Thursday, 8 November 2018

25-10-2018 to 30-10-2018 (ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದರಾದ ಆರ್. ಧ್ರುವನಾರಾಯಣ ತಾಕೀತು)

ಅ. 31ರಂದು ನಗರದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಮತ್ತು ಸಂಕಲ್ಪ ದಿವಸ್ ಕಾರ್ಯಕ್ರಮ

ಚಾಮರಾಜನಗರ, ಅ. 30   ನೆಹರು ಯುವ ಕೇಂದ್ರ, ಎಂಸಿಎಸ್ ಪಬ್ಲಿಕ್ ಶಾಲೆ ಹಾಗೂ ಸಾಧನಾ ಸಂಸ್ಥೆ ಇವರ ಸಹಯೋಗದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ್ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯತಿಥಿ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿವಸ್ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಂ.ಸಿ.ಎಸ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಉದ್ಘಾಟನೆ ನೆರವೇರಿಸುವರು. ಎಂಸಿಎಸ್ ಪಬ್ಲಿಕ್ ಶಾಲೆ ಪ್ರಾಂಶುಪಾಲರಾದ ಆರ್.ಎಂ. ಮಂಜುನಾಥ್ ಅಧ್ಯಕ್ಷತೆ ವಹಿಸುವರು.
ವಕೀ¯ರಾದ ಡಿ.ಎಂ. ಶ್ರೀಕಂಠಮೂರ್ತಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್‍ಕುಮಾರ್, ಸಾಧನಾ ಸಂಸ್ಥೆ ನಿರ್ದೇಶಕರಾದ ಟಿ. ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 ಉಪನ್ಯಾಸಕರು ಹಾಗೂ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತರಾದ ಸುರೇಶ್ ಋಗ್ವೇದಿ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಅ. 30  ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನವೆಂಬರ್ 2 ರಿಂದ 20ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ನವೆಂಬರ್ 2ರಂದು ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, 9ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ, 13ರಂದು ಯಳಂದೂರು, 16ರಂದು ಕೊಳ್ಳೇಗಾಲ ಹಾಗೂ 20ರಂದು ಹನೂರಿನ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು, ನಾಗರಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳದ ಉಪ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

ಅ. 31ರಂದು ರಾಷ್ಟ್ರೀಯ ಏಕತಾ ದಿವಸ್: ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ
ಚಾಮರಾಜನಗರ, ಅ. 30  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಯುವ  ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಪ್ರತಿಜ್ಞಾ ವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆÉ.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿ, ಸಿಬ್ಬಂದಿ, ಸಂಘಸಂಸ್ಥೆಗಳು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೆಳಿಗ್ಗೆ 10.30 ಗಂಟೆಗೆ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-224932 ಅಥವಾ ಮೊ. 9611172984 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಅ. 31ರಂದು ಹಂಚಿತಾಳಪುರದಲ್ಲಿ ಇ-ಸ್ವತ್ತು ಖಾತಾ ಅಭಿಯಾನ
ಚಾಮರಾಜನಗರ, ಅ. 30  ತಾಲೂಕಿನ ಚಂದಕವಾಡಿ ಗ್ರಾಮ ಪಂಚಾಯಿತಿಯ ಹಂಚಿತಾಳಪುರ ಗ್ರಾಮದಲ್ಲಿ ಇ-ಸ್ವತ್ತು ಖಾತಾ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 9 ಗಂಟೆಗೆ ಏರ್ಪಡಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 3ರಂದು ಚಾ.ನಗರ ತಾಲೂಕು ಪ.ಜಾ, ಪ.ವರ್ಗದ ಹಿತರಕ್ಷಣಾ ಸಮಿತಿ ಸಭೆ
ಚಾಮರಾಜನಗರ, ಅ. 30 - ಚಾಮರಾಜನಗರ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿ ಸಭೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 3ರಂದು ಬೆಳಿಗ್ಗೆ 11.30 ಗಂಟೆಗೆ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಇದೆ.
ಸಭೆಯಲ್ಲಿ ಎಲ್ಲ ತಾಲೂಕುಮಟ್ಟದ ಅಧಿಕಾರಿಗಳು, ಸಮಿತಿ ಸದಸ್ಯರು ಹಾಜರಾಗುವಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ಪಾದನಾ ಕ್ಷೇತ್ರಗಳ ಉದ್ದಿಮೆದಾರರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಅ. 3- ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಸೂಕ್ಷ್ಮ, ಸಣ್ಣ, ಮಧ್ಯಮ, ಹಾಗೂ ಬೃಹತ್ ಕೈಗಾರಿಕೆಗಳು ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿನ ಅರಂಭಿಕ ಉದ್ದಿಮೆಗಳನ್ನು ಗುರುತಿಸಿ ಉತ್ತೇಜಿಸುವ ಸಲುವಾಗಿ ಸರ್. ಎಂ. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಸರ್ಕಾರವು ನಿರ್ಧರಿಸಿದ್ದು, ಉದಯೋನ್ಮುಖ ಉತ್ಪಾದನಾ ಕ್ಷೇತ್ರಗಳ ಅರ್ಹ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಮತ್ತು ತೋಟಗಾರಿಕೆ ಮತ್ತು ಕಾಫಿ, ಗೋಡಂಬಿ, ಮತ್ತು ಸಾಂಬಾರ ಪದಾರ್ಥಗಳನ್ನೊಳಗೊಂಡ ಆಹಾರ ಸಂಸ್ಕರಣೆ ಘಟಕ, ವಿದ್ಯುಚ್ಛಕ್ತಿ ಸಲಕರಣೆಗಳು, ಇಂಜಿನಿಯರಿಂಗ್ (ಮಶೀನ್ ಟೂಲ್ಸ್), ಆಟೋಮೊಬೈಲ್ ಕಾಂಪೊನೆಂಟ್ಸ್, ಏರೋಸ್ಪೇಸ್, ರಕ್ಷಣಾ ಘಟಕಗಳು, ಕರಕುಶಲ ವಸ್ತುಗಳು, ಕೈಮಗ್ಗ ಪದಾರ್ಥಗಳು, ಖನಿಜಗಳು, ಜವಳಿ ಹಾಗೂ ಸಿದ್ದ ಉಡುಪುಗಳು, ರತ್ನಾಭರಣಗಳು, ಔಷಧ, ಸಾಗರೋತ್ಪನ್ನಗಳು, ಚರ್ಮ, ಉಕ್ಕು ಹಾಗೂ ಮರದ ಉತ್ಪನ್ನಗಳು, ಯಂತ್ರೋಪಕರಣ, ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಉದ್ದಿಮೆದಾರರು ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 9 ಕಡೆಯ ದಿನ. ಅರ್ಜಿ ನಮೂನೆಯನ್ನು ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯ ಕೊಠಡಿ ಸಂಖ್ಯೆ 323ರಲ್ಲಿ ಪಡೆಯಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08226-224915, 224916ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ. 







ಕೊಳ್ಳೇಗಾಲ ನಗರಸಭೆ ಚುನಾವಣೆ : ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ, ಆ. 25 - ಕೊಳ್ಳೇಗಾಲ ನಗರಸಭೆಯ ವಾರ್ಡ್ 9ರ ಚುನಾವಣೆಗೆ ಮತದಾನ ಅಕ್ಟೋಬರ್ 28ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸಂಬಂಧಪಟ್ಟ ವಾರ್ಡ್ ವ್ಯಾಪ್ತಿಯೊಳಗೆ ಸಂತೆ ಹಾಗೂ ಎಲ್ಲ ತರಹದ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಮತದಾನದಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೊಳ್ಳೇಗಾಲ ನಗರಸಭೆಯ ವಾರ್ಡ್ 9ರ ವ್ಯಾಪ್ತಿಯಲ್ಲಿ ಸಂತೆ ಜಾತ್ರೆ ನಿಷೇಧ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ ತಾ.ಪಂ. ಉಪಚುನಾವಣೆ : ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ, ಆ. 25 - ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಕ್ಷೇತ್ರದಲ್ಲಿ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪಚುನಾವಣೆಗೆ ಮತದಾನ ಅಕ್ಟೋಬರ್ 28ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯೊಳಗೆ ಸಂತೆ ಹಾಗೂ ಎಲ್ಲ ತರಹದ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಮತದಾನದಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತೆರಕಣಾಂಬಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರದೇಶಗಳಲ್ಲಿ ಸಂತೆ, ಜಾತ್ರೆ ನಿಷೇಧ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಿಪ ವತಿಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಗಣಿತ ಒಲಂಪಿಯಾಡ್ ಸ್ಪರ್ಧೆ
ಚಾಮರಾಜನಗರ, ಅ. 25  ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ರಾಜ್ಯದ ಪ್ರೌಢಶಾಲೆಗಳ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ – ಗಣಿತ ಒಲಂಪಿಯಾಡ್ ಆಯೋಜಿಸಲಾಗುತ್ತಿದೆ.
ಗಣಿತ ಒಲಂಪಿಯಾಡ್ ಸ್ಪರ್ಧೆಯು ಒಂದು ಪಠ್ಯರೂಪಕ ಚಟುವಟಿಕೆಯÁಗಿದ್ದು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ, ಚುರುಕುತನ ಹಾಗೂ ಕೌಶಲ್ಯಗಳನ್ನು ಬÉಳೆಸುವಲ್ಲಿ ಮಹತ್ವಪೂರ್ಣವಾಗಿದೆ.
ವಿಜ್ಞಾನ ಗಣಿತ ಒಲಂಪಿಯಾಡ್ ಸ್ಪರ್ಧೆಯಲ್ಲಿ ರಾಜ್ಯ ಯಾವುದೇ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 9ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರತಿ ಶಾಲೆಯಿಂದ ಗರಿಷ್ಟ 10 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಬಹುದು.
ಜಿಲ್ಲಾ ಮಟ್ಟದ ಸ್ಪರ್ಧೆಯು ನವೆಂಬರ್ 25ರ ಭಾನುವಾರ ರಾಜ್ಯದ ಎಲ್ಲ ವಲಯಗಳಲ್ಲಿ (ಬ್ಲಾಕ್) ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಗದಿಪಡಿಸುವ ಶಾಲೆ, ಸಂಸ್ಥೆಗಳಲ್ಲಿ ಆಯೋಜನೆಗೊಳ್ಳಲಿದೆ.
ಜಿಲ್ಲಾ ಮಟ್ಟದಲ್ಲಿ ಗರಿಷ್ಠ ಅಂಕಗಳನ್ನು ಪಡೆಯುವ ಮೂರು ವಿದ್ಯಾರ್ಥಿಗಳಿಗೆ ತಲÁ 2 ಸಾವಿರ ರೂ.ಗಳ ನಗದು ಬಹುಮಾನ, ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳ ಶಾಲೆಗಳಿಗೆ 500 ರೂ. ಮೊತ್ತದ ಕೊಡುಗೆ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.
ರಾಜ್ಯ ಮಟ್ಟದ ಸ್ಪರ್ಧೆ ಮೈಸೂರಿನಲ್ಲಿ ಡಿಸೆಂಬರ್ 15, 16ರಂದು ನಡೆಯಲಿದೆ. ರಾಜ್ಯ ಮಟ್ಟದ ವಿಜ್ಞಾನ ಗಣಿತ ಒಲಂಪಿಯಾಡ್ ಸ್ಪರ್ಧೆಯಲ್ಲಿ ವಿಜೇತರಾದ 3 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಪುರಸ್ಕರಿಸಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳ ಶಾಲೆಗಳಿಗೆ ತಲಾ 5 ಸಾವಿರ ರೂ. ಮೊತ್ತದ ಕೊಡುಗೆ ನೀಡಿ ಗೌರವಿಸಲಾಗುವುದು.
ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಯು 1 ರಿಂದ 9ನೇ ತರಗತಿಯ ವಿಜ್ಞಾನ ಗಣಿತ ಪಠ್ಯವನ್ನು ಆಧರಿಸಿದ್ದು 100 ನಿಮಿಷಗಳ ಅವಧಿಯ 100 (ಎಂಸಿಕ್ಯೂ) ಬಹು ಆಯ್ಕೆ ಪ್ರಶ್ನೆಗಳÀುಳ್ಳ ಓಎಂಆರ್ ಶೀಟ್ ಪದ್ಧತಿಯಲ್ಲಿ ಲಿಖಿತ ರೂಪದಲ್ಲಿ ನಡೆಯಲಿದÉ. ಪ್ರಶ್ನೆಗಳನ್ನು ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪ್ರತ್ಯೇಕವಾಗಿ ಒದಗಿಸಲಾಗುವುದು. 100 ನಿಮಿಷಗಳಲ್ಲಿ 100 ಪ್ರಶ್ನೆಗೆ ಉತ್ತರಿಸಬೇಕು. ತಪ್ಪು ಉತ್ತರಗಳಿಗೆ ಅಂಕಗಳನ್ನು ಕಡಿತಗೊಳಿಸಲÁಗುವುದು.
ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಶಾಲಾ ಮುಖ್ಯಸ್ಥರು ತಮ್ಮ ಶಾಲಾ ಹಂತದಲ್ಲಿ ಸ್ಪರ್ಧೆಯೊಂದನ್ನು ಏರ್ಪಡಿಸಿ ಅತ್ಯುತ್ತಮ ಪ್ರತಿಭೆ ತೋರಿದ 10 ವಿದ್ಯಾರ್ಥಿಗಳ ಹೆಸರು ವಿಳಾಸಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಅಕ್ಟೋಬರ್ 31ರ ಒಳಗೆ ಬೆಂಗಳೂರಿನ ವಿಜ್ಞಾನ ಪರಿಷತ್ತಿನ ಕೇಂದ್ರ ಕಚೇರಿಗೆ ತಲುಪಿಸುವಂತೆ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೆವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಅ. 27ರಂದು ಲೋಕಸಭಾ ಸದಸ್ಯರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆ
ಚಾಮರಾಜನಗರ, ಅ. 25  ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ವ್ಯಕ್ತಿ ಕಾಣೆ : ಸುಳಿವು ನೀಡಲು ಮನವಿ
ಚಾಮರಾಜನಗರ, ಅ. 25 - ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ರಾಮಕೃಷ್ಣ್ಲ ಎಂಬುವರು ಕಾಣೆಯಾಗಿರುವ ಕುರಿತು ಅವರ ಮಗ ಸಿ.ಆರ್. ಮುರಳೀಧರ್ ದೂರು ದಾಖಲಿಸಿದ್ದು ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
ರಾಮಕೃಷ್ಣ ಅವರು ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆಂದು ತಿಳಿಸಿ ಹೋದವರು ಇದುವರೆವಿಗೂ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. 
5 ಅಡಿ ಎತ್ತರ, ದುಂಡು ಮುಖ, ಸಾದಾರಣ ಮೈಕಟ್ಟು ಹೊಂದಿದ್ದು ಬಿಳಿ ಬಣ್ಣದ ಶರ್ಟ್, ನೀಲಿ ಬಣ್ಣದ ಪ್ಯಾಂಟ್, ಕಪ್ಪು ಕನ್ನಡಕ ಧರಿಸಿರುತ್ತಾರೆ.
ಇವರ ಮಾಹಿತಿ ದೊರೆತಲ್ಲಿ ನಗರದ ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪಟ್ಟಣ ಪೊಲೀಸ್ ಠಾಣೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
 ಫಸಲ್ ಬಿಮಾ ಯೋಜನೆ ಅನುಷ್ಠಾನ
ಚಾಮರಾಜನಗರ, ಅ. 25  ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2018-19ರ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ರೈತರು, ಬೆಳೆಗಾರರು ಈ ಸೌಲಭ್ಯ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.
ಹಿಂಗಾರು ಹಂಗಾಮಿನಲ್ಲಿ ನೀರಾವರಿ ಆಶ್ರಯದಲ್ಲಿ ಬೆಳೆಯಲಾಗುವ ಭತ್ತ, ಮುಸುಕಿನ ಜೋಳ, ರಾಗಿ, ಈರುಳ್ಳಿ, ಟೊಮೆಟೋ, ಮಳೆ ಆಶ್ರಯದಲ್ಲಿ ಬೆಳೆಯಲಾಗುವ ರಾಗಿ, ಮುಸುಕಿನ ಜೋಳ, ಕಡಲೆ, ಹುರುಳಿ, ಹೆಸರು ಬೆಳೆಗಳನ್ನು ಹಾಗೂ ಬೇಸಿಗೆ ಹಂಗಾಮಿಗೆ ನೀರಾವರಿ ಆಶ್ರಯದಲ್ಲಿ ಬೆಳೆಯಲಾಗುವ ಭತ್ತ, ರಾಗಿ, ಈರುಳ್ಳಿ, ಟೊಮೆಟೋ ಬೆಳೆಗಳನ್ನು ವಿಮೆಗೆ ಒಳಪಡಿಸಿ ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.
ಹಿಂಗಾರು ಹಂಗಾಮಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಕೊಳ್ಳೇಗಾಲ ತಾಲೂಕಿಗೆ ಸಂಬಂಧಿಸಿದಂತೆ ಮಳೆ ಆಶ್ರಿತ ಹುರಳಿ ಬೆಳೆಯನ್ನು ಅಧಿಸೂಚಿಸಲಾಗಿದೆ.
ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಸೀತಿಯಂತಹ ದಾಖಲೆಗಳನ್ನು ನೀಡಬೇಕು.
ಹೆಚ್ಚಿನ ಮಾಹಿತಿಗೆ ಆಯಾ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.




