Tuesday, 17 July 2018

ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ : ಆರ್. ಧ್ರುವನಾರಾಯಣ (17-07-2018)


ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ : ಆರ್. ಧ್ರುವನಾರಾಯಣ 

ಚಾಮರಾಜನಗರ, ಜು. 17:- ಮಿತಿಮೀರಿದ ಪ್ರಮಾಣದಲ್ಲಿ ಏರುತ್ತಿರುವ ಜನಸಂಖ್ಯೆ ಪ್ರಮಾಣವನ್ನು ನಿಯಂತ್ರಣ ಮಾಡದಿದ್ದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಠಿಯಾಗಲಿದೆ ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವದಲ್ಲಿ ಜನಸಂಖ್ಯೆ ಹೆಚ್ಚಳ ದೇಶಗಳ ಪೈಕಿ ಚೀನಾ ಮೊದಲ ಸ್ಥಾನದಲ್ಲಿದೆ. ಭಾರತ ನಂತರದ ಸ್ಥಾನದಲ್ಲಿದೆ. ಚೀನಾ ಹಾಗೂ ಭಾರತದ ನಡುವೆ ಜನಸಂಖ್ಯೆ ಪ್ರಮಾಣದಲ್ಲಿ ಭಾರಿ ಅಂತರವೇನಿಲ್ಲ. ಭಾರತದಲ್ಲಿ ಪ್ರಸ್ತುತ ಜನಸಂಖ್ಯೆ ಏರಿಕೆ ಪ್ರಮಾಣವನ್ನು ಗಮನಿಸಿದಾಗÀ 2024ರ ವೇಳೆಗೆ ಚೀನಾವನ್ನು ಜನಸಂಖ್ಯೆಯಲ್ಲಿ ಹಿಂದಿಕ್ಕುವ ಸಾಧ್ಯತೆಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದರು.
ಜನಸಂಖ್ಯೆ ಪ್ರಮಾಣ ಏರಿಕೆ ತಡೆಯಲು ಆರೋಗ್ಯ ಪೂರಕ ತಿಳಿವಳಿಕೆ ನೀಡಬೇಕಿದೆ. ಜನಸಂಖ್ಯೆ ಸ್ಪೋಟದಿಂದ ಆಗುವ ಅಪಾಯಗಳ ಕುರಿತು ಮನವರಿಕೆ ಮಾಡಿಕೊಡಬೇಕಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತ ಬಂದಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲೆಯಲ್ಲಿ ತಾಯಿ ಶಿಶುವಿನ ಮರಣ ಪ್ರಮಾಣ ಗಣನೀಯವಾಗಿ ತಗ್ಗಿರುವುದು ಉತ್ತಮ ಬೆಳವಣಿಗೆಯಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ತಾಯಿ ಮಗುವಿನ ಆರೋಗ್ಯ ಕಾಳಜಿಗೆ ವಿಶೇಷ ಒತ್ತು ನೀಡಲಾಗಿದೆ. ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯಶಸ್ವಿಗೆ ಕಾರಣರಾಗಿದ್ದಾರೆ ಎಂದು ಧ್ರುವನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಜನಸಂಖ್ಯೆ ಹೆಚ್ಚಳವನ್ನು ಮಾನವ ಸಂಪನ್ಮೂಲ ಅಭಿವೃದ್ಧಿಯನ್ನಾಗಿ ಪರಿವರ್ತಿಸಿದರೆ ಪ್ರಗತಿಯನ್ನು ಗಣನೀಯವಾಗಿ ಕಾಣಬಹುದು. ಜನರ ಮಾನಸಿಕ ಪರಿವರ್ತನೆಯಾದರೆ ಜನಸಂಖ್ಯೆ ಏರಿಕೆಗೆ ಕಡಿವಾಣ ಹಾಕಬಹುದು. ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ವಿಶ್ವಜನಸಂಖ್ಯಾ ದಿನ ಆಚರಣೆಯ ಕುರಿತು ಮುಖ್ಯ ಉಪನ್ಯಾಸ ನೀಡಿದ ಉಪನ್ಯಸಕರಾದ ಎಸ್. ರಾಮಕೃಷ್ಣ ವಿಶ್ವದಲ್ಲಿ 763 ಕೋಟಿ ಜನಸಂಖ್ಯೆ ಇದೆ. ಭಾರತದ ಜನಸಂಖ್ಯೆ 136 ಕೋಟಿ ಆಗಿದೆ. ಜನಸಂಖ್ಯೆ ಪ್ರಮಾಣ ವಿಶ್ವದಲ್ಲಿ ನಿಯಂತ್ರಣವಾಗದಿದ್ದರೆ ಜೈವಿಕ ಅಸಮಾನತೆ ಉಂಟಾಗಲಿದೆ. ಭೂಮಿಯ ಮೇಲೆ ಒತ್ತಡ ಹೆಚ್ಚಾಗಲಿದೆ. ಭವಿಷ್ಯದ ದಿನಗಳಲ್ಲಿ ಜಲಕ್ಷಾಮ ಆಮ್ಲಜನಕ ಕೊರತೆಯಿಂದ ಜನರು ಬಳಲಬೇಕಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಮಾತನಾಡಿ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಜನಸಂಖ್ಯೆ ಪ್ರಮಾಣ ನಿಯಂತ್ರಣದಲ್ಲಿರಬೇಕು. ಎಲ್ಲರೂ ಸಾಮಾಜಿಕವಾಗಿ ಹಾಗು ಆರ್ಥಿಕವಾಗಿ ಉತ್ತಮ ಬಾಳ್ವೆ ನಡೆಸಲು ಸೌಲಭ್ಯಗಳು ಸಮಾನವಾಗಿ ಹಂಚಿಕೆಯಾಗಬೇಕು. ಜನಸಂಖ್ಯೆ ಪ್ರಮಾಣ ಸಮತೋಲನದಲ್ಲಿ ಇದ್ದಾಗ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.
ಇದೇವೇಳೆ ಉತ್ತಮ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ, ಉಪಾಧ್ಯಕ್ಷರಾದ ಜೆ. ಯೋಗೇಶ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಅನಿಲ್ ಕುಮಾರ್, ಆರ್‍ಸಿಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಾರಾಯಣಸ್ವಾಮಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಜನಸಂಖ್ಯಾ ನಿಯಂತ್ರಣ ಸಂಬಂಧ ಜಾಗೃತಿ ಜಾಥಾ ನಡೆಸಲಾಯಿತು.
ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಜು. 17 :- ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಜುಲೈ 20 ರಿಂದ 25ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಜುಲೈ 20ರಂದು ಕೊಳ್ಳೇಗಾಲ, 21ರಂದು ಯಳಂದೂರು, 23ರಂದು ಚಾಮರಾಜನಗರ, 24ರಂದು ಗುಂಡ್ಲುಪೇಟೆ ಹಾಗೂ 25ರಂದು ಹನೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಗ್ರಾಮೀಣ ಯುವಜನರು ಆತ್ವವಿಶ್ವಾಸ ವೃದ್ಧಿಸಿಕೊಳ್ಳಲು ಧ್ರುವನಾರಾಯಣ ಸಲಹೆ
ಚಾಮರಾಜನಗರ, ಜು. 17:- ಗ್ರಾಮೀಣ ಪ್ರದೇಶದ ಯುವಜನರು ಕೀಳರಿಮೆ ತೊರೆದು ಆತ್ಮವಿಶ್ವಾಸ ಬೆಳೆಸಿಕೊಂಡು ಪ್ರಸ್ತುತ ಉದ್ಯೋಗ ಅವಕಾಶಗಳನ್ನು ಹೆಚ್ಚು ಪಡೆಯುವಂತಾಗಬೇಕೆಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಲಹೆ ಮಾಡಿದರು.
ನಗರದ ಜಿಲ್ಲಾಡಳಿತದ ಭವನದ ಕೆಡಿಪಿ ಸಭಾಂಗಣದಲ್ಲಿ ಇಂದು ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದಿರುವ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಸಂದರ್ಭಗಳಿಗೆ ಅನುಸಾರವಾಗಿ ಲಭಿಸುತ್ತಿರುವ ಉದ್ಯೋಗ ಅವಕಾಶಗಳಿಗೆ ಅನೇಕ ಕೌಶಲ ಅಗತ್ಯವಿದೆ. ಕೌಶಲ ತರಬೇತಿಯನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ. ಬರಿ ತರಬೇತಿ ಪಡೆದರಷ್ಟೇ ಸಾಲದು ಉದ್ಯೋಗ ನಿರ್ವಹಿಸಲು ಅವಶ್ಯವಿರುವ ಸಂವಹನ ಕಲೆಯನ್ನು ಸಹ ಸಿದ್ಧಿಮಾಡಿಕೊಳ್ಳಬೇಕು. ಆತ್ಮ ವಿಶ್ವಾಸ ವೃದ್ಧಿಸಿಕೊಂಡು ಮುನ್ನಡೆದರೆ ಯಶಸ್ವಿಯಾಗಬಹುದೆಂದು ಧ್ರುವನಾರಾಯಣ ಕಿವಿಮಾತು ಹೇಳಿದರು.
ಶಿಕ್ಷಣ ಒಂದೇ ಇಂದಿನ ಉದ್ಯೋಗಕ್ಕೆ ಸಾಲದು. ಕೌಶಲ ತರಬೇತಿ ಪ್ರತಿಯೊಬ್ಬರೂ ಪಡೆಯಬೇಕು. ಇತರೆ ಮುಂದುವರೆದ ರಾಷ್ಟ್ರಗಳು ಶೇ. 90ರಷ್ಟು ಕೌಶಲ ತರಬೇತಿಯನ್ನು ನೀಡುತ್ತಿವೆ. ನಮ್ಮಲ್ಲಿ ಕೌಶಲ ಪ್ರಮಾಣ ತೀರಾ ಕಡಿಮೆ ಇದೆ. ಪರಿಣತಿ ತರಬೇತಿ ನೀಡುವವರ ಸಂಖ್ಯೆಯೂ ಹೆಚ್ಚು ಇಲ್ಲ. ಹೀಗಾಗಿ ಇಂದಿನ ಅಗತ್ಯಕ್ಕೆ ಅನುಗುಣವಾಗಿ ಕೌಶಲ ಹೆಚ್ಚಳ ಮಾಡುವ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
ಸರ್ಕಾರ ನೀಡುತ್ತಿರುವ ಕೌಶಲ ಪೂರಕ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ದೀನ್ ದಯಾಳ್ ಉಪಾಧ್ಯಾಯ ಕೌಶಲ್ಯ ಯೋಜನೆ ತರಬೇತಿಯು ಗ್ರಾಮೀಣ ಪ್ರದೇಶದ ಬಡ ಯುವಜನರ ಅನುಕೂಲಕ್ಕಾಗಿ ತರಲಾಗಿದೆ. ಈ ಯೋಜನೆ ತರಬೇತಿ ಪಡೆಯಲು ಇತರರಿಗೂ ಉತ್ತೇಜನ ನೀಡಬೇಕು ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಮಹತ್ವಾಕಾಂಕ್ಷೆಯ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಗ್ರಾಮೀಣ ಅಭ್ಯರ್ಥಿಗಳಿಗೆ ಕಂಪ್ಯೂಟರ್, ಆಂಗ್ಲ ಭಾಷೆ ಸಂವಹನ, ಸೇಲ್ಸ್ ಮತ್ತು ರೀಟೇಲ್ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡುವ ಕುರಿತು ತರಬೇತಿ ನೀಡಲಾಗಿದೆ. ತರಬೇತಿ ಪಡೆದಿರುವವರು ತಮ್ಮ ಅನುಭವ ಹಾಗೂ ನಿರೀಕ್ಷಿಸಿರುವ ಸೌಲಭ್ಯಗಳ ಬಗ್ಗೆ ತಿಳಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಕ್ರಮ ರೂಪಿಸಲು ಸಾಧ್ಯವಾಗುತ್ತದೆ ಎಂದರು.
ತರಬೇತಿ ಪಡೆದಿರುವ ಗ್ರಾಮೀಣ ವಿದ್ಯಾರ್ಥಿಗಳು ಉತ್ಸಾಹದಿಂದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರೊಂದಿಗೆ ತರಬೇತಿ ಕುರಿತು ಅನಿಸಿಕೆಗಳನ್ನು ಸಂವಾದದಲ್ಲಿ ಹಂಚಿಕೊಂಡರು.
ಇದೇವೇಳೆ ಜಿಲ್ಲಾ ಪಂಚಾಯತ್ ಜಿಲ್ಲಾ ವ್ಯವಸ್ಥಾಪಕರಾದ ಗೋವಿಂದರಾಜು ಯೋಜನೆಯಡಿ ವಿದ್ಯಾರ್ಥಿಗಳ ಆಯ್ಕೆ, ತರಬೇತಿ, ಉದ್ಯೋಗ ಅವಕಾಶಗಳ ಕುರಿತು ವಿವರ ನೀಡಿದರು. ಜಿಲ್ಲಾ ಪ್ರಂಚಾಯತ್ ಯೋಜನಾ ನಿರ್ದೇಶಕರಾದ ಶ್ರೀಧರ್, ತರಬೇತಿ ನಿರ್ವಹಣೆ ಹೊತ್ತಿರುವ ಐಟಿ ಕಾಟ್ ಸಂಸ್ಥೆಯ ಶೃತಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ: ಅರ್ಜಿ ಸಲ್ಲಿಕೆಗೆ ಅವಕಾಶ. ಚಾಮರಾಜನಗರ, ಜು. 17 - ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರ 2016-17ನೇ ಸಾಲಿನಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ) ಜಾರಿಗೆ ತಂದಿದ್ದು, ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ-2011ರ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳನ್ನು ಪರಿಗಣಿಸಿ ವಸತಿ ಸೌಕರ್ಯವನ್ನು ನೀಡುತ್ತಿದೆ. ಸದರಿ ಪಟ್ಟಿಯಲ್ಲಿ ಅನೇಕ ಅರ್ಹರ ಹೆಸರು ಬಿಟ್ಟು ಹೋಗಿವೆ. ಹೀಗಾಗಿ ಹೊಸದಾಗಿ ವಸತಿ ಹಾಗೂ ನಿವೇಶನ ರಹಿತರÀನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವು ನಿರ್ದೇಶನ ನೀಡಿದೆ.
ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತರ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ನೋಂದಣಿಯಾಗದೆ ಇರುವವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು. ಮಾಜಿ ಯೋಧರು, ವಿಧುರರು, ಅಂಗವಿಕಲರು ಮತ್ತು ಹಿರಿಯ ನಾಗರಿಕರಾಗಿದ್ದಲ್ಲಿ ಪುರುಷರು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬವು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿದ್ದು, ಬಡತನ ರೇಖೆಗಿಂತ ಕೆಳಗಿರಬೇಕು. ಸಾಮಾಜಿಕ, ಆರ್ಥಿಕ ಮತ್ತು ಜಾತಿ ಜನಗಣತಿಯಂತೆ ವಸತಿ ರಹಿತರು, ಶೂನ್ಯ ಕೋಣೆ, ಒಂದು ಕೋಣೆ, ಎರಡು ಕೋಣೆಯೊಂದಿಗೆ ಕಚ್ಚಾಗೋಡೆ ಹಾಗೂ ಕಚ್ಚಾ ಛಾವಣಿ ಹೊಂದಿರುವವರು ಅರ್ಹರಾಗಿರುತ್ತಾರೆ. ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು, ಯಾವುದೇ ಯೋಜನೆ, ಇಲಾಖೆಯಿಂದ ವಸತಿ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರು ಜುಲೈ 23 ರೊಳಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಆಧಾರ್‍ಕಾರ್ಡ್, ಪಡಿತರ ಚೀಟಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಡನೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜುಲೈ 19, 20 ರಂದು ಸಿ.ಎಂ.ಇ.ಜಿ.ಪಿ ಅರ್ಜಿದಾರರಿಗೆ ಸಂದರ್ಶನÀ. ಚಾಮರಾಜನಗರ, ಜು. 17 :- 2018-19ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಸೇವೆ ಘಟಕ ಪ್ರಾರಂಭದ ಉದ್ದೇಶಕ್ಕಾಗಿ ಸಾಲ-ಸೌಲಭ್ಯಕ್ಕೆ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜುಲೈ 19 ರಂದು ಹಾಗೂ ಕರ್ನಾಟಕ ಖಾದಿ ಮತ್ತು ಗ್ರಾಮೋದ್ದಯೋಗ ಮಂಡಳಿಗೆ  ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜುಲೈನ 20 ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ತಾಲ್ಲೂಕಿನ ಮರಿಯಾಲದಲ್ಲಿರುವ ರುಡ್‍ಸೆಟ್ ಸಂಸ್ಥೆಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕಾಗಿ ಕರೆಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ. ಒಂದು ವೇಳೆ ಕರೆಪತ್ರಗಳು ತಲುಪದೇ ಇದ್ದರೂ ಸಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನ ವೇಳೆ ಅರ್ಜಿಯೊಂದಿಗೆ ಲಗತ್ತಿಸಿದ ಭಾವಚಿತ್ರ, ವಿದ್ಯಾರ್ಹತೆ, ಜನ್ಮ ದಿನಾಂಕ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತರೆ ಅಗತ್ಯ ಧೃಢೀಕರಣ ಪತ್ರಗಳ ಪ್ರತಿಯನ್ನು ಹಾಜರುಪಡಿಸಬೇಕು. ವಿವರಗಳಿಗೆ ನಗರದ ಜಿಲ್ಲಾಡಳಿತಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ ಅಥವಾ ದೂರವಾಣಿ ಸಂಖ್ಯೆ:08226-224915 ಸಂಪರ್ಕಿಸುವಂತೆ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






x

Thursday, 12 July 2018

ಆರೋಗ್ಯ ಕಾಳಜಿಗೆ ಜಿಲ್ಲಾ ನ್ಯಾಯಾಧೀಶರ ಸಲಹೆ ,ನಗರದಲ್ಲಿ ಗಮನಸೆಳೆದ ಡೆಂಗಿ ಜಾಗೃತಿ ಜಾಥಾ (12-07-2018)

ಆರೋಗ್ಯ ಕಾಳಜಿಗೆ ಜಿಲ್ಲಾ ನ್ಯಾಯಾಧೀಶರ ಸಲಹೆ 
ಚಾಮರಾಜನಗರ, ಜು. 12 - ಜೀವನದಲ್ಲಿ ಆರೋಗ್ಯವೇ ಸಂಪತ್ತಾಗಿದ್ದು ಇದನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಸಲಹೆ ಮಾಡಿದರು. 
ನಗರದ ಜಿಲ್ಲಾ ಕಾರಾಗೃಹದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. 
ಮನುಷ್ಯನಿಗೆ ಆರೋಗ್ಯಕ್ಕೆ ಮಿಗಿಲಾದ ಭಾಗ್ಯವಿಲ್ಲ. ಉತ್ತಮ ಆರೋಗ್ಯ ಹೊಂದಿದ್ದರೆ ನೆಮ್ಮದಿ ಜೀವನ ಸಾಗಿಸಬಹುದು. ಪ್ರತಿಯೊಬ್ಬರೂ ಕನಿಷ್ಟ 6 ತಿಂಗಳಿಗೊಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಎಲ್ಲ ನಾಗರಿಕರಂತೆ ವಿಚಾರಣಾಧೀನ ಕೈದಿಗಳು ಸಹ ಆರೋಗ್ಯ ಸೌಲಭ್ಯ ಪಡೆಯಬೇಕಿದೆ. ಅವರ ಆರೋಗ್ಯದ ಬಗ್ಗೆಯೂ ಮುತುವರ್ಜಿ ವಹಿಸಬೇಕಿದೆ. ಈ ನಿಟ್ಟಿನಲ್ಲಿ ವಿಚಾರಣಾಧೀನ ಕೈದಿಗಳಿಗಾಗಿಯೇ ಕಾರಾಗೃಹ ಆವರಣದಲ್ಲಿಯೇ ಆರೋಗ್ಯ ತಪಾಸಣಾಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಕೈಜೋಡಿಸಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆ, ವಕೀಲರ ಸಂಘ, ರೆಡ್ ಕ್ರಾಸ್ ಸೊಸೈಟಿಯನ್ನು ಅಭಿನಂದಿಸುವುದಾಗಿ ನ್ಯಾಯಾಧೀಶರು ನುಡಿದರು.
ಆರೋಗ್ಯ ತಪಾಸಣಾ ಶಿಬಿರದಲ್ಲಿ ಎಲ್ಲರನ್ನು ಪರೀಕ್ಷಿಸಲಾಗುತ್ತದೆ. ಹೃದ್ರೋಗ, ರಕ್ತದೊತ್ತಡ, ಮಧುಮೇಹದಿಂದ ಬಳಲುವವರಿಗೆ ಚಿಕಿತ್ಸೆಯನ್ನು ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ಮಾನಸಿಕ ಖಿನ್ನತೆಯಿಂದ ನರಳುವವರಿಗೆ ಸಹ ಮಾನಸಿಕ ತಜ್ಞರಿಂದ ಸಮಾಲೋಚನೆ, ಸಲಹೆಯಂತಹ ಚಿಕಿತ್ಸೆ ಸೌಲಭ್ಯ ಸಿಗಲಿದೆ. ಈ ಎಲ್ಲಾ ಆರೋಗ್ಯಪೂರಕ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಚಾಮರಾಜನಗರದ ವೈದ್ಯಕೀಯ ಸಂಸ್ಥೆಯ ಮನೋವೈದ್ಯರಾದ ಡಾ. ಸುಷ್ಮಾ ಮಾತನಾಡಿ ಮಾನಸಿಕ ಒತ್ತಡ, ಖಿನ್ನತೆ, ಆತಂಕ, ಭಯಭೀತಿಗೊಳಗಾಗುವವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ವಿಶೇಷವಾಗಿ ಚಿಕಿತ್ಸೆ ನೀಡಲಾಗುತ್ತದೆ. ಹೀಗಾಗಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರು ಕಾರಾಗೃಹದ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಚಿಕಿತ್ಸೆ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು. 
ಉತ್ತಮ ಆಲೋಚನೆ, ಚಿಂತನೆಯತ್ತ ಮನಸ್ಸನ್ನು ಹರಿಬಿಡಬೇಕು. ಸಮಾಜದಲ್ಲಿ ಭವಿಷ್ಯದಲ್ಲಿ ನಿಮ್ಮ ನಡವಳಿಕೆಯನ್ನು ಸಕಾರಾತ್ಮವಾಗಿ ಬದಲಾಯಿಸಿಕೊಂಡರೆ ಎಲ್ಲರೂ ನಿಮ್ಮನ್ನು ಒಪ್ಪಿಕೊಳ್ಳುತ್ತಾರೆ. ಒಳ್ಳೆಯತನ ತೋರಿ ಎಲ್ಲರ ಮನಸ್ಸನ್ನು ಗೆದ್ದು ಹೊಸ ಜೀವನ ರೂಪಿಸಿಕೊಳ್ಳುವತ್ತ ನಿಮ್ಮ ಯೋಚನಾ ಲಹರಿ ಇರಲಿ ಎಂದು ಸುಷ್ಮಾ ಅವರು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಶಾಂತಶ್ರೀ ಅವರು ಆರೋಗ್ಯವು ಮನುಷ್ಯನಿಗೆ ಅತಿಮುಖ್ಯ ಎಂಬುದನ್ನು ಅರಿತು ಕಾರಾಗೃಹದಲ್ಲಿ ಕೈದಿಗಳಿಗೆ ಆಗಿಂದಾಗ್ಗೆ ಆರೋಗ್ಯಪೂರಕ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಕಾರಾಗೃಹ ಅಧಿಕಾರಿ ಸಿಬ್ಬಂದಿಯವರಿಗೂ ಸಂಪೂರ್ಣ ಆರೋಗ್ಯ ತಪಾಸಣೆ ಮಾಡುವ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ. ಪ್ರತಿಯೊಬ್ಬರೂ ಶುಚಿತ್ವಕ್ಕೆ ಮಹತ್ವ ನೀಡಬೇಕು. ಆರೋಗ್ಯಪಾಲನೆಗೆ ಗಮನವಹಿಸಬೇಕು ಎಂದರು.  
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಸಿ.ಜಿ. ವಿಶಾಲಾಕ್ಷಿಮ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಡಿವೈಎಸ್‍ಪಿ ಟಿ. ಜಯಕುಮಾರ್,  ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಡಾ. ಸುಷ್ಮಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನಗರದಲ್ಲಿ ಗಮನಸೆಳೆದ ಡೆಂಗಿ ಜಾಗೃತಿ ಜಾಥಾ

ಚಾಮರಾಜನಗರ, ಜು. 12 - ಜನರನ್ನು ಕಾಡುವ ಡೆಂಗಿ ಜ್ವರ ಹಾಗೂ ಇದರ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಮುಂಜಾಗರೂಕತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ನಗರದಲ್ಲಿ ನಡೆಸಿದ ಜಾಥಾ ಜನರ ಗಮನಸೆಳೆಯಿತು.

ನಗರದ ಜಿಲ್ಲಾಡಳಿತ ಭವನದ ಆವರಣÀದಲ್ಲಿ ಮೊದಲಿಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಡೆಂಗಿ ವಿರೋಧಿ ಮಾಸಾಚರಣೆ ಹಿನ್ನೆಲೆಯಲ್ಲಿ ನಡೆದ ಜನಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿ ಚಾಲನೆ ಕೊಟ್ಟರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಉಪವಿಭಾಗಾಧಿಕಾರಿ ಫೌಜಿಯಾ ತರನುಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಜಾಗೃತಿ ಜಾಥಾಗೆ ಶುಭ ಹಾರೈಸಿದರು.
ಜಿಲ್ಲಾಡಳಿತ ಭವನದ ಆವರಣದಿಂದ ಹೊರಟ ಜಾಥಾದಲ್ಲಿ ಸರ್ಕಾರಿ ನರ್ಸಿಂಗ್ ಶಾಲೆ, ಮನೋನಿಧಿ ಹಾಗೂ ಜೆಎಸ್‍ಎಸ್ ನರ್ಸಿಂಗ್ ಶಾಲೆಗಳ ಶುಶ್ರೂಷಕ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಸಹ ಪಾಲ್ಗೊಂಡರು.
ಬಿ.ರಾಚಯ್ಯ ಜೋಡಿ ರಸ್ತೆ, ಜಗಜೀವನರಾಮ್ ನಗರ ಬಡಾವಣೆ, ನ್ಯಾಯಾಲಯ ರಸ್ತೆ, ಹೌಸಿಂಗ್ ಬೋರ್ಡ್ ಕಾಲೋನಿಗಳಲ್ಲಿ ಸಂಚರಿಸಿದ ಜಾಥಾದಲ್ಲಿ ‘ಸ್ವಚ್ಚತೆ ಕಾಪಾಡಿ ಡೆಂಗಿ ಹೋಗಲಾಡಿಸಿ’, ಶೇಖರಿಸಿದ ನೀರನ್ನು ಮುಚ್ಚಿಡಿ, ವಾರಕ್ಕೆ ಎರಡು ಬಾರಿ ನೀರು ಸಂಗ್ರಹಣಾ ತಾಣಗಳನ್ನು ಸ್ಚಚ್ಚಗೊಳಿಸಿ, ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಲು ಮುಂಜಾಗರೂಕತಾ ಕ್ರಮ ವಹಿಸಿ ಎಂಬಸಸ ಆರೋಗ್ಯ ಜಾಗೃತಿಯ ಭಿತ್ತಿ ಫಲಕಗಳನ್ನು ಪ್ರದರ್ಶಿಸಲಾಯಿತು.
ಅಂತಿಮವಾಗಿ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಡೆಂಗ್ಯೂ ವಿರೋಧಿ ಅರಿವು ಜಾಥಾ ಸಮಾವೇಶಗೊಂಡಿತು.
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಅನಿಲ್ ಕುಮಾರ್, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ರಾಜು, ಡಾ. ನಾಗರಾಜು, ಡಾ. ವಿಶ್ವೇಶ್ವರಯ್ಯ ಇತರರು ಭಾಗವಹಿಸಿದ್ದರು.


ಕಬ್ಬಿಣ ಪೈಪುಗಳ ಬಹಿರಂಗ ಹರಾಜು

ಚಾಮರಾಜನಗರ, ಜು. 12  ಯಳಂದೂರು ಪಟ್ಟಣ ಪಂಚಾಯಿತಿಯು ಬಳೆ ಪೇಟೆಯ ಸೇತುವೆ ಮೇಲೆ ಅಳವಡಿಸಿದ್ದ ಕುಡಿಯುವ ನೀರಿನ ಕಬ್ಬಿಣದ (ಕಾಸ್ಟ್ ಐರನ್) ಪೈಪುಗಳನ್ನು ತುರ್ತಾಗಿ ತೆರವುಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಪೈಪುಗಳನ್ನು ಸೇತುವೆ ಮೇಲೆ ಹೇಗೆ ಅಳವಡಿಸಲಾಗಿದೆಯೋ ಹಾಗೆಯೇ ಸದರಿ ಸ್ಥಳದಲ್ಲಿಯೇ ಜುಲೈ 16ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮಾಡಲಿದೆ.
ಹರಾಜು ಪ್ರಕ್ರಿಯೆ ಸಂಬಂಧ ಮಾಹಿತಿಗಾಗಿ ಪಟ್ಟಣ ಪಂಚಾಯಿತಿ ಕಾರ್ಯಾಲಯ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಕಬಿನಿ ನದಿಯಿಂದ ನೀರು : ಮುನ್ನೆಚ್ಚರಿಕೆ ವಹಿಸಲು ಸೂಚನೆ
ಚಾಮರಾಜನಗರ, ಜು. 12 - ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಟ ಮಟ್ಟ ತಲುಪುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚು ನೀರು ಬಿಡುವ ಸಂಭವವಿರುವ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ನದಿ ತಗ್ಗು ಪ್ರದೇಶದಲ್ಲಿರುವ ಹಾಗೂ ದಂಡೆಗಳಲ್ಲಿ ವಾಸಿಸುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚಿಸಿದ್ದಾರೆ.
ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚು ನೀರು ಬಿಡುವ ಸಂಭವವಿರುವುದಾಗಿ ಹೆಚ್.ಡಿ. ಕೋಟೆಯ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಜಿಲ್ಲಾ ವ್ಯಾಪ್ತಿಯ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ದಂಡೆಗಳಲ್ಲಿ ವಾಸಿಸುತ್ತಿರುವ ಜನರು ಅವರ ಆಸ್ತಿಪಾಸ್ತಿ, ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮನೆ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಚಾಮರಾಜನಗರ, ಜು. 12 - ಗ್ರಾಮೀಣ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಅರ್ಜಿ ಸ್ವೀಕರಿಸುವ ಅವಧಿಯನ್ನು ಸೆಪ್ಟೆಂಬರ್ 16ರವರೆಗೆ ವಿಸ್ತರಿಸಲಾಗಿದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ವಾಸದ ಮನೆಗಳನ್ನು ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 94ಸಿ ಮತ್ತು 94ಸಿಸಿ ಅಡಿಯಲ್ಲಿ ಸಕ್ರಮಗೊಳಿಸಲು ತಿದ್ದುಪಡಿ ತಂದು ಅರ್ಜಿ ಸ್ವೀಕಾರಕ್ಕೆ ಕಾಲಾವಕಾಶ ನೀಡಲಾಗಿದೆ. ನಾಗರಿಕರು ಸಕ್ರಮಗೊಳಿಸಿಕೊಳ್ಳಲು ಅರ್ಜಿ ಸಲ್ಲಿಸಬಹುದೆಂದು ಗುಂಡ್ಲುಪೇಟೆ ತಾಲೂಕು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಸ್ತಿ, ಇತರೆ ಕ್ರೀಡಾಪಟುಗಳಿಗೆ ಮಾಸಾಶನ ಸೌಲಭ್ಯ
ಚಾಮರಾಜನಗರ, ಜು. 12 - ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆರ್ಥಿಕವಾಗಿ ಸÀಂಕಷ್ಟದಲ್ಲಿರುವ ಕುಸ್ತಿ ಹಾಗೂ ಇತರೆ ಕ್ರೀಡಾಪಟುಗಳಿಗೆ ಮಾಸಾಶನ ನೀಡಲಿದೆ.
ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ವಿಜೇತರಾದದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.ಸಂ. 08226-224932 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.



ಹೈಬ್ರಿಡ್ ತರಕಾರಿ ಬೆಳೆಗೆ ಸಹಾಯಧನ

ಚಾಮರಾಜನಗರ, ಜು. 12 - ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೈಬ್ರೀಡ್ ತರಕಾರಿ ಪ್ರದೇಶ ವಿಸ್ತರಣೆ (ಟೊಮೆಟೊ, ಮೆಣಸಿನಕಾಯಿ, ಬದನೆ, ಕ್ಯಾರೆಟ್, ಹೂಕೋಸು, ಎಲೆಕೋಸು ಇತ್ಯಾದಿ ಹೈಬ್ರೀಡ್ ತರಕಾರಿಗಳು) ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಗರಿಷ್ಟ 1 ಹೆಕ್ಟೇರ್ ಪ್ರದೇಶಕ್ಕೆ 20 ಸಾವಿರ ರೂ.ನಷ್ಟು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಹೈಬ್ರೀಡ್ ಬೆಳೆ ನಾಟಿ ಮಾಡಿರುವ ರೈತರು ಅರ್ಜಿ ನಮೂನೆ, ಭಾವಚಿತ್ರ, ಪಹಣಿ, ಚೆಕ್‍ಬಂದಿ, ಕಂದಾಯ ಇಲಾಖೆಯ ಗಣಕೀಕೃತ ಬೆಳೆ ದೃಢೀಕರಣ, ಎಲೆಕ್ಷನ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ತರಕಾರಿ ಸಸಿ, ಬೀಜ ಖರೀದಿಸುವ ಬಿಲ್ಲು, ಫಲಾನುಭವಿಯೊಂದಿಗೆ ತಾಕಿನ ಫೋಟೋ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ಆಯÁ ತಾಲೂಕಿನ ತೋಟಗಾರಿಕೆ ಕಚೇರಿಗೆ ಜುಲೈ 25ರೊಳಗೆ ಸಲ್ಲಿಸಿ ಹೆಸರು ನೊಂದಾಯಿಸಿಕೊಂಡು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಜು. 12- 2017-18ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.60 ಮೇಲ್ಪಟ್ಟು ಅಂಕಗಳನ್ನು ಪಡೆದ ಚಾಮರಾಜನಗರ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯದಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31 ಆಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗಾಗಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ, ಜು. 12- ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35 ಸಾವಿರ ರೂ. ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್ ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿಟಿಪಿ ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ.
ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿಗಳನ್ನು ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತ ಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು, ಹಸ್ತ ಪ್ರತಿಗಳನ್ನು ಹಿಂದಿರುತಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳೂ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆಸಿ ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಜುಲೈ 21ರ ಒಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು, ವೆಬ್ ಸೈಟ್ ತಿತಿತಿ.ಞಚಿಟಿಟಿಚಿಜಚಿಠಿushಚಿಞಚಿಠಿಡಿಚಿಜhiಞಚಿಡಿಚಿ@gmಚಿiಟ.ಛಿom ದೂರವಾಣಿ ಸಂಖ್ಯೆ 080-22484516, 22017704 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



Wednesday, 11 July 2018

(20-06-2018)ಹಾಸ್ಟೆಲ್‍ಗಳ ಸುಧಾರಣೆಗೆ ಆದ್ಯತೆ : ಸಚಿವರಾದ ಸಿ. ಪುಟ್ಟರಂಗಶೆಟ್ಟಿ ನುಡಿ


ಹಾಸ್ಟೆಲ್‍ಗಳ ಸುಧಾರಣೆಗೆ ಆದ್ಯತೆ : ಸಚಿವರಾದ ಸಿ. ಪುಟ್ಟರಂಗಶೆಟ್ಟಿ ನುಡಿ 

ಚಾಮರಾಜನಗರ, ಜೂ. 20 :- ರಾಜ್ಯದಲ್ಲಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ವಹಣೆಯ ಹಾಸ್ಟೆಲ್‍ಗಳನ್ನು ಸುಧಾರಿಸಲು ಆದ್ಯ ಗಮನ ನೀಡಲಾಗುವುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳಿಗೆ ಆಯ್ಕೆಯಾಗಿರುವ ಅಡುಗೆಯವರು ಹಾಗೂ ಸಹಾಯಕರ ಹುದ್ದೆಗಳ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿನಿಲಯಗಳಲ್ಲಿ ಬಡವರ್ಗದವರೇ ಹೆಚ್ಚಾಗಿ ಆಶ್ರಯಿಸುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟ. ಇನ್ನಿತರ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕಾಗುತ್ತದೆ. ಹೀಗಾಗಿ ಯಾವುದೇ ಕೊರತೆಯಾಗದಂತೆ ವಿದ್ಯಾರ್ಥಿನಿಲಯಗಳಿಗೆ ಸೌಕರ್ಯಗಳು ತಲುಪುತ್ತಿದೆಯೇ ಎಂಬ ಬಗ್ಗೆ ತಾವೇ ಖುದ್ದು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸುವೆ ಎಂದು ಸಚಿವರು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 1547 ಅಡುಗೆಯವರು, 2470 ಅಡುಗೆ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಪ್ರಕ್ರಿಯೆ ನಡೆದಿದೆ. 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಪ್ರಕ್ರಿಯೆ ಪೂರ್ಣಗೊಂಡಿದೆ. ಚಾಮರಾಜನಗರ ಜಿಲ್ಲೆಯಲ್ಲಿ 19 ಅಡುಗೆಯವರು ಹಾಗೂ 67 ಅಡುಗೆ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದರು.
ಹಾಸ್ಟೆಲ್ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಇದೀಗ ಕಾಯಂ ಸಿಬ್ಬಂದಿಯನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಂಡಿರುವುದರಿಂದ ಹಾಸ್ಟೆಲ್‍ಗಳಲ್ಲಿನ ಸೌಲಭ್ಯಗಳು ಸುಧಾರಣೆಯಾಗಲಿವೆ ಎಂಬ ವಿಶ್ವಾಸ ಹೊಂದಿರುವುದಾಗಿ ಸಚಿವರು ನುಡಿದರು.
ಹಾಸ್ಟೆಲ್‍ಗಳಿಗೆ ನೇಮಕವಾಗುವ ಸಿಬ್ಬಂದಿ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಬಡ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗಿ ಅನುಕೂಲ ಕಲ್ಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದರೆ ಶ್ರೇಯಸ್ಸು ಲಭಿಸಲಿದೆ. ಹೀಗಾಗಿ ಹೊಸದಾಗಿ ನೇಮಕವಾಗಿರುವ ಅಡುಗೆಯವರು, ಸಹಾಯಕರು ಅವರ ಹುದ್ದೆಯನ್ನು ಶ್ರದ್ಧೆ ಪ್ರೀತಿಯಿಂದ ನಿರ್ವಹಿಸಬೇಕು. ಗುಣಮಟ್ಟದ ಸೌಲಭ್ಯಗಳನ್ನು ತಲುಪಿಸುವಲ್ಲಿ ಶ್ರಮಿಸಬೇಕು ಎಂದು ಸಚಿವರು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮಾತನಾಡಿ ಅಡುಗೆಯವರು ಹಾಗೂ ಅಡುಗೆ ಸಹಾಯಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಿಂದಲೇ ನೇಮಕಾತಿ ಪತ್ರ ಸ್ವೀಕರಿಸುವ ಸೌಭಾಗ್ಯ ಬಂದಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳು ವಿದ್ಯಾರ್ಥಿನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಪೋಷಕರಂತೆ ಕರ್ತವ್ಯ ನಿರ್ವಹಿಸಬೇಕು. ಪೌಷ್ಠಿಕ ಅಂಶಗಳನ್ನು ಒಳಗೊಂಡ ಊಟ ಉಪಚಾರ ಕೆಲಸವನ್ನು ಉತ್ತಮವಾಗಿ ನಿರ್ವಹಿಸುವ ಜತೆಗೆ  ಶೈಕ್ಷಣಿಕ ಫಲಿತಾಂಶ ಸುಧಾರಣೆಗೂ ಕಾರಣರಾಗಬೇಕು ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾ ಪಂಚಾಯತ್ ಉಪಕಾಶರ್ಯದರ್ಶಿ ಮುನಿರಾಜಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುವರ್ಣಾವತಿ ನಾಲೆ ಕಾಮಗಾರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಿಂದ ಚಾಲನೆ

ಚಾಮರಾಜನಗರ, ಜೂ. 20 :- ಚಾಮರಾಜನಗರ ತಾಲೂಕಿನ ಪ್ರಮುಖ ಸುವರ್ಣಾವತಿಯ ಎಡದಂಡೆ ಹಾಗೂ ಬಲದಂಡೆ ನಾಲೆಯನ್ನು 3.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಕಾಮಗಾರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಚಾಲನೆ ನೀಡಿದರು.
ತಾಲೂಕಿನ ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿ ಕಚೇರಿಯ ಬಳಿ ಹಾದುಹೋಗಲಿರುವ ಸುವರ್ಣಾವತಿ ಎಡದಂಡೆ ನಾಲೆ ಹಾಗೂ ಬಲದಂಡೆ ನಾಲೆ ಕಾಮಗಾರಿಗೆ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಇದೇ ವೇಳೆ ಮಾತನಾಡಿದ ಸಚಿವರು ಸುವರ್ಣಾವತಿ ಎಡದಂಡೆ ನಾಲೆ 0.0 ಕಿ.ಮೀ. ಯಿಂದ 4.855 ಕಿ.ಮೀ.ವರೆಗೆ ಮತ್ತು ಬಲದಂಡೆ ನಾಲೆ ಸರಪಳಿಯು 14.10 ಕಿ.ಮೀ. ನಿಂದ ಸರಪಳಿ 18.550 ಕಿ.ಮೀ. ವರೆಗೆ ನಿರ್ಮಾಣವಾಗಲಿದೆ. ಸೈಡ್ ಹಾಗೂ ಬೆಡ್‍ಗಳಿಗೆ ಸಿಸಿ ಲೈನಿಂಗ್ ತೂಬು, ಸೋಪಾನ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತದೆ ಎಂದರು.
ಕಾಮಗಾರಿಯನ್ನು 5 ತಿಂಗಳೊಳಗೆ ಪೂರ್ಣಗೊಳಿಸಲು ಗಡುವು ನಿಗದಿ ಮಾಡಲಾಗಿದೆ. ಈ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ನಡೆಸಬೇಕೆಂದು ಸೂಚಿಸಲಾಗಿದೆ. ಪ್ರಸ್ತುತ ಕಾಮಗಾರಿ ಪೂರ್ಣಗೊಂಡರೆ 17 ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.
ಈಗಾಗಲೇ 20 ಕೋಟಿ ರೂ. ವೆಚ್ಚದಲ್ಲಿ ನಾಲೆ ಕಾಮಗಾರಿಗಳು ತಮ್ಮ ಕ್ಷೇತ್ರದಲ್ಲಿ ನಡೆದಿವೆ. ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಯಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ನೆರವು ಕಲ್ಪಿಸಲಾಗಿದೆ. ನೀರು ಬಳಕೆದಾರರ ಸಹಕಾರ ಸಂಘಗಳು ನಾಲೆ ನಿರ್ಮಾಣದಿಂದ ಲಭಿಸುವ ನೀರಾವರಿ ಸೌಲಭ್ಯಗಳ ಬಳಕೆಗೆ ಸಹಕರಿಸಬೇಕೆಂದು ಸಚಿವರು ತಿಳಿಸಿದರು.
ಸುವರ್ಣಾವತಿ ಉದ್ಯಾನವನ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತದೆ. ಪ್ರವಾಸೋದ್ಯಮ ಸ್ಥಳಗಳನ್ನಾಗಿ ಆಕರ್ಷಿಸುವ ನಿಟ್ಟಿನಲ್ಲಿ ಇದರ ಪ್ರಗತಿಗೆ ಕಾರ್ಯೋನ್ಮುಖರಾಗಲು ಚಿಂತನೆ ನಡೆಸಲಾಗುವುದು. ಪ್ರವಾಸೋದ್ಯಮ ಇಲಾಖೆಯೊಂದಿಗೆ ಚರ್ಚಿಸಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಗಮನ ಕೊಡಲಾಗುವುದು ಎಂದು ಸಚಿವರು ನುಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಮರಿಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜೇಂದ್ರ ಪ್ರಸಾದ್, ಸಹಾಯಕ ಎಂಜಿನಿಯರ್ ಮಂಜುನಾಥ್, ಮಹೇಶ್, ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಗರದಲ್ಲಿ ಯೋಗ ಜಾಗೃತಿಗೆ ನಡೆದ ಜಾಥಾ, ಉಪನ್ಯಾಸ

ಚಾಮರಾಜನಗರ, ಜೂ. 20 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ದಿಸೆಯಲ್ಲಿ ಇಂದು ಜಾಥಾ ಹಾಗೂ ಉಪನ್ಯಾಸ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಶಾಲಾಕ್ಷಿ ಅವರು ಯೋಗ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ನ್ಯಾಯಾಲಯ ಆವರಣದಿಂದ ಜಾಥಾ ಹೊರಟು ಜಿಲ್ಲಾಡಳಿತ ಭವನದ ಆವರಣದಲ್ಲಿ ಸಮಾವೇಶಗೊಂಡಿತು.
ತದನಂತರ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಯೋಗ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಡಾ. ಸುಶ್ಮಿತ ಯೋಗದ ಮಹತ್ವ ಕುರಿತು ತಿಳಿಸಿಕೊಟ್ಟರು.
ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದೇ ಯೋಗ. ಜೀವನ ಶೈಲಿಯನ್ನು ಬದಲಿಸಿಕೊಂಡು ದೀರ್ಘ ಕಾಲ ಆರೋಗ್ಯದಿಂದ ಇರಲು ಯೋಗ ಅಭ್ಯಾಸ ಮಾಡುವುದು ಒಳಿತು ಎಂದು ಸುಶ್ಮಿತ ಸಲಹೆ ಮಾಡಿದರು.
ಅಹಾರ ಸೇವನೆ ಉಸಿರಾಟ ಪ್ರಕ್ರಿಯೆ ಬಗ್ಗೆಯೂ ಕಾಳಜಿ ವಹಿಸಬೇಕು. ದಿನನಿತ್ಯದ ಊಟ ಉಪಾಹಾರವನ್ಜು ಚೆನ್ನಾಗಿ ಅಗಿದು ಸೇವಿಸಬೇಕು. ಇದರಿಂದ ಜೀರ್ಣಕ್ರಿಯೆ ಉತ್ತಮವಾಗಲಿದೆ. ಪ್ರತಿದಿನ ಕನಿಷ್ಟ 3 ಲೀ. ನೀರು ಸೇವಿಸಬೇಕು. ಪ್ರತಿವ್ಯಕ್ತಿ ದಿನವೊಂದಕ್ಕೆ 300 ಗ್ರಾಂಗಳಷ್ಟು ಹಣ್ಣನ್ನು ತಿನ್ನಬೇಕು. ಪೌಷ್ಠಿಕ ಆಹಾರ ಸೇವನೆ ನಿತ್ಯ ಯೋಗ ಉತ್ತಮ ಆರೊಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಜಿಲ್ಲಾ ಅಯುಷ್ ಅಧಿಕಾರಿ ಡಾ. ಬಿ. ಪುನೀತ್‍ಬಾಬು, ಡಾ. ಶ್ರೀನಿವಾಸ್, ತೋಟದ್ ಮಲ್ಲಣ್ಣ, ಶಿಕ್ಷಣ ಇಲಾಖೆ ಅಧಿಕಾರಿ ತಮ್ಮಯ್ಯ, ದೈಹಿಕ ಶಿಕ್ಷಣ ಅಧಿಕಾರಿ ಫಿಲಿಪ್, ಧರ್ಮಸ್ಥಳ ಮಂಜುನಾಥ ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ವೈದ್ಯರಾದ ಡಾ. ಎಲ್. ಮಾನಸ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದರು.


ಮೃತ ಅಪರಿಚಿತ ವ್ಯಕ್ರಿಯ ಪತ್ತೆಗೆ ಮನವಿ

ಚಾಮರಾಜನಗರ, ಜೂ. 20- ನಗರದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಸದರಿ ವ್ಯಕ್ತಿ ಮೃತ ಪಟ್ಟಿದ್ದು ಈತರ ವಾರಸುದಾರರ ಪತ್ತೆಗೆ ಮಾಹಿತಿ ನೀಡುವಂತೆ ಕೋರಲಾಗಿ.
40 ರಿಂದÀ 45 ವರ್ಷ ವಯಸ್ಸಿನ ಮೃತ ವ್ಯಕ್ತಿಯು ಕೋಲು ಮುಖ, ಎಣ್ಣೆಗೆಂಪು ಬಣ್ಣ, ಕೃಶ ಶರೀರ, ಮೀಸೆ ಗಡ್ಡ ಬಿಟ್ಟಿರುತ್ತಾನೆ, 5.6 ಅಡಿ ಎತ್ತರ, ಕಪ್ಪು ತಲೆಗೂದಲು ಇರುತ್ತದೆ. ಎಡ ಕಾಲು, ಕೈಗೆ ಗ್ರಾಂಗ್ರಿನ್ ಆಗಿ ಆಸ್ಪತ್ರೆಯ ಬ್ಯಾಂಡೇಜ್ ಸುತ್ತಿರುತ್ತದೆ.
ಮೃತನ ವಾರಸುದಾರರು ಇದ್ದಲ್ಲಿ ಚಾಮರಾಜನಗರದ ಪಟ್ಟಣ ಪೊಲೀಸ್ ಠಾಣೆ ದೂ.ಸಂ. 08226-222047ಗೆ ಮಾಹಿತಿ ನೀಡುವಂತೆ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೂ. 21ರಂದು ನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆÀ

ಚಾಮರಾಜನಗರ, ಜೂ. 20 - ಭಾರತ ಸರ್ಕಾರದ ಆಯುಷ್ ಮಂತ್ರಾಲಯ, ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಸಹಯೋಗದೊಂದಿಗೆ 4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21ರಂದು ಬೆಳಿಗ್ಗೆ 6.30 ರಿಂದ 9 ಗಂಟೆಯವರೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ತಾ.ಪಂ. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅವರುಗಳು ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.


ಜೂ. 21ರಂದು ನಗರದಲ್ಲಿ ಯೋಗ ಪ್ರಾತ್ಯಕ್ಷತೆ ಕೇಂದ್ರ ಪುರಸ್ಕøತ ಯೋಜನೆಗಳ ಕಾರ್ಯಕ್ರಮ 

ಚಾಮರಾಜನಗರ, ಜೂ. 20 - ನೆಹರು ಯುವ ಕೇಂದ್ರವು ಜೆಎಸ್‍ಎಸ್ ಮಹಿಳಾ ಕಾಲೇಜು, ಭಾರತ್ ಸ್ವಾಭಿಮಾನ್ ಟ್ರಸ್ಟ್, ಪತಂಜಲಿ ಯೋಗ ಸಮಿತಿ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮದಲ್ಲಿ ಯೋಗ ಪ್ರಾತ್ಯಕ್ಷತೆ ಮತ್ತು ಕೇಂದ್ರ ಪುರಸ್ಕøತ ಯೋಜನೆಗಳ ಕುರಿತು ಮಾಹಿತಿ ನೀಡುವ ಕಾರ್ಯಕ್ರಮವನ್ನು ಜೂನ್ 21ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜೆಎಸ್‍ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಧ್ವನಿ ಮಹಿಳಾ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಲೀನಾ ಕುಮಾರಿ ಕಾರ್ಯಕ್ರಮ ಉದ್ಘಾಟಿಸುವರು. ಜೆಎಸ್‍ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಎ.ಜಿ. ಶಿವಕುಮಾರ್ ಅಧ್ಯಕ್ಷತೆ ವಹಿಸುವರು.
ಜೆಎಸ್‍ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ. ಸ್ವಾಮಿ, ಪತಂಜಲಿ ಯೋಗ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ವೈ.ಆರ್, ಮಹೇಶ್, ಹರಿದ್ವಾರದ ರಾಜ್ಯ ಮಹಿಳಾ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರಾದ ಸುಜಾತಾ ಮಾರ್ಲ, ಉಪಾಧ್ಯಕ್ಷರಾದ ರೂಪ ಆರ್. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.


ಜೂ. 21ರಂದು ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆ 

ಚಾಮರಾಜನಗರ, ಜೂ. 20 - ಜಿಲ್ಲಾಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 21ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಜಿಲ್ಲೆಯ ಸಂಘಸಂಸ್ಥೆಯ ಪದಾಧಿಕಾರಿಗಳು, ಸಮಾಜದ ಮುಖಂಡರು, ನಾಗರಿಕರು ಸಭೆಗೆ ಹಾಜರಾಗಿ ಕಾರ್ಯಕ್ರಮ ಆಯೋಜನೆ ಸಂಬಂಧ ಸಲಹೆ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಅಂಬಿಗರ ಚೌಡಯ್ಯ, ಉಪ್ಪಾರ ಅಭಿವೃದ್ಧಿ ನಿಗಮಗಳಿಂದ ಶೈಕ್ಷಣಿಕ ಸಾಲ : ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 20 - ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ಸಿಇಟಿ ಮೂಲಕ ಪ್ರವೇಶ ಪಡೆದು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಉಪ್ಪಾರ, ಇದರ ಉಪಜಾತಿ ಹಾಗೂ ಬೆಸ್ತ, ಕಬ್ಬಲಿಗ, ಕೋಲಿ, ಗಂಗಾಮತ, ಮೊಗವೀರ, ಇದರ ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
2018-19ನೇ ಸಾಲಿಗೆ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ (ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ ಪ್ರವರ್ಗ 1ರ ಕ್ರಮಸಂಖ್ಯೆ 53 ಎ ಯಿಂದ ವಿ ವರೆಗಿನ ಜಾತಿಗಳಿಗೆ) ವಿದ್ಯಾರ್ಥಿಗಳಿಗೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು ಶೈಕ್ಷಣಿಕ ಸಾಲ ನೀಡಲಿದೆ.
ಬೆಸ್ತ, ಕಬ್ಬಲಿಗ, ಕೋಲಿ, ಗಂಗಾಮತ. ಮೊಗವೀರ ಮತ್ತು ಇದರ ಉಪಜಾತಿಗಳಿಗೆ (ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ ಪ್ರವರ್ಗ 1ರ ಕ್ರಮಸಂಖ್ಯೆ 6 ಎ ಯಿಂದ ಎಕೆ ವರೆಗಿನ ಜಾತಿಗಳಿಗೆ) ಸೇರಿದ ವಿದ್ಯಾರ್ಥಿಗಳಿಗೆ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ವತಿಯಿಂದ ಶೈಕ್ಷಣಕ ಸಾಲ ಮಂಜೂರು ಮಾಡಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕೋರ್ಸಿನ ವಾಸ್ತವಿಕ ವೆಚ್ಚ ಅಥವಾ ವಾರ್ಷಿಕ ಗರಿಷ್ಟ 1 ಲಕ್ಷ ರೂ.ಗಳಂತೆ ಶೇ.7ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.
ವಿದ್ಯಾರ್ಥಿಗಳು ಸಿಇಟಿ ಅಥವಾ ಮೆರಿಟ್ ಆಧಾರದ ಮೇಲೆ ಸೀಟು ಪಡೆದಿರಬೇಕು. ಬಿಇ, ಎಂಬಿಬಿಎಸ್, ಬಿಯುಎಂಎಸ್, ಬಿಡಿಎಸ್, ಬಿಎಎಂಎಸ್, ಬಿಎಚ್‍ಎಂಎಸ್, ಎಂಬಿಎ, ಎಂಟೆಕ್, ಎಂಇ, ಎಂಡಿ, ಪಿಎಚ್‍ಡಿ, ಬಿಸಿಎ, ಎಂಸಿಎ, ಎಂಎಸ್ ಅಗ್ರಿಕಲ್ಚರ್, ಬಿಎಸ್ಸಿ ನರ್ಸಿಂಗ್, ಬಿಫಾರಂ, ಎಂ ಫಾರಂ, ಬಿಎಸ್ಸಿ ಪ್ಯಾರಾಮೆಡಿಕಲ್, ಬಿಎಸ್ಸಿ ಬಯೋಟೆಕ್ನಾಲಜಿ, ಬಿಟೆಕ್, ಬಿಪಿಟಿ, ಬಿಬಿಎಸ್ಸಿ, ಎಂಬಿಎಸ್ಸಿ, ಬಿಎನ್‍ಎಂ, ಬಿಎಚ್‍ಎಂ, ಎಂಡಿಎಸ್, ಎಂಎಸ್‍ಡಬ್ಲ್ಯೂ, ಎಲ್‍ಎಲ್‍ಎಂ, ಎಂಎಫ್‍ಎ, ಎಂಎಸ್ಸಿ ಬಯೋಟೆಕ್ನಾಲಜಿ, ಎಂಎಸ್‍ಸಿ ಎಜಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಕುಟುಂಬದ ವಾರ್ಷಿಕ ವರಮಾನ 3.5 ಲಕ್ಷ ರೂ. ಮಿತಿಯಲ್ಲಿರಬೇಕು. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ (ಕೊಠಡಿ ಸಂ. 305) ಗೆ ಜುಲೈ 31ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ದೂ. ಸಂಖ್ಯೆ 08226-223587 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿವಿಧ ಸಾಲಸೌಲಭ್ಯಕ್ಕೆ ವಿಶ್ವಕರ್ಮ ಸಮುದಾಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ 

ಚಾಮರಾಜನಗರ, ಜೂ. 20 - ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಯೋಜನೆಯಡಿ ಪಂಚವೃತ್ತಿ ಅಭಿವೃದ್ಧಿಗೆ ಆರ್ಥಿಕ ನೆರವು ಸಿಗಲಿದೆ. ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು ಶೈಕ್ಷಣಿಕ ಸಾಲ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರ ಮೈಕ್ರೋ ಕ್ರೆಡಿಟ್ ಸಾಲ, ಕಮ್ಮಾರಿಕೆ, ಅಕ್ಕಸಾಲಿ, ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆಯಡಿ ಸಾಲಸೌಲಭ್ಯ ಲಭಿಸಲಿದೆ.
ಎನ್ ಬಿ ಸಿಎಫ್ ಡಿಸಿ ಯೋಜನೆಯಡಿ ಕೃಷಿ, ಸಣ್ಣ ವ್ಯಾಪಾರ, ಸೇವೆ, ಸಾರಿಗೆ, ಶೈಕ್ಷಣಿಕ ಸಾಲ, (ಭಾರತ ಹಾಗೂ ವಿದೇಶಗಳಲ್ಲಿ) ನ್ಯೂ ಸ್ವರ್ಣಿಮಾ (ಮಹಿಳಾ ಯೋಜನೆ), ಶಿಲ್ಪಸಂಪದ, ಸಕ್ಷಮ ಸಾಲ, ಮೈಕ್ರೋ ಫೈನಾನ್ಸ್, ಕೃಷಿ ಸಂಪದ, ಮಹಿಳಾ ಸಮೃದ್ಧಿ ಯೋಜನೆ (ಮಹಿಳಾ ಸ್ವಸಹಾಯ ಗುಂಪುಗಳಿಗೆ ಹಾಗೂ ವೈಯಕ್ತಿಕ ಸಾಲ) ಸಾಲಸೌಲಭ್ಯ ಪಡೆಯಬಹುದು.
ಅರ್ಜಿದಾರರು 18 ರಿಂದ 55ರ ವಯೋಮಿತಿಯೊಳಗಿರಬೇಕು. ಶೈಕ್ಷಣಿಕ ಸಾಲಕ್ಕೆ 18 ರಿಂದ 32ರ ವಯೋಮಿತಿಯೊಳಗಿರಬೇಕು. ರಾಜ್ಯ ಸರ್ಕಾರದ ಯೋಜನೆ ಸಾಲ ಪಡೆಯುವವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಾಗಿದ್ದಲ್ಲಿ 40 ಸಾವಿರಕ್ಕಿಂತ ಹಾಗೂ ಪಟ್ಟಣ ಪ್ರದೇಶದವರಾಗಿದ್ದಲ್ಲಿ 55 ಸಾವಿರಕ್ಕಿಂತ ಕಡಿಮೆ ಇರಬೇಕು.
ಎನ್‍ಬಿಸಿ, ಎಫ್‍ಡಿಸಿ ಯೋಜನೆಯಡಿ ಸಾಲ ಪಡೆಯುವವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಾಗಿದ್ದಲ್ಲಿ 98 ಸಾವಿರಕ್ಕಿಂತ ಹಾಗೂ ಪಟ್ಟಣ ಪ್ರದೇಶದವರಾಗಿದ್ದಲ್ಲಿ 3 ಲಕ್ಷ ರೂ.ಗಳಿಗಿತ ಕಡಿಮೆ ಇರಬೇಕು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ (ಕೊ.ಸಂ. 305) ಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿ ಜುಲೈ 28ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ಸಂಖ್ಯೆ 08226-223587 ಆಯಾ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರ ಕಚೇರಿ, ಕೇಂದ್ರ ಕಚೇರಿ ಅಥವಾ ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಞvಛಿಜಛಿಟಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ

ಚಾಮರಾಜನಗರ, ಜೂ. 20 - ಜಿಲ್ಲೆಯ ಎಲ್ಲ ತಾಲೂಕುಗಳ 12 ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯು ಜೂನ್ 21 ರಿಂದ 28ರವರೆಗೆ ನಡೆಯಲಿದ್ದು ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ತಾಲೂಕಿನ 6, ಗುಂಡ್ಲುಪೇಟೆ ತಾಲೂಕಿನ 3, ಯಳಂದೂರು, ಹನೂರು, ಕೊಳ್ಳೇಗಾಲ ತಾಲೂಕು ವ್ಯಾಪ್ತಿಯ ತಲಾ ಒಂದು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯವು ಶಾಂತಿ ಸುವ್ಯವಸ್ಥೆಯಿಂದ ನಡೆಯಬೇಕೆಂಬ ಉದ್ದೇಶದಿಂದ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಲಾಗಿದೆ.

ನಿಷೇದಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ ವರ್ಗಕ್ಕೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ಕೆ ಓ ಎಸ್ ಪೂರಕ ಪರೀಕ್ಷೆ : ನಿಷೇದಾಜ್ಞೆ

ಚಾಮರಾಜನಗರ, ಜೂ. 20  ಕರ್ನಾಟಕ ಮುಕ್ತ ಶಾಲೆ (ಕೆಓಎಸ್) ಪೂರಕ ಪರೀಕ್ಷೆಗಳು ಚಾಮರಾಜನಗರ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಜೂನ್ 21 ರಿಂದ 30ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಯಬೇಕೆಂಬ ಉದ್ದೇಶದಿಂದ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರದÀ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಮಧ್ಯಾಹ್ನ 1 ರಿಂದ ಸಂಜೆ 5.30 ಗಂಟೆಯವರೆಗೆ ಮುಚ್ಚುವಂತೆಯೂ ಆದೇಶಿಸಲಾಗಿದೆ.
ನಿಷೇದಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ ವರ್ಗಕ್ಕೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

(19-06-2018)ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಚಿವರ ಕಟ್ಟುನಿಟ್ಟಿನ ಸೂಚನೆ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಚಿವರ ಕಟ್ಟುನಿಟ್ಟಿನ ಸೂಚನೆ   

ಚಾಮರಾಜನಗರ, ಜೂ. 19 - ನಗರದಲ್ಲಿ ಕೈಗೊಂಡಿರುವ ಎಲ್ಲ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಹಿಂದುಳದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೆರಿ ಸಭಾಂಗಣದಲ್ಲಿಂದು ಚಾಮರಾಜನಗರ, ಪಟ್ಟಣ ವ್ಯಾಪ್ತಿಯ ರಸ್ತೆ ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಯ ವಿಶೇಷ ಅನುದಾನ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಟ್ಟಣ ವ್ಯಾಪ್ತಿಯಲ್ಲಿ ಹಾದುಹೋಗಿರುವ ಹೆದ್ದಾರಿ ವಿಸ್ತರಣೆ ಹಾಗೂ ಪಟ್ಟಣದ ವಿವಿಧೆಡೆ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಗಳು ಚುರುಕುಗೊಳ್ಳಬೇಕು. ಈಗಾಗಲೇ ಕಾಮಗಾರಿ ಪೂರ್ಣವಾಗಲು ಸಾಕಷ್ಟು ವಿಳಂಬವಾಗಿದೆ. ಜನರು ಮತ್ತು ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಹೀಗಾಗಿ ಇನ್ನು ವಿಳಂಬಕ್ಕೆ ಅವಕಾಶವಾಗದಂತೆ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿ¸ಬೇಕು ಎಂದು ಸಚಿವರು ತಾಕೀತು ಮಾಡಿದರು.
ಚಿಕ್ಕಂಗಡಿ ಬೀದಿ, ರಥದ ಬೀದಿ ಸೇರಿದಂತೆ ಎಲ್ಲಾ ಅಪೂರ್ಣಗೊಂಡಿರುವ gಸ್ತೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಚಾಮರಾಜೇಶ್ವರ ದೇವಾಲಯದ ಸುತ್ತಮುತ್ತಲ ಬಳಿ ಕೈಗೊಂಡಿರುವ ಕೆಲಸವು ಅದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.
ನಗರದ ಬಿ. ರಾಚಯ್ಯ ಜೋಡಿ ರಸ್ತೆ ಕಾಮಗಾರಿಯು ಸಾಕಷ್ಟು ಸಮಯದಿಂದ ನಡೆಯುತ್ತಿದೆ. ಈ ಕಾಮಗಾರಿಯ ವೇಗ ಹೆಚ್ಚಬೇಕು. ಈಗಾಗಲೇ ಒಂದು ಬದಿಯಲ್ಲಿ ರಸ್ತೆ ಕಾಮಗಾರಿ ನಿರ್ವಹಣೆಯಾಗುತ್ತಿದೆ. ಇದನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಅಡಚಣೆಯಾಗದಂತೆ ಮತ್ತೊಂದು ಬದಿಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಸಚಿವರು ತಿಳಿಸಿದರು.
ನಗರದ ತರಕಾರಿ ಮಾರುಕಟ್ಟೆಯನ್ನು ಹೊಸದಾಗಿ ನಿರ್ಮಾಣ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ನಡೆಸುತ್ತಿರುವವರಿಗೆ ಮಾರಿಗುಡಿ ಬೀದಿ ಸಮೀಪ ಸ್ಥಳವಕಾಶ ಮಾಡಿಕೊಡಬೇಕು. ಮಾರುಕಟ್ಟೆ ಕಾಮಗಾರಿಯನ್ನು ಶೀಘ್ರವೇ ಆgಂಭಿಸಲು ಅಗತ್ಯ ಪ್ರಕ್ರಿಯೆಗೆ ಮುಂದಾಗಬೇಕೆಂದು ಸಚಿವರು ನಿರ್ದೇಶನ ನೀಡಿದರು.
ಘನತ್ಯಾಜ್ಯ ಘಟಕದಲ್ಲಿ ಜಪಾನ್ ತಂತ್ರಜ್ಞಾನ ಬಳಕೆ ಮಾಡಿಕೊಂಡು ಗೊಬ್ಬರ ತಯಾರಿಸುವ 7.62 ಕೋಟಿ ರೂ. ವೆಚ್ಚದ ಪ್ರಸ್ತಾವ ಘಟಕವು ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ಪಡೆದ ಸಚಿವರು ಈ ಸಂಬಂಧ ವಹಿಸಬೇಕಿರುವ ಅಗತ್ಯ ಕೆಲಸಕ್ಕೆ ಅದ್ಯತೆ ನೀಡಿ ಅವಶ್ಯಕ ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರು ಸಮಸ್ಯೆಗೆ ಸ್ಪಂದಿಸಬೇಕು. ಯಾವ ಭಾಗದಲ್ಲಿ ಸಮಸ್ಯೆ ಇದೆ ಎಂಬ ಮಾಹಿತಿ ಪಡೆದು ತಕ್ಷಣವೇ ಪರಿಹಾರ ಕ್ರಮಗಳಿಗೆ ಮುಂದಾಗಬೇಕು. ಪಟ್ಟಣ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯಗಳನ್ನು ನಿರ್ಮಾಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಸಚಿವರು ನೀಡಿರುವ ಸೂಚನೆಗಳನ್ನು ಚಾಚುತಪ್ಪದೆ ಪಾಲಿಸಬೇಕು. ಕಾಮಗಾರಿ ಪೂರ್ಣಗೊಳಿಸಲು ನೀಡಿರುವ ಗಡುವು ಅವಧಿಯೊಳಗೆ ಕೆಲಸ ಮಾಡಬೇಕು. ಕಾಮಗಾರಿ ಪರಿಶೀಲನೆಗಾಗಿ ವ್ಯಾಪಕವಾಗಿ ಸ್ಥಳಕ್ಕೆ ಭೇಟಿ ನೀಡಲಾಗುವುದು ಎಂದರು.
ನಗರಸಭೆ ಅಧ್ಯಕ್ಷರಾದ ಶೋಭಾ, ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ಸದಸ್ಯರಾದ ಬಂಗಾರು, ಕನಿಷ್ಠ ವೇತನ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷರಾದ ಉಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಂ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 19 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2018-19ನೆ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ 4 ವರ್ಷ ಅವಧಿಯದಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು. ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 30ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜೂ. 20ರಂದು  ಯೋಗ ಜಾಗೃತಿ ಜಾಥಾ, ಉಪನ್ಯಾಸ

ಚಾಮರಾಜನಗರ, ಜೂ. 19 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜೂನ್ 20ರಂದು ಬೆಳಿಗ್ಗೆ 9 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಆಯೋಜಿಸಲÁಗಿದೆ.
ಜಾಥಾವು ನ್ಯಾಯಾಲಯದ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಆವರಣ ತಲುಪಲಿದೆ. ಶಾಲಾ ಮಕ್ಕಳು, ಯೋಗಪಟುಗಳು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಳ್ಳುವರು.
ಜಾಥಾ ನಂತರ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಯೋಗ ಕುರಿತು ಉಪನ್ಯಾಸ ನೀಡಲಾಗುವುದು ಎಂದು ಜಿಲ್ಲಾ ಅಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(17/18-06-2018) ಮಾನವ ಸಾಗಾಣಿಕೆ ವಿರುದ್ಧ ಕಾಯಿದೆ ಜಾಗೃತಿ ಅಗತ್ಯ: ಜಿಲ್ಲಾ ನ್ಯಾಯಾಧೀಶರ ಸಲಹೆ

ಮಾನವ ಸಾಗಾಣಿಕೆ ವಿರುದ್ಧ ಕಾಯಿದೆ ಜಾಗೃತಿ ಅಗತ್ಯ: ಜಿಲ್ಲಾ ನ್ಯಾಯಾಧೀಶರ ಸಲಹೆ 

ಚಾಮರಾಜನಗರ, ಜೂ. 18 :- ಮಹಿಳೆಯರು, ಮಕ್ಕಳ ಶೋಷಣೆ ತಡೆಗಾಗಿ ರೂಪಿಸಲಾಗಿರುವ ಕಾಯಿದೆಗಳ ಬಗ್ಗೆ ಜಾಗೃತರಾಗಿದ್ದರೆ ಎದುರಾಗುವ ತೊಂದರೆಗಳ ವಿರುದ್ಧ ಹೋರಾಡಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಒ.ಡಿ.ಪಿ ಹಾಗೂ ಸಾಧನಾ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಸಾಗಾಣಿಕೆ ತಡೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು, ಮಕ್ಕಳ ಸಾಗಾಣಿಕೆ, ಜೀತ ಪದ್ಧತಿ ತಡೆಗಾಗಿ ಸಾಕಷ್ಟು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು, ಮಕ್ಕಳನ್ನು ಲೈಂಗಿಕ ಶೋಷಣೆಗೆ ಗುರಿ ಮಾಡದಿರಲು ಕಠಿಣ ಕಾಯ್ದೆಗಳು ಇದ್ದರು ಇಂದೂ ಸಹ ಪ್ರಕರಣಗಳು ವರದಿಯಾಗುತ್ತಲೆ ಇವೆ. ಮಾನವ ಸಾಗಾಣಿಕೆ, ಶೋಷಣೆ ತಪ್ಪಿಸುವ ಸಲುವಾಗಿ ಇರುವ ಕಾನೂನುಗಳ ಬಗ್ಗೆ ಅರಿವು ಹೊಂದಬೇಕಾದ ಅಗತ್ಯ ಇದೆ ಎಂದು ನ್ಯಾಯಯಾಧೀಶರು ತಿಳಿಸಿದರು.
18 ವರ್ಷ ಒಳಪಟ್ಟವರ ಮೇಲೆ ಬಲವಂತವಾಗಿ ಲೈಂಗಿಕ ಶೋಷಣೆ, ದೌರ್ಜನ್ಯ ಎಸಗುವವರ ವಿರುದ್ಧ ಕ್ರಮ ವಹಿಸಲು ಪೋಕ್ಸೋ ಕಾಯಿದೆ ನೆರವಾಗಲಿದೆ. ಯಾವುದೇ ತೊಂದರೆಗೆ ಒಳಗಾದಾಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ವಕೀಲರು, ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಗಮನಕ್ಕೆ ತಂದರೆ ಕ್ರಮವಹಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶರು ತಿಳಿಸಿದರು.
ವಿಶೇಷ ಉಪನ್ಯಾಸ ನೀಡಿದ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಕೆ.ವಿ. ಸ್ಟ್ಯಾನ್ಲಿ ಅವರು ಮಹಿಳೆಯರು, ಮಕ್ಕಳನ್ನು ಪದಾರ್ಥಗಳಂತೆ ಮಾರಾಟ ಮಾಡಿ ವಾಮಮಾರ್ಗದಿಂದ ಹಣ ಸಂಪಾದಿಸುವವರು ಇದ್ದಾರೆ. ದುರ್ಲಾಭಕ್ಕಾಗಿ ಮಾನವ ಸಾಗಾಣಿಕೆಯಂತಹ ನೀಚ ಕಾಯಕಕ್ಕೆ ಇಳಿಯುವವರ ವಿರುದ್ಧ ಯಾವುದೇ ಅಂಜಿಕೆ ಇಲ್ಲದೆ ಮಾಹಿತಿ ನೀಡಬೇಕು ಎಂದರು.
ಮಾನವ ಸಾಗಾಣಿಕೆ ಅಸಮಾನತೆ ಸಮಾಜ, ಶೋಷಣೆÉಯ ಪ್ರತೀಕವಾಗಿದೆ. ಮಾನವ ಸಾಗಾಣಿಕೆ ತಡೆಯಲು ಪ್ರಬಲ ಇಚ್ಚಾಶಕ್ತಿ ಬೇಕು. ಮನುಷ್ಯನ ಘನತೆ, ಬದುಕು ಅರಿತು ಮನುಷ್ಯನನ್ನು ಮನುಷ್ಯನಾಗಿ ನೋಡುವ ಪ್ರವೃತ್ತಿ ಬೆಳೆಯಬೇಕು. ಶೋಷಣೆ ಪ್ರವೃತ್ತಿ ಹೋಗಬೇಕು. ಸಂಘಟನೆಗಳು, ಅಧಿಕಾರಿಗಳು ಸೇರಿ ಎಲ್ಲರು ಸಂಘಟಿತ ಪ್ರಯತ್ನ ಮಾಡಿದರೆ ಮಾನವ ಸಾಗಾಣಿಕೆಯಂತಹ ಪಿಡುಗನ್ನು ಪರಿಣಾಮಕಾರಿಯಾಗಿ ತಡೆಯಬಹುದೆಂದು ಸ್ಟ್ಯಾನ್ಲಿ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂ ಸೇವೆಗಳ ಪ್ರಾಧಿಕಾರದ ಸದಸ್ಯರು ಅದ ಸಿ.ಜೆ. ವಿಶಾಲಾಕ್ಷಿ ಮಾತನಾಡಿ ಆರೋಗ್ಯಕರ ಸಮಾಜ ನಿರ್ಮಾಣವಾಗಬೇಕಾದರೆ ಸಾಮಾಜಿಕ ಪಿಡುಗುಗಳನ್ನು ತಡೆಯಬೇಕು. ಸ್ವಯಂ ಸೇವಾ ಸಂಸ್ಥೆಗಳು ದುಷ್ಟ ಪದ್ದತಿ ದೂರ ಮಾಡಲು ಕೈಜೋಡಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾನವ ಸಾಗಾಣಿಕೆಯಲ್ಲಿ ಭಾರತ ದೇಶವು 3ನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿಯಾಗಿದೆ. ಅಂತರಾಷ್ಟ್ರೀಯ ಪಿಡುಗಾಗಿರುವ ಮಾನವ ಸಾಗಾಣಿಕೆಯಂತಹ ಜಾಲವನ್ನು ಮೂಲೋತ್ಪಾಟನೆ ಮಾಡಲು ಎಲ್ಲರ ಪಾತ್ರವು ಸಹ ಪ್ರಮುಖವಾಗಿದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಎಸ್. ವನಜಾಕ್ಷಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜೆ. ಸುರೇಶ್, ಒ.ಡಿ.ಪಿ ಸಂಸ್ಥೆಯ ಜೇಸುದಾಸ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ತಾಲೂಕು ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ದೂರು ಸ್ವೀಕಾರ

ಚಾಮರಾಜನಗರ, ಜೂ. 18 - ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಜೂನ್ 20ರಿಂದ ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ನಾಗರಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಜೂನ್ 20ರಂದು ಚಾಮರಾಜನಗರ, 22ರಂದು ಕೊಳ್ಳೇಗಾಲ, 23ರಂದು ಗುಂಡ್ಲುಪೇಟೆ, 25ರಂದು ಹನೂರು, 26ರಂದು ಯಳಂದೂರು ಪಟ್ಟಣದ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ಹಾಗೂ ನೋಟರಿಯವರಿಂದ ಅಫಿಡವಿಟ್ ಮಾಡಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ವಿಳಂಬ ಸೇರಿದಂತೆ ಇತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ಸಲ್ಲಿಸಬಹುದಾಗಿದೆ. ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಲೋಕಯುಕ್ತ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಜೂನ್ 19ರಂದು ಚನ್ನಿಪುರಮೋಳೆಯಲ್ಲಿ ವಿಶ್ವ ಬಾಲ ಕಾರ್ಮಿಕ, ದೌರ್ಜನ್ಯ ವಿರೋಧಿ ದಿನ

ಚಾಮರಾಜನಗರ, ಜೂ. 18  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆÉ, ಹಾಗೂ ಸಾಧನಾ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋದಿ ಹಾಗೂ ವಿಶ್ವ ಬಾಲ ದೌರ್ಜನ್ಯ ವಿರೋಧಿ ದಿನ ಕಾರ್ಯಕ್ರಮವನ್ನು ಜೂನ್ 19ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಚನ್ನಿಪುರಮೋಳೆಯ ಹಸಿರು ಶಾಲೆ ಪುರಸ್ಕ್ರತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಏರ್ಪಡಿಸಲಾಗಿದೆ.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಟಿ.ಜೆ. ಸುರೇಶ್ ಅವರು ಉಪನ್ಯಾಸ ನೀಡುವರು. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೂನ್ 21ರಂದು ನಗರದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆÀ

ಚಾಮರಾಜನಗರ, ಜೂ. 18 - ಭಾರತ ಸರ್ಕಾರದ ಆಯುಷ್ ಮಂತ್ರಾಲಯ, ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಸಹಯೋಗದೊಂದಿಗೆ 4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21ರಂದು ಬೆಳಿಗ್ಗೆ 6.30ರಿಂದ 9 ಗಂಟೆಯವರೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು(ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿ.ಪಂ. ಉಪಾಧ್ಯಕ್ಷರಾದ ಜೆ. ಯೋಗೇಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ತಾ.ಪಂ. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅವರುಗಳು ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.





ಕಬಿನಿಗೆ ಹೆಚ್ಚು ನೀರು : ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ 

ಚಾಮರಾಜನಗರ, ಜೂ. 17 :- ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು ನದಿಗೆ ಹೆಚ್ಚು ನೀರನ್ನು ಬಿಡುವ ಸಂಭವ ಇರುವ ಹಿನ್ನಲೆಯಲ್ಲಿ ಕಬಿನಿ ನದಿಯ ತಗ್ಗು ಪ್ರದೇಶ ಹಾಗೂ ದಂಡೆಗಳಲ್ಲಿ ವಾಸುತ್ತಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಠ ಮಟ್ಟ ತಲುಪುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚು ನೀರು ಬಿಡುವ ಸಂಭವವಿರುವುದಾಗಿ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ. ಹೀಗಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ದಂಡೆಗಳಲ್ಲಿ ವಾಸಿಸುತ್ತಿರುವ ಜನರು  ತಮ್ಮ ಆಸ್ತಿ ಪಾಸ್ತಿ ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೂ. 18ರಂದು ಮಾನವ ಸಾಗಾಣಿಕೆ ತಡೆ ಜಾಗೃತಿ ಕಾಂiÀರ್iಕ್ರಮ

ಚಾಮರಾಜನಗರ, ಜೂ. 17 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಓಡಿಪಿ ಸಂಸ್ಥೆ ಹಾಗೂ ಸಾಧನ ಸಂಸ್ಥೆ ಇವರ ಸಹಯೋಗದಲ್ಲಿ ಮಾನವ ಸಾಗಾಣಿಕೆ ತಡೆಯಿರಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ಜೂನ್ 18ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನೂತನ ಕೆಡಿಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ವಿ. ಸ್ಟ್ಯಾನ್ಲಿ ಉಪನ್ಯಾಸ ನೀಡುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್.ಎನ್. ವನಜಾಕ್ಷಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲ ನ್ಯಾಂiÀi ಮಂಡಳಿ ಸದಸ್ಯರಾದ ಟಿ.ಜೆ. ಸುರÉೀಶ್, ಓಡಿಪಿ ಸಂಸ್ಥೆಯ ವಲಯ ಸಂಯೋಜಕರಾದ ಸಿಸ್ಟರ್ ಪೆಲ್ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

(15-06-2018) ಜೂ. 18ರಂದು ಮಾನವ ಸಾಗಾಣಿಕೆ ತಡೆ ಜಾಗೃತಿ ಕಾಂiÀರ್iಕ್ರಮ

ಜೂ. 18ರಂದು ಮಾನವ ಸಾಗಾಣಿಕೆ ತಡೆ ಜಾಗೃತಿ ಕಾಂiÀರ್iಕ್ರಮ

ಚಾಮರಾಜನಗರ, ಜೂ. 15 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಓಡಿಪಿ ಸಂಸ್ಥೆ ಹಾಗೂ ಸಾಧನ ಸಂಸ್ಥೆ ಇವರ ಸಹಯೋಗದಲ್ಲಿ ಮಾನವ ಸಾಗಾಣಿಕೆ ತಡೆಯಿರಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ಜೂನ್ 18ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನೂತನ ಕೆಡಿಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ವಿ. ಸ್ಟ್ಯಾನ್ಲಿ ಉಪನ್ಯಾಸ ನೀಡುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್.ಎನ್. ವನಜಾಕ್ಷಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲ ನ್ಯಾಂiÀi ಮಂಡಳಿ ಸದಸ್ಯರಾದ ಟಿ.ಜೆ. ಸುರÉೀಶ್, ಓಡಿಪಿ ಸಂಸ್ಥೆಯ ವಲಯ ಸಂಯೋಜಕರಾದ ಸಿಸ್ಟರ್ ಪೆಲ್ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜೂ. 20ರಂದು  ಯೋಗ ಜಾಗೃತಿ ಜಾಥಾ 

ಚಾಮರಾಜನಗರ, ಜೂ. 15 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜೂನ್ 20ರಂದು ಬೆಳಿಗ್ಗೆ 9 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಠಿಯಿಂದ ಸಾಮಾಹಿಕ ಜಾಥಾ ಕಾರ್ಯಕ್ರಮ ಆಯೋಜಿಸಲÁಗಿದೆ.
ಜಾಥಾ ಕಾರ್ಯಕ್ರಮ ನ್ಯಾಯಾಲಯದ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಆವರಣ ತಲುಪಲಿದೆ. ಶಾಲಾ ಮಕ್ಕಳು, ಯೋಗಪಟುಗಳು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಳ್ಳುವರು.
ಜಾಥಾ ನಂತರ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಯೋಗ ಕುರಿತು ಉಪನ್ಯಾಸ ನೀಡಲಾಗುವುದು ಎಂದು ಜಿಲ್ಲಾ ಅಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಯಳಂದೂರು ಪ.ಪಂ : ಬಯಲು ಶೌಚಮುಕ್ತ ಪ್ರದೇಶ ಘೋಷಿಸಲು ಸಲಹೆ, ಆಕ್ಷೇಪಣೆ ಆಹ್ವಾನ

ಚಾಮರಾಜನಗರ, ಜೂ. 15 - ಯಳಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವು ವಾರ್ಡುಗಳನ್ನು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಬಯಲು ಶೌಚಮುಕ್ತ ಪ್ರದೇಶವೆಂದು ಘೋಷಿಸಲು ತೀರ್ಮಾನಿಸಲಾಗಿದೆ.
ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11 ವಾರ್ಡ್‍ಗಳಲ್ಲಿ ವಾರ್ಡ್ ಸಂಖ್ಯೆ 1, 2. 3, 5 ಹಾಗೂ 6 ಸೇರಿ ಒಟ್ಟು 5 ವಾರ್ಡುಗಳನ್ನು ಸಮೀಕ್ಷೆ ಮಾಡಿದ್ದು, ಸಾರ್ವಜನಿಕರು ವೈಯುಕ್ತಿಕ ಹಾಗೂ ಸಮುದಾಯ ಶೌಚಾಲಯಗಳನ್ನು ಬಳಸುತ್ತಿದ್ದಾರೆ. ಯೋಜನೆಯಡಿ ಈ ವಾರ್ಡುಗಳನ್ನು ಬಯಲು ಶೌಚಮುಕ್ತ ಪ್ರದೇಶವೆಂದು ಘೋಷಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರು. ಸಂಘಸಂಸ್ಥೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ತಮ್ಮ ಸಲಹೆ ಅಥವಾ ಆಕ್ಷೇಪಣೆಗಳು ಇದ್ದಲ್ಲಿ ಜೂನ್ 30ರೊಳಗೆ ಪಟ್ಟಣ ಪಂಚಾಯಿತಿ ಕಾಯರ್Áಲಯಕ್ಕೆ ಸಲ್ಲಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಉಮÁಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 17ರಂದು ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಜೂ. 15 - ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 17ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಣ್ಯದಹುಂಡಿ, ದಾಸನೂರು, ಇಂಡಸ್ಟ್ರಿಯಲ್ ಏರಿಯಾ, ಕೆಲ್ಲಂಬಳ್ಳಿ, ಬೆಂಡರವಾಡಿ, ಮಹದೇವನಗರ, ಬದನಗುಪ್ಪೆ, ತೊರವಳ್ಳಿ ಎನ್‍ಜೆವೈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 19ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 15  ಚಾಮರಾಜನಗರ ತಾಲೂಕಿನ ಹರವೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 19ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದ್ದು ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಉತ್ತುವಳ್ಳಿ, ಹೊಸಳ್ಳಿ, ಮುಕ್ಕಡಹಳ್ಳಿ, ಉಡಿಗಾಲ, ಕಲ್ಪುರ, ಮೂಡ್ಲಕೂಡು, ಹೆಗ್ಗವಾಡಿ, ತಮ್ಮಡಹಳ್ಳಿ, ದೇವಲಾಪುರ, ನಂಜದೇವನಪುರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುಂಡ್ಲುಪೇಟೆ : ವಾಜಪೇಯಿ ವಸತಿ ಯೋಜನೆಯಡಿ ಮನೆ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 15  ಗುಂಡ್ಲುಪೇಟೆ ಪುರಸಭೆಯು ವಾಜಪೇಯಿ ವಸತಿ ಯೋಜನೆಯಡಿ 2017-18ನೇ ಸಾಲಿಗೆ ಮನೆ ನಿರ್ಮಿಸಿಕೊಳ್ಳುವ ಸಲುವಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಇತರೆ ಜನಾಂಗದವರಿಗೆ 157 ಹಾಗೂ ಅಲ್ಪಸಂಖ್ಯಾತರಿಗೆ 18 ಮನೆ ನಿರ್ಮಾಣ ಸೇರಿ ಒಟ್ಟು 175 ಮನೆ ನಿರ್ಮಾಣದ ಗುರಿ ಹೊಂದಲಾಗಿದೆ.
ಯೋಜನೆಯಡಿ ಪಕ್ಕಾ ಮನೆ ನಿರ್ಮಿಸಲು ರಾಜ್ಯ ಸರ್ಕಾರದ 1 ಲಕ್ಷದ 20 ಸಾವಿರ ರೂ., ಕೇಂದ್ರ ಸರ್ಕಾರದ 1 ಲಕ್ಷದ 50 ಸಾವಿರ ರೂ.ಗಳನ್ನು ಹಂತಹಂತವಾಗಿ ಆಶ್ರಯ ಯೋಜನೆ ಸಮಿತಿಯಲ್ಲಿ ಆಯ್ಕೆಯಾಗಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಅನುಮೋದನೆಯಾದ ನಂತರ ನೀಡಲಾಗುವುದು.
ಅರ್ಜಿದಾರರ ಕುಟುಂಬ ನಿವೇಶನ ಹೊಂದಿದ್ದು ವಸತಿ ರಹಿತರಾಗಿರಬೇಕು. ಸಾರ್ವಜನಿಕ ಸ್ಥಳ, ತಾತ್ಕಾಲಿಕ ಶೆಡ್, ಶಿಥಿಲವಾದ ಮನೆ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದು 300 ಚ.ಮೀ.ಗೆ ಹೆÀಚ್ಚು ಇಲ್ಲದ 4ಕ್ಕಿಂತ ಹೆಚ್ಚು ಸದಸ್ಯರು ವಾಸಿಸುತ್ತಿರಬೇಕು. ಕರ್ನಾಟಕ ಯಾವುದೇ ಜಾಗದಲ್ಲಿ ಸ್ವಂತ ಮನೆ ಹೊಂದಿರಬಾರದು. ವಾರ್ಷಿಕ ಆದಾಯ 87 ಸಾವಿರ ರೂ.ಗಿಂತ ಕಡಿಮೆ ಇರಬೇಕು. ಬೇರಾವುದೇ ಯೋಜನೆ, ಇಲಾಖೆಯಿಂದ ವಸತಿ ಸೌಲಭ್ಯ ಪಡೆದಿರಬಾರದು. ಸ್ವಂತ ನಿವೇಶನದ ಖಾತೆ ಹೊಂದಿರಬೇಕು. ಆಯ್ಕೆಯಾಗಿ ಮಂಜೂರಾತಿ ಪತ್ರ ನೀಡಿದ ನಂತರ ಹಳೆಯ ಮನೆಯನ್ನು ತೆರವುಗೊಳಿಸಬೇಕು. ನಿವೇಶನವನ್ನು 15 ವರ್ಷಗಳ ಕಾಲ ಪುರಸಭೆಗೆ ಅಡಮಾನ ಮಾಡಿಕೊಡಬೇಕು.
ಅರ್ಜಿಯನ್ನು ಈ ಹಿಂದೆ ಸಲ್ಲಿಸಿದ್ದಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಪುರಸಭೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಭಾವಚಿತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಅಸೆಸ್‍ಮೆಂಟ್ ಪ್ರತಿ, ಸ್ವಂತ ಮನೆ ಇಲ್ಲದಿರುವ ಬಗ್ಗೆ ಅಫಿಡವಿಟ್, ಕಟ್ಟಡ ನಿರ್ಮಾಣ ಲೈಸನ್ಸ್ ಪ್ರತಿ, ಹಳೆ ಮನೆ ಇದ್ದಲ್ಲಿ ಅದರ ಫೋಟೋಗಳನ್ನು ಲಗತ್ತಿಸಿ ಪುರಸÀಭೆಗೆ 15 ದಿನದೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸಂಸ್ಥೆಗಳ ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಜೂ. 15 :- ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಟ್ಟಣ ಪಂಚಾಯಿತಿಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶವಿದೆ.
ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ತಹಸೀಲ್ದಾರ್ ಕಚೇರಿ ಹಾಗೂ ಆಯಾ ನಗರಸಭೆ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ತಿಳಿವಳಿಕೆಗಾಗಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ಹೆಸರು, ಅವರು ವಾಸವಿರುವ ವಾರ್ಡಿನ ವ್ಯಾಪ್ತಿಯಲ್ಲಿರದೇ ಬೇರೆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಗ್ರಾಮೀಣ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇರುವ ಹೆಸರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಜೂನ್ 17ರೊಳಗೆ ಆಯಾ ತಹಸೀಲ್ದಾರ್ ಕಚೇರಿ, ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 20 ರವರೆಗೆ ಚಾ.ನಗರ ಸಭೆ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಚಾಮರಾಜನಗರ, ಜೂ. 16 :- ಚಾಮರಾಜನಗರ ಸಭೆಯ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜೂನ್ 20 ರವರೆಗೆ ಕಾಲಾವಕಾಶ ನಿಗದಿ ಮಾಡಲಾಗಿದೆ.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಆಯಾ ನಗರ ಸ್ಥಳೀಯ ಸಂಸ್ಥೆಗಳ ಕಚೇರಿ ಹಾಗೂ ಸಂಬಂಧಿಸಿದ ತಹಸೀಲ್ದಾರ್ ಕಚೇರಿಯಲ್ಲಿ ಜೂನ್ 17 ರವರೆಗೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ ಎಂದು ಈಗಾಗಲೇ ಪ್ರಕಟಿಸಲಾಗಿದೆ. ಆದರೆ ಚಾಮರಾಜನಗರ ನಗರ ಸಭೆಯ ಕರಡು ಮತದಾರರ ಪಟ್ಟಿಯನ್ನು ಜೂನ್ 14 ರಂದು ಪ್ರಚುರ ಪಡಿಸಲಾಗಿದೆ. ಹೀಗಾಗಿ ಚಾಮರಾಜನಗರ ಸಭೆಯ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜೂನ್ 17 ರ ಬದಲಾಗಿ ಜೂನ್ 20 ರವರೆಗೆ ಕಾಲಾವಕಾಶ ನಿಗದಿಪಡಿಸಲಾಗಿದೆ.
ಈ ಹಿನ್ನಲೆಯಲ್ಲಿ ಚಾಮರಾಜನಗರ ನಗರ ಸಭೆಯ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ಹೆಸರು, ಅವರು ವಾಸಿಸುವ ವಾರ್ಡಿನ ವ್ಯಾಪ್ತಿಯಲ್ಲಿರದೇ ಬೇರೆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಹಾಗೂ ಗ್ರಾಮೀಣ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇರುವ ಹೆಸರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಆಕ್ಷೇಪಣೆಗಳನ್ನು ಜೂನ್ 20 ರೊಳಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 18 ರಂದು ಕೃಷಿ ಸಚಿವರಿಂದ ಚಾ.ನಗರ ಮೈಸೂರು ಜಿಲ್ಲೆಯ ಕೃಷಿ ಇಲಾಖೆ ಪ್ರಗತಿ ಪರಿಶೀಲನೆ 

ಚಾಮರಾಜನಗರ, ಜೂ. 16 - ಕೃಷಿ ಸಚಿವರಾದ ಎನ್.ಎಚ್ ಶಿವಶಂಕರ ರೆಡ್ಡಿ ಅವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 18 ರಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸುವರೆಂದು ಪ್ರಕಟಣೆ ತಿಳಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ, ಜೂ. 16  ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಜೂನ್ 18 ರಿಂದ 21 ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜೂನ್ 18ರಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 9 ಗಂಟೆಗೆ ಉಪ್ಪಿನಮೋಳೆಗೆ ಆಗಮಿಸುವರು. 10.30 ಗಂಟೆಗೆ ಚಾಮರಾಜನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುವ ಸಚಿವರು 11 ಗಂಟೆಗೆ ನಗರದ ಎ.ಪಿ.ಎಂ.ಸಿ ಮಾರುಕಟ್ಟೆ ಅವರಣದಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಹಮ್ಮಿಕೊಂಡಿರುವ ಕೃತಜ್ಞತಾ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ ನಗರದಲ್ಲಿ ಏರ್ಪಡಿಸಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜೂನ್ 19, 20 ಮತ್ತು 21ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಅಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


(11-07-2018) ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಅಪಘಾತವನ್ನು ತಡೆಗಟ್ಟಿ , ಜುಲೈ 14 ರಂದು ಎಲ್ಲೆಡೆ ಲೋಕ ಅದಾಲತ್: ಸದುಪಯೋಗಕ್ಕೆ ಮನವಿ


ಗ್ರಂಥಾಲಯಗಳ ಸಮರ್ಪಕ ನಿರ್ವಹಣೆಗೆ ಜಿ.ಪಂ. ಅಧ್ಯಕ್ಷರ ಸೂಚನೆ 

ಚಾಮರಾಜನಗರ, ಜು. 11 - ಗ್ರಾಮ ಪಂಚಾಯಿತಿಗಳಲ್ಲಿ ಇರುವ ಗ್ರಂಥಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾವು ಪ್ರತಿನಿಧಿಸುತ್ತಿರುವ ಕೊಳ್ಳೇಗಾಲ ತಾಲೂಕಿನ ಪಾಳ್ಯ ಸೇರಿದಂತೆ ತಾಲೂಕಿನ ಹಲವೆಡೆ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯಗಳು ನಿರ್ವಹಣೆ ಸರಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯಗಳು ಗ್ರಾಮೀಣ ಜನರಿಗೆ ಅನುಕೂಲವಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್ ಮಾತನಾಡಿ ವಿವಿಧ ನಿಗಮಗಳು ಫಲಾನುಭವಿಗಳಿಗೆ ಕೊಳವೆ ಬಾವಿಗಳನ್ನು ಕೊರೆಯಿಸುವ ಕೆಲಸವನ್ನು ವಿಳಂಬ ಮಾಡಿವೆ. ಇನ್ನುಮುಂದೆ ನಿಗದಿತ ಸಮಯಕ್ಕೆ ಸರಿಯಾಗಿ ಕೊಳವೆ ಬಾವಿಗಳ ಸೌಲಭ್ಯ ಲಭಿಸುವಂತೆ ನಿಗಮದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಕಾಲುವೆ, ನಾಲೆಗಳಿಗೆ ನೀರು ಹರಿಸುವ ಬಗ್ಗೆ ಅಧಿಕಾರಿಗಳು ಮುಂಚಿತವಾಗಿ ಮಾಹಿತಿ ನೀಡಿದರೆ ರೈತರು ಯಾವ ಬೆಳೆ ಬೆಳೆಯಬೇಕೆಂದು ನಿರ್ಧರಿಸಲು ಅನುಕೂಲವಾಗುತ್ತದೆ. ಈ ಬಗ್ಗೆ ನೀರಾವರಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜನರಿಗೆ ಉಪಯುಕ್ತವಾದ ಮಾಹಿತಿಯನ್ನು ತಲುಪಿಸಬೇಕು ಎಂದರು.

ನಾಲೆ, ಕಾಲುವೆ, ಕೆರೆಗಳಲ್ಲಿ ಹೂಳು ತೆಗೆಯಬೇಕು. ಇದರಿಂದ ನೀರು ಸದ್ಭಳಕೆಯಾಗಲಿದೆ. ಹೂಳು ತೆಗೆಯುವ ಕಾಮಗಾರಿಗೆ ಸಕಾಲದಲ್ಲಿ ಕ್ರಿಯಾಯೋಜನೆ ತಯಾರಿಸಿ ಕೆಲಸ ಪೂರ್ಣಗೊಳಿಸಬೇಕೆಂದು ಯೋಗೇಶ್ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಕೆಲಸಗಳನ್ನು ನಿರ್ವಹಿಸಬೇಕು. ಗ್ರಾಮೀಣ ಜನರಿಗೆ ಅನುಕೂಲವಾಗುವ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದೆ. ಅಧಿಕಾರಿಗಳು ಹೆಚ್ಚು ಗಮನ ವಹಿಸಿ ಗುರಿ ಸಾಧಿಸುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪದ್ಮಾಶೇಖರ್ ಪಾಂಡೆ, ಉಪಕಾರ್ಯದರ್ಶಿ ಮುನಿರಾಜಪ್ಪ ಇತರರು ಸಭೆಯಲ್ಲಿ ಹಾಜರಿದ್ದರು.


ಹಲ್ಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಚಾಮರಾಜನಗರ, ಜು. 11 - ಎಕಾಏಕಿ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಸಾವಿಗೆ ಕಾರಣರಾಗಿದ್ದ ಉಮ್ಮತ್ತೂರು ಗ್ರಾಮದ ನಟರಾಜು ಎಂಬುವರಿಗೆ ಅಧಿಕ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.

ಸಿದ್ದರಾಜು ಹಲ್ಲೆಗೆ ಒಳಗಾಗಿ ಸಾವಿಗೀಡಾದ ವ್ಯಕ್ತಿ. ಕಳೆದ 2013ರ ಜೂನ್ 20ರಂದು ಉಮ್ಮತ್ತೂರು ಗ್ರಾಮದಲ್ಲಿ ನಟರಾಜು ಸಿದ್ದರಾಜುವಿನೊಂದಿಗೆ ಜಗಳ ತೆಗೆದು ಎದೆಗೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದ. ತೀವ್ರ ಗಾಯಗೊಂಡಿದ್ದ ಸಿದ್ದರಾಜುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾಕಷ್ಟು ಸಮಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಿದ್ದರಾಜು ಚಿಕಿತ್ಸೆ ಫ¯ಕಾರಿಯಾಗದೆ ಅಸುನೀಗಿದ್ದರು. 

ಪ್ರಕರಣ ದಾಖಲಾಗಿ ಆರೋಪ ರುಜುವಾತಾದ ಹಿನ್ನಲೆಯಲ್ಲಿ ಆರೋಪಿ ನಟರಾಜುವಿಗೆ ಅಧಿಕ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಡಿ. ವಿನಯ್ ಅವರು ಇಂದು ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ.ದಂಡವನ್ನು ವಿಧಿಸಿ ತೀರ್ಪು ನೀಡಿದರು.

ಅಕಾಲಿಕ ಮರಣಕ್ಕೆ ಸಂಬಂಧಪಟ್ಟಂತೆ ಮೃತರ ಪತ್ನಿ ಪರಿಹಾರ ಕೋರಿ ಸಿ.ಆರ್.ಪಿ.ಸಿ ಕಲಂ 357 ಎ (2)ರಡಿಯಲ್ಲಿ ಸಲ್ಲಿಸಿರುವ ಮನವಿಯನ್ನು ನ್ಯಾಯಾಲಯ ಪುರಸ್ಕರಿದ್ದು, ಪರಿಹಾರ ಮೊತ್ತವನ್ನು ನಿರ್ದಿಷ್ಟಪಡಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಕಳುಹಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಬಿಯೋಜಕರಾದ ಎಂ.ಎಸ್. ಉಷಾ ವಾದ ಮಂಡಿಸಿದ್ದರು.


ಜುಲೈ 12ರಂದು ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಚಾಮರಾಜನಗರ, ಜು. 11:- ಜಿಲ್ಲಾ ಪೊಲೀಸ್ ಇಲಾಖೆ, ಈಶ್ವರಿ ಸೋಷಿಯಲ್ ಟ್ರಸ್ಟ್ ಆಶ್ರಯದಲ್ಲಿ ಸಾಲುಗಿಡ ನೆಡುವ ಕಾರ್ಯಕ್ರಮವನ್ನು ಜುಲೈ 12ರಂದು ಬೆಳಿಗ್ಗೆ 11 ಗಂಟೆಗೆ ನಗರದ ತ್ಯಾಗರಾಜ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಡಾ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ನಗರಸಭಾ ಅಧ್ಯಕ್ಷರಾದ ಶೋಭಾ, ರೋಟರಿ ಸಂಸ್ಥೆಯ ಅಧ್ಯಕ್ಷರಾದ ಡಿ. ನಾಗರಾಜ, ಯುನೈಟೆಡ್ ಇಂಡಿಯಾ ಇನ್ಷೂರೆನ್ಸ್ ಕಂಪನಿಯ ದೊಡ್ಡರಾಯಪೇಟೆ ಗಿರೀಶ್, ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 

ಇದೇ ವೇಳೆ ಕನ್ನಡ ಕೋಗಿಲೆ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಮಹೇಶ್ ರಾಮಸಮುದ್ರ ಹಾಗೂ ಮಹದೇವಸ್ವಾಮಿ ಅವರನ್ನು ಸನ್ಮಾನಿಸಲಾಗುತ್ತದೆ. ಟ್ರಸ್ಟ್‍ನ ಸಿ.ಎಂ. ವೆಂಕಟೇಶ್ ಪ್ರಾಸ್ತಾವಿಕ ನುಡಿಗಳಾನ್ನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಜುಲೈ 12ರಂದು ಡೆಂಗಿ ವಿರೋಧಿ ಜಾಗೃತಿ ಜಾಥಾ

ಚಾಮರಾಜನಗರ, ಜು. 11  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಉಲಾಖೆಯು ಡೆಂಗಿ ವಿರೋಧಿ ಮಾಸಾಚರಣೆ ಅಂಗವಾಗಿ ಜುಲೈ 12ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಅವರಣದಿಂದ ಜನಜಾಗೃತಿ ಜಾಥಾ ಆಯೋಜಿಸಿದೆ ಎಂದು ಪ್ರಕಟಣೆ ತಿಳಿಸಿದೆ.


ಜುಲೈ 12ರಂದು ವಿಚಾರಣಾಧೀನ ಕೈದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ

ಚಾಮರಾಜನಗರ, ಜು. 11 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಭಾರತೀಯ ರೆಡ್‍ಕ್ರಾಸ್ ಸೋಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ವಿಚಾರಣಾಧೀನ ಕೈದಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ 12 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕಾರಗೃಹ ಅವರಣದಲ್ಲಿ ಹಮ್ಮಿಕೊಳ್ಳಲಾಗಿದೆ. 

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಕಾರಗೃಹದ ಅಧೀಕ್ಷಕರಾದ ಶಾಂತಶ್ರೀ ಅವರು ಅಧ್ಯಕ್ಷತೆ ವಹಿಸುವರು.

ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಡಾ. ಮಹೇಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಅರುಣ್‍ಕುಮಾರ್, ಡಿ.ವೈ.ಎಸ್.ಪಿ ಜಯಕುಮಾರ್, ವೈದ್ಯರಾದ ಡಾ. ರವಿಶಂಕರ್, ಡಾ. ಕೃಷ್ಣಪ್ರಸಾದ್, ಡಾ. ಸುಷ್ಮಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ. 


     


    


      

 

 

ಚಾಮರಾಜನಗರ,ಜು.11- ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಅಪಘಾತವನ್ನು ತಡೆಗಟ್ಟಿ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ಸಂಚಾರ ಠಾಣೆ ಸಬ್ ಇನ್ಸ್‍ಪೆಕ್ಟರ್ ದೀಪಕ್ ಕರೆ ನೀಡಿದರು. 

ಅವರು ತಾಲೂಕಿನ ವೆಂಕಟಯ್ಯನ ಛತ್ರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  ಬುಧವಾರ ಸಂಚಾರಿ ಠಾಣೆಯಿಂದ ಏರ್ಪಡಿಸಿದ್ದ ಸಂಚಾರಿ  ನಿರ್ವಹಣೆ ಮತ್ತು ರಸ್ತೆ ಸುರ್ಷತಾ ಸಪ್ತಾಹ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ಬೈಕ್ ಸವಾರರು ಬೈಕ್ ಚಾಲನಾ ಪರವಾನಗಿ, ಬೈಕ್ ದಾಖಲಾತಿಗಳು, ವಾಹನ ವಿಮೆಗಳನ್ನು ಕಡ್ಡಾಯವಾಗಿ ಹೊಂದ ಬೇಕು ಮತ್ತು ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸುವ್ಯದರಿಂದ ಅಪಘಾತಗಳು ಸಂಭವಿಸಿದಾಗ ತಲೆ ಪೆಟ್ಟಾಗುವುದನ್ನು ತಪ್ಪಿಸಿ ಸಾವನ್ನು ತಡೆಗಟ್ಟುತ್ತದೆ ಎಚಿದ ಅವರು, ಸಂಚಾರಿ ನಿಯಮಗಳನ್ನು ಪಾಲಿಸಿದಾಗ ಅಪಘಾತಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದರು.
ಬಹುತೇಕ ಅಪಘಾತಗಳು ಚಾಲಕ ಅಜಾಗರುಕತೆಯಿಂದ ಸಂಭವಿಸುತ್ತದೆ ಇದರಿಂದ ಬೈಕ್ ಚಾಲನೆ ಮಾಡುವಾಗ ಮೊಬೈಲ್‍ನಲ್ಲಿ ಮಾತನಾಡಬೇಡಿ ಮೊಬೈಲ್‍ನಲ್ಲಿ ಮಾತನಾಡಬೇಕಾದರೆ ಬೈಕ್ ಅನು ರಸ್ತೆ ಬದಿ ನಿಲ್ಲಿಸಿ ಮಾತನಾಡಿ ನಂತರ ಬೈಕ್ ಚಾಲನೆ ಮಾಡಿ ಎಂದು ಸಲಹೆ ನೀಡಿದರು. ಸಮಿಕ್ಷೆ ಪ್ರಕಾರ ದೇಶದಲ್ಲಿ ಪ್ರತಿವರ್ಷ 1.50 ಲಕ್ಷ ಜನರು ಅಪಘಾತದಿಂದ ಸಾವನ್ನುಪ್ಪುತ್ತಿದ್ದಾರೆ ಎಂದು ಆತಂಕವ್ಯಕ್ತಪಡಿಸಿದ ಅವರು, ಆದ್ದರಿಂದ ಪ್ರತಿಯೊಬ್ಬರು ಸಹ ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತಗಳ ತಡೆಗೆ ಪೋಲಿಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ವಿದ್ಯಾರ್ಥಿಗಳು ಈ ಬಗ್ಗೆ ತಮ್ಮ ಪೋಷಕರು ಮತ್ತು ತಮ್ಮ ಸುತ್ತಮುತ್ತಲಿನವರಿಗೆ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವೆಂಕಟಯ್ಯನಛತ್ರ ಗ್ರಾಮಪಂಚಾಯಿತಿ ಅಧ್ಯಕ್ಷ ಸೋಮಣ್ಣ, ವೆಂಕಟಯ್ಯನ ಛತ್ರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಣ್ಣ, ಸಂಚಾರಿ ಠಾಣೆ ಎಎಸ್‍ಐ ವೆಂಕಟೇಶ್, ಸಿಬ್ಬಂದಿಗಳಾದ ಕುಮಾರ್, ಮಂಜು, ನವೀನ್. ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
.............................................

ಜುಲೈ 14 ರಂದು ಎಲ್ಲೆಡೆ ಲೋಕ ಅದಾಲತ್: ಸದುಪಯೋಗಕ್ಕೆ ಮನವಿ 

ಚಾಮರಾಜನಗರ, ಜು. 10 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಜುಲೈ 14 ರಂದು ಬೆಳಿಗ್ಗೆ 11 ಗಂಟೆಗೆ ರಾಜಿ ಸಂಧಾನದ ಅಂದರೆ ಲೋಕ ಅದಾಲತ್ ಮೂಲಕ  ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
     ವೈವಾಹಿಕ, ಕೌಟುಂಬಿಕ, ಪಾಲು ವಿಭಾಗ, ಬ್ಯಾಂಕ್ ಪ್ರಕರಣಗಳು, ಚೆಕ್ ಬೌನ್ಸ್, ಹಣಕಾಸಿನ ದಾವೆ, ಸಿವಿಲ್, ಕಂದಾಯ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಕಾಯಿದೆ, ಭಾರತ ದಂಡ ಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
     ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಬಸವರಾಜ ಅವರ ಮಾರ್ಗದರ್ಶನದಲ್ಲಿ ನಗರದ ನ್ಯಾಯಾಲಯಗಳ ಆವರಣದ ಎ.ಡಿ.ಆರ್ ಕಟ್ಟಡದಲ್ಲಿ ಮತ್ತು ಎಲ್ಲಾ ತಾಲ್ಲೂಕುಗಳ ನ್ಯಾಯಾಲಯಗಳ ನ್ಯಾಯಾಧೀಶರ ಹಾಗೂ ವಕೀಲರ ಸಹಯೋಗದಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
     ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಇತ್ಯರ್ಥ ಮಾಡಲಾಗುತ್ತದೆ. ಕಕ್ಷಿದಾರರು ಬ್ಯಾಂಕುಗಳು ಇತರೆ ನಾಗರಿಕರು ಲೋಕ ಅದಾಲತ್ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳÀುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಜು.11 ರಂದು ಜಿ.ಪಂ. ಕೆ.ಡಿ.ಪಿ. ಸಭೆ

ಚಾಮರಾಜನಗರ, ಜು. 10 - ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಜಿಲ್ಲಾ ಮಾಸಿಕ ಪ್ರಗತಿ ಪರಿಶೀಲನೆ ಸಭೆಯು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರ ಅಧ್ಯಕ್ಷತೆಯಲ್ಲಿ ಜುಲೈ 11ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಚಾಮರಾಜನಗರ, ಜು. 10 - ಜಿಲ್ಲಾ ಉದ್ಯೋಗ ವಿನಿಯಮ ಇಲಾಖೆ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಉಚಿತ ತರಬೇತಿಯನ್ನು ಜು.21 ರವರೆಗೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
     ಪ್ರತಿದಿನ ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು (ವಿಶೇಷವಾಗಿ ಪದವಿ ಮಟ್ಟದ ಅಭ್ಯರ್ಥಿಗಳು) ತಮ್ಮ ಹೆಸರು ಭಾವಚಿತ್ರ ವಿವರಗಳೊಂದಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08226-224430 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ.ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುಂಡ್ಲುಪೇಟೆ: ವಿವಿಧ ಸಾಲ ಸೌಲಭ್ಯ, ಸ್ವಸಹಾಯ ಗುಂಪುಗಳ ರಚನೆಗೆ ಅರ್ಜಿ ಆಹ್ವಾನ

ಚಾಮರಾಜನಗರ, ಜು. 10 :- ಗುಂಡ್ಲುಪೇಟೆ ಪುರಸಭೆಯು ಡೇ ನಲ್ಮ್ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದಿರುವವರೆಗೆ ಹಾಗೂ ಸ್ವಸಹಾಯ ಗುಂಪಿನ  ಸದಸ್ಯರಿಗೆ ಸಾಲ ಸೌಲಭ್ಯ ನೀಡಲಿದ್ದು ಅರ್ಜಿ ಆಹ್ವಾನಿಸಿದೆ.
     ಎಂ.ಎಸ್.ಐ.ಡಿ.ಯೋಜನೆಯಡಿ ಮಹಿಳೆಯರು, ಪುರುಷರು, ವಿಕಲಚೇತನರ ಸ್ವಸಹಾಯ ಗುಂಪುಗಳನ್ನು (ಚಿಂದಿ ಆಯುವವರು, ರಿಕ್ಷಾ, ನೈರ್ಮಲ್ಯ ಕೆಲಸಗಾರರು ಸೇರಿದಂತೆ) ರಚಿಸಿ ಕೊಡಲಾಗುತ್ತದೆ. 3 ತಿಂಗಳ ನಂತರ ಸುತ್ತು ನಿಧಿ ನೀಡಲಾಗುತ್ತದೆ ಬೀದಿ ಬದಿ ವ್ಯಾಪಾರ ಮಾಡುವವರು ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರು ಜುಲೈ 25ರೊಳಗೆ ಪುರಸಭೆ ಕಾರ್ಯಾಲಯ ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ: ಅರ್ಜಿ ಆಹ್ವಾನ

ಚಾಮರಾಜನಗರ, ಜು. 10- ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕ್ರೀಡೆ, ಕಲೆ, ಸಾಂಸ್ಕøತಿಕ, ಸಮಾಜ ಸೇವೆ, ಸಂಗೀತ, ನಾವೀನ್ಯತೆ ಹಾಗೂ ತಾರ್ಕಿಕ ಸಾಧನೆಯಂತಹ ಅಸಾಧಾರಣ ಸಾಧನೆ ಮಾಡಿರುವ ಮಕ್ಕಳಿಗೆ ಕೊಡ ಮಾಡುವ ಜಿಲ್ಲಾಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. 

     5 ರಿಂದ 18 ವರ್ಷದೊಳಗಿರಬೇಕು. ಒಟ್ಟು 14 ಮಕ್ಕಳಿಗೆ ಪ್ರಶಸ್ತಿ ನೀಡಲಾಗುತ್ತದೆ. 10 ಸಾವಿರವು ನಗದು ಬಹುಮಾನ ಒಳಗೊಂಡಿರುತ್ತದೆ.
     ಆಸಕ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜುಲೈ 30ರೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು ಸದರಿ ಕಚೇರಿಯಿಂದ ಪಡೆಯುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಡಳಿತ ನ್ಯಾಯಾಧೀಕರಣ ತರಬೇತಿಗೆ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 10 - ಸಮಾಜ ಕಲ್ಯಾಣ ಇಲಾಖೆಯು ಆಡಳಿತ ನ್ಯಾಯಾಧೀಕರಣ ತರಬೇತಿಗಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
     ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಕಡೆಯ ದಿನಾಂಕಕ್ಕೆ ಕಾನೂನು ಪದವಿಯಲ್ಲಿ ತೇರ್ಗಡೆಯಾಗಿ 2 ವರ್ಷ ಮೀರಿರಬಾರದು. ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. 40ರ ವಯೋಮಿಯೊಳಗಿರಬೇಕು, ವಾರ್ಷಿಕ ಆದಾಯ ಮಿತಿ 2 ಲಕ್ಷ ರೂ. ನಿಗದಿ ಮಾಡಲಾಗಿದೆ.
     ತರಬೇತಿ ಅವಧಿಯಲ್ಲಿ ತಿಂಗಳಿಗೆ 5 ಸಾವಿರ ರೂ. ಶಿಷ್ಯ ವೇತನ ನೀಡಲಾಗುತ್ತದೆ. ಅರ್ಜಿ ಜೊತೆ ಜಾತಿ ವರಮಾನ ದೃಢೀಕರಣ ಅಂಕಪಟ್ಟಿಗಳು ಇತರೆ ಪತ್ರಗಳನ್ನು ದೃಢೀಕರಿಸಿ 2 ಪಾಸ್‍ಪೋಟೋ ಅಳತೆಯ ಭಾವಚಿತ್ರ ಲಗತ್ತಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 30 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳನ್ನು ತಿತಿತಿ.sತಿ.ಞಚಿಡಿ.ಟಿiಛಿ.iಟಿ ನೋಡಬಹುದು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯಿಂದಲೂ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*

  ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*    ಚಾಮರಾಜನಗರ, ಸೆಪ್ಟೆಂಬರ್ 28 :- ಈ ಬಾರಿಯ ರಾಷ್ಟ್ರೀಯ ಲೋ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು