದ 19ರವರೆಗೆ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿವೆ.
ಜನವರಿ 12 – ರಾಷ್ಟ್ರೀಯ ಯುವ ದಿನ:-
ಕೊಳ್ಳೇಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜು ಹಾಗೂ ಮುಡಿಗುಂಡದ ವಾಲ್ಮೀಕಿ ಸಮಾಜಸೇವಾ ಸಮಿತಿ ಆಶ್ರಯದಲ್ಲಿ ಕೊಳ್ಳೇಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜು ಆವರಣದಲ್ಲಿ ಜನವರಿ 12ರಂದು ಮಧ್ಯಾಹ್ನ 12 ಗಂಟೆಗೆ ರಾಷ್ಟ್ರೀಯ ಯುವ ದಿನ ಆಚರಿಸಲಿದ್ದು ರಾಜ್ಯ ಯುವ ಪ್ರಶಸ್ತಿ ಪುರಸ್ಕøತರಾದ ಸಿ.ಎಂ. ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಉಮೇಶ್ ಅಧ್ಯಕ್ಷತೆ ವಹಿಸುವರು. ರೋಟರಿ ಸಂಸ್ಥೆಯ ಕಾರ್ಯದರ್ಶಿ ಜೋಸೆಫ್ ಅಲೆಗ್ಜಾಂಡರ್ ಅತಿಥಿ ಉಪನ್ಯಾಸ ನೀಡುವರು. ರೋಟರಿ ಸಂಸ್ಥೆ ಅಧ್ಯಕ್ಷರಾದ ಪುಟ್ಟ ಅರಸಶೆಟ್ಟಿ ಹಾಗೂ. ಜೆ.ಎಸ್.ಎಸ್. ಮಹಿಳಾ ಕಾಲೇಜು ಎನ್ ಎಸ್ ಎಸ್ ಅಧಿಕಾರಿ ಸ್ಮಿತಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜನವರಿ 13 – ಸಾಂಸ್ಕøತಿಕ ದಿನ:-
ಚಾಮರಾಜನಗರ ಸಂಯುಕ್ತ ಯುವಜನ ಸಂಘದ ಆಶ್ರಯದಲ್ಲಿ ತಾಲೂಕಿನ ಆಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ  ಜನವರಿ 13ರಂದು ಬೆಳಿಗ್ಗೆ 10 ಗಂಟೆಗೆ ಸಾಂಸ್ಕøತಿಕ ದಿನಾಚರಣೆ ಆಚರಿಸಲಿದ್ದು ಸಮಾಜ ಕಾರ್ಯಕರ್ತರಾದ ಶೇಖಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಪ್ರಭುಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಲೆಯ ಕನ್ನಡ ಶಿಕ್ಷಕರಾದ ಮಹದೇವಮ್ಮ ಅತಿಥಿ ಉಪನ್ಯಾಸ ನೀಡುವರು. ಆಲೂರಿನ ಶ್ರೀ ಮಹದೇಶ್ವರ ಬೀಸು ಕಂಸಾಳೆ ಕಲಾಸಂಘ ಅಧ್ಯಕ್ಷರಾದ ಶಿವಣ್ಣ ಹಾಗೂ. ಗ್ರಾಮದ ಯಜಮಾನರಾದ ಮಹದೇವಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜನವರಿ 14 – ಭಾಗವಹಿಸುವಿಕೆಯ ದಿನ:-
ಹೆÉೂನ್ನೂರಿನ ಜಗಜ್ಯೋತಿ ಶ್ರೀ ಬಸವೇಶ್ವರ ಯುವಕರ ಸಂಘದೊಂದಿಗೆ ಯಳಂದೂರು ತಾಲೂಕು ಹೊನ್ನೂರಿನ ಯುವಸಂಘದ ಆವರಣದಲ್ಲಿ  ಜನವರಿ 14ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮದ ಅಂಗವಾಗಿ ಭಾಗವಹಿಸುವಿಕೆಯ ದಿನವನ್ನು ಆಚರಿಸಲಿದೆ. ಹೊನ್ನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಹದೇವಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಜಗಜ್ಯೋತಿ ಶ್ರೀ ಬಸವೇಶ್ವರ ಯುವಕರ ಸಂಘದ ಆಧ್ಯಕ್ಷರಾದ ಎಂ. ಜಗದೀಶ್ ಅಧ್ಯಕ್ಷತೆ ವಹಿಸುವರು. ಹೊನ್ನೂರಿನ ಭೀಮರಾವ್ ಜೀ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಉಮೇಶ್ ಅತಿಥಿ ಉಪನ್ಯಾಸ ನೀಡುವರು.  ಮುಖ್ಯ ಅತಿಥಿಗಳಾಗಿ ಹೊನ್ನೂರಿನ ನಾಡಗೌಡರಾದ ಮರಿಸ್ವಾಮಿ ಹಾಗೂ ಗ್ರಾಮದ ಮುಖಂಡರಾದ ಸಿದ್ದರಾಜು ಪಾಲ್ಗೊಳ್ಳುವರು.
ಜನವರಿ 15 – ಸಮಾಜ ಸೇವಾ ದಿನ:-
ಗುಂಡ್ಲುಪೇಟೆ ತಾಲೂಕಿನ ಶಿವಪುರದ ಜೆ.ಎಸ್.ಎಸ್. ಪ್ರೌಢಶಾಲೆ ಹಾಗೂ ಕಸ್ತೂರಿ ಕನ್ನಡ ಕಲಾಬಳಗದ ಸಂಘಟನೆಯೊಂದಿಗೆ ಶಿವಪುರದ ಜೆ.ಎಸ್.ಎಸ್. ಪ್ರೌಢಶಾಲೆಯಲ್ಲಿ  ಜನವರಿ 15ರಂದು ಬೆಳಿಗ್ಗೆ 11 ಗಂಟೆಗೆ ಸಮÁಜ ಸೇವಾ ದಿನವನ್ನು ಆಚರಿಸಲಿದೆ. ಶಿವಪುರ ಜೆ.ಎಸ್.ಎಸ್. ಪ್ರೌಢಶಾಲೆಯ ಗಣಿತ ಶಿಕ್ಷಕರಾದ ಲಿಂಗರಾಜು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಶಿಕ್ಷಕರಾದ ಜೆ.ಎನ್. ಲೋಕೇಶ್ ಅಧ್ಯಕ್ಷತೆ ವಹಿಸುವರು.  ಕನ್ನಡ ಶಿಕ್ಷಕರಾದ ಹೆಚ್.ಪಿ. ಪಶುಪತಿ ಅತಿಥಿ ಉಪನ್ಯಾಸ ನೀಡುವರು.  ಮುಖ್ಯ ಅತಿಥಿಗಳಾಗಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಾದ ಎಸ್. ಬಸವಣ್ಣ, ಹಿಂದಿ ಶಿಕ್ಷಕರಾದ ಬಿ. ಮೀನಾಕ್ಷಿ, ದೈಹಿಕ ಶಿಕ್ಷಕರಾದ ಶಾಂತ ಮಲ್ಲೇಶ್ ಹಾಗೂ ಗಣಿತ ಶಿಕ್ಷಕರಾದ ಬಸವಣ್ಣ ಪಾಲ್ಗೊಳ್ಳುವರು.
ಜನವರಿ 16 – ಭಾಗವಹಿಸುವಿಕೆಯ ದಿನ:-
ಸತ್ತೇಗಾಲದ ಸರ್ಕಾರಿ ಪ್ರೌಢಶಾಲೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸತ್ಯಾದ್ರಿ ಯುವಕರ ಸಂಘದೊಂದಿಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಜನವರಿ 16ರಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮದ ಅಂಗವಾಗಿ ದೈಹಿಕ ದಕ್ಷತಾ ದಿನವನ್ನು ಆಚರಿಸಲಿದೆ. ಸತ್ತೇಗಾಲ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಭಾಗ್ಯಲಕ್ಷ್ಮಿ ಕಾರ್ಯಕ್ರಮ ಉದ್ಘಾಟಿಸುವರು. ಕೊಳ್ಳೇಗಾಲ ರೋಟರಿ ಸಂಸ್ಥೆಯ ಆಧ್ಯಕ್ಷರಾದ ಪುಟ್ಟ ಅರಸಶೆಟ್ಟಿ ಅಧ್ಯಕ್ಷತೆ ವಹಿಸುವರು. ರೋಟರಿ ಸಂಸ್ಥೆ ಕಾರ್ಯದರ್ಶಿಗಳಾದ ಜೋಸೆಫ್ ಅಲೆಗ್ಜಾಂಡರ್ ಅತಿಥಿ ಉಪನ್ಯಾಸ ನೀಡುವರು.  ಮುಖ್ಯ ಅತಿಥಿಗಳಾಗಿ ಡಾ. ಬಿ.ಆರ್. ಅಂಬೇಡ್ಕರ್ ಸಹ್ಯಾದ್ರಿ ಯುವಕರ ಸಂಘದ ಅಧ್ಯಕ್ಷರಾದ ಜಯಚಂದ್ರ ಹಾಗೂ ರೋಟರಿ ಸಂಸ್ಥೆ ಸದಸ್ಯರಾದ ಜೆ.ಕುಮಾರಸ್ವಾಮಿ ಪಾಲ್ಗೊಳ್ಳುವರು.
ಜನವರಿ 17 – ಯುವಜನರು ಮತ್ತು ಶಾಂತಿ ದಿನ:-
ಕಾಗಲವಾಡಿಯ ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆ ಹಾಗೂ ಹುರುಳಿನಂಜನಪುರದ ಉದಯ್ ಭೀಮ್ ಯುವಜನ ಸಂಘದ ಆಶ್ರಯದಲ್ಲಿ ಜನವರಿ 17ರಂದು ಬೆಳಿಗ್ಗೆ 10 ಗಂಟೆಗೆ ಕಾಗÀಲವಾಡಿಯ ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಯುವಜನರು ಮತ್ತು ಶಾಂತಿ ದಿನಾಚರಣೆ ಪ್ರಯುಕ್ತ ಕಾಗಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ ಕಾರ್ಯಕ್ರಮ ಉದ್ಘಾಟಿಸುವರು. ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಬಿ. ಮಹದೇವಯ್ಯ ಅಧ್ಯಕ್ಷತೆ ವಹಿಸುವರು. ಕನ್ನಡ ಶಿಕ್ಷಕರಾದ ರವಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಕಾಗಲವಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ದೇವಿ, ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯ ಗಣಿತ ಶಿಕ್ಷಕರಾದ ನಾಗೇಂದ್ರ ಪ್ರಸಾದ್ ಹಾಗೂ ಚಾಮರಾಜನಗರದ ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರಾದ ಮಂಜುನಾಥ ಆಗಮಿಸುವರು.
ಜನವರಿ 18 – ಕೌಶಲ್ಯಾಭಿವೃದ್ಧಿ ದಿನ:-
ಯಳಂದೂರಿನ ಬಿಳಿಗಿರಿ ಪ್ರಥಮದರ್ಜೆ ಕಾಲೇಜು ಹಾಗೂ ಚಂದನ ಮಹಿಳಾ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಜನವರಿ 18ರಂದು ಬೆಳಿಗ್ಗೆ 11 ಗಂಟೆಗೆ ಕೌಶಲ್ಯಾಭಿವೃದ್ಧಿ ದಿನವನ್ನು ಆಚರಿಸಲÁಗುತ್ತಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಕಾರ್ಯದರ್ಶಿಗಳಾದ ವಿ.ಎಂ. ರಾವÀುಚಂದ್ರ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಎಂ.ವಿ. ಪುಷ್ಟಕುಮಾರ್ ಅಧ್ಯಕ್ಷತೆ ವಹಿಸುವರು. ನಗರದ ಯುವ ಪರಿವರ್ತಕರಾದ ರವಿಕುಮಾರ್ ಅತಿಥಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಯಳಂದೂರಿನ ಬಿಳಿಗಿರಿ ರೋವರ್ ಸ್ಕೌಟ್ ಲೀಡರ್ ಡಿ.ವಿ. ಪ್ರಕಾಶ್ ಮೂರ್ತಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಡಿ.ಬಿ. ಶಿವರುದ್ರಪ್ಪ, ಚಂದನ ಮಹಿಳಾ ಅಭಿವೃದ್ಧಿ ಸಂಘದ ತಾಲೂಕು ಸಂಯೋಜಕರಾದ ಸುಂದ್ರಮ್ಮ ಪಾಲ್ಗೊಳ್ಳುವರು.
ಜನವರಿ 19 – ಜಾಗೃತಿ ದಿನ ಹಾಗೂ ಯುವ ಸಪ್ತಾಹ ಸಮಾರೋಪ:-
ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಾದಾಪಟ್ಟಣದ ಚೆನ್ನಬಸವೇಶ್ವರ ಕಲಾ ಬಳಗದ ಸಂಘಟನೆಯೊಂದಿಗೆ ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ಜಾಗೃತಿ ದಿನ ಮತ್ತು ಯುವ ಸಪ್ತಾಹದ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.
ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಜಿ. ಮಲ್ಲೇಶ್ ಅಧ್ಯಕ್ಷತೆ ವಹಿಸುವರು. ಕನ್ನಡ ಉಪನ್ಯಾಸಕರಾದ ಗಣೇಶ್ ಅತಿಥಿ ಉಪನ್ಯಾಸಕರಾಗಿ ಭಾಗವಹಿಸುವರು. ಗುಂಡ್ಲುಪೇಟೆ ಸಂಜೀವಿನಿ ಯೋಜನೆ ಸಂಯೋಜಕರಾದ ಸುಬ್ಬಮ್ಮ, ಸಮಷ್ಟಿ ಸಮಗ್ರ ಅಭಿವೃದ್ಧಿ ಟ್ರಸ್ಟ್‍ನ ಕಾರ್ಯನಿರ್ವಾಹಕರಾದ ಗಂಗಾಧರಸ್ವಾಮಿ ಹಾಗೂ ಚಾಮರಾಜನಗರದ ನವಸಮೃದ್ಧಿ ಗ್ರಾಮೀಣಾಭಿವೃದ್ಧಿ ಅಧ್ಯಕ್ಷರಾದ ಕಾಳಿಂಗಸ್ವಾಮಿ ಸಿದ್ದಾರ್ಥ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ನೆಹರು ಯುವ ಕೇಂದ್ರದ ಪ್ರಕಟಣೆ ತಿಳಿಸಿದೆ.


ಜಿಲ್ಲಾ ಮಟ್ಟದ ನಾಟಕ, ಜಾನಪದ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ

ಚಾಮರಾಜನಗರ, ಜ. 11 ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2017-18ನೇ ಸಾಲಿನಲ್ಲಿ ಮೈಸೂರು ವಲಯದ 8 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆ ಆಯೋಜಿಸಲು ಉದ್ದೇಶಿಸಲಾಗಿದೆ.
ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಕಾಲೇಜಿನ ಪ್ರಾಂಶುಪಾಲರು ಜನವರಿ 22ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.
ನಾಟಕದ ಆಯ್ಕೆ, ನಾಟಕದ ನಿರ್ದೇಶಕರು ಮತ್ತು ಜಾನಪದ ನೃತ್ಯ ಪ್ರಕಾರದ ಆಯ್ಕೆ, ತರಬೇತುದಾರರು ಮುಂತಾದ ವಿವರಗಳನ್ನು ಪರಿಗಣಿಸಿ ಕಾಲೇಜುಗಳನ್ನು ಸ್ಪರ್ಧೆ ಆಯ್ಕೆ ಮಾಡಿ ಸ್ಪಧೆ ನಡೆಯುವ ಸ್ಥಳ. ದಿನಾಂಕವನ್ನು ತಿಳಿಸಲಾಗುವುದು.
ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆಯ ನಿಯಮಾವಳಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣÉಯಲ್ಲಿ ತಿಳಿಸಿದ್ದಾರÉ.

ಜ. 15ರಂದು ಸುಗ್ಗಿಹುಗ್ಗಿ ಕಾರ್ಯಕ್ರಮ

ಚಾಮರಾಜನಗರ, ಜ. 11 :- ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕೃಷಿ ಇಲಾಖೆ ಸಹಯೋಗದಲ್ಲಿ ಚಾಮರಾಜನಗರ ತಾಲೂಕು ಕೆಂಪನಪುರದಲ್ಲಿ ಜನವರಿ 15ರಂದು ಸಂಜೆ 4 ಗಂಟೆಗೆ ಸುಗ್ಗಿ ಹುಗ್ಗಿ ಕಾರ್ಯಕ್ರಮ ಆಯೋಜಿಸಿದೆ.
ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಎಸ್. ಜಯಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮೆರವಣಿಗೆಗೆ ಚಾಲನೆ ನೀಡುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಾಧಕರಿಗೆ ಸನ್ಮಾನ ಮಾಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಕೆಂಪನಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಎಂ. ಗುರುಸಿದ್ದಪ್ಪ, ಉಪಾಧ್ಯಕ್ಷರಾದ ತೊಳಸಮ್ಮ ಆಗಮಿಸುವರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಜ. 12ರಂದು ಕಾನೂನು ಅರಿವು ನೆರವು ಕಾರ್ಯಕ್ರಮ

ಚಾಮರಾಜನಗರ, ಜ. 11 - ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮನೋನಿಧಿ ಇನ್ಸ್‍ಸ್ಟಿಟ್ಯೂಷನ್, ಸಾಧನ ಸಂಸ್ಥೆ ಇವರ ಸಹಯೋಗದಲ್ಲಿ ಜನವರಿ 12ರಂದು ಮಧ್ಯಾಹ್ನ 12 ಗಂಟೆಗೆ ನಗರದ ಹೌಸಿಂಗ್ ಬೋರ್ಡ್‍ನಲ್ಲಿರುವ ಮನೋನೊಧಿ ಇನ್ಸ್‍ಸ್ಟಿಟ್ಯೂಷನ್‍ನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಕಾರ್ಯಕ್ರಮ ಉದ್ಘಾಟಿಸುವರು. ಮನೋನಿಧಿ ಇನ್ಸ್‍ಸ್ಟಿಟ್ಯೂಷನ್‍ನ ಕಾರ್ಯದರ್ಶಿ ಶೈಲಜಾ ಕೃಪಾನಿಧಿ ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರ್. ಅರುಣ್ ಕುಮಾರ್ ಹಾಗೂ ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜಿ. ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲೆಯನ್ನು ಬರಮುಕ್ತಗೊಳಿಸಲು ಕುಡಿಯುವ ನೀರು, ಕೆರೆಗಳಿಗೆ ನೀರು ತುಂಬಿಸುವ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆ : ಸಿ.ಎಂ. (10=01=2018)

   
ಜಿಲ್ಲೆಯನ್ನು ಬರಮುಕ್ತಗೊಳಿಸಲು ಕುಡಿಯುವ ನೀರು, ಕೆರೆಗಳಿಗೆ ನೀರು ತುಂಬಿಸುವ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆ : ಸಿ.ಎಂ.
 ಚಾಮರಾಜನಗರ, ಜ. 10- ಚಾಮರಾಜನಗರ ಜಿಲ್ಲೆಯನ್ನು ಬರಮುಕ್ತಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
     ಅವರು ಇಂದು ಚಾಮರಾಜನಗರ ನಗರದ ನಾಗವಳ್ಳಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
 ಚಾಮರಾಜನಗರ ಜಿಲ್ಲೆ ಸತತವಾಗಿ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಗ್ರಾಮಗಳಿಗೆ ಮೂಲಭೂತ ಸೌಕರ್ಯವಾದ ಕುಡಿಯುವ ನೀರನ್ನು ಒದಗಿಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಕೃಷಿಗೆ ಬೇಕಿರುವ ನೀರನ್ನು ಪಡೆದುಕೊಳ್ಳಲು  ಕೃಷಿ ಹೊಂಡ ನಿರ್ಮಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
  ಜಿಲ್ಲೆಯಲ್ಲಿ ಇಂದು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಅಂದಾಜು 406.48 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳು ತಾಲೂಕಿನಲ್ಲಿ  ನಡೆಯುತ್ತಿದೆ. ಆಹಾರ, ವಸತಿ, ಶಿಕ್ಷಣ ಮತ್ತು ಆರೋಗ್ಯ ಇವು ಮೂಲಭೂತ ಸೌಕರ್ಯಗಳು ಇದು ಬಡವ, ಶ್ರೀಮಂತ ಎಂಬ ಬೇದವಿಲ್ಲದೇ ಪ್ರತಿಯೊಬ್ಬ ನಾಗರೀಕರಿಗೂ ತಲುಪಬೇಕು.

ಹಸಿವು ಮುಕ್ತ, ಅಪೌಷ್ಠಿಕ ಮುಕ್ತ, ಬಡತನ ಮುಕ್ತ, ಋಣ ಮುಕ್ತ, ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿಸುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ರೈತರ ಆರ್ಥಿಕ ಮಟ್ಟ ಸುಧಾರಿಸಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಆನ್‍ಲೈನ್ ಮೂಲಕ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ. ಈ ಯೋಜನೆ ಇತರೆ ರಾಜ್ಯಗಳಿಗೂ ಸಹ ಮಾದರಿಯಾಗಿದೆ ಎಂದರು.
     ರೈತರಿಗೆ ವಿವಿಧ ಯೋಜನೆಗಳಡಿ ಸಹಾಯಧನ 3 ಲಕ್ಷ ರೂ. ಬಡ್ಡಿರಹಿತ ಸಾಲ ನೀಡಲಾಗುತ್ತಿದೆ. ನೀರಾವರಿಗಾಗಿ 50 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನಿಗಧಿಮಾಡಿ ಯೋಜನೆಗಳನ್ನು ಅನುಷ್ಠಾನ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಸಾಮಾಜಿಕ ಭದ್ರತೆಯ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
     ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಆದ ಜಿಲ್ಲಾ ಉಸ್ತುವಾರಿ ಸಚಿವೆ ಎಂ. ಸಿ. ಮೋಹನಕುಮಾರಿ ಅವರು ಮಾತನಾಡಿ ತಮ್ಮ ಪತಿಯಾದ ಮಹದೇವ ಪ್ರಸಾದ್ ಅವರಿಗೆ ಚಾಮರಾಜನಗರ ಜಿಲ್ಲೆಯ ಮೇಲೆ ಅತೀವ ಕಾಳಜಿ ಇತ್ತು. ಅವರು ಇದ್ದ ಸಮಯದಲ್ಲಿ ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದರು. ವೈದ್ಯಕೀಯ ಕಾಲೇಜು, ರಸ್ತೆ ಅಭಿವೃದ್ಧಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಚಾಮುಲ್ ಡೈರಿಯಲ್ಲಿ ನಾನಾ ಯೋಜನೆಗಳನ್ನು ಜಾರಿಗೆ ತಂದರು. ಅವರ ಕೆಲಸಗಳು ಸದಾ ನನಗೆ ಮಾದರಿಯಾಗಿದೆ ಎಂದರು.
     ಚಾಮರಾಜನಗರ ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ ಅವರು ಮಾತನಾಡಿ ರಾಜ್ಯ ಸರ್ಕಾರ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳಲ್ಲಿ ನೀರಿನ ತೊಂದರೆಯನ್ನು ಹೋಗಲಾಡಿಸಲು ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಿ ಎರಡು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇಡೀ ರಾಜ್ಯದಲ್ಲೇ ಹೆಚ್ಚು ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಂಡಿದೆ ಎಂದರು.
     ರಾಜ್ಯಸರ್ಕಾರ ಬೌದ್ಧ ನಳಂದ ವಿಶ್ವವಿದ್ಯಾನಿಲಯಕ್ಕಾಗಿ 25 ಎಕರೆ ಜಮೀನು ಮಂಜೂರು ಮಾಡಿ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಜಿಲ್ಲೆಯನ್ನು ಅಭಿವೃದ್ಧಿಗೊಳಿಸಲು 4000 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದರು.
     ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪುಟ್ಟರಂಗ ಶೆಟ್ಟಿ ಅವರು ಮಾತನಾಡಿ ಜಿಲೆಯ ಬಹಳಷ್ಟು ಅಭಿವೃದ್ಧಿ ಕೆಲಸಗಳು ಅನುಷ್ಠಾನಗೊಂಡಿದ್ದು, ಚಾಮರಾಜನಗರದ ನಗರ ವ್ಯಾಪ್ತಿಯಲ್ಲಿ 2ನೇ ಹಂತದ ಕಾವೇರಿ ನೀರು ಸರಬರಾಜು ಎರಡನೇ ಹಂತಕ್ಕೆ ಮಂಜೂರಾತಿ ನೀಡುವಂತೆ ಮನವಿ ಸಲ್ಲಿಸಿದರು.
     ಇದೇ ವೇಳೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿಯವರು ವಿತರಿಸಿದರು.
     ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ. ರಾಮಚಂದ್ರ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಹೆಚ್.ವಿ. ಚಂದ್ರು, ಉಪಾಧ್ಯಕ್ಷ ಬಿ.ಎನ್ ದಯಾನಿಧಿ, ನಗರಸಭೆ ಅಧ್ಯಕ್ಷೆ ಶೋಭ ಪುಟ್ಟಸ್ವಾಮಿ, ಉಪಾಧ್ಯಕ್ಷ ರಾಜಪ್ಪ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಿ.ಜಿ.ರವಿಕುಮಾರ್, ಕನಿಷ್ಠ ವೇತನ ಸಲಹ ಮಂಡಳಿ ಅಧ್ಯಕ್ಷ ಉಮೇಶ್, ಚುಡಾ ಅಧ್ಯಕ್ಷ ಸುಹೇಲ್ ಅಲಿಖಾನ್,  ಗ್ರಾಮಪಂಚಾಯಿತಿ ಅಧ್ಯಕ್ಷೆ ಕಮಲಾಕ್ಷಮ್ಮ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ ಹರೀಶ್ ಕುಮಾರ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಅಭಿವೃದ್ಧಿಯಲ್ಲಿ ನಮ್ಮದೇ ಮಾದರಿ ಸರ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ 

ಚಾಮರಾಜನಗರ, ಜ. 10 - ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ ವಸತಿಭಾಗ್ಯ, ವಿದ್ಯಾಸಿರಿ ಹಾಗೂ ಇನ್ನಿತರ ಪ್ರಮುಖ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ಧಿಯಲ್ಲಿ ನಮ್ಮದು ಮಾದರಿ ಸರ್ಕಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕೊಳ್ಳೇಗಾಲದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿಂದು ಆಯೋಜಿಸಲಾಗಿದ್ದ 196 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಅಭಿವೃದ್ಧಿಗೆ 4 ಸಾವಿರ ಕೋಟಿ ಅನುದಾನ ನೀಡಿರುವ ಸರ್ಕಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ನೀರಾವರಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಸರ್ಕಾರದ ಪ್ರಣಾಳಿಕೆಯಲ್ಲಿ ಅರಂಭದಲ್ಲಿ ನೀಡಿದ್ದ 165 ಭರವಸೆಗಳಲ್ಲಿ 155 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಆ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ ಎಂದರು.
ಬುದ್ಧ, ಬಸವಣ್ಣ, ಗಾಂಧೀ ಹಾಗೂ ಅಂಬೇಡ್ಕರ್ ಅವರುಗಳ ತತ್ವ, ಆದರ್ಶಗಳಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ ಸರ್ವರನ್ನು ಸಮಾನವಾಗಿ ಕಾಣುತ್ತಿದೆ. ಸಂವಿಧಾನದ ಮೇಲೆ ಗೌರವವಿರುವ ಸರ್ಕಾರ ನಮ್ಮದು. ಸರ್ಕಾರದ ಸೌಲಭ್ಯದಿಂದ ಯಾರು ವಂಚಿತರಾಗದಂತೆ ನೋಡಿಕೊಳ್ಳುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ, ಭ್ರಾತೃತ್ವದ ಅಂಶಗಳನ್ನು ಸರ್ಕಾರ ಅಳವಡಿಸಿಕೊಂಡಿದೆ ಎಂದರು.
ರಾಜ್ಯದಲ್ಲಿ ಶೇ. 24.1ರಷ್ಟಿರುವ ಪರಿಶಿಷ್ಟ ಜಾತಿ, ಪಂಗಡದವರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗಳಡಿ ಜನಸಂಖ್ಯೆಗನುಗುಣವಾಗಿ ರಾಜ್ಯ ಸರ್ಕಾರ 86 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಅಂಬೇಡ್ಕರ್, ವಾಲ್ಮೀಕಿ, ದೇವರಾಜ ಅರಸು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳ ಮೂಲಕ 2400 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದೆ ಎಂದರು.
ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಮಹಿಳೆಯರ ಸಬಲೀಕರಣಕ್ಕೆ ಮಹತ್ವ ನೀಡಿದೆ. ಸ್ತ್ರೀಶಕ್ತಿ, ಸ್ವಸಹಾಯ ಸೇರಿದಂತೆ ಮಹಿಳಾ ಸಂಘಗಳಿಗೆ ಸುತ್ತುನಿಧಿ ಮೂಲಕ ಬಡ್ಡಿರಹಿತ ಸಾಲ ನೀಡಿದೆ. ರಾಜ್ಯದ 10 ಲಕ್ಷ ಮಂದಿ ಗರ್ಭಿಣಿಯರು ಮಾತೃಪೂರ್ಣ ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದರು.
ಹಸಿವು ಮುಕ್ತ ರಾಜ್ಯ ಕಟ್ಟುವ ಉದ್ದೇಶದಿಂದ ಆರಂಭವಾದ ಅನ್ನಭಾಗ್ಯ ಯೋಜನೆಯ ಮಾದರಿಯಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ ಬರಗಾಲ ಮುಕ್ತ, ವಸತಿ ಯೋಜನೆಯಿಂದ ಗುಡಿಸಲು ಮುಕ್ತ ಮತ್ತು ಮಹಿಳೆಯರ ಮತ್ತು ಮಕ್ಕಳ ಪೌಷ್ಠಿಕತೆಗೆ ಪ್ರಾಮುಖ್ಯತೆ ನೀಡಿ ಅಪೌಷ್ಠಿಕತೆ ಮುಕ್ತವಾದ ದೇಶದ ಮೊದಲ ರಾಜ್ಯವಾಗಿದೆ. ಲಂಬಾಣಿ, ತಾಂಡ್ಯ ಹಾಗೂ ಹಟ್ಟಿ ಪ್ರದೇಶಗಳನ್ನು ಗುರುತಿಸಿ ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ ವಾಸಿಸುವವನೆ ಮನೆಯ ಓಡೆಯ ಕಾನೂನು ಜಾರಿಗೊಳಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದರು.
ಬಂಡವಾಳ ಹೂಡಿಕೆಯಲ್ಲಿ 2013ರಲ್ಲಿ 13ನೇ ಸ್ಥಾನದಲ್ಲಿದ್ದ ರಾಜ್ಯ ಇಂದು ಮೊದಲ ಸ್ಥಾನದಲ್ಲಿದೆ. ಮಾಡಲಾಗಿದೆ. ಅಭಿವೃದ್ಧಿ ಮಾದರಿಯನ್ನು ಅನುಸರಿಸಿ ನಾವು ನವಕರ್ನಾಟಕ ನಿರ್ಮಾಣದ ಹಾದಿಯಲ್ಲಿ ಮುನ್ನಡೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಿದ್ದ ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಮಾತನಾಡಿ ಸರ್ಕಾರದ ಅಭಿವೃದ್ಧಿ ಯೋಜನೆ ಹಾಗೂ ಕಾರ್ಯಕ್ರಮಗಳ ಸದುಪಯೋಗವನ್ನು ರಾಜ್ಯದ 5 ಕೋಟಿ ಜನರು ಪಡೆದಿದ್ದಾರೆ. ಅ ಮೂಲಕ ಜಿಲ್ಲೆಯ ಅಬಿವೃದ್ಧಿ ಪರ್ವಕ್ಕೆ ಸರ್ಕಾರ ನಾಂದಿ ಹಾಡಿದೆ ಎಂದರು.
ಸಂಸದರಾದ ಆರ್. ಧ್ರುವನಾರಾಯಣ ಅವರು ರಾಜ್ಯ ಸರ್ಕಾರವು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ನೀಡಿದೆ. ಈ ನಿಟ್ಟಿನಲ್ಲಿ ಇತರೆ ರಾಜ್ಯಗಳಿಗೂ ಕರ್ನಾಟಕ ಮಾದರಿಯಾಗಿದೆ ಎಂದರು
      ಇದೇ ವೇಳೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿಯವರು ವಿತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಒಸಿದ್ದ ಶಾಸಕರಾದ ಎಸ್. ಜಯಣ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ವಿಧಾನ ಪರಿಷತ್ ಶಾಸಕರಾದ ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶಾಂತರಾಜು, ಉಪಾದ್ಯಕ್ಷರಾದ ಶಿವಾನಂದ, ಜಿ.ಪಂ.ಉಪಾಧ್ಯಕ್ಷರಾದ ಜೆ. ಯೋಗೀಶ್,  ಜಿ.ಪಂ.ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಸದಸ್ಯರಾದ ಕೆರೆಹಳ್ಳಿ ನವೀನ್, ಕೊಳ್ಳೇಗಾಲ ತಾ.ಪಂ. ಅಧ್ಯಕ್ಷರಾದ ಆರ್. ರಾಜು, ಚಾ.ನಗರ ತಾ.ಪಂ. ಅಧ್ಯಕ್ಷರಾದ ಎಚ್.ವಿ. ಚಂದ್ರು, ಯಳಂದೂರು ತಾ.ಪಂ.ಅಧ್ಯಕ್ಷರಾದ ನಂಜುಂಡಯ್ಯ, ಯಳಂದೂರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಲಿಂಗರಾಜು, ಮಾಜಿ ಶಾಸಕರಾದ ಬಾಲರಾಜು, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‍ಮೀನಾ, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ ಹರೀಶ್‍ಕುಮಾರ್,ಹೆಚ್ಷಚುವರಿ ಜಿಲ್ಲಾಧಿಉಕಾರಿ ಕೆ,ಎಂ.ಗಾಯತ್ರಿ, ಉಪವಿಭಾಗಧುಇಕಾರಿ ಪೌಜಿಯಾ ತರನಂ ಅವರು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
   

ಬಹುದಿನಗಳ ಹನೂರು ತಾಲೂಕು ಕನಸು ನನಸು : ಸಿ.ಎಂ.


ಚಾಮರಾಜನಗರ, ಜ. 10 - ಹನೂರು ತಾಲೂಕಾಗಿ ಘೋಷಣೆಯಾಗಿರುವುದರಿಂದ ಸ್ಥಳೀಯರ ಕನಸು ನನಸಾಗಿ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿಂದು ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹನೂರು ತಾಲೂಕು ಬಹುದಿನಗಳ ಬೇಡಿಕೆಯಾಗಿತ್ತು. ಆ ಕನಸು ನನಸಾಗಿದೆ. ಹನೂರಿನ ಜನತೆ ಈ ಹಿಂದೆ ಪ್ರತಿಯೊಂದು ಕೆಲಸ ಕಾರ್ಯಗಳಿಗೂ ಕೊಳ್ಳೇಗಾಲಕ್ಕೆ ಹೋಗಿಬರಬೇಕಾಗಿತ್ತು. ಈಗ ಹನೂರು ಪ್ರತ್ಯೇಕ ತಾಲೂಕಾಗಿರುವುದರಿಂದ ಎಲ್ಲಾ ಸರ್ಕಾರಿ ಕಚೇರಿಗಳು ಕೊಳ್ಳೇಗಾಲದಿಂದ ಪ್ರತ್ಯೇಕಗೊಳ್ಳಲಿವೆ. ಇದರಿಂದ ಸ್ಥಳೀಯ ಜನತೆಗೆ ಅನುಕೂಲವಾಗಲಿದೆ ಎಂದರು.
ಹನೂರು ವಿಧಾನಸಭಾ ಕ್ಷೇತ್ರದ ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲಿದೆ. ಗುಂಡಾಲ್ ಜಲಶಯ, ರಾಮನಗುಡ್ಡ ಮತ್ತು ಹುಬ್ಬೆಹುಣಸೆ ಕೆರೆಗಳಗೂ ನೀರು ತುಂಬಿಸಲು ಕ್ರಮ ವಹಿಸಲಾಗುತ್ತದೆ. ತಾವು ಜಿಲ್ಲೆಯ ಅಭಿವೃದ್ಧಿಗೆ ಕಾಳಜಿ ವಹಿಸಿರುವುದಾಗಿ ತಿಳಿಸಿದ ಮುಖ್ಯಮಂತ್ರಿಯವರು ಚಾಮರಾಜನಗರ ಜಿಲ್ಲೆಯನ್ನು ತಮ್ಮ ಜಿಲ್ಲೆಯೆಂದು ಪರಿಗಣಿಸುವುದಾಗಿ ಹೇಳಿದರು.
ಜಿಲ್ಲೆಯ ಅಭಿವೃದ್ಧಿಗೆ 4 ಸಾವಿರ ಕೋಟಿ. ರೂ. ಅನುದಾನ ನೀಡಲಾಗಿದೆ. ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯಲು ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ರಸಾದ್ ಅವರೇ ಕಾರಣರು. ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನ ಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಮಾತನಾಡಿ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕ್ಷೇತ್ರದಲ್ಲಿ ಭಕ್ತಾಧಿಗಳಿಗೆ ಅಗತ್ಯ ಅನುಕೂಲಗಳನ್ನು ಕಲ್ಪಿಸಲಾಗುತ್ತಿದೆ. ಹನೂರು ಭಾಗದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿರುವುದು ಸಂತಸದ ವಿಷಯವಾಗಿದೆ ಎಂದು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ಮುಖ್ಯಮಂತ್ರಿಯವರು ಅತೀ ಹೆಚ್ಚು ಬಾರಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಕೇವಲ ಭೇಟಿ ನೀಡುವುದಷ್ಟೆ ಮಾತ್ರವಲ್ಲ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳಿಗೆ 4 ಸಾವಿರ ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಹನೂರು ತಾಲೂಕು ಆಗಿರುವುದು ತಮಗೆ ಅತೀವ ಸಂತಸ ತಂದಿದೆ. ಅರಣ್ಯಇಲಾಖೆ ವತಿಯಿಂದ ಅಡುಗೆ ಅನಿಲ ಹಾಗೂ ಪರಿಕರಗಳನ್ನು ಅತೀ ಹೆಚ್ಚು ಫಲಾನುಭವಿಗಳಿಗೆ ವಿತರಿಸಲಾಗಿದೆ. ಪಟ್ಟಣದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‍ಸ್ಟ್ಯಾಂಡ್ ಉದ್ಘಾಟನೆ ನೆರವೇರಿರುವುದರಿಂದ ಬಹುದಿನಗಳ ಬೇಡಿಕೆ ಈಡೇರಿದೆ ಎಂದರು.
      ಇದೇ ವೇಳೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿಯವರು ವಿತರಿಸಿದರು.
      ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ವಿಧಾನ ಪರಿಷತ್ ಶಾಸಕರಾದ ಆರ್. ಧರ್ಮಸೇನ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಬಿ.ಕೆ. ಬೊಮ್ಮಯ್ಯ, ಸದಸ್ಯರಾದ ಮರುಗದಮಣಿ, ಶಿವಮ್ಮ, ರೇಖಾ ರವಿಕುಮಾರ್, ತಾ.ಪಂ. ಅಧ್ಯಕ್ಷರಾದ ಆರ್. ಉಪಾಧ್ಯಕ್ಷರಾದ ಲತಾರಾಜಣ್ಣ, ಹನೂರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಮಮತ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಾವೇದ್ ಅಹಮದ್, ಚಾಮುಲ್ ಅಧ್ಯಕ್ಷರಾದ ಗುರುಮಲ್ಲಪ್ಪ, ಹನೂರು ಎ.ಪಿ.ಎಂ.ಸಿ ಅಧ್ಯಕ್ಷರಾದ  ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‍ಮೀನಾ, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ,ಎಂ.ಗಾಯತ್ರಿ, ಉಪವಿಭಾಗಾಧಿಕಾರಿ ಪೌಜಿಯಾ ತರನಂ ಅವರು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.




Tuesday, 9 January 2018

166 ಗ್ರಾಮಗಳ 232 ಜನವಸತಿ ಪ್ರದೇಶಗಳಿಗೆ ಕುಡಿವ ನೀರು ಇಲಾಖೆಗೆ ಸವಾಲಾಗಿದ್ದ ಯೋಜನೆ ಕಾರ್ಯಗತ, ಇಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ (09-01-2018)

166 ಗ್ರಾಮಗಳ 232 ಜನವಸತಿ ಪ್ರದೇಶಗಳಿಗೆ ಕುಡಿವ ನೀರು ಇಲಾಖೆಗೆ ಸವಾಲಾಗಿದ್ದ ಯೋಜನೆ ಕಾರ್ಯಗತ, ಇಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ

ಚಾಮರಾಜನಗರ: ಜಿಲ್ಲೆಯ 166 ಗ್ರಾಮಗಳ ಸುಮಾರು 3 ಲಕ್ಷಕ್ಕೂ ಅಧಿಕ ಮಂದಿಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಚಾಲನೆ ನೀಡಲಿದ್ದಾರೆ.
ಚಾಮರಾಜನಗರ ತಾಲ್ಲೂಕಿನ 232 ಜನವಸತಿ ಪ್ರದೇಶಗಳ ದಾಹ ಇಂಗಿಸುವ ಈ ಮಹತ್ವ ಪೂರ್ಣ ಯೋಜನೆಯನ್ನು ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಾರಿಗೊಳಿಸಿದ್ದು, ಈ ಯೋಜನೆಯನ್ನು ಮೆಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿ., ಸಂಸ್ಥೆ ಕಾರ್ಯರೂಪಕ್ಕೆ ತಂದಿದೆ.
ಕಬಿನಿ ನದಿ ನೀರನ್ನು ಬೆಟ್ಟ ಪ್ರದೇಶವನ್ನು ದಾಟಿಸಿ ನಂತರ ಜನವಸತಿ ಪ್ರದೇಶಗಳಿಗೆ ಹರಿಸುವುದು ಸರ್ಕಾರ ಮತ್ತು ಇಲಾಖೆಗೆ ಸವಾಲಿನ ಕೆಲಸವೇ ಆಗಿತ್ತು. ಇಂತಹ ಸಂದರ್ಭದಲ್ಲಿ ಯೋಜನೆ ಸಿದ್ದಗೊಳಿಸುವಿಕೆ, ನಿರ್ಮಾಣ ಮತ್ತು ಮುನ್ನಡೆಸುವ ಮಾದರಿಯಲ್ಲಿ ಕಾಮಗಾರಿಗೆ ಮುಂದಾಯಿತು. ಈ ಸಂದರ್ಭದಲ್ಲಿ ಇಂತಹ ಯೋಜನೆ ಯಶಸ್ವಿ ಜಾರಿ ಪ್ರಶ್ನಾರ್ಥಕವಾಗಿಯೇ ಉಳಿದಿತ್ತು. ಗ್ರಾಮೀಣ ಜನತೆಗೆ ಕುಡಿವ ನೀರು ಕೊಡಬೇಕೆಂಬ ಸಂಕಲ್ಪದೊಂದಿಗೆ ಮುಂದಡಿ ಇರಿಸಿದ ಸರ್ಕಾರಕ್ಕೆ ಇದೀಗ ಯಶಸ್ಸು ದೊರೆತಿದೆ.
ಈ ಯೋಜನೆಯಡಿ ಸುಮಾರು 520 ಕಿ.ಮೀ.ಗಳಷ್ಟು ಎಂ.ಎಸ್.ಪೈಪ್, ಡಿಐ ಪೈಪ್ಸ್, ಹೆಚ್‍ಡಿಪಿಇ ಪೈಪ್ಸ್ ಸೇರಿದಂತೆ ವಿವಿಧ ಮಾದರಿಯ ಅತ್ಯಾಧುನಿಕ ಪೈಪ್‍ಗಳನ್ನು ಅಳವಡಿಸಲಾಗಿದೆ. ಈ ಪೈಪ್‍ಗಳು ದೀರ್ಘಕಾಲಿಕ ಬಾಳಿಕೆ ಪೈಪ್‍ಗಳಾಗಿದ್ದು, ಕುಡಿವ ನೀರು ಸರಬರಾಜಿನಲ್ಲಿ ತೊಡಕಾಗದಂತೆ ಎಚ್ಚರವಹಿಸಲಾಗಿದೆ.
ಯೋಜನೆ ಏನು?: ಚಾಮರಾಜನಗರ ತಾಲ್ಲೂಕಿನ ತಾಯೂರು ಬಳಿಯ ಕಬಿನಿ ನದಿಯ ನೀರನ್ನು 17 ಕಿಮೀ ದೂರದ ಉಮ್ಮತ್ತೂರಿಗೆ ಹರಿಸಿ, ಅಲ್ಲಿ ನೀರನ್ನು ಶುದ್ಧಿಕರಿಸಲಾಗುವುದು. ಶುದ್ಧಿಕರಿಸಿದ ನೀರನ್ನು  ಪಂಪಿಂಗ್ ಮೂಲಕ  ಉಮ್ಮತೂರು ಬೆಟ್ಟಕ್ಕೆ ಕೊಂಡೊಯ್ಯಲಾಗುವುದು.
ಬೆಟ್ಟದ ಮೇಲೆ 49 ಲಕ್ಷ ಲೀಟರ್ ಮತ್ತು 38 ಲಕ್ಷ ಲೀಟರ್‍ಗಳ ಸಾಮಥ್ರ್ಯದ ಎರಡು ಬೃಹತ್ ಟ್ಯಾಂಕ್‍ಗಳನ್ನು ತುಂಬಿಸಿ, ಅಲ್ಲಿಂದ ಶುದ್ಧ ಕುಡಿವ ನೀರನ್ನು ಪೈಪ್‍ಗಳ ಮೂಲಕ ಗುರುತ್ವಾಕರ್ಷಣೆ ಮತ್ತು ಸಣ್ಣ ಸಣ್ಣ ಪಂಪಿಂಗ್ ಕೇಂದ್ರಗಳ ಸಹಾಯದಿಂದ 166 ಗ್ರಾಮಗಳ 232 ಜನವಸತಿ ಪ್ರದೇಶಗಳಿಗೆ ಹರಿಸಲಾಗುವುದು.
ಯೋಜನೆಯ ವ್ಯಾಪ್ತಿಯ ಜನಸಂಖ್ಯೆ ಆಧಾರದ ಮೇಲೆ ಯೋಜನೆ ರೂಪಿಸಲಾಗಿದ್ದು, ಯೋಜನಾ ವ್ಯಾಪ್ತಿಯ ಪ್ರದೇಶದ ಪ್ರತಿ ವ್ಯಕ್ತಿಗೆ ಪ್ರತಿ ದಿನಕ್ಕೆ 55 ಲೀಟರ್ ಶುದ್ಧ ನೀರು ದೊರಕುವಂತೆ ಮಾಡಲಾಗಿದೆ.
ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ: ಯೋಜನಾ ಪ್ರದೇಶದ ಕಟ್ಟಕಡೆಯ ಪ್ರದೇಶ ಅಥವಾ ಕಟ್ಟ ಕಡೆಯ ವ್ಯಕ್ತಿಗೂ ನಿರ್ಧಾರಿತ ಕುಡಿವ ನೀರು ದೊರಕಬೇಕೆಂಬ ಉದ್ದೇಶವನ್ನು ಈ ಯೋಜನೆಯಲ್ಲಿ ಬಳಕೆ ಮಾಡಿರುವ ಅತ್ಯಾಧುನಿಕ ತಂತ್ರಜ್ಞಾನ ಸಾಧ್ಯಗೊಳಿಸುತ್ತಿದೆ.
ಈ ಯೋಜನೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಂದರೆ ಅಂತರ್ಜಾಲವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ‘ಸ್ಕೆಡಾ’ ಎಂದು ಹೇಳಲಾಗುವ ಅಂತರ್ಜಾಲ ತಂತ್ರಜ್ಞಾನದ ಮೂಲಕ ಕಂಟ್ರೋಲ್ ರೂಂನಲ್ಲಿ ಕುಳಿತಿರುವ ವ್ಯಕ್ತಿ ಯೋಜನಾ ವ್ಯಾಪ್ತಿಯ ನೀರು ನಿಯಂತ್ರಣ ಉಪಕರಣ (ವ್ಯಾಲ್ವ್)ಗಳನ್ನು ಸೂಕ್ತ ರೀತಿಯಲ್ಲಿ ನಿಯಂತ್ರಿಸಬಹುದಾಗಿದೆ. ಪ್ರತಿ ಜನವಸತಿ ಪ್ರದೇಶದಲ್ಲಿ ನಿಯಂತ್ರಣ ಮತ್ತು ಮಾಪಕಗಳನ್ನು ಅಳವಡಿಸಲಾಗಿದೆ. ಇದರಿಂದ ಪ್ರತಿ ವ್ಯಕ್ತಿಯ ಲೆಕ್ಕದಲ್ಲಿ ನೀರು ಸರಬರಾಜಾಗುತ್ತಿರುವುದು ಮತ್ತು ಕಟ್ಟ ಕಡೆಯ ಪ್ರದೇಶ ಅಥವಾ ವ್ಯಕ್ತಿಗೆ ನೀರು ಲಭ್ಯವಾಗುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಬಹುದಾಗಿದೆ.
ಹೆಚ್ಚುವರಿ ಪಂಪ್: ತ್ವರಿತ ಮತ್ತು ಅಡಚಣೆ ರಹಿತ ನೀರಿನ ಸರಬರಾಜಿಗೆ ಅನುವಾಗುವಂತೆ ಯೋಜನೆಯಡಿ ನಿರ್ಮಾಣವಾಗಿರುವ ಪಂಪ್‍ಹೌಸ್‍ಗಳಲ್ಲಿ ಹೆಚ್ಚುವರಿ ಮೋಟಾರ್‍ಗಳನ್ನು ಅಳವಡಿಸಲಾಗಿದೆ. ಅತ್ಯಾಧುನಿಕ ಮತ್ತು ಉತ್ತಮ ಕಾರ್ಯತತ್ಪರತೆ ಹೊಂದಿರುವ ಮೋಟಾರ್‍ಗಳನ್ನು ಇಲ್ಲಿ ಬಳಕೆ ಮಾಡಿರುವುದು ವಿಶೇಷ.
ಕಳೆದ ಎರಡು ತಿಂಗಳಿನಿಂದ ಪರೀಕ್ಷಾರ್ಥವಾಗಿ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಈ ಪ್ರದೇಶದ ಜನತೆಗೆ ಹರ್ಷ ತಂದಿದೆ.
ಮೇಘಾ ಸಾಧನೆ: ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದ್ದ ಈ ಬೃಹತ್ ಯೋಜನೆಯನ್ನು ಮೆಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿ., ಸಂಸ್ಥೆ ಕಾರ್ಯಗತಗೊಳಿಸಿದೆ. ಇಂತಹ ಸವಾಲಿನ ಇಂಜಿನಿಯರಿಂಗ್ ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ಯಶಸ್ಸು ಕಂಡಿರುವ ಈ ಸಂಸ್ಥೆ ತನ್ನ ಉತ್ತಮ ಸಾಧನೆಗಾಗಿ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್‍ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಯೋಜನೆ ಇಲಾಖೆಯ ಅತಿ ದೊಡ್ಡ ರೂಪುಗೊಳಿಸುವ, ಕಾರ್ಯಗತಗೊಳಿಸುವ ಮತ್ತು ಮುನ್ನಡೆಸುವ ಮಾದರಿಯ ಯೋಜನೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರದಂದು ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಜ.10, 11 ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ಚಾಮರಾಜನಗರ, ಜ. 09 - ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 10 ಹಾಗೂ 11ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 10ರಂದು ಬೆಳಿಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ತಾಲೂಕು ನಾಗವಳ್ಳಿ ಗ್ರಾಮಕ್ಕೆ ಆಗಮಿಸಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 12.30 ಗಂಟೆಗೆ ನಾಗವಳ್ಳಿ ಗ್ರಾಮದಿಂದ ಹೊರಟು 12.55 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ ಅಲ್ಲಿನ   ಎಂ.ಜಿ.ಎಸ್.ವಿ. ಶಾಲಾ ಮೈದಾನದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 3.55ಕ್ಕೆ ಹನೂರಿಗೆ ಆಗಮಿಸಿ ಹನೂರು ಕ್ರೀಡಾಂಗಣದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಬಳಿಕ ಮಲೈ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.
ಜನವರಿ 11ರಂದು ಬೆಳಿಗ್ಗೆ 10 ಗಂಟೆಗೆ ಮಲೆಮಹದೇಶ್ವರಬೆಟ್ಟದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಾಲಯ ಟ್ರಸ್ಟ್, ಚಾಮರಾಜಪೇಟೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿರುವ ನೂತನವಾಗಿ ನಿರ್ಮಿಸಿರುವ ಕನಕ ಸಮುದಾಯ ಭವನದ ಉದ್ಘಾಟನೆ ನೆರವೇರಿಸುವರು. ಬೆಳಿಗ್ಗೆ 10.30 ಗಂಟೆಗೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ, ಜ. 09 - ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಜನವರಿ 10ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 10ರಂದು ಚಾಮರಾಜನಗರಕ್ಕೆ ಆಗಮಿಸಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಮಧ್ಯಾಹ್ನ 1 ಗಂಟೆಗೆ ಕೊಳ್ಳೇಗಾಲದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಸಂಜೆ 4 ಗಂಟೆ ಹನೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಬಳಿಕ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಸ್ತವ್ಯ ಹೂಡುವರು.
ಜನವರಿ 11ರಂದು ಬೆಳಿಗ್ಗೆ ಮೈಸೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Monday, 8 January 2018

ಜ.10 ರಂದು ಮುಖ್ಯಮಂತ್ರಿಯವರಿಂದ ತಾಲೂಕಿನ ನಾಗವಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ (08-01-2018)

ಜ.10 ರಂದು ಮುಖ್ಯಮಂತ್ರಿಯವರಿಂದ ತಾಲೂಕಿನ ನಾಗವಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ 

ಚಾಮರಾಜನಗರ, ಜ. 08- ಜಿಲ್ಲಾಡಳಿತ ವತಿಯಿಂದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ  406.48 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ನಾಗವಳ್ಳಿಯಲ್ಲಿ ನೆರವೇರಿಸಲಿದ್ದಾರೆ.
ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಎಚ್.ಕೆ.ಪಾಟೀಲ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸÀಣ್ಣ ನೀರಾವರಿ ಸಚಿವರಾದ ಟಿ.ಬಿ. ಜಯಚಂದ್ರ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಮತ್ತು ವಕ್ಟ್ ಸಚಿವರಾದ ತನ್ವೀರ್ ಸೇಠ್, ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ, ಸಾರಿಗೆ ಸಚಿವರಾದ ಎಚ್,ಎಂ. ರೇವಣ್ಣ, ಜಲಸಂಪನ್ಮೂಲ ಸಚಿವರಾದ ಡಾ. ಎಂ.ಬಿ. ಪಾಟೀಲ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಎಚ್. ಅಂಜನೇಯ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಎ. ಮಂಜು, ಪ್ರವಾಸೋದ್ಯಮ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಮತ್ತು ಹಜ್ ಸಚಿವರಾದ ಆರ್. ರೋಷನ್‍ಬೇಗ್, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅವರುಗಳು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಸಂಸದರಾದ ಆರ್. ಧ್ರುವನಾರಾಯಣ, ಕೊಳ್ಳೇಗಾಲ ಶಾಸಕರಾದ ಎಸ್. ಜಯಣ್ಣ, ಹನೂರು ಶಾಸಕರಾದ ಆರ್. ನರೇಂದ್ರ, ವಿಧಾನ ಪರಿಷತ್ ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು(ಸಂದೇಶ್ ನಾಗರಾಜು), ಅರ್, ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಎ.ಪಿ.ಎಂ.ಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲೀಖಾನ್, ನಗರಸಭೆ ಅಧ್ಯಕ್ಷರಾದ ಶೋಭಾ, ನಾಗವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಮಲಾಕ್ಷಮ್ಮ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜಿ. ಯೋಗೇಶ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಉಪಾಧ್ಯಕ್ಷರಾದ ಎಂ. ರಾಜಪ್ಪ, ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾದ ಎಂ.ಡಿ. ಕೃಷ್ಣಮೂರ್ತಿ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
 

ಜ.10 ರಂದು ಮುಖ್ಯಮಂತ್ರಿಯವರಿಂದ ಕೊಳ್ಳೇಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ

ಚಾಮರಾಜನಗರ, ಜ. 08 - ಜಿಲ್ಲಾಡಳಿತ ವತಿಯಿಂದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 176.94 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10ರಂದು ಮಧ್ಯಾಹ್ನ 12 ಗಂಟೆಗೆ ಕೊಳ್ಳೇಗಾಲ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿ ನೆರವೇರಿಸಲಿದ್ದಾರೆ.
ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಎಸ್. ಜಯಣ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸÀಣ್ಣ ನೀರಾವರಿ ಸಚಿವರಾದ ಟಿ.ಬಿ. ಜಯಚಂದ್ರ, ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರಾದ ಬಿ. ರಮಾನಾಥ ರೈ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಮತ್ತು ವಕ್ಟ್ ಸಚಿವರಾದ ತನ್ವೀರ್ ಸೇಠ್, ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ, ಸಾರಿಗೆ ಸಚಿವರಾದ ಎಚ್,ಎಂ. ರೇವಣ್ಣ, ಜಲಸಂಪನ್ಮೂಲ ಸಚಿವರಾದ ಡಾ. ಎಂ.ಬಿ. ಪಾಟೀಲ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಎಚ್. ಅಂಜನೇಯ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಎ. ಮಂಜು, ವಸತಿ ಸಚಿವರಾದ ಎಂ.ಕೃಷ್ಣಪ್ಪ, ಪೌರಾಡಳಿತ ಸಚಿವರಾದ ಈಶ್ವರ್ ಬಿ. ಖಂಡ್ರೆ, ನಗರಾಭಿವೃದ್ಧಿ ಮತ್ತು ಹಜ್ ಸಚಿವರಾದ ಆರ್. ರೋಷನ್‍ಬೇಗ್, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅವರುಗಳು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಸಂಸದರಾದ ಆರ್. ಧ್ರುವನಾರಾಯಣ, ಚಾಮರಾಜನಗರ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಹನೂರು ಶಾಸಕರಾದ ಆರ್. ನರೇಂದ್ರ, ವಿಧಾನ ಪರಿಷತ್ ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು(ಸಂದೇಶ್ ನಾಗರಾಜು), ಅರ್, ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶಾಂತರಾಜು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜಿ. ಯೋಗೇಶ್, ಎ.ಪಿ.ಎಂ.ಸಿ ಅಧ್ಯಕ್ಷರಾದ ರಾಜಪ್ಪ, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ಯಳಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ನಂಜುಂಡಯ್ಯ, ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಲಿಂಗರಾಜು  ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜ.10 ರಂದು ಮುಖ್ಯಮಂತ್ರಿಯವರಿಂದ ಹನೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ


ಚಾಮರಾಜನಗರ, ಜ. 08 - ಜಿಲ್ಲಾಡಳಿತ ವತಿಯಿಂದ ಹನೂರು ವಿಧಾನಸಭಾ ಕ್ಷೇತ್ರದ 111.10 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಜನವರಿ 10ರಂದು ಮಧ್ಯಾಹ್ನ 3 ಗಂಟೆಗೆ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ನೆರವೇರಿಸಲಿದ್ದಾರೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಹನೂರು ವಿಧಾನಸಭಾ ಸದಸ್ಯರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಸಾರಿಗೆ ಸಚಿವರಾದ ಎಚ್.ಎಂ. ರೇವಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವರಾದ ಟಿ.ಬಿ ಜಯಚಂದ್ರ, ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್, ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರಾದ ರಮಾನಾಥ ರೈ, ಸಮಾಜ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ, ಪಶು ಸಂಗೋಪನಾ ಸಚಿವರಾದ ಎ. ಮಂಜು, ವಸತಿ ಸಚಿವರಾದ ಎಂ. ಕೃಷ್ಣಪ್ಪ, ಧಾರ್ಮಿಕ ದತ್ತಿ ಮತ್ತು ಮುಜರಾಯಿ ಸಚಿವರಾದ ರುದ್ರಪ್ಪ ಮನ್ನಪ್ಪ ಲಮಾಣಿ, ಸಹಕಾರ ಸಚಿವರಾದ ಜಾರಕಿಹೊಳಿ ರಮೇಶ್ ಲಕ್ಷಣರಾವ್, ಕೃಷಿ ಸಚಿವರಾದ ಕೃಷ್ಣಬೈರೇಗೌಡ, ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ ಖರ್ಗೆ, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ  ಅವರುಗಳು ಘನ ಉಪಸ್ಥಿತಿ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಕೊಳ್ಳೇಗಾಲದ ಶಾಸಕರಾದ ಎಸ್. ಜಯಣ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮತ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಕೊಳ್ಳೇಗಾಲದ ಕೃಷಿ ಉತ್ಪನ್ನ ಸಮಿತಿ ಅಧ್ಯಕ್ಷರಾದ ಬಿ. ರಾಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.


ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಜ. 08:- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜನವರಿ 10 ರಿಂದ 29ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಜನವರಿ 10ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, ಜನವರಿ 19ರಂದು ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು.
ಜನವರಿ 22ರಂದು ಯಳಂದೂರು, 25ರಂದು ಕೊಳ್ಳೇಗಾಲ ಹಾಗೂ 29ರಂದು ಹನೂರಿನಲ್ಲಿ ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.


ವಿಜ್ಞಾನ ತಂತ್ರಜ್ಞಾನ ಸಮ್ಮೇಳನ : ಹೆಸರು ನೊಂದಾಯಿಸಿ

ಚಾಮರಾಜನಗರ, ಜ. 08- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಬೆಂಗಳೂರಿನ ಯಲಹಂಕದಲ್ಲಿರುವ ರೇವಾ ವಿಶ್ವವಿದ್ಯಾನಿಲಯದಲ್ಲಿ ಅಕಾಡೆಮಿಯ ದಶಮಾನೋತ್ಸವವನ್ನು ಜನವರಿ 18 ಹಾಗೂ 19ರಂದು ಆಯೋಜಿಸಿದೆ.
ಮಾನವ ಕುಲದ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಕೇಂದ್ರ ವಿಷಯದ ಮೇಲೆ ಸಮ್ಮೇಳನ ನಡೆಯಲಿದ್ದು,  ಸಮ್ಮೇಳನದ ಪ್ರತಿನಿಧಿಯಾಗಿ ನೊಂದಾಯಿಸಿಕೊಳ್ಳಲು ಮತ್ತು ಸಂಶೋಧನಾ ಸಾರಾಂಶ ಸಲ್ಲಿಸಲು ಜನವರಿ 10 ಕೊನೆಯ ದಿನ.
ಹೆಚ್ಚಿನ ಮಾಹಿತಿಯನ್ನು ಅಕಾಡೆಮಿಯ ವೆಬ್ ತಾಣ ತಿತಿತಿ.ಞsಣಚಿಛಿoಟಿಜಿeಡಿeಟಿಛಿe.ಛಿom ದಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇ ಮೇಲ್ ಞsಣಚಿಡಿevಚಿ18@gmಚಿiಟ.ಛಿom ಮೂಲಕವೂ ಕಳುಹಿಸಬಹುದಾಗಿದೆ.
ಮಾಹಿತಿಯನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಹಿರಿಯ ವೈಜ್ಞಾನಿಕ ಅಧಿಕಾರಿ ಡಾ. ಎ.ಎಂ. ರಮೇಶ್ (ದೂ.ಸಂಖ್ಯೆ 080-26711160, ಮೊಬೈಲ್ 9845258894) ಇವರಿಂದಲೂ ಪಡೆಯಬಹುದು ಎಂದು ಅಕಾಡೆಮಿಯ ಪ್ರಕಟಣÉ ತಿಳಿಸಿದೆ.

ಜ. 9ರಂದು ವಿದ್ಯುತ್ ವ್ಯತ್ಯಯ 

ಚಾಮರಾಜನಗರ, ಜ. 08- ಚಾಮರಾಜನಗರ ಉಪವಿಭಾಗ ರಾಮಸಮುದ್ರ ಶಾಖಾ ವ್ಯಾಪ್ತಿಗೆ ಬರುವ ಹೌಸಿಂಗ್ ಬೋರ್ಡ್ ಕಾಲೋನಿ, ಕೋರ್ಟ್ ರಸ್ತೆ ಭಾಗಗಳಲ್ಲಿ ರಸ್ತೆ ಅಗಲೀಕರಣ ಮಾಡಲು ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ಜನವರಿ 9ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹೌಸಿಂಗ್ ಬೋರ್ಡ್ ಕಾಲೋನಿ, ಕೋರ್ಟ್ ರಸ್ತೆ ಹಾಗೂ ಕರಿನಂಜನಪುರ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*

  ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*    ಚಾಮರಾಜನಗರ, ಸೆಪ್ಟೆಂಬರ್ 28 :- ಈ ಬಾರಿಯ ರಾಷ್ಟ್ರೀಯ ಲೋ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು