Wednesday, 11 April 2018

ಮತದಾನ ಜಾಗೃತಿಗೆ ಮುಂಬತ್ತಿ ಜಾಥಾ : ಜಿ.ಪಂ. ಸಿ.ಇ.ಒ. ಚಾಲನೆ , (10-04-2018) RAMASAMUDRA VERABHADRA SWAMY


    ಮತದಾನ ಜಾಗೃತಿಗೆ ಮುಂಬತ್ತಿ ಜಾಥಾ : ಜಿ.ಪಂ. ಸಿ.ಇ.ಒ. ಚಾಲನೆ ,                      RAMASAMUDRA VERABHADRA SWAMY


ಚಾಮರಾಜನಗರ ಏ. 10 - ವಿಧಾನಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ನಾಗರಿಕರಿಗೆ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಸಲುವಾಗಿ ಮುಂಬತ್ತಿ ಹಿಡಿದು ವಿದ್ಯಾರ್ಥಿಗಳು ನಗರದಲ್ಲಿ ಇಂದು ರಾತ್ರಿ ಜಾಥಾ ನಡೆಸಿದರು.
ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮುಂಬತ್ತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಪ್ರಜ್ಞಾವಂತ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ತಪ್ಪದೆ ಭಾಗವಹಿಸುವಂತೆ ಪ್ರೇರೆಪಿಸುವ ಅಂಗವಾಗಿ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಾಥಾ ಹೊರಟಿತು. ಇದಕ್ಕೂ ಮೊದಲು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ರಾಜೇಂದ್ರ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಮ್ಮ ಹಕ್ಕು. ಪಾರದರ್ಶಕ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಪ್ರತಿಯೊಬ್ಬರು ಯಾವುದೇ ಹಣ, ಅಮಿಷಗಳಿಗೆ ಒಳಗಾಗದೇ ತಪ್ಪದೆ ಮತ ಚಲಾಯಿಸೋಣ ಎಂದು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
ನಂತರ ದೇವಸ್ಥಾನದಿಂದ ಹೊರಟ ಮುಂಬತ್ತಿ ಮೆರವಣಿಗೆ ಜಿಲ್ಲಾಡಳಿತ ಭವನದವರೆಗೆ ಸಾಗಿತು. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸರ್ಕಾರಿ ಶುಶ್ರ್ರೂಷಕರ ಶಾಲೆ, ಜೆ.ಎಸ್.ಎಸ್. ನರ್ಸಿಂಗ್ ಶಾಲೆ, ಮನೋನಿಧಿ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುನಿರಾಜಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಮಹದೇವಸ್ವಾಮಿ, ಶರವಣ ಅವರು ಸಹ ಜಾಥಾದಲ್ಲಿ ಭಾಗವಹಿಸಿದ್ದರು. 

ವಿಧಾನಸಭಾ ಚುನಾವಣೆ – 2018
ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಜಾಗೃತಿಗೆ ಅಧಿಕಾರಿಗಳ ನಿಯೋಜನೆ

ಚಾಮರಾಜನಗರ, ಏ. 09-  ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಿಗೆ ವಿದ್ಯುನ್ಮಾನ ಮತಯಂತ್ರ (ಇವಿಎಮ್) ಮತ್ತು ವಿವಿಪ್ಯಾಟ್ ಯಂತ್ರಗಳ ಬಗ್ಗೆ ಅರಿವು ಮೂಡಿಸುವ ಸಂಬಂಧ ಈ ಕೆಳಕಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ವಿಧಾನ ಸಭಾ ಕ್ಷೇತ್ರವಾರು ನಿಯೋಜನೆಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಅಧ್ಯಕ್ಷರು ಆದ ಡಾ.ಕೆ.ಹರೀಶ್ ಕುಮಾರ್ ಆದೇಶಿಸಿದ್ದಾರೆ.
 ಚಾಮರಾಜನಗರ ವಿಧಾನಸಭಾ ಕ್ಷೇತ್ರ:   ಪ್ರಕಾಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಡಿಗಾಲ ಗ್ರಾಮ ಪಂಚಾಯಿತಿ, ಎಂ.ಎಸ್.ಚಂದ್ರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜ್ಯೋತೀಗೌಡನಪುರ ಗ್ರಾಮ ಪಂಚಾಯಿತಿ, ಜುನೇದ್ ಅಹಮದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹೆಬ್ಬಸೂರು ಗ್ರಾಮ ಪಂಚಾಯಿತಿ,
       ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ: ರಮೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಂಬಳೆ ಗ್ರಾಮ ಪಂಚಾಯಿತಿ, ಗಂಗಾಧರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗುಂಬಳ್ಳಿ ಗ್ರಾಮ ಪಂಚಾಯಿತಿ, ರಾಮೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ.
        ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ :  ಮೋಹನ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬರಗಿ ಗ್ರಾಮ ಪಂಚಾಯಿತಿ, ಮೋಹನ್.ಕೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹುಂಡೀಪುರ ಗ್ರಾಮ ಪಂಚಾಯಿತಿ,          ಕುಮಾರಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹಂಗಳ ಗ್ರಾಮ ಪಂಚಾಯಿತಿ.
    ಹನೂರು ವಿಧಾನಸಭಾ ಕ್ಷೇತ್ರ : ನವೀತ ತೇಜೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬಂಡಳ್ಳಿ ಗ್ರಾಮ ಪಂಚಾಯಿತಿ.  ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಜ್ಜೀಪುರ ಗ್ರಾಮ ಪಂಚಾಯಿತಿ,           ಮರಿಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ದೊಡ್ಡಿಂದುವಾಡಿ ಗ್ರಾಮ ಪಂಚಾಯಿತಿ   




ವಿಧಾನಸಭಾ ಚುನಾವಣೆ – 2018
ಭದ್ರತಾ ಕಾಯ್ಕೆಯಡಿ 10 ಪ್ರಕರಣಗಳು ದಾಖಲು: 10 ಅಬಕಾರಿ ಪ್ರಕರಣ ದಾಖಲು

ಚಾಮರಾಜನಗರ, ಏ. 10 -  ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು ಏಪ್ರಿಲ್ 9ರಂದು ಮುಂಜಾಗ್ರತ ಕ್ರಮ ಜರುಗಿಸಿದ್ದು, ಭದ್ರತಾ ಕಾಯ್ದೆಯಡಿ 10 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.  
ಅಬಕಾರಿ ಕಾಯ್ದೆಯಡಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ.  ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ 6, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ 3 ಹಾಗೂ ಹನೂರು ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ.  ಒಟ್ಟು 4441 ರೂ. ಮೌಲ್ಯದ 14.13ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟು 29 ಜಾಮೀನು ರಹಿತ ವಾರೆಂಟ್ ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ. 


ಏಪ್ರಿಲ್ 11ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಏ. 10 -  ಚಂದಕವಾಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಏಪ್ರಿಲ್ 11ರಂದು ತ್ರೈಮಾಸಿಕ ನಿರ್ವಹಣ ಕಾರ್ಯ ನಡೆಯಲಿದೆ. ಹೀಗಾಗಿ ಏಪ್ರಿಲ್ 11 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹಿರಿಕೆರೆ, ಕಾಳಿಕಾಂಬ, ಚಂದಕವಾಡಿ, ರೇಚಂಬಳ್ಳಿ, ಮಲ್ಲೇದೇವನಹಳ್ಳಿ, ನವೋದಯ, ಹೊಂಡರಬಾಳು ಹಾಗೂ ಜ್ಯೋತಿಗೌಡನಪುರ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 








   
               


















   
               



















Monday, 9 April 2018

ವಿಧಾನಸಭಾ ಚುನಾವಣೆ – 2018 ಮೊಬೈಲ್, ವಾಸ್ತವ್ಯ ವಿಳಾಸ ನೀಡಲು ಶಿಕ್ಷಕರು, ಸಿಬ್ಬಂದಿ ವರ್ಗಕ್ಕೆ ಸೂಚನೆ

 ವಿಧಾನಸಭಾ ಚುನಾವಣೆ – 2018
ಮೊಬೈಲ್, ವಾಸ್ತವ್ಯ ವಿಳಾಸ ನೀಡಲು ಶಿಕ್ಷಕರು, ಸಿಬ್ಬಂದಿ ವರ್ಗಕ್ಕೆ ಸೂಚನೆ

ಚಾಮರಾಜನಗರ, ಏ. 09 - ಜಿಲ್ಲೆಯ ಎಲ್ಲ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ತಮ್ಮ ಮೊಬೈಲ್ ಸಂಖ್ಯೆ, ವಾಸ್ತವ್ಯ ವಿಳಾಸವನ್ನು ಕಡ್ಡಾಯವಾಗಿ ನೀಡಬೇಕು. ಚುನಾವಣೆಗೆ ನಿಯೋಜಿತರಾಗಿರುವವರು ತರಬೇತಿ, ಇನ್ನಿತರ ಪ್ರಕ್ರಿಯೆಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.
2018ರ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದೆ. ಎಲ್ಲ ನೌಕರರು ಸಿಬ್ಬಂದಿ ಚುನಾವಣೆ ಕಾರ್ಯದಲ್ಲಿ ಭಾಗವಹಿಸಬೇಕಾಗಿರುತ್ತದೆ. ಏಪ್ರಿಲ್ 14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ನಂತರ ಜಿಲ್ಲೆಯ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗುತ್ತದೆ. ಆದಾಗ್ಯೂ ಸಹ ಚುನಾವಣಾ ಕಾರ್ಯಗಳಿಗೆ ಎಲ್ಲ ಸಿಬ್ಬಂದಿ ವರ್ಗದವರು ತೊಡಗಿಕೊಳ್ಳುವುದು ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ತಮ್ಮ ಪ್ರಸ್ತುತ ವಾಸ್ತವ್ಯದ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಸಂಬಂಧಿಸಿದ ಕ್ಲಸ್ಟರ್‍ನ ಬಿಆರ್‍ಪಿ, ಸಿಆರ್‍ಪಿ ಬಳಿ  ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿಧಾನಸಭಾ ಚುನಾವಣೆ – 2018
ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಜಾಗೃತಿಗೆ ಅಧಿಕಾರಿಗಳ ನಿಯೋಜನೆ

ಚಾಮರಾಜನಗರ, ಏ. 09-  ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಿಗೆ ವಿದ್ಯುನ್ಮಾನ ಮತಯಂತ್ರ (ಇವಿಎಮ್) ಮತ್ತು ವಿವಿಪ್ಯಾಟ್ ಯಂತ್ರಗಳ ಬಗ್ಗೆ ಅರಿವು ಮೂಡಿಸುವ ಸಂಬಂಧ ಈ ಕೆಳಕಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ವಿಧಾನ ಸಭಾ ಕ್ಷೇತ್ರವಾರು ನಿಯೋಜನೆಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಅಧ್ಯಕ್ಷರು ಆದ ಡಾ.ಕೆ.ಹರೀಶ್ ಕುಮಾರ್ ಆದೇಶಿಸಿದ್ದಾರೆ.
 ಚಾಮರಾಜನಗರ ವಿಧಾನಸಭಾ ಕ್ಷೇತ್ರ:   ಪ್ರಕಾಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಡಿಗಾಲ ಗ್ರಾಮ ಪಂಚಾಯಿತಿ, ಎಂ.ಎಸ್.ಚಂದ್ರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜ್ಯೋತೀಗೌಡನಪುರ ಗ್ರಾಮ ಪಂಚಾಯಿತಿ, ಜುನೇದ್ ಅಹಮದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹೆಬ್ಬಸೂರು ಗ್ರಾಮ ಪಂಚಾಯಿತಿ,
       ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ: ರಮೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಂಬಳೆ ಗ್ರಾಮ ಪಂಚಾಯಿತಿ, ಗಂಗಾಧರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗುಂಬಳ್ಳಿ ಗ್ರಾಮ ಪಂಚಾಯಿತಿ, ರಾಮೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ.
        ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ :  ಮೋಹನ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬರಗಿ ಗ್ರಾಮ ಪಂಚಾಯಿತಿ, ಮೋಹನ್.ಕೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹುಂಡೀಪುರ ಗ್ರಾಮ ಪಂಚಾಯಿತಿ,          ಕುಮಾರಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹಂಗಳ ಗ್ರಾಮ ಪಂಚಾಯಿತಿ.
    ಹನೂರು ವಿಧಾನಸಭಾ ಕ್ಷೇತ್ರ : ನವೀತ ತೇಜೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬಂಡಳ್ಳಿ ಗ್ರಾಮ ಪಂಚಾಯಿತಿ.  ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಜ್ಜೀಪುರ ಗ್ರಾಮ ಪಂಚಾಯಿತಿ,           ಮರಿಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ದೊಡ್ಡಿಂದುವಾಡಿ ಗ್ರಾಮ ಪಂಚಾಯಿತಿ.


ಏ. 10ರಂದು ನಗರದಲ್ಲಿ ಕ್ಯಾಂಡಲ್ ಲೈಟ್ ಜಾಥಾ 

ಚಾಮರಾಜನಗರ, ಏ. 09 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರ ನಿಮಿತ್ತ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಮತದಾನ ಜಾಗೃತಿ ಮೂಡಿಸಲು ಏಪ್ರಿಲ್ 10ರಂದು ಸಂಜೆ 6 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಕ್ಯಾಂಡಲ್ ಲೈಟ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿüಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಕೆ. ಹರೀಶ್ ಕುಮಾರ್ ಅವರÀ ಅಧ್ಯಕ್ಷತೆಯಲ್ಲಿ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಾಥಾದಲ್ಲಿ ವೈದ್ಯಕೀಯ, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರು ಆದ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ವಿಧಾನಸಭಾ ಚುನಾವಣೆ – 2018

ಭದ್ರತಾ ಕಾಯ್ಕೆಯಡಿ 12 ಪ್ರಕರಣಗಳು ದಾಖಲು: 4 ಅಬಕಾರಿ ಪ್ರಕರಣ ದಾಖಲು
ಚಾಮರಾಜನಗರ, ಏ. 0  ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು ಏಪ್ರಿಲ್ 8ರಂದು ಮುಂಜಾಗ್ರತ ಕ್ರಮ ಜರುಗಿಸಿದ್ದು, ಭದ್ರತಾ ಕಾಯ್ದೆಯಡಿ 12 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲಾಗಿದೆ.  ರಾಮಾಪುರ, ಹನೂರು, ಗುಂಡ್ಲುಪೇಟೆ, ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.  ಒಟ್ಟು 5010 ರೂ. ಮೌಲ್ಯದ 16.2ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.



  ವಾಹನ ಕಳವು : ಆರೋಪಿಗೆ ಶಿಕ್ಷೆ 

ಚಾಮರಾಜನಗರ, ಏ. 09 :- ನಕಲಿ ಕೀ ಬಳಸಿ ವಾಹನ ಕಳವು ಮಾಡಿದ ವ್ಯಕ್ತಿಯೊಬ್ಬರಿಗೆ 2 ವರ್ಷಗಳ ಕಾಲ ಕಾರಾಗೃಹ ವಾಸ ವಿಧಿಸಿ ಪ್ರಧಾನ ಸಿಜೆ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ತೀರ್ಪು ನೀಡಿದೆ.
ಮೇಗಲಹುಂಡಿ ಗ್ರಾಮದ ಗೋಪಾಲ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಚಾಮರಾಜನಗರ ತಾಲೂಕಿನ ಮಲೆಯೂರು ಗ್ರಾಮದ ಕೀಳಲಿಪುರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ 2016ರ ಮೇ 31ರಂದು ಪಿರ್ಯಾದುದಾರರಾದ ಮಲೆಯೂರು ಗ್ರಾಮದ ಲೇ. ಮಾದಶೆಟ್ಟಿ ಅವರ ಮಗ ಶಿವಣ್ಣ ಶೆಟ್ಟಿ ಅವರು ಅವರ ಟಾಟಾ ಎಸ್ ವಾಹನವನ್ನು  ನಿಲ್ಲಿಸಿದ್ದರು.
ಸಂಜೆ 5.15ರ ಸಮಯದಲ್ಲಿ  ಗೋಪಾಲ ಮತ್ತು ಮೈಸೂರಿನ ಅಮಾನುಲ್ಲಾ ಅವರು ಬೇರೆ ಕೀ ಬಳಸಿ ಟಾಟಾ ಎಸ್ ವಾಹನದ ಬೀಗ ತೆಗೆದು ವಾಹನವನ್ನು ಕಳವು ಮಾಡಿದ್ದರು.
ಗೋಪಾಲ ಅವರು 2016ರ ಜೂನ್ 8ರಂದು ಕಳವು ವಾಹನ ಟಾಟಾ ಎಸ್.ನಲ್ಲಿ ಫ್ಯಾಷನ್ ಪ್ರೋ ಬೈಕ್ ಹಾಕಿಕೊಂಡು ತಮಿಳುನಾಡಿಗೆ ಮಾರಾಟ ಮಾಡಲು ತೆಗೆದುಕೊಂಡು ಹೋಗುವಾಗ ನಗರದ ಗ್ರಾಮಾಂತರ ಪೋಲೀಸರು ಗೋಪಾಲ ಅವರನ್ನು ವಾಹನಗಳ ಸಹಿತ ವಶಕ್ಕೆ ತೆಗೆದುಕೊಂಡಿದ್ದರು. ಆರೋಪಿತರು ನಕಲಿ ಕೀ ಉಪಯೋಗಿಸಿ ಕಳ್ಳತನ ಮಾಡಿ ನಂತರ ನಕಲಿ ಕೀಯನ್ನು ನಾಶಪಡಿಸಿರುವುದು ತನಿಖೆಯಲ್ಲಿ ದೃಢಪಟ್ಟಿರುವುದು ರುಜುವಾತಾಗಿದೆ ಎಂದು ತೀರ್ಮಾನಿಸಿ ಆರೋಪಿ ಗೋಪಾಲನಿಗೆ 2 ವರ್ಷಗಳ ಕಾಲ ಕಾರಾಗೃಹ ವಾಸ ವಿಧಿಸಿ ಪ್ರಧಾನ ಸಿಜೆ ಮತ್ತು ಜೆಎಂಎಫ್‍ಸಿ (ಕಿರಿಯ ಶ್ರೇಣಿ) ನ್ಯಾಯಾಧೀಶರಾದ ವಿ. ದೀಪಾ ಅವರು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಎ.ಸಿ. ಮಹೇಶ್ ಅವರು ವಾದ ಮಂಡಿಸಿದ್ದರು.

ಮನೆ ಕಳವು ಯತ್ನ : ಇಬ್ಬರಿಗೆ ಶಿಕ್ಷೆ 

ಚಾಮರಾಜನಗರ, ಏ. 09 - ನಗರದ ಬಡಾವಣೆಯೊಂದರ ಮನೆಯ ಬಾಗಿಲಿ ಮೀಟಿ ಕಳ್ಳತನ ಮಾಡಲು ಯತ್ನಿಸಿದ್ದ ಇಬ್ಬರಿಗೆ ಪ್ರಧಾನ ಸಿಜೆ ಮತ್ತು ಸಿಜೆಎಂ (ಹಿ.ಶ್ರೇ) ನ್ಯಾಯಾಲಯ 10 ತಿಂಗಳ ಸಾದಾ ಶಿಕ್ಷೆ ಹಾಗೂ ತಲಾ ಒಂದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ತಮಿಳುನಾಡಿದ ಸುರೇಶ ಅಲಿಯಾಸ್ ಸುರೇಶಕುಮಾರ ಅಲಿಯಾಸ್ ಸೂರಿ ಹಾಗೂ ಕರ್ಪಸ್ವಾಮಿ ಕಳ್ಳತನ ಮಾಡಲು ಯತ್ನಿಸಿ ಶಿಕ್ಷೆಗೆ ಗುರಿಯಾದವರು.
ನಗರದ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಶಂಕರಪುರ ಬಡಾವಣೆಯ ಶ್ರೀ ರಾಘವೇಂದ್ರ ಮಠದ ಬಳಿ ವಾಸವಿರುವ ಸುರೇಶ್ ಅವರು ಅವರ ವಾಸದ ಮನೆಗೆ 2017ರ ಜೂನ್ 9ರಂದು ಬೀಗ ಹಾಕಿಕೊಂಡು ಸಂಬಂಧಿಕರ ಮದುವೆಗೆ ತಮಿಳುನಾಡಿಗೆ ತೆರಳಿದ್ದರು.
2017ರ ಅಕ್ಟೋಬರ್ 9ರಂದು ಮಧ್ಯರಾತ್ರಿ 1.30ರ ಸಮಯದಲ್ಲಿ ಸುರೇಶ ಅಲಿಯಾಸ್ ಸುರೇಶ ಕುಮಾರ ಅಲಿಯಾಸ್ ಸೂರಿ ಮತ್ತು ಕರ್ಪಸ್ವಾಮಿ ಕಬ್ಬಿಣದ ರಾಡಿನಿಂದ ಬಾಗಿಲನ್ನು ಮೀಟಿ ತೆಗೆದು ಒಳಹೋಗಿದ್ದಾರೆ.  ರೂಮಿನಲ್ಲಿದ್ದ ಬೀರುವಿನ ಬಾಗಿಲನ್ನು ರಾಡಿನಿಂದ ಮೀಟಿ ತೆಗೆದು ಅಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದಿದ್ದರಿಂದ ಮನೆಯಿಂದ ಆರೋಪಿಗಳು ಹೊರಬಂದು ಮಾರ್ಗಮಧ್ಯ ಕಬ್ಬಿಣದ ರಾಡನ್ನು ಬಿಸಾಡಿ ಹೋಗಿದ್ದರು.
ಬಾಗಿಲನ್ನು ಮೀಟಿ ಕಳ್ಳತನಕ್ಕೆ ಯತ್ನಿಸಿರುವುದು  ರುಜುವಾತಾದ ಹಿನ್ನೆಲೆಯಲ್ಲಿ ಸುರೇಶ ಅಲಿಯಾಸ್ ಸುರೇಶಕುಮಾರ ಅಲಿಯಾಸ್ ಸೂರಿ ಮತ್ತು ಕರ್ಪಸ್ವಾಮಿ ಅವರಿಗೆ 10 ತಿಂಗಳ ಸಾದಾ ಶಿಕ್ಷೆ ಹಾಗೂ ತಲಾ 1000 ರೂ. ದಂಡ ವಿಧಿಸಿ ಪ್ರಧಾನ ಸಿಜೆ ಮತ್ತು ಸಿಜೆಎಂ (ಹಿ.ಶ್ರೇ) ನ್ಯಾಯಾಧೀಶರಾದ ಎಲ್.ಜೆ. ಭವಾನಿ ಅವರು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭೀಯೋಜಕರಾದ ಜಯಶ್ರೀ ಎಸ್ ಶೆಣೈ ಅವರು ವಾದ ಮಂಡಿಸಿದ್ದರು.



ಏ. 10ರಂದು ಬಸವೇಶ್ವರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಚಾಮರಾಜನಗರ, ಏ. 09 - ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ ಸಂಬಂಧ ಚರ್ಚಿಸುವ ಸಲುವಾಗಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 10 ರಂದು ಮಧ್ಯಾಹ್ನ 12 ಗಂಟೆಗೆ  ಪೂರ್ವಭಾವಿ ಸಭೆ ಕರೆಯಲಾಗಿದೆ.
ಸಮುದಾಯ ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ನಾಗರಿಕರು ಸಭೆಗೆ ಹಾಜರಾಗಿ ಬಸವೇಶ್ವರ ಜಯಂತಿ ಆಚರಣೆ ಸಂಬಂಧ ಸಲಹೆ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ ಪ್ರಕಟಣೆ ಕೋರಿದೆ. 


ವಿ

Sunday, 8 April 2018

ಚುನಾವಣೇಯಲ್ಲಿ ನಾನೂ ಇರ್ತೀನಿ , ನನ್ನನ್ನು ಎಷ್ಟು ಜನ ಬೆಂಬಲಿಸುತ್ತೀರಾ.? ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ನಾನೂ ಇರ್ತೀನಿ , ನನ್ನನ್ನು ಎಷ್ಟು ಜನ ಬೆಂಬಲಿಸುತ್ತೀರಾ.? 
   ರಾಮಸಮುದ್ರ  ಎಸ್.ವೀರಭದ್ರಸ್ವಾಮಿ

ಮತ ಯಾಕೆ ಹಾಕಬೇಕು, ಯಾರಿಂದ ಏನ ು ಉಪಯೋಗ  ಎಂದು ಮುಟ್ಟಾಳರಂತೆ ಕೂರಬೇಡಿ.. ಒಂದು ಪಕ್ಷಕ್ಕೆ ಸೀಮಿತರಾದರೆ ಅವರನ್ನೆ ಬೆಂಬಲಿಸಿ ಆದರೆ ಹಾಕೋದೇ ಇಲ್ಲ ವೆಂದು ಹೇಳಬೇಡಿ.
ಪ್ರಜಾಪ್ರುಭುತ್ವ ವ್ಯವಸ್ಥೇಲಿ ನಿಮ್ಮ ಮತ ಅದ್ಬುತ ಶಕ್ತಿ. ಹಾಕಿದರೆ ಸತ್ಪ್ರಜೆ ಹಾಕದಿದ್ದರೆ ಸತ್ತ ಪ್ರಜೆ. ಕೊನೆಗೆ ನೀವು ನೋಟಾ ಬಟನ್ ಆದರೂ ಒತ್ತಿ ಬನ್ನಿ ಇಷ್ಟಕ್ಕೂ ನೋಟಾ ಎಂದರೆ ನನ್ ಆಫ್ ದಿ ಎಬೋ.. (NOTA).


ನೋಟಾ : ಚುನಾವಣೆ ಸುಧಾರಣೆಯ ಪ್ರಮುಖ ಅಸ್ತ್ರ? :

★ ನೋಟಾ : ಚುನಾವಣೆ ಸುಧಾರಣೆಯ ಪ್ರಮುಖ ಅಸ್ತ್ರ? :

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ದೇಶದ ಆಡಳಿತ ವ್ಯವಸ್ಥೆ ಬದಲಿಸುವ ಸಾಮರ್ಥ್ಯ ಈ ಮತಕ್ಕಿದೆ. ಚುನಾವಣೆಗೆ ಸ್ಪರ್ಧಿಸಿರುವ ಯಾವೊಬ್ಬ ಅಭ್ಯರ್ಥಿ ತನಗೆ ಸೂಕ್ತ ಎನಿಸದಿದ್ದಲ್ಲಿ ಮತದಾರ ಈ 'ನೋಟಾ ' ಬಳಕೆ ಮಾಡಬಹುದು.

★ ನೋಟಾ  ಎಂದರೇನು?

*. ನೋಟಾ ಅಂದರೆ ಮತದಾನ ಪಟ್ಟಿಯಲ್ಲಿರುವ ಯಾರೂ ನನ್ನ ಮತಕ್ಕೆ ಅರ್ಹರಲ್ಲ ಎಂದರ್ಥ.

* ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಸುಧಾರಣೆಯ ಪ್ರಮುಖ ಅಂಗವಾಗಿ ನೋಟಾ ಜಾರಿಗೆ ನಿರ್ಧರಿಸಿ 2009 ರಲ್ಲಿ ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಗೆ ಇಂತಹದೊಂದು ಪ್ರಸ್ತಾವನೆಯನ್ನು ಸಲ್ಲಿಸಿತು. ಆದರೆ ಇದಕ್ಕೆ ಬಹುತೇಕ ರಾಜಕೀಯ ಪಕ್ಷಗಳು ಪ್ರತಿರೋಧ ವ್ಯಕ್ತಪಡಿಸಿದ್ದವು.

★ ಸಂಘಟನೆ ಒತ್ತಾ,ಸೆ:
*. 'Peoಠಿಟes Uಟಿioಟಿ ಜಿoಡಿ ಅiviಛಿ ಐibeಡಿಣies' ಎಂಬ ಸರ್ಕಾರೇತರ ಸಂಸ್ಥೆ ನೋಟಾ ಜಾರಿಗೆ ಬೆಂಬಲಿಸಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು.

*. ಈ ಬಗ್ಗೆ ಸುಧೀರ್ಘವಾದ ಪ್ರತಿವಾದ ನಡೆದ ಬಳಿಕ ಅಂತಿಮವಾಗಿ 2013 ಸೆಪ್ಟಂಬರ್ 27 ರಂದು ಸುಪ್ರೀಂಕೋರ್ಟ್ 'ನೋಟಾ ' ಜಾರಿಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತು.



      

*. ಜೊತೆಗೆ ರಾಜಕೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಕೆಲವು ಬದಲಾವಣೆ ಅನಿವಾರ್ಯ ಮತ್ತು ರಾಜಕೀಯ ಶುದ್ಧೀಕರಣಕ್ಕೆ ಸಚ್ಚಾರಿತ್ರ್ಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಎಂಬ ಪರೋಕ್ಷ ಸೂಚನೆಯನ್ನು ಕೊಟ್ಟಿತು.

*. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನಿಗೆ ಆಯ್ಕೆ ಸ್ವಾತಂತ್ರ್ಯವಿದೆ ಎಂದು ಪ್ರತಿಪಾದಿಸಿತ್ತು.

★ 'ನೋಟಾ'ದ ಮೊದಲ ಬಳಕೆ ಎಲ್ಲಿ?

*. ಮುಂಬೈ ಮಹಾನಗರ ಪಾಲಿಕೆಯ 48ನೇ ವಾರ್ಡ್ ಗೆ (ವಿಶಾ) ನಡೆದ ಉಪಚುನಾವಣೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ನೋಟಾ ಬಳಸಲಾಯಿತು.

*. 2548 ಮತಗಳಲ್ಲಿ 48 ಮತಗಳು ನೋಟಾದಡಿ ದಾಖಲಾಗಿದ್ದವು. ಕೆಲವು ವಿದ್ಯಾವಂತ ಮತದಾರರು ತಾವು ಅಭ್ಯರ್ಥಿಗಳನ್ನು ತಿರಸ್ಕರಿಸಿ ನೋಟಾ ಬಳಸಿದ್ದಾಗಿ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಅಷ್ಟರಮಟ್ಟಿಗೆ ನೋಟಾಗೆ ಚೊಚ್ಚಲ ಚುನಾವಣೆಯಲ್ಲಿಯೇ ಉತ್ತಮ ಸ್ಪಂದನೆ ಸಿಕ್ಕಿತ್ತು.

*. ಮತದಾನ ತಿರಸ್ಕರಿಸುವ ಹಕ್ಕು ಜಗತ್ತಿನ 13 ದೇಶಗಳಲ್ಲಿ ಜಾರಿಯಲ್ಲಿದೆ.

★ 'ನೋಟಾ'ದ ಬಳಕೆ ಹೇಗೆ? 

*. ವಿದ್ಯುನ್ಮಾನ ಮತಯಂತ್ರದಲ್ಲಿ  ನಮೂದಾಗಿರುವ ಅಭ್ಯರ್ಥಿಗಳ ಸಾಲಿನಲ್ಲಿ ಅತ್ಯಂತ ಕೆಳಭಾಗದಲ್ಲಿ ಈ ನೋಟಾ ಬಟನ್ ಇರುತ್ತದೆ.

*. ಉದಾ: 15 ಮಂದಿ ಅಭ್ಯರ್ಥಿಗಳಿದ್ದಲ್ಲಿ 16ನೇ ಸಂಖ್ಯೆಯಲ್ಲಿ ನೋಟಾ ಇರುತ್ತದೆ. ಪಟ್ಟಿಯಲ್ಲಿ ಯಾವೊಬ್ಬ ಅಭ್ಯರ್ಥಿಯೂ ತನ್ನ ಮತಕ್ಕೆ ಅನರ್ಹ ಎನಿಸಿದರೆ 'ನೋಟಾ'ಮೂಲಕವೇ ನಮ್ಮ ಮತದಾನದ ಹಕ್ಕು ಚಲಾಯಿಸಬಹುದು. ಇದು ಅಧಿಕೃತವಾಗಿ ದಾಖಲಾಗುತ್ತದೆ. ಜೊತೆಗೆ ಅನರ್ಹ ಅಭ್ಯರ್ಥಿಗಳನ್ನು ತಿರಸ್ಕರಿಸಿದ ಸಂದೇಶ ರವಾನೆಯಾಗುತ್ತದೆ.

★ ಮತದಾನ ಪ್ರಕ್ರಿಯೆಯಲ್ಲಿ 'ನೋಟಾ' ಪರಿಣಾಮಕಾರಿ ಯಾಗಬಲ್ಲುದೇ? 

*. ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕುಮತದಾನ ಪ್ರಕ್ರಿಯೆಯ ಮೇಲೆ ಯಾವುದೇ ಗಾಢವಾದ ಪರಿಣಾಮ ವೇನೂ ಬೀರುವುದಿಲ್ಲ. ಏಕೆಂದರೆ ತಿರಸ್ಕೃತ ಮತಗಳನ್ನು ರದ್ದಾದ ಮತಗಳೆಂದು ಚುನಾವಣಾ ಆಯೋಗವು ಪರಿಗಣಿಸಲ್ಪಡುವುದರಿಂದ ಫಲಿತಾಂಶದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ.

*. ಬಹುಮತದ ಜನರು ಇದನ್ನು ಬಳಸಿದರೂ ಅಥವಾ ಯಾವುದೇ ಒಬ್ಬ ವಿಜೇತ ಅಭ್ಯರ್ಥಿ ಗಳಿಸುವ ಮತಕ್ಕಿಂತಲೂ 'ನೋಟಾ'ದಡಿ ಹೆಚ್ಚು ದಾಖಲಾಗಿದ್ದರೂ ಒಟ್ಟಾರೆ ಅಭ್ಯರ್ಥಿಗಳನ್ನು ತಿರಸ್ಕರಿಸುವ ಅವಕಾಶ ಇದರಲ್ಲಿಲ್ಲ. ವಿಶೇಷವೆಂದರೆ ನೋಟಾ'ದಡಿ ದಾಖಲಾದ ಮತಗಳ ಸನಿಹದಲ್ಲಿರುವ ಅಭ್ಯರ್ಥಿಯು ಜಯಶಾಲಿ ಎಂದು ಘೋಷಿಸಲಾಗುತ್ತದೆ.

*. ಈ ಮೂಲಕ ಕೇವಲ ಜನತೆಯ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ನೀಡಿದಂತಾಗಿದೆ. * 
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಬ್ಬ ಮತದಾರನಿಂದ ಅಭ್ಯರ್ಥಿ ತಿರಸ್ಕರಗೊಳ್ಳುವ ಮೂಲಕ ಆತನ ನೈತಿಕ ಸ್ಥೈರ್ಯ ಕುಗ್ಗಿಸಿದ ತೃಪ್ತಿ ಮಾತ್ರ ಮತದಾರನದು.
ನೋಟಾ ಜಾರಿಗೊಳಿಸಲು ಅವಕಾಶ ಕಲ್ಪಿಸಬೇಕೆಂದು 2009ರಲ್ಲಿ ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಬಹುತೇಕ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಹಲವು ಸುತ್ತಿನ ವಿಚಾರಣೆ ಬಳಿಕ 2013 ಸೆಪ್ಟಂಬರ್ 27ರಂದು ಸುಪ್ರೀಂಕೋರ್ಟ್ 'ನೋಟಾ ' ಜಾರಿಗೊಳಿಸಲು ಚುನಾವಣಾ ಆಯೋಗ ಅವಕಾಶ ನೀಡಿತು.

ಒಂದು ವೇಳೆ  ನೋಟಾ ಮೂಲಕ ಮತದಾನದ ಹಕ್ಕು ಬಹುಮತದಲ್ಲಿ ಚಲಾವಣೆಯಾಗಿದ್ದರೆ ಅದಕ್ಕಾಗಿ ಮತ್ತೆ ಚುನಾವಣೆ ನಡೆಸುವ ಅಗತ್ಯವಿಲ್ಲ. ಬದಲಿಗೆ ಮತದಾರರ ತೀರ್ಪನ್ನು ಗೌರವಿಸಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ

Saturday, 7 April 2018

ನೈತಿಕ ಮತದಾನಕ್ಕೆ ಉತ್ತೇಜಿಸಲು ವಿದ್ಯಾರ್ಥಿಗಳಿಗೆ ಜಿ.ಪಂ. ಸಿಇಓ ಹರೀಶ್ ಕುಮಾರ್ ಸಲಹೆ (06-04-2018)



                             ವಿಧಾನಸಭಾ ಚುನಾವಣೆ – 2018:


ನೈತಿಕ ಮತದಾನಕ್ಕೆ ಉತ್ತೇಜಿಸಲು ವಿದ್ಯಾರ್ಥಿಗಳಿಗೆ ಜಿ.ಪಂ. ಸಿಇಓ ಹರೀಶ್ ಕುಮಾರ್ ಸಲಹೆ

ಚಾಮರಾಜನಗರ, ಏ. 06 - ಚುನಾವಣೆಯಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮುಕ್ತ ಹಾಗೂ ನೈತಿಕವಾಗಿ ಮತದಾನ ಮಾಡುವಂತೆ ಉತ್ತÉೀಜಿಸುವ ದಿಸೆಯಲ್ಲಿ ವಿದ್ಯಾರ್ಥಿಗಳು ಸಹ ಪರಿಣಾಮಕಾರಿಯಾಗಿ ಜಾಗೃತಿ ಕೆಲಸವನ್ನು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಃಣಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಮುಖ್ಯಸ್ಥರೂ ಆದ ಡಾ. ಕೆ. ಹರೀಶ್ ಕುಮಾರ್ ಸಲಹೆ ಮಾಡಿದರು.
ನಗರದ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ಇಂದು ಸ್ವೀಪ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಜಾಥಾ ನಡೆಸಿ ಸಮಾವೇಶಗೊಂಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಯುವ ಮತದಾರರು ಜಾಗೃತರಾದರೆ ಜನತಂತ್ರ ವ್ಯವಸ್ಥೆ ಸದೃಢಗೊಳ್ಳುತ್ತದೆ. ಯುವ ಶಕ್ತಿಯು ಅತ್ಯಂತ ಪ್ರಭಾವಶಾಲಿಯಾಗಿದೆ. ಯುವಜನರು ವಿವೇಚನೆಯಿಂದ ವರ್ತಿಸಿದರೆ ಉತ್ತಮ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಮತದಾನದಂತಹ ಪ್ರಮುಖ ಪ್ರಕ್ರಿಯೆಯಲ್ಲಿ ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹರೀಶ್ ಕುಮಾರ್ ತಿಳಿಸಿದರು.
ಚುನಾವಣೆಯಲ್ಲಿ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಬಾರದು. ಮುಕ್ತ, ಪಾರದರ್ಶಕ ಚುನಾವಣೆ ಪ್ರಕ್ರಿಯೆಗೆ ಪ್ರತಿಯೊಬ್ಬರ ಪಾತ್ರವೂ ಅಗತ್ಯವಾಗಿದೆ. ಯಾವುದೇ ಮುಲಾಜಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸಲು ವಿದ್ಯಾರ್ಥಿಗಳು ಅವರ ಪೋಷಕರು ಹಾಗೂ ಸುತ್ತಮುತ್ತಲಿನ ಜನರಿಗೆ ಅರಿವು ಮೂಡಿಸಲು ಸಾಧ್ಯವಾಗುತ್ತದೆ. ಹೀಗಾಗಿ ನೈತಿಕ ಮತದಾನಕ್ಕೆ ಪ್ರೋತ್ಸಾಹಿಸುವ ಕೆಲಸದಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕೆಂದು ಹರೀಶ್ ಕುಮಾರ್ ಸಲಹೆ ಮಾಡಿದರು.
ಮತದಾನಕ್ಕೆ ಕೈಗೊಂಡಿರುವ ಸಿದ್ಧತೆಗಳು ಹಾಗೂ ಎಲ್ಲ ವರ್ಗದ ಜನರೂ ಮತದಾನದಲ್ಲಿ ಪಾಲ್ಗೊಳ್ಳಲು ಪೂರಕವಾಗಿರುವಂತೆ ಕೈಗೊಳ್ಳಲಾಗಿರುವ ವ್ಯವಸ್ಥÉಗಳ ಬಗ್ಗೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಒಳಗೊಂಡ ಓಟರ್ ಗೈಡ್ ಸಹ ಬಿಡುಗಡೆ ಮಾಡಲಾಗುತ್ತದೆ. ಎಲ್ಲರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಬೇಕು. ಯುವ ಜನರು ಜಾಗೃತಿ ಕಾರ್ಯಕ್ರಮಗಳಿಗೆ ಕೈಜೋಡಿಸಬೇಕು ಎಂದು ಹರೀಶ್ ಕುಮಾರ್ ಮನವಿ ಮಾಡಿದರು.
ಇದೇವೇಳೆ ವಿದ್ಯಾಥಿಗಳಿಗೆ ಮಾಸ್ಟರ್ ಟ್ರೈನರ್ ಶ್ರೀನಿವಾಸ್ ಅವರು ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಬಳಕೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ವಿದ್ಯಾರ್ಥಿಗಳು ಕೂಡ ಪ್ರಾತ್ಯಕ್ಷಿಕೆ ಮೂಲಕ ಮತಯಂತ್ರ ಹಾಗೂ ವಿವಿ ಪ್ಯಾಟ್ ಕಾರ್ಯವಿಧಾನಗಳ ಬಗ್ಗೆ ಮಾಹಿತಿ ಪಡೆದರು.
ಚಾಮರಾಜನಗರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಹಾಜರಿದ್ದರು.
ಇದಕ್ಕೂ ಮೊದಲು ನಗರದ ಚಾಮರಾಜೇಶ್ವರ ದೇವಾಲಯ ಬಳಿ ಕಾಲೇಜು ವಿದ್ಯಾರ್ಥಿಗಳು ನಡೆಸಿದ ಮತದಾನ ಮಹತ್ವ ಕುರಿತು ನಡೆಸಿದ ಬೃಹತ್ ಜಾಥಾಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಕುಮಾರ್ ಅವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ನೈತಿಕವಾಗಿ ಮತದಾನ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ತದನಂತರ ವಿದ್ಯಾರ್ಥಿಗಳು ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಿದರು. ನಮ್ಮ ಮತ ನಮ್ಮ ಹಕ್ಕು ಎಂಬ ಘೋಷವಾಕ್ಯವನ್ನು ಮೊಳಗಿಸಿದರು. ದಾರಿಯುದ್ದಕ್ಕೂ ವಿದ್ಯಾರ್ಥಿಗಳು ಮತದಾನದ ಮಹತ್ವ ಸಾರುವ ವಿವಿಧ ಸಂದೇಶಗಳ ಭಿತ್ತಿ ಫಲಕವನ್ನು ಪ್ರದರ್ಶಿಸಿ ಗಮನ ಸೆಳೆದರು.


ಗುಂಡ್ಲುಪೇಟೆ : ಮತದಾನದ ಮಹತ್ವ ಸಾರಲು ಜಾಗೃತಿ ಜಾಥಾ

ಚಾಮರಾಜನಗರ, ಏ. 06- ಮತದಾನದ ಪವಿತ್ರ ಕಾರ್ಯದ ಕುರಿತು ಮಹತ್ವ ತಿಳಿಸುವ ಉದ್ದೇಶದಿಂದ ಗುಂಡ್ಲುಪೇಟೆ ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ಗುಂಡ್ಲುಪೇಟೆ ಪಟ್ಟಣದಲ್ಲಿ ಇತ್ತೀಚೆಗೆ ಬೃಹತ್ ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.
ಪಟ್ಟಣದ ಗುರುಭವನದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಡಾ. ಕೆ. ಹರೀಶ್ ಕುಮಾರ್ ಮತದಾರರ ಪಟ್ಟಿಗೆ ಅರ್ಹರು ಸೇರ್ಪಡೆಗೊಳ್ಳಲು ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು. ಮನೆಮನೆಗೆ ಭೇಟಿ ನೀಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಮತಗಟ್ಟೆ ಮಟ್ಟದ ಜಾಗೃತಿ ಗುಂಪುಗಳು ಮತದಾರರ ಜಾಗೃತಿಗಾಗಿ ಕೈಗೊಳ್ಳಬೇಕಿರುವ ಕಾರ್ಯವಿಧಾನಗಳ ಬಗ್ಗೆ ತಿಳಿದುಕೊಂಡು ವ್ಯಾಪಕವಾಗಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕೆಂದು ಹರೀಶ್ ಕುಮಾರ್ ಅವರು ತಿಳಿಸಿದರು.
ಚುನಾವಣೆ ಪ್ರಕ್ರಿಯೆಯಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಭಾಗಿಯಾಗುವ ಮೂಲಕ ಮತದಾರರನ್ನು ಜಾಗೃತಿಗೊಳಿಸಬೇಕು. ನೈತಿಕವಾಗಿ ಪ್ರತಿಯೊಬ್ಬರೂ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ಸಿಇಓ ಅವರು ತಿಳಿಸಿದರು.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕೆ.ಎಚ್. ಸತೀಶ್ ತಾಲೂಕು ಪಂಚಾಯಿತಿ ಕಾರ್ಯಾಲಯದ ಮುಂಭಾಗದಲ್ಲಿ ಜಾಗೃತಿ ಜಾಥಾಗೆ ಚಾಲನೆ ನೀಡಿದರು. ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಕುರಿತು ಮಾಹಿತಿ ನೀಡುವ ಫಲಕಗಳನ್ನು ಹಿಡಿದು ಜಾಥಾ ನಡೆಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಇತರರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

   

ಏಪ್ರಿಲ್ 8ರಂದು ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಮಿಂಚಿನ ನೋಂದಣಿ ಅಭಿಯಾನ

            ಚಾಮರಾಜನಗರ, ಏ. 06 :-  ಚುನಾವಣಾ ಆಯೋಗವು ಆಯಾ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಏಪ್ರಿಲ್ 8ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಆಯಾ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ.
ಅಂದು ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಜರಿದ್ದು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆಯವರೆಗೆ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿ ಸ್ವೀಕರಿಸಲಿದ್ದಾರೆ.  ನಿಯಮಾನುಸಾರ ಪರಿಶೀಲಿಸಿ ಅರ್ಹರನ್ನು ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲಾಗುತ್ತದೆ.
ಈ ಅವಕಾಶವನ್ನು ಜಿಲ್ಲೆಯ ಜನತೆ ಸದುಪಯೋಗ ಮಾಡಿಕೊಳ್ಳಬೇಕು.  ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಹಮ್ಮಿಕೊಂಡಿರುವ ಮಿಂಚಿನ ನೋಂದಣಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಬಿ ಕಾವೇರಿ ಅವರು  ಮನವಿ ಮಾಡಿದ್ದಾರೆ.

ಕಚೇರಿ ಸ್ಥಳಾಂತರ

ಚಾಮರಾಜನಗರ, ಏ. 06 -  ಜಿಲ್ಲಾಡಳಿತ ಭವನದ 2ನೇ ಮಹಡಿಯ ಕೊಠಡಿ ಸಂಖ್ಯೆ 214  ಕಾರ್ಯ ನಿರ್ವಹಿಸುತ್ತಿದ್ದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯು ಕೊಠಡಿ ಸಂಖ್ಯೆ 217ಕ್ಕೆ ಸ್ಥಳಾಂತರಗೊಂಡಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆ – 2018 ಪರಿಷ್ಕøತ ವೀಡಿಯೋ ಸರ್ವೈಲೆನ್ಸ್ ತಂಡ 

ಚಾಮರಾಜನಗರ, ಏ. 07 - ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ನೇಮಕ ಮಾಡಿರುವ ವಿಡಿಯೋ ಸರ್ವೈಲೆನ್ಸ್ ಅಧಿಕಾರಿಗಳ ತಂಡವನ್ನು ಬಾಗಶಃ ಮಾರ್ಪಡಿಸಿ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

ಕೊಳ್ಳೇಗಾಲ ತಾಲೂಕು - ಹನೂರು ವಿಧಾನಸಭಾ ಕ್ಷೇತ್ರ – ತಂಡ 1:- ಮೇಲ್ವಿಚಾರಕರಾಗಿ ಎಚ್. ಕ್ಯಾತ, (ಬಿಆರ್‍ಸಿ), ತಾಲೂಕು ಯೋಜನಾ ಸಮನ್ವಯಾಧಿಕಾರಿ, ಹನೂರು ಶೈಕ್ಷಣಿಕ ವಲಯ, ಹನೂರು (ಮೊ. 9480695113, 9663182766), ಮಹೇಶ್ (ಮೊ.9986686773) ಅವರನ್ನು ವೀಡಿಯೋಗ್ರಾಫರ್ ಆಗಿ ನೇಮಕ ಮಾಡಿದೆ.

ತಂಡ 2:-  ಮೇಲ್ವಿಚಾರಕರಾಗಿ ನಂಜುಂಡಶೆಟ್ಟಿ, ರಾಜಸ್ವ ನಿರೀಕ್ಷಕರು, ಹನೂರು ಟೌನ್ ಪಂಚಾಯಿತಿ (ಮೊ. 9620626698, 8762783666), ಅರುಣ್ (ಮೊ.9620486985) ಅವರನ್ನು ವೀಡಿಯೋಗ್ರಾಫರ್ ಆಗಿ ನೇಮಕ ಮಾಡಿದೆ.
ತಂಡ 3:-  ಮೇಲ್ವಿಚಾರಕರಾಗಿ ಬಿ. ಸರ್ವೇಶ್ ಮೂರ್ತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕೊಳ್ಳೇಗಾಲ (ಮೊ. 953083695), ವಿನೋದ್ (ಮೊ.9379292571) ಅವರನ್ನು ವೀಡಿಯೋಗ್ರಾಫರ್ ಆಗಿ ನೇಮಕ ಮಾಡಿದೆ.
ತಂಡ 4:-  ಮೇಲ್ವಿಚಾರಕರಾಗಿ ಡಿ. ರಾಜು, ಕಿರಿಯ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಯಳಂದೂರು (ಮೊ. 9900478557), ರೋಹಿತ್ (ಮೊ. 8884110084) ಅವರನ್ನು ವೀಡಿಯೋಗ್ರಾಫರ್ ಆಗಿ ನೇಮಕ ಮಾಡಿದೆ.

ಕೊಳ್ಳೇಗಾಲ (ಎಸ್.ಸಿ) ವಿಧಾನಸಭಾ ಕ್ಷೇತ್ರ – ಚಾಮರಾಜನಗರ ತಾಲೂಕು- ಸಂತೆಮರಹಳ್ಳಿ                    ತಂಡ 1:-  ಮೇಲ್ವಿಚಾರಕರಾಗಿ ಮಂಜುನಾಥಸ್ವಾಮಿ, ಎಜುಕೇಷನ್ ಕೋ ಆರ್ಡಿನೇಟರ್, ಬಿಇಓ ಕಚೇರಿ, ಯಳಂದೂರು (ಮೊ. 9480366979), ಎಂ. ದಿಲೀಪ್ (ಮೊ. 9620797963) ಅವರನ್ನು ವೀಡಿಯೋಗ್ರಾಫರ್ ಆಗಿ ನೇಮಕ ಮಾಡಿದೆ.

ತಂಡ 2:-  ಮೇಲ್ವಿಚಾರಕರಾಗಿ ಜಾರ್ಜ್ ಫಿಲಿಪ್, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಣ ಇಲಾಖೆ, ಚಾಮರಾಜನಗರ (ಮೊ. 9740123899), ಶಿವಕುಮಾರ್ (ಮೊ.9480733319, 9035003319) ಅವರನ್ನು ವೀಡಿಯೋಗ್ರಾಫರ್ ಆಗಿ ನೇಮಕ ಮಾಡಿದೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರ – ಚಾಮರಾಜನಗರ ತಾಲೂಕು - ತಂಡ 1:-  ಮೇಲ್ವಿಚಾರಕರಾಗಿ ಸಿ. ಶಿವಸ್ವಾಮಿ, ಉಪನ್ಯಾಸಕರು, ಪದವಿಪೂರ್ವ ಕಾಲೇಜು, ಅಮಚವಾಡಿ, ಚಾ.ನಗರ ತಾಲೂಕು (ಮೊ. 7892474589), ನಾಗೇಂದ್ರ (ಮೊ.9731899580) ಅವರನ್ನು ವೀಡಿಯೋಗ್ರಾಫರ್ ಆಗಿ ನೇಮಕ ಮಾಡಿದೆ.

ತಂಡ 2:-  ಮೇಲ್ವಿಚಾರಕರಾಗಿ ಎ.ಡಿ. ನಾಗರಾಜು, ಕಿರಿಯ ಅಭಿಯಂತರರು, ಪಿಆರ್‍ಇಡಿ, ಚಾಮರಾಜನಗರ (ಮೊ. 9948608628), ಅಭಿ (ಮೊ.9742567074) ಅವರನ್ನು ವೀಡಿಯೋಗ್ರಾಫರ್ ಆಗಿ ನೇಮಕ ಮಾಡಿದೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಗುಂಡ್ಲುಪೇಟೆ ತಾಲೂಕು - ತಂಡ 1:-  ಮೇಲ್ವಿಚಾರಕರಾಗಿ ಬಿ. ಸೋಮಸುಂದರ್, ಸಹಾಯಕ ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಗುಂಡ್ಲುಪೇಟೆ (ಮೊ. 8277930778), ಓರ್ವ ವೀಡಿಯೋಗ್ರಾಫರ್ ಅವರನ್ನು ನೇಮಕ ಮಾಡಿದೆ.
ತಂಡ 2:-  ಮೇಲ್ವಿಚಾರಕರಾಗಿ ಸಿದ್ದಪ್ಪ, ಸಹಾಯಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಗುಂಡ್ಲುಪೇಟೆ ತಾಲೂಕು (ಮೊ. 9448200804), ಒಬ್ಬ ವೀಡಿಯೋಗ್ರಾಫರ್ ಅವರನ್ನು ನೇಮಕ ಮಾಡಿದೆ.



ಚುನಾವಣಾ ನಿರತ ಅಧಿಕಾರಿ ನೌಕರರ ಆರೋಗ್ಯ ಚಿಕಿತ್ಸೆಗೆ ವೈದ್ಯಕೀಯ ತಂಡ ನಿಯೋಜನೆ

ಚಾಮರಾಜನಗರ, ಏ. 07 - ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಿಸಲಾಗಿರುವ  ಸೆಕ್ಟರ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ತಂಡ, ಸ್ಟ್ಯಾಟಿಕ್ ಸರ್ವೈಲೆನ್ಸ್ ತಂಡ, ಎಂಸಿಸಿ ತಂಡ ಹಾಗೂ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ನೌಕರರಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಕ್ಷಿಪ್ತಗತಿಯಲ್ಲಿ ಪ್ರಥಮ ಚಿಕಿತ್ಸೆ ನೀಡುವ ಸಲುವಾಗಿ ವೈದ್ಯಕೀಯ ತಂಡವನ್ನು ನಿಯೋಜಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಹನೂರು ವಿಧಾನಸಭಾ ಕ್ಷೇತ್ರ – ಡಾ. ರೂಪ, ಆರ್‍ಬಿಎಸ್‍ಕೆ ವೈದ್ಯಕೀಯ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕೊಳ್ಳೇಗಾಲ ತಾಲೂಕು (ಮೊ.7022706895), ಡಾ. ಮರಿಯಪ್ಪ ಎಸ್. ರೋಟಿ, ಆರ್‍ಬಿಎಸ್‍ಕೆ ವೈದ್ಯಕೀಯ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕೊಳ್ಳೇಗಾಲ ತಾಲೂಕು (ಮೊ.8762950072),
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ – ಡಾ. ನಾಗೇಂದ್ರ, ಆರ್‍ಬಿಎಸ್‍ಕೆ ವೈದ್ಯಕೀಯ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಯಳಂದೂರು ತಾಲೂಕು (ಮೊ.9964289023),
ಡಾ. ಪ್ರವೀಣ್ ಕುಮಾರ್ ಆರ್‍ಬಿಎಸ್‍ಕೆ ವೈದ್ಯಕೀಯ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಯಳಂದೂರು ತಾಲೂಕು (ಮೊ.9481532801),
ಚಾಮರಾಜನಗರ ವಿಧಾನಸಭಾ ಕ್ಷೇತ್ರ – ಡಾ. ಜಿ. ಶ್ರೀಕಾಂತ್, ಆರ್‍ಬಿಎಸ್‍ಕೆ ವೈದ್ಯಕೀಯ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಚಾಮರಾಜನಗರ ತಾಲೂಕು (ಮೊ.8023796718),
ಡಾ. ಗೀತಾರಾಣಿ, ಆರ್‍ಬಿಎಸ್‍ಕೆ ವೈದ್ಯಕೀಯ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಚಾಮರಾಜನಗರ ತಾಲೂಕು (ಮೊ.8884500848, 9036804290),
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಡಾ. ಟಿ. ರವಿ, ಆರ್‍ಬಿಎಸ್‍ಕೆ ವೈದ್ಯಕೀಯ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಗುಂಡ್ಲುಪೇಟೆ ತಾಲೂಕು (ಮೊ.9986403389), ಡಾ. ಸುಕಲ, ಆರ್‍ಬಿಎಸ್‍ಕೆ ವೈದ್ಯಕೀಯ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಗುಂಡ್ಲುಪೇಟೆ ತಾಲೂಕು (ಮೊ.9986126396),
ಪ್ರತಿ ತಂಡದಲ್ಲಿ ಓರ್ವ ಆರ್‍ಬಿಎಸ್‍ಕೆ ಸ್ಟಾಫ್ ನರ್ಸ್, ಅಪ್ತಮೆಟಿಕ್ ಅಸಿಸ್ಟೆಂಟ್ ಇರಲಿದ್ದಾರೆ. ನಿಯೋಜಿಸಿರುವ ವೈದ್ಯ ಅಧಿಕಾರಿಗಳ ತಂಡವು ಚೆಕ್‍ಪೋಸ್ಟ್ ಇನ್ನಿತರ ಕಡೆ ಆಗಾಗ್ಗೆ ಭೇಟಿ ನೀಡಿ ಚುನಾವಣಾ ಕರ್ತವ್ಯ ನಿಯೋಜಿತ ಅಧಿಕಾರಿ ನೌಕರರ ಆರೋಗ್ಯ ತಪಾಸಣೆ ನಡೆಸಿ ಅಗತ್ಯವಿದ್ದಲ್ಲಿ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. 
ಚುನಾವಣಾ ಕರ್ತವ್ಯ ಅಧಿಕಾರಿ ನೌಕರರು ಚಿಕಿತ್ಸೆಗಾಗಿ ಬಂದಾಗ ಆದ್ಯತೆ ಮೇರೆಗೆ ತಪಾಸಣೆ ನಡೆಸಿ ತುರ್ತಾಗಿ ಚಿಕಿತ್ಸೆ ನೀಡಲು ಕ್ರಮವಹಿಸಬೇಕು ಎಂದು ಸಹ ಜಿಲ್ಲಾಧಿಕಾರಿ ಕಾವೇರಿಯವರು ಆದೇಶದಲ್ಲಿ ತಿಳಿಸಿದ್ದಾರೆ.


ಏ. 10ರಂದು ಬಸವೇಶ್ವರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಚಾಮರಾಜನಗರ, ಏ. 06 - ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ ಸಂಬಂಧ ಚರ್ಚಿಸುವ ಸಲುವಾಗಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 10 ರಂದು ಮಧ್ಯಾಹ್ನ 12 ಗಂಟೆಗೆ  ಪೂರ್ವಭಾವಿ ಸಭೆ ಕರೆಯಲಾಗಿದೆ. 
ಸಮುದಾಯ ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ನಾಗರಿಕರು ಸಭೆಗೆ ಹಾಜರಾಗಿ ಬಸವೇಶ್ವರ ಜಯಂತಿ ಆಚರಣೆ ಸಂಬಂಧ ಸಲಹೆ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ ಪ್ರಕಟಣೆ ಕೋರಿದೆ.

ವಿಧಾನಸಭಾ ಚುನಾವಣೆ – 2018
ಮಾನವ ಸರಪಳಿ ಮೂಲಕ ಮತದಾನ ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು 

ಚಾಮರಾಜನಗರ, ಏ. 07 - ಪ್ರಜಾಪಭುತ್ವದ ಬಲವರ್ಧನೆಗೆ ಪ್ರತಿಯೊಬ್ಬರೂ ಸಕ್ರಿಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರಿವು ಮೂಡಿಸುವ ಸಲುವಾಗಿ ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಮಾನವ ಸರಪಳಿ ರಚಿಸಿ ಗಮನ ಸೆಳೆದರು.


             ಜೆ.ಎಸ್.ಎಸ್ ಮಹಿಳಾ ಬಿ.ಎಡ್ ಕಾಲೇಜು, ನರ್ಸಿಂಗ್,  ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ನಗರದ ಜೈ ಭುವನೇಶ್ವರಿ ವೃತ್ತ (ಪಚ್ಚಪ್ಪ ವೃತ್ತದಲ್ಲಿ) ಬೃಹತ್ ಮಾನವ ಸರಪಳಿ ರಚಿಸುವ ಮೂಲಕ ಮತದಾನ ಮಹತ್ವವನ್ನು ಸಾರಿದರು
            ಮಾನವ ಸರಪಳಿ ಮಾಡಿ, ನಂತರ ಪುನ: ಬಿ ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಸಮಾವೇಶಗೊಂಡರು.
            ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಅಧ್ಯಕ್ಷರು ಆದ ಡಾ. ಕೆ.ಹರೀಶ್ ಕುಮಾರ್ ಅವರು ಯಾವುದೇ ಆಮಿಷಕ್ಕೆ ಒಳಗಾಗದೆ  ಮತದಾನದದಲ್ಲಿ ಪಾಲ್ಗೊಳ್ಳಲು ಪೋಷಕರಿಗೆ ಹಾಗೂ ನೆರೆಹೊರೆಯವರಿಗೆ ತಿಳಿಸಬೇಕು.  ನೈತಿಕ ಮತದಾನ ಮಾಡಲು ಉತ್ತೇಜಿಸಬೇಕು ಎಂದು ಸಲಹೆ ಮಾಡಿದರು.
            ಬಳಿಕ ಕಾಲೇಜು ವಿದ್ಯಾರ್ಥಿಗಳಿಗೆ, ಇ.ವಿ.ಎಂ ಹಾಗೂ ವಿ.ವಿ ಪ್ಯಾಟ್ (ಮತದಾನ ಖಾತರಿ ಯಂತ್ರ)ದ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಉಪಕಾಯದರ್ಶಿ ಮುನಿರಾಜಪ್ಪ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ರಮೇಶ್ ವಿವಿಧ ಕಾಲೇಜಿನ ಪ್ರಾಂಶುಪಾಲರು, ಹಾಗೂ ಉಪನ್ಯಾಸಕರು ಹಾಜರಿದ್ದರು,




 










   
               











ವಿಧಾನಸಭಾ ಚುನಾವಣೆ – 2018 ಚುನಾವಣಾ ಪ್ರಕ್ರಿಯೆಯ ಪರಿಪೂರ್ಣ ಮಾಹಿತಿ ಹೊಂದಿ: ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧಿಕಾರಿಗಳಿಗೆ ಸೂಚನೆ (07-04-2018)


ವಿಧಾನಸಭಾ ಚುನಾವಣೆ – 2018
ಚುನಾವಣಾ ಪ್ರಕ್ರಿಯೆಯ ಪರಿಪೂರ್ಣ ಮಾಹಿತಿ ಹೊಂದಿ: ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧಿಕಾರಿಗಳಿಗೆ ಸೂಚನೆ 
 ಚಾಮರಾಜನಗರ, ಏ. 07 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತದ ಮಾಹಿತಿ ಹೊಂದಿರುವುದಲ್ಲದೆ, ಮತಯಂತ್ರ(ಇ.ವಿ.ಎಂ) ಹಾಗೂ ವಿ.ವಿ. ಪ್ಯಾಟ್ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ಅರಿವಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತವತಿಯಂದ ಮಾಸ್ಟರ್ ಟ್ರೈನರ್ಸ್, ಸೆಕ್ಟರ್ ಅಧಿಕಾರಿ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.

ಚಾಮರಾಜನಗರ, ಏ. 07 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತದ ಮಾಹಿತಿ ಹೊಂದಿರುವುದಲ್ಲದೆ, ಮತಯಂತ್ರ(ಇ.ವಿ.ಎಂ) ಹಾಗೂ ವಿ.ವಿ. ಪ್ಯಾಟ್ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ಅರಿವಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತವತಿಯಂದ ಮಾಸ್ಟರ್ ಟ್ರೈನರ್ಸ್, ಸೆಕ್ಟರ್ ಅಧಿಕಾರಿ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.
ಚುನಾವಣಾ ಆಯೋಗವು ಕಾಲಕಾಲಕ್ಕೆ ನಿರ್ವಹಿಸಬೇಕಿರುವ ಕಾರ್ಯವೈಖರಿ, ನೀತಿ, ನಿಯಮಗಳನ್ನು ಪರಿಷ್ಕರಿಸುತ್ತಿದೆ. ಅದನ್ನು ಅನುಷ್ಠಾನಗೊಳಿಸಲು ಚುನಾವಣಾ ಪ್ರಕ್ರಿಯೆಗೆ ಸಂಬಂಧಪಟ್ಟ ಎಲ್ಲ ಮಾಹಿತಿಗಳ ಸಂಪೂರ್ಣ ಅರಿವು ಹೊಂದಬೇಕು. ಯಾವುದೇ ಹಂತದ ಅಧಿಕಾರಿಗಳು ಎಷ್ಟೇ ಬಾರಿ ತರಬೇತಿ ಪಡೆದಿದ್ದರೂ ಸಹ ಚುನಾವಣಾ ಕಾರ್ಯವಿಧಾನದಲ್ಲಿ ಹೆಚ್ಚಿನ ಪರಿಪೂರ್ಣತೆ ಹೊಂದಿ, ಆಯೋಗದ ಮಾರ್ಗಸೂಚಿಗಳನ್ನು ಯಶಸ್ವಿಯಾಗಿ ಪಾಲಿಸಬೇಕು ಎಂದರು.
ಮತದಾನವು ಒಂದು ಪವಿತ್ರ ಕಾರ್ಯವಾಗಿದೆ. ಚುನಾವಣೆಯ ಮಾರ್ಗಸೂಚಿಗಳು ಸರಳವಾಗಿ ಅರ್ಥವಾಗುವುದರೊಂದಿಗೆ ಅದರಲ್ಲಿ ಪಾಲ್ಗೊಳ್ಳುವ ವಿವಿಧ ಹಂತದ ಅಧಿಕಾರಿಗಳು ಹಾಗೂ ಮತದಾರರು ಚುನಾವಣೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ ಸಲುವಾಗಿ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬ(ಈesಣivಚಿಟ oಜಿ ಆemoಛಿಡಿesಥಿ) ದ ಮಾದರಿಯಲ್ಲಿ ನಡೆಸಲು ಆಯೋಗವು ನಿರ್ದೇಶನ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾನ ದಿನದಂದು ಮತಗಟ್ಟೆಯಲ್ಲಿ ಪಿ.ಆರ್.ಒ(ಪ್ರಿಸೈಡಿಂಗ್ ಅಧಿಕಾರಿ), ಮತಗಟ್ಟೆಯ ವಿವಿಧ ಅಧಿಕಾರಿಗಳು ಮತಯಂತ್ರದ ಕುರಿತು ಸಂಪೂರ್ಣ ತಿಳಿವಳಿಕೆ ಇರಬೇಕು. ಮತಗಟ್ಟೆಯ ಎಲ್ಲಾ ಚಲನ-ವಲನಗಳನ್ನು ಸೂಕ್ಷ್ಮ ಮತಿಯಿಂದ ಗಮನಿಸÀಬೇಕು. ಮತದಾನದ ಹಿಂದಿನ ದಿನವೇ ಮತಗಟ್ಟೆಯ ಎಲ್ಲಾ ಸಿದ್ದತೆಗಳನ್ನು ನಿರ್ವಹಿಸಬೇಕು ಎಂದರು. ಇದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಫ್ಲೋ-ಚಾರ್ಟ್ ನೀಡಲಾಗುವುದು ಎಂದರು.
ಅಣಕು ಮತದಾನದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಇಡೀ ಮತದಾನ ಪ್ರಕ್ರಿಯೆಗೆ ತೊಂದರೆ ಉಂಟಾಗಬಹುದು. ಪ್ರಿಸೈಡಿಂಗ್ ಅಧಿಕಾರಿಯು ಅತ್ಯಂತ ಜಾಣ್ಮೆ, ವಿವೇಕ ಹಾಗೂ ನಿಷ್ಪಕ್ಷಪಾತದಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಅನುಮಾನ, ಸಮಸ್ಯೆಗಳಿದ್ದರೂ ತಮ್ಮ ವಿವೇಚನೆ ಬಳಸದೇ ಮತ್ತು ಬಹುಮತದ ಅಭಿಪ್ರಾಯಗಳಿಗೆ ಮನ್ನಣೆ ನೀಡದೇ ತಮ್ಮ ಮೇಲಧಿಕಾರಿಗೆ ತಿಳಿಸಿ ಪರಿಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಮಾತನಾಡಿ ಮತಗಟ್ಟೆಗಳಿಗೆ ಕನಿಷ್ಠ ಮೂಲಸೌಲಭ್ಯ ಒದಗಿಸಲಾಗುತ್ತಿದೆ. ಮತಗಟ್ಟೆಗಳಿಗೆ ಅಗತ್ಯವಾದ ಕುಡಿಯುವ ನೀರು, ಶೌಚಾಲಯ, ನೆರಳಿನ ವ್ಯವಸ್ಥೆ, ಅಂಗವಿಕಲರಿಗೆ ರ್ಯಾಂಪ್, ಹಾಗೂ ವಿಶ್ರಾಂತಿ ಕೊಠಡಿಗಳನ್ನು ತೆರೆಯಲಾಗುವುದು ಎಂದರು.
ಮತದಾನದ ಕುರಿತು ಜಿಲ್ಲೆಯ ಯಾವುದೇ ಭಾಗದಲ್ಲಿ ಹಾಗೂ ಯಾವುದೇ ಕ್ಷಣದಲ್ಲಿ ಪ್ರತಿಹಂತದ ಮಾಹಿತಿ ಪಡೆಯುವ ಸಲುವಾಗಿ ಸಂಪರ್ಕಕ್ಕೆ ಸಿಗಲು ಅನುಕೂಲವಾಗುವಂತೆ ವ್ಯವಸ್ಥೆಯನ್ನು ಉತ್ತಮಗೊಳಿಸಲಾಗುವುದು ಎಂದು ಸಿ.ಇ.ಒ. ಹರೀಶ್‍ಕುಮಾರ್ ಅವರು ತಿಳಿಸಿದರು.
ಮಾಸ್ಟರ್ ಟ್ರೈನರ್‍ಗಳಾದ ಶ್ರೀನಿವಾಸಕುಮಾರ್ ಹಾಗೂ ಗಣೇಶ್‍ಕುಮಾರ್, ತರಬೇತಿ ನೋಡೆಲ್ ಆಧಿಕಾರಿ ಯೋಗೇಶ್ ಅವರು ಚುನಾವಣಾ ಪೂರ್ವಸಿದ್ದತೆ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಹಾಜರಿದ್ದ ವಿವಿಧ ಹಂತದ ಅಧಿಕಾರಿಗಳಿಗೆ ಮಾಹಿತಿ ಒದಗಿಸಿದರು.
ನಂತರ ವಿದ್ಯುನ್ಮಾನ ಮತಯಂತ್ರ ಹಾಗೂ ವಿ.ವಿ. ಪ್ಯಾಟ್ ಕಾರ್ಯವಿಧಾನ ಕುರಿತು ಪ್ರಾಯೋಗಿಕ ತರಬೇತಿನ್ನು ಅಧಿಕಾರಿಗಳಿಗೆ ನೀಡಲಾಯಿತು.

ಏಪ್ರಿಲ್ 8ರಂದು ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಮಿಂಚಿನ ನೋಂದಣಿ ಅಭಿಯಾನ

            ಚಾಮರಾಜನಗರ, ಏ. 07 -  ಚುನಾವಣಾ ಆಯೋಗವು ಆಯಾ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಏಪ್ರಿಲ್ 8ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಆಯಾ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ.
ಏಪ್ರಿಲ್ 8 ರಂದು ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಜರಿದ್ದು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆಯವರೆಗೆ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿ ಸ್ವೀಕರಿಸಲಿದ್ದಾರೆ.  ನಿಯಮಾನುಸಾರ ಪರಿಶೀಲಿಸಿ ಅರ್ಹರನ್ನು ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲಾಗುತ್ತದೆ.
ಈ ಅವಕಾಶವನ್ನು ಜಿಲ್ಲೆಯ ಜನತೆ ಸದುಪಯೋಗ ಮಾಡಿಕೊಳ್ಳಬೇಕು.  ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಹಮ್ಮಿಕೊಂಡಿರುವ ಮಿಂಚಿನ ನೋಂದಣಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಬಿ ಕಾವೇರಿ ಅವರು  ಮನವಿ ಮಾಡಿದ್ದಾರೆ.



             










Friday, 6 April 2018

ಮತದಾರರ ಜಾಗೃತಿಗೆ ಉತ್ತೇಜಿಸಿ: ಜಿ.ಪಂ ಸಿ.ಇ.ಓ ಡಾ.ಕೆ. ಹರೀಶ್ ಕುಮಾರ್ ಕರೆ (04-04-2018)

ಮತದಾರರ ಜಾಗೃತಿಗೆ ಉತ್ತೇಜಿಸಿ: ಜಿ.ಪಂ ಸಿ.ಇ.ಓ ಡಾ.ಕೆ. ಹರೀಶ್ ಕುಮಾರ್ ಕರೆ 

ಚಾಮರಾಜನಗರ, ಏ. 04 - ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬರೂ ಸಹ ಸಕ್ರಿಯವಾಗಿ ಉತ್ಸಾಹದಿಂದ ಪಾಲ್ಗೊಳ್ಳಬೇÀಕಿರುವುದರಿಂದ ಮತಗಟ್ಟೆ ಮಟ್ಟದ ಜಾಗೃತಿ ಗುಂಪುಗಳು (ಬಿ.ಎ.ಜಿ) ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಉತ್ತೇಜಿಸುವ ಚಟುವಟಿಕೆಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಜಿಲ್ಲಾ ಮುಖ್ಯಸ್ಥರೂ ಆದ ಡಾ. ಕೆ.ಹರೀಶ್ ಕುಮಾರ್ ಅವರು ತಿಳಿಸಿದರು. 

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ನಡೆದ  ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಮಟ್ಟದ ಜಾಗೃತಿ ಗುಂಪುಗಳ ಸದಸ್ಯರ ಬೃಹತ್ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜನತಂತ್ರ ವ್ಯವಸ್ಥೆಯಲ್ಲಿ ಎಲ್ಲರೂ ಭಾಗವಹಿಸುವಂತಾಗಬೇಕು.  ಮತದಾರರು ಮೊದಲಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು.  ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು.  ಯಾರೂ ಸಹ ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು.  ಇದಕ್ಕಾಗಿಯೇ ಮತಗಟ್ಟೆ ಮಟ್ಟದ ಜಾಗೃತಿ ಗುಂಪುಗಳು ಮತದಾರರ ಪಟ್ಟಿಯಲ್ಲಿ ಯಾರ ಹೆಸರಾದರೂ ಕೈಬಿಟ್ಟು ಹೋಗಿದ್ದಲ್ಲಿ ಜಾಗೃತಿ ಮೂಡಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ತಿಳಿವಳಿಕೆ ನೀಡಬೇಕು ಎಂದು ಹರೀಶ್ ಕುಮಾರ್ ತಿಳಿಸಿದರು.  

ಮತಗಟ್ಟೆ ಮಟ್ಟದ ಜಾಗೃತಿ ಗುಂಪುಗಳು ಚುನಾವಣೆ ಹಿನ್ನಲೆಯಲ್ಲಿ ಮತದಾನಕ್ಕೆ ಪೂರಕವಾಗಿರುವ ಉತ್ತಮ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆಯೂ ತಿಳಿಸಬೇಕಿದೆ.  ಈ ಬಾರಿ ಮತಗಟ್ಟೆಯಲ್ಲಿ ಕನಿಷ್ಠ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ರ್ಯಾಂಪ್, ನೆರಳಿನ ವ್ಯವಸ್ಥೆಯನ್ನು ಖಾತರಿ ಪಡಿಸಲಾಗುತ್ತದೆ. ಜನರಿಗೆ ಮಾಹಿತಿ ನೀಡುವ ಹಲವಾರು ಆಪ್‍ಗಳು ಸಹ ಇವೆ.  ಈ ಎಲ್ಲ ವಿಷಯಗಳನ್ನೂ ಮತಗಟ್ಟೆ ಮಟ್ಟದಲ್ಲಿ ಮತದಾರರಿಗೆ ಅರಿವು ಮೂಡಿಸುವ ಜವಾಬ್ದಾರಿ ಮತಗಟ್ಟೆ ಮಟ್ಟದ ಜಾಗೃತಿ ಗುಂಪಿನ ಸದಸ್ಯರಿಗೆ ಇದೆ ಎಂದರು. 

ವಿಶೇಷ ಚೇತನರು ಮತದಾನದಿಂದ ದೂರ ಉಳಿಯದಂತೆ ಮಾಡುವ ಉದ್ದೇಶದಿಂದ ಮತಗಟ್ಟೆಗೆ ಸುಲಭವಾಗಿ ಪ್ರವೇಶಿಸಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.  ಈಗಾಗಲೇ ಜಿಲ್ಲೆಯಲ್ಲಿರುವ ವಿಶೇಷ ಚೇತನರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.  ಲಿಂಗತ್ವ ಅಲ್ಪ ಸಂಖ್ಯಾತರು ಇನ್ನಿತರ ಎಲ್ಲಾ ವರ್ಗದವರು ಮುಕ್ತವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅಗತ್ಯ ತಿಳಿವಳಿಕೆ ನೀಡುವ ಕೆಲಸವನ್ನು ಸಹ ಮತಗಟ್ಟೆ ಜಾಗೃತಿ ಗುಂಪುಗಳು ನಿರ್ವಹಿಸಬೇಕೆಂದು ಹರೀಶ್ ಕುಮಾರ್ ತಿಳಿಸಿದರು.
ಮತಗಟ್ಟೆ ಮಟ್ಟದ ಜಾಗೃತಿ ಗುಂಪುಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ಥಳೀಯ ಸಂಸ್ಥೆಗಳ ನೌಕರರು ಇರುತ್ತಾರೆ.  ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಜಾಗೃತಿ ಗುಂಪಿನ ಮೇಲ್ವಿಚಾರಣೆ ಮಾಡಲಿದ್ದಾರೆ.  ಗ್ರಾಮಗಳಲ್ಲಿ ಚುನಾವಣೆಗೆ ಬಳಸುವ ವಿದ್ಯುನ್ಮಾನ ಮತಯಂತ್ರ ಹಾಗೂ ಮತ ಖಾತರಿ ಪಡಿಸುವ ವಿ.ವಿ.ಪ್ಯಾಟ್ ಬಳಕೆ ಬಗ್ಗೆಯೂ ಪ್ರಾತ್ಯಕ್ಷಿಕೆ ಮೂಲಕ ಸ್ವೀಪ್ ಸಮಿತಿಯಿಂದ ಅರಿವು ಮೂಡಿಸಲಾಗುತ್ತದೆ.  ಈ ಚಟುವಟಿಕೆಗಳಿಗೆ ಸಹ ಬೆಂಬಲವಾಗಿ ನಿಲ್ಲಬೇಕು ಎಂದು ಹರೀಶ್ ಕುಮಾರ್ ತಿಳಿಸಿದರು.
ಇದೇ ವೇಳೆ ಮಾಸ್ಟರ್ ಟ್ರೈನರ್ ಶ್ರೀನಿವಾಸ್ ಅವರು ವಿದ್ಯುನ್ಮಾನ ಮತಯಂತ್ರ ಹಾಗೂ ವಿ.ವಿ.ಪ್ಯಾಟ್ ಬಳಕೆ ಹಾಗೂ ಕಾರ್ಯವಿಧಾನಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ತಿಳಿವಳಿಕೆ ಮೂಡಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ತರಬೇತಿ ನೋಡಲ್ ಅಧಿಕಾರಿ ಯೋಗೇಶ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಏ. 5ರಂದು ನಗರದಲ್ಲಿ ಡಾ. ಬಾಬು ಜಗಜೀವನರಾಮ್ ಜನ್ಮದಿನಾಚರಣೆ: ಮೆರವಣಿಗೆ ಹಾಗೂ ಸಮಾರಂಭ ಆಯೋಜನೆ 

ಚಾಮರಾಜನಗರ, ಏ. 04 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ 5ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ಡಾ. ಬಾಬು ಜಗಜೀವನ್‍ರಾಮ್ ರವರ ಭಾವಚಿತ್ರ ಮೆರವಣಿಗೆ ಹೊರಡಲಿದೆ.  ಬಳಿಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಜೆ.ಎಚ್. ಪಟೇಲ್ ಸಭಾಂಗಣಕ್ಕೆ ಮೆರವಣಿಗೆ ತಲುಪಲಿದೆ.  ಬಳಿಕ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ
ಬಿ.ಬಿ. ಕಾವೇರಿ ಅವರು ಜನ್ಮ ದಿನಾಚರಣೆಯ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಎಂ. ತಿರುಮಲೇಶ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ಉಚಿತ ಕಂಪ್ಯೂಟರ್ ತರಬೇತಿ

ಚಾಮರಾಜನಗರ, ಏ. 04   ಕೈಗಾರಿಕೆ ಮತ್ತು ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಏಪ್ರಿಲ್ 9 ರಿಂದ ಮೇ 9ರವರೆಗೆ ಉಚಿತ ಕಂಪ್ಯೂಟರ್ ತರಬೇತಿಯನ್ನು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ಕೈಗಾರಿಕೆ ತರಬೇತಿ ಮತ್ತು ಉದ್ಯೊಗ ಇಲಾಖೆ ಕಚೇರಿ (ಕೊಠಡಿ ಸಂಖ್ಯೆ 212) ಯಲ್ಲಿ ಆಯೋಜಿಸಲಾಗಿದೆ.
ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ತಮ್ಮ ಹೆಸರು ನೊಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಲು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08226-224430 ಹಾಗೂ ವೆಂಕಟೇಶ್ (ಮೊ. 8971856973) ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕೆ ಮತ್ತು ತರಬೇತಿ ಮತ್ತು ಉದ್ಯೋಗ ಇಲಾಖೆ ಅಧಿಕಾರಿ ಸಿ.ಎಂ. ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ. 13ರಂದು ಜಿ.ಪಂ. ಅಧ್ಯಕ್ಷರ ಚುನಾವಣೆ

ಚಾಮರಾಜನಗರ, ಏ. 04 -  ಚಾಮರಾಜನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಏಪ್ರಿಲ್ 13ರಂದು ಮಧ್ಯಾಹ್ನ 12 ಗಂಟೆಗೆ ಚಾಮರಾಜನಗರದ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ಸಭೆ ಕರೆಯಲಾಗಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಹೆಚ್ಚುವರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದೆ.

ಚಾ.ನಗರ : ಉದ್ದಿಮೆ ಪರವಾನಗಿ ಪಡೆಯಲು ಸೂಚನೆ

ಚಾಮರಾಜನಗರ, ಏ. 04:- ಪಟ್ಟಣ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಎಲ್ಲ ಉದ್ದಿಮೆದಾರರುಗಳಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಸರಳವಾಗಿ ಉದ್ದಿಮೆ ಪರವಾನಗಿ ದೊರಕಿಸಿಕೊಡುವ ದೃಷ್ಠಿಯಿಂದ ಪೌರಸುಧಾರಣಾ ಕೋಶದಿಂದ ವ್ಯಾಪಾರ (ಉದ್ದಿಮೆ ಪರವಾನಗಿ) ಆನ್ ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.
ಎಲ್ಲ ಉದ್ದಿಮೆದಾರರು ಕಡ್ಡಾಯವಾಗಿ 2018-19ನೇ ಸಾಲಿಗೆ ಕಟ್ಟಡದ ಕಂದಾಯವನ್ನು ಪಾವತಿಸಿ ವ್ಯಾಪಾರ್ ಆನ್ ಲೈನ್ ತಂತ್ರಾಂಶದ ಮೂಲಕವೇ ಉದ್ದಿಮೆ ಪರವಾನಗಿಯನ್ನು ಪಡೆಯಬೇಕು ಮತ್ತು ನವೀಕರಿಸಿಕೊಳ್ಳಬೇಕು.
ಕರ್ನಾಟಕ ಪುರಸಭೆಗಳ ಅಧಿನಿಯಮ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1978ರ ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಎಲ್ಲ ಉದ್ದಿಮೆದಾರರು ಪರವಾನಗಿ ಪಡೆಯಬೇಕು. ಪರವಾನಗಿ ಪಡೆಯದಿರುವವರ ಹಾಗೂ ನವೀಕರಿಸದಿರುವ ಉದ್ದಿಮೆದಾರರ ಉದ್ದಿಮೆಗಳನ್ನು ಮುಚ್ಚಿಸಿ, ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Thursday, 5 April 2018

ಉತ್ತಮ ಜ್ಞಾನ, ಚಿಂತನೆ ಗುಣಗಳಲ್ಲಿ ಬಾಬು ಜಗಜೀವನರಾಮ್ ಪ್ರಮುಖರು : ಜಿ.ಪಂ. ಸಿಇಓ ಡಾ. ಕೆ. ಹರೀಶ್ ಕುಮಾರ್ (05-04-2018 )

ಉತ್ತಮ ಜ್ಞಾನ, ಚಿಂತನೆ ಗುಣಗಳಲ್ಲಿ ಬಾಬು ಜಗಜೀವನರಾಮ್ ಪ್ರಮುಖರು : ಜಿ.ಪಂ. ಸಿಇಓ ಡಾ. ಕೆ. ಹರೀಶ್ ಕುಮಾರ್  

ಚಾಮರಾಜನಗರ, ಏ. 05 - ಹುಟ್ಟಿನಿಂದ ಶ್ರೇಷ್ಠತೆ ಬರುವುದಿಲ್ಲ. ಗಳಿಸಿಕೊಂಡ ಜ್ಞಾನ ಉತ್ತಮ ಚಿಂತನೆಗಳಿಂದ ಶ್ರೇಷ್ಠತೆ ಪ್ರಾಪ್ತವಾಗುತ್ತದೆ. ಇಂತಹ ಗುಣಗಳನ್ನು ಹೊಂದಿರುವವರ ಪೈಕಿ ಡಾ. ಬಾಬು ಜಗಜೀವನರಾಂ ಅವರು ಪ್ರಮುಖರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ  ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ. ಬಾಬು ಜಗಜೀವನ್‍ರಾಮ್ ಅವರು ಬಾಲ್ಯದಿಂದಲೇ ಉತ್ತಮ ಅಧ್ಯಯನ ಮಾಡಿದರು. ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಮಹಾಮೇಧಾವಿ ಎನಿಸಿಕೊಂಡರು. ಹಲವು ನ್ಯೂನತೆ ಹಾಗೂ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಎಲ್ಲವನ್ನು ಮೆಟ್ಟಿ ನಿಂತು ಅಗಾಧ ಸಾಧನೆ ಮಾಡಿದರು ಎಂದರು.
ಅಂದಿನ ಕಾಲಘಟ್ಟದಲ್ಲಿ ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮಗಾಂಧಿ, ಬಾಬು ಜಗಜೀವನರಾಮ್ ಅವರಂಥಹ ಮಹಾನ್ ವ್ಯಕ್ತಿಗಳು ಮಾನವೀಯ ಮೌಲ್ಯಗಳ ದಿಸೆಯಲ್ಲಿ ಚಿಂತನೆ ಮಾಡಿದರು. ಈ ಕಾರಣದಿಂದಲೇ ಎಲ್ಲರಿಗಿಂತ ವಿಭಿನ್ನವಾಗಿ ಗಮನ ಸೆಳೆಯುತ್ತಾರೆ. ಎಲ್ಲ ಕಷ್ಟವನ್ನು ಸಹಿಸಿಕೊಂಡು ಯಶಸ್ವಿಯಾಗಿದ್ದಾರೆ. ಇಂತಹ ಮಹನೀಯರು ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ ಎಂದು ಹರೀಶ್ ಕುಮಾರ್ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಬಾಬು ಜಗಜೀವನರಾಮ್ ಅವರು ಒಳ್ಳೆಯ ಶಿಕ್ಷಣ ಪಡೆದು ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸಿದ್ದರು. ಸಾಮಾಜಿಕ ವ್ಯವಸ್ಥೆಯನ್ನು ತಿದ್ದುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು ಎಂದರು.
ಸಮಾನತೆ ಬಗ್ಗೆ ಸಾರಿದ ಬಾಬು ಜಗಜೀವನರಾಮ್ ಅವರು ಅನೇಕ ಉತ್ತಮ ಕೆಲಸಗಳನ್ನು ನಿರ್ವಹಿಸುವ ಮೂಲಕ ತಮ್ಮದೇ ಆದ ವಿಶಿಷ್ಠ ಛಾಪು ಮೂಡಿಸಿದ್ದಾರೆ. ಇವರ ವಿಚಾರಧಾರೆ ಹಾಗೂ ಉನ್ನತ ಧ್ಯೇಯಗಳ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ತಿಳಿದುಕೊಳ್ಳುವ ಅಗತ್ಯವಿದೆ. ಈ ದಿಸೆಯಲ್ಲಿ ಯುವ ಪೀಳಿಗೆ ಮುಂದಾಗಬೇಕೆಂದು ಗಾಯತ್ರಿ ಅವರು ಸಲಹೆ ಮಾಡಿದರು.
ಮುಖ್ಯ ಉಪನ್ಯಾಸ ನೀಡಿದ ಕೃಷಿ ಜಂಟಿ ನಿರ್ದೇಶಕರಾದ ಎಂ. ತಿರುಮಲೇಶ ಅವರು ಶೋಷಿತ ಸಮುದಾಯದಲ್ಲಿ ಕಷ್ಟ ವೈಫಲ್ಯಗಳ ಪರಿಸ್ಥಿತಿ ನಡುವೆಯೂ ಯಾವುದನ್ನೂ ಲೆಕ್ಕಿಸದೆ ಅಧ್ಯಯನ ಮಾಡಿ ಉನ್ನತ ಸ್ಥಾನಕ್ಕೆ ಏರಿದ ಮಹಾನ್ ನಾಯಕರಾದ ಡಾ. ಬಾಬು ಜಗಜೀವನರಾಮ್, ಅಂಬೇಡ್ಕರ್ ಸೇರಿದಂತೆ ಎಲ್ಲರ ಬಗ್ಗೆಯೂ ಇಂದಿನ ಯುವ ಸಮೂಹ ಅರಿಯಬೇಕಿದೆ. ಸ್ವಾಭಿಮಾನ, ಗುರಿ, ಸಂವಹನ ಕಲೆ, ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡು ಮೇರು ವ್ಯಕ್ತಿತ್ವದ ಪ್ರಭಾವವನ್ನು ಮನಸ್ಸುಗಳಿಗೆ ಹರಿಯಬಿಡಬೇಕಿದೆ ಎಂದರು.
ಆರ್ಥಿಕ, ರಾಜಕೀಯ, ಸಾಮಾಜಿಕವಾಗಿ ಅನುಕೂಲವಲ್ಲದ ಸ್ಥಿತಿಯಲ್ಲಿಯೂ ಹಲವಾರು ನಾಯಕರು ಪರಿಶ್ರಮದಿಂದ ಹೇಗೆ ಮುಂಚೂಣಿಗೆ ಬಂದರು ಎಂಬ ಬಗ್ಗೆ ಗಂಭೀರ ಚಿಂತನೆ ಮಾಡಬೇಕಿದೆ. ಸೂಕ್ಷ್ಮ ಪರಿಸ್ಥಿತಿಯಲ್ಲಿಯೂ ಶಿಕ್ಷಣದಂತಹ ಪ್ರಮುಖ ವಿಷಯಗಳಿಗೆ ಒಲವು ತೋರಬೇಕಿದೆ. ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಸಿದ್ಧರಾಗಬೇಕಿದೆ. ಕೀಳರಿಮೆ ತೊರೆದು ಉನ್ನತ ಅಧ್ಯಯನ ಸ್ಥಾನಮಾನಗಳನ್ನು ಪಡೆಯಲು ದಿಟ್ಟ ನಿಲುವು ತಳೆಯಬೇಕು ಎಂದು ತಿರುಮಲೇಶ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಪ್ರವಾಸಿ ಮಂದಿರದಿಂದ ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರ ಮೆರವಣಿಗೆಯು ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಮಾವೇಶಗೊಂಡಿತು. 
ಏ. 15ರಂದು ವಸತಿಶಾಲೆಗಳ ಪ್ರವೇಶಕ್ಕೆ ಪರೀಕ್ಷೆ
ಚಾಮರಾಜನಗರ, ಏ. 05 - ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ, ಡಾ. ಬಿ.ಆರ್. ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2018-19ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಏಪ್ರಿಲ್ 15ರಂದು ಪ್ರವೇಶ ಪರೀಕ್ಷೆ ನಿಗದಿಯಾಗಿದೆ.
ಈ ಹಿಂದೆ ನಿಗದಿಯಾಗಿದ್ದ ಪ್ರವೇಶ ಪರೀಕ್ಷೆಗೆ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ತದನಂತರ ತಡೆಯಾಜ್ಞೆ ತೆರವುಗೊಳಿಸಿರುವುದರಿಂದ ಪ್ರವೇಶ ಪರೀಕ್ಷೆಯು ಏಪ್ರಿಲ್ 15ರಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಧಾನಸಭಾ ಚುನಾವಣೆ – 2018:
ಅಬಕಾರಿ ಅಕ್ರಮಗಳ ಕುರಿತು ದೂರು, ಮಾಹಿತಿ ನೀಡಿ

ಚಾಮರಾಜನಗರ, ಏ. 05 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಬಕಾರಿ ಇಲಾಖೆಗೆ ಸಂಬಂಧಿಸಿದ ಅಕ್ರಮಗಳ ಬಗ್ಗೆ ದೂರು ಅಥವಾ ಯಾವುದೇ ಮಾಹಿತಿಗಳನ್ನು ಇಲಾಖೆಯ ಶುಲ್ಕ ರಹಿತ (ಟೋಲ್‍ಫ್ರೀ) ದೂರವಾಣಿ ಸಂಖ್ಯೆ 18004252550 ಗೆ ಕರೆ ಮಾಡಿ ತಿಳಿಸುವಂತೆ ಅಬಕಾರಿ ಇಲಾಖೆ ಉಪ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಏ. 6, 7ರಂದು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ

ಚಾಮರಾಜನಗರ, ಏ. 05 - ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಸಮಿತಿ ವತಿಯಿಂದ ಏಪ್ರಿಲ್ 6 ಹಾಗೂ 7ರಂದು ನಗರದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 6ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜೇಶ್ವರ ದೇವಸ್ಥಾನದ ಬಳಿ ಹಾಗೂ 7ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದ ಬಳಿ ಜಾಥಾ ಹೊರಡಲಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಅಧ್ಯಕ್ಷರೂ ಆದ ಡಾ. ಕೆ. ಹರೀಶ್ ಕುಮಾರ್ ಅವರು ಜಾಥಾಗೆ ಚಾಲನೆ ನೀಡಲಿದ್ದಾರೆ.
ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಇಲಾಖಾ ಅಧಿಕಾರಿಗಳು, ಸಿಬ್ಬಂದಿ ಸಹ ಹಾಜರಾಗುವಂತೆ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಏ. 05 -  ತೋಟಗಾರಿಕೆ ಇಲಾಖೆಯು ತೋಟಗಾರಿಕೆ ತರಬೇತಿ ಕೇಂದ್ರ, ಸೋಮನಹಳ್ಳಿ ಕಾವಲ್, ಹಾಸನ ಜಿಲ್ಲೆ ಮತ್ತು ತೋಟಗಾರಿಕೆ ಕೇಂದ್ರ, ರಂಗಸಮುದ್ರ, ಟಿ, ನರಸೀಪುರ ತಾಲೂಕು, ಮೈಸೂರು ಜಿಲ್ಲೆ ಇಲ್ಲಿ ರೈತ ಮಕ್ಕಳಿಗೆ ಮೇ 5 ರಿಂದ 2019ರ ಫೆಬ್ರವರಿ 28ರವರೆಗೆ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಯನ್ನು ನೀಡಲಿದೆ.
ಇಚ್ಚೆಯುಳ್ಳ ಅಭ್ಯರ್ಥಿಗಳು ನಗರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ) ಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಏಪ್ರಿಲ್ 24ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ನಗರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಅಥವಾ ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಇವರನ್ನು ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ. 11ರ ಸಾಹಸ ಚಾರಣ ಕ್ರೀಡೆ ಮುಂದೂಡಿಕೆ

ಚಾಮರಾಜನಗರ, ಏ. 05 - ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏಪ್ರಿಲ್ 11 ರಿಂದ 13ರವರೆಗೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕುಂತಿಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಾಹಸ ಚಾರಣ ಕ್ರೀಡೆಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08226-224932 ಹಾಗೂ ಮೊಬೈಲ್ 9482718278 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ. 9, 10ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ

ಚಾಮರಾಜನಗರ, ಏ. 05 - ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಸಮುದಾಯದತ್ತ ಶಾಲಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 9ರಂದು ಪ್ರಾಥಮಿಕ ಶಾಲೆಯಲ್ಲಿ ಹಾಗೂ ಏಪ್ರಿಲ್ 10ರಂದು ಪ್ರೌಢಶಾಲೆಗಳಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಲಿದೆ. ಅಂದು ಶಾಲೆ ಮುಖ್ಯ ಶಿಕ್ಷಕರು ಪೋಷಕರನ್ನು ಆಹ್ವಾನಿಸಿ ವಿದ್ಯಾರ್ಥಿಗಳ ಕಲಿಕೆಯ ಪ್ರಗತಿ ನೋಟ, ಕುಂದುಕೊರತೆ ಇನ್ನಿತರ ವಿಷಯಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದೆ.
ಬ್ಲಾಕ್ ಹಾಗೂ ಜಿಲ್ಲಾ ಹಂತದಲ್ಲಿ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು, ಮಾರ್ಗದರ್ಶಕರು ಶಾಲಾ ಶೈಕ್ಷಣಿಕ ಅಭಿವೃದ್ಧಿಯ ಕುರಿತು ಎಸ್‍ಡಿಎಂಸಿ ಸದಸ್ಯರೊಂದಿಗೆ ನಡೆಸಬೇಕು. ಅಗತ್ಯ ನಿರ್ಣಯ ಕೈಗೊಂಡು ಅದರ ವರದಿಯನ್ನು ಕಳುಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮಾರ್ಗಸೂಚಿ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*

  ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*    ಚಾಮರಾಜನಗರ, ಸೆಪ್ಟೆಂಬರ್ 28 :- ಈ ಬಾರಿಯ ರಾಷ್ಟ್ರೀಯ ಲೋ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು