Wednesday, 29 March 2023
29-03-2023 ವಿಧಾನಸಭಾ ಸಾರ್ವತ್ರಿಕ ಚುನಾವಣೆ : ನೀತಿ ಸಂಹಿತೆ ಉಲ್ಲಂಘನೆ ವಿರುದ್ದ ಕ್ರಮ -ಜಿಲ್ಲಾಧಿಕಾರಿ ಡಿ.ಎಸ್. ರಮೇಶ್
Sunday, 26 March 2023
26-03-2023 ಚಾಮರಾಜನಗರ ಸುದ್ದಿ
64ಕ್ಕೂ ಹೆಚ್ಚು ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ನೇರ ನೆರವು : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ
ಚಾಮರಾಜನಗರ. ಮಾರ್ಚ್ 26:- ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಸುಮಾರು 64ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಡಿಬಿಟಿ ಮೂಲಕ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ, ಪ್ರೋತ್ಸಾಹಧನ ಹಾಗೂ ಇತರೆ ಸೌಲಭ್ಯಗಳು ಜಮೆಯಾಗುತ್ತಿದೆ ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಗುಂಡ್ಲುಪೇಟೆಯ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಅಭಿವೃದ್ದಿ ಕಾರ್ಯವು ಜನರ ಸಕ್ರಿಯ ಸಹಭಾಗಿತ್ವ ಮತ್ತು ಸಹಕಾರವಿಲ್ಲದೆ ಪೂರ್ಣವಾಗುವುದಿಲ್ಲ. ಸಧೃಢ ಭಾರತ ನಿರ್ಮಾಣಕ್ಕೆ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ, ಪ್ರಧಾನಮಂತ್ರಿ ಉಜ್ವಲ್ ಯೋಜನೆ, ರಾಷ್ಟ್ರೀಯ ಆರೋಗ್ಯ ಮಿಷನ್, ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ ಸೇರಿದಂತೆ ಹಲವು ಯೋಜನೆಗಳು ಜಾರಿಯಲ್ಲಿವೆ ಎಂದರು.
ಗಡಿ ಜಿಲ್ಲೆ ಚಾಮರಾಜನಗರದ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದ್ದು, ಕಳೆದ ಡಿಸೆಂಬರ್ 13ರಂದು ಮುಖ್ಯಮಂತ್ರಿಯವರು ಜಿಲ್ಲೆಗೆ ಭೇಟಿ ನೀಡಿ ಸುಮಾರು 1,099 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಚಾಮರಾಜನಗರ ಮತ್ತು ಹನೂರಿನಲ್ಲಿ ನಡೆದ ಮುಖ್ಯಮಂತ್ರಿಯವರ ಎರಡು ಕಾರ್ಯಕ್ರಮಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿದ ಜಿಲ್ಲೆಯ ಜನತೆಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
2022-23ನೇ ಸಾಲಿನಲ್ಲಿ ಪ್ರವಾಹದಿಂದ ಹಾನಿಯಾದ 1,750 ಮನೆಗಳಿಗೆ 12.78 ಕೋಟಿ ಪರಿಹಾರ ಮಂಜೂರು ಮಾಡಲಾಗಿದೆ. ಪ್ರವಾಹದಿಂದ ಹಾನಿಗೀಡಾದ 8,052 ಹೆಕ್ಟೇರ್ ವಿಸ್ತೀರ್ಣದ 14,949 ರೈತ ಫಲಾನುಭವಿಗಳಿಗೆ 15 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಸುತ್ತುನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 2,432 ಸ್ವ ಸಹಾಯ ಸಂಘಗಳಿಗೆ 35.70 ಕೋಟಿ ಸಮುದಾಯ ಬಂಡವಾಳ ನಿಧಿ ನೀಡಲಾಗಿದೆ ಎಂದರು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಇದುವರೆಗೆ 3,176 ಫಲಾನುಭವಿಗಳಿಗೆ ಒಟ್ಟು 2,541 ಲಕ್ಷ ಸಹಾಯಧನ ನೀಡಲಾಗಿದೆ. ನರೇಗಾ ಯೋಜನೆಯಡಿ ಈವರೆಗೆ 5.05 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದ್ದು 1,435 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಉಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸ್ವಚ್ಚತಾ ಅಭಿಯಾನದ ಮೂಲಕ ಪ್ರತಿಯೊಬ್ಬರ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಹೆಣ್ಣು ಮಕ್ಕಳ ಹಿತದೃಷ್ಠಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಹೆಣ್ಣು ಮಕ್ಕಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹಿಳಾ ಪೂರಕ ಯೋಜನೆಗಳಿಂದ ರಾಜ್ಯದ ಉನ್ನತ ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ಮಹಿಳೆಯರು ಮುಂದಿದ್ದಾರೆ. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ ಎಂದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಇತರೆ ಗಣ್ಯರು ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. ವಿವಿಧ ಇಲಾಖೆಗಳು ತೆರೆದಿದ್ದ ಯೋಜನೆ ಮಾಹಿತಿ ಮಳಿಗೆಗಳನ್ನು ಉದ್ಘಾಟಿಸಿದರು.
ವಿಧಾನಪರಿಷತ್ತಿನ ಸದಸ್ಯರಾದ ವೈ. ನಾರಾಯಣಸ್ವಾಮಿ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಪಿ. ಗಿರೀಶ್, ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್, ಸದಸ್ಯರಾದ ಜಿ.ಎಸ್. ಕಿರಣ್, ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಗೀತಾ ಹುಡೇದ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
----------
ಆನೆಮಡುವಿನ ಕೆರೆಗೆ ನೀರು ತುಂಬಿಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಚಾಲನೆ
ಚಾಮರಾಜನಗರ. ಮಾರ್ಚ್ 26 - ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಆನೆಮಡುವಿನ ಕೆರೆಗೆ ನೀರು ತುಂಬಿಸುವ ಕಾಮಗಾರಿಗೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆ ಅಭಿವೃಧ್ದಿಗೆ ಮೂಲ ಸೌಲಭ್ಯಗಳು ಅಗತ್ಯವಾಗಿವೆ. ಈ ನಿಟ್ಟಿನಲ್ಲಿ ಕ್ರಮ ವಹಿಸಿದ್ದು, ಇಂದು ಈ ಭಾಗದ ಜನರ ಬೇಡಿಕೆಯಂತೆ ಆನೆಮಡುವಿನ ಕೆರೆಗೆ ನೀರು ಹರಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದು ಒಳ್ಳೆಯ ಕೆಲಸ. ಇದರ ಸದುಪಯೋಗ ಮಾಡಿಕೊಳ್ಳಿ ಎಂದರು.
ಮುಖ್ಯಮಂತ್ರಿಗಳು ಎಲ್ಲಾ ವರ್ಗದವರಿಗು ಸಮಾನತೆ ಕೊಟ್ಟು ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಜಿಲ್ಲೆಯ ವಿವಿಧ ಗ್ರಾಮಗಳ ಮೂಲ ಸೌಕರ್ಯ ಅಭಿವೃದ್ದಿಗೆ 26.5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 100 ರಿಂದ 150 ಎಕರೆ ಜಮೀನು ಲಭ್ಯವಾದರೆ 10 ಸಾವಿರ ಎಕರೆಗೆ ನೀರಾವರಿ ಸೌಲಭ್ಯಕ್ಕೆ ಹೊಸದಾಗಿ ಕೆರೆ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.
ಶಿಕ್ಷಣ, ನೀರಾವರಿ, ವಿದ್ಯುತ್ ಇನ್ನಿತರ ಸೌಕರ್ಯಗಳು ಪ್ರಗತಿಗೆ ಪೂರಕವಾಗಿವೆ. ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ನಮ್ಮೆಲ್ಲರ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ರೈತ ಮುಖÀಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ ಆನೆಮಡುವಿನ ಕೆರೆಗೆ ನೀರು ಹರಿಸಲು ಮುಂದಾಗಿರುವುದರಿಂದ ಈ ಭಾಗದ ಕೃಷಿ ಪಂಪ್ಸೆಟ್ಗಳಿಗೆ ಅಂತರ್ಜಲ ಹೆಚ್ಚಳಕ್ಕೆ ಸಹಾಯವಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೆರೆಗೆ ನೀರು ತುಂಬಿಸುವ ಭರವಸೆಯನ್ನು ಈಡೇರಿಸಿದ್ದು, ಕಾಮಗಾರಿ ಆರಂಭಕ್ಕೆ ಚಾಲನೆ ದೊರೆತಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ, ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ಮುಖಂಡರಾದ ಎ.ಆರ್. ಬಾಲರಾಜು, ಪ್ರಭುಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ನಾಗಣ್ಣ, ರಾಮಚಂದ್ರ, ಶಿವಬಸಪ್ಪ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
---------
ವಸತಿ ಯೋಜನೆಗಳಲ್ಲಿ ಮೂಲಸೌಕರ್ಯಕ್ಕೆ ವಿಶೇಷ ಆದ್ಯತೆ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ
ಚಾಮರಾಜನಗರ. ಮಾರ್ಚ್ 26 - ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಸೌಲಭ್ಯವನ್ನು ಕಲ್ಪಿಸುವಾಗ ಮೂಲ ಸೌಕರ್ಯಗಳಿಗೆ ವಿಶೇಷ ಆದ್ಯತೆ ನೀಡುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ದಿ ಕೋಶ ಮತ್ತು ನಗರಸಭೆ ವತಿಯಿಂದ ನಗರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮಹಿಳೆಯರು ಹಾಗೂ ಪೌರಕಾರ್ಮಿಕರಿಗೆ ವಿಶೇಷ ಸವಲತ್ತುಗಳು, ಮನೆಗಳ ಹಸ್ತಾಂತರ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.
ವಸತಿ ಯೋಜನೆ ನೀಡುವಾಗಲೇ ನೀರು, ಶೌಚಾಲಯ, ಇನ್ನಿತರ ಮೂಲ ಸೌಲಭ್ಯಗಳು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ದೂರದೃಷ್ಠಿಯಿಂದ ಬಡವರ ಕೆಲಸ ಮಾಡಿಕೊಡಬೇಕು. ಎಲ್ಲಿಯೂ ತೊಂದರೆ ಆಗದ ಹಾಗೆ ಜನರಿಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ವಸತಿ ಯೋಜನೆ ಸಿಕ್ಕರೆ ಅವರ ಜೀವನದಲ್ಲಿ ಆನಂದ, ನೆಮ್ಮದಿ ಕಾಣಬಹುದು. ಭವಿಷ್ಯದ ಹಿತದೃಷ್ಠಿಯಿಂದ ಮನೆಗಳನ್ನು ನೀಡಬೇಕಾಗುತ್ತದೆ. ಒಳ್ಳೆಯ ಕಾರ್ಯದಲ್ಲಿ ಎಲ್ಲರು ತೊಡಗಿಕೊಳ್ಳೋಣ ಎಂದು ಸಚಿವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ವಸತಿ, ಮೂಲ ಸೌಕರ್ಯಗಳು ಜನರಿಗೆ ಅತ್ಯಗತ್ಯವಾಗಿವೆ. ಮಹಿಳೆಯರಿಗೆ ಇಂದು ನೀಡಲಾಗುತ್ತಿರುವ ಹೊಲಿಗೆಯಂತ್ರಗಳಿಂದ ಆರ್ಥಿಕವಾಗಿ ಅನುಕೂಲವಾಗಲಿದೆ. ಸೌಲಭ್ಯಗಳಿಂದ ಜನರ ಜೀವನ ಹಸನಾಗಲಿ ಎಂದು ಆಶಿಸಿದರು.
ಇದೇ ವೇಳೆ ಗಣ್ಯರು ಮಹಿಳೆಯರಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ, ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳ ಕೀ ಹಸ್ತಾಂತರಿಸಿದರು.
ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಉಪಾಧ್ಯಕ್ಷರಾದ ಸುಧಾ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭಾ ಸದಸ್ಯರಾದ ಮನೋಜ್ ಪಟೇಲ್, ಮಹೇಶ್, ಕಲಾವತಿ, ಶಿವರಾಜ್, ರಾಘವೇಂದ್ರ, ನಗರಸಭೆ ಪೌರಾಯುಕ್ತರಾದ ಎಸ್.ವಿ. ರಾಮ್ದಾಸ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
---
ಶಂಕರದೇವರ ಗುಡ್ಡದ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ
ಚಾಮರಾಜನಗರ. ಮಾರ್ಚ್ 26 - ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದ ಶಂಕರದೇವರ ಗುಡ್ಡದ ಬಳಿ ರಸ್ತೆ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ದೇವಾಲಯದ ಭಕ್ತಾಧಿಗಳಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಬೇಕಿದೆ. ಈ ಉದ್ದೇಶದಿಂದ ರಸ್ತೆ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ದೇವಾಲಯ ಸುತ್ತಮುತ್ತಲ ಪ್ರದೇಶ ಸುಂದರವಾಗಿದೆ. ದೇವಾಲಯದ ಅಭಿವೃದ್ದಿಗೆ ಆದ್ಯತೆ ನೀಡಿ ಇನ್ನಷ್ಟು ಸೌಕರ್ಯಗಳನ್ನು ನೀಡುವ ಮೂಲಕ ಹೆಚ್ಚು ಭಕ್ತಾದಿಗಳು ಬರುವಂತಾಗಬೇಕು. ಇದಕ್ಕೆ ಪೂರಕವಾಗಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಉಪವಿಭಾಗಾಧಿಕಾರಿ ಗೀತಾ ಹುಡೇದ, ಮುಖಂಡರಾದ ಮಂಗಲ ಶಿವಕುಮಾರ್, ಉಪ್ಪಾರ ಶ್ರೀಗಳಾದ ಮಂಜುನಾಥಸ್ವಾಮಿ, ಗೌಡಿಕೆ ಮಹದೇವಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಆರ್.ಸಿ. ಕೆಂಪರಾಜು, ನಾಗು ರಮೇಶ್ ಇತರರು ಈ ಸಂದರ್ಭದಲ್ಲಿ ಇದ್ದರು.
Thursday, 26 January 2023
26-01-2023 ಚಾಮರಾಜನಗರ
ಜಗಜ್ಯೋತಿ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರಿಂದ ಭೂಮಿಪೂಜೆ
ಚಾಮರಾಜನಗರ, ಜನವರಿ 26:- ಜಗಜ್ಯೋತಿ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್ಕುಮಾರ್ ರಂಗಮಂದಿರದ ಮುಂಭಾಗ ಭೂಮಿಪೂಜೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇತಿಹಾಸ ಪುರುಷರು, ಸಾಮಾಜಿಕ ಸುಧಾರಕರ ಪುತ್ಥಳಿ ನಿರ್ಮಾಣ ಮಾಡುವಾಗ ದೂರದೃಷ್ಠಿ ಚಿಂತನೆ ಇರಬೇಕಿದೆ. ಜಿಲ್ಲಾಕೇಂದ್ರದಲ್ಲಿ ಬಸವೇಶ್ವರರ ಪುತ್ಥಳಿಯನ್ನು ಅಚ್ಚುಕಟ್ಟಾಗಿ ನಿರ್ಮಿಸಲು ಅಗತ್ಯವಿರುವ ಸಂಪೂರ್ಣ ಅನುದಾನವನ್ನು ಸರ್ಕಾರದಿಂದ ದೊರಕಿಸಲಾಗುವುದು ಎಂದರು.
ಸಮಾಜ ಸುಧಾರಣೆಗೆ ಶ್ರಮಿಸಿದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬಸವೇಶ್ವರರು ಸದಾ ಸ್ಮರಣೀಯರು. ಎಂಟುನೂರು ವರ್ಷಗಳ ಹಿಂದೆಯೇ ಬಸವಣ್ಣನವರು ಕಾಯಕ ತತ್ವದ ಮಹತ್ವ ಸಾರಿದವರು. ಸಮಾಜದ ವ್ಯವಸ್ಥೆಗೆ ಚಿಂತನೆ ನಡೆಸಿದವರು. ಬಸವೇಶ್ವರರ ಪ್ರತಿಮೆ ನಿರ್ಮಾಣಕ್ಕೆ ಪ್ರಸ್ತಾವನೆಗೆ ಅನುಮತಿ ಬಂದಿದೆ. ಈ ಹಿನ್ನೆಲೆಯಲ್ಲಿ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಚಾಮರಾಜನಗರಕ್ಕೆ ಐತಿಹಾಸಿಕ ಹಿನ್ನೆಲೆ ಇದೆ. ಇಂತಹ ಸ್ಥಳದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪನೆಯಾಗುತ್ತಿದೆ. ಪುತ್ಥಳಿ ಚೆನ್ನಾಗಿ ಮೂಡಿಬರಬೇಕು. ಪುತ್ಥಳಿ ಸೇರಿದಂತೆ ಇದಕ್ಕೆ ಸಂಬಂಧಿಸಿದ ಇತರೆ ಕೆಲಸಗಳನ್ನು ಸಹ ನಿರ್ವಹಿಸಬೇಕು. ಸಾಕಷ್ಟು ಅರ್ಥಪೂರ್ಣ ಹಾಗೂ ಅಕರ್ಷಕವಾಗಿ ನಿರ್ಮಾಣ ಕಾರ್ಯ ಆಗಬೇಕು. ಈ ಹಿನ್ನೆಲೆಯಲ್ಲಿ ಅಗತ್ಯ ಸೂಚನೆ ನೀಡಲಾಗುತ್ತಿದೆ ಎಂದರು.
ಪುತ್ಥಳಿ ನಿರ್ಮಿಸುವ ಕಾರ್ಯ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಪುತ್ಥಳಿ ಅಚ್ಚುಕಟ್ಟಾಗಿ ರೂಪುಗೊಳ್ಳಬೇಕಿದ್ದು, ಉತ್ತಮ ವಾಸ್ತುಶಿಲ್ಪಿಯಿಂದ ನಿರ್ಮಾಣವಾಗಬೇಕಿದೆ. ನಿರ್ಮಾಣ ಕಾರ್ಯದ ನೀಲಿ ನಕಾಶೆ ತಯಾರಿಸಿ ಅಗತ್ಯವಿರುವ ಹೆಚ್ಚಿನ ಅನುದಾನ, ವಿವರ ಎಲ್ಲವನ್ನು ಒಂದು ವಾರದೊಳಗೆ ಸಲ್ಲಿಸಲು ಸೂಚಿಸಿದ್ದೇನೆ. ತಕ್ಷಣವೇ ಪುತ್ಥಳಿ ನಿರ್ಮಾಣ ಸಂಬಂಧ ಅಗತ್ಯ ಕ್ರಮ ವಹಿಸಲಿದ್ದು, 15ರಿಂದ 20 ದಿನದೊಳಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಣ್ಣ ಅವರು ತಿಳಿಸಿದರು.
ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಸಮಾಜದ ಮುಖಂಡರಾದ ಮೂಡ್ಲುಪುರ ನಂದೀಶ್, ಹಂಗಳ ನಂಜಪ್ಪ, ಆಲೂರು ಮಲ್ಲು, ಆರ್, ಸುಂದರ್, ಕೆಲ್ಲಂಬಳ್ಳಿ ಸೋಮನಾಯ್ಕ, ದಯಾನಿಧಿ, ಕೊತ್ತಲವಾಡಿ ಕುಮಾರ್, ಬಿ.ಕೆ. ರವಿಕುಮಾರ್, ಡಿ. ನಾಗೇಂದ್ರ, ನಾಗೇಶ್, ಗುಂಡ್ಲುಪೇಟೆ ಸುರೇಶ್, ಕಾಳನಹುಂಡಿ ಗುರುಸ್ವಾಮಿ, ರತ್ನಮ್ಮ ಬಸವರಾಜು, ವಿಶ್ವನಾಥ್, ಲೋಕೇಶ್, ಗುರುಸ್ವಾಮಿ, ಪುರುಷೋತ್ತಮ್, ಮಂಗಲ ಶಿವಕುಮಾರ್, ಹೊಸೂರು ನಟೇಶ್, ಸ್ವಾಮಿ, ಇತರರು ಇದ್ದರು.
ಮುಖ್ಯಮಂತ್ರಿಗಳ ಗ್ರಾಮಿಣ ನಿವೇಶನ ಯೋಜನೆಯಡಿ 1200 ನಿವೇಶನ ಹಂಚಿಕೆಗೆ ಕ್ರಮ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ
ಚಾಮರಾಜನಗರ, ಜನವರಿ 26 :- ಮುಖ್ಯಮಂತ್ರಿಗಳ ಗ್ರಾಮೀಣ ನಿವೇಶನ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಸ್ತುತ 60 ಎಕರೆ ಜಮೀನು ಲಭ್ಯವಿದ್ದು, ಸದರಿ ಜಮೀನಿನಲ್ಲಿ ಅರ್ಹ ನಿವೇಶನ ರಹಿತರಿಗೆ 1200 ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲಾಗುತ್ತಿದ್ದು, ಈಗಾಗಲೇ 174 ಫಲಾ£ುÀಭವಿಗಳಿಗೆ ಹಕ್ಕುಪತ್ರವನ್ನು ನೀಡಲಾಗಿದೆ ಎಂದು ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿರತ ವತಿಯಿಂದ ಆಯೋಜಿಸಲಾಗಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು.
ವಿವಿಧ ವಸತಿ ಯೋಜನೆಯಡಿ ಪ್ರಸ್ತುತ ಸಾಲಿಗೆ 4920 ಫಲಾನುಭವಿಗಳ ಆಯ್ಕೆ ಗುರಿ ನಿಗಧಿಪಡಿಸಿ, ಒಟ್ಟು 4663 ಫಲಾನುಭವಿಗಳಿಗೆ ಮನೆ ಮಂಜೂರಾತಿ ಕಾಮಗಾರಿ ಪತ್ರ ನೀಡಲಾಗಿದೆ. ಪ್ರಗತಿಯಲ್ಲಿದ್ದ 11,667 ಮನೆಗಳ ಪೈಕಿ ಈ ಸಾಲಿನಲ್ಲಿ 3135 ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ವಸತಿ ಫಲಾನುಭವಿಗಳು ತಮ್ಮ ನಿವೇಶನವನ್ನು ಸರ್ಕಾರಕ್ಕೆ ಅಡಮಾನ ಇಡುವುದರಿಂದ ಅನುಭವಿಸುತ್ತಿದ್ದ ತೊಂದರೆಯನ್ನು ಮನಗಂಡು ಅಡಮಾನಕ್ಕೆ ಸಂಪೂರ್ಣ ವಿನಾಯಿತಿ ನೀಡಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ವಸತಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿಯನ್ನು ಗಾವ್ರಿುೀಣ ಪ್ರದೇಶದಲ್ಲಿ ರೂ. 1.20 ಲಕ್ಷ ಕ್ಕೆ ಹಾಗೂ ನಗರ ಪ್ರದೇಶದಲ್ಲಿ ರೂ. 2 ಲಕ್ಷಕ್ಕೆ ಏರಿಸಲಾಗಿದೆ ಎಂದರು
ಭಾರತವು ಸಾರ್ವಭೌಮ ಗಣತಂತ್ರ ದೇಶ ಎಂದು ಘೋಷಿಕೊಂಡು ಇದೀಗ 73 ವರ್ಷಗಳು ಸಂದಿವೆ. ಸಂವಿಧಾನವನ್ನು ಅಳವಡಿಸಿಕೊಂಡ ಉದ್ದೇಶವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಮೂಲಭೂತ ಹಕ್ಕುಗಳಾದ ಸ್ವಾತಂತ್ರ್ಯ, ಸಮಾನತೆ, ಜೊತೆಗೆ ಧಾರ್ಮಿಕ, ಸಾಂಸ್ಕøತಿಕ, ಶೈಕ್ಷಣಿಕ ಮತ್ತು ಇತರೆ ಹಕ್ಕುಗಳನ್ನು ನೀಡುವುದಾಗಿದೆ. ಬಲಿಷ್ಠ ಒಕ್ಕೂಟ ಸರ್ಕಾರವನ್ನು ರೂಪಿಸುವ ಅತ್ಯುತ್ತಮ ಮಾದರಿ ಸಂವಿಧಾನವನ್ನು ಅಳವÀಡಿಸಿಕೊಂಡಿರುವುದು ನಮ್ಮ ದೇಶದ ಹೆಮ್ಮೆಯ ಸಂಕೇತ. ಭಾರತ ಸಂವಿಧಾನವು ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ. ಇದು ಡಾ. ಬಿಆರ್. ಅಂಬೇಡ್ಕರ್ರವರ ಅವಿರತ ಶ್ರಮದ ಫಲ. ಅದಕ್ಕಾಗಿಯೇ ನಾವು ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು “ಸಂವಿಧಾನ ಶಿಲ್ಪಿ” ಎಂದು ಸ್ಮರಿಸುತ್ತೇವೆ. ಸಂವಿಧಾನ ಕರಡು ಸಮಿತಿಯ ಸಲಹೆಗಾರರಾಗಿದ್ದ ಕನ್ನಡಿಗ ಬೆನಗಲ್ ನರಸಿಂಗರಾವ್ ಅವರ ಕೊಡುಗೆಯೂ ಇಲ್ಲಿ ಸ್ಮರಣಾರ್ಹವಾಗಿದೆ ಎಂದರು.
ಗಣರಾಜ್ಯದ ಈ 73 ವರ್ಷಗಳಲ್ಲಿ ದೇಶವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದೆ. ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಾರ್ವಜನಿಕ ಆರೋಗ್ಯ, ಶಿಕ್ಷಣ, ಮೂಲಸೌಕರ್ಯ, ಪರಿಸರ ರಕ್ಷಣೆ, ಶಾಂತಿ ಪಾಲನೆ ಜೊತೆಗೆ ನೆಲ-ಜಲ, ಸಂಸ್ಕøತಿ ಹಾಗೂ ಪರಂಪರೆಯ ಸಂರಕ್ಷಣೆ ಹೀಗೆ ದೇಶವು ವಿವಿಧ ಆಯಾಮಗಳಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಭಾರತದ ಕೀರ್ತಿ ವಿಶ್ವಾದ್ಯಂತ ಹರಡಿದೆ. ಕರ್ನಾಟಕದ ಪಾಲಿಗೆ ಅಭಿವೃದ್ಧಿಯಲ್ಲಿ ಸುವರ್ಣಯುಗ ಪ್ರಾರಂಭವಾಗಿದೆ. ನಮ್ಮ ಸರ್ಕಾರದ ಯೋಜನೆ ಹಾಗೂ ಕಾರ್ಯಕ್ರಮಗಳು ಕರ್ನಾಟಕದ ಚಿತ್ರಣ ಬದಲಿಸಲಿದೆ. ಅರೋಗ್ಯ, ಶಿಕ್ಷಣ, ವಸತಿ, ಕೈಗಾರಿಕೆ, ಕೃಷಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಮೂಲಸೌಕರ್ಯ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯಗಳಲ್ಲಿ ಪ್ರಗತಿಯತ್ತ ಸಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಜನತೆಯ ಆಶಯ ಸಾಕಾರಗೊಳಿಸಲು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ಕಟಿಬದ್ದವಾಗಿದೆ. ನವ ಭಾರತ-ನವ ಕರ್ನಾಟಕ ನಿರ್ಮಾಣಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸಿದೆ. ರೈತ ವಿದ್ಯಾನಿಧಿ ಯೋಜನೆಯಡಿ 10 ಲಕ್ಷ ರೈತ ವಿದ್ಯಾರ್ಥಿಗಳಿಗೆ 440 ಕೋಟಿ ರೂ. ಗಳ ವಿದ್ಯಾರ್ಥಿವೇತನ, ರೈತ ಶಕ್ತಿ ಯೋಜನೆಯಡಿ ರೂ. 400 ಕೋಟಿ ಡೀಸೆಲ್ ಸಹಾಯಧನÀ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಇದುವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಂದಾಜು 1.05 ಕೋಟಿ ರೈತ ಫಲಾನುಭವಿಗಳಿಗೆ 14790 ಕೋಟಿ ರೂ. ಗಳ ಆರ್ಥಿಕ ನೆರವು, ಕಳೆದ ಎರಡು ವರ್ಷಗಳಲ್ಲಿ 33.21 ಲಕ್ಷ ರೈತರಿಗೆ 5644 ಕೋಟಿ ರೂ.ಗಳ ಬೆಳೆ ಪರಿಹಾರ, ವಿವಿಧ ವಸತಿ ಯೋಜನೆಯಡಿ 5 ಲಕ್ಷ ಹೊಸ ಮನೆಗಳ ಗುರಿ, 1412 ಕೋಟಿ ರೂಗಳ ವೆಚ್ಚದಲ್ಲಿ 8100ಕ್ಕೂ ಹೆಚ್ಚು ಶಾಲಾ ಕೊಠಡಿಗಳ ನಿರ್ಮಾಣ, ಕಟ ್ಟಡ ಕಾರ್ಮಿಕರ ಶ್ರೇಯೋಭಿವೃದ್ದಿಗೆ 2610 ಕೋಟಿ ರೂ.ಗಳ ಯೋಜನೆ, ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸಲು ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 504 ಕೋಟಿ ರೂ.ಗಳ ವೆಚ್ಚದÀ “ಕ್ರೀಡಾ ಅಂಕಣ” ನಿರ್ಮಾಣ, ಇತ್ಯಾದಿ ಜನಪರ ಯೋಜನೆಗಳು ನಮ್ಮ ಸರ್ಕಾರದÀ ದೂರದೃಷ್ಠಿ ಮತ್ತು ಅಭಿವೃದ್ಧಿ ಪರ ಚಿಂತನೆಗೆ ಸಾಕ್ಷಿಯಾಗಿವೆ ಎಂದರು.
ದೇಶದ ರಕ್ಷಣೆಯಲ್ಲಿ ತಮ್ಮ ಬದುಕನ್ನೇ ಮುಡುಪಾಗಿಡುವ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗೆ ಸರ್ಕಾರವು ಬದ್ದವಾಗಿದ್ದು, ರಾಜ್ಯದ ಸೈನಿಕರು ಸೇವೆಯಲ್ಲಿದ್ದಾಗ ಮೃತಪಟ್ಟರೆ ಅವರ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ. ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಕ್ಷೇತ್ರದಲ್ಲೂ ಸಹ ಗಣನೀಯ ಸಾಧನೆ ಮಾಡಲಾಗಿದೆ. ವಿವಿಧ ವಸತಿ ಯೋಜನೆಯಡಿ ಕಳೆದ 3 ವರ್ಷಗಳಲ್ಲಿ ಸುಮಾರು 5 ಲಕ್ಷ ಮನೆಗಳನ್ನು ನಿರ್ಮಿಸಲಾಗಿದ್ದು, ಈ ಮನೆಗಳ ಫಲಾನುಭವಿಗಳಿಗೆ ಸುಮಾರು 7300 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ. ನೆರೆ ಹಾವಳಿಯಿಂದ ಸಂತ್ರಸ್ಥರಾದ ಸುಮಾರು 1.75 ಲಕ್ಷ ಮನೆಗಳಿಗೆ ಮೊದಲ ಬಾರಿಗೆ ಜಿ.ಪಿ.ಎಸ್ ತಂತ್ರಜ್ಞಾನ ಅಳವಡಿಸಿ ರೂ. 2456 ಕೋಟಿ ಪರಿಹಾರ ನೇರವಾಗಿ ಸಂತ್ರಸ್ಥರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಸುಮಾರು 5 ಸಾವಿರ ಎಕರೆ ಜಮೀನನ್ನು ವಸತಿ ನಿವೇಶನಗಳ ಅಭಿವೃದ್ಧಿಗಾಗಿ ಕಾಯ್ದಿರಿಸಲಾಗಿದ್ದು, ಸುಮಾರು 1.50 ಲಕ್ಷ ನಿವೇಶನಗಳ ಹಂಚಿಕೆಗೆ ಕ್ರಮ ವಹಿಸಲಾಗಿದೆ. ರಾಜ್ಯದ 1821 ಘೋಷಿತ ಕೊಳಗೇರಿಗಳ 3.37 ಲಕ್ಷ ಕುಟುಂಬಗಳಿಗೆ ಅವರ ಸ್ವತ್ತಿನ ಭೂ ಮಾಲೀಕತ್ವದ ಹಕ್ಕನ್ನು ಕ್ರಯ ಪತ್ರದ ಮೂಲಕ ನೀಡುವ ಐತಿಹಾಸಿಕ ತೀರ್ಮಾನ ಮಾಡಿ ಈಗಾಗಲೇ ಸುಮಾರು 1.68 ಲಕ್ಷ ಕುಟುಂಬಗಳ ಸಮೀಕ್ಷೆ ಕೈಗೊಂಡು, 90 ಸಾವಿರಕ್ಕೂ ಹೆಚ್ಚಿನ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡಿ, ನೋಂದಣಿ ಮಾಡಿ ಭೂಮಾಲೀಕತ್ವ ನೀಡಲಾಗಿದೆ ಎಂದರು.
ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯಡಿ ಶಿವಮೊಗ್ಗ, ಹಾಸನ ಮತ್ತು ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ರಾಯಚೂರಿನಲ್ಲಿ 219 ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆÉಗೆ 240 ಎಕರೆ ಜಮೀನನ್ನು ಸ್ವಾಧೀನಪಡಿಸಲು ಅನುಮೋದನೆ ನೀಡಿದ್ದು, ಈಗಾಗಲೇ 50 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಅಲ್ಲದೇ, ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲು ಸಚಿವ ಸಂಪುಟದ ಅನುಮೋದನೆಯನ್ನು ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಸುಮಾರು 15767 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, 148 ಕಿ.ಮೀ. ಉದ್ದದ ರೈಲ್ವೆ ಜಾಲವನ್ನು 2026ರ ಒಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಚಾಮರಾಜನಗರ ಜಿಲ್ಲೆಯು ಪ್ರಕೃತಿ ಸೌಂದರ್ಯದ ಹಾಗೂ ಜಾನಪದ ಕಲೆಗಳ ತವರೂರಾಗಿದ್ದು, ಮಲೆ ಮಹದೇಶ್ವರಸ್ವಾಮಿ, ಮಂಟೇಸ್ವಾಮಿ ಹಾಗೂ ಬಿಳಿಗಿರಿರಂಗನಾಥಸ್ವಾಮಿಯ ಬಗ್ಗೆ ಜಾನಪದ ಮಹಾ ಕಾವ್ಯಗಳನ್ನು ಜಗತ್ತಿಗೆ ಕೊಟ್ಟ ಹೆಮ್ಮೆಯ ಜಿಲ್ಲೆಯಾಗಿದೆ. ಎರಡು ಹುಲಿ ಸಂರಕ್ಷಿತ ಪ್ರದೇಶ, ಎರಡು ವನ್ಯಜೀವಿಧಾಮಗಳನ್ನು ಹೊಂದಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಜಿಲ್ಲೆ ಎಂದು ಪ್ರಸಿದ್ದಿಯಾಗಿದೆ. ಸ್ವಾತಂತ್ರ್ಯ ಹೋರಾಟಗಾರರಾದ ದೊಡ್ಡರಾಯಪೇಟೆ ಶಂಕರಪ್ಪ, ರಾಮಸಮುದ್ರ ಆರ್.ಎಸ್. ಶ್ರೀನಿವಾಸರಾವ್, ಕರಿನಂಜನಪುರ ತೋಟದಪ್ಪ, ಶ್ರೀಮತಿ ಲಲಿತ ಜಿ. ಟ್ಯಾಗೇಟ್ರವರು ಈ ಜಿಲ್ಲೆಯವರು. ಕರ್ನಾಟಕ ರತ್ನ ವರನಟ ಡಾ. ರಾಜ್ಕುಮಾರ್ ಹಾಗೂ ಡಾ. ಪುನೀತ್ ರಾಜ್ಕುಮಾರ್ರವರು ನಮ್ಮ ಜಿಲ್ಲೆಯವರು ಎಂಬುದು ನಮಗೆ ಹೆಮ್ಮೆ. ಗಡಿ ಜಿಲ್ಲೆಯಾದ ಚಾಮರಾಜನಗರದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ನುಡಿದರು.
ದಿನಾಂಕ:13.12.2022ರಂದು ರಾಜ್ಯದ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಜಿಲ್ಲೆಗೆ ಭೇಟಿ ನೀಡಿ, ಒಟ್ಟು 1099 ಕೋಟಿಗಳಷ್ಟು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಜಿಲ್ಲೆಯ ಸಮಸ್ತ ನಾಗರಿಕರಿಗೆ ಮತ್ತು ಜನಪ್ರತಿನಿಧಿಗಳಿಗೆ ಮತ್ತೊಮ್ಮೆ ಹೃದಯಪೂರ್ವಕ ವಂದನೆಗಳು. ಭಾರತÀದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನೆಪಿಗಾಗಿ “ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ” ಜಿಲ್ಲೆಯಲ್ಲಿ 15 ಗ್ರಾಮ ಪಂಚಾಯಿತಿಗಳ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಅಗತ್ಯವಿರುವ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. 150 ಕೆರೆಗಳನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಜಿಲ್ಲೆಯ 130 ಗ್ರಾಮ ಪಂಚಾಯತಿಗಳ ಕೆರೆ ಅಭಿವೃದ್ದಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ಹರ್ಘರ್ ತಿರಂಗಾ ಯೋಜನೆಯಡಿ ಜಿಲ್ಲೆಯಲ್ಲಿ 112 ಸ್ವ-ಸಹಾಯ ಸಂಘಗಳ 223 ಮಹಿಳಾ ಸದಸ್ಯರು 130 ಗ್ರಾಮ ಪಂಚಾಯತಿಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ 80 ಸಾವಿರ ರಾಷ್ಟ್ರಧ್ವಜಗಳನ್ನು ತಯಾರಿಸಿ ಮಾರಾಟ ಮಾಡುವುದರೊಂದಿಗೆ ಮಹಿಳಾ ಸದಸ್ಯರಿಗೆ ಆರ್ಥಿಕ ಸದೃಢತೆ ಸಾಧಿಸಲು ನೆರವಾಗಿದೆ. 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ 1750 ಮನೆಗಳಿಗೆ ಒಟ್ಟು 12.78 ಕೋಟಿ ರೂಪಾಯಿಗಳ ಪರಿಹಾರವನ್ನು ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ 8052 ಹೆಕ್ಟೇರ್ ವಿಸ್ತೀರ್ಣದ 14,949 ರೈತ ಫಲಾನುಭವಿಗಳಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆ ಪರಿಹಾರವಾಗಿ ರೂ. 15 ಕೋಟಿಗಳನ್ನು ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಗ್ರಾಮ ಒನ್ ಯೋಜನೆಯು ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಜಿಲ್ಲೆಯಲಿ ್ಲ 121 ಕೇಂದ್ರಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಯವರೆಗೆ 2.64 ಲಕ್ಷ ಸೇವೆಗಳನ್ನು ಒದಗಿಸಲಾಗಿದೆ. ‘ಸುತ್ತು ನಿಧಿ ಯೋಜನೆಯಡಿ’ ಪ್ರತಿ ಸ್ವ-ಸಹಾಯ ಸಂಘಕ್ಕೆ ರೂ. 15 ಸಾವಿರ ಗಳಂತೆ 138 ಸ್ವ-ಸಹಾಯ ಗುಂಪುಗಳಿಗೆ ರೂ. 20 ಲಕ್ಷ ಗಳ ಸುತ್ತು ನಿಧಿಯನ್ನು ಹಾಗೂ ಸಮುದಾಯ ಬಂಡವಾಳ ನಿಧಿಯಡಿ 2349 ಸ್ವ-ಸಹಾಯ ಸಂಘಗಳಿಂದ 9015 ಫಲಾನುಭವಿಗಳಿಗೆ ರೂ. 33 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ನೀಡಲಾಗಿದೆ ಎಂದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 53 ಸಾವಿರ ಕುಟುಂಬಗಳಿಗೆ 87 ಸಾವಿರ ಉದ್ಯೋಗ ನೀಡಲಾಗಿದ್ದು, ಈವರೆಗೆ ರೂ. 116 ಕೋಟಿ ವೆಚ್ಚ ಮಾಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುವರಿ 14062 ವೈಯಕ್ತಿಕ ಗೃಹ ಶೌಚಾಲಯಗಳನ್ನು ಪೂರ್ಣಗೊಳಿಸಲಾಗಿದ್ದು, ಒಟ್ಟಾರೆ ಜಿಲ್ಲೆಯಾದ್ಯಂತ ಈವರೆಗೆ ಸುಮಾರು 2 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಈಡಾಗುವ ರೈತರನ್ನು ಅನಿಶ್ಚಿತತೆಯಿಂದ ಪಾರುಮಾಡಲು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆ ಜಾರಿಗೊಳಿಸಲಾಗಿದ್ದು, ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕವಾಗಿ ಒಟ್ಟಾರೆ ರೂ. 10 ಸಾವಿರ ಆರ್ಥಿಕ ನೆರವು ನೀಡಲಾಗುತ್ತಿದ್ದು, ಈ ಸಾಲಿನಲ್ಲಿ 1.15 ಲಕ್ಷ ರೈತರು ಆರ್ಥಿಕ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು “ಮುಖ್ಯ ಮಂತ್ರಿ ರೈತ ವಿದ್ಯಾ ನಿಧಿ” ಯೋಜನೆಯಡಿ ಇದುವgರೆಗೆ ಜಿಲ್ಲೆಯ 11144 ರೈತರ ಮಕ್ಕಳ ಖಾತೆಗೆ ರೂ. 4.15 ಕೋಟಿ ಜಮೆ ಮಾಡಲಾಗಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಪ್ರಧಾನಮಂತ್ರಿ ಆzರ್ಶ ಗ್ರಾಮ ಯೋಜನೆಯಡಿ 19 ಗ್ರಾಮಗಳನ್ನು ಆಯ್ಕೆಮಾಡಿ ರೂ. 3.47 ಕೋಟಿಗಳ ಅನುದಾನದಲ್ಲಿ ಮೂಲಸೌಕರ್ಯ, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ರೂ. 1.75 ಕೋಟಿಗಳ ವೆಚ್ಚದಲ್ಲಿ ದಿ. ಬಿ. ರಾಚಯ್ಯ ಸ್ಮಾರಕ ಭವನ ನಿರ್ಮಾಣ ಹಾಗೂ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ರೂ. 16 ಕೋಟಿ ವಿದ್ಯಾರ್ಥಿವೇತನವನ್ನು ನೀಡಲಾಗಿದೆ ಎಂದರು.
ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ಜಿಲ್ಲೆಯ ಗ್ರಾಮೀಣ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗಾಗಿ ಒಟ್ಟು ರೂ. 94 ಕೋಟಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ ಉದ್ದದ 24 ರಸ್ತೆಗಳನ್ನು ಅಭಿವೃದ್ದಿಪಡಿಸಲು ರೂ. 143 ಕೋಟಿಗಳ ಅನುದಾನ ಮಂಜೂರಾಗಿದ್ದು, ಈಗಾಗಲೇ ರೂ. 62 ಕೋಟಿಗಳ ಮೊತ್ತದಲ್ಲಿ 57 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಿಸಲಾಗಿದೆ. ಜಿಲ್ಲಾ ಮುಖ್ಯರಸ್ತೆ ಸುಧಾರಣೆಗಳ ಅಡಿಯಲ್ಲಿ ಒಟ್ಟು 84 ಕಿ.ಮೀ ಉದ್ದದ 27 ರಸ್ತೆಗಳನ್ನು ಅಭಿವೃದ್ದಿಪಡಿಸಲು ರೂ. 70 ಕೋಟಿಗಳ ಅನುದಾನ ಮಂಜೂರಾಗಿದ್ದು, 46 ಕಿ.ಮೀ ಉದ್ದದ ರಸ್ತೆ ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು.
ವಿಶೇಷ ಘಟಕ ಯೋಜನೆಯಡಿಯಲ್ಲಿ ರೂ. 18 ಕೋಟಿಗಳ ಅನುದಾನದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣ ಕಾಮಗಾರಿಯನ್ನು ಅನುಷ್ಟಾನ ಮಾಡಲಾಗುತ್ತಿದೆ. ಗಿರಿಜನ ಉಪಯೋಜನೆ ಅಡಿಯಲ್ಲಿ 6.50 ಕೋಟಿ ರೂ. ಗಳ ಅನುದಾನದಲ್ಲಿ ಹನೂರು ತಾಲ್ಲೂಕಿನಲ್ಲಿ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ಅನುಷ್ಟಾನ ಮಾಡಲಾಗುತ್ತಿದೆ. ನಗರೋತ್ಥಾನ ಯೋಜನೆಯಡಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 715 ಕೋಟಿ ರೂ. ಗಳ ಅನುದಾನ ನಿಗಧಿಪಡಿಸಿದ್ದು, 608 ಕೋಟಿ ರೂ.ಗಳ 75 ಕಾಮಗಾರಿಗಳ ಕ್ರಿಯಾಯೋಜನೆ ಅನುಮೋದನೆಯಾಗಿದೆ. ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿ 50 ಕೋಟಿ ರೂ.ಗಳ ಅನುದಾನದ 24 ಕಾಮಗಾರಿಗಳಲ್ಲಿ 17 ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು.
ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಿರುವ 37 ಡೊಂಗ್ರಿ ಗೆರೆಸಿಯಾ ಜನಾಂಗದ ಕುಟುಂಬಗಳಿಗೆ ಹೊಸಮನೆ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯ ಹಾಗೂ ವಿದ್ಯುತ್ ಸರಬರಾಜು ಮಾಡಲು ಒಟ್ಟು ರೂ. 1.80 ಕೋಟಿಗಳ ಅನುದಾನ ಮಂಜೂರಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಭಾಗ್ಯಲಕ್ಷ್ಮಿ ಯೋಜನೆಯನ್ನು ಮರುವಿನ್ಯಾಸಗೊಳಿಸಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆ ಮೂಲಕ ಜಿಲ್ಲೆಯಲ್ಲಿ ಈವರೆಗೆ 70027 ಫಲಾನುಭವಿಗಳಿಗೆ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಹನೂರು, ಗುಂಡ್ಲುಪೇಟೆ, ಕೊಳ್ಳೇಗಾಲ ಮತ್ತು ಯಳಂದೂರು ತಾಲ್ಲೂಕುಗಳ ವ್ಯಾಪ್ತಿಯಲಿ ್ಲ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಒಟ್ಟು 290 ಗ್ರಾಮಗಳಿಗೆ ಅಂದಾಜು ಮೊತ್ತ 406 ಕೋಟಿ ರೂ. ಗಳ ಕಾಮಗಾರಿಯು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ. ಹನೂರು, ಕೊಳ್ಳೇಗಾಲ ಮತ್ತು ಯಳಂದೂರು ತಾಲ್ಲೂಕುಗಳ 373 ಜನವಸತಿಗಳ ಒಟ್ಟು 88522 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕವನ್ನು ಕಲ್ಪಿಸಲು 228 ಕೋಟಿ ರೂ.ಗಳ ಯೋಜನೆ ಕೈಗೆತ್ತಿಕೊಂಡಿದ್ದು, ಇದುವರೆಗೆ 38,678 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದರು.
ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 25 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಒಟ್ಟು ರೂ. 40 ಕೋಟಿ ಬಂಡವಾಳವನ್ನು ನಿರೀಕ್ಷಿಸಲಾಗಿದೆ. ಇದರಿಂದ 462 ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಜಿಲ್ಲೆಯಲ್ಲಿ ಆಯೋಜಿಸಿದ್ದ ಉದ್ಯೋಗಮೇಳದಲ್ಲಿ 33 ಖಾಸಗಿ ಕಂಪನಿಗಳು ಭಾಗವಹಿಸಿದ್ದು, 107 ಉದ್ಯೋಗಾಕಾಂಕ್ಷಿಗಳು ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆದಿರುತ್ತಾರೆ. 120 ಅ¨Às್ಯರ್ಥಿಗಳು ಅಂತಿಮ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ. ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳನ್ನು ಒಗ್ಗೂಡಿಸಿ, ಆರ್ಥಿಕ ಹಾಗೂ ಸಾಮಾಜಿಕ ಸದೃಢತೆಯನ್ನು ಸರ್ವರಿಗೂ ನೀಡಿ, ನಾಡನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ನಮ್ಮ ಗುರಿ ಎಂದು ಸಚಿವರು ನುಡಿದರು.
ಗಣತಂತ್ರ ವ್ಯವಸ್ಥೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವು ಜನರ ಸಕ್ರಿಯ ಸಹಭಾಗಿತ್ವ ಮತ್ತು ಸಹಕಾರ ಇಲ್ಲದೆ ಅರ್ಥಪೂರ್ಣವಾಗಲಾರದು. ಬಲಿಷ್ಠ ಭಾರತದ ನಿರ್ಮಾಣದ ಸಂಕಲ್ಪ ತೊಟ್ಟು ದಿನದ 24 ಗಂಟೆ ಪ್ರಜಾ ಸೇವಕನಂತೆ ದುಡಿಯುತ್ತಿರುವ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರಮೋದಿ ಅವರ ಕೈ ಬಲಪಡಿಸುವುದರ ಜತೆಗೆ ಶಕ್ತ್ತಿಶಾಲಿ ಕರ್ನಾಟಕ ನಿರ್ಮಾಣಕ್ಕೆ ನಾವೆಲ್ಲರೂ ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಪ್ರತಿಜ್ಞೆ ಮಾಡೋಣ. ಬಾಹ್ಯ ಶಕ್ತಿ ಅಷ್ಟೇ ಅಲ್ಲದೆ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡುವ ಘಾತುಕ ಶಕ್ತಿಗಳ ಬಗ್ಗೆ ಜಾಗೃತರಾಗೋಣ. ಎಂತಹ ಪರಿಸ್ಥಿತಿಯಲ್ಲೂ ದೇಶ ಹಾಗೂ ನಮ್ಮ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡೋಣ. ಏಕತೆ ಮತ್ತು ಅಖಂಡತೆ ನಮ್ಮ ಮಂತ್ರವಾಗಬೇಕು ಎಂದರು.
ಜಗತ್ತಿನಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಕರ್ನಾಟಕಕ್ಕೆ ಇದರಲ್ಲಿ ವಿಶೇಷ ಸ್ಥಾನಮಾನವಿದೆ. ಬಹು ಸಂಸ್ಕøತಿ - ಬಹು ಭಾಷೆ ನಮ್ಮ ವಿಶೇಷತೆ. ಸಂಕುಚಿತ ಭಾವನೆ, ಪ್ರಾದೇಶಿಕ ಅಸಮಾನತೆ, ಇತ್ಯಾದಿ ವಿಷಯಗಳನ್ನು ಬದಿಗೊತ್ತಿ ದೇಶದ ಸಮಗ್ರತೆ ಮತ್ತು ಅಖಂಡತೆಯ ನೆರಳಿನಲ್ಲಿ ಅನಕ್ಷರತೆ, ಬಡತನ, ನಿರುದ್ಯೋಗ ನಿರ್ಮೂಲನೆಗೊಳಿಸುವಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ. ಈ ದಿಸೆಯಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
Tuesday, 24 January 2023
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ : ‘ನಾರಿ ಶಕ್ತಿ’ ಅನಾವರಣ
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ : ‘ನಾರಿ ಶಕ್ತಿ’ ಅನಾವರಣ
ನವದೆಹಲಿ, ಜನವರಿ 24 - ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ನಾರಿ ಶಕ್ತಿ ಸ್ತಬ್ಧಚಿತ್ರವು ಸಂಪೂರ್ಣವಾಗಿ ಸಿದ್ಧಗೊಂಡಿದೆ. ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಸ್ತಬ್ಧಚಿತ್ರವು ಜನವರಿ 26 ರಂದು ರಾಜಧಾನಿಯ ಕರ್ತವ್ಯ ಪಥ್ದಲ್ಲಿ (ರಾಜ್ಪಥ್) ಸಾಗುವುದರೊಂದಿಗೆ ಕರ್ನಾಟಕ ಹಿರಿಮೆಯ ಕೀರ್ತಿ ಪತಾಕೆಯನ್ನು ಹಾರಿಸಲಿದೆ. ಇದರೊಂದಿಗೆ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ.
ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಕರ್ನಾಟಕ ರಾಜ್ಯದ ಪಾಲಿಗೆ ಅತ್ಯಂತ ಸ್ಮರಣೀಯವಾದುದು. ಹಲವು ಅಡೆ ತಡೆಗಳನ್ನು ಎದುರಿಸಿ, ಕೊನೆಯ ಹಂತದಲ್ಲಿ ರಾಜ್ಯವು ಪಥ ಸಂಚಲನಕ್ಕೆ ರಹದಾರಿ ಪಡೆದುಕೊಂಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸುವ ಸವಾಲನ್ನು ಹಿಮ್ಮೆಟ್ಟಿಸಿ ಅಚ್ಚರಿಯ ರೀತಿಯಲ್ಲಿ ಸಿದ್ಧಗೊಂಡಿದೆ. ಕರ್ನಾಟಕದ ಹಿರಿಮೆ ಮತ್ತು ಕನ್ನಡ ಅಸ್ಮಿತೆಯ ಪ್ರತೀಕದಂತಿರುವ ಈ ಸ್ತಬ್ಧಚಿತ್ರವು ಕೇವಲ 10 ದಿನಗಳಲ್ಲಿ ರೂಪುಗೊಂಡಿದೆ. ಸ್ತಬ್ಧಚಿತ್ರದ ವೈಶಿಷ್ಟಪೂರ್ಣತೆಯಿಂದಲೇ ಗಮನ ಸೆಳೆಯುವ ಕರ್ನಾಟಕ ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿಯದ್ದು ಅಲ್ಪಾವಧಿಯಲ್ಲಿ ಬೆರಗುಗೊಳಿಸುವಂತಹ ಐತಿಹಾಸಿಕ ಸಾಧನೆಯಂತೆ ಕಂಗೊಳಿಸುತ್ತಿದೆ.
ವಾರ್ತಾ ಇಲಾಖೆಯು ದೆಹಲಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಪರವಾಗಿ ಸ್ತಬ್ಧಚಿತ್ರದೊಂದಿಗೆ ಪ್ರತಿ ಬಾರಿಯೂ ಪಾಲ್ಗೊಳ್ಳುತ್ತದೆ. ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ವಾರ್ತಾ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 14 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಇಂದು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ ಡಾ. ಪಿ.ಎಸ್. ಹರ್ಷ, ಐಪಿಎಸ್ ಅವರು ತಮ್ಮ ಹರ್ಷ ಹಂಚಿಕೊಂಡರು.
2023ರಂದು ನಡೆಯುವ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು 1. ಕರ್ನಾಟಕದ ಮಹಿಳೆಯರ ಶೌರ್ಯ, 2. "ರೇμÉ್ಮ" ಕರ್ನಾಟಕದ ಹೆಮ್ಮೆ 3. ಕರ್ನಾಟಕದ ಪುಷ್ಪೋದ್ಯಮ 4. ಕರ್ನಾಟಕ : ಸಿರಿಧಾನ್ಯದ ನಾಯಕ ಮತ್ತು 5. ನಾರಿ ಶಕ್ತಿ ಎಂಬ ಐದು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಇದರಲ್ಲಿ ಸ್ತ್ರೀ ಸಬಲೀಕರಣವನ್ನು ಬಿಂಬಿಸುವ ನಾರಿ ಶಕ್ತಿ ವಿಷಯವನ್ನು ವಿಷಯ ಆಯ್ಕೆಯ ಪರಿಣತರ ತಂಡವು ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದ ಮೂವರು ಮಹಿಳಾ ಸಾಧಕಿಯರ ಸಾಧನೆಯನ್ನು ಪ್ರದರ್ಶಿಸುತ್ತಿರುವುದಾಗಿ ಆಯುಕ್ತರು ತಿಳಿಸಿದರು.
ಆಜಾದಿ ಕ ಅಮೃತ ಮಹೋತ್ಸವದ ಅಂಗವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರುಗಳ ಸಾಧನೆಗಳನ್ನು ನಾರಿ ಶಕ್ತಿ (ವುಮನ್ ಪವರ್) ಹೆಸರಿನಲ್ಲಿ ರಾಜ್ಯವು 2023ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಪ್ರಸ್ತುತ ಪಡಿಸಿದೆ. ಇವರು ಸಮಾಜಕ್ಕೆ ನೀಡಿದ ನಿಸ್ವಾರ್ಥ ಕೊಡುಗೆಗಾಗಿ ಕೇಂದ್ರ ಸರ್ಕಾರ ಪದ್ಮ ಶ್ರೀ ಪುರಸ್ಕಾರದಿಂದ ಗೌರವಿಸಿದೆ. ಕರ್ನಾಟಕದ ಅತಿ ಹಿಂದುಳಿದ ಹಳ್ಳಿಗಳಲ್ಲಿ, ಸಾಮಾನ್ಯ ಕುಟುಂಬಗಳಲ್ಲಿ ಹುಟ್ಟಿ ಬೆಳೆದರೂ ಇವರÀ ಸಾಧನೆಗೆ ಅವರ ಹುಟ್ಟು - ಜಾತಿ - ಅಂತಸ್ತು ಯಾವುದು ಅಡ್ಡ ಬಂದಿಲ್ಲ. ತಮ್ಮ ಸಾಧನೆಗಳ ಮೂಲಕವೇ ಜಾಗತಿಕವಾಗಿ ಗಮನ ಸೆಳೆದವರು. ಇವರ ಸಾಧನೆಗಾಗಿ ಕರ್ನಾಟಕ ಮತ್ತು ದೇಶವೇ ಹೆಮ್ಮೆಪಡುತ್ತದೆ. ಇದನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಸ್ತಬ್ಧಚಿತ್ರವನ್ನು ರೂಪಿಸಿದೆ ಎಂದು ಅವರು ನುಡಿದರು.
ವಿಷಯ ಆಯ್ಕೆಯ ಬಳಿಕ, ಸ್ತಬ್ಧಚಿತ್ರದ ಮಾದರಿ (ಕೀ ಮಾಡಲ್) ಮತ್ತು ಸಂಗೀತದ ಹಂತವನ್ನು ದಾಟಬೇಕಾಗಿತ್ತು. ಅಂತರರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು. ಯುವ ಸಂಗೀತ ನಿರ್ದೇಶಕ ಪ್ರವೀಣ್ ಡಿ. ರಾವ್ ಅವರ ಕನ್ನಡ ಸಂಗೀತವನ್ನು ಹಾಗೆಯೇ ಉಳಿಸಿಕೊಂಡಿತ್ತು. ಕಾರವಾರದ ಪುರುμÉೂೀತ್ತಮ ಪಾಂಡುರಂಗ ಅವರ ನೇತೃತ್ವದ ಹಾಲಕ್ಕಿಯವರ ಸುಗ್ಗಿ ಕುಣಿತದ 20 ಮಂದಿಯ ಕಲಾವಿದರ ತಂಡಕ್ಕೆ ಅನುಮತಿಯೂ ಸಿಕ್ಕಿತ್ತು. ಹೀಗಾಗಿ, ರಾಜ್ಯವು ಸ್ತಬ್ಧಚಿತ್ರದ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದೆ ಎನ್ನುವಾಗಲೇ 2022ರ ಡಿಸೆಂಬರ್ 28ರಂದು ನಡೆದ ಕೊನೆಯ ಸುತ್ತಿನ ಸಭಾಸೂಚನಾ ಪತ್ರದಲ್ಲಿ ಕರ್ನಾಟಕ ಹೆಸರು ಸೇರ್ಪಡೆಗೊಂಡಿರಲಿಲ್ಲ.
ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವಂತ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರವು ಈ ಬಾರಿ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ 2023ರ ಗಣರಾಜ್ಯೋತ್ಸದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿರಲಿಲ್ಲ ಎಂಬುದಾಗಿ ತಿಳಿದುಬಂದಿತ್ತು. ಆದರೂ, ಉತ್ಸಾಹ ಕಳೆದುಕೊಳ್ಳದ ಇಲಾಖೆಯು 2022ರ ಡಿಸೆಂಬರ್ 30 ರಂದು ರಕ್ಷಣಾ ಸಚಿವಾಲಯಕ್ಕೆ ಪತ್ರ ಬರೆದು ಕರ್ನಾಟಕದ ನಿರಂತರ ಸಾಧನೆಯನ್ನು ಪರಿಗಣಿಸಿ ಈ ಬಾರಿಯೂ ಮತ್ತೊಮ್ಮೆ ಅವಕಾಶ ನೀಡುವಂತೆ ಕೋರಿತ್ತು.
ಇದಾದ 12 ದಿನಗಳ ಬಳಿಕ (2023ರ ಜನವರಿ 12) ರಕ್ಷಣಾ ಸಚಿವಾಲಯದಿಂದ ಜನವರಿ 15ರಂದು ನಡೆಯುವ ಸಭೆಯಲ್ಲಿ ಭಾಗವಹಿಸುವಂತೆ ಪತ್ರದಲ್ಲಿ ತಿಳಿಸಿತ್ತು. ರಕ್ಷಣಾ ಸಚಿವಾಲಯದ ರಾಷ್ಟ್ರೀಯ ರಂಗಶಾಲಾ ಕ್ಯಾಂಪ್ ನಲ್ಲಿ ನಡೆದ ಕೊನೆ ಸುತ್ತಿನ ಸಭೆಯಲ್ಲಿ ಇಲಾಖೆಯು ಭಾಗವಹಿಸಿತ್ತು. ಈ ಸಭೆಯಲ್ಲಿ ರಾಜ್ಯದ ಕೀ ಮಾಡಲ್ ಮತ್ತು ಸಂಗೀತಕ್ಕೆ ಅನುಮೋದನೆ ನೀಡಿತ್ತು. ಬಳಿಕ ಜನವರಿ 16ರಂದು ಅಧಿಕೃತವಾಗಿ ಕರ್ನಾಟಕದ ಹೆಸರು 2023ರ ಸ್ತಬ್ಧಚಿತ್ರದ ಪಟ್ಟಿಯಲ್ಲಿ ಸೇರ್ಪಡೆಗೊಂಡಿತು ಎಂದು ಪಿ.ಎಸ್. ಹರ್ಷ ಅವರು ವಿವರಿಸಿದರು.
ಹತ್ತು ದಿನಗಳಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸುವ ಬೃಹತ್ ಸವಾಲು ಎದುರಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕøತಿಯ ಮಹತ್ವವನ್ನು ಎತ್ತಿಹಿಡಿಯುವ ಮಾನ್ಯ ಮುಖ್ಯಮಂತ್ರಿಗಳ ಪ್ರೋತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದಿತ್ತು. ಎಲ್ಲಾ ದೃಷ್ಟಿಕೋನಗಳಿಂದ ವಿಮರ್ಶಿಸಿ, ಪರಿಣತರು, ವಿಷಯ ತಜ್ಞರು, ಕಲಾನಿರ್ದೇಶಕರು ಮತ್ತು ಕಲಾವಿದರೊಂದಿಗೆ ಪರಾಮರ್ಶಿಸಿಕೊಂಡು ಇಲಾಖೆಯು ಕೆಲಸವನ್ನು ಕೈಗೆತ್ತಿಕೊಂಡಿತ್ತು. ಹಾಕಿಕೊಂಡ ಕಾರ್ಯತಂತ್ರದ ರೂಪು ರೇμÉಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಮೂಡಿ ಬಂದಿದೆ. ಇದಕ್ಕಾಗಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೈಜೋಡಿಸಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ಆರಂಭದಲ್ಲಿ ದೆಹಲಿಯಲ್ಲಿ ಕವಿದಿದ್ದ ದಟ್ಟ ಮಂಜಿನಂತೆ ಸವಾಲುಗಳು ಕಂಡಿದ್ದವು. ಇಂದು ಅವುಗಳೆಲ್ಲವೂ ಮಂಜಿನಂತೆ ಕರಗಿವೆ. ಸಿದ್ಧಗೊಂಡಿರುವ ಸ್ತಬ್ಧಚಿತ್ರವನ್ನು ರಾಜ್ಯದ ಪರವಾಗಿ ಪ್ರದರ್ಶಿಸಿಸುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತದೆ ಎಂದು ಡಾ. ಹರ್ಷ ಅವರು ತಮ್ಮ ಸಂತಸವನ್ನು ಹಂಚಿಕೊಂಡರು.
ಸ್ತಬ್ಥಚಿತ್ರದಲ್ಲಿ ಏನಿರಲಿದೆ: ಗಿಡ-ಮರ, ಬೆಟ್ಟ-ಗುಡ್ಡ, ಪಕ್ಷಿಗಳಿಂದ ಕಂಗೊಳಿಸುತ್ತಿರುವ ಸ್ತಬ್ಧಚಿತ್ರದ ಮುಂಭಾಗದಲ್ಲಿ ತೊಟ್ಟಿಲು ತೂಗುತ್ತಾ, ಕೈನಲ್ಲಿ ಮಗು ಆಡಿಸುತ್ತಿರುವ ಸೂಲಗಿತ್ತಿ ನರಸಮ್ಮ ಅವರನ್ನು ತೋರಿಸಿದೆ. ನುರಿತ ವೈದ್ಯರ ಅನುಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಹೆರಿಗೆಗಳನ್ನು ಮಾಡಿಸುವಲ್ಲಿ ಅವರು ಸಿದ್ಧಹಸ್ತರು. ಏಳು ದಶಕಗಳಲ್ಲಿ ಇಂತಹ ಎರಡು ಸಾವಿರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ.
ಹಚ್ಚ ಹಸುರಿನಿಂದ ಕೂಡಿರುವ ಸ್ತಬ್ಧಚಿತ್ರದ ಮಧ್ಯಭಾಗದಲ್ಲಿ ಗಿಡ ಮರಗಳನ್ನು ಪೋಷಿಸುತ್ತಿರುವ ತುಳಸಿ ಗೌಡ ಹಾಲಕ್ಕಿ ಅವರನ್ನು ತೋರಿಸಿದೆ. ವೃಕ್ಷ ಮಾತೆ ಎಂದೇ ಹೆಸರಾಗಿರುವ ತುಳಸಿ ಅವರು ಅಪರೂಪದ ಪ್ರಭೇದದ ಸಸ್ಯಗಳನ್ನು ಗುರುತಿಸಿ ಬೆಳೆಸುವಲ್ಲಿ ಪರಿಣತರು. 30,000ಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಿರುವ ಶ್ರೇಯ ಇವರದ್ದು. ಇದನ್ನು ಗಿಡಗಳ ಮಧ್ಯೆ ಕುಳಿತು ಅವುಗಳನ್ನು ಪೋಷಿಸುತ್ತಿರುವ ರೀತಿಯಲ್ಲಿ ಅವರನ್ನು ತೋರಿಸಿದೆ.
ಕಣ್ಣಿಗೆ ಮುದ ನೀಡುವ ಕಾಡಿನ ನಿಜಸ್ವರೂಪದಂತಿರುವ ಸ್ತಬ್ಧಚಿತ್ರದ ಕೊನೆಯ ಭಾಗದಲ್ಲಿ ರಾಜ್ಯ ಹೆದ್ದಾರಿಯ ಆಜುಬಾಜಿನಲ್ಲಿ 8000 ಮರಗಳನ್ನು ನೆಟ್ಟು ನೀರೆರೆದು ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರನ್ನು ತೋರಿಸಿದೆ. ಇದನ್ನು ಅವರು ಗಿಡಗಳಿಗೆ ನೀರೆರೆಯುತ್ತಿರುವಂತೆ ಬಿಂಬಿಸಿದೆ. ಇದಲ್ಲದೆ 75 ಆಲದ ಮರಗಳನ್ನು 4.5 ಕಿ. ಮೀ ಉದ್ದದ ರಾಜ್ಯ ಹೆದ್ದಾರಿಯಲ್ಲಿ ಬೆಳೆಸಿದ್ದಾರೆ. ಇದನ್ನು ಸ್ತಬ್ಧಚಿತ್ರದ ಕೊನೆಯ ಭಾಗದಲ್ಲಿ ಬೃಹತ್ ಆಲದ ಮರದ ಮೂಲಕ ಚಿತ್ರಿಸಿದೆ.
ತೀವ್ರ ಪೈಪೋಟಿ : ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿμÉ್ಠಯ ಸಂಕೇತ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯ 14ಕ್ಕೆ ಇಳಿಸಿದೆ. ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅμÉ್ಟೀ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನದಲ್ಲಿ ಭಾಗವಹಿಸುವುದೇ ಪ್ರತಿμÉ್ಠಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು ಸತತವಾಗಿ 14ನೇ ಬಾರಿಗೆ ಭಾಗಹಿಸಿದೆ. ಈ ಎಲ್ಲಾ ಅಡೆತಡೆಗಳನ್ನು ನಿವಾರಿಸಿಕೊಂಡು ರಾಜ್ಯವು ಈ ಬಾರಿ ಭಾಗವಹಿಸುತ್ತಿರುವುದು ಐತಿಹಾಸಿಕ ಸಂಗತಿಯಾಗಿದೆ.
ಪ್ರಶಸ್ತಿಗಳ ಸರಮಾಲೆ: 2022ರ ಸ್ತಬ್ಧಚಿತ್ರದಲ್ಲಿ ಇಲಾಖೆಯು ಪ್ರದರ್ಶಿಸಿದ್ದ ಸಾಂಪ್ರದಾಯಿಕ ಕಸೂತಿ ತೊಟ್ಟಿಲುಗೆ ದ್ವಿತೀಯ ಪ್ರಶಸ್ತಿ ದೊರೆತಿತ್ತು. 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳನ್ನು ಪ್ರದರ್ಶಿಸಿತ್ತು. ಇದಕ್ಕೆ ತೃತೀಯ ಪ್ರಶಸ್ತಿ ದೊರೆತಿತ್ತು. 2012ರ ಗಣರಾಜ್ಯೋತ್ಸವದಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಯ ಸ್ತಬ್ಧಚಿತ್ರಕ್ಕೆ ತೃತೀಯ ಪ್ರಶಸ್ತಿ ದೊರೆತಿತ್ತು. 2011ರಲ್ಲಿ ಬೀದರ್ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ಕರ್ನಾಟಕದಲ್ಲಿ ನಡೆಯಲಿದ್ದ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿμÉೀಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ.
ಹೆಚ್ಚಿನ ಮತ್ತು ಪೂರಕ ಮಾಹಿತಿಗಾಗಿ ಡಾ. ಪಿ. ಎಸ್. ಹರ್ಷ ಐಪಿಎಸ್, ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (94808 41201), ಸಿ. ಆರ್. ನವೀನ್, ಸ್ತಬ್ಧಚಿತ್ರದ ನೋಡಲ್ ಅಧಿಕಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (94480 58775), ಶಶಿಧರ ಅಡಪ, ಅಂತರರಾಷ್ಟ್ರೀಯ ಕಲಾನಿರ್ದೇಶಕ, ಪ್ರತಿರೂಪಿ ಸಂಸ್ಥೆ (9448497073, ಸತೀಶ್ 9448497076)
ದೆಹಲಿ ಗಣರಾಜ್ಯೋತ್ಸವದ ಸ್ತಬ್ದ ಚಿತ್ರದಲ್ಲಿ ಕರ್ನಾಟಕ ಸಾಧನೆ
ಕ್ರ.ಸಂ
ವರ್ಷ
ಸ್ತಬ್ದಚಿತ್ರದ ವಿಷಯ
ಪ್ರಶಸ್ತಿ
ಆಯ್ಕೆಯಾಗಿಲ್ಲ
1
2000
ಯಕ್ಷಗಾನ
2
2001
ದಿ ಸಿಲಿಕಾನ್ ಸ್ಟೇಟ್ ಕರ್ನಾಟಕ
3
2002
-
ಆಯ್ಕೆಯಾಗಿಲ್ಲ-1
4
2003
ಹಂಪಿಯ ವೈಭವ
5
2004
-
ಆಯ್ಕೆಯಾಗಿಲ್ಲ-2
6
2005
ಬಾಹುಬಲಿ ಮಹಾಮಸ್ತಕಾಭಿಷೇಕ
ಪ್ರಥಮ
7
2006
ಮೈಸೂರು ದಸರಾ
8
2007
-
ಆಯ್ಕೆಯಾಗಿಲ್ಲ-3
9
2008
ಹೊಯ್ಸಳ ವಾಸ್ತಶಿಲ್ಪ
ದ್ವಿತೀಯ
10
2009
ಹಾಲಕ್ಕಿ ಒಕ್ಕಲಿಗರು
ಆಯ್ಕೆಯಾಗಿಲ್ಲ-4
11
2010
ಪಟ್ಟದಕಲ್ಲು
12
2011
ಬೀದರ್ನ ಪಾರಂಪರಿಕ ಕಲೆ ‘ಬಿದರಿ’
ದ್ವಿತೀಯ
13
2012
ಭೂತಾರಾಧನೆ
ತೃತೀಯ
14
2013
ಕಿನ್ನಾಳ ಕಲೆ
15
2014
ಹೋರಾಟಗಾರ ಟಿಪ್ಪು ಸುಲ್ತಾನ್
16
2015
ಚನ್ನಪಟ್ಟದ ಆಟಿಕೆ
ತೃತೀಯ
17
2016
ಕೊಡಗು ಕಾಫಿನಾಡು
18
2017
ಕರ್ನಾಟಕದ ಜಾನಪದ ಪ್ರಕಾರ
19
2018
ಕರ್ನಾಟಕದ ವನ್ಯ ಜೀವಿಗಳು
20
2019
ಬೆಳಗಾವಿ ಕಾಂಗ್ರೆಸ್ ಅಧಿವೇಶನ
21
2020
ಅನುಭವ ಮಂಟಪ
22
2021
ಹಂಪಿ ವಿರೂಪಾಕ್ಷ ದೇವಸ್ಥಾನ
23
2022
ಸಾಂಪ್ರದಾಯಿಕ ಕಸೂತಿ ತೊಟ್ಟಿಲು
ದ್ವಿತೀಯ
24
2023
ಸ್ತ್ರೀ ಸಬಲೀಕರಣ : ನಾರೀಶಕ್ತಿ
Monday, 23 January 2023
23-01-2023 ಚಾಮರಾಜನಗರ
Saturday, 21 January 2023
21-01-2023 ಚಾಮರಾಜನಗರ ಸುದ್ದಿ
ಅಂಬಿಗರ ಚೌಡಯ್ಯನವರ ವಚನಗಳು ಪ್ರಸ್ತುತ ಸಮಾಜಕ್ಕೂ ಅವಶ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ
ಚಾಮರಾಜನಗರ, ಜನವರಿ 21 - ಮೂಡನಂಬಿಕೆಗಳ ವಿರುದ್ದ ತಮ್ಮ ವಚನಗಳ ಮೂಲಕ ಧ್ವನಿ ಎತ್ತಿದ ಅಂಬಿಗರ ಚೌಡಯ್ಯನವರ ವಚನಗಳು ಪ್ರಸ್ತುತ ಸಮಾಜಕ್ಕೂ ಅವಶ್ಯಕವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣನವರ ಸಮಕಾಲೀನವರಾಗಿದ್ದ ಅಂಬಿಗರ ಚೌಡಯ್ಯ ಅವರು ವೃತ್ತಿಯಲ್ಲಿ ಅಂಬಿಗರಾಗಿದ್ದರೂ ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದಿದ ಶರಣರು. ಸಮಾಜದಲ್ಲಿದ್ದ ಮೂಡನಂಬಿಕೆಗಳ ವಿರುದ್ದ ತಮ್ಮ ವಚನಗಳ ಮೂಲಕ ಧ್ವನಿ ಎತ್ತಿದವರು ಎಂದರು.
12ನೇ ಶತಮಾನದಲ್ಲಿ ಅಂಬಿಗರ ಚೌಡಯ್ಯನವರು ರಚಿಸಿದ ವಚನಗಳು ನೇರವಾಗಿದ್ದವು. ಇವರ ವಿಚಾರ ಮೌಲ್ಯಗಳು ಎಲ್ಲರಿಗೂ ತಲುಪಬೇಕಿದೆ. ಪ್ರಸ್ತುತ ಸಮಾಜಕ್ಕೆ ಇವರ ವಚನಗಳು ಅವಶ್ಯಕವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ಅಂಬಿಗರ ಚೌಡಯ್ಯನವರ ಜಯಂತಿ ಕೇವಲ ಆಚರಣೆಗಷ್ಟೇ ಸೀಮಿತವಾಗಬಾರದು. ಅವರ ವಚನಗಳ ಸಾರ ನಮಗೆ ದಾರಿ ದೀಪವಾಗಬೇಕು. ಅಂದಿನ ಕಾಲದಲ್ಲೇ ಅಂಬಿಗರ ಚೌಡಯ್ಯನವರ ವಚನಗಳು ಪರಿಣಾಮಕಾರಿಯಾಗಿ ಸದ್ದು ಮಾಡಿದವು ಎಂದರು.
ಚಾಮರಾಜನಗರ ಆದರ್ಶ ವಿದ್ಯಾಲಯದ ಶಿಕ್ಷಕರಾದ ಬಿ. ಅರ್ಕಪ್ಪ ಅವರು ಉಪನ್ಯಾಸ ನೀಡಿ ಸಮಾಜದ ಕಂದಾಚಾರ, ಮೂಢನಂಬಿಕೆ, ಅಸಮಾನತೆ, ಬಡವ ಶ್ರೀಮಂತ ಎಂಬ ಭೇದಭಾವಗಳ ಮಧ್ಯೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ವಿಚಾರ ಮೌಲ್ಯಗಳನ್ನು ವಚನಗಳಲ್ಲಿ ಸಾರಿದ ಅಂಬಿಗರ ಚೌಡಯ್ಯ ವಚನಕ್ರಾಂತಿಕಾರರಾಗಿದ್ದಾರೆ ಎಂದರು.
ಕಾಯಕ ನೋಡಿ ಜಾತಿಯನ್ನು ನಿಧರ್Àರಿಸುತ್ತಿದ್ದ ಸಮಾಜದಲ್ಲಿ ತಮ್ಮ ಸತ್ಯವಾದ ವಚನಗಳಿಂದಲೇ ಮುನ್ನೆಲೆಗೆ ಬಂದವರು ಅಂಬಿಗರ ಚೌಡಯ್ಯನವರು. ಯಾರನ್ನು ಕೀಳಾಗಿ ಕಾಣಬಾರದು. ಎಲ್ಲಾ ವೃತ್ತಿಗೂ ಅದರದ್ದೇ ಆದ ಗೌರವವಿದೆ. ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಬೇಕು ಎಂದು ಶಿಕ್ಷಕರಾದ ಬಿ. ಅರ್ಕಪ್ಪ ಅವರು ತಿಳಿಸಿದರು.
ನಗರಸಭೆ ಸದಸ್ಯರಾದ ಹೆಚ್.ಎಸ್. ಮಮತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೆಶಕರಾದ ಗುರುಲಿಂಗಯ್ಯ, ಸಮುದಾಯ ಮುಖಂಡರಾದ ಗು. ಪುರುಷೋತ್ತಮ್, ಶ್ರೀನಿವಾಸ್, ಪ್ರಕಾಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೊತ್ತಲವಾಡಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ : ಅಹವಾಲುಗಳ ಆಲಿಕೆ-ಪರಿಹಾರಕ್ಕೆ ಸೂಚನೆ
ಚಾಮರಾಜನಗರ, ಜನವರಿ 21:- ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಾಯಿತು.
ಕೊತ್ತಲವಾಡಿ ಗ್ರಾಮದ ಗಂಗಾಧರೇಶ್ವರ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಉದ್ಘಾಟಿಸಿದರು.
ಆರಂಭದಲ್ಲಿಯೇ ಗ್ರಾಮಸ್ಥರು ಮಾತನಾಡಿ ಗ್ರಾಮದ ಕೆರೆಗೆ ಚರಂಡಿ ನೀರು ಹರಿದು ಹೋಗುತ್ತಿದೆ. ಊರಿನಲ್ಲಿರುವ ಶತಮಾನ ಕಂಡ ಶಾಲೆ ಕೊಠಡಿಗಳ ದುರಸ್ತಿಯಾಗಬೇಕಿದೆ. ಜಾನುವಾರುಗಳ ಸಂಖ್ಯೆಯ ಹೆಚ್ಚಿದ್ದು ಪ್ರತ್ಯೇಕ ಪಶು ವೈದ್ಯರ ನಿಯೋಜನೆ ಮಾಡಬೇಕಿದೆ. 24*7 ಆಸ್ಪತ್ರೆಗೆ ಸಿಬ್ಬಂದಿ ನೇಮಕವಾಗಬೇಕಿದೆ. ಶುದ್ದ ಕುಡಿಯುವ ನೀರಿನ ಘಟಕ, ಕೆ.ಎಸ್.ಆರ್.ಟಿಸಿ ಬಸ್ ಸೌಲಭ್ಯ, ಕೆರೆಗಳಿಗೆ ತಡೆಗೋಡೆ, ವಿದ್ಯುತ್ ಕಂಬಗಳು ಬೇಕಿದೆ. ಊರಿನ ರಸ್ತೆಗಳನ್ನು ಹೆಚ್ಚಿನ ಗುಣಮಟ್ಟದಲ್ಲಿ ಮಾಡಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕಿದೆ ಎಂದು ಗಮನಕ್ಕೆ ತಂದರು.
ಸ್ಮಶಾನ, ಬಕರ್ ಹುಕುಂ ಸಾಗುವಳಿ, ಇ-ಸ್ವತ್ತು, ಅಂಗನವಾಡಿ, ಖಾಯಂ ಗ್ರಾಮ ಲೆಕ್ಕಿಗರ ನೇಮಕ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಲು ಗ್ರಾಮಸ್ಥರು ಮನವಿ ಮಾಡಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಗ್ರಾಮಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನ ಅನುದಾನದಿಂದ ಶಾಲೆಗಳ ಅಭಿವೃದ್ದಿ ಮಾಡಲು ಸೂಚಿಸಲಾಗಿದೆ. ಶುದ್ದ ಕುಡಿಯುವ ನೀರಿನ ಘಟಕ ಸೌಲಭ್ಯಕ್ಕೆ ಶಾಸಕರ ಅನುದಾನದಲ್ಲಿ ನೆರವು ನೀಡಲಾಗುವುದು. ಸ್ಮಶಾನಕ್ಕಾಗಿ ಸರ್ಕಾರದ ನಿಯಮಾವಳಿ ಅನುಸಾರ ಭೂಮಿ ನೀಡಲಾಗುತ್ತದೆ ಎಂದರು.
ಸರಿಯಾದ ದಾಖಲೆಗಳನ್ನು ನೀಡಿದ್ದಲ್ಲಿ ಇ-ಸ್ವತ್ತು ನೀಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು. ನಿಗದಿತ ವೇಳೆಗೆ ಇ-ಸ್ವತ್ತು ನೀಡುವ ಕಾರ್ಯವನ್ನು ನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿ ಪರಿಹಾರ ಪಡೆದುಕೊಳ್ಳಲು ಅವಕಾಶವಾಗುತ್ತದೆ. ಹೀಗಾಗಿ ಈ ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಸ್ಮಶಾನಕ್ಕಾಗಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಗ್ರಾಮದಲ್ಲಿ ಹೆಚ್ಚಿನ ಜನಸಂಖ್ಯೆ ಇರುವ ಹಿನ್ನೆಲೆಯಲ್ಲಿ ಎರಡು ಎಕರೆ ಜಾಗ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ಬಸ್ ವ್ಯವಸ್ಥೆಯನ್ನು ಅಗತ್ಯಕ್ಕೆ ತಕ್ಕಂತೆ ಮಾಡಲು ಸೂಚಿಸಲಾಗಿದೆ ಎಂದರು.
ಊರಿನ ಶತಮಾನ ಕಂಡ ಸರ್ಕಾರಿ ಶಾಲೆ ಅಭಿವೃದ್ದಿಗೆ ಕ್ರಿಯಾ ಯೋಜನೆಯಲ್ಲಿ ಅನುಮೋದನೆ ನೀಡಲಾಗುತ್ತದೆ. ಪಶು ವೈದ್ಯರ ಖಾಯಂ ನಿಯೋಜನೆಗೂ ತಿಳಿಸಲಾಗಿದೆ. ಕೆರೆಗೆ ಕಲುಷಿತ ನೀರು ಸೇರದಂತೆ ಅಗತ್ಯವಿರುವ ಕೆಲಸ ನಿರ್ವಹಿಸಲು ಪರಿಶೀಲಿಸಲು ಸೂಚಿಸಲಾಗಿದೆ. ಇತರೆ ಎರಡು ಕೆರೆಗಳ ಸಂರಕ್ಷಣೆಗೆ ತಡೆಗೋಡೆ ನಿರ್ಮಿಸುವ ಸಂಬಂಧ ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿ ಶೀಘ್ರ ಪರಿಹರಿಸಲು ನಿರ್ದೇಶನ ನೀಡಲಾಗುವುದೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಇದೇ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೀತಾ, ಉಪಾಧ್ಯಕ್ಷರಾದ ಸತ್ಯಾನಂದ, ಉಪವಿಭಾಗಾಧಿಕಾರಿ ಗೀತಾ ಹುಡೇದ, ತಹಶೀಲ್ದಾರರಾದ ಬಸವರಾಜು, ಭೂ ದಾಖಲೆಗಳ ಉಪನಿರ್ದೇಶಕರಾದ ವಿದ್ಯಾಯಿನಿ, ಸಹಾಯಕ ಅರಣ್ಯ ಸಂರಕ್ಷಾಣಧಿಕಾರಿ ಸುರೇಶ್, ಇತರರು ಉಪಸ್ಥಿತರಿದ್ದರು.
ಗ್ರಾಮಕ್ಕೆ ಆಗಮಿಸಿದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರನ್ನು ಗ್ರಾಮದ ಮುಖಂಡರು, ಶಾಲಾ ಮಕ್ಕಳು ಸಂಭ್ರಮದಿಂದ ಬರಮಾಡಿಕೊಂಡರು. ಎತ್ತಿನಗಾಡಿ ಮೆರವಣಿಗೆ ಮೂಲಕ ಕರೆತಂದರು. ಶಾಸಕರು, ಜಿಲ್ಲಾಧಿಕಾರಿಯವರು ಗ್ರಾಮ ಪಂಚಾಯತ್ ನ ಗ್ರಂಥಾಲಯ, ಶತಮಾನದ ಸರ್ಕಾರಿ ಶಾಲೆಗೆ ಭೇಟಿ ನೀಡಿದರು. ಕಾರ್ಯಕ್ರಮದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಪ್ರಾತ್ಯಕ್ಷಿಕೆ ಪ್ರದರ್ಶನವನ್ನು ವೀಕ್ಷಿಸಿದರು.
ಗ್ರಾಮ ಒನ್ ಕೇಂದ್ರ ತೆರೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜನವರಿ 21 - ಜಿಲ್ಲೆಯಲ್ಲಿ ಪ್ರಸ್ತುತ ಬಾಕಿ ಇರುವ 62 ಗ್ರಾಮ ಪಂಚಾಯಿತಿಗಳಲ್ಲಿ 72 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಅನ್ನು ಸೇವಾ ಸಿಂಧು ಯೋಜನೆಯಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಇದರಡಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅವಕಾಶವಿದೆ.
ಈ ಯೋಜನೆಯಡಿ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 130 ಗ್ರಾಮ ಪಂಚಾಯಿತಿಗಳಲ್ಲಿ 196 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು. ಈಗಾಗಲೇ 121 ಕೇಂದ್ರಗಳನ್ನು ತೆರೆಯಲಾಗಿದೆ. ಬಾಕಿ ಇರುವ 62 ಗ್ರಾಮ ಪಂಚಾಯಿತಿಗಳಲ್ಲಿ 72 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಿದೆ. ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತಿಯುಳ್ಳ ಅಭ್ಯರ್ಥಿಗಳು hಣಣಠಿ://gಡಿಚಿmಚಿoಟಿebಟs.ಛಿom/ಚಿಠಿಠಿಟiಛಿಚಿಟಿಣ-ಡಿegisಣಡಿಚಿಣioಟಿ ಜಾಲತಾಣದಲ್ಲಿ ಆನ್ ಲೈನ್ ಮುಖಾಂತರ ಜನವರಿ 31 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-69008800 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 23ರಂದು ಬಾಲ್ಯ ವಿವಾಹ ನಿಷೇಧ ಕುರಿತು ತರಬೇತಿ ಕಾರ್ಯಾಗಾರ
ಚಾಮರಾಜನಗರ, ಜನವರಿ 21 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ನಿಷೇಧ ಕುರಿತು ಭಾಗೀದಾರರಿಗೆ ತರಬೇತಿ ಕಾರ್ಯಾಗಾರವನ್ನು ಜನವರಿ 23ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಹಳೆ ಕೆ.ಡಿ.ಪಿ. ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿಯವರಾದ ಡಿ.ಎಸ್. ರಮೇಶ್ ಅವರು ಕಾರ್ಯಗಾರ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಡಿವೈಎಸ್ಪಿ ಹಾಗೂ ವಿಶೇಷ ಮಕ್ಕಳ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸರಸ್ವತಿ, ಮೈಸೂರಿನ ಒಡಿಪಿ ಸಂಸ್ಥೆಯ ಧನರಾಜ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ತಳ ಸಮುದಾಯದ ವಿಶಿಷ್ಟ ಕಲೆಗಳ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜನವರಿ 21 - ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳ ತರಬೇತಿ ಶಿಬಿರವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಆಯೋಜಿಸಿದ್ದು ತರಬೇತಿ ಪಡೆಯಲು ಇಚ್ಚಿಸುವ ಯುವ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಇಂತಹ ಕಲೆಗಳನ್ನು ಕಲಿಯಲು ಜನವರಿ 27ರಿಂದ ತರಬೇತಿ ಶಿಬಿರ ಆರಂಭಿಸಲಾಗುತ್ತಿದೆ. ತರಬೇತಿ ಪಡೆಯಲು ಇಚ್ಚಿಸುವ ಯುವ ಕಲಾವಿದರು ಅರ್ಜಿಯನ್ನು ಜನವರಿ 24ರೊಳಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ತಲುಪಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9739383162, 9449181240, 8050021978 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಣಿಜ್ಯ ಪರೀಕ್ಷೆ : ನಿಷೇಧಾಜ್ಞೆ
ಚಾಮರಾಜನಗರ, ಜನವರಿ 21 ವಾಣಿಜ್ಯ ಪರೀಕ್ಷೆಗಳು ಚಾಮರಾಜನಗರ ಪಟ್ಟಣದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜನವರಿ 23ರಿಂದ 25 ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಸುವ ಸದುದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿಸಿ 1973ರ ಕಲಂ 144 ರನ್ವಯ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೇ ಸದರಿ ದಿನಗಳಂದು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮುಚ್ಚಲು ಸಹ ಆದೇಶಿಸಲಾಗಿದೆ.
ನಿಷೇದಾಜ್ಞೆ ಆದೇಶವು ಪರೀಕ್ಷೆ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಮತ್ತು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Friday, 20 January 2023
20-01-2023 ಚಾಮರಾಜನಗರ ಪೈಲ್ -1
ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*
ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ* ಚಾಮರಾಜನಗರ, ಸೆಪ್ಟೆಂಬರ್ 28 :- ಈ ಬಾರಿಯ ರಾಷ್ಟ್ರೀಯ ಲೋ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...






