ಕನ್ನಡ ರಾಜೋತ್ಸವ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ
ಚಾಮರಾಜನಗರ, ಅ. 25- ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ನವೆಂಬರ್ 1ರಂದು ನಗರದಲ್ಲಿ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀಮಾನಿಸಲಾಯಿತು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಕನ್ನಡ ರಾಜೋತ್ಸವ ಅಚರಣೆ ಸಂಬಂಧ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗÉೂಳ್ಳಲಾಯಿತು.
ಸಭೆಯ ಆರಂಭದಲ್ಲೇ ಮಾತನಾಡಿದ ಕನ್ನಡಪರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯೋತ್ಸವ ಕಾರ್ಯಕ್ರಮ ಯಾವುದೇ ಗೊಂದಲವಿಲ್ಲದೆ ನಡೆಯಬೇಕು. ಸರ್ಕಾರಿ ಶಾಲಾಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಆದ್ಯತೆ ನೀಡಬೇಕು. ನವೆಂಬರ್ ತಿಂಗಳಿನಲ್ಲಿ ಸಂಪೂರ್ಣವಾಗಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಬೇಕು. ಕನ್ನಡ ಅನುಷ್ಠಾನವು ಪೂರ್ಣ ಪ್ರಮಾಣದಲ್ಲಿ ನಡೆಯಬೇಕು ಎಂಬ ಸಲಹೆ ನೀಡಿದರು.
ಕನ್ನಡ ಕುರಿತ ವಿಚಾರ ಸಂಕಿರಣವನ್ನು ನವೆಂಬರ್ ತಿಂಗಳಿನಲ್ಲಿ ಆಯೋಜಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು.  ಎಲ್ಲ ಶಾಲೆಗಳು, ಬ್ಯಾಂಕುಗಳು, ಕಚೇರಿಯಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಣೆಯಾಗಬೇಕು ಎಂಬುದೂ ಸೇರಿದಂತೆ ವಿವಿಧ ಸಲಹೆಗಳನ್ನು ಮುಖಂಡರು ನೀಡಿದರು.
ಎಲ್ಲರ ಸಲಹೆಗಳನ್ನು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಈ ಬಾರಿಯು ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕನ್ನಡ ರಾಜೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಸರ್ಕಾರಿ ಶಾಲಾ ಮಕ್ಕಳಿಗೆ ಹೆಚ್ಚು ಅವಕಾಶ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ಕೊಡಲಾಗುತ್ತದೆ. ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಸೂಚನೆ ನೀಡಲಾಗುತ್ತದೆ. ಕನ್ನಡ ಅನುಷ್ಠಾನ ಸಂಬಂಧ ನವೆಂಬರ್ 2ನೇ ವಾರದಲ್ಲಿ ಪ್ರತ್ಯೇಕ ಸಭೆ ಕರೆಯಲಾಗುವುದೆಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವದಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ, ನಾಡು ನುಡಿ ಕುರಿತು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಬೇಕು. ಸಂಜೆಯ ವೇಳೆ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲೂ ವೈವಿಧ್ಯತೆ ಮೂಡಿಬರಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅಗತ್ಯ ತಾಲೀಮು ನಡೆಸಲು ನಿರ್ದೇಶನ ನೀಡಲಾಗಿದೆ ಎಂದು ಕಾವೇರಿ ಅವರು ತಿಳಿಸಿದರು.
ರಾಜ್ಯೋತ್ಸವಕ್ಕೆ ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆ, ಕ್ರೀಡಾಂಗಣ ಸುತ್ತಮುತ್ತಲ ಪ್ರದೇಶಗಳಲ್ಲಿ ವಿಶೇಷವಾಗಿ ಸ್ವಚ್ಚತೆ ಕಾರ್ಯ ಕೈಗೊಳ್ಳಬೇಕು. ಕಾರ್ಯಕ್ರಮದಂದು ತಳಿರು-ತೋರಣಗಳಿಂದ ಸಿಂಗರಿಸಬೇಕು. ಪ್ರಮುಖ ಸ್ಥಳಗಳಲ್ಲಿ ದೀಪಾಲಂಕಾರ ವ್ಯವಸ್ಥೆಯು ಇರಬೇಕೆಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಕನ್ನಡ ಪರ ಸಂಘಟನೆಗಳ ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ, ಚಾ.ಗು. ನಾಗರಾಜು, ಚಾ.ಹ. ಶಿವರಾಜು, ಗು. ಪುರುಷೋತ್ತಮ್, ಸಿ.ಎಂ. ಕೃಷ್ಣಮೂರ್ತಿ, ಜಿ. ಬಂಗಾರು, ಆಲೂರು ನಾಗೇಂದ್ರ, ಅಂಬರೀಷ್, ಬ್ಯಾಡಮೂಡ್ಲು ಬಸವಣ್ಣ, ಶಿವಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ವಿನಯ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚನ್ನಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕೊಳ್ಳೇಗಾಲ ನಗರಸಭೆ, ತೆರಕಣಾಂಬಿ ತಾ.ಪಂ ಚುನಾವಣೆ : ಬಹಿರಂಗ ಪ್ರಚಾರ ಅಂತ್ಯ
ಚಾಮರಾಜನಗರ, ಆ. 25  ಗುಂಡ್ಲುಪೇಟೆ ತಾಲ್ಲೂಕು ಪಂಚಾಯಿತಿ ತೆರಕಣಾಂಬಿ ಕ್ಷೇತ್ರದ ಉಪ ಚುನಾವಣೆ ಮತ್ತು ಕೊಳ್ಳೇಗಾಲ ನಗರಸಭೆಯ ವಾರ್ಡ್ ನಂ. 9 ಕ್ಕೆ ಚುನಾವಣೆ ಸಂಬಂಧ ಅಕ್ಟೋಬರ್ 28 ರಂದು ಮತದಾನ ನಡೆಯಲಿದ್ದು, ಮತದಾನದ ದಿನಾಂಕದಂದು ಮತದಾನ ಪ್ರಾರಂಭವಾಗುವ ಮುಂಚಿನ 48 ಗಂಟೆ ಒಳಗೆ ಅಂದರೆ ಅಕ್ಟೋಬರ್ 26 ರ ಬೆಳಿಗ್ಗೆ 7 ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.
ಬಹಿರಂಗ ಪ್ರಚಾರದ ಅಂತ್ಯದ ಸಮಯದ ನಂತರ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ಅಭ್ಯರ್ಥಿಗಳ ಪರವಾಗಿ ಇತರರು ಯಾವುದೇ ವಿಧದಲ್ಲಿ ಬಹಿರಂಗ ಚುನಾವಣಾ ಪ್ರಚಾರವನ್ನು ನಡೆಸಬಾರದು. ಬೆಂಬಲಕ್ಕಾಗಿ ಕ್ಷೇತ್ರ ವ್ಯಾಪ್ತಿಯ ಹೊರಗಿನಿಂದ ಚುನಾವಣಾ ಪ್ರಚಾರಕ್ಕಾಗಿ ತಾರಾ ಪ್ರಚಾರಕರು ಮತ್ತು ಇತರೆ ವ್ಯಕ್ತಿಗಳನ್ನು ಕರೆಸಿಕೊಂಡಿದ್ದಲ್ಲಿ ಅಂತಹವರು ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯನ್ನು ಬಿಡಬೇಕು. ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಲ್ಲದ ವ್ಯಕ್ತಿಗಳು ಆ ಕ್ಷೇತ್ರ ವ್ಯಾಪ್ತಿ ಬಿಟ್ಟು ಹೊರಗೆ ಹೋಗಬೇಕು. ಬಹಿರಂಗ ಪ್ರಚಾರ ಮುಕ್ತಾಯಗೊಂಡ ನಂತರ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಏರ್ಪಡಿಸಬಾರದು. ಮತದಾರರಿಗೆ ಮೊಬೈಲ್ ಮೂಲಕ ಎಸ್.ಎಂ.ಎಸ್ ಕಳುಹಿಸುವಂತಿಲ್ಲ. ಎಫ್.ಎಂ. ರೇಡಿಯೋ, ಟಿ.ವಿ. ಚಾನೆಲ್ ಮಾಧ್ಯಮಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಮತದಾರರಿಗೆ ವೀಡಿಯೋ ಕ್ಲಿಪ್ಪಿಂಗ್ ಪ್ರದರ್ಶಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಅ. 27ರಂದು ಲೋಕಸಭಾ ಸದಸ್ಯರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆ
ಚಾಮರಾಜನಗರ, ಅ. 26 - ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಅ. 27ರಂದು ವಿಚಾರಣಾಧೀನ ಖೈದಿಗಳಿಗೆ ಕಾನೂನು ಸೇವೆಗಳ ಅಭಿಯಾನ
ಚಾಮರಾಜನಗರ, ಆ. 26 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರಾಗೃಹ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗಳಿಗೆ ಕಾನೂನು ಸೇವೆಗಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಶಾಂತಶ್ರೀ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಕಾರ್ಯದರ್ಶಿಗಳಾದ ಅರುಣ್ ಕುಮಾರ್, ಜಿಲ್ಲಾ ಕಾರಾಗೃಹದ ಪ್ಯಾನಲ್ ವಕೀಲರಾದ ಕೆ.ಬಿ. ವೀರಭದ್ರಸ್ವಾಮಿ ಹಾಗೂ ಎ.ಎಸ್. ಮಂಜುನಾಥಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಅ. 29ರಿಂದ ನಗರದಲ್ಲಿ ಉಚಿತ ಕಂಪ್ಯೂಟರ್ ತರಬÉೀತಿ
ಚಾಮರಾಜನಗರ, ಆ. 2:- ನಗರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಕ್ಟೋಬರ್ 29ರಿಂದ ಉಚಿತ ಕಂಪ್ಯೂಟರ್ ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಯು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೊಗ ಇಲಾಖೆಯಲ್ಲಿ ನಡೆಯಲಿದ್ದು ಅಭ್ಯರ್ಥಿಗಳು ಸ್ವ ವಿವರದೊಂದಿಗೆ ಹೆಸರು ನೊಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಯವರನ್ನು (ದೂ.ಸಂ.08226-224430) ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ  ಪ್ರಕಟಣೆ ತಿಳಿಸಿದೆ.

ಅ. 31ರಂದು ಮಹದೇಶ್ವರಬೆಟ್ಟದಲ್ಲಿ ಗೋಲಕ ಹಣ ಎಣಿಕೆ
ಚಾಮರಾಜನಗರ, ಅ. 26- ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯವು ಅಕ್ಟೋಬರ್ 31ರ ಬುಧವಾರದಂದು ಬೆಳಿಗ್ಗೆ ನಡೆಯಲಿದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಸಹಯೋಗದೊಂದಿಗೆ ಎಣಿಕೆ ಕಾರ್ಯವನ್ನು ನಡೆಸಲಾಗುವುದೆಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಚಾ.ನಗರಸಭೆ : ವಿವಿಧ ಸೌಲಭ್ಯಗಳಿಗೆ ಪ.ಜಾ, ಪ.ಪಂ, ಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಅ. 26 - ಚಾಮರಾಜನಗರ ನಗರಸಭೆಯು ಅನುಷ್ಠಾನ ಮಾಡುತ್ತಿರುವ ಕಲ್ಯಾಣ ಕಾರ್ಯಕ್ರಮಗಳಾದ ಶೇ. 24.10 ಹಾಗೂ ಶೇ. 7.25ರಡಿ ವಿವಿಧ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನಿಲರಹಿತ ಬಿಪಿಎಲ್ ಕುಟುಂಬಕ್ಕೆ ಅನಿಲಸಂಪರ್ಕ ನೀಡಲಾಗುತ್ತದೆ. ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕೊಡಲಾಗುತ್ತದೆ (ಸಮಾಜ ಕಲ್ಯಾಣ ಇಲಾಖೆಯಿಂದ ಪಡೆಯದಿದ್ದಲ್ಲಿ). ಅಲ್ಲದೆ ಬಿಇ, ಎಂಟೆಕ್, ಎಂಬಿಬಿಎಸ್, ಎಂಡಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ.
ಹಿಂದುಳಿದ ವರ್ಗದ ಅನಿಲರಹಿತ ಬಿಪಿಎಲ್ ಕುಟುಂಬಕ್ಕೆ ಅನಿಲಸಂಪರ್ಕ ನೀಡಲು ಸಹಾಯಧನ ಕೊಡಲಾಗುತ್ತದೆ. ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕೊಡಲಾಗುತ್ತದೆ (ಹಿಂದುಳಿದ ಕಲ್ಯಾಣ ಇಲಾಖೆಯಿಂದ ಪಡೆಯದಿದ್ದಲ್ಲಿ). ಅಲ್ಲದೆ ಬಿಇ, ಎಂಟೆಕ್, ಎಂಬಿಬಿಎಸ್, ಎಂಡಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ.
ಅರ್ಜಿಯನ್ನು ನಗರಸಭೆ ಕಚೇರಿಯಿಂದ ನವೆಂಬರ್ 5 ರಿಂದ ಪಡೆದು ಭರ್ತಿ ಮಾಡಿ ನವೆಂಬರ್ 25ರ ಒಳಗೆ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಜಾತಿ, ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ನಗರಸಭಾ ವ್ಯಾಪ್ತಿಯ ಮೂರು ಗ್ಯಾಸ್ ಅಂಗಡಿಗಳಿಂದ ನೋ ಡ್ಯೂ ಸರ್ಟಿಫಿಕೇಟ್, ಇತ್ತೀಚಿನ ಎರಡು ಭಾವಚಿತ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು. ಅಲ್ಲದೆ ಅವಶ್ಯಕತೆ ಇರುವ ಇತರೆ ದಾಖಲಾತಿಗಳು ಬೇಕಾದಲ್ಲಿ ಸಲ್ಲಿಸಬೇಕಾಗುತ್ತದೆ. ವಿವರUಳಿಗೆ ನಗರಸಭಾ ಕಾರ್ಯಾಲಯ ಕಚೇರಿ ಸಂಪರ್ಕಿಸಬಹುದೆಂದ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 26 :- ಚಾಮರಾಜನಗರ ತಾಲೂಕಿನ ಹೊಂಡರಬಾಳುವಿನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2019-20ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಸರ್ಕಾರಿ, ಸರ್ವಶಿಕ್ಷಣ ಅಭಿಯಾನ ಹಾಗೂ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಪ್ರಸ್ತುತ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ದಿನಾಂಕ 1.5.2006 ಮತ್ತು 30.4.2010ರ ನಡುವೆ ಜನಿಸಿದವರಾಗಿರಬೇಕು.
ವೈಯಕ್ತಿಕ ವಿವರ ಭರ್ತಿ ಮಾಡÀುವ ಮೊದಲು ಅಭ್ಯರ್ಥಿ, ಪೋಷಕರ ಸಹಿ, ಭಾವಚಿತ್ರ ಪ್ರಮಾಣ ಪತ್ರವನ್ನು ಸ್ಕ್ಯಾನ್ ಮಾಡಿ ಇಟ್ಟುಕೊಂಡಿರಬೇಕು. ನವೋದಯ ವಿದ್ಯಾಲಯ ಸಮಿತಿ ವೆಬ್ ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನವೆಂಬರ್ 30 ಕಡೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು 2019ರ ಏಪ್ರಿಲ್ 6ರಂದು ನಡೆಯಲಿದೆ.
ಅರ್ಜಿ ಸಲ್ಲಿಸಲು ತೊಂದರೆ ಉಂಟಾದಲ್ಲಿ ನೇರವಾಗಿ ಜವಾಹರ ನವೋದಯ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ  ಮತ್ತು ತಿತಿತಿ.ರಿಟಿvಛಿhಚಿmಚಿಡಿಚಿರಿಚಿಟಿಚಿgಚಿಡಿ.ಛಿom ಅಥವಾ ಸಹಾಯವಾಣಿ ಸಂಖ್ಯೆ 8762505849 ಮತ್ತು 9481530823 ಸಂಪರ್ಕಿಸುವಂತೆ ವಿದ್ಯಾಲಯದ ಪ್ರಾಚಾರ್ಯರಾದ ವಿ. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದರಾದ ಆರ್. ಧ್ರುವನಾರಾಯಣ ತಾಕೀತು
ಚಾಮರಾಜನಗರ, ಅ. 27:- ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿಯು ಕೇಂದ್ರ ರಸ್ತೆ ನಿಧಿಯ 1008 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಿಂದ ಪ್ರಾರಂಭವಾಗಿದೆ. ಜಿಲ್ಲೆಯಲ್ಲೂ ಸುಮಾರು 67 ಕಿ.ಮೀ. ರಸ್ತೆ ಅಭಿವೃದ್ಧಿಯಾಗುತ್ತಿದ್ದು ಕಾಮಗಾರಿ ವಿಳಂಬವಾಗಿ ಸಾಗುತ್ತಿದೆ. ಇನ್ನು 10 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗಡವು ನಿಗದಿಯಾಗಿದೆ. ಹೀಗಾಗಿ ಇನ್ನುಮುಂದೆ ಚುರುಕಿನಿಂದ ಕಾಮಗಾರಿ ಕೈಗೊಂಡು ಪೂರ್ಣಗೊಳಿಸಬೇಕೆಂದು ಧ್ರುವನಾರಾಯಣ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಬಾಕಿ ಉಳಿದ ಭೂಸ್ವಾಧೀನ ಪ್ರಕ್ರಿಯೆ ಇತರೆ ಅಡಚಣೆಗಳ ನಿವಾರಣೆಗೆ ಜಿಲ್ಲಾಧಿಕಾರಿಗಳು ಮುಂದಾಗಬೇಕು. ತಕ್ಷಣವೇ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲಿಸಬೇಕು. ಸಂಬಂಧಪಟ್ಟ ಎಲ್ಲ ಜನಪ್ರತಿನಿಧಿಗಳು ಕಾಮಗಾರಿ ವೀಕ್ಷಣೆ ಹಾಗೂ ಪರಿಶೀಲನೆ ಮಾಡಲು ಇನ್ನು 15 ದಿನಗಳೊಳಗೆ ದಿನಾಂಕವೊಂದನ್ನು ನಿಗದಿ ಮಾಡುವಂತೆ ಲೋಕಸಭಾ ಸದಸ್ಯರು ಜಿಲ್ಲಾಧಿಕಾರಿಗಳಿಗೆ  ತಿಳಿಸಿದರು.
ಇದೇವೇಳೆ ಮಾತನಾಡಿದ ಶಾಸಕರಾದ ಎನ್. ಮಹೇಶ್ ಅವರು ಹೆದ್ದಾರಿ ಕಾಮಗಾರಿ ಸಂಬಂಧ ಕಂದಾಯ ಇಲಾಖೆಯಿಂದ ಆಗಬೇಕಿರುವ ಕೆಲಸಗಳಿಗೆ ವಿಳಂಬ ಮಾಡಬಾರದು. ತ್ವರಿತವಾಗಿ ಸಂಬಂಧಿಸಿದ ವಿಷಯಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.
ಶಾಸಕರಾದ ಆರ್. ನರೇಂದ್ರ ಮಾತನಾಡಿ ಅಲ್ಲಲ್ಲಿ ಕೆಲಸಗಳನ್ನು ಪೂರ್ಣಗೊಳಿಸುವುದು, ಕೆಲವೆಡೆ ಹಾಗೆಯೇ ಬಿಟ್ಟುಬಿಡುವುದು, ಕಾಮಗಾರಿ ಕೈಗೊಳ್ಳುವಾಗ ನಡೆಯುತ್ತಿದೆ. ಹೀಗಾದರೆ ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ. ಕಾಮಗಾರಿ ಏಕರೂಪತೆಯಿಂದ ಇರಬೇಕಾದರೆ ಇರುವ ಅಡಚಣೆಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್ ಅವರು ಯಳಂದೂರು, ಮದ್ದೂರು, ಕಂದಹಳ್ಳಿ ಭಾಗಗಳಲ್ಲಿ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸಿಲ್ಲ. ಎಲ್ಲೆಲ್ಲಿ ಸಾಧ್ಯವೋ ಅಂತಹ ಕಡೆ ಮಾತ್ರ ಕಾಮಗಾರಿ ನಿರ್ವಹಣೆ ಮಾಡಲಾಗುತ್ತಿದೆ. ಮರ ತೆಗೆದ ಬಳಿಕ ಇನ್ನಷ್ಟು ಹೆಚ್ಚು ಕೆಲಸವು ಮಾಡಬೇಕಾಗುತ್ತದೆ. ಮಣ್ಣನ್ನು ಒಂದು ಕಡೆಯಿಂದ ಇನ್ನೊಂದು ಕಡೆ ಸುರಿಯಲಾಗುತ್ತಿದೆ. ಇದಕ್ಕೆ ಸೂಕ್ತ ಸಮಜಾಯಿಷಿಯನ್ನು ಅಧಿಕಾರಿಗಳು ನೀಡುತ್ತಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ಹೆದ್ದಾರಿ ಕಾಮಗಾರಿಯಲ್ಲಿ ಯಾವುದೇ ಲೋಪವನ್ನು ಸಹಿಸಲಾಗುವುದಿಲ್ಲ. ಗುಣಮಟ್ಟದ ಕಾಮಗಾರಿ ನಡೆಯಲೇಬೇಕು ಎಂದು ತಿಳಿಸಿದರು.
ಗುಂಡ್ಲುಪೇಟೆ, ಚಾಮರಾಜನಗರದ 32.8 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸುವ ಕಾಮಗಾರಿಗೆ ವಿಸ್ತ್ರøತ ಯೋಜನಾ ವರದಿ ತಯಾರಿಸಲಾಗಿದೆ. ಇದಕ್ಕೆ ಅನುಮೋದನೆ ಪಡೆದು ಡಿಸೆಂಬರ್ ಒಳಗೆ ಕಾಮಗಾರಿ ಆರಂಭಿಸಲು ಮುಂದಾಗಲಿದ್ದೇವೆ ಎಂದರು. ಇದೇವೇಳೆ ಯೋಜನಾ ಸಂಬಂಧ ಪವರ್ ಪಾಯಿಂಟ್ ಮೂಲಕ ವಿವರ ನೀಡಲಾಯಿತು.
ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಮಾತನಾಡಿ ಗುಂಡ್ಲುಪೇಟೆ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಅಪೂರ್ಣವಾಗಿದೆ. ಇನ್ನು ಕೆಲವು ಕಡೆ ಸಮರ್ಪಕವಾಗಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಕೊಳ್ಳೇಗಾಲ ಪಟ್ಟಣದಲ್ಲೂ ಒಳಚರಂಡಿ ಕಾಮಗಾರಿ ವೈಜ್ಞಾನಿಕವಾಗಿ ಮಾಡಲಾಗಿಲ್ಲ. ಇದರಿಂದ 21 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುತ್ತಿರುವ ನಗರೋತ್ಥಾನ ಕಾಮಗಾರಿಯು ಸರಿಯಾಗಿ ಮಾಡಲು ಸಾಧ್ಯವಾಗದಿರಬಹುದು. ಹೀಗಾಗಿ ಸಂಪೂರ್ಣವಾಗಿ ಹಾಗೂ ಸಮರ್ಪಕವಾಗಿ ಒಳಚರಂಡಿ ಕಾಮಗಾರಿ ಕೈಗೊಳ್ಳಲೇಬೇಕು ಎಂದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರತಿಕ್ರಿಯಿಸಿ ಈ ಸಂಬಂಧ ತಾವೂ ಸಹ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು.
ಶಾಸಕರಾದ ಆರ್. ನರೇಂದ್ರ ಅವರು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಬೈಲೂರಿನಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ನಿರ್ಮಿಸಲಾಗಿರುವ ಶಾಲಾ ಕೊಠಡಿಗಳ ಕಾಮಗಾರಿ ಕಳಪೆಯಾಗಿದೆ ಎಂದು ಗಮನಕ್ಕೆ ತಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ ಅವರು ಉತ್ತರಿಸಿ ಆಲೂರು, ಬೈಲೂರಿನಲ್ಲಿ ಕಾಮಗಾರಿ ನಿರ್ವಹಣೆ ಸರಿಯಿಲ್ಲ ಎಂಬ ಬಗ್ಗೆ ವರದಿ ನೀಡಲಾಗಿದೆ ಎಂದರÀು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪ್ರಗತಿ ಪರಿಶೀಲಿಸಿದ ಧ್ರುವನಾರಾಯಣ ಅವರು ಪ್ರತಿ ಗ್ರಾಮ ಪಂಚಾಯಿತಿಯು ಮುಂದಿನ ಸಭೆಯ ವೇಳೆಗೆ ಕನಿಷ್ಠ ಒಂದು ಕೋಟಿ ರೂ. ವೆಚ್ಚದಲ್ಲಿ ಯೋಜನೆಗಳನ್ನು ಅನುಷ್ಠಾನ ಮಾಡಬೇಕೆಂಬ ಗಡುವನ್ನು ಎಲ್ಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಮಾತನಾಡಿ ಉದ್ಯೋಗ ಖಾತರಿ ಯೋಜನೆ ಪ್ರಗತಿ ಹೆಚ್ಚಳಕ್ಕೆ ಹಲವು ಇಲಾಖೆಗಳು ಇನ್ನಷ್ಟು ವೇಗವಾಗಿ ಕೆಲಸ ಮಾಡಬೇಕು. ಗ್ರಗತಿಯಲ್ಲಿ ಹಿಂದೆ ಇರುವ ತಾಲೂಕುಗಳು ಯೋಜನೆ ಅನುಷ್ಠಾನಕ್ಕೆ ಹೆಚ್ಚು ಗಮನ ನೀಡಬೇಕು. ಯೋಜನೆ ಜಾಗೃತಿಗೆ ವಿಶೇಷವಾಗಿ ಕ್ರಮ ವಹಿಸಲಾಗುತ್ತದೆ ಎಂದರು.
ವಿವಿಧ ಇಲಾಖೆಗಳ ಪ್ರಗತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಸಮಿತಿಯ ನಾಮನಿರ್ದೇಶಿತ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಇತರೆ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕೊಳ್ಳೇಗಾಲ ನಗರಸಭೆ, ತೆರಕಣಾಂಬಿ ತಾ.ಪಂ. ಚುನಾವಣೆ : ಮದ್ಯ ಮಾರಾಟ ನಿಷೇಧ
ಚಾಮರಾಜನಗರ, ಆ. 27  ಕೊಳ್ಳೇಗಾಲ ನಗರಸಭೆ ವಾರ್ಡ್ ನಂ. 9 ಹಾಗೂ ಗುಂಡ್ಲುಪೇಟೆ ತಾಲೂಕು ಪಂಚಾಯಿತಿಯ ತೆರಕಣಾಂಬಿ ಕ್ಷೇತ್ರಕ್ಕೆ ಅಕ್ಟೋಬರ್ 28ರಂದು ನಡೆಯುವ ಚುನಾವಣೆ ಮತದಾನ ಹಾಗೂ ಅಕ್ಟೋಬರ್ 31ರಂದು ನಡೆಯುವ ಮತ ಎಣಿಕೆ ಹಿನ್ನೆಲೆಯಲ್ಲಿ ಸೂಚಿತ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಕೊಳ್ಳೇಗಾಲ ನಗರಸಭೆಯ ವಾರ್ಡ್ ನಂ. 9ರ ವ್ಯಾಪ್ತಿ ಹಾಗೂ ಇದರ ಗಡಿಯಿಂದ 3 ಕಿ.ಮೀ. ಅಂತರದಲ್ಲಿ ಹಾಗೂ ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ಇದರ ಗಡಿಯಿಂದ 3 ಕಿ.ಮೀ. ಅಂತರದಲ್ಲಿ ಬರುವ ಮದ್ಯದ ಅಂಗಡಿಗಳನ್ನು ಅಕ್ಟೋಬರ್ 26ರ ಮಧÀ್ಯರಾತ್ರಿಯಿಂದ ಅಕ್ಟೋಬರ್ 28ರ ಮಧÀ್ಯರಾತ್ರಿಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಮತ ಎಣಿಕೆಯು ತಾಲೂಕು ಕೇಂದ್ರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಮತ್ತು ಗುಂಡ್ಲುಪೇಟೆ ಟೌನ್ ವ್ಯಾಪ್ತಿಯಲ್ಲಿ ಬರುವ ಮದ್ಯದಂಗಡಿಗಳನ್ನು ಅಕ್ಟೋಬರ್ 30ರ ಮಧ್ಯರಾತ್ರಿಯಿಂದ ಅಕ್ಟೋಬರ್ 31ರ ಮಧ್ಯರಾತ್ರಿಯವರೆಗೆ (ಕೆ.ಎಸ್.ಬಿ.ಸಿ.ಎಲ್. ಡಿಪೋ ಹೊರತುಪಡಿಸಿ) ಮದ್ಯದಂಗಡಿಗಳನ್ನು ಮುಚ್ಚುವಂತೆಯೂ ಆದೇಶಿಸಿದ್ದಾರೆ. ಸೂಚಿಸಲಾಗಿರುವ ಅವಧಿಯಲ್ಲಿ ಮದ್ಯ ಮಾರಾಟ, ಹಂಚಿಕೆ, ಶೇಖರಣೆ ಅಕ್ಷಮ್ಯ ಅಪರಾಧವಾಗಲಿದೆ ಎಂದು ಜಿಲ್ಲಾಧಿಕಾರಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹಾಸ್ಟಲ್‍ಗಳ ಸುಧಾರಣೆಗೆ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಚಾಮರಾಜನಗರ, ಅ. 29 - ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಶಿಕ್ಷಣ ನೀಡುವ ಮೂಲಕ ಹಾಸ್ಟಲ್‍ಗಳ ಸುಧಾರಣೆಗೆ ಕ್ರಮ ವಹಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ರಾಜೇಂದರ್ ಕುಮಾರ್ ಕಠಾರಿಯಾ ಅವರು ಸೂಚನೆ ನೀಡಿದ್ದಾರೆ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪೂರಕ ವಾತಾವರಣ ಕಲ್ಪಿಸಲು ಸರ್ಕಾರ ಸಾಕಷ್ಟು ಅನುದಾನ ಒದಗಿಸಿದೆ. ಹಾಸ್ಟಲ್‍ಗಳಲ್ಲಿ ಮಕ್ಕಳಿಗೆ ನೀಡುವ ಆಹಾರ, ಶಿಕ್ಷಣ ಗುಣಮಟ್ಟದಿಂದ ಕೂಡಿರಬೇಕು. ಉತ್ತಮ ಕಲಿಕಾ ಪರಿಸರವಿರಬೇಕು. ಆದರೆ ಜಿಲ್ಲೆಯ ಕೆಲ ಹಾಸ್ಟಲ್‍ಗಳು ಅವ್ಯವಸ್ಥೆಯಿಂದ ಕೂಡಿದ್ದು, ಅನೈರ್ಮಲ್ಯದ ತಾಣವಾಗಿವೆ. ಮಕ್ಕಳಿಗೆ ನೀಡುವ ತಿಂಡಿ, ಊಟದ ಮೆನು ಫಲಕವನ್ನು ಪ್ರಕಟಿಸಬೇಕು ಎಂದರು.
ಹಾಸ್ಟಲ್‍ಗಳ ವ್ಯವಸ್ಥಿತ ನಿರ್ವಹಣೆಗಾಗಿ ನೋಡೆಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ಷೇತ್ರ ಪ್ರವಾಸ ಕೈಗೊಂಡು ನೋಡೆಲ್ ಅಧಿಕಾರಿಯೊಂದಿಗೆ ಸಮನ್ವಯ ಸಾಧಿಸಿ ಹಾಸ್ಟಲ್‍ಗಳ ಸುಧಾರಣೆಗೆ ಮುಂದಾಗಬೇಕು ಎಂದು ಸಲಹೆ ಮಾಡಿದರು.
ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೂ ಅಧಿಕಾರಿಗಳು ಭೇಟಿ ಮಾಡಬೇಕು. ಅಂಗನವಾಡಿ ಕಟ್ಟಡಗಳು ಸಮರ್ಪಕವಾಗಿದೆಯೆ, ಮಕ್ಕಳ ಹಾಜರಾತಿ ಕ್ರಮಬದ್ಧವಾಗಿದೆಯೆ ಹಾಗೂ ಮಕ್ಕಳಿಗೆ ಗುಣಮಟ್ಟದ ಆಹಾತ ಪೂರೈಸಲಾಗುತ್ತಿದೆಯೆ ಎಂಬುದನ್ನು ವರದಿ ಮಾಡಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದಲ್ಲಿ ತನಿಖಾ ತಂಡಗಳನ್ನು ರಚಿಸಬೇಕು. ಪ್ರತಿ ತಿಂಗಳು ಟಾಸ್ಕ್‍ಪೋರ್ಸ್ ಸಭೆ ನಡೆಸಬೇಕು. ನಿಯಮಬಾಹಿರವಾಗಿ ಮರಳು ಹಾಗೂ ಕಲ್ಲು ಗಣಿಗಾರಿಕೆ ನಡೆದರೆ ಅದನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಬೇಕು. ಇದಕ್ಕೆ ತಹಶೀಲ್ದಾರ್, ಪೊಲೀಸ್ ಇಲಾಖೆಗಳು ಜಂಟಿ ಕಾರ್ಯಾಚರಣೆ ನಡೆಸಲು ಸಹಕಾರ ನೀಡಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಕಟಾರಿಯಾ ಅವರು ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮಾತನಾಡಿ ಉಸ್ತುವಾರಿ ಕಾರ್ಯದರ್ಶಿಯವರು ಸೂಚಿಸಿದ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಗುರಿ ಸಾಧಿಸಬೇಕು. ಇಲಾಖೆಗಳಲ್ಲಿ ಬಾಕಿ ಇರುವ ಮತ್ತು ಆಗಬೇಕಿರುವ ಕಾರ್ಯಕ್ರಮಗಳ ಕುರಿತು ವಿಳಂಬ ಮಾಡದೇ ಟಿಪ್ಪಣಿ ತಯಾರಿಸಿ ಶೀಘ್ರವಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದರು.
ನಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು ಕಂದಾಯ, ಸಾಮಾಜಿಕ ಭದ್ರತಾ ಯೋಜನೆ, ಅರಣ್ಯ ಹಕ್ಕು ಕಾಯ್ದೆ, ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ನಗರಾಭಿವೃದ್ಧಿ, ಗ್ರಾಮೀಣ ಕುಡಿಯುವ ನೀರು, ಸಮಾಜ ಕಲ್ಯಾಣ, ಪಶುಪಾಲನೆ, ತೋಟಗಾರಿಕೆ, ರೇಷ್ಮೆ, ಸ್ವಚ್ಚ ಭಾರತ್ ಮಿಷನ್ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಿದರು.
 ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪದ್ಮಾಶೇಖರ್ ಪಾಂಡೆ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ನ. 1ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವ
ಚಾಮರಾಜನಗರ, ಅ. 29 - ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ. ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 ಅಂದು ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನÀದ ಮುಂಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5 ರಿಂದ 6.30 ಗಂಟೆಯವರೆಗೆ ನಗರದ ಎಸ್.ಜಿ. ಮಹಾಲಿಂಗಸ್ವಾಮಿ ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ. 6.30 ರಿಂದ 7.30 ಗಂಟೆಯವರೆಗೆ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 7.30 ರಿಂದ 8.30 ಗಂಟೆಯವರೆಗೆ ಕೊಳ್ಳೇಗಾಲದ ರಂಗಲಕ್ಷ್ಮಣಂ ಫೌಂಡೇಶನ್‍ನ ವಿದುಷಿ ಚಿತ್ರ ಬಿಳಿಗಿರಿ ಮತ್ತು ತಂಡದವರಿಂದ ನೃತ್ಯ ರೂಪಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.





























































































x

30/31-10-2018 (ನಗರದಲ್ಲಿಂದು ಅರ್ಥಪೂರ್ಣವಾಗಿ ನಡೆದ ಏಕತಾ ದಿವಸ ಆಚರಣೆ)

ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ : ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಚಾಮರಾಜನಗರ, ಅ. :- ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಭಿವೃದ್ಧಿ ಕಾಮಗಾರಿಗಳ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿ ಹಾಗೂ ಆರಂಭಿಸಬೇಕಿರುವ ಕಾಮಗಾರಿ ಕುರಿತು ವಿವರ ಪಡೆದ ಉಸ್ತುವಾರಿ ಸಚಿವರು ನಗರದ ಬಿ. ರಾಚಯ್ಯ ಜೋಡಿರಸ್ತೆ ಕಾಮಗಾರಿ ವಿಳಂಬ ಮಾಡಬಾರದು. ಶೀಘÀ್ರವಾಗಿ ಕಾಮಗಾರಿ ಮುಗಿಸಬೇಕು. ಯಾವುದೇ ದೂರುಗಳು ಬರದಂತೆ ಕೆಲಸ ನಿರ್ವಹಣೆ ಮಾಡಬೇಕು ಎಂದರು.
ವಿವಿಧ ಭಾಗಗಳಲ್ಲಿ ನಿರ್ಮಾಣ ಹಂತದಲ್ಲಿರುವ ಹಾಸ್ಟಲ್, ಶಾಲಾ ಕೊಠಡಿಗಳು, ಸಮುದಾಯ ಭವನಗಳು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಕಾಮಗಾರಿ ನಿರ್ವಹಿಸಬೇಕು. ಅಧಿಕಾರಿಗಳು ಪರಿಶೀಲಿಸಿ ಕಾಮಗಾರಿ ಸುಸೂತ್ರವಾಗಿ ಸಾಗುತ್ತಿದೆಯೆ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ಸಚಿವರು ತಿಳಿಸಿದರು.
ನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ನೂತನವಾಗಿ ನಿರ್ಮಿಸಬೇಕಿದೆ. ನಿವೇಶನ ಹಸ್ತಾಂತರ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳಬೇಕು. ಇತರೆ ಇಲಾಖೆಗಳು ಅಭಿವೃದ್ಧಿ ಕಾಮಗಾರಿ ಸಂಬಂಧ ನಿವೇಶನಗಳು ಅಗತ್ಯವಿದ್ದರೆ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಿ ಮುಂದಿನ ಕ್ರಮ ವಹಿಸಬೇಕು ಎಂದರು.
ಈಗಾಗಲೇ ಅಭಿವೃದ್ಧಿ ಯೋಜನೆ, ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದಲ್ಲಿ ಸದರಿ ಕಾಮಗಾರಿ ಆರಂಭಿಸಲು ಅವಶ್ಯವಿರುವ ಆಡಳಿತಾತ್ಮಕ ಮಂಜೂರಾತಿ, ಅನುಮೋದನೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಇಲಾಖಾ ಅಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ಬರುವ ಅಭಿವೃದ್ಧಿ ಕೆಲಸಗಳ ಬಗ್ಗೆ ನಿಗಾ ವಹಿಸಬೇಕು. ಪ್ರತಿ ಕಾರ್ಯಕ್ರಮದ ಬಗ್ಗೆಯೂ ಸೂಕ್ತ ಮಾಹಿತಿ ಹೊಂದಿರಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಕೊಳ್ಳೇಗಾಲ ನಗರಸಭೆ, ತೆರಕಣಾಂಬಿ ತಾ.ಪಂ. ಚುನಾವಣೆ ಫಲಿತಾಂಶ ಪ್ರಕಟ
ಚಾಮರಾಜನಗರ, ಅ. 31 - ಕೊಳ್ಳೇಗಾಲ ನಗರಸಭೆಯ 9ನೇ ವಾರ್ಡಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಎಲ್. ನಾಗೇಂದ್ರ (ನಾಗಣ್ಣ) ಅವರು ಗೆಲುವು ಸಾಧಿಸಿದ್ದಾರೆ.
ಅಭ್ಯರ್ಥಿಗಳು ಪಡೆದ ಮತಗಳ ವಿವರ ಇಂತಿದೆ: ಎಲ್.ನಾಗೇಂದ್ರ (ನಾಗಣ್ಣ) ವಿಜೇತ ಅಭ್ಯರ್ಥಿ, ಭಾರತೀಯ ಜನತಾ ಪಾರ್ಟಿ 577, ಎಂ.ಮಹಾದೇವ (ಮಾದಪ್ಪ) ಇಂಡಿಯನ್ ನ್ಯಾಷನಲ್ ಕಾಂಗ್ರೇಸ್ 506, ಎಂ.ಗಿರೀಶ್, ಪಕ್ಷೇತರ 5, ನೋಟಾ-5,
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ತಾ.ಪಂ. ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಆರ್.ಮಹೇಶ ಅವರು ಜಯಶೀಲರಾಗಿದ್ದಾರೆ.
ಅಭ್ಯರ್ಥಿಗಳು ಪಡೆದ ಮತಗಳ ವಿವರ ಇಂತಿದೆ: ಆರ್. ಮಹೇಶ, ವಿಜೇತ ಅಭ್ಯರ್ಥಿ, ಭಾರತೀಯ ಜನತಾ ಪಾರ್ಟಿ 3020, ನಾರಾಯಣನಾಯ್ಕ, ಇಂಡಿಯನ್ ನ್ಯಾಷನಲ್ ಕಾಂಗ್ರೇಸ್ 2714.



ಇ-ಸ್ವತ್ತು ಅಭಿಯಾನ ಸದುಪಯೋಗಕ್ಕೆ ಜಿಲ್ಲಾ ನ್ಯಾಯಾಧೀಶರ ಸಲಹೆ
ಚಾಮರಾಜನಗರ, ಅ. 31- ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಆರಂಭಿಸಲಾಗುತ್ತಿರುವ ಇ-ಸ್ವತ್ತು ಖಾತಾ ಅಭಿಯಾನವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಸಲಹೆ ಮಾಡಿದರು.
ತಾಲೂಕಿನ ಹಂಚಿತಾಳಪುರದಲ್ಲಿ ಇಂದು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಆರಂಭಿಸಲಾಗಿರುವ ಇ-ಸ್ವತ್ತು ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನಿಗೆ ಹೆಸರು ಹೇಗೆ ಮುಖ್ಯವೋ ಹಾಗೆ ಅವರ ಸ್ವತ್ತುಗಳಿಗೆ ಸೂಕ್ತ ದಾಖಲೆಗಳು ಇರಬೇಕಾಗುತ್ತದೆ. ಗ್ರಾಮೀಣ ಭಾಗಗಳಲ್ಲಿ ಸ್ವತ್ತುಗಳಿಗೆ ಸರಿಯಾದ ದಾಖಲೆಗಳಿಲ್ಲದೆ ಜನರಲ್ಲಿ ವೈಷಮ್ಯಕ್ಕೂ ಕಾರಣವಾಗುತ್ತಿತ್ತು. ಗ್ರಾಮೀಣ ಜನರು ಸಹ ಸಮರ್ಪಕ ದಾಖಲೆಗಳನ್ನು ಪಡೆಯಲು ತೀವ್ರ ಅನಾನುಕೂಲವಾಗುತ್ತಿತ್ತು. ಈ ಎಲ್ಲ ಹಿನ್ನಲೆಯಲ್ಲಿ ಜನರ ಬಳಿಗೆ ಹೋಗಿ ಇ-ಸ್ವತ್ತು ಸಂಬಂಧ ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡುವ ಅಭಿಯಾನವನ್ನು ಪಂಚಾಯತ್ ವತಿಯಿಂದ ಆರಂಭಿಸಲಾಗಿದೆ ಎಂದರು.
ಇ-ಸ್ವತ್ತು ಖಾತಾ ಮಾಡಿಸುವುದರಿಂದ ಸರ್ಕಾರದ ಇತರೆ ಯೋಜನೆಗಳನ್ನು ಪಡೆಯಲು ಸಹ ಅನುಕೂಲವಾಗುತ್ತದೆ. ದಾಖಲೆಗಳಿದ್ದರೆ ಸಾಲ ಸೌಲಭ್ಯ ಪಡೆಯಲು ಸಹ ನೆರವಾಗಲಿದೆ. ಹೀಗಾಗಿ ಮಹತ್ವದ ಅಭಿಯಾನವನ್ನು ಜನರು ಪೂರ್ಣ ಪ್ರಮಾಣದಲ್ಲಿ ಪ್ರಯೋಜನ ಪಡೆಯಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಸಿ.ಜೆ. ವಿಶಾಲಾಕ್ಷಿ ಅವರು ಮಾತನಾಡಿ ಇ-ಸ್ವತ್ತು ಅಭಿಯಾನವು ಎಲ್ಲರಿಗೂ ಅನುಕೂಲವಾಗಲಿದೆ. ಆಸ್ತಿ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡುವುದರಿಂದ ಯಾರನ್ನು ಮೋಸಗೊಳಿಸಲು ಸಾಧ್ಯವಾಗುವುದಿಲ್ಲ. ಕಂದಾಯ ಸಂಗ್ರಹಣೆಗೂ ನಿಖರ ಮಾಹಿತಿ ಲಭ್ಯವಾಗಲಿದೆ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್. ಬಾಲರಾಜು ಮಾತನಾಡಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ದಾಖಲೆಗಳು ಸಹ ಅವಶ್ಯವಾಗಿರುತ್ತದೆ. ನಿವೇಶನ, ಮನೆ ಇತರೆ ಉದ್ದೇಶಗಳಿಗೆ ಇ-ಸ್ವತ್ತು ಸೌಲಭ್ಯವನ್ನು ಪಡೆದುಕೊಳ್ಳಲು ಅಭಿಯಾನವು ಅವಕಾಶ ಮಾಡಿಕೊಟ್ಟಿದೆ. ಗ್ರಾಮೀಣ ಭಾಗದ ಜನರು ಈ ಅಭಿಯಾನದ ನೆರವು ಪಡೆಯಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಮಾತನಾಡಿ ಗ್ರಾಮೀಣ ಭಾಗದಲ್ಲಿ ಖಾತಾ ಇನ್ನಿತರ ಅರ್ಜಿಗಳನ್ನು ವಿಲೇವಾರಿ ಮಾಡಲು ಅಲೆದಾಡಿಸಲಾಗುತ್ತಿದೆ ಎಂಬ ವ್ಯಾಪಕ ದೂರುಗಳು ವ್ಯಕ್ತವಾಗಿದ್ದವು. ಜಿಲ್ಲಾ ನ್ಯಾಯಾಧೀಶರು ಸಹ ಇಂತಹ ಅರ್ಜಿಗಳಿಗೆ ಶೀಘ್ರ ಪರಿಹಾರ ಸಿಗಲು ಅಗತ್ಯ ವ್ಯವಸ್ಥೆ ಮಾಡಬೇಕೆಂದು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಇ-ಸ್ವತ್ತು ಅಭಿಯಾನವನ್ನು ನವೆಂಬರ್ ತಿಂಗಳ ಪೂರ್ತಿ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.
ಜನರ ಬಳಿಗೆ ಹೋಗಿ ಅರ್ಜಿಗಳನ್ನು ಪಡೆಯಲಿದ್ದೇವೆ. ಸ್ವೀಕರಿಸಿದ ಅರ್ಜಿಗಳನ್ನು ತ್ವರಿತವಾಗಿ ನಿಯಮಾನುಸಾರ ವಿಲೇವಾರಿ ಮಾಡಲಿದ್ದೆವೆ. ಮಾಡಲು ಸಾಧ್ಯವಾಗದೇ ಇದ್ದಲ್ಲಿ ಸೂಕ್ತ ಹಿಂಬರಹ ನೀಡಲಾಗುತ್ತದೆ. ಆಯಾ ತಿಂಗಳಿನಲ್ಲೇ ಸ್ವೀಕರಿಸಿದ ಅರ್ಜಿಗಳಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹರೀಶ್‍ಕುಮಾರ್ ಅವರು ತಿಳಿಸಿದರು.
ತಾಲೂಕು ಪಂಚಾಯತ್ ಕಾರ್ಯನಿವಾಹಕ ಅಧಿಕಾರಿ ಎಂ.ಎಸ್. ರಮೇಶ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಿದ್ದಪ್ಪಾಜಿ, ಉಪಾಧ್ಯಕ್ಷರಾದ ನಾಗನಾಯ್ಕ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನ. 5ರಂದು ನಗರದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ, ಧನ್ವಂತರಿ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ಅ. 31  - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆಎಸ್‍ಎಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಜಿಲ್ಲಾ ಪಂಚಾಯತ್‍ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ. ಮರುಗದಮಣಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರದ ಜೆಎಸ್‍ಎಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜಿ. ವಿನಯ್‍ಕುಮಾರ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 1ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವ
ಚಾಮರಾಜನಗರ, ಅ. 31  - ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನÀದ ಮುಂಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5 ರಿಂದ 6.30 ಗಂಟೆಯವರೆಗೆ ನಗರದ ಎಸ್.ಜಿ. ಮಹಾಲಿಂಗಸ್ವಾಮಿ ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ. 6.30 ರಿಂದ 7.30 ಗಂಟೆಯವರೆಗೆ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 7.30 ರಿಂದ 8.30 ಗಂಟೆಯವರೆಗೆ ಕೊಳ್ಳೇಗಾಲದ ರಂಗಲಕ್ಷ್ಮಣಂ ಫೌಂಡೇಶನ್‍ನ ವಿದುಷಿ ಚಿತ್ರ ಬಿಳಿಗಿರಿ ಮತ್ತು ತಂಡದವರಿಂದ ನೃತ್ಯ ರೂಪಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
 
ನಗರದಲ್ಲಿಂದು ಅರ್ಥಪೂರ್ಣವಾಗಿ ನಡೆದ ಏಕತಾ ದಿವಸ ಆಚರಣೆ
ಚಾಮರಾಜನಗರ, ಅ. 31- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಯುವ  ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಪುಷ್ಪಾರ್ಚನೆ ಮಾಡಿದರು.
ಇದೇ ವೇಳೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ. ನನ್ನ ದೇಶ ಬಾಂಧವರಲ್ಲಿ ಈ ಸಂದೇಶ ಸಾರಲು ಶ್ರಮಿಸುತ್ತೇನೆ ಎಂದು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ ಎಂಬ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಸರ್ದಾರ್ ವಲ್ಲಭಬಾಯ್ ಪಟೇಲರ ದೂರದೃಷ್ಠಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ರಾಷ್ಟ್ರದ ಅಂತರಿಕ ಭದ್ರತೆಯನ್ನು ಖಾತರಿ ಪಡಿಸಲು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಒಮ್ಮನಸ್ಸಿನಿಂದ ಪ್ರತಿಜ್ಞೆ ಮಾಡುತ್ತಿದ್ದೇನೆ ಎಂಬ ಅಂಶಗಳನ್ನು ಪ್ರತಿಜ್ಞಾ ವಿಧಿಯಲ್ಲಿ ಭೋದಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು ದೇಶವನ್ನು ಒಗ್ಗೂಡಿಸಲು ಹಾಗೂ ಐಕ್ಯತೆ, ಏಕೀಕರಣಕ್ಕೆ ವಲ್ಲಭಬಾಯ್ ಪಟೇಲ್ ಅವರು ಅಪಾರವಾಗಿ ಶ್ರಮಿಸಿದ್ದಾರೆ. ಇಂತಹ ಮಹಾನ್ ನಾಯಕರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿವಸವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ,ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
  ನವೆಂಬರ್ 3 ರಂದು ಆಲಂಬಾಡಿಯಲ್ಲಿ ಜಿ.ಪಂ. ಸಿ.ಇ.ಒ. ಗ್ರಾಮವಾಸ್ತವ್ಯ
ಚಾಮರಾಜನಗರ, ಅ. 31:- ಜನರ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಕೆ. ಹರೀಶ್‍ಕುಮಾರ್ ಅವರು ನವೆಂಬರ್ 3ರಂದು ಕೊಳ್ಳೇಗಾಲ ತಾಲೂಕಿನ ಆಲಂಬಾಡಿ ಬುಡಕಟ್ಟು ಕಾಲೋನಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವರೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅ. 31ರಂದು ನಗರದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಮತ್ತು ಸಂಕಲ್ಪ ದಿವಸ್ ಕಾರ್ಯಕ್ರಮ
ಚಾಮರಾಜನಗರ, ಅ. 30   ನೆಹರು ಯುವ ಕೇಂದ್ರ, ಎಂಸಿಎಸ್ ಪಬ್ಲಿಕ್ ಶಾಲೆ ಹಾಗೂ ಸಾಧನಾ ಸಂಸ್ಥೆ ಇವರ ಸಹಯೋಗದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ್ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯತಿಥಿ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿವಸ್ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಂ.ಸಿ.ಎಸ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಉದ್ಘಾಟನೆ ನೆರವೇರಿಸುವರು. ಎಂಸಿಎಸ್ ಪಬ್ಲಿಕ್ ಶಾಲೆ ಪ್ರಾಂಶುಪಾಲರಾದ ಆರ್.ಎಂ. ಮಂಜುನಾಥ್ ಅಧ್ಯಕ್ಷತೆ ವಹಿಸುವರು.
ವಕೀ¯ರಾದ ಡಿ.ಎಂ. ಶ್ರೀಕಂಠಮೂರ್ತಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್‍ಕುಮಾರ್, ಸಾಧನಾ ಸಂಸ್ಥೆ ನಿರ್ದೇಶಕರಾದ ಟಿ. ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 ಉಪನ್ಯಾಸಕರು ಹಾಗೂ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತರಾದ ಸುರೇಶ್ ಋಗ್ವೇದಿ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಅ. 30  ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನವೆಂಬರ್ 2 ರಿಂದ 20ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ನವೆಂಬರ್ 2ರಂದು ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, 9ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ, 13ರಂದು ಯಳಂದೂರು, 16ರಂದು ಕೊಳ್ಳೇಗಾಲ ಹಾಗೂ 20ರಂದು ಹನೂರಿನ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು, ನಾಗರಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳದ ಉಪ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.


ಅ. 31ರಂದು ರಾಷ್ಟ್ರೀಯ ಏಕತಾ ದಿವಸ್: ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ
ಚಾಮರಾಜನಗರ, ಅ. 30  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಯುವ  ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಪ್ರತಿಜ್ಞಾ ವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆÉ.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿ, ಸಿಬ್ಬಂದಿ, ಸಂಘಸಂಸ್ಥೆಗಳು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೆಳಿಗ್ಗೆ 10.30 ಗಂಟೆಗೆ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-224932 ಅಥವಾ ಮೊ. 9611172984 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಅ. 31ರಂದು ಹಂಚಿತಾಳಪುರದಲ್ಲಿ ಇ-ಸ್ವತ್ತು ಖಾತಾ ಅಭಿಯಾನ
ಚಾಮರಾಜನಗರ, ಅ. 30  ತಾಲೂಕಿನ ಚಂದಕವಾಡಿ ಗ್ರಾಮ ಪಂಚಾಯಿತಿಯ ಹಂಚಿತಾಳಪುರ ಗ್ರಾಮದಲ್ಲಿ ಇ-ಸ್ವತ್ತು ಖಾತಾ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 9 ಗಂಟೆಗೆ ಏರ್ಪಡಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನ. 3ರಂದು ಚಾ.ನಗರ ತಾಲೂಕು ಪ.ಜಾ, ಪ.ವರ್ಗದ ಹಿತರಕ್ಷಣಾ ಸಮಿತಿ ಸಭೆ
ಚಾಮರಾಜನಗರ, ಅ. 30 - ಚಾಮರಾಜನಗರ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿ ಸಭೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 3ರಂದು ಬೆಳಿಗ್ಗೆ 11.30 ಗಂಟೆಗೆ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಇದೆ.
ಸಭೆಯಲ್ಲಿ ಎಲ್ಲ ತಾಲೂಕುಮಟ್ಟದ ಅಧಿಕಾರಿಗಳು, ಸಮಿತಿ ಸದಸ್ಯರು ಹಾಜರಾಗುವಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉತ್ಪಾದನಾ ಕ್ಷೇತ್ರಗಳ ಉದ್ದಿಮೆದಾರರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಅ. 3- ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಸೂಕ್ಷ್ಮ, ಸಣ್ಣ, ಮಧ್ಯಮ, ಹಾಗೂ ಬೃಹತ್ ಕೈಗಾರಿಕೆಗಳು ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿನ ಅರಂಭಿಕ ಉದ್ದಿಮೆಗಳನ್ನು ಗುರುತಿಸಿ ಉತ್ತೇಜಿಸುವ ಸಲುವಾಗಿ ಸರ್. ಎಂ. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಸರ್ಕಾರವು ನಿರ್ಧರಿಸಿದ್ದು, ಉದಯೋನ್ಮುಖ ಉತ್ಪಾದನಾ ಕ್ಷೇತ್ರಗಳ ಅರ್ಹ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಮತ್ತು ತೋಟಗಾರಿಕೆ ಮತ್ತು ಕಾಫಿ, ಗೋಡಂಬಿ, ಮತ್ತು ಸಾಂಬಾರ ಪದಾರ್ಥಗಳನ್ನೊಳಗೊಂಡ ಆಹಾರ ಸಂಸ್ಕರಣೆ ಘಟಕ, ವಿದ್ಯುಚ್ಛಕ್ತಿ ಸಲಕರಣೆಗಳು, ಇಂಜಿನಿಯರಿಂಗ್ (ಮಶೀನ್ ಟೂಲ್ಸ್), ಆಟೋಮೊಬೈಲ್ ಕಾಂಪೊನೆಂಟ್ಸ್, ಏರೋಸ್ಪೇಸ್, ರಕ್ಷಣಾ ಘಟಕಗಳು, ಕರಕುಶಲ ವಸ್ತುಗಳು, ಕೈಮಗ್ಗ ಪದಾರ್ಥಗಳು, ಖನಿಜಗಳು, ಜವಳಿ ಹಾಗೂ ಸಿದ್ದ ಉಡುಪುಗಳು, ರತ್ನಾಭರಣಗಳು, ಔಷಧ, ಸಾಗರೋತ್ಪನ್ನಗಳು, ಚರ್ಮ, ಉಕ್ಕು ಹಾಗೂ ಮರದ ಉತ್ಪನ್ನಗಳು, ಯಂತ್ರೋಪಕರಣ, ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಉದ್ದಿಮೆದಾರರು ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 9 ಕಡೆಯ ದಿನ. ಅರ್ಜಿ ನಮೂನೆಯನ್ನು ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯ ಕೊಠಡಿ ಸಂಖ್ಯೆ 323ರಲ್ಲಿ ಪಡೆಯಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08226-224915, 224916ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ. 



















02-11-2018 (ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ)

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ನ. 02 - ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಿನಾಂಕ 1.1.2019 ಕ್ಕೆ ಅರ್ಹತಾ ದಿನಾಂಕ ನಿಗಧಿಪಡಿಸಿ, ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಿಲ್ಲೆಯಲ್ಲಿ ಈಗಾಗಲೇ ಆರಂಭಿಸಲಾಗಿದೆ. ಮತದಾರರ ಪಟ್ಟಿಯಿಂದ ಅರ್ಹರು ಯಾವುದೇ ಕಾರಣಕ್ಕೆ ಹೊರಗುಳಿಯದಂತೆ ಅತ್ಯಂತ ಜಾಗರೂಕತೆಯಿಂದ ಪರಿಷ್ಕರಣೆ ಕಾರ್ಯ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಕಂಡುಬರುವ ನ್ಯೂನತೆಗಳನ್ನು ಸರಿಪಡಿಸಿ, ಮತದಾರರ ಪಟ್ಟಿ ಗುಣಮಟ್ಟವನ್ನು ವೃದ್ದಿಸಲು ನವೆಂಬರ್ 30 ರವರೆಗೆ ವಿಶೇಷ ಆಂದೋಲನ ನಡೆಸಬೇಕು. ಮತದಾರರ ಹೆಸರು, ಎಪಿಕ್ ಸಂಖ್ಯೆ ಖಾತರಿಪಡಿಸಿಕೊಳ್ಳಬೇಕು. ಮತದಾರರ ಮೊಬೈಲ್, ಸ್ಥಿರ ದೂರವಾಣಿ, ಇ-ಮೇಲ್ ಇತರೆ ಮಾಹಿತಿಗಳಿಂದಲೂ ದೃಢೀಕರಿಸಿಕೊಳ್ಳಬೇಕು. ಕರಡು ಮತದಾರರ ಪಟ್ಟಿಯಲ್ಲಿರುವ ಮತದಾರರ ಭಾವಚಿತ್ರ ಸ್ಪಷ್ಟವಾಗಿ ಇರದಿದ್ದರೆ ಅದಕ್ಕೆ ಸರಿಪಡಿಸಲು ಕ್ರಮ ವಹಿಸಬೇಕು. ತಪ್ಪು ನೋಂದಣಿ, ಮರಣ ಹೊಂದಿದವರು, ಸ್ಥಳಾಂತರ ಹೊಂದಿರುವವರ ಅರ್ಜಿಗಳ ಬಗ್ಗೆಯೂ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದರು.
ದಿನಾಂಕ 01.01.2019 ಕ್ಕೆ 18 ವರ್ಷ ತುಂಬಲಿರುವ ಹಾಗೂ ಈಗಾಗಲೇ ನೋಂದಾಯಿಸದೇ ಇರುವ ಅರ್ಹರಿಂದ ಅರ್ಜಿಗಳನ್ನು ಪಡೆಯಬೇಕು. ವಿಶೇಷ ಆಂದೋಲನದ ಸಮಯದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು, ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿರುವ ಪ್ರತಿ ಮನೆಗೂ ಭೇಟಿ ನೀಡಿ ಮತದಾರರ ಹೆಸರು ಹಾಗೂ ವಿವರಗಳನ್ನು  ಪರಿಶೀಲಿಸಿ,. ಸರಿಯಿದೆಯೇ ಎಂದು ಖಾತರಿಪಡಿಸಿಕೊಳ್ಳಬೇಕು. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಹಕಾರವನ್ನು ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರ ಪಟ್ಟಿಗೆ ವಿಕಲಚೇತನರೂ ಸಹಾ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ವಹಿಸಬೇಕು. ವಿಕಲಚೇತನರ ಹೆಸರು ನೋಂದಣಿಗೆ ವಾರಾಂತ್ಯದಲ್ಲಿ ವಿಶೇಷ ಕ್ಯಾಂಪ್‍ಗಳನ್ನು ಆಯೋಜಿಸಬೇಕು. ಇದಕ್ಕಾಗಿ ಸ್ಥಳ ಹಾಗೂ ದಿನಾಂಕವನ್ನು ನಿಗಧಿಪಡಿಸಿ, ಈ ಬಗ್ಗೆ ಮುಂಚಿತವಾಗಿಯೇ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ.ಹೆಚ್. ಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ|| ರಘುರಾಮ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮೂಲಿಮನಿ, ತಹಶೀಲ್ದಾರ್‍ರಾದ ಕೆ.ಪುರಂದರ, ರಾಯಪ್ಪ ಹುಣಸಗಿ, ಭಾರತಿ, ಗೀತಾ ಹುಡೇದ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
   
ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ಗಣಕೀಕರಣ : ಕಾರ್ಯಕ್ರಮ ಪಟ್ಟಿ ನಿಗದಿ
ಚಾಮರಾಜನಗರ, ನ. 02  - ನಗರ ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ಗಣಕೀಕರಣ ಹಾಗೂ ಮುದ್ರಣ ಸಂಬಂಧ ಚುನಾವಣಾ ಆಯೋಗವು ಕಾರ್ಯಕ್ರಮ ಪಟ್ಟಿಯನ್ನು ನಿಗದಿಪಡಿಸಿದೆ.
2019ರ ಮಾರ್ಚ್ ಮಾಹೆಯಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಗುಂಡ್ಲುಪೇಟೆ ಪುರಸಭೆ, ಯಳಂದೂರು ಹಾಗೂ ಹನೂರು ಪಟ್ಟಣ ಪಂಚಾಯಿತಿಗಳ ಅವಧಿಯು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು, ವಾರ್ಡ್‍ವಾರು ಮತದಾರರ ಪಟ್ಟಿ ತಯಾರಿಸಬೇಕಿದೆ.
ನವೆಂಬರ್ 9 ರಿಂದ 14 ರವರೆಗೆ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಮನೆಮನೆಗೆ ಭೇಟಿ ನೀಡಿ, ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ಗುರುತಿಸುವ ಪ್ರಕ್ರಿಯೆ ನಡೆಸಲಾಗುತ್ತದೆ. ನವೆಂಬರ್ 17 ರಿಂದ 19 ರವರೆಗೆ ಪ್ರಥಮ ಚೆಕ್‍ಲಿಸ್ಟ್‍ನಂತೆ ವಾರ್ಡ್‍ವಾರು ಪರಿಶೀಲನೆ ಮಾಡಲಾಗುತ್ತದೆ. ಡಿಸೆಂಬರ್ 10 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಈ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಡಿಸೆಂಬರ್ 15 ಕಡೆಯ ದಿನವಾಗಿದೆ. ಡಿಸೆಂಬರ್ 17 ರಿಂದ 20 ರವರೆಗೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಡಿಸೆಂಬರ್ 26 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ಜಿಲ್ಲಾಧಿಕಾರಿಯವರಾದ ಬಿ.ಬಿ.ಕಾವೇರಿ ಅವರು ತಿಳಿಸಿದ್ದಾರೆ.
ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಬಳಕೆಗೆ ಜಿ.ಪಂ. ಸಿ.ಇ.ಒ ಹರೀಶ್‍ಕುಮಾರ್ ಸಲಹೆ
ಚಾಮರಾಜನಗರ, ನ. 02  :- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ರೈತರಿಗೆ ತುಂಬಾ ನೆರವಾಗಲಿದ್ದು, ಇದನ್ನು ಪರಿಣಾಮಕಾರಿಯಾಗಿ ಜಿಲ್ಲೆಯ ರೈತರು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಸಲಹೆ ಮಾಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ರೈತರಿಗೆ ಹಾಗೂ ರೈತ ಸಂಘಟನೆಗಳ ಮುಖಂಡರಿಗೆ ಹಮ್ಮಿಕೊಳ್ಳಲಾಗಿದ್ದ ಅರಿವು ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.
ಮಹತ್ವಾಂಕ್ಷಿಯ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಹಲವರು ಪ್ರಯೋಜನೆಗಳನ್ನು ರೈತರು ಪಡೆಯಲು ಸಾಧ್ಯವಾಗಲಿದೆ. ರೈತರು ಅವರ ಜಮೀನಿನಲ್ಲಿ ವೈಯಕ್ತಿಕವಾಗಿ ಕೆಲಸ ನಿರ್ವಹಿಸಿ ಅನುಕೂಲತೆಗಳನ್ನು ಪಡೆದುಕೊಳ್ಳಬಹುದು. ಬೇರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಉದ್ಯೋಗ ಖಾತರಿ ಯೋಜನೆಗೆ ರೈತರು ನಿರೀಕ್ಷಿತ ಮಟ್ಟದಲ್ಲಿ ಮುಂದಾಗದೇ ಇರುವುದು ಕಂಡುಬಂದಿದೆ. ಯೋಜನೆಯ ಸದ್ಭಳಕೆಗೆ ರೈತರು ಒಲವು ತೋರಬೇಕೆಂದು ಹರೀಶ್ ಕುಮಾರ್ ಅವರು ಮನವಿ ಮಾಡಿದರು.
ಯೋಜನೆ ಅತ್ಯಂತ ಪಾರದರ್ಶಕವಾಗಿದೆ. ನೇರವಾಗಿ ರೈತರ ಖಾತೆಗೆ ಹಣ ಜಮೆ ಅಗಲಿದೆ. ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರೈತರು ಮುಂದೆ ಬಂದು ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನೀಡುವಂತೆ ಅರ್ಜಿ ಸಲ್ಲಿಸಬೇಕು. ಜಾಬ್‍ಕಾರ್ಡ್‍ಗಳನ್ನು ಹೊಂದಬೇಕು. ಉದ್ಯೋಗ ನೀಡಲು ನಿರಾಕರಿಸಿದಲ್ಲಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಸಹ ಅವಕಾಶವಿದೆ ಎಂದು ಜಿ.ಪಂ.ಸಿ.ಇ.ಒ ತಿಳಿಸಿದರು.
ಕೃಷಿ, ರೇಷ್ಮೆ, ತೋಟಗಾರಿಕೆ, ಮೀನುಗಾರಿಕೆ ಇಲಾಖೆಗಳಿಂದ ಸಾಕಷ್ಟು ಅನುಕೂಲತೆಗಳನ್ನು ಉದ್ಯೋಗ ಖಾತರಿ ಯೋಜನೆಯಡಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕ್ರಿಯಾಯೋಜನೆ ಅನುಮೋದನೆಗೆ ವಿಳಂಬ ನೀತಿ ಅನುಸರಿಸಲಾಗುತ್ತಿಲ್ಲ. ಕೆಲಸ ನಿರ್ವಹಿಸಿದ ಬಳಿಕ ಹಣವನ್ನು ಜಮೆ ಮಾಡಲು ಹೆಚ್ಚು ಕಾಲಾವಕಾಶ ತೆಗೆದುಕೊಳ್ಳಲಾಗುತ್ತಿಲ್ಲ. ಎಲ್ಲ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇವೆ. ಯಾವುದೇ ಹಿಂಜರಿಕೆ ಬಿಟ್ಟು ಯೋಜನೆಗೆ ರೈತರು, ಬೆಳೆಗಾರರು ಸಹಕಾರ ನೀಡಬೇಕೆಂದರು.
ಜಿಲ್ಲೆಯಲ್ಲಿ 23 ಲಕ್ಷ ಮಾನವ ದಿನಗಳನ್ನು ಇಲಾಖೆ ಕಾರ್ಯಕ್ರಮಗಳಿಂದಲೇ ಸೃಜಿಸಬೇಕಾದ ಗುರಿ ನೀಡಲಾಗಿದೆ. ಮೂಲ  ಸೌಕರ್ಯಗಳ ಗುರಿ ಮಾತ್ರ ಸಾಧನೆಯಾಗುವುದಿಲ್ಲ. ವೈಯಕ್ತಿಕವಾಗಿಯೂ ಹೆಚ್ಚು ಆದಾಯ ಬರುವ ಚಟುವಟಿಕೆಗಳನ್ನು ಉದ್ಯೋಗ ಖಾತರಿಯಲ್ಲಿ ನಿರ್ವಹಿಸಲು ಬೆಳೆಗಾರರು ರೈತರಿಗೆ ಅವಕಾಶಗಳಿವೆ. ಹೀಗಾಗಿ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಮುಂದಾಗಬೇಕೆಂದು ಹರೀಶ್‍ಕುಮಾರ್ ಅವರು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕರಾದ ಡಾ. ತಿರುಮಲೇಶ್ ಅವರು ಮಾತನಾಡಿ ರೈತರು ತಮ್ಮ ಜಮೀನಿನಲ್ಲಿಯೇ ಕಂದಕ, ಕೃಷಿಹೊಂಡ ನಿರ್ಮಾಣ ಮಾಡಿಕೊಂಡು ಮಳೆ ನೀರು ಸಂಗ್ರಹ ಮಾಡಿಕೊಳ್ಳಬಹುದು. ಇಂತಹ ಹಲವಾರು ಕಾಮಗಾರಿಗಳನ್ನು ನಿರ್ವಹಿಸಿ ಜಮೀನು ಉಪಯುಕ್ತತೆಯನ್ನು ಹೆಚ್ಚಿಕೊಳ್ಳಲು ಉದ್ಯೋಗ ಖಾತರಿ ಯೋಜನೆ ನೆರವಾಗಲಿದೆ. ನಿಮ್ಮ ಜಮೀನಿನಲ್ಲಿ ನೀವೆ ಕೆಲಸ ಮಾಡಿ ಆದಾಯ ಪಡೆಯಬಹುದು. ಉದ್ಯೋಗ ಖಾತರಿ ಯೋಜನೆಯಡಿ ಶೀಘ್ರವಾಗಿ ಹಣ ಪಾವತಿಸಲು ಕ್ರಮ ವಹಿಸಲಾಗಿದೆ ಎಂದರು.
ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಯೋಜನೆಯ ಪ್ರಯೋಜನ ಕುರಿತು ವಿವರವಾಗಿ ಮಾಹಿತಿ ನೀಡಿದರು. ರೈತ ಮುಖಂಡರು, ಪ್ರತಿನಿಧಿಗಳು ಸಹ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಯೋಜನೆಯ ಬಗ್ಗೆ ವಿವರ ಪಡೆದುಕೊಂಡರು. ಹಲವು ಸಮಸ್ಯೆಗಳನ್ನು ಸಹ ಗಮನಕ್ಕೆ ತಂದರು.
ನವೆಂಬರ್ 3 ರಂದು ಆಲಂಬಾಡಿಯಲ್ಲಿ ಜಿ.ಪಂ. ಸಿ.ಇ.ಒ. ಗ್ರಾಮವಾಸ್ತವ್ಯ
ಚಾಮರಾಜನಗರ, ನ. 02 - ಜನರ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಕೆ. ಹರೀಶ್‍ಕುಮಾರ್ ಅವರು ನವೆಂಬರ್ 3ರಂದು ಕೊಳ್ಳೇಗಾಲ ತಾಲೂಕಿನ ಆಲಂಬಾಡಿ ಬುಡಕಟ್ಟು ಕಾಲೋನಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವರೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 3ರಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ನ. 02 - ಮುಸ್ಲಿಂ ಸಮುದಾಯ ಜನರ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 3ರಂದು ಮಧ್ಯಾಹ್ನ 12 ಗಂಟೆಗೆ ನಗರದ ಮುಸ್ತಾಫ ಮಸೀದಿ ಮುಂಭಾಗದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಸಚಿವರ ಅಪ್ತ ಸಹಾಯಕ ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 4ರಂದು ನಗರದಲ್ಲಿ ಎನ್‍ಟಿಎಸ್‍ಇ, ಎನ್‍ಎಂಎಸ್‍ಎಸ್ ಪರೀಕ್ಷೆ
ಚಾಮರಾಜನಗರ, ನ. 02   ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಚಾಮರಾಜನಗರ ತಾಲೂಕಿನಿಂದ 2018-19ನೇ ಸಾಲಿಗೆ ಅರ್ಜಿ ಸಲ್ಲಿಸಿದ್ದ ಎನ್‍ಟಿಎಸ್‍ಇ ಮತ್ತು ಎನ್‍ಎಂಎಂಎಸ್ ಪರೀಕ್ಷೆಗಳಿಗೆ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನವೆಂಬರ್ 4ರಂದು ನಗರದಲ್ಲಿ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ-
10ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‍ಟಿಎಸ್‍ಇ ಪರೀಕ್ಷೆಯು ನಗರದ ಸತ್ತಿ ರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
8ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‍ಎಂಎಂಎಸ್ ಪರೀಕ್ಷೆಯು ನಗರದ ಜೆಎಸ್‍ಎಸ್ ಬಾಲಕಿಯರ ಪ್ರೌಢಶಾಲೆ, ಜೆಎಸ್‍ಎಸ್ ಬಾಲಕರ ಪ್ರೌಢಶಾಲೆ ಹಾಗೂ ಸಿದ್ದಾರ್ಥನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಚಾ.ನಗರ ನಗರಸಭೆ : ಆಸ್ತಿ ತೆರಿಗೆ, ನೀರಿನ ಕಂದಾಯ ಪಾವತಿಗೆ ಸೂಚನೆ
ಚಾಮರಾಜನಗರ, ನ. 02  ಚಾಮರಾಜನಗರ ನಗರಸಭಾ ವ್ಯಾಪ್ತಿಗೆ ಒಳಪಡುವ 31 ವಾರ್ಡುಗಳಲ್ಲಿ ಆಸ್ತಿ ತೆರಿಗೆ, ನೀರಿನ ಕಂದಾಯ ಪಾವತಿಸದೇ ಇರುವವರು ತಪ್ಪದೇ ಪಾವತಿ ಮಾಡುವಂತೆ ಸೂಚಿಸಲಾಗಿದೆ.
ಅನೇಕ ಕಟ್ಟಡ, ನಿವೇಶನಗಳ ಮಾಲೀಕರು ಆಸ್ತಿ ತೆರಿಗೆ ಹಾಗೂ ನೀರಿನ ಕಂದಾಯ ಪಾವತಿಸದೇ ಬಾಕಿ ಉಳಿಸಿಕೊಂಡಿರುವುದು ಕಂಡುಬಂದಿದೆ.
ಈಗಾಗಲೇ ಅನೇಕ ಬಾರಿ ಬಾಕಿ ಪಾವತಿಸುವಂತೆ ಸೂಚಿಸಿದ್ದರೂ ಮಾಲೀಕರು ಪಾವತಿಸಿರುವುದಿಲ್ಲ. ಆದ್ದರಿಂದ ಆಸ್ತಿ ಮಾಲೀಕರು ಕೂಡಲೇ ಆಸ್ತಿ ತೆರಿಗೆ ಹಾಗೂ ನೀರಿನ ಕಂದಾಯ ಪಾವತಿಸಿ ಗಣಕೀಕೃತ ಇ-ಆಸ್ತಿಯ ಪ್ರತಿಯನ್ನು (ನಮೂನೆ-3) ಪಡೆದುಕೊಳ್ಳುಬೇಕು. ಅಕ್ರಮ ನಲ್ಲಿ ಸಂಪರ್ಕ ಹೊಂದಿರುವವರು ನಿಗಧಿತ ಶುಲ್ಕ ಪಾವತಿಸಿ ಸಕ್ರಮಗೊಳಿಸಿಕೊಳ್ಳಬೇಕು. 
ತಪ್ಪಿದಲ್ಲಿ ಕರ್ನಾಟಕ ಪುರಸಭೆ ಕಾಯ್ದೆ 1964ರ ಅಧಿನಿಯಮದಡಿ ತೆರಿಗೆ, ಕಂದಾಯ ಬಾಕಿದಾರರ, ಅಕ್ರಮ ನಲ್ಲಿ ಸಂಪರ್ಕ ಹೊಂದಿರುವವರ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾ.ನಗರ ನಗರಸಭೆ : ತ್ಯಾಜ್ಯ ವಿಂಗಡಿಸಿ ವಿಲೇವಾರಿಗೆ ಸೂಚನೆ
ಚಾಮರಾಜನಗರ, ನ. 02   ನಗರದಲ್ಲಿ ಘನತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ಸೂಚಿಸಿದ ವಾಹನಗಳಿಗೆ ನೀಡುವಂತೆ ಚಾಮರಾಜನಗರ ನಗರಸಭೆಯು ಸಾರ್ವಜನಿಕರಿಗೆ ತಿಳಿಸಿದೆ.
ತ್ಯಾಜ್ಯ ಉತ್ಪಾದಕರು ಮೂಲದಲ್ಲಿಯೇ ಹಸಿ ಕಸ, ಒಣ ಕಸ ಹಾಗೂ ಗೈಹಬಳಕೆ ಹಾನಿಕಾರಕ ತ್ಯಾಜ್ಯವೆಂದು 3 ವಿಧವಾಗಿ ವಿಂಗಡಿಸಿ ಕಸದ ಬುಟ್ಟಿಗಳಲ್ಲಿ ಸಂಗ್ರಹಿಸಿ ವಾಹನಗಳಿಗೆ ನೀಡಬೇಕು. ಯಾವುದೇ ರೀತಿಯ ಕಸವನ್ನು ರಸ್ತೆ, ಸಾರ್ವಜನಿಕ ಪ್ರದೇಶಗಳಲ್ಲಿ ಚರಂಡಿ, ಜಲಮೂಲಗಳಿಗೆ ಎಸೆಯಕೂಡದು. ಸಭೆ ಸಮಾರಂಭಗಳಲ್ಲಿ ಸಂಗ್ರಹಣೆಯಾಗುವ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ನಗರಸಭೆ ವಾಹನಗಳಿಗೆ ನೀಡಬೇಕು.
ರಸ್ತೆಬದಿ ವ್ಯಾಪಾರಿಗಳು ಬಳಸಿ ಬಿಸಾಡುವ ಕ್ಯಾನ್, ಪ್ಲೇಟ್‍ಗಳು, ಪ್ಯಾಕೇಜ್ ಸಾಮಗ್ರಿಗಳು, ತೆಂಗಿನ ಚಿಪ್ಪು, ತರಕಾರಿ, ಹಣ್ಣುಗಳು ಮುಂತಾದವುಗಳನ್ನು ಸಂಗ್ರಹಿಸಲು ಸೂಕ್ತ ಕಸದ ಬುಟ್ಟಿಗಳನ್ನು ಇಟ್ಟು ನಗರಸಭೆ ಸೂಚಿಸುವ ವಾಹನಗಳಿಗೆ ಹಾಕಬೇಕು. ಸಾಧ್ಯವಾದಷ್ಟು ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಮಾಡಬೇಕು. 
ಹೋಟೆಲ್, ಕಲ್ಯಾಣ ಮಂಟಪಗಳು, ಫಾಸ್ಟ್ ಫುಡ್ ಉದ್ದಿಮೆದಾರರು ತ್ಯಾಜ್ಯಗಳನ್ನು ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ಕಸದ ಬುಟ್ಟಿಗಳಲ್ಲಿ ಸಂಗ್ರಹಿಸಿ ನಗರಸಭೆ ವಾಹನಗಳಿಗೆ ನೀಡಬೇಕು. ಕಟ್ಟಡದ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಹಾಕದೇ ನಗರಸಭೆ ನಿಗದಿಪಡಿಸಿರುವ ಸ್ಥಳದಲ್ಲಿಯೇ ಹಾಕಬೇಕು.
ನಿಯಮಗಳನ್ನು ಉಲ್ಲಂಘಿಸಿದಲ್ಲಿ ಪುರಸಭೆ ಕಾಯ್ಕೆ 1964ರನ್ವಯ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

x

03-11-2018 (ಮುಸ್ಲಿಂ ಸಮುದಾಯದ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ: ಸಿ. ಪುಟ್ಟರಂಗಶೆಟ್ಟಿ)

ಮುಸ್ಲಿಂ ಸಮುದಾಯದ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ: ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ, ನ. 02 - ಮುಸ್ಲಿಂ ಸಮುದಾಯ ಜನರ ಸಮಸ್ಯೆ, ಬೇಡಿಕೆ ಮತ್ತು ಕುಂದುಕೊರತೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಮುಸ್ತಾಫ ಮಸೀದಿ ಮುಂಭಾಗದಲ್ಲಿ ಮುಸ್ಲಿಂ ಸಮುದಾಯದ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅಗತ್ಯ ಅನುದಾನ ಒದಗಿಸಿದೆ. ನಗರದ ಗಾಳೀಪುರ, ಅನ್ವರ್ ಪಾಷ ಮೊಹಲ್ಲಾ, ಸೌಹಾರ್ಧ ನಗರ, ಬೀಡಿ ಕಾಲೋನಿ ಸೇರಿದಂತೆ ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಕೆಲ ಬಡಾವಣೆಗಳು ಇನ್ನೂ ಅಭಿವೃದ್ಧಿಯಾಗಬೇಕಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಬಡಾವಣೆ ನಿವಾಸಿಗಳ ಕುಂದುಕೊರತೆಗಳನ್ನು ಪರಿಹರಿಸಲು ಆದ್ಯತೆ ನೀಡಲಾಗುವುದು ಎಂದರು.
ಬಡಾವಣೆಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆ, ಶೌಚಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಸುಸಜ್ಜಿತ ಶಾಲೆಗಳು, ಅಂಗನವಾಡಿ ಕಟ್ಟಡಗಳು, ವಿದ್ಯಾರ್ಥಿನಿಲಯಗಳ ಸುಧಾರಣೆ, ನಿರುದ್ಯೋಗ ನಿವಾರಣೆ, ರುದ್ರಭೂಮಿಗೆ ಜಾಗ, ಸಮುದಾಯ ಭವನ ಇನ್ನಿತರೆ ಮೂಲಸೌಲಭ್ಯಗಳನ್ನು ಒದಗಿಸಬೇಕಾದ ಅವಶ್ಯವಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸೂಚನೆ ನೀಡಿದರು.
ಸಮುದಾಯ ಭವನ ಮತ್ತು ಶಾದಿಮಹಲ್ ನಿರ್ಮಾಣಕ್ಕಾಗಿ ನಿವೇಶನವನ್ನು ನೀಡಲು ಪರಿಶೀಲನೆ ನಡೆಸಲಾಗುವುದು. ಸಮುದಾಯದವರು ಹೆಚ್ಚಾಗಿ ವಾಸಿಸುವ ಬಡಾವಣೆಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸ್ಥಾಪನೆಗಾಗಿ ಬ್ಯಾಂಕರ್‍ಗಳ ಜತೆ ಸಭೆ ನಡೆಸಿ ತೀರ್ಮಾನಿಸಲಾಗುವುದು. ಅಲ್ಲದೆ ಪಟ್ಟಣದಲ್ಲಿ ತಲಾ ಒಂದು ಸರ್ಕಾರಿ ಐ.ಟಿ.ಐ ಮತ್ತು ಪಾಲಿಟೆಕ್ನಿಕ್ ಕಾಲೇಜು ಇರುವುದರಿಂದ ಖಾಸಗಿ ಕಾಲೇಜು ಆರಂಭಕ್ಕೆ ಸಹಕಾರ ನೀಡಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ 237 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಯಲ್ಲಿ ತಯಾರಿಸಲಾಗಿದ್ದು, ಹೆಚ್ಚುವರಿಯಾಗಿ ಅಂದಾಜು 40 ಕೋಟಿ ರೂ.ಅಗತ್ಯವಿದೆ. ಪಟ್ಟಣದಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಯಾವ ಭಾಗದಲ್ಲಿಯೆ ಆದರೂ ಕಳಪೆ ಕಾಮಗಾರಿ ಕಂಡುಬಂದರೆ ಜಿಲ್ಲಾಧಿಕಾರಿಗಳು ಅಥವಾ ಸಚಿವರ ಗಮನಕ್ಕೆ ತಂದರೆ ತಕ್ಷಣವೇ ಕ್ರಮ ವಹಿಸಲಾಗುವುದು ಎಂದರು.
ಸ್ವಚ್ಚಭಾರತ ಅಭಿಯಾನದಡಿಯಲ್ಲಿ ಪ್ರತಿ ವಾರ್ಡ್ ಒಂದೊಂದು ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ಕಾಮಗಾರಿಯನ್ನು ಸದ್ಯದಲ್ಲಿಯೆ ಆರಂಭವಾಗಬೇಕಾಗಿದೆ ಎಂದು ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಜನಸಂಪರ್ಕ ಸಭೆ ಸೂಕ್ತ ವೇದಿಕೆಯಾಗಿದೆ. ಸಮುದಾಯದ ಅಭಿವೃದ್ಧಿಗಾಗಿ ಏನೇನು ಕೆಲಸಗಳ ಆಗಬೇಕು. ಯಾವ ಇಲಾಖೆಗಳ ಮೂಲಕ ಆಗಬೇಕಾಗಿದೆ ಎಂಬುದನ್ನು ಸಲ್ಲಿಸಿದರೆ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಲು ಅನುಕೂಲವಾಗುತ್ತದೆ ಎಂದರು.
ಅಲ್ಪಸಂಖ್ಯಾತರ ಹೆಣ್ಣುಮಕ್ಕಳ ವಿದ್ಯಾರ್ಥಿನಿಲಯಗಳಲ್ಲಿ ಮುಸ್ಲಿಂ ಸಮುದಾಯದ ಮಕ್ಕಳ ಸಂಖ್ಯೆ ಅತೀ ಕಡಿಮೆ ಇದೆ. ಇದು ಸರಿಯಲ್ಲ. ಸಮುದಾಯದ ಅಭಿವೃದ್ಧಿಗಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವಿದೆ. ಮುಖಂಡರು ಈ ಬಗ್ಗೆ ಕಾಳಜಿ ವಹಿಸಬೇಕು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಜಿಲ್ಲಾಧಿಕಾರಿ ಕಾವೇರಿ ಅವರು ಸಲಹೆ ಮಾಡಿದರು.
ನಗರಸಭಾ ಸದಸ್ಯರಾದ ಸಮೀದ್ ಉಲ್ಲಾ, ಜಾವೇದ್, ಅಬ್ರಾರ್ ಅಹಮದ್, ನಗರಸಭೆ ಅಧ್ಯಕ್ಷರಾದ ರಾಜಣ್ಣ, ಡಿ.ವೈ.ಎಸ್.ಪಿ ಜಯಕುಮಾರ್, ಪಿ.ಡಬ್ಲೂ.ಡಿ ಇಂಜಿನಿಯರ್ ವಿಜಯ್‍ಕುಮಾರ್. ಕೆ.ಇ.ಬಿ ಇಂಜಿನಿಯರ್ ರಾಜು, ಮಾಜಿ ಚುಡಾ ಅದ್ಯಕ್ಷರಾದ ಸಯ್ಯದ್ ರಫೀ, ಸಹೇಲ್ ಅಲೀ ಖಾನ್, ಮಾಜಿ ನಗರಸಭಾ ಅಧ್ಯಕ್ಷರಾದ ಸಯ್ಯದ್ ಅತೀಕ್ ಅಹಮದ್, ಮುಖಂಡರಾದ ಜಿಯಾವಲ್ಲಾ, ರಿಷದುಲ್ಲಾ, ಆಲ್ ಆದಿಶ್ ಜಿಯಾವುಲ್ಲಾ, 21 ಮುಸ್ಲಿಂ ಮೌಲ್ವಿ ಧರ್ಮಗುರುಗಳು, ಇತರರು ಸಭೆಯಲ್ಲಿ ಹಾಜರಿದ್ದರು.
ಪ.ಪಂ. ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 03 - ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2018-19ನೇ ಸಾಲಿಗೆ ಮೆಟ್ರಿಕ್ ನಂತರದ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ.ಗಳು. ವಿದ್ಯಾರ್ಥಿಯು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು.
ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್‍ಸೈಟ್ ತಿತಿತಿ.sಛಿhoಟಟಚಿಡಿshiಠಿs.gov.iಟಿ ತೆರೆದು ಸ್ಟೇಟ್ ಸ್ಕೀಮ್ ಲಿಂಕ್‍ನಲ್ಲಿ ದೊರಕುವ ಏಚಿಡಿಟಿಚಿಣಚಿಞಚಿ PಔSಖಿ ಒಇಖಿಖIಅ SಅಊಔಐಔಖSಊIP(PಒS) ಜಿoಡಿ Sಖಿ Sಣuಜeಟಿಣs-ಏಂಖಓಂಖಿಂಏಂ ಅಡಿಯಲ್ಲಿ ಸಲ್ಲಿಸಬೇಕು. ನವೀಕರಣ ವಿದ್ಯಾರ್ಥಿಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಯ ಆಧಾರ್ ಇಐಡಿ ಸಂಖ್ಯೆ ಹಾಗೂ ಕಾರ್ಡ್‍ನಲ್ಲಿ ನಮೂದಿಸಿರುವಂತೆ ಹೆಸರು, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್, ಮೊಬೈಲ್ ಸಂಖ್ಯೆ, ಜಾತಿ, ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಕಳೆದ ಸಾಲಿನ ಅಂಕಪಟ್ಟಿಗಳೊಂದಿಗೆ ಸಲ್ಲಿಸಬೇಕು.
ವಿದ್ಯಾರ್ಥಿವೇತನ ನೊಂದಾಯಿಸುವ ವೇಳೆ ತಾಂತ್ರಿಕ ದೋಷ ಕಂಡುಬಂದರೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0120-6619540, 080-22261789 ಸಂಪರ್ಕಿಸಿ ಪಡೆಯುವುದು.
ಇತರೆ ಮಾಹಿತಿಗಾಗಿ ನಗರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08226-226070, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂಖ್ಯೆ 08226-223823, ಕೊಳ್ಳೇಗಾಲದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂಖ್ಯೆ 08224-255060, ಗುಂಡ್ಲುಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ. 08229-222984, ಯಳಂದೂರು ಸಮಾಜ ಕಲ್ಯಾಣ ಇಲÁಖೆ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂಖ್ಯೆ 08226-240309 ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ದಿಮೆ ಪರವಾನಗಿ ಪಡೆಯಲು ನಗರಸಭೆ ಸೂಚನೆ
ಚಾಮರಾಜನಗರ, ನ. 03  ನಗರಸಭೆ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಈಗಾಗಲೇ ಪರವಾನಗಿ ಪಡೆದಿರುವವರು ಪ್ರಸಕ್ತ ಸಾಲಿಗೆ ನವೀಕರಿಸಿಕೊಳ್ಳಬೇಕೆಂದು ನಗರಸಭೆ ಸೂಚಿಸಿದೆ.
2018-19ನೇ ಸಾಲಿಗೆ ಪರವಾನಗಿ ನವೀಕರಿಸಬೇಕಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ಸರಳವಾಗಿ ಉದ್ದಿಮೆ ಪರವಾನಗಿ ನೀಡುವ ಉದ್ದೇಶದಿಂದ ಆನ್‍ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಎಲ್ಲ ಉದ್ದಿಮೆದಾರರು ಆನ್‍ಲೈನ್ ಮೂಲಕವೇ ಉದ್ದಿಮೆ ಪರವಾನಗಿಗಾಗಿ ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸಬೇಕು.
ಕರ್ನಾಟಕ ಪುರಸಭೆ ಕಾಯಿದೆ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1978ರ ಪ್ರಕಾರ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಉದ್ದಿಮೆಗಳು ಕಡ್ಡಾಯವಾಗಿ ಪರವಾನಗಿ ಪಡೆಯಲೇಬೇಕಿದೆ. ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ವಿಶೇಷ ಆಂದೋಲನ ಆಯೋಜಿಸಿ ಉದ್ದಿಮೆಗಳಿಗೆ ಪರವಾನಗಿಯನ್ನು ಪ್ರಮುಖ ಉದ್ದಿಮೆ ಸ್ಥಳಗಳಲ್ಲಿ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಗಿಯನ್ನು ನಗರಸಭಾ ವತಿಯಿಂದ ನೀಡಲಾಗುವುದು.
ಪಟ್ಟಣ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ನಗರಸಭೆ ನಿಗದಿಪಡಿಸಿದ ಸಮರ್ಪಕ ದಾಖಲಾತಿಗಳನ್ನು ನವೆಂಬರ್ 2018ರ ಒಳಗಾಗಿ ಸಲ್ಲಿಸಿ ಪರವಾನಗಿ ಹೊಸದಾಗಿ ಪಡೆಯಲು ಹಾಗೂ ಪಡೆದಿರುವವರು ನವೀಕರಿಸಿಕೊಳ್ಳಬೇಕು. ಪಟ್ಟಣದ ಪ್ರಮುಖ ಅಂಗಡಿ ಬೀದಿಗಳಲ್ಲಿ ಆಟೋ ಪ್ರಚಾರ ಹಾಗೂ ಕರಪತ್ರಗಳ ಮೂಲಕ ಮಾಹಿತಿ ನೀಡಲಾಗುವುದು. ಈ ಅವಕಾಶವನ್ನು ಉದ್ದಿಮೆದಾರರು ಸದುಪಯೋಗ ಮಾಡಿಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ.ಪಂ.ವಿದ್ಯಾಥಿಗಳಿಂದ ಎನ್‍ಎಸ್‍ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 03  - 2018-19ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಕೋರ್ಸುಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್‍ಸೈಟ್ hಣಣಠಿ;//sಛಿhoಟಚಿಡಿshiಠಿs.gov.iಟಿ ತೆರೆದು ಸ್ಟೇಟ್ ಸ್ಕೀಮ್ ಲಿಂಕ್‍ನಲ್ಲಿ ದೊರಕುವ ಏಚಿಡಿಟಿಚಿಣಚಿಞಚಿ PಔSಖಿ ಒಇಖಿಖIಅ SಅಊಔಐಔಖSಊIP(PಒS) ಜಿoಡಿ Sಖಿ Sಣuಜeಟಿಣs-ಏಂಖಓಂಖಿಂಏಂ ಅಡಿಯಲ್ಲಿ ಡಿಸೆಂಬರ್ 15ರೊಳಗೆ ಸಲ್ಲಿಸಬೇಕು.
ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ದೋಷ ಕಂಡುಬಂದರೆ ಸಹಾಯವಾಣಿ ಸಂಖ್ಯೆ 0120-6619540, ಇ-ಮೇಲ್ ಟಿsಠಿಜiಡಿeಛಿhoಡಿsಣ@gmಚಿiಟ.ಛಿom ಸಂಪರ್ಕಿಸುವಂತೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ನ. 5ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಪೂರ್ವಭಾವಿ ಸಭೆ
ಚಾಮರಾಜನಗರ, ನ. 03- ನಗರದಲ್ಲಿ ನವೆಂಬರ್ 10ರಂದು ಹಜರತ್ ಟಿಪ್ಪುಸುಲ್ತಾನ್ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 5ರಂದು ಬೆಳಿಗ್ಗೆ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆÀಯಲಾಗಿದೆ.
ಪೂರ್ವಭಾವಿ ಸಭೆಗೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯ ಹಾಗೂ ಸಂಘಟನೆಗಳ ಮುಖಂಡರು ಹಾಜರಾಗಿ ಸಲಹೆ, ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಸಿರು ಹಾಗೂ ಸ್ವಸ್ಥ ದೀಪಾವಳಿ : ವಾಯು, ಶಬ್ದ ಮಾಲಿನ್ಯ ತಡೆಯಲು ಸೂಚನೆ
ಚಾಮರಾಜನಗರ, ನ. 03  ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ, ಆರೋಗ್ಯ ಸಂರಕ್ಷಣೆ ದೃಷ್ಟಿಯಿಂದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದುಪಡಿ 1999 ಮತ್ತು 2000 ಅಡಿಯಲ್ಲಿ ಹಲವು ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದ್ದಾರೆ.
125 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ದ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ, ಇನ್ನಿತರ ಸ್ಥಳಗಳ ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ಪಟಾಕಿ  ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಸೂಚಿಸಿರುವ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಈ ನಿಟ್ಟಿನಲ್ಲಿ ನಾಗರಿಕರು ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ಹಾಗೂ ವಾಯುಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿಯನ್ನಾಗಿ ಆಚರಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನ ಕಾರ್ಯಕ್ರಮ
ಚಾಮರಾಜನಗರ, ನ. 03- ತಾಲೂಕು ಪಂಚಾಯತ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇ-ಸ್ವತ್ತು ಖಾತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಾಗರಿಕರು ತಮ್ಮ ಇ-ಸ್ವತ್ತು ಖಾತಾಗಳನ್ನು ಪಡೆಯಲಿಚ್ಚಿಸಿದಲ್ಲಿ ಸಂಬಂಧಿತ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ವಹಿಸಲಾಗುವುದು ಅಥವಾ ಹಿಂಬರಹ ನೀಡಲಾಗುವುದು.
ಅಭಿಯಾನದ ಮೇಲುಸ್ತುವಾರಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಹಿಸಲಿದ್ದು, ನಾಗರಿಕರು ಈ ಅಭಿಯಾನದ ಸದುಪಯೋಗ ಪಡೆಯುವಂತೆ ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.



ನ. 12ರಂದು ವಿಶೇಷ ಅಗತ್ಯವುಳ್ಳ ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ
ಚಾಮರಾಜನಗರ, ನ. 02 - ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ 6ರಿಂದ 16 ವರ್ಷದ ವಯೋಮಿತಿಯುಳ್ಳ ವಿಶೇಷ ಅಗತ್ಯವುಳ್ಳ ವಿಕಲಚೇತನ ಮಕ್ಕಳಿಗೆ ಅಗತ್ಯವಾದ ಸಾಧನ, ಸಲಕರಣೆಗಳನ್ನು ವಿತರಿಸುವ ಸಂಬಂಧ ನವೆಂಬರ್ 12ರಂದು ವೈದ್ಯಕೀಯ ತಪಾಸಣಾ ಶಿಬಿರವನ್ನು ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ಏರ್ಪಡಿಸಲಾಗಿದೆ ಎಂದು ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂಗಾರು, ಬೇಸಿಗೆ ಹಂಗಾಮಿಗೆ ಫಸಲ್ ಭೀಮಾ ವಿಮಾ ಯೋಜನೆ ಅನುಷ್ಠಾನ
ಚಾಮರಾಜನಗರ, ನ. 03  - ಕೃಷಿ ಇಲಾಖೆ ವತಿಯಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ವಿಮಾ ಯೋಜನೆಯನ್ನು 2018-1ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಜಿಲ್ಲೆಯ ಗ್ರಾಮಪಂಚಾಯಿತಿ ಹಾಗೂ ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ನೀರಾವರಿ ಆಶ್ರಯದಲ್ಲಿ ಭತ್ತ, ಮುಸುಕಿನ ಜೋಳ, ರಾಗಿ, ಈರುಳ್ಳಿ, ಟೊಮ್ಯಾಟೋ ಹಾಗೂ ಮಳೆ ಆಶ್ರಯದಲ್ಲಿ ರಾಗಿ, ಮುಸುಕಿನ ಜೋಳ, ಹುರುಳಿ ಹಾಗೂ ಹೆಸರು ಬೆಳೆಗಳನ್ನು ಮತ್ತು ಬೇಸಿಗೆ ಹಂಗಾಮಿಗೆ ನೀರಾವರಿ ಆಶ್ರಯದಲ್ಲಿ ಭತ್ತ, ರಾಗಿ, ಈರುಳ್ಳಿ, ಟೊಮ್ಯಾಟೋ ಬೆಳೆಗಳನ್ನು ಹೋಬಳಿಮಟ್ಟದಲ್ಲಿ ವಿಮೆಗೆ ಒಳಪಡಿಸಲಾಗಿದೆ.
ಹಿಂಗಾರು ಹಂಗಾಮಿಗೆ ಗ್ರಾಮಪಂಚಾಯಿತಿ ಮಟ್ಟದಲ್ಲಿ ಚಾಮರಾಜನಗರ, ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲ ತಾಲೂಕುಗಳಲ್ಲಿ ಹುರುಳಿ(ಮಳೆ ಆಶ್ರಿತ) ಬೆಳೆಯನ್ನು ವಿಮೆಗೊಳಪಡಿಸಲಾಗಿದೆ. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಶೀದಿಯನ್ನು ನೀಡಬೇಕು. ಹೆÀಚ್ಚಿನ ಮಾಹಿತಿಗಾಗಿ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರವನ್ನು ಅಥವಾ ಕೃಷಿ ನಿರ್ದೇಶಕರ ಕಚೇರಿ ಮತ್ತು ಬ್ಯಾಂಕ್ ನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 5ರಂದು ನಗರದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ, ಧನ್ವಂತರಿ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ನ. 03  - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆಎಸ್‍ಎಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಜಿಲ್ಲಾ ಪಂಚಾಯತ್‍ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ. ಮರುಗದಮಣಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರದ ಜೆಎಸ್‍ಎಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜಿ. ವಿನಯ್‍ಕುಮಾರ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 4ರಂದು ನಗರದಲ್ಲಿ ಎನ್‍ಟಿಎಸ್‍ಇ, ಎನ್‍ಎಂಎಸ್‍ಎಸ್ ಪರೀಕ್ಷೆ
ಚಾಮರಾಜನಗರ, ನ. 03 - ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಚಾಮರಾಜನಗರ ತಾಲೂಕಿನಿಂದ 2018-19ನೇ ಸಾಲಿಗೆ ಅರ್ಜಿ ಸಲ್ಲಿಸಿದ್ದ ಎನ್‍ಟಿಎಸ್‍ಇ ಮತ್ತು ಎನ್‍ಎಂಎಂಎಸ್ ಪರೀಕ್ಷೆಗಳಿಗೆ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನವೆಂಬರ್ 4ರಂದು ನಗರದಲ್ಲಿ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ-
10ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‍ಟಿಎಸ್‍ಇ ಪರೀಕ್ಷೆಯು ನಗರದ ಸತ್ತಿ ರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
8ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‍ಎಂಎಂಎಸ್ ಪರೀಕ್ಷೆಯು ನಗರದ ಜೆಎಸ್‍ಎಸ್ ಬಾಲಕಿಯರ ಪ್ರೌಢಶಾಲೆ, ಜೆಎಸ್‍ಎಸ್ ಬಾಲಕರ ಪ್ರೌಢಶಾಲೆ ಹಾಗೂ ಸಿದ್ದಾರ್ಥನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.




 




















x

04-11-20108 (ಗಡಿಯಂಚಿನ ಹಾಡಿಯಲ್ಲಿ ಜಿ.ಪಂ ಸಿ.ಇ.ಒ ಗ್ರಾಮ ವಾಸ್ತವ್ಯ : ಆದಿವಾಸಿಗಳ ಅಹವಾಲು ಆಲಿಕೆ.)

ಗಡಿಯಂಚಿನ ಹಾಡಿಯಲ್ಲಿ ಜಿ.ಪಂ ಸಿ.ಇ.ಒ ಗ್ರಾಮ ವಾಸ್ತವ್ಯ : ಆದಿವಾಸಿಗಳ ಅಹವಾಲು ಆಲಿಕೆ.

ಚಾಮರಾಜನಗರ, ನ  ಜನವಸತಿ ಪ್ರದೇಶಗಳಿಂದ ಬಹುದೂರವಿರುವ ಗಡಿಯಂಚಿನ ಆದಿವಾಸಿಗಳ ಹಾಡಿ ಆಲಂಬಾಡಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಶನಿವಾರ ರಾತ್ರಿ ವಾಸ್ತವ್ಯ ಹೂಡಿ ಕುಂದುಕೊರತೆಗಳನ್ನು ಆಲಿಸಿದರು.
ಹನೂರು ತಾಲ್ಲೂಕು ವ್ಯಾಪ್ತಿಯ ಗೋಪಿನಾಥಂ ಗ್ರಾಮ ಪಂಚಾಯತ್‍ಗೆ ಸೇರಿದ ಆಲಂಬಾಡಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ವಿಶೇಷವಾಗಿ ಗಮನ ಸೆಳೆಯಿತು. ಮಲೆ ಮಹದೇಶ್ವರ ಬೆಟ್ಟದಿಂದ ಸುಮಾರು 2 ತಾಸಿಗೂ ಹೆಚ್ಚು ಕಾಲ ಪ್ರಯಾಣಿಸಬೇಕಾಗಿರುವ ಆಲಂಬಾಡಿಯನ್ನು ತಲುಪಲು ದುರ್ಗಮ ಅರಣ್ಯವನ್ನು ದಾಟಿ ಹೋಗಬೇಕಾಗಿದೆ. ಜನವಾಸ ಪ್ರದೇಶಗಳೇ ಅತಿ ವಿರಳವಾಗಿರುವ ಕುಗ್ರಾಮ ಎನಿಸುವ ಆಲಂಬಾಡಿಯಲ್ಲಿ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳು ಇತರೆ ಅಧಿಕಾರಿಗಳ ಜೊತೆ ಗ್ರಾಮ ವಾಸ್ತವ್ಯ ಕೈಗೊಂಡು ಜನರ ಸಮಸ್ಯೆಗಳ ವಾಸ್ತವ ದರ್ಶನ ಪಡೆದರು.
ಹಾಡಿಗೆ ಕಾಲಿಡುತ್ತಿದ್ದಂತೆಯೇ ಅಲ್ಲಿನ ಮನೆ-ಮನೆಗೆ ತೆರಳಿ ಜನರ ಕಷ್ಟ ಕಾರ್ಪಣ್ಯಗಳನ್ನು ಕೇಳಿದರು. ವಸತಿ, ಕುಡಿಯುವ ನೀರು, ಇನ್ನಿತರ ಮೂಲ ಸೌಲಭ್ಯಗಳನ್ನು ಸಮಪರ್ಕವಾಗಿ ಕಲ್ಪಿಸಿಕೊಡುವಂತೆ ಜನರು ಮನವಿ ಮಾಡಿದರು.
ಬಳಿಕ ಅಲ್ಲಿನ ಶಾಲಾ ಆವರಣದಲ್ಲಿ ನಡೆದ ಸಭೆಯಲ್ಲಿ ಸ್ಥಳೀಯರು ತಾವು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಳಲು ತೋಡಿಕೊಂಡರು. ಗ್ರಾಮದ ಹಿರಿಯರು, ಮುಖಂಡರು ಮಾತನಾಡಿ ಬದುಕಿಗೆ ಅಗತ್ಯವಾದ ಮೂಲ ಸೌಲಭ್ಯಗಳಿಂದ ನಾವು ವಂಚಿತರಾಗಿದ್ದೇವೆ. ಪಕ್ಕದಲ್ಲೇ ಕಾವೇರಿ ನದಿ ಹರಿಯುತ್ತಿದ್ದರೂ ನಮಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ರಸ್ತೆ ಇಲ್ಲವಾಗಿದೆ. ವಿದ್ಯುತ್ ಸೌಲಭ್ಯವಂತೆ ಕಲ್ಪಿಸಿಯೇ ಇಲ್ಲ ಎಂದು ಎಳೆಎಳೆಯಾಗಿ ಅಲ್ಲಿನ ಕೊರತೆಗಳನ್ನು ಬಿಡಿಸಿಟ್ಟರು.
ಆಲಂಬಾಡಿಯಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲ. ಪಡಿತರ ಪಡೆಯಲು ಪಕ್ಕದ 5 ಕಿ.ಮೀ ಗ್ರಾಮಕ್ಕೆ ಹೋಗಿ ಬರಬೇಕಿದೆ. ಇದನ್ನು ತಪ್ಪಿಸಲು ಸಂಚಾರಿ ಪಡಿತರ ವಿತರಣ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ಎಲ್ಲರ ಅಹವಾಲುಗಳನ್ನು ವಿವರವಾಗಿ  ಆಲಿಸಿದ ಬಳಿಕ ಮಾತನಾಡಿದ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ನಿಮ್ಮ ಎಲ್ಲಾ ನೋವು, ಸಮಸ್ಯೆಗಳು ನನಗೆ ಮನವರಿಕೆಯಾಗಿದೆ. ಈ ಹಿಂದೆ ಎರಡು ಗ್ರಾಮ ವಾಸ್ತವ್ಯಗಳನ್ನು ಮಾಡಿದ್ದೇನೆ. ಆದರೆ, ಆಲಂಬಾಡಿಯಲ್ಲಿ ಕೈಗೊಂಡಿರುವ ಈ ಗ್ರಾಮ ವಾಸ್ತವ್ಯ ನನಗೆ ಆತ್ಮತೃಪ್ತಿ ತಂದಿದೆ ಎಂದರು.
ಜನರ ಮನೆ ಬಾಗಿಲಿಗೆ ತೆರಳಿ ಅವರ ಕುಂದು-ಕೊರತೆ ನೈಜ್ಯ ಚಿತ್ರಣ ಪಡೆದು ಪರಿಹರಿಸಬೇಕೆಂಬ ಸರ್ಕಾರದ ನಿರ್ದೇಶನದ ಮೇರೆಗೆ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ. ಆರೋಗ್ಯ, ಶಿಕ್ಷಣ, ರಸ್ತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಅವಶ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಜವಬ್ದಾರಿ ನಮ್ಮ ಮೇಲಿದೆ ಎಂದರು.
ಪರಿಶಿಷ್ಟರ ಕಲ್ಯಾಣಕ್ಕೆ ನಿಗದಿಯಾಗಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ಸದ್ವಿನಿಯೋಗವಾಗಬೇಕು. ಇದರಿಂದ ಅರಣ್ಯವಾಸಿಗಳ, ಗಿರಿಜನರ ಬದುಕು ಹಸನಾಗಬೇಕಿದೆ. ಸ್ಥಳೀಯವಾಗಿ ವ್ಯಕ್ತವಾಗಿರುವ ಎಲ್ಲಾ ಬೇಡಿಕೆ, ಸಮಸ್ಯೆ ಪರಿಹರಿಸಿ ಮೂಲಸೌಕರ್ಯ ಕಲ್ಪಿಸಲು ಸ್ಪಂದಿಸಲಾಗುವುದು ಎಂದು ಡಾ. ಕೆ. ಹರೀಶ್‍ಕುಮಾರ್ ಅವರು ತಿಳಿಸಿದರು.
ಮುಖಂಡರಾದ ಮಹದೇವು, ದೊಡ್ಡಯ್ಯ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ, ಜಂಟಿ ಕೃಷಿ ನಿರ್ದೇಶಕರಾ ಎಂ. ತಿರುಮಲೇಶ್ ಮಾತನಾಡಿದರು.
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕಾಧಿಕಾರಿ, ಉಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ        ಡಾ. ಕೆ.ಹೆಚ್. ಪ್ರಸಾದ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಿವಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸಾರ್ಥಕ ಭಾವ ಮೂಡಿಸಿದ ಗ್ರಾಮ ವಾಸ್ತವ್ಯ
ಚಾಮರಾಜನಗರ, ನ 04  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರ ಆಲಂಬಾಡಿ ಗ್ರಾಮ ವಾಸ್ತವ್ಯ ಅಚ್ಚುಕಟ್ಟಾದ ಆಯೋಜನೆಯಿಂದ ಯಶಸ್ವಿಯಾಗಿದೆ.
ಈ ಹಿಂದೆ ಬಿಳಿಗಿರಿರಂಗನಬೆಟ್ಟದ ಮುತ್ತುಗದ ಗದ್ದೆ ಪೋಡು, ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಕಾಲೋನಿಯಲ್ಲಿ ಹರೀಶ್‍ಕುಮಾರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದರು. ಈ ಬಾರಿ ಬಹುದೂರದ ದುರ್ಗಮ ಹಾಡಿಯನ್ನು ಗ್ರಾಮ ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಂಡಿದ್ದರು. ಗ್ರಾಮ ವಾಸ್ತವ್ಯದ ಸಾರ್ಥಕತೆಯ ಭಾವ ಆಲಂಬಾಡಿಯಲ್ಲಿ ಹೆಚ್ಚು ಗೋಚರವಾಯಿತು. ಇದಕ್ಕೆ ಪುಷ್ಠಿಕರಿಸುವಂತ ಹರೀಶ್‍ಕುಮಾರ್ ಅವರೇ ಈ ಹಿಂದಿನ ಗ್ರಾಮ ವಾಸ್ತವ್ಯಕ್ಕಿಂತ ಆಲಂಬಾಡಿ ಗ್ರಾಮ ವಾಸ್ತವ್ಯ ತಮಗೆ ಹೆಚ್ಚು ತೃಪ್ತಿ ತಂದಿದೆ ಎಂಬ ಮನದಾಳದ ಮಾತನ್ನು ಹೊರಹಾಕಿದರು.
ಹಾಡಿಯ ದೊಡ್ಡಮ್ಮ ಎಂಬುವವರ ಮನೆಯಲ್ಲಿ ಅರಣ್ಯವಾಸಿಗಳ ದೇಸಿ ಖಾದ್ಯಗಳಾದ ಔಷಧೀಯ ಗುಣವುಳ್ಳ ಸುಂಡೇಕಾಯಿ, ಅಣ್ಣೆಸೊಪ್ಪು ಪಲ್ಯ, ಅವರೆಕಾಳು ಹಲಸಿನಕಾಯಿ ಹುಳಿ, ಅನ್ನ, ಮಜ್ಜಿಗೆ, ಅಕ್ಕಿ ಪಾಯಸ ಸವಿದರು.
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್ ಮತ್ತು ಸಿಬ್ಬಂದಿ ಅವರ ಪರಿಶ್ರಮ ಆಲಂಬಾಡಿ ಗ್ರಾಮ ವಾಸ್ತವ್ಯ ಯಶಸ್ವಿಗೆ ಕಾರಣವಾಯಿತೆಂಬ ಮೆಚ್ಚುಗೆಯು ಕೇಳಿ ಬಂದಿತು.
ಕೊಳ್ಳೇಗಾಲ - ಹನೂರು ಹೆದ್ದಾರಿ ಯೋಜನೆ : ರೈತರಿಗೆ ತಕ್ಷಣ ಪರಿಹಾರ
ಚಾಮರಾಜನಗರ, ನ 04 - ಕರ್ನಾಟಕ ರಾಜ್ಯ ಭೂ ಅಭಿವೃದ್ಧಿ ಯೋಜನೆಯಡಿ (ಕೆಶಿಪ್-3) ಕೊಳ್ಳೇಗಾಲ-ಹನೂರು ರಾಜ್ಯ ಹೆದ್ದಾರಿ ಅಭಿವೃದ್ಧಿಗಾಗಿ ಕೈಗೊಂಡಿರುವ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಮೀನು ಕ್ರಯಕ್ಕೆ ನೀಡಿರುವ ರೈತರಿಗೆ ಆಯಾ ದಿನವೇ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಉಪ ವಿಭಾಗಾಧಿಕಾರಿ ಫೌಜೀಯಾ ತರನ್ನುಮ್ ತಿಳಿಸಿದ್ದಾರೆ.
ರಸ್ತೆ ಅಭಿವೃದ್ಧಿಗೆ ಒಳಪಡುವ 12 ಗ್ರಾಮಗಳ ರೈತರು ಜಮೀನು ನೇರ ಖರೀದಿಗೆ ಒಪ್ಪಿಗೆ ಕೊಡುತ್ತಿದ್ದು, ಮಧುವನಹಳ್ಳಿ, ಹಾರುವಪುರ, ಸಿಂಗಾನಲ್ಲೂರು ಗ್ರಾಮದ ರೈತರು ಸಹ ನೇರ ಖರೀದಿಗೆ ಒಪ್ಪಿಗೆ ನೀಡಿದ್ದಾರೆ. ಮಧುವನಹಳ್ಳಿ ಗ್ರಾಮದ 7 ಮತ್ತು ಸಿಂಗಾನಲ್ಲೂರು ಗ್ರಾಮದ          1 ಸರ್ವೇ ನಂಬರ್‍ಗಳ ಜಮೀನನ್ನು ರೈತರಿಂದ ನವೆಂಬರ್ 3 ರಂದು ಕ್ರಯಕ್ಕೆ ಪಡೆಯಲಾಗಿದ್ದು, ಅಂದೇ ಪರಿಹಾರ ಧನವನ್ನು ಚೆಕ್ ಮೂಲಕ ರೈತರಿಗೆ ವಿತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಮೀನು ಹಕ್ಕುದಾರರು ಕ್ರಯದ ಕರಾರು ಪತ್ರಕ್ಕೆ ಸಹಿ ಹಾಕಿದ ಪ್ರಕರಣಗಳಲ್ಲಿ ಸರ್ಕಾರದ ವತಿಯಿಂದಲೇ 11-ಇ ಸ್ಕೆಚ್ ಮಾಡಿಸಿ ಸಹಿ ಮಾಡಿದ ದಿನದಂದೆ ಚೆಕ್ ವಿತರಿಸಲಾಗುತ್ತಿದೆ. ರಾಜ್ಯ ಹೆದ್ದಾರಿ ಯೋಜನೆ ಕಾಮಗಾರಿ ತ್ವರಿತವಾಗಿ ಕಾರ್ಯಗತಗೊಳಿಸಲು ಯೋಜನ ವ್ಯಾಪ್ತಿಯ ಗ್ರಾಮಗಳ ಇನ್ನುಳಿದ ರೈತರು ಮುಂದೆ ಬಂದು ಒಪ್ಪಿಗೆ ಪತ್ರ ನೀಡುವಂತೆ ಉಪ ವಿಭಾಗಾಧಿಕಾರಿ ಫೌಜೀಯಾ ತರನ್ನುಮ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
x

ಮನದಾಳದ ಮಾತು.....

ಮನದಾಳದ ಮಾತು.....
ನಾನು ನನ್ನ ಸ್ನೇಹಿತ ಸರಸ್ವತಿಪುರಂ ಕ್ಯಾಂಟೀನ್ ಕಡೆ ಟೀ ಕುಡಿಯುತ್ತಾ ಕುಳಿತ್ತಿದ್ದೇವು. ನನ್ನ ಸ್ನೇಹಿತನಿಗೆ ಕರೆಯೊಂದು ಬಂತು..ಏಕಾಂತದಲ್ಲಿ  ಮಾತನಾಡುತ್ತ ೫-೧೦ ನಿಮಿಷ ಕಳೆದ.ನಂತರ ಅವನ ಆವಾಭಾವವೇ ಬದಲಾಗಿತ್ತು.‌ಮುಖದಲ್ಲಿ ಏನೋ ಒಂದು ತರಹ ದುಗುಡ, ಆತಂಕ ಎದ್ದು ಕಾಣುತ್ತಿತ್ತು. ಹೇಳಲು ಸಂಕೋಚ.ಹೇಳದೆ ಅನಿವಾರ್ಯವಿಲ್ಲೆಂಬಂತೆ
ಬಿಚ್ಚಿಟ್ಟ.ಎಲ್ಲವನ್ನೂ ಪೇಸ್ ಮಾಡುವ ತಾಕತ್ತಿದ್ದರೂ ತನ್ನ ನಂಬಿದ ಹುಡುಗಿಗೆ ಕೆಟ್ಟ ಹೆಸರು ಬರಬಾರದೆಂದು ಅದೂ ಅವರ ಸೋದರ ಮಾವನಿಂದ...ನಾನು (ಬಹುಶಃ)..ಕೋಪಗೊಂಡು ಸ್ನೇಹಿತನಿಗೆ ಒಂದೇ ಮಾತು ನೀನು ಆಕೆಯನ್ನ ಪ್ರೀತಿ ಮಾಡ್ತಿದೀಯಾ, ಆಕೆ? ಅಂತೆಳಿದೆ...ಅದಕ್ಕೆ ಇಲ್ಲ ಅಂತೆಳಿದ ..ಎಲ್ಲಿ ಹೋದರೂ ಹೆಣ್ಣಿನ ಮಾತು( ೧೮ ವರ್ಷದತುಂಬಿದ ಮೇಲೆ) ನಡೆಯುವುದರಿಂದ..ಸೂಕ್ಷ್ಮ ಆಗಿ ನೋಡಿ ಅವರ ಸೋದರ ಮಾವ ಅವರನ್ನ ಇಲ್ಲಿಗೆ ಕರೆಯಿಸು ಮಾತಾಡೋಣ ಅಂತೇಳಿದೆ..ಬೇಡ ಎಂದು ಸುಮ್ಮನಾಗಿದ್ದವರ ಮೊಬೈಲ್ ಕಸಿದು ಕರೆ ನಾನೆ ಮಾಡಿದೆ ..ಬನ್ನಿ ಸರ್ ಮಾತಾಡೋಣ ಅಂತ.ಅವರೂ .ಬಂದರೂ ಅದೂ ಏಳೆಂಟು ಜನ... ಇರಲಿ ಆದದ್ದು ಎಂದು ಸಿ.ಸಿ.ಕ್ಯಾಮೆರಾ ವ್ಯಾಪ್ತಿಯಲ್ಲಿ ಕೆಳಗೆ ಎಲ್ಲರಿಗೂ ಟಿ. ಕುಡಿಸಿ ಮಾತನಾಡುತ್ತಿದ್ದಾಗ..ಆ ವೇಳೆಗೆ ಪೊಲೀಸ್ ವಾಹನ ಬಂದು ಸಿಬ್ಬಂದಿಯೋರ್ವರು  ಬೈಯ್ದು ಹೋದರು..ಸರಿ ಸರ್ ಸಣ್ಣ ಮಾತಿದೆ.ಅದು ಮುಗಿದ ಮೇಲೆ ಅಥವಾ ಜಾಸ್ತಿ ಆದಾಗ ನಾವೇ ಹೋಗ್ತೇವೆ ಅಂತ ಮನಸ್ಸಲ್ಲಿ ಅಂದುಕೊಂಡು ಮಾತು ಪ್ರಾರಂಭವಿರಲಿ ಅಂತಿಮಕ್ಕೆ ಕರೆದೊಯ್ದೆ...ಏನ್ ಸರ್..ಗಲಾಟೆ ಮಾಡೋಕೆ ಇಷ್ಟವಿಲ್ಲ..ಜಸ್ಟ್ ಪೊನ್ ಅಲ್ಲಿ ಸಾದಾರಣ ಚಾಟ್ (ಇತರ ಚಾಟ್ ಇಲ್ಲ), ಕರೆಮಾಡ್ತಿದಾರಂತೆ ಆದರೆ ನಾನು ನೋಡಿಲ್ಲ..ಈಗಷ್ಟೆ ತಾವೆ ವಾರ್ನಿಂಗ್ ಕೊಟ್ರಲ್ಲ ಸೋ..ಅಂತೆಳಿದೆ. ಹುಂ ಸರ್..ಮಾಡೋದು ಬೇಡ.ಅಷ್ಟೆ..ಮಾಡಿದ್ರೆ ಸರಿಯಿಲ್ಲ ಅಂತ ಮತ್ತೆ ವಾರ್ನಿಂಗ್...ಗೆಳೆಯನ ಮುಖ ನೋಡಿದೆ ಬೇಡ ಬಿಡು ಮಾರಾಯ ಜಗಳ ಏನುಕ್ಕೆ ಅಂತೇಳಿದ..ಹುಡುಗಿ ಬಂದ್ರೆ ಮದುವೆ ಆಗೋಕೆ ರೆಡಿನಾ ಅಂತೇಳಿದೆ..ಇಷ್ಟನೇ ಇಲ್ಲ..ಆ ಬಾವನೆನೂ ನನಗೆ  ಇಲ್ಲ ಅಂತೇಳಿದ.. ನಾನು ಹೇಳಿದಕ್ಕೆ ಹುಂ ಅಂತೆಳು ಸಾಕು ಅಂತೆಳಿದೆ..ನೋಡಿ ಸರ್ ನಮ್ ಹುಡುಗ ೩ ವರ್ಷದಿಂದ ಲವ್ ಮಾಡ್ತಿದ್ದ, ಮತ್ತೊಂದು ಮಾಡ್ತಿದ್ದ ಗಲಾಟೆ , ಹೊಡೆದಾಟಕ್ಕೂ ರೆಡಿ. ಆದರೆ ನಾವಂತು ಹೊಡೆಯೊಲ್ಲ ಅಂತೇಳುತ್ತಲೇ ಹೋದಂತೆ ಸರ್.ಆ ಹುಡುಗಿ ಸರಿಯಿಲ್ಲ ಸರ್ ಅನ್ನೊ ಪದ ಬಳಕೆ ಮಾಡಿದ.ಕೋಪ ಬಂತು ಸರಿಯಿಲ್ಲದ ಅನ್ನೊ ಹುಡುಗಿ ಪರ ಇಷ್ಟು ಚರ್ಚೆ ಮಾಡೋ ನೀನು ಬರೀ ಮಾತು ಕತೆಗೆ ಹೀಗಂತೀಯಲ್ಲ ಸುಮ್ನೆ ಹೋಗೊ ..ಅವಳನ್ನ ಠಾಣೆಗೆ ಕರೆಯಿಸ್ತೀವಿ. ಅವಳು ಓ.ಕೆ. ಅಂದ್ರೆ ಇಲ್ಲಿಂದ ಹೇಗೆ ಕರೆದುಕೊಂಡು ಹೋಗಬೇಕು ಅಂತ ಗೊತ್ತು ಅಂತೆಳಿ ಬಂದೆವಷ್ಟೆ...ಬಸ್ ನಿಲ್ದಾಣದಲ್ಲಿ ಒಬ್ಬನೆ ನಿಂತಿದ್ದಾನೆ..ಸರ್ ನಾನು ಪ್ರೀತಿಸೋ ಹುಡುಗಿ ಆಕೆ..ಸಂಬಂದಿಯೂ ಆಗಬೇಕು..ಮೆಸೆಜ್ ಮಾಡದಂತೆ ನೋಡಿಕೊಳ್ಳಿ ಸರ್ ಅಂತ ಮತ್ತೆ ರಿಕ್ವೆಸ್ಟ್..ವಿಪರ್ಯಾಸವೆಂದರೆ ಆತನ ಜೊತೆ ನನ್ನ ಹಳೆಯ ಸ್ನೇಹಿತನೋರ್ವ ಬಂದಿದ್ದು..ಅವನಿಗಾಗಿ ತಣ್ಣಗಾಗಲೇ ಬೇಕು..ಎಂದು ನೋಡ್ರಿ,ಆಕೆ ಮೆಸೆಜ್ ಮಾಡದೆ ಇರೋ ತರಹ ನೋಡ್ಕೋ ತಾಕತ್ತು ನಿಮಗಿದ್ರೆ ನೋಡಿ. ನಮ್ ಹುಡುಗ ಮಾಡೋಲ್ಲ..ಅವಳು ಮಾಡಿದ್ರೆ ನಮ್ ಹುಡುಗನೂ ಬಿಡೋಲ್ಲ ಅಷ್ಟೆ..ಅಂತ ಪೈನಲ್ ಮಾಡಿ ನಾಲ್ಕು ಜನ ಮತ್ತೆ ಟೀ..ಪಾರ್ಟಿ ಮಾಡಿ ವಾಪಸ್ ನಗರಕ್ಕೆ ಬಂದೆವು.
ಇಲ್ಲಿ ಒಂದು ನಗು ಬರುವ ವಿಚಾರ ಮದುವೆ ಮುನ್ನವೇ ನಂಬದವನು ಮದುವೆಯಾದ ಮೇಲೆ ನಂಬುವನೇ ಎಂಬುದು ಸೋಜಿಗವಾಗಿದೆ ಅಷ್ಟೆ
 ಪ್ರಯಾಣದ ಮಾರ್ಗಮದ್ಯೆ ಸ್ನೇಹಿತ ಕೇಳಿದ ಇಷ್ಟೆಲ್ಲ ದೈರ್ಯ ‌ಹೆಂಗೆ ಮಾರಾಯ್ಯ..ಇದ್ರೆ ಎಳ್ಕೊಬೇಕು. ಇಲ್ಲ ಕರ್ಕೊಂಡು ಹೋಗಬೇಕು ಸುಮ್ನೆ ಏನುಕ್ಕೆ ಇದೆಲ್ಲ ..ಅಂತ ನನ್ನ ಜೀವನದಲ್ಲಿ ಆದ ಒಂದು ಸತ್ಯ ಕಥೆ ಬಿಚ್ಚಿಟ್ಟೆ..ಜನ ಹೀಗೂ ಇರ್ತಾರಾ!?  ನೀನು ಮಾಡೋದೆ ಸರಿ ಬಿಡು ಗುರು ಅಂತೇಳಿದ...ಇಷ್ಟಕ್ಕೂ ಸಾಮಾಜಿಕ ಜಾಲತಾಣದಲ್ಲಾದ ನಿಜ ಜೀವನದ ಒಂದು ಕಥೆ ಹೀಗಿತ್ತು...ಅದೊಂದು ವಾಟ್ಸಾಪ್ ಗುಂಪು ಅದೂ ‌ಇನ್ಸ್ ಪೆಕ್ಟರ್ ಮಾಡಿದ ಗುಂಪು..ಮಾಡಿದ ಉದ್ದೇಶವೇ ಬೇರೆ, ಆಗಿದ್ದೇ ಬೇರೆ.. ಅದು ಸಾಮಾಜಿಕ ಜವಬ್ದಾರಿಯುತರ ಗುಂಪಿಗೆ ನಾನೂ ಸದಸ್ಯ..ಆ ಗುಂಪಿನಲ್ಲಿ ಪುರುಷರ ಬಿಟ್ಟರೆ ಮಹಿಳೆಯರೂ ಯಾರೂ ಇರಲಿಲ್ಲ..ಒಬ್ಬ ಏಕಾಏಕಿ ಕ್ಯಾತೆ ತೆಗೆದು ಹೆಂಡತಿ‌ ಮನಸ್ಸಿಗೆ ನೋವಾಗುವಂತೆ ಸಂದೇಶ ಕಳಿಸಿದ್ದಾನೆ ಎಂದು ಗಲಾಟೆ ಹೊಡೆದಾಟ ಜೊತೆ ಠಾಣೆ ಮೆಟ್ಟಿಲೂ ಏರಿತ್ತು. ಆವಾಗಲೇ ಗೊತ್ತಾಗಿದ್ದು ಅದು ಮುಟ್ಟಾಳರ ವೇದಿಕೆ ಗುಂಪಾಗಿತ್ತು ಅಂತ...
 ಯಾರ ಪತ್ನಿಯನ್ನ ನನ್ನ ಬಳಿ ಕರೆದಿರಲಿಲ್ಲ..ಆಕೆಯೊಂದಿಗೆ‌ ಸಂದೇಶವಿರಲಿ ಆಕೆಯ ಮುಖವನ್ನೆ ನೋಡೆ ಇರಲಿಲ್ಲ...ಸತ್ಯ. ಇನ್ಸ್ ಪೆಕ್ಟರ್. ಹಾಗೂ ಎರಡು ವರ್ಷದ ಹಿಂದಿನ ಅವದಿಯ ಎಸ್ಪಿ ಅವರಿಗೆ ಮಾತ್ರ ಸತ್ಯ ಗೊತ್ತಿತ್ತು.‌ನಾನು ತಪ್ಪು ಮಾಡಿಲ್ಲ ಅಂತ..ಆದರೂ ಆತ ಮಾಡುತ್ತಿದ್ದ ಎರಡೂವರೆ ಕೋಟಿ ಅಕ್ರಮ ದಂದೆಗೆ ಎಸ್ಪಿ ಕಡಿವಾಣ ಹಾಕುವಲ್ಲಿ ನನ್ನ ಪಾತ್ರವಿದೆ ಎಂದು ಹೊಡೆದವನಿಗೆ ಗೊತ್ತಿತ್ತು. ಮುಗ್ದ ಅಮಾಯಕರ ಜನರ ಹಣ ಉಳಿಸಿದ ಸಮಾದಾನದ ಮನಸ್ಸು ನನಗಿದೆ. ದೇವರು ಕಾಪಾಡುತ್ತಾನೆ. ದೇವರು ಕೊಡುವ ಹೊಡೆತಕ್ಕೆ ಅವನು ಬಲಿಯಾಗದೇ ಇರುವನೆ?
ಹೀಗೆ ಅದೇಷ್ಟೋ ತಾವು ಬದುಕಲಿಕ್ಕೆ ಯಾರ್ಯಾರದ್ದೋ..ಹಿಡಿತೀರಾ..ಹೋಡಿತಾರೆ.? ಅವರು ಸುಖವಾಗಿರಬೇಕು..ಚೆನ್ನಾಗಿರಬೇಕು..ಕಾರ್ಯಸಾಧನೆಗೆ ಏನೇನು ಬಿಟ್ಟವರಿಗೆ ಸ್ವಾಭಿಮಾನ ಲೆಕ್ಕಕ್ಕೆ ಇಲ್ಲ..ಸಾಮಾಜಿಕ ಜಾಲತಾಣದಲ್ಲಿ ಆದ ಒಂದು ಅಂದಿನ ಅನುಭವ ಇಂದು ಬಹುತೇಕವಾಗಿ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಪತಿಗೆ ಗೊತ್ತಿಲ್ಲದ ಹಾಗೆ ಪತ್ನಿ, ಪತ್ನಿಗೆ ಗೊತ್ತಿಲ್ಲದ ಹಾಗೇ ಪತಿ, ಅಪ್ರಾಪ್ತರ ಹೆಸರಿನಲ್ಲಿ ಖಾತೆ, ಗಂಡಸು, ಹೆಂಗಸು ಆಗುವ ವೇದಿಕೆ ಮುಖಪುಸ್ತಕ ಅಂದರೆ ತಪ್ಪಾಗಲಾರದು..ಆದರೆ ಬಹುತೇಕ ನಡೆಯಬಾರದ್ದೆಲ್ಲ ನಡೆದಿರುತ್ತದೆ ಅನಾಹುತವಾದಾಗ ಐ.ಟಿ.&ಸೈಬರ್ ಅಲ್ಲಿ ದೂರು ಆಗೋದು..ಪೋಲಿಸರ ಮೇಲೆ ಗೂಬೆ ಕೂರಿಸೋ ಅದೇಷ್ಟೋ ಜನರಿಗೆ ಗೊತ್ತಿಲ್ಲ..ಅವರು ಜಾಗೃತರಾದರೆ ಹೊರಬರಲಾಗದಷ್ಟು ತಪ್ಪು ಖಾತೆದಾರ ಮಾಡಿರುತ್ತಾರೆ ಎಂಬುದನ್ನ ಮೇಲಿಯೇ ನೋಡಿ ಹೇಳ್ತಾರೆ..ಅಂತಿಮವಾಗಿ ಎಲ್ಲರೂ ಒಂದು ವೇದಿಕೆಗಾಗಿ‌ ಕಾಯ್ತಾರೆ...ಅದ್ಬುತ ಕ್ಷಣಗಳ ಬರುವುದೇನೊ ಎಂಬಂತೆ, ಆದರೆ ಕೆಲವು ಬೆರಳಣಿಕೆಯಷ್ಟು ಸದ್ಬಳಕೆ ಆಗೋದು ಎಂಬು ಸತ್ಯ‌ ಕಾನೂನು ತಿಳಿದವರಿಗಷ್ಟೆ‌ ಗೊತ್ತಾಗೋದು...ನಾನು ಅವಕಾಶವಾದಿ..ನೆನಪಿರಲಿ...

04-11-2018 (ಗಡಿಯಂಚಿನ ಹಾಡಿಯಲ್ಲಿ ಜಿ.ಪಂ ಸಿ.ಇ.ಒ ಗ್ರಾಮ ವಾಸ್ತವ್ಯ : ಆದಿವಾಸಿಗಳ ಅಹವಾಲು ಆಲಿಕೆ.)

ಗಡಿಯಂಚಿನ ಹಾಡಿಯಲ್ಲಿ ಜಿ.ಪಂ ಸಿ.ಇ.ಒ ಗ್ರಾಮ ವಾಸ್ತವ್ಯ : ಆದಿವಾಸಿಗಳ ಅಹವಾಲು ಆಲಿಕೆ.

ಚಾಮರಾಜನಗರ, ನ 04 :- ಜನವಸತಿ ಪ್ರದೇಶಗಳಿಂದ ಬಹುದೂರವಿರುವ ಗಡಿಯಂಚಿನ ಆದಿವಾಸಿಗಳ ಹಾಡಿ ಆಲಂಬಾಡಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಶನಿವಾರ ರಾತ್ರಿ ವಾಸ್ತವ್ಯ ಹೂಡಿ ಕುಂದುಕೊರತೆಗಳನ್ನು ಆಲಿಸಿದರು.
ಹನೂರು ತಾಲ್ಲೂಕು ವ್ಯಾಪ್ತಿಯ ಗೋಪಿನಾಥಂ ಗ್ರಾಮ ಪಂಚಾಯತ್‍ಗೆ ಸೇರಿದ ಆಲಂಬಾಡಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ವಿಶೇಷವಾಗಿ ಗಮನ ಸೆಳೆಯಿತು. ಮಲೆ ಮಹದೇಶ್ವರ ಬೆಟ್ಟದಿಂದ ಸುಮಾರು 2 ತಾಸಿಗೂ ಹೆಚ್ಚು ಕಾಲ ಪ್ರಯಾಣಿಸಬೇಕಾಗಿರುವ ಆಲಂಬಾಡಿಯನ್ನು ತಲುಪಲು ದುರ್ಗಮ ಅರಣ್ಯವನ್ನು ದಾಟಿ ಹೋಗಬೇಕಾಗಿದೆ. ಜನವಾಸ ಪ್ರದೇಶಗಳೇ ಅತಿ ವಿರಳವಾಗಿರುವ ಕುಗ್ರಾಮ ಎನಿಸುವ ಆಲಂಬಾಡಿಯಲ್ಲಿ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳು ಇತರೆ ಅಧಿಕಾರಿಗಳ ಜೊತೆ ಗ್ರಾಮ ವಾಸ್ತವ್ಯ ಕೈಗೊಂಡು ಜನರ ಸಮಸ್ಯೆಗಳ ವಾಸ್ತವ ದರ್ಶನ ಪಡೆದರು.
ಹಾಡಿಗೆ ಕಾಲಿಡುತ್ತಿದ್ದಂತೆಯೇ ಅಲ್ಲಿನ ಮನೆ-ಮನೆಗೆ ತೆರಳಿ ಜನರ ಕಷ್ಟ ಕಾರ್ಪಣ್ಯಗಳನ್ನು ಕೇಳಿದರು. ವಸತಿ, ಕುಡಿಯುವ ನೀರು, ಇನ್ನಿತರ ಮೂಲ ಸೌಲಭ್ಯಗಳನ್ನು ಸಮಪರ್ಕವಾಗಿ ಕಲ್ಪಿಸಿಕೊಡುವಂತೆ ಜನರು ಮನವಿ ಮಾಡಿದರು.
ಬಳಿಕ ಅಲ್ಲಿನ ಶಾಲಾ ಆವರಣದಲ್ಲಿ ನಡೆದ ಸಭೆಯಲ್ಲಿ ಸ್ಥಳೀಯರು ತಾವು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಳಲು ತೋಡಿಕೊಂಡರು. ಗ್ರಾಮದ ಹಿರಿಯರು, ಮುಖಂಡರು ಮಾತನಾಡಿ ಬದುಕಿಗೆ ಅಗತ್ಯವಾದ ಮೂಲ ಸೌಲಭ್ಯಗಳಿಂದ ನಾವು ವಂಚಿತರಾಗಿದ್ದೇವೆ. ಪಕ್ಕದಲ್ಲೇ ಕಾವೇರಿ ನದಿ ಹರಿಯುತ್ತಿದ್ದರೂ ನಮಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ರಸ್ತೆ ಇಲ್ಲವಾಗಿದೆ. ವಿದ್ಯುತ್ ಸೌಲಭ್ಯವಂತೆ ಕಲ್ಪಿಸಿಯೇ ಇಲ್ಲ ಎಂದು ಎಳೆಎಳೆಯಾಗಿ ಅಲ್ಲಿನ ಕೊರತೆಗಳನ್ನು ಬಿಡಿಸಿಟ್ಟರು.
ಆಲಂಬಾಡಿಯಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲ. ಪಡಿತರ ಪಡೆಯಲು ಪಕ್ಕದ 5 ಕಿ.ಮೀ ಗ್ರಾಮಕ್ಕೆ ಹೋಗಿ ಬರಬೇಕಿದೆ. ಇದನ್ನು ತಪ್ಪಿಸಲು ಸಂಚಾರಿ ಪಡಿತರ ವಿತರಣ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ಎಲ್ಲರ ಅಹವಾಲುಗಳನ್ನು ವಿವರವಾಗಿ  ಆಲಿಸಿದ ಬಳಿಕ ಮಾತನಾಡಿದ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ನಿಮ್ಮ ಎಲ್ಲಾ ನೋವು, ಸಮಸ್ಯೆಗಳು ನನಗೆ ಮನವರಿಕೆಯಾಗಿದೆ. ಈ ಹಿಂದೆ ಎರಡು ಗ್ರಾಮ ವಾಸ್ತವ್ಯಗಳನ್ನು ಮಾಡಿದ್ದೇನೆ. ಆದರೆ, ಆಲಂಬಾಡಿಯಲ್ಲಿ ಕೈಗೊಂಡಿರುವ ಈ ಗ್ರಾಮ ವಾಸ್ತವ್ಯ ನನಗೆ ಆತ್ಮತೃಪ್ತಿ ತಂದಿದೆ ಎಂದರು.
ಜನರ ಮನೆ ಬಾಗಿಲಿಗೆ ತೆರಳಿ ಅವರ ಕುಂದು-ಕೊರತೆ ನೈಜ್ಯ ಚಿತ್ರಣ ಪಡೆದು ಪರಿಹರಿಸಬೇಕೆಂಬ ಸರ್ಕಾರದ ನಿರ್ದೇಶನದ ಮೇರೆಗೆ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ. ಆರೋಗ್ಯ, ಶಿಕ್ಷಣ, ರಸ್ತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಅವಶ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಜವಬ್ದಾರಿ ನಮ್ಮ ಮೇಲಿದೆ ಎಂದರು.
ಪರಿಶಿಷ್ಟರ ಕಲ್ಯಾಣಕ್ಕೆ ನಿಗದಿಯಾಗಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ಸದ್ವಿನಿಯೋಗವಾಗಬೇಕು. ಇದರಿಂದ ಅರಣ್ಯವಾಸಿಗಳ, ಗಿರಿಜನರ ಬದುಕು ಹಸನಾಗಬೇಕಿದೆ. ಸ್ಥಳೀಯವಾಗಿ ವ್ಯಕ್ತವಾಗಿರುವ ಎಲ್ಲಾ ಬೇಡಿಕೆ, ಸಮಸ್ಯೆ ಪರಿಹರಿಸಿ ಮೂಲಸೌಕರ್ಯ ಕಲ್ಪಿಸಲು ಸ್ಪಂದಿಸಲಾಗುವುದು ಎಂದು ಡಾ. ಕೆ. ಹರೀಶ್‍ಕುಮಾರ್ ಅವರು ತಿಳಿಸಿದರು.
ಮುಖಂಡರಾದ ಮಹದೇವು, ದೊಡ್ಡಯ್ಯ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ, ಜಂಟಿ ಕೃಷಿ ನಿರ್ದೇಶಕರಾ ಎಂ. ತಿರುಮಲೇಶ್ ಮಾತನಾಡಿದರು.
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕಾಧಿಕಾರಿ, ಉಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ        ಡಾ. ಕೆ.ಹೆಚ್. ಪ್ರಸಾದ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಿವಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸಾರ್ಥಕ ಭಾವ ಮೂಡಿಸಿದ ಗ್ರಾಮ ವಾಸ್ತವ್ಯ
ಚಾಮರಾಜನಗರ, ನ 04  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರ ಆಲಂಬಾಡಿ ಗ್ರಾಮ ವಾಸ್ತವ್ಯ ಅಚ್ಚುಕಟ್ಟಾದ ಆಯೋಜನೆಯಿಂದ ಯಶಸ್ವಿಯಾಗಿದೆ.
ಈ ಹಿಂದೆ ಬಿಳಿಗಿರಿರಂಗನಬೆಟ್ಟದ ಮುತ್ತುಗದ ಗದ್ದೆ ಪೋಡು, ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಕಾಲೋನಿಯಲ್ಲಿ ಹರೀಶ್‍ಕುಮಾರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದರು. ಈ ಬಾರಿ ಬಹುದೂರದ ದುರ್ಗಮ ಹಾಡಿಯನ್ನು ಗ್ರಾಮ ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಂಡಿದ್ದರು. ಗ್ರಾಮ ವಾಸ್ತವ್ಯದ ಸಾರ್ಥಕತೆಯ ಭಾವ ಆಲಂಬಾಡಿಯಲ್ಲಿ ಹೆಚ್ಚು ಗೋಚರವಾಯಿತು. ಇದಕ್ಕೆ ಪುಷ್ಠಿಕರಿಸುವಂತ ಹರೀಶ್‍ಕುಮಾರ್ ಅವರೇ ಈ ಹಿಂದಿನ ಗ್ರಾಮ ವಾಸ್ತವ್ಯಕ್ಕಿಂತ ಆಲಂಬಾಡಿ ಗ್ರಾಮ ವಾಸ್ತವ್ಯ ತಮಗೆ ಹೆಚ್ಚು ತೃಪ್ತಿ ತಂದಿದೆ ಎಂಬ ಮನದಾಳದ ಮಾತನ್ನು ಹೊರಹಾಕಿದರು.
ಹಾಡಿಯ ದೊಡ್ಡಮ್ಮ ಎಂಬುವವರ ಮನೆಯಲ್ಲಿ ಅರಣ್ಯವಾಸಿಗಳ ದೇಸಿ ಖಾದ್ಯಗಳಾದ ಔಷಧೀಯ ಗುಣವುಳ್ಳ ಸುಂಡೇಕಾಯಿ, ಅಣ್ಣೆಸೊಪ್ಪು ಪಲ್ಯ, ಅವರೆಕಾಳು ಹಲಸಿನಕಾಯಿ ಹುಳಿ, ಅನ್ನ, ಮಜ್ಜಿಗೆ, ಅಕ್ಕಿ ಪಾಯಸ ಸವಿದರು.
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್ ಮತ್ತು ಸಿಬ್ಬಂದಿ ಅವರ ಪರಿಶ್ರಮ ಆಲಂಬಾಡಿ ಗ್ರಾಮ ವಾಸ್ತವ್ಯ ಯಶಸ್ವಿಗೆ ಕಾರಣವಾಯಿತೆಂಬ ಮೆಚ್ಚುಗೆಯು ಕೇಳಿ ಬಂದಿತು.
ಕೊಳ್ಳೇಗಾಲ - ಹನೂರು ಹೆದ್ದಾರಿ ಯೋಜನೆ : ರೈತರಿಗೆ ತಕ್ಷಣ ಪರಿಹಾರ
ಚಾಮರಾಜನಗರ, ನ 04 :- ಕರ್ನಾಟಕ ರಾಜ್ಯ ಭೂ ಅಭಿವೃದ್ಧಿ ಯೋಜನೆಯಡಿ (ಕೆಶಿಪ್-3) ಕೊಳ್ಳೇಗಾಲ-ಹನೂರು ರಾಜ್ಯ ಹೆದ್ದಾರಿ ಅಭಿವೃದ್ಧಿಗಾಗಿ ಕೈಗೊಂಡಿರುವ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಮೀನು ಕ್ರಯಕ್ಕೆ ನೀಡಿರುವ ರೈತರಿಗೆ ಆಯಾ ದಿನವೇ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಉಪ ವಿಭಾಗಾಧಿಕಾರಿ ಫೌಜೀಯಾ ತರನ್ನುಮ್ ತಿಳಿಸಿದ್ದಾರೆ.
ರಸ್ತೆ ಅಭಿವೃದ್ಧಿಗೆ ಒಳಪಡುವ 12 ಗ್ರಾಮಗಳ ರೈತರು ಜಮೀನು ನೇರ ಖರೀದಿಗೆ ಒಪ್ಪಿಗೆ ಕೊಡುತ್ತಿದ್ದು, ಮಧುವನಹಳ್ಳಿ, ಹಾರುವಪುರ, ಸಿಂಗಾನಲ್ಲೂರು ಗ್ರಾಮದ ರೈತರು ಸಹ ನೇರ ಖರೀದಿಗೆ ಒಪ್ಪಿಗೆ ನೀಡಿದ್ದಾರೆ. ಮಧುವನಹಳ್ಳಿ ಗ್ರಾಮದ 7 ಮತ್ತು ಸಿಂಗಾನಲ್ಲೂರು ಗ್ರಾಮದ          1 ಸರ್ವೇ ನಂಬರ್‍ಗಳ ಜಮೀನನ್ನು ರೈತರಿಂದ ನವೆಂಬರ್ 3 ರಂದು ಕ್ರಯಕ್ಕೆ ಪಡೆಯಲಾಗಿದ್ದು, ಅಂದೇ ಪರಿಹಾರ ಧನವನ್ನು ಚೆಕ್ ಮೂಲಕ ರೈತರಿಗೆ ವಿತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಮೀನು ಹಕ್ಕುದಾರರು ಕ್ರಯದ ಕರಾರು ಪತ್ರಕ್ಕೆ ಸಹಿ ಹಾಕಿದ ಪ್ರಕರಣಗಳಲ್ಲಿ ಸರ್ಕಾರದ ವತಿಯಿಂದಲೇ 11-ಇ ಸ್ಕೆಚ್ ಮಾಡಿಸಿ ಸಹಿ ಮಾಡಿದ ದಿನದಂದೆ ಚೆಕ್ ವಿತರಿಸಲಾಗುತ್ತಿದೆ. ರಾಜ್ಯ ಹೆದ್ದಾರಿ ಯೋಜನೆ ಕಾಮಗಾರಿ ತ್ವರಿತವಾಗಿ ಕಾರ್ಯಗತಗೊಳಿಸಲು ಯೋಜನ ವ್ಯಾಪ್ತಿಯ ಗ್ರಾಮಗಳ ಇನ್ನುಳಿದ ರೈತರು ಮುಂದೆ ಬಂದು ಒಪ್ಪಿಗೆ ಪತ್ರ ನೀಡುವಂತೆ ಉಪ ವಿಭಾಗಾಧಿಕಾರಿ ಫೌಜೀಯಾ ತರನ್ನುಮ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
x

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*

  ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 1,22,552 ಪ್ರಕರಣ ಇತ್ಯರ್ಥ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ*    ಚಾಮರಾಜನಗರ, ಸೆಪ್ಟೆಂಬರ್ 28 :- ಈ ಬಾರಿಯ ರಾಷ್ಟ್ರೀಯ ಲೋ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು